ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಂವೇದನಾ ಟ್ರಸ್ಟ್ ರಿ. ನಾಯ್ಕನಕಟ್ಟೆ, ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ವಿಶೇಷ ಘಟಕ ಯೋಜನೆ ಪ್ರಾಯೋಜಿತ ಸುಗಮ ಸಂಗೀತ ಕಾರ್ಯಕ್ರಮ ಯುವ ಕಲಾವಿದ ಪ್ರಕಾಶ್ ಮತ್ತು ತಂಡ ಸಮೃದ್ಧಿ ಕಲಾಬಳಗ ಕುಂದಾಪುರ ಇವರಿಂದ ವಡೇರಹೋಬಳಿಯ ಪಿವಿಎಸ್ ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲೆಮರೆಯ ಕಾಯಿಯಂತಿದ್ದ ಪ್ರತಿಭಾವಂತರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವಂತೆ ಮಾಡುವುದು ಅಗತ್ಯ. ಸೂಕ್ತ ಅವಕಾಶಗಳನ್ನು ಬಳಸಿಕೊಂಡಾಗ ಕಲಾವಿದರು ಬೆಳೆಯಲು ಸಾಧ್ಯ. ಸ್ಥಳೀಯ ಕಲಾವಿದರ ಕಲಾಪ್ರತಿಭೆಗಳು ಹೆಚ್ಚು ಅನಾವರಣಗೊಳ್ಳುವ ನಿಟ್ಟಿನಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ರೂಪಿಸಿದ ಕಾರ್ಯಕ್ರಮಗಳು ಸಾಕಷ್ಟು ಸಹಕಾರಿಯಾಗಿವೆ ಎಂದರು. ಶಾಲಾ ಮುಖ್ಯಶಿಕ್ಷಕ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಶುಭಹಾರೈಸಿದರು. ಶಾಲಾ ಸಹಶಿಕ್ಷಕರು ಉಪಸ್ಥಿತರಿದ್ದರು. ಸುಗಮ ಸಂಗೀತ ಕಾರ್ಯಕ್ರಮದಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ತಿಂಗಳ ಕಾರ್ಯಕ್ರಮದ ಅಂಗವಾಗಿ ಧರ್ಮಶ್ರೀ ರಿಲೀಫ್ ಫೌಂಡೇಶನ್ (ರಿ) ಮಟ್ನಕಟ್ಟೆ ಆಶ್ರಯದಲ್ಲಿ ಸ್ತುತಿ ಇವೆಂಟ್ ಮ್ಯಾನೇಜ್‌ಮೆಂಟ್ (ರಿ) ಸಹಭಾಗಿತ್ವದಲ್ಲಿ ಕಲಾ ಕುಸುಮಾಂಜಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಧರ್ಮಶ್ರೀ ರಿಲೀಫ್ ಫೌಂಡೇಶನ್‌ನ ಅಧ್ಯಕ್ಷ ನಾಗರಾಜ ಸುವರ್ಣ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಉದ್ಯಮಿ ಧೀರಜ್ ಹೆಜಮಾಡಿ, ಮೂಡುಬಗೆಯ ವಾಗ್ಜೋತಿ ಶಾಲೆಯ ಪ್ರಾಂಶುಪಾಲರಾದ ರವೀಂದ್ರ ಎಚ್, ನಿವೃತ್ತ ಶಿಕ್ಷಕ ಸದಾಶಿವ ಐತಾಳ್, ಸ್ತುತಿ ಇವೆಂಟ್ ಮ್ಯಾನೇಜ್‌ಮೆಂಟ್‌ನ ಮುಖ್ಯಸ್ಥ ಗಣೇಶ್ ಆರ್.ಎಂ ಇನ್ನಿತರರು ಉಪಸ್ಥಿತರಿದ್ದರು. ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಅಧ್ಯಕ್ಷ ಭಾಸ್ಕರ ಕೊಗ್ಗ ಕಾಮತ್ ಸ್ವಾಗತಿಸಿದರು. ಶಿಕ್ಷಕ ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರ್ವಹಿಸಿದರು. ರಾಜೇಂದ್ರ ಪೈ, ಮಂಜುನಾಥ ಮೈಪಾಡಿ ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು ಇದರ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಪ್ರೇರಣಾ ಪ್ರಣಮ್ಯ ೨೦೧೭ ನೈಕಂಬ್ಳಿಯ ಹಳೆಯಮ್ಮ ದೈವಸ್ಥಾನ ವಠಾರದಲ್ಲಿ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮ ಉಧ್ಘಾಟಿಸಿದ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಅಧ್ಯಕ್ಷಟಿ. ಶಿವಾನಂದ ಶೆಟ್ಟಿ ಮಾತನಾಡಿ ರಾಜ್ಯದಲ್ಲಿ ಏಕರೂಪ ಶಿಕ್ಷಣ ಜಾರಿಯಾದಾಗ ಮಾತ್ರ ಕನ್ನಡದ ಉಳಿವು ಸಾಧ್ಯ. ಇಲ್ಲವಾದಲ್ಲಿ ಭಾಷೆಯ ಉಳಿವು ಭಾಷಣಕಷ್ಟೆ ಸೀಮಿತ ಆಗಿರುತ್ತದೆ ಎಂದರು. ರೈತ ದೇಶದ ಆಸ್ತಿ, ಸಂಘ ಸಂಸ್ಥೆಗಳು ಗ್ರಾಮದ ಆಸ್ತಿ. ನಿರಂತರವಾಗಿ ರೈತಪರ ಸಮಾಜಮುಖಿ ಕಾರ್ಯಗಳನ್ನು ಆಯೋಜಿಸಿ ಕೊಡುವವರ ಮತ್ತು ಅಗತ್ಯಯುಳ್ಳವರ ನಡುವಿನ ಕೊಂಡಿಯಾಗಿ ಸಂಘ ಸಂಸ್ಥೆಗಳ ಕಾರ್ಯನಿರ್ವಹಿಸಬೇಕು. ಹಾಗೆ ಪ್ರತಿ ಊರಿನಲ್ಲಿ ಆರ್ಥಿಕವಾಗಿ ಕಷ್ಟದಲ್ಲಿರುವ ಪ್ರತಿಭಾವಂತರನ್ನು ಹುಡುಕಿ ಅವರನ್ನು ದತ್ತು ತೆಗೆದುಕೊಂಡು ಭಾರತದ ಸತ್ಪ್ರಜೆಯಾಗಿಸಲು ಶ್ರಮಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ತಗ್ಗರ್ಸೆ, ಚಿತ್ತೂರು ಗ್ರಾಮ ಪಂಚಾಯತ್ ಅದ್ಯಕ್ಷಸಂತೋಷ ಮಡಿವಾಳ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಇಂಜಿನಿಯರಿಂಗ್ ಪದವಿ ಪರೀಕ್ಷೆಯ ಆಟೊಮೊಬೈಲ್ ವಿಭಾಗದಲ್ಲಿ ಬೆಂಗಳೂರಿನ ಆಕ್ಸ್‌ಫರ್ಡ್ ತಾಂತ್ರಿಕ ಮಹಾವಿದ್ಯಾಲಯದ ಸಂದೇಶ್ ಎ. ತೋಳಾರ್ ದ್ವಿತೀಯ ರ‍್ಯಾಂಕ್ ಗಳಿಸಿರುವರು. ಅವರು ನಾವುಂದದ ಆನಂದ ಆರ್. ತೋಳಾರ್, ಗಿರಿಜಾ ಎ. ತೋಳಾರ್ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕಾರ್ಯನಿರ್ವಹಣಾಧಿಕಾರಿ ಎಸ್. ಯೋಗೇಶ್ವರ ಮತ್ತು ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಸಚಿವ ದಂಪತಿಗಳನ್ನು ಸ್ವಾಗತಿಸಿ ಗೌರವಿಸಿದರು. ಕಂಬಳ ಉಳಿವಿಗೆ ಮನವಿ: ಸ್ಥಳೀಯ ಬಿಜೆಪಿ ಮುಖಂಡರು ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೂ ಸುಗ್ರೀವಾಜ್ಞೆ ಹೊರಡಿಸಿ ಕಾನೂನು ಅನುಮತಿ ದೊರಕಿಸಿಕೊಂಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಜಿಲ್ಲಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಯಶಪಾಲ್ ಸುವರ್ಣ, ಬೈಂದೂರು ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಯುವ ಮೋರ್ಚ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ವಕೀಲರಾದ ಕೆ.ಬಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇನ್ಸಿಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಅವರು ಡಿಸೆಂಬರ್ ತಿಂಗಳಿನಲ್ಲಿ ನಡೆಸಿದ ಸಿ.ಎ-ಸಿಪಿಟಿ ಪರೀಕ್ಷೆಯಲ್ಲಿ ಬಸ್ರೂರಿನ ಎಮ್.ಸತೀಶ ಭಟ್ ಪ್ರಥಮ ಪ್ರಯತ್ನದಲ್ಲೇ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಪ್ರಸ್ತುತ ಕುಂದಾಪುರದ ಭಂಡಾರ್‌ಕಾರ‍್ಸ್ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ. ಪದವಿಯ ವಿದ್ಯಾರ್ಥಿಯಾಗಿರುವ ಇವರು ಸತೀಶ ಭಟ್ ಮತ್ತು ಸ್ನೇಹ ಭಟ್ ಇವರ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ವಿನಾಯಕ ಯುವಕ ಸಂಘ ರಿ., ನೆಂಪು ಮತ್ತು ಭಟ್ ಬಳಗದ ವತಿಯಿಂದ ನೆಂಪು ಗ್ರಾಮಸ್ಥರ ಸಹಯೋಗದಲ್ಲಿ ನೆಂಪು ಶ್ರೀ ವಿನಾಯಕ ದೇವಸ್ಥಾನದ ೨೫ನೇ ವರ್ಷದ ಪ್ರತಿಷ್ಠಾ ವರ್ಧಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ರಾಮಕೃಷ್ಣ ಭಟ್ ನೆಂಪು ಶುಭ ಹಾರೈಸಿದರು. ಶ್ರೀ ವಿನಾಯಕ ಯುವಕ ಸಂಘದ ಅಧ್ಯಕ್ಷರಾದ ಸಂತೋಷ ಮಂಗಲ್ಸನಕಟ್ಟೆ, ಗೌರವಾಧ್ಯಕ್ಷರಾದ ಸುಕುಮಾರ ಶಾರಾಳ, ಉಪಾಧ್ಯಕ್ಷರಾದ ಪ್ರಶಾಂತ ಮಂಗಲ್ಸನಕಟ್ಟೆ, ಹರೀಶ ಆಚಾರ‍್ಯ ಹೆರ್ಜಾಡಿ, ಜೊತೆ ಕಾರ್ಯದರ್ಶಿ ರಾಜೇಂದ್ರ ಹರ್ಜಿಮನೆ, ನೆಂಪು ಫ್ರೆಂಡ್ಸ್ ಅಧ್ಯಕ್ಷರಾದ ರಾಘವೇಂದ್ರ ನೆಂಪು, ಉಪನ್ಯಾಸಕ ಮಂಜುನಾಥ ಚಂದನ್ ನೀರ್‌ಕೊಡ್ಲು, ಭಟ್ ಬಳಗದ ವೆಂಕಟರಾಮ್ ಭಟ್, ಪ್ರಶಾಂತ್ ಭಟ್ ಮತ್ತಿತ್ತರು ಉಪಸ್ಥಿತರಿದ್ದರು. ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯ ತನಕ ದೇವಳ ಪರಿಸರ, ಕೆರೆ ಹಾಗೂ ಸ್ಥಳೀಯ ಅಂಗನವಾಡಿ ಪರಿಸರವನ್ನು ಸ್ವಚ್ಚಗೊಳಿಸಲಾಯಿತು.
ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಬೈಂದೂರು: ಬೈಂದೂರು ಗ್ರಾಮೀಣ ಹಾಗೂ ಹಿಂದೂಳಿದ ಪ್ರದೇಶವೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಕಾಲಘಟ್ಟದಲ್ಲಿ ಅಲ್ಲಿನ ಸಾಂಸ್ಕೃತಿಕ ಶ್ರಿಮಂತಿಕೆಯನ್ನು ಪ್ರದರ್ಶಿಸಲು ಎಪ್ಪತ್ತರ ದಶಕದಲ್ಲಿ ಬೈಂದೂರಿನ ಪ್ರಾತಿನಿಧಿಕ ಕಲಾಸಂಸ್ಥೆಯಾಗಿ ಜನ್ಮತಳೆದ ಲಾವಣ್ಯ, ಕಲೆಗಾಗಿ ಕಲೆ ಎಂಬ ಸಿದ್ಧಾಂತಕ್ಕೆ ಬದ್ಧರಾಗಿ, ನಿರಂತರವಾಗಿ ರಂಗಪ್ರಜ್ಞೆಯನ್ನು ಮೂಡಿಸುತ್ತಾ ಬೆಳೆದು ನಲವತ್ತನೇ ವಸಂತಕ್ಕೆ ಕಾಲಿರಿಸಿದೆ. 1977ರಲ್ಲಿ ಹವ್ಯಾಸಿ ಯುವ ಕಲಾವಿದರಾಗಿದ್ದ ಬಿ. ಗಣೇಶ್ ಕಾರಂತ್, ಯು. ಶ್ರೀನಿವಾಸ ಪ್ರಭು, ಬಿ. ಕೃಷ್ಣ ಅಡಿಗ, ರಾಮ ಟೈಲರ್, ಅನಿಲ್ ಕುಮಾರ್, ಆರ್.ಡಿ. ಟೈಲರ್, ವಿ. ಆರ್ ಬಾಲಚಂದ್ರ, ಉಮೇಶ್ ಕುಮಾರ್, ದಿ ಮೋಹನ್ ನಾಯಕ್, ದಿ. ರತ್ನಾಕರ್ ಆಚಾರ್ ಮುಂತಾದವರು ಸೇರಿ ಆರಂಭಿಸಿದ ’ಲಾವಣ್ಯ’ ಎಂಬ ಕಲಾಸಂಸ್ಥೆ ನಿರಂತರವಾಗಿ ಚಟುವಟಿಕೆಯಲ್ಲಿ ತೊಡಗಿಕೊಂಡು ರಂಗಭೂಮಿಯ ಕಂಪು ಪಸರಿಸುತ್ತಿದೆ. ಆರಂಭದ ದಿನಗಳಲ್ಲಿಯೇ ಬೈಂದೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ’ರೊಟ್ಟಿ ಋಣ’ ನಾಟಕವನ್ನು ಪ್ರದರ್ಶಿಸಿ ಪ್ರಥಮ ಸ್ಥಾನದ ಪಾರಿತೋಷಕ ಹಾಗೂ ಇತರ ಮೂರು ಪಾರಿತೋಷಕ ಪಡೆದ ಹೆಗ್ಗಳಿಕೆ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ಇತಿಹಾಸದಲ್ಲೇ ಪ್ರಪ್ರಥಮವಾಗಿ ಮನೆ, ಶಾಲೆ, ದೇವಸ್ಥಾನಗಳು, ಸಭಾ ಮಂದಿರಗಳು ಹಾಗೂ ಸಾರ್ವಜನಿಕ ಸ್ಥಳದಲ್ಲಿ ಒಂದೇ ದಿನ ಐದುಸಾವಿರಕ್ಕೂ ಹೆಚ್ಚು ರಂಗೋಲಿ ರಚನೆ ಮಾಡುವ ಮೂಲಕ ಕುಂದಾಪುರದ ರಂಗೋಲಿ ಪ್ರಿಯರು ದಾಖಲೆಯನ್ನೇ ನಿರ್ಮಿಸಿದ್ದಾರೆ. ಈ ನಡುವೆ ರಾಜ್ಯಮಟ್ಟದ ರಂಗೋಲಿ ಸ್ಪರ್ಧೆಯು ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲಮಾಧ್ಯಮ ಶಾಲಾ ವಠಾರದಲ್ಲಿ ನಡೆದು ಬಹಳ ಆಕರ್ಷಣೆ ಪಡೆಯಿತು. ನೂರಾರು ಮಂದಿ ವಿದ್ಯಾರ್ಥಿಗಳು , ಹಾಗೂ ಹಿರಿಯರು ಪೈಪೋಟಿಯಲ್ಲಿ ರಂಗೋಲಿ ರಚಿಸುವ ಮೂಲಕ ರಂಗೋಲಿಯ ವೈವಿಧ್ಯಮಯ ಚಿತ್ರಣದ ಪ್ರದರ್ಶನ ನೀಡಿದರು. ಕುಂದಾಪುರದ ಬಹುತೇಕ ರಸ್ತೆ ಬದಿಯಲ್ಲಿರುವ ಮನೆಗಳಲ್ಲಿ ಮುಂಜಾನೆಯಿಂದಲೇ ಗೃಹಿಣಿಯರು ಮಕ್ಕಳು ರಂಗೋಲಿ ರಚಿಸಿದ್ದು ರಂಗೋಲಿ ಉತ್ಸವಕ್ಕೆ ಸ್ಫೂರ್ತಿ ತುಂಬಿದರು. ಕುಂದಾಪುರದ ಶ್ರೀ ವೆಂಕಟರಮಣ ದೇವಸ್ಥಾನದ ರಸ್ತೆ, ಚಿಕ್ಕನ್‌ಸಾಲ್ ರಸ್ತೆ , ರಾಮ ಮಂದಿರ ರಸ್ತೆ ಖಾರ್ವಿಕೇರಿ ಮದ್ದುಗುಡ್ಡೆ ಈಸ್ಟ್ ಬ್ಲಾಕ್ ರಸ್ತೆ, ವೆಸ್ಟ್ ಬ್ಲಾಕ್ ರಸ್ತೆ , ಬಡಾಕೆರೆ, ಕುಂದೇಶ್ವರ ದೇವಸ್ಥಾನದ ರಸ್ತೆ , ಸಲೀಂ ಆಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ ೧೫೪ನೇ ಜನ್ಮದಿನಾಚರಣೆಯ ಅಂಗವಾಗಿ ಜ.೨೮ರಂದು ಬೈಂದೂರಿನಲ್ಲಿ ಸಮರ್ಥ ಭಾರತ ಸಂಘಟನೆ ಹಮ್ಮಿಕೊಂಡಿರುವ ವಿವೇಕ ಪರ್ವ ಸಾರ್ವಜನಿಕ ಸಮಾರಂಭಕ್ಕೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಬೈಂದೂರು ಪ್ರಖಂಡ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ವಿಹಿಂಪ ಬೈಂದೂರು ಪ್ರಖಂಡದ ಅಧ್ಯಕ್ಷ ಶ್ರೀಧರ ಬಿಜೂರು ಹೇಳಿದರು. ಬೈಂದೂರಿನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತಮನಾಗು ಉಪಕಾರಿಯಾಗು ಎಂಬ ಸಂದೇಶದಡಿಯಲ್ಲಿ ಸಮರ್ಥ ಭಾರತ ಬೈಂದೂರು ಹಮ್ಮಿಕೊಂಡಿರುವ ವಿವೇಕ ಪರ್ವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣದ ಸಹಸಂಘಚಾಲಕ ಡಾ. ವಾಮನ ಪೈ, ಚಿತ್ರನಟ ಉಪೇಂದ್ರ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮೊದಲಾದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಆರಂಭಕ್ಕೂ ಮುನ್ನ ಯಡ್ತರೆ ಬೈಪಾಸ್‌ನಿಂದ ಬೈಂದೂರು ಗಾಂಧಿ ಮೈದಾನದ ತನಕ ಬೃಹತ್ ಶೋಭಾಯಾತ್ರೆ ಜರುಗಲಿದೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಘಟನೆಯ ಕಾರ್ಯಕರ್ತರು ಸ್ವಪ್ರೇರಣೆಯಿಂದ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವಂತೆ ವಿನಂತಿಸಿಕೊಂಡರು. ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ಬೈಂದೂರು…
