ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ನ 5ನೇ ವರ್ಷದ ಟ್ರಸ್ಟ್ ದಿನಾಚರಣೆಯನ್ನು ಮಾಜಿ ಶಾಸಕ ಹಾಗೂ ವಿಶ್ವ ರಾಮ್ಷತ್ರಿಯ ಸಂಘದ ಅಧ್ಯಕ್ಷ ಕೆ. ಲಕ್ಷ್ಮೀನಾರಾಯಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈಗಿನ ತಲೆಮಾರಿನ ಮಕ್ಕಳು ಅದೃಷ್ಟಶಾಲಿಗಳು. ಹಿಂದಿನವರು ಅನುಭವಿಸಿದ್ದ ಕಷ್ಟ ಅವರಿಗಿಲ್ಲ. ಅವರಲ್ಲಿ ಅರ್ಹತೆ ಇರುವವರಿಗೆ ವಿವಿಧ ಮೂಲಗಳಿಂದ ನೆರವು ಬರುತ್ತಿದೆ. ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್ ಕಷ್ಟದಲ್ಲಿರುವವವರಿಗೆ ನೀಡುತ್ತಿರುವ ಸಹಾಯ ಅದಕ್ಕೆ ಉದಾಹರಣೆ. ಅದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳೂ ಸೇರಿದಂತೆ ನೆರವು ಪಡೆದ ಎಲ್ಲರೂ ಸಮಾಜ ಮೆಚ್ಚುವಂತೆ ಬದುಕಬೇಕು ಎಂದು ಹೇಳಿದರು. ಟ್ರಸ್ಟ್‌ನ ಆಡಳಿತ ಟ್ರಸ್ಟಿ ಬಿ. ರಾಮಕೃಷ್ಣ ಶೇರೆಗಾರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಉದ್ಯಮಿ ಸದಾನಂದ ಸೇರ್ವೇಗಾರ್, ಮುಂಬೈ ಉದ್ಯಮಿ ಪ್ರಕಾಶ್ ಮಲ್ಲಯ್ಯ, ಕುಂದಾಪುರ ರಕ್ಷಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ. ಚಂದ್ರಶೇಖರ, ಕುಂದಾಪುರ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ರವೀಂದ್ರ ಕಾವೇರಿ, ಬೈಂದೂರು ರಾಮಕ್ಷತ್ರಿಯ ಸಂಘದ ಅಧ್ಯಕ್ಷ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಪಂಚಾಯತ್ ವ್ಯಾಪ್ತಿಯ ಗಿಳಿಯಾರು ಪ್ರಮುಖ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡಗಳು ಉಂಟಾಗಿ ನೀರು ತುಂಬಿಕೊಂಡಿದ್ದರೂ ಯಾವುದೇ ಕ್ರಮವನ್ನು ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಇಲಾಖೆಗಳು ಗಮನಹರಿಸದಿರುವುದನ್ನು ಖಂಡಿಸಿ ಗಿಳಿಯಾರು ಗ್ರಾಮಸ್ಥರು ರಸ್ತೆ ಮೇಲೆ ಬಾಳೆಗಿಡ ನೆಟ್ಟು ಪ್ರತಿಭಟಿಸಿದರು. ಕೋಟದಿಂದ ಬೇಳೂರಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯ ಅಲ್ಲಲ್ಲಿ ಬೃಹತ್ ಹೊಂಡಗಳು ಸೃಷ್ಟಿಯಾಗಿ ವಾಹನ ಸಂಚಾರ ದುಸ್ತರವೆನಿಸಿದೆ. ಇಲ್ಲಿನ ಸಮಸ್ಯೆ ಕುರಿತು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದ್ದರೂ ಅವರು ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ತ್ರಿಶೂಲ್ ಬಳಗದ ಅಶೋಕ್ ಶೆಟ್ಟಿ ಮಾತನಾಡಿ, ನಾವು ಈ ರಸ್ತೆಯ ಬಗ್ಗೆ ಸಾಕಷ್ಟು ಬಾರಿ ಲಿಖಿತವಾಗಿ ಮತ್ತು ಮೌಖಿಕವಾಗಿ ಮನವಿಯನ್ನು ಮಾಡಿದ್ದೇವೆ. ಆದರೆ ಇಲ್ಲಿಯವರೆಗೂ ಯಾರೂ ಕೂಡ ಈ ಬಗ್ಗೆ ಗಮನಹರಿಸಿಲ್ಲ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ವಕ್ವಾಡಿ ಗುರುಕುಲ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳು ಪುಷ್ಪಗಳ ದಿನವನ್ನು ವಿಶೇಷವಾಗಿ ಆಚರಿಸಿದರು. ಪುಟಾಣಿ ಮಕ್ಕಳು ಬಣ್ಣ-ಬಣ್ಣದ ಉಡುಗೆ ತೊಟ್ಟು ವಿವಿಧ ಬಗೆಯ ಹೂಗಳ ಜೊತೆಗೆ ವಿವಿಧ ಬಗೆಯ ಗಿಡಗಳನ್ನು ಕೂಡ ತಂದಿದ್ದರು. ಪುಟಾಣಿಗಳು ರಂಗೋಲಿಗಳಿಗೆ ಹೂಗಳನ್ನು ಅಲಂಕರಿಸುವ ಮೂಲಕ ಕಾರ‍್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿವಿಧ ಹೂಗಳ ಹೆಸರು ಮತ್ತು ಅವುಗಳ ಉಪಯೋಗಗಳು ಹಾಗೂ ಹೂಗಳು ಹೇಗೆ ಬೆಳೆಯುತ್ತವೆ ಎಂಬುದನ್ನು ಸ್ಮಾರ್ಟ್ ಬೋರ್ಡ್‌ನ ವಿವಿಧ ವೀಡಿಯೋಗಳ ಮೂಲಕ ತೋರಿಸಲಾಯಿತು. ಜೊತೆಗೆ ಪುಟಾಣಿಗಳು ತಾವು ತಂದಿರುವ ಹೂವಿನ ಗಿಡಗಳನ್ನು ತಮ್ಮ ಶಾಲಾ ಕೈ ತೋಟದಲ್ಲಿ ನೆಡುವ ಮೂಲಕ ಪುಷ್ಪ ದಿನಾಚರಣೆಗೆ ಇನ್ನಷ್ಟು ಮೆರುಗು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಜಂಟಿ ಕಾರ‍್ಯನಿರ್ವಾಹಕಿ ಅನುಪಮ.ಎಸ್.ಶೆಟ್ಟಿ ಪ್ರಾಂಶುಪಾರಾದ ಸಾಯಿಜು. ಕೆ. ಆರ್ ನಾಯರ್ ಹಾಗೂ ಎಲ್ಲಾ ಶಿಕ್ಷಕಿಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ವ್ಯಕ್ತಿತ್ವವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವ ಜೊತೆಗೆ ನಾಯಕತ್ವವನ್ನು ಬೆಳಸಿಕೊಳ್ಳುವ ಸದಾವಕಾಶ ಜೇಸಿಯಂತಹ ಸಂಸ್ಥೆಗಳಿಂದ ದೊರೆಯುತ್ತದೆ. ಇಲ್ಲಿನ ತರಬೇತಿಯ ಸಂಪೂರ್ಣ ಪ್ರಯೋಜನವನ್ನು ಪಡೆದು ಯುವ ಪೀಳಿಗೆ ಉತ್ತಮ ನಾಯಕತ್ವ ಗುಣವನ್ನು ಹೊಂದುವಂತಾಗಲಿ ಎಂದು ರೋಟರಿ ಕ್ಲಬ್ ಕುಂದಾಪುರದ ಪೂರ್ವಾಧ್ಯಕ್ಷ ಕೆ. ಆರ್. ನಾಯ್ಕ್ ಹೇಳಿದರು. ಅವರು ಜೇಸಿಐ ಕುಂದಾಪುರ ಸಿಟಿ ಮತ್ತು ಜೇಸಿಐ ಕುಂದಾಪುರ ಚರೀಷ್ಮಾದ ಆಶ್ರಯದಲ್ಲಿ ಕುಂದಾಪುರದ ಸೈಂಟ್ ಮೇರಿಸ್ ಪ. ಪೂ. ಕಾಲೇಜಿನಲ್ಲಿ ನಡೆದ ನಾಯಕತ್ವ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಜೇಸಿ ವಲಯ ತರಬೇತುದಾರರಾದ ಕೆ.ಕೆ. ಶಿವರಾಮ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರವೀಣ್ ಅಮೃತ್ ಮಾರ್ಟಿಸ್, ಜೇಸಿಐ ಕುಂದಾಪುರ ಸಿಟಿ ಕಾರ್ಯದರ್ಶಿ ಪ್ರಶಾಂತ ಹವಾಲ್ದಾರ್, ಸದಸ್ಯ ಸಾಯಿನಾಥ ಶೇಟ್, ಜ್ಯೂ.ಜೇಸಿ ಅಧ್ಯಕ್ಷ ಪ್ರಜ್ವಲ್ ದೇವಾಡಿಗ ಉಪಸ್ಥಿತರಿದ್ದರು. ಜೇಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಶ್ರೀಧರ ಸುವರ್ಣ ಸ್ವಾಗತಿಸಿದರು. ಜೇಸಿಐ ಕುಂದಾಪುರ ಚರೀಷ್ಮಾ ಅಧ್ಯಕ್ಷೆ ಗೀತಾಂಜಲಿ ಆರ್. ನಾಯ್ಕ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯ ಸರ್ಕಾರ ಕೃಷಿಕರ, ಬಡವರ, ಅಲ್ಪಸಂಖ್ಯಾತರ, ಶೋಷಿತರ ಹಾಗೂ ಮಹಿಳೆಯರ ಅಭಿವೃದ್ಧಿಗಾಗಿ ಹತ್ತಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಕ್ಷೇತ್ರದಲ್ಲಿ ರಸ್ತೆ, ಸೇತುವೆ ಮೊದಲಾದ ಅಭಿವೃದ್ಧಿ ಕಾರ್ಯಗಳಿಗಾಗಿ ಸಾವಿರ ಕೋಟಿಗೂ ಮಿಕ್ಕಿ ಅನುದಾನ ಒದಗಿಸಿದೆ ಎಂದು ಕೆಎಸ್‌ಆರ್‌ಟಿಸಿ ಸಂಸ್ಥೆಯ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ನಡೆದ ಕೊಲ್ಲೂರು ಮತ್ತು ಜಡ್ಕಲ್ ಗ್ರಾಮ ಪಂಚಾಯತ್ ಮಟ್ಟದ ’ಜನರ ಮನೆಗೆ ಸರಕಾರ’ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರ್ಕಾರಗಳು ಜನರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತಂದರೂ ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಜನರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ಇದರಲ್ಲಿ ಕೆಲವು ಬಾರಿ ಕಾನೂನು ತೊಡಕಾದರೂ ಅದನ್ನು ಸರ್ಕಾರದ ಗಮನಕ್ಕೆ ತಂದು ಸ್ವಲ್ಪಮಟ್ಟಿನ ಬದಲಾವಣೆ ಮಾಡಿಕೊಳ್ಳುವ ಅವಕಾಶವಿದೆ. ಇದರಿಂದ ಫಲಾನುಭವಿಗಳಿಗೆ ತೊಂದರೆಯಾಗಬಾರದು ಎಂದರು. ಕಂದಾಯ ಮತ್ತು ಅರಣ್ಯ ಇಲಾಖೆಗಳ ಜಂಟಿ ಸರ್ವೆಕಾರ್ಯ ಹಾಗೂ ಬೆಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಗತ್ತಿನ ಉದ್ದಾಗಲಕ್ಕೂ ಹಬ್ಬಿರುವ ರೋಟರಿ ವೈವಿಧ್ಯತೆಯ ಪ್ರತೀಕವಾಗಿದ್ದು, ಸಮಾಜದಲ್ಲಿ ಉತ್ತಮ ಪರಿವರ್ತನೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಾ ಮುನ್ನಡೆಯುತ್ತಿದೆ. ಸಾಮಾಜಿಕ ಸೇವೆಯಲ್ಲಿ ಅನನ್ಯ ಕೊಡುಗೆಗಳನ್ನು ನೀಡುತ್ತಿದೆ ಎಂದು ರೋಟರಿ ಮಾಜಿ ಗವರ್ನರ್ ಕೃಷ್ಣ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಈಸ್ಟ್ ವೆಸ್ಟ್ ಕಂಟ್ರಿ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಕುಂದಾಪುರದ ಪದಪ್ರಧಾನ ಸಮಾರಂಭದಲ್ಲಿ ನೂತನ ಅದ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳಿಗೆ ಪದಪ್ರಧಾನ ನೆರವೇರಿಸಿ ಮಾತನಾಡಿದರು. ನೂತನ ಅಧ್ಯಕ್ಷರಾಗಿ ಗಣೇಶ್ ಐತಾಳ್, ನೂತನ ಕಾರ್ಯದರ್ಶಿಯಾಗಿ ಅಶ್ಪಕ್ ಪ್ರಮಾಣ ವಚನ ಸ್ವೀಕರಿಸಿದರು. ವಲಯ ೧ರ ಅಸಿಸ್ಟೆಂಟ್ ಗವರ್ನರ್ ಕೃಷ್ಣ ಕಾಂಚನ್ ಅವರು ಅಕಾರ್ಡ್ ಕ್ಲಬ್ ಬುಲೆಟಿನ್ ಬಿಡುಗಡೆ ಗೊಳಿಸಿದರು. ಬುಲೆಟಿನ್ ಎಡಿಟರ್ ಪರಮೇಶ್ವರ ಹೆಗಡೆ ಸಹಕರಿಸಿದರು. ನಿಕಟಪೂರ್ವಾಧ್ಯಕ್ಷ ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಕಾರ್ಯದರ್ಶಿ ಸಾಲಗದ್ದೆ ಶಶಿಧರ ಶೆಟ್ಟಿ ಉಪಸ್ಥಿತರಿದ್ದರು. ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ನೂತನ ಕಾರ್ಯದರ್ಶಿ ಅಶ್ಪಕ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಮಂಗಳೂರು: ಇನ್ವೆನ್ಷಿಯೋ ಅಡ್ವಾನ್ಸ್‌ಡ್ ಅಕಾಡೆಮಿ ವತಿಯಿಂದ ಮಂಗಳೂರು ನಗರದಲ್ಲಿ ಪ್ರಥಮ ಬಾರಿಗೆ ಆನಿಮೇಶನ್ ಹಾಗೂ ಅಡ್ವರ್ಟೈಸಿಂಗ್ ವಿಭಾಗಗಳಲ್ಲಿ ಇಂಟೆಗ್ರೇಟೆಡ್ ಡಿಪ್ಲೊಮಾ ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ. ಅಡ್ವರ್ಟೈಸಿಂಗ್, ಆನಿಮೇಶನ್, ಆಪ್ ಡೆವಲಪ್‌ಮೆಂಟ್, 2ಡಿ ಹಾಗೂ 3ಡಿ ವಿಭಾಗಗಳಲ್ಲಿ ವಿಎಫ್‌ಎಕ್ಸ್ ಬಳಕೆ ಸೇರಿದಂತೆ ಹಲವು ವಿಶೇಷತೆಗಳನ್ನು ಹೊಂದಿರುವ ಮಲ್ಟಿಮೀಡಿಯಾ ಕೋರ್ಸ್‌ಗಳನ್ನು ‘ಇನ್ವೆನ್ಷಿಯೋ’ ಆರಂಭಿಸುತ್ತಿದೆ. ಈ ಮೂಲಕ ಮಲ್ಟಿಮೀಡಿಯಾಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣದ ಅವಕಾಶಗಳನ್ನು ಕಲ್ಪಿಸಲು ಮುಂದಾಗಿದೆ. ಎಎಎ ಎಜುಕೇಶನ್ ಫೌಂಡೇಶನ್ ಅಡಿಯಲ್ಲಿ ಇನ್ವೆನ್ಷಿಯೋ ಅಡ್ವಾನ್ಸ್‌ಡ್ ಅಕಾಡೆಮಿ ಕಾರ್ಯನಿರ್ವಹಿಸುತ್ತಿದ್ದು, ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ತರಗತಿಗಳು ಆರಂಭಗೊಳ್ಳಲಿವೆ. ಮಲ್ಟಿಮೀಡಿಯಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವಾರು ಡಿಪ್ಲೊಮಾ ಕೋರ್ಸ್‌ಗಳು ಲಭ್ಯವಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಇಂಜಿನಿಯರಿಂಗ್ ಹಾಗೂ ಇತರೆ ಶೈಕ್ಷಣಿಕ ಹಂತಗಳನ್ನು ಪೂರೈಸಿದ ವಿದ್ಯಾರ್ಥಿಗಳು ಡಿಪ್ಲೊಮಾ ಕೋರ್ಸ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. [quote bgcolor=”#ffffff” arrow=”yes” align=”right”] ಪ್ರವೇಶಾತಿ ಈಗಾಗಲೇ ಆರಂಭವಾಗಿದ್ದು ಆಸಕ್ತ ವಿದ್ಯಾರ್ಥಿಗಳು ಸಂಪರ್ಕಿಸಬಹುದಾಗಿದೆ: ಇನ್ವೆನ್ಷಿಯೋ ಅಡ್ವಾನ್ಸ್‌ಡ್ ಅಕಾಡೆಮಿ ಗೋಲ್ಡನ್‌ಆರ್ಕೆಡ್ – ಎರಡನೇ ಮಹಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಭಾಷೆ ಸಂಸ್ಕೃತಿಯ ಪ್ರತಿಬಿಂಬ. ಭಾಷೆ ಅಂದರೆ ಜೀವನ. ಜೀವನದ ನಿಜವಾದ ಸತ್ವವನ್ನು ಆಸ್ವಾದಿಸಬೇಕಾದರೆ ಭಾಷೆ ಬೇಕು ಎಂದು ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಭಂಡಾರ್ಕಾರ್ಸ ಕಾಲೇಜಿನಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಮತ್ತು ಸಂಸ್ಕೃತಿ ವೇದಿಕೆಯ ಆಶ್ರಯದಲ್ಲಿ ನಡೆದ ನಾಡು ನುಡಿ ಸಂಸ್ಕೃತಿ ಎಂಬ ವಿಷಯದ ಕುರಿತು ಮಾತನಾಡಿ ಭಾಷೆ ಎನ್ನುವುದು ಜೀವನದ ಪ್ರತಿ ಹಂತದ ಅನುಭವಗಳನ್ನು ಕಟ್ಟಿಕೊಡುತ್ತದೆ. ಭಾಷೆ ಮತ್ತು ಸಂಸ್ಕೃತಿಯಿಂದ ಸಾಹಿತ್ಯ ಬೆಳೆಯುತ್ತದೆ. ಇಂತಹ ಸಾಹಿತ್ಯವು ನಮ್ಮ ಜೀವನದ ರಸಾನುಭವಗಳನ್ನು ಒಟ್ಟಿಗೆ ಕೊಡುತ್ತದೆ. ಸಂಕೀರ್ಣ ಸಮಾಜವನ್ನು ಅರಿಯುವಲ್ಲಿ ಭಾಷೆಗೆ ವಿಶೇಷ ಪ್ರಾಮುಖ್ಯತೆ ಇದೆ. ತನ್ಮೂಲಕ ಸಂಸ್ಕೃತಿ ಬೆಳೆಯುತ್ತದೆ ಎಂದು ಹೇಳುತ್ತಾ ಕುಂದಗನ್ನಡ ಮತು ಕನ್ನಡ ಸಾಹಿತ್ಯದ ಕುರಿತು ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ರೇಖಾ ಬನ್ನಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಗಣಪತಿ ಭಟ್ ವಂದಿಸಿದರು. ವಿದ್ಯಾರ್ಥಿನಿ ವಿನಯಾ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಂಡಿತ್ ದೀನದಯಾಳ ಉಪಾಧ್ಯಾಯ ಜನ್ಮ ಶತಮಾನೋತ್ಸವದ ಪ್ರಯುಕ್ತ ವಿಸ್ತಾರಕ ಯೋಜನೆಯನ್ನು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿತು. ವಿಸ್ತಾರಕರಾಗಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಮ್ ಸುಕುಮಾರ ಶೆಟ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಪುರಸಭೆ ವ್ಯಾಪ್ತಿಯ ವಾರ್ಡ್ 21 ಮತ್ತು 22 ರಲ್ಲಿ ವಿಸ್ತಾರಕರಾಗಿ ಪ್ರಧಾನಿ ಹಾಗೂ ಭಾಜಪಾದ ಯೋಜನೆ ತಿಳಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವ್ಯಕ್ತಿಯ ವಿಚಾರಗಳು, ಭಾವನೆ ಮತ್ತು ಜ್ಞಾನವನ್ನು ಹೊರಹಾಕಲು ಪ್ರಮುಖ ಮಾಧ್ಯಮ ಭಾಷೆಯಾಗಿರುತ್ತದೆ. ವ್ಯಕ್ತಿಯ ವ್ಯಕ್ತಿತ್ವದ ಸಂಪೂರ್ಣ ವಿಕಾಸಕ್ಕೆ ಭಾಷೆಯು ವಿಶಿಷ್ಟವಾದ ಪಾತ್ರ ನಿರ್ವಹಿಸುತ್ತದೆ.ವಿದ್ಯಾರ್ಥಿಗಳಲ್ಲಿ ಕಲಿಕೆಯು ಪರಿಣಾಮಕಾರಿಯಾಗಿ ನಿರ್ವಹಿಸಲು ಭಾಷಾ ಕೌಶಲ್ಯ ಅತೀ ಅವಶ್ಯಕವಾಗಿರುತ್ತದೆ. ಕೇಳುವ, ಮಾತನಾಡುವ, ಓದುವ ಮತ್ತು ಬರೆಯುವ ಕೌಶಲ್ಯಗಳು ವಿಶಿಷ್ಟವಾದ ಕಾರ್ಯನಿರ್ವಹಿಸುತ್ತದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಭಾಷೆ ಎಂದು ಮನ್ನಣೆಗೆ ಪಾತ್ರವಾದ ಇಂಗ್ಲೀಷ್‌ನ ಸ್ಪಷ್ಟ ಜ್ಞಾನ ಮತ್ತು ಬಳಕೆ ಎಲ್ಲರನ್ನು ಗುರುತಿಸುವಂತೆ ಮಾಡುತ್ತದೆ. ಇಂಗ್ಲೀಷ್ ಭಾಷೆಯಲ್ಲಿ ಪರಿಣಾಮಕಾರಿಯಾಗಿ ಕೇಳುವ, ಬರೆಯುವ, ಓದುವ ಮತ್ತು ಮಾತನಾಡುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ವಿದ್ಯಾಸಂಸ್ಥೆಗಳ ಕರ್ತವ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಗುರುಕುಲ ಪಬ್ಲಿಕ್ ಶಾಲೆಯು ಪ್ರಮುಖ ಹೆಜ್ಜೆಯನ್ನು ಇಟ್ಟಿದೆಯೆಂದರೆ ತಪ್ಪಾಗಲಾರದು. ಪ್ರತಿಷ್ಠಿತ ವರ್ಡ್ಸ್‌ವರ್ತ್ ಇಂಗ್ಲೀಷ್ ಲ್ಯಾಂಗ್ವೇಜ್ ಲ್ಯಾಬ್ ನ ಸಹಕಾರದೊಂದಿಗೆ ಸಂಸ್ಥೆಯು ಡಿಜಿಟಲ್ ಇಂಗ್ಲೀಷ್ ಲ್ಯಾಬ್‌ನ್ನು ರಂದು ಪ್ರಾರಂಭಿಸಲಾಯಿತು. ಸಂಸ್ಥೆಯ ಇಂಗ್ಲೀಷ್ ಶಿಕ್ಷಕರುಗಳಿಗೆ ನಿರಂತರ ಎರಡು ದಿನಗಳ ಕಾಲ ತರಬೇತಿಯನ್ನು ನೀಡಿದರಲ್ಲದೇ, ವಿದ್ಯಾರ್ಥಿಗಳು ಹೇಗೆ…
