Author: ನ್ಯೂಸ್ ಬ್ಯೂರೋ

ಕೈಗೆಟಕುವ ಬೆಲೆ, ಉತ್ಕೃಷ್ಟ ದರ್ಜೆ, ನಗರಕ್ಕೆ ಸುಲಭ ಸಂಪರ್ಕ ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಅಭಿವೃದ್ಧಿ ಪಥದತ್ತ ದಾಪುಗಾಲಿಡುತ್ತಿರುವ ಬೈಂದೂರು ಆಧುನಿಕ ಜೀವನಶೈಲಿಗೆ ತೆರೆದುಕೊಳ್ಳುತ್ತಿದೆ. ಜನರ ಅಗತ್ಯಕ್ಕೆ ತಕ್ಕಂತೆ ಸವಲತ್ತುಗಳನ್ನು ಒಳಗೊಂಡು ಹೊಸತನದ ಹೆಜ್ಜೆಹಾಕಿ ಮಾದರಿ ನಗರವಾಗಿ ರೂಪುಗೊಳ್ಳುತ್ತಿದೆ. ಇಂತಹ ಕಾಲಘಟ್ಟದಲ್ಲಿ ಬೈಂದೂರಿನಲ್ಲಿಯೇ ಪ್ರಥಮ ಭಾರಿಗೆ ಸರ್ವ ಸುಸಜ್ಜಿತವಾದ ವಸತಿ ಸಮುಚ್ಚಯವೊಂದು ತಲೆಯೆತ್ತುತ್ತಿದ್ದು, ಹುಟ್ಟೂರಿನಲ್ಲಿಯೇ ಸ್ವಂತ ಮನೆ ಕನಸು ಕಾಣುತ್ತಿದ್ದವರು ನನಸಾಗಿಸಿಕೊಳ್ಳುವ ದಿನ ಸಮೀಪಿಸಿದೆ. ಶ್ರೀ ಸೌಪರ್ಣಿಕಾ ಡೆವೆಲಪರ್ಸ್ ಹಾಗೂ ಮಹಾವೀರ ಕನ್‌ಸ್ಟ್ರಕ್ಷನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ನೂತನ ಓಂ ಮಹಾವೀರ ರೆಸಿಡೆನ್ಸಿಯಲ್ ಅಪಾರ್ಟ್‌ಮೆಂಟ್ ನಿಮ್ಮ ಕೈಗೆಟಕುವ ದರದಲ್ಲಿ, ಗರಿಷ್ಠ ಸೌಲಭ್ಯದೊಂದಿದೆ ಲಭ್ಯವಿರಲಿದೆ. ನಗರದಿಂದ ಅನತಿ ದೂರದಲ್ಲಿ ಬೈಂದೂರು ಗಂಗಾನಾಡು ರಸ್ತೆಯ ಭರತ್ ನಗರದಲ್ಲಿ ನಿರ್ಮಾಣವಾಗಲಿರುವ 1 ಬಿಹೆಚ್‌ಕೆ ಹಾಗೂ 2 ಬಿಹೆಚ್‌ಕೆ ಅಪಾರ್ಟ್‌ಮೆಂಟ್‌ಗಳು ಎಲ್ಲಾ ರೀತಿಯಲ್ಲಿಯೂ ಅನುಕೂಲಕರವಾಗಿದೆ. ನೂತನ ಅಪಾರ್ಟ್‌ಮೆಂಟ್ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಹತ್ತಿರದಲ್ಲಿದೆ. 500ಮೀಟರ್ ದೂರದಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜು, 700 ಮೀಟರ್ ದೂರದಲ್ಲಿ ಸೈಂಟ್‌ಥಾಮಸ್ ರೆಸಿಡೆನ್ಸಿಯಲ್ ಶಾಲೆ, ಹಾಗೂ 1.5ಕಿ.ಮೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಸ್ಯಗಳು ಪ್ರಕೃತಿಯ ದೊಡ್ಡ ಕೊಡುಗೆ. ಸಸ್ಯ ಸಂವರ್ಧನೆಯಿಂದ ಮನುಷ್ಯನ ಬದುಕು ಹಸನಾಗುತ್ತದೆ. ಕರಾವಳಿಯು ಸಕಲ ರೀತಿಯ ಶ್ರೇಷ್ಠ ಸಸ್ಯ ಸಂಪತ್ತನ್ನು ಒಳಗೊಂಡಿದ್ದು ಅವುಗಳ ಶಾಸ್ತ್ರೀಯ ಅಧ್ಯಯನ ಇಂದಿಗೂ ಅವಶ್ಯಕತೆಯಾಗಿದೆ ಎಂದು, ಕುಂದಪ್ರಭ ಪತ್ರಿಕೆಯ ಸಂಪಾದಕರು ಶ್ರೀ ಯು.ಎಸ್ ಶೆಣೈ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾಲೇಜಿನ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ನಾರಾಯಣ ತಂತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎನ್.ಎಸ್.ಎಸ್ ಅಧಿಕಾರಿಗಳಾದ ಪ್ರೊ.ರಾಮಚಂದ್ರ, ಗೋ ಗ್ರೀನ್ ಕ್ಲಬ್ ಇಅದರ್ ಸಂಯೋಜಕರಾದ ಪ್ರೊ. ಮಂಜುನಾಥ ಉಪಸ್ಥಿತರಿದ್ದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ.ಗಾಯತ್ರಿ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಚೇತನಾ ಸ್ವಾಗತಿಸಿದರು. ದಶಮಿ ವಂದಿಸಿದರು. ಸೌಮ್ಯ ಕಾಯಕ್ರಮ ನಿರ್ವಹಿಸಿದರು. ನಂತರ ಕಾಲೇಜಿನ ಸಸ್ಯೋದ್ಯಾನದಲ್ಲಿ ಅತಿಥಿಗಳು ಮತ್ತು ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು. ವಿದ್ಯಾರ್ಥಿಗಳಿಗೆ ಬೀಜದುಂಡೆಗಳನ್ನು ವಿತರಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಸಂಪನ್ನವಾದ ಶ್ರವಣ ನಕ್ಷತ್ರದ ಶುಭ ಘಳಿಗೆಯಲ್ಲಿ ಕುಂದಾಪುರ ತಾಲೂಕು ನಾಡದೋಣಿ ಮೀನುಗಾರರ ಒಕ್ಕೂಟದ ವತಿಯಿಂದ ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಬಳಿಯ ಕಡಲತಡಿಯಲ್ಲಿ ಸಾಂಪ್ರದಾಯಿಕ ಸಮುದ್ರ ಪೂಜೆ ನಡೆಯಿತು. ಮರಳದಂಡೆಯಲ್ಲಿ ಸಮುದ್ರ ದೇವತೆಯ ಲಿಂಗ ರಚಿಸಿ ಅದಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಮುದ್ರ ಪೂಜೆ ನಡೆಸಿ, ಬುಧವಾರದಿಂದ ಆರಂಭವಾಗುವ ಮೀನುಗಾರಿಕಾ ಋತುವಿನಲ್ಲಿ ಸುರಕ್ಷಿತ ಮತ್ತು ಸಮೃದ್ಧ ಮೀನುಗಾರಿಕೆ ಕರುಣಿಸೆಂಬ ಪ್ರಾರ್ಥನೆಯೊಂದಿಗೆ ಸಮುದ್ರಕ್ಕೆ ಬಾಗಿನ ಸಮರ್ಪಿಸಲಾಯಿತು. ವರಾಹ ದೇವಸ್ಥಾನದ ಅರ್ಚಕ ಪಡುಕೋಣೆ ನರಸಿಂಹ ಅಡಿಗ ಪೂಜಾವಿಧಿಗಳನ್ನು ನೆರವೇರಿಸಿದರು. ಗಂಗೊಳ್ಳಿ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಮಂಜು ಬಿಲ್ಲವ, ಬೈಂದೂರು ಸಂಘದ ಅಧ್ಯಕ್ಷ ಕೆ. ಎಂ. ಸೋಮಶೇಖರ ಖಾರ್ವಿ ಪೂಜೆಯ ನೇತೃತ್ವ ವಹಿಸಿದ್ದರು. ತಾಲೂಕಿನ ಮೀನುಗಾರ ಪ್ರಮುಖರಾದ ಕಂಚಗೂಡು ಚಂದ್ರ ಖಾರ್ವಿ, ಮೋಹನ ಖಾರ್ವಿ, ರಘುನಾಥ ಪಟೇಲ್, ನಾಗಪ್ಪ ಪಟೇಲ್, ಚೌಕಿ ವಿಠಲದಾಸ್, ಕೇಶವ ಕೊಡೇರಿ, ಉಪ್ಪುಂದ ವೆಂಕಟರಮಣ ಖಾರ್ವಿ, ಗಣೇಶ ಖಾರ್ವಿ, ಅಣ್ಣಯ್ಯ ಖಾರ್ವಿ, ಮರವಂತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದವಿ ತರಗತಿಗಳನ್ನು ಬೆಳಿಗ್ಗೆ ಎಂಟು ಗಂಟೆಯಿಂದಲೇ ಆರಂಭಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗಲಿದ್ದು, ಕೂಡಲೇ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕೋಟೇಶ್ವರ ಘಟಕದಿಂದ ಕುಂದಾಪುರ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಸಮಯದ ಬದಲಾವಣೆಯಿಂದ ತೊಂದೆರೆಯಾಗಲಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅಷ್ಟು ಬೇಗ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಬೆಳಗ್ಗಿನ ತರಗತಿಗಳು ತಪ್ಪಿಹೋಗುವ ಸಂದರ್ಭವೇ ಹೆಚ್ಚು. ಹಾಗಾಗಿ ಕೂಡಲೇ ಸಮಯವನ್ನು ಬದಲಾವಣೆ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲಮಾಡಿಕೊಡಬೇಕು ಎಂದು ಆಗ್ರಹಿಸಿದರು. ಕುಂದಾಪುರ ತಹಶೀಲ್ದಾರ್ ಅವರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಎಬಿವಿಪಿ ಉಡುಪಿ ಸಂಘಟನಾ ಕಾರ್ಯದರ್ಶಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಾಚ್ಯವಸ್ತುಗಳು ಇತಿಹಾಸದ ಆಕರಗಳು. ಅವು ಸಮುದಾಯದ ಪ್ರಾಚೀನ ಜೀವನ ವಿಧಾನ, ಸಾಂಸ್ಕೃತಿಕ ಬೆಳವಣಿಗೆ ಮತ್ತು ಬದಲಾವಣೆಗಳ ಮೇಲೆ ಬೆಳಕು ಚೆಲ್ಲುತ್ತವೆ. ಅಧ್ಯಯನದ ದೃಷ್ಟಿಯಿಂದ ಮಹತ್ವ ಪಡೆದಿರುವ ಅಂತಹ ವಸ್ತುಗಳನ್ನು ಸಂಗ್ರಹಿಸಿ ರಕ್ಷಿಸುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮೂಲಕ ಮಾಡಬಹುದು ಎಂದು ನಿವೃತ್ತ ಬ್ಯಾಂಕ್ ಅಧಿಕಾರಿ ಎಂ. ಗೋವಿಂದ ಹೇಳಿದರು. ಪ್ರಾಚ್ಯ ವಸ್ತು ಸಂಗ್ರಹಾಲಯಗಳ ಮತ್ತು ಪರಂಪರೆಯ ಇಲಾಖೆಯು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸ್ಮಾರಕಗಳ ಮೂರ್ತ ಮತ್ತು ಅಮೂರ್ತ ಪರಂಪರೆಯ ಸಂಪತ್ತಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಸ್ಪರ್ಧೆಗಳ ಭಾಗವಾಗಿ ನಡೆದ ನಿತ್ಯಬಳಕೆಯ ಪ್ರಾಚ್ಯವಸ್ತುಗಳ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರದರ್ಶನವನ್ನು ಉದ್ಘಾಟಿಸಿದ ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ವಸ್ತುಗಳ ಸಂಗ್ರಹಕ್ಕೆ ಶ್ರಮಿಸಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ವಸ್ತುಗಳ ಕಿರು ಸಂಗ್ರಹಾಲಯವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಾವುದೇ ಸಮಾರಂಭ ಸುಂದರವಾಗಿ ಮೂಡಿಬರಬೇಕಾದರೆ ಕಾರ್ಯಕ್ರಮ ಸಂಯೋಜಕರ ಜತೆ ಧ್ವನಿ ಬೆಳಕು ಸಂಯೋಜಕರ ಶ್ರಮ ಮತ್ತು ಕೌಶಲ್ಯ ಮಹತ್ವದ ಪಾತ್ರ ವಹಿಸಿ ಸಮಾರಂಭದ ಯಶಸ್ವಿಗೆ ಕಾರಣವಾಗುತ್ತದೆ ಎಂದು ಕುಂದಾಪುರದ ಟಾರ್ಪೋಡೊಸ್ ಸ್ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾದ ಗೌತಮ ಶೆಟ್ಟಿ ಹೇಳಿದರು. ಅವರು ಕುಂದಾಪುರ ವಲಯ ಧ್ವನಿ ಬೆಳಕು ಸಂಯೋಜಕರ ಸಂಘದ ೬ನೇ ವಾರ್ಷಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಎಚ್ ಉದಯ ಆಚಾರ್, ಕಾರ್ಯದರ್ಶಿ ದಾಮೋದರ, ಉಪಾಧ್ಯಕ್ಷರಾದ ಬಾಲಕೃಷ್ಣ ಪೂಜಾರಿ, ಕುಂದಾಪುರ ವಲಯದ ಗೌರವಾಧ್ಯಕ್ಷರಾದ ಸತೀಶ, ಕೋಶಾಧಿಕಾರಿ ರಾಜ್‌ಗೋಪಾಲ, ಬ್ರಹ್ಮಾವರ ವಲಯದ ಅಧ್ಯಕ್ಷರಾದ ಪುಂಡಲೀಕ ಕಾಮತ್, ಬೈಂದೂರು ವಲಯದ ಅಧ್ಯಕ್ಷರಾದ ಶಶಿಧರ ಶಣೈ, ಉಡುಪಿ ವಲಯದ ಅಧ್ಯಕ್ಷರಾದ ಅನಿಲ ಕುಮಾರ್, ಕುಂದಾಪುರ ವಲಯದ ಅಧ್ಯಕ್ಷರಾದ ರೋನಿ ಬೆರಟ್ಟೊ, ಕುಂದಾಪುರ ವಲಯ ಪ್ರತಿನಿಧಿಗಳಾದ ಪಾಂಡುರಂಗ ಜೋಗಿ, ಸರ್ದಾರ ,ನಿಕಟಪೂರ್ವ ಕಾರ್ಯದರ್ಶಿ ಭರತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಳೆದ ಹಲವು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ, ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭ ಜರುಗಿತು. ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಅವರು ಶಾಲಾ ಸಂಸತ್ತನ್ನು ಉದ್ಘಾಟಿಸಿ ಸಂದರ್ಭಗಳೇ ಸಂಬಂಧಗಳ ಆಳವನ್ನು ಮತ್ತು ವಾಸ್ತವವನ್ನು ತಿಳಿಸುವಂತೆ, ಶಾಲಾ ಸಂಸತ್ತು ಮಕ್ಕಳಿಗೆ ಸಂಸತ್ತಿನ ಬಗ್ಗೆ ಮೌಲ್ಯಯುತವಾದ ಅಂಶವನ್ನು ತಿಳಿಸಿದರು. ಸೋಲು ಗೆಲುವು ಇವೆರಡು ಜೀವನದ ಒಂದು ಭಾಗವಾಗಿದೆ. ಬದುಕಿನ ಎರಡು ಮುಖಗಳಾಗಿವೆ. ಇಂತಹ ಸಂದರ್ಭದಲ್ಲಿಯುವ ಪೀಳಿಗೆಯ ವಿದ್ಯಾರ್ಥಿಗಳಾದ ನೀವು ಶಾಸಕಾಂಗದ ಪ್ರತಿನಿಧಿಯಾಗಿ ಚುನಾಯಿತರಾದಲ್ಲಿ ಈಗಿನ ಶಾಸಕಾಂಗದ ನಿಯಮಗಳನ್ನು ಸಧೃಡಗೊಳಿಸುವಲ್ಲಿ ಪ್ರಯತ್ನಿಸುವವರಾಗಿರಬೇಕು ಎಂದು ಸಲಹೆ ನೀಡಿದರು. ಹಾಗೆಯೇ ಸಂಸತ್ತಿನ ಬಗ್ಗೆ ವಿದ್ಯಾರ್ಥಿಗಳಿಗಿದ್ದ ಕೆಲವು ಗೊಂದಲಗಳನ್ನು ನಿವಾರಿಸಿದರು. ಮಕ್ಕಳ ಪ್ರಶ್ನೆಗಳಿಗೆ ಸೂಕ್ತ ಉತ್ತರವನ್ನು ನೀಡಿದರು. ಕಾರ್ಯಕ್ರಮದಲ್ಲಿ ಬಾಂಡ್ಯಾ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯ ನಿರ್ವಾಹಕರಾದ ಕೆ. ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಗುರುಕುಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸನ್ನಿ ಪಿ. ಜಾನ್ ಮತ್ತು ಗುರುಕುಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯೆಂದೂರು: ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 6ನೇ ಜಿಲ್ಲಾ ವಾರ್ಷಿಕ ಮಹಾಸಭೆ ಹಾಗೂ 6ನೇ ವಾರ್ಷಿಕೋತ್ಸವ ಕಾರ್ಯಕ್ರಮವು ನಾಗೂರು ಶಾಂತೇರಿ ಕಾಮಾಕ್ಷಿ ಸಭಾಭವನದಲ್ಲಿ ಜರುಗಲಿದೆ. ಈ ಸಂದರ್ಭದಲ್ಲಿ ಜಿಲ್ಲೆಯ ಧ್ವನಿಬೆಳಕು ಸಂಘದ ಸದಸ್ಯರಿಗೆ ವೈದ್ಯಕೀಯ ತಪಾಸಣೆ, ಉತ್ತಮ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ, ಸದಸ್ಯರಿಗೆ ಆರೋಗ್ಯ ವಿಮೆ ಸೇರಿದಂತೆ ಇತರೆ ಕಾರ್ಯಕ್ರಮಗಳು ನಡೆಯಲಿರುವುದು ಎಂದು ಉಡುಪಿ ಜಿಲ್ಲಾ ಧ್ವನಿ ಬೆಳಕು ಸಂಯೋಜಕರ ಸಂಘಟನೆಯ ಜಿಲ್ಲಾಧ್ಯಕ್ಷ ಎಚ್. ಉದಯ ಆಚಾರ್ಯ ಹೇಳಿದರು. ಅವರು ನಾಗೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಉಡುಪಿ ಜಿಲ್ಲೆಯ ಧ್ವನಿ ಬೆಳಕು ಸಂಯೋಜಕರು ಸೇರಿ ಜಿಲ್ಲೆಯ ಎಲ್ಲ ವೃತ್ತಿ ಬಾಂಧವರನ್ನು ಒಟ್ಟುಗೂಡಿಸಿ ಒಂದೇ ಸಿದ್ಧಾಂತವನ್ನು ರೂಢಿಸಿಕೊಂಡು, ಉತ್ತಮ ಸೇವೆಯನ್ನು ನೀಡುವ ಸಲುವಾಗಿ ಸದುದ್ದೇಶದಿಂದ ಸಂಘಟನೆ ರಚನೆಗೊಂಡಿದ್ದು ಬ್ಯೆಂದೂರು, ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾರ್ಕಳ ಹಾಗೂ ಕಾಪು ವಲಯಗಳ ೭೦೦ ಸದಸ್ಯರಿದ್ದಾರೆ ಎಂದರು. ಉಚಿತ ವೈದ್ಯಕೀಯ ಶಿಬಿರ, ಆರ್ಥಿಕವಾಗಿ ಹಿಂದುಳಿದವರ ಮನೆಗಳಿಗೆ ಉಚಿತ ವಿದ್ಯುತ್ ವೈರಿಂಗ್…

Read More

ಖಾಸಗಿ ರಸ್ತೆಗೆ ಸರಕಾರದ ದುಡ್ಡು ದುರ್ಬಳಕೆ! ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಸರಕಾರಿ ಕಾಮಗಾರಿಗಳಿಗೆ ವಿನಿಯೋಗವಾಗಬೇಕಿದ್ದ ಸಂಸದರ ಅನುದಾನ ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರೋರ್ವರ ಮನೆಯ ಖಾಸಗಿ ರಸ್ತೆಗೆ ವಿನಿಯೋಗಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಕಾಮಗಾರಿಗೆ ಅನುಮೋದನೆ ನೀಡಿರುವ ಸ್ಥಳದಲ್ಲಿ ಕಾಮಗಾರಿ ನಡೆಸದೇ ಮನೆಗೆ ತೆರಳುವ ಖಾಸಗಿ ರಸ್ತೆಗೆ ಇಂಟರ್‌ಲಾಕ್ ಅಳವಡಿಸಿಕೊಂಡು ಸರಕಾರದ ಕಣ್ಣಿಗೆ ಮಣ್ಣೆರೆಚಲು ಹೊರಟಿರುವ ಬಗ್ಗೆ ಕುಂದಾಪ್ರ ಡಾಟ್ ಕಾಂಗೆ ಮಾಹಿತಿ ಲಭ್ಯವಾಗಿದೆ. ಕುಂದಾಪುರದ ವೆಸ್ಟ್ ಬ್ಲಾಕ್ ರೋಡ್ (ದತ್ತಾತ್ರೆಯ ನಗರ ರಸ್ತೆ) ಬಳಿ ಕುಂದಾಪುರದ ಮಾಜಿ ಪುರಸಭಾ ಅಧ್ಯಕ್ಷ, ಹಾಲಿ ಸದಸ್ಯ ಮೋಹನದಾಸ್ ಶೆಣೈ ಅವರ ಮನೆಗೆ ಹೋಗುವ ಖಾಸಗಿ ಕಾಲುದಾರಿಗೆ ಇಂಟರ್‌ಲಾಕ್ ಅಳವಡಿಕೆಗೆ ಉಡುಪಿ ಚಿಕ್ಕಮಂಗಳೂರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ಸರಕಾರದ ಹಣ ಪೋಲು ಮಾಡುತ್ತಿರುವ ಕುರಿತು ಕುಂದಾಪುರ ಪುರಸಭೆಯ ನಾಮ ನಿರ್ದೇಶಿತ ಸದಸ್ಯ ಕೆ. ಕೇಶವ ಭಟ್ ಅವರು ಉಡುಪಿ ಜಿಲ್ಲಾಧಿಕಾರಿಯವರಿಗೆ ದೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿಂದುಸ್ಥಾನಿ ಸಂಗೀತ ಗುರುಗಳಾದ ವಿದ್ವಾನ್ ಸತೀಶ ಭಟ್ ಮಾಳಕೊಪ್ಪ ಮತ್ತು ವಿದುಷಿ ಪ್ರತಿಮಾ ಭಟ್ ಅವರ ಶಿಷ್ಯವೃಂದ ರವಿವಾರದ ಗುರು ಪೂರ್ಣಿಮೆಯ ನಿಮಿತ್ತ ಮರವಂತೆಯ ಸಾಧನಾ ಸಮುದಾಯ ಭವನದ ವಿ. ಕೆ. ಕಾಮತ್ ಸಭಾ ಭವನದಲ್ಲಿ ಗುರುಪೂಜೆ ಮತ್ತು ಸಂಗೀತೋಪಾಸನೆ ನಡೆಸಿತು. ನಿವೃತ್ತ ಶಿಕ್ಷಕ ಹಾಗೂ ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ ಎಚ್. ಶ್ರೀಧರ ಹಂದೆ ಮತ್ತು ಹಿರಿಯ ತಬಲಾ ವಾದಕ ಸತ್ಯವಿಜಯ ಭಟ್ ಮುಖ್ಯ ಅತಿಥಿಗಳಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಧರ ಹಂದೆ ಈಗ ಪೋಷಕರು ತಮ್ಮ ಮಕ್ಕಳು ಅಂಕಗಳ ಬೆನ್ನು ಹತ್ತುವಂತೆ ಅತಿಯಾದ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಮಕ್ಕಳು ಮುಂದೆ ಬದುಕಿನ ಭಾಗವಾಗಬೇಕಾದ ಸಾಂಸ್ಕೃತಿಕ ಪ್ರಜ್ಞೆ ಮತ್ತು ರಸಾನುಭೂತಿಯಿಂದ ವಂಚಿತರಾಗುವಂತೆ ಮಾಡುತ್ತಿದ್ದಾರೆ. ಮಕ್ಕಳು ಕನಿಷ್ಠ ಒಂದು ಕಲೆಯಲ್ಲಾದೂ ಪರಿಣತಿ ಪಡೆದರೆ ಇಂತಹ ವಂಚನೆಗೆ ಒಳಗಾಗರು ಎಂದರು. ಸಂಗೀತದ ಬಗೆಗೆ ಮಾತನಾಡಿದ ಅವರು ಅದು ಕಲೆಗಳಲ್ಲೇ ಅತ್ಯಂತ ಪ್ರಾಚೀನವಾದುದು. ಅದು ದೇವಾನುದೇವತೆಗಳ ಕೊಡುಗೆ.…

Read More