Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಾದ ನಿಮಗೂ ಅವಕಾಶ ಇದೆ, ನಿಮಗೂ ಸ್ಫೂರ್ತಿ ಆಗಬೇಕು, ತಗೆದುಕೊಂಡವರಿಗೂ ಖುಷಿ ಆಗಬೇಕು, ಕೊಟ್ಟವರಿಗೂ ಆತ್ಮ ತೃಪ್ತಿ ಇರಬೇಕು, ಮುಂದಿನ ದಿನಗಳಲ್ಲಿ ನೀವು ಉಳಿದ ಮಕ್ಕಳಿಗೆ ಕೊಡಬೇಕು ಈ ಉದ್ದೇಶದಿಂದ ಕೊಡುತ್ತಿರುವ ನಗದು ಪುರಸ್ಕಾರ ಮತಷ್ಟ್ಟು ಮಕ್ಕಳಿಗೆ ಉತೇಜನ ಸಿಗಲಿ ಎಂಬ ಆಶಯದೊಂದಿಗೆ ಈ ಕಾರ್ಯ ಕಳೆದ 14 ವರ್ಷಗಳಿಂದ ನಡೆಸುಕೊಂಡು ಬರುತ್ತಿರುವ ಸ್ನೇಹ ಸಂಗಮದ ಸದಸ್ಯರ ಔದ್ಯೋಗಿಕ ಜೀವನದಲ್ಲಿ ಯಶಸ್ಸು ಸಿಗಲಿ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇದರ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಚೇತನಾ ಸಭಾಭವನದಲ್ಲಿ ಶುಕ್ರವಾರ ಜರುಗಿದ 2002-04ನೇ ಸಾಲಿನ ಸ್ನೇಹ ಸಂಗಮ ಹಳೇ ವಿದ್ಯಾರ್ಥಿ ಸಂಘದ 14ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ಶಿಕ್ಷಕಿ ಜಯಶ್ರೀ, ಸ್ನೇಹ ಸಂಗಮ ಹಳೇ ವಿದ್ಯಾರ್ಥಿ ಸಂಘದ ಅಧಕ್ಷ ಗೀರಿಶ್ ಪೂಜಾರಿ, ಸದಸ್ಯರಾದ ರವಿ ದೇವಾಡಿಗ, ಯೋಗೀಶ್ ದೇವಾಡಿಗ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳವೆಂದು ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಯುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು, ವೃತ್ತಿಪರ ಸಂಪರ್ಕ ಜಾಲವನ್ನು ಬೆಳೆಸಿಕೊಳ್ಳಬೇಕು ಹಾಗೂ ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣವೊಂದೇ ಇಂದಿನ ವೇಗವಾಗಿ ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಕಾಗುವುದಿಲ್ಲ. ಶಿಕ್ಷಣದ ಜೊತೆಗೆ ಕೌಶಲ್ಯವೂ ಅತ್ಯಗತ್ಯವಾಗಿದ್ದು, ಉದ್ಯೋಗ ಕ್ಷೇತ್ರದಲ್ಲಿ ಪ್ರಸ್ತುತವಾಗಿರಲು ಕೌಶಲ್ಯಗಳನ್ನು ನಿರಂತರವಾಗಿ ಉನ್ನತೀಕರಿಸಿಕೊಳ್ಳಬೇಕು. “ಶಿಕ್ಷಣ ಪಾಸ್‌ಪೋರ್ಟ್ನಂತಿದ್ದರೆ, ಕೌಶಲ್ಯ ವೀಸಾದಂತೆ” ಎಂದು ರೂಪಕದ ಮೂಲಕ ವಿವರಿಸಿದ ಅವರು, ಯುವಜನರು ಪ್ರಾಯೋಗಿಕ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗಾಗಿ ಬಳಸದೆ, ತಮ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣ ಹಾಗೂ ಸಂಭ್ರಮ – ಸಡಗರದಿಂದ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಸಚಿವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಮತ್ತಿತರ ತಂಡಗಳಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದಿನದಿಂದ ದಿನಕ್ಕೆ ತಂತ್ರಜ್ಞಾನ ಬೆಳೆದಂತೆ ಸೈಬರ್ ಅಪರಾಧಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇಂದಿನ ಯುವಜನತೆ ಮೊಬೈಲ್ ಚಟಕ್ಕೆ ಬಿದ್ದು ತಮ್ಮ ಬದುಕಿನ ಅಮೂಲ್ಯ ಕ್ಷಣಗಳನ್ನು ಕಳೆದುಕೊಳ್ಳುತ್ತಿರುವುದು ಆತಂಕಕಾರಿ ಸಂಗತಿ. ಸೋಶಿಯಲ್ ಮೀಡಿಯಾಗಳ ಹುಸಿ ಆಕರ್ಷಣೆಗೆ ಒಳಗಾಗಿ ಬಲಿಬೀಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಜಗತ್ತಿನ ಅಪಾಯಗಳ ಬಗ್ಗೆ ಸದಾ ಎಚ್ಚರದಿಂದಿರಬೇಕು ಎಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್‌ ಕಾನ್‌ ಸ್ಟೇಬಲ್ ಪವನ್‌ ಕುಮಾರ್ ಎಂ. ಹೇಳಿದರು. ಅವರು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಮತ್ತು ಸೈಬರ್ ಕ್ರೈಂ ಪೊಲೀಸ್ ಠಾಣೆ ಇವುಗಳ ಜಂಟಿ ಸಹಯೋಗದೊಂದಿಗೆ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಇತ್ತೀಚಿನ ಸೈಬರ್‌ ಅಪರಾಧಗಳ ಪ್ರವೃತ್ತಿಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳು”ಎಂಬ ಸೈಬರ್ ಜಾಗೃತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದರು. ಸೈಬರ್ ಅಪರಾಧಗಳ ಜಾಲ ಮತ್ತು ಅದರಿಂದ ಪಾರಾಗುವ ಮಾರ್ಗಗಳ ಕುರಿತು ವಿದ್ಯಾರ್ಥಿಗಳಿಗೆ ಕೂಲಂಕುಷ ಮಾಹಿತಿ ನೀಡಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICMAI)  ನಡೆಸಿದ ಸಿಎಂಎ ಇಂಟರ್‌ಮೀಡಿಯಟ್ ಜೂನ್–2026ರ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ದಾಖಲಿಸಿ ಕಾಲೇಜಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಎತ್ತಿ ಹಿಡಿದಿದ್ದಾರೆ.  2024-25 ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಕಾಂ. ಪದವಿಯಲ್ಲಿ  ಎರಡನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದುಕೊಟ್ಟ ಮುದೂರಿನ ಶೀನ ಪೂಜಾರಿ ಅವರ ಪುತ್ರಿ ಶ್ರೇಯಾ ಅವರು ಸಿಎಂಎ ಇಂಟರ್ಮಿಡಿಯೇಟ್ ಗ್ರೂಪ್–1 ಹಾಗೂ ಗ್ರೂಪ್ -2  ಎರಡೂ ಪರೀಕ್ಷೆಗಳಲ್ಲಿ ಮೊದಲ ಪ್ರಯತ್ನದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಲ್ಲದೆ ಅಖಿಲ ಭಾರತ ಮಟ್ಟದಲ್ಲಿ 28ನೇ ಸ್ಥಾನ ಗಳಿಸುವ ಮೂಲಕ ಕಾಲೇಜಿಗೆ ರಾಷ್ಟçಮಟ್ಟದ ಹೆಮ್ಮೆ ತಂದುಕೊಟ್ಟಿದ್ದಾರೆ. ಪ್ರಾಕ್ತನ ವಿದ್ಯಾರ್ಥಿಗಳಾದ ಸಾಗರದ ಪಾಂಡುರಂಗ ಪೈಯವರ ಪುತ್ರಿ ಪವಿತ್ರ ಪೈ ಹಾಗೂ ಸಾಗರದ ದಿ. ಮಂಜುನಾಥ ಕೆ.ವಿ. ಅವರ ಪುತ್ರ ಮದನ್ ಎಂ.ವಿ., ಈರ್ವರು ಸಿಎಂಎ ಇಂಟರ್ಮೀಡಿಯಟ್ ಗ್ರೂಪ್ –…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕುಂದಾಪುರದ ವಿ. ಕೆ. ಆರ್. ಮೆಮೋರಿಯಲ್ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಕುಂದಾಪುರದಲ್ಲಿ ನಡೆದ ಕುಂದಾಪುರ ಬ್ಲಾಕ್ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಶಾಲೆಯ ಆರ್ಯನ್ ವಿ.ಕೆ., ಆರ್ಯನ್ ಎಸ್. ಹಾಗೂ ವೃಷಭ್ ಶೆಣೈ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅಭಿಷೇಕ್ ಶೆಣೈ, ಹವ್ಯಾಸ್ ಹಾಗೂ ಸನ್ನಿತ್ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅನನ್ಯಾ ಪೂಜಾರಿ, ಶ್ರಾವ್ಯಾ ಖಾರ್ವಿ ಹಾಗೂ ಶ್ರೀಯಾ ಆಚಾರ್ಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಅನನ್ಯಾ ಪೂಜಾರಿ ಹಾಗೂ ಶ್ರಾವ್ಯಾ ಖಾರ್ವಿ ಜಿಲ್ಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕೊಲ್ಲೂರು: ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮಾಡಿ ಮಾನಹಾನಿ ಎಸಗಿದ ಆರೋಪದಡಿ ಯುವಕನ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಕೊಲ್ಲೂರು ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಸನತ್ ಕುಂದಾಪುರ ಎಂಬಾತನಾಗಿದ್ದಾರೆ. ಘಟನೆಗೆ ಸಂಬಂಧಿಸಿ ಆರೋಪಿ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತರು ರಾಮ ಕುಮಾರ್ ಮತ್ತು ನಂದೀಶ್ ಕುಮಾರ್ ಎಂಬವರಾಗಿದ್ದಾರೆ. ಆಗಸ್ಟ್ 6ರಂದು ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿ ನೊಂದ ಮಹಿಳೆ ಠಾಣೆಗೆ ನೀಡಿದ ದೂರಿನ ಮೇರೆಗೆ, ಸನತ್ ಮಹಿಳೆಯ ಮನೆಯ ಸಮೀಪ ಬಂದು ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿದ್ದಲ್ಲದೆ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಇದೇ ವೇಳೆ, ಘಟನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಸ್ರೂರು ಕೋಳ್ಕೆರೆ ಮನೆ ರವಿರಾಜ್ ಶೆಟ್ಟಿ ಅವರ ಸ್ಮರಣಾರ್ಥ ಸುಮಾರು ಎರಡುವರೆ ಲಕ್ಷ ಬೆಲೆಬಾಳುವ ಆಮ್ಲಜನಕ ಪೂರೈಕೆ ಯಂತ್ರ, ರಿಕ್ಲೈನರ್ ಹಾಸಿಗೆ ಹಾಗೂ ಗಾಲಿ ಕುರ್ಚಿಯನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಅವರ ಮಗ ಡಾ. ಅರ್ಜುನ್ ಶೆಟ್ಟಿ ಅವರು ಆಸ್ಪತ್ರೆ ವೈದ್ಯಾಧಿಕಾರಿಗಳಾದ ಡಾ. ಪ್ರೇಮಾನಂದ ಅವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹಳ್ನಾಡು ದೇವಾನಂದ ಶೆಟ್ಟಿ, ಮಾಜಿ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಕೆ. ವಿಕಾಸ್ ಹೆಗ್ಡೆ, ಮಾಜಿ ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟಕ್ಕೆ ಸರ್ಕಾರದಿಂದ ಬಂದಿದ್ದ ಲಕ್ಷಾಂತರ ರೂಪಾಯಿ ಅನುದಾನವನ್ನು ನಕಲಿ ಸಹಿ ಹಾಗೂ ಸೀಲು ಬಳಸಿ ಸ್ವಂತಕ್ಕೆ ಉಪಯೋಗಿಸಿಕೊಂಡು ಸುಮಾರು 33.50 ಲಕ್ಷ ರೂ. ವಂಚನೆ ಎಸಗಿದ ಆರೋಪದಡಿ ಮಹಿಳೆಯೊಬ್ಬರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಅಶ್ವಿನಿ (33)ಈ ಪ್ರಕರಣದ ಆರೋಪಿಯಾಗಿದ್ದಾರೆ. ಅವರು 2022 ರಿಂದ ‘ಸಮೃದ್ಧಿ ಸಂಜೀವಿನಿ’ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಮುಖ್ಯ ಬರಹಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಒಕ್ಕೂಟದ ವ್ಯಾಪ್ತಿಯಲ್ಲಿ ಒಟ್ಟು 54 ಸ್ವಸಹಾಯ ಸಂಘಗಳು ಒಳಪಟ್ಟಿದ್ದವು. ಸರಕಾರದಿಂದ 2022 ರಿಂದ ಈ ಒಕ್ಕೂಟದ ಕೆನರಾ ಬ್ಯಾಂಕ್ ಬಿಡ್ಕಲ್‌ಕಟ್ಟೆ ಶಾಖೆಯ ಖಾತೆಗೆ ಒಟ್ಟು 752,50,000 ಅನುದಾನ ಬಿಡುಗಡೆಯಾಗಿತ್ತು. ಈ ಹಣವನ್ನು ಅಗತ್ಯಕ್ಕೆ ತಕ್ಕಂತೆ ವಿವಿಧ ಸ್ವಸಹಾಯ ಸಂಘಗಳಿಗೆ ನಿಯಮಾನುಸಾರ ಹಂಚಿಕೆ ಮಾಡುವ ಜವಾಬ್ದಾರಿ ಆರೋಪಿ ಅಶ್ವಿನಿ ಅವರದ್ದಾಗಿತ್ತು. ಆದರೆ, ಆರೋಪಿತೆಯು ಸರಕಾರದ ಹಣವನ್ನು ಸ್ವಸಹಾಯ ಸಂಘಗಳಿಗೆ ಸರಿಯಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಲೇಜು ವಿದ್ಯಾರ್ಥಿಗಳಿಗೆ ಉದಯೋನ್ಮುಖ ವೃತ್ತಿ ಅವಕಾಶಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC), ಮೂಡ್ಲಕಟ್ಟೆ ಇಲ್ಲಿ ‘ದೀಕ್ಷಾರಂಭ 2026-27’ ಕಾರ್ಯಕ್ರಮದ ಅಂಗವಾಗಿ “ವಿಂಗ್ಸ್ ಆಫ್ ಆಪರ್ಚುನಿಟಿ – ವಿಮಾನಯಾನ ವೃತ್ತಿ ಮಾರ್ಗದರ್ಶನ” ಎಂಬ ವಿಶೇಷ ಅಧಿವೇಶನ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಥ್ರಸ್ಟ್ ಅಕಾಡೆಮಿಯ ಸಂಸ್ಥಾಪಕರಾದ ಕಾರ್ತಿಕ್ ಆಳ್ವ ಅವರು ವಿಮಾನಯಾನ ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ವಿಮಾನಯಾನ ಕ್ಷೇತ್ರದಲ್ಲಿ ವೃತ್ತಿ ಆಯ್ಕೆ ಮಾಡಿಕೊಳ್ಳಲು ಬೇಕಾದ ಅರ್ಹತೆಗಳು, ಅಗತ್ಯ ಕೌಶಲ್ಯಗಳು, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ ಮತ್ತು ಸೇವಾ ಕ್ಷೇತ್ರದಲ್ಲಿ ವೃತ್ತಿಪರತೆಯ ಮಹತ್ವದ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಜೊತೆಗೆ ಈ ಕ್ಷೇತ್ರದಲ್ಲಿ ಬೆಳೆಯಲು ಇರುವ ಅವಕಾಶಗಳು ಮತ್ತು ಸವಾಲುಗಳ ಬಗ್ಗೆಯೂ ಚರ್ಚಿಸಿದರು. ಬಿ.ಕಾಂ, ಬಿಬಿಎ ಮತ್ತು ಬಿಸಿಎ ವಿಭಾಗಗಳ ಎಲ್ಲಾ ವರ್ಷದ ಆಸಕ್ತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ…

Read More