ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಂದಾಪುರ ತಾಲೂಕಿನ ತೆಕ್ಕಟ್ಟೆ ವಲಯದ ಕುಂಭಾಶಿ ಬಿ. ಕಾರ್ಯಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾಲಾ ಕಟ್ಟಡ ನಿರ್ಮಾಣ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂದಾಪುರ ತಾಲೂಕಿನ ಯೋಜನಾಧಿಕಾರಿ ಸುಧೀರ್, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ಯಾಮಲಾ ಟೀಚರ್ ಅವರಿಗೆ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು. ಈ ವೇಳೆ ಜನ ಜಾಗೃತಿ ಸದಸ್ಯರಾದ ಸುಧಾಕರ್ ಶೆಟ್ಟಿ ತೆಕ್ಕಟ್ಟೆ ಹಾಗೂ ತೆಕ್ಕಟ್ಟೆ ವಲಯದ ಮೇಲ್ವಿಚಾರಕರಾದ ಹೇಮಲತಾ ಹಾಗೂ ಊರಿನ ಗಣ್ಯರಾದ ಎಂ ರಾಮ ಕಾಂಚನ್ ಕೊರವಡಿ ಹಾಗೂ ಶಿಕ್ಷಕರಾದ ಶೋಭಾ, ನೇತ್ರ ರಕ್ಷ್ಮಿ , ಸುದೀಪ್, ಎಸ್ .ಡಿ. ಎಂ. ಸಿ ಉಪಾಧ್ಯಕ್ಷರಾದ ಸತ್ಯನಾರಾಯಣ, ಎಸ್ ಡಿ ಎಂ ಸಿ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಕುಂಭಾಶಿ ಬಿ. ಒಕ್ಕೂಟದ ಪದಾಧಿಕಾರಿಗಳು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ನ ‘ಲಿಪಿ’ ಮುದ್ರಣಾಲಯ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಒದಗಿಸುವ ಮಹತ್ವದ ಹೆಜ್ಜೆಯಾಗಿದ್ದು, ಆಧುನಿಕ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಯಂತ್ರೋಪಕರಣಗಳ ಮೂಲಕ ಸ್ಪರ್ಧಾತ್ಮಕ ವೆಚ್ಚದಲ್ಲಿ ಉತ್ಕೃಷ್ಟ ಮುದ್ರಣ ಸೇವೆಗಳನ್ನು ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ನುಡಿದರು. ಅವರು ಬುಧವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ಆಳ್ವಾಸ್ ಪ್ರಿಂಟಿಂಗ್ ಯುನಿಟ್ ‘’ಲಿಪಿ” ಮುದ್ರಣಾಲಯವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಈ ಮುದ್ರಣ ಘಟಕವು ಶಿಕ್ಷಣ, ವಾಣಿಜ್ಯ ಹಾಗೂ ಸಾರ್ವಜನಿಕ ಮುದ್ರಣ ಸೇವೆಗಳ ಅಗತ್ಯಗಳನ್ನು ಪೂರೈಸುವ ಉದ್ದೇಶವನ್ನು ಹೊಂದಿದೆ. ಗ್ರಾಹಕರ ಅಗತ್ಯಕ್ಕೆ ತಕ್ಕ ವಿನ್ಯಾಸ, ಸ್ಪಷ್ಟ ಮುದ್ರಣ ಹಾಗೂ ಸಮಯಕ್ಕೆ ಸರಿಯಾದ ವಿತರಣೆಯ ಮೂಲಕ ವಿಶ್ವಾಸಾರ್ಹ ಸೇವೆಯನ್ನು ನೀಡುವ ಗುರಿಯನ್ನು ಹೊಂದಲಾಗಿದೆ. ಡಿಜಿಟಲ್ ಮತ್ತು ಆಫ್ಸೆಟ್ ಮುದ್ರಣ ವ್ಯವಸ್ಥೆಗಳ ಮೂಲಕ ಕಡಿಮೆ ಪ್ರಮಾಣದಿಂದ ಹಿಡಿದು ಬೃಹತ್ ಪ್ರಮಾಣದ ಮುದ್ರಣ ಕಾರ್ಯಗಳನ್ನೂ ಇಲ್ಲಿ ನಿರ್ವಹಿಸಲಾಗುತ್ತದೆ ಎಂದರು. “ಲಿಪಿ” ಮುದ್ರಣ ಘಟಕದಲ್ಲಿ ಸಿಟಿಪಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉದಯವಾಣಿ ನವ ಮಂಗಳೂರು ಬಂದರು ಪ್ರಾಧಿಕಾರ ಹಾಗೂ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ ಇವರ ಸಹಯೋಗದಲ್ಲಿ ಆಯೋಜಿಸಿದ ’’ಅಕ್ಷರ ಅಂಬಾರ” ಗ್ರಾಮೀಣ ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಹಾಗೂ ರೈತಸಿರಿ-ರೈತ ಸೇವಾ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ನಿವೃತ್ತ ಶಾಖಾ ವ್ಯವಸ್ಥಾಪಕರಾದ ಚಂದ್ರ ಬಿ. ನಾಗೂರು ಅವರ ಬೀಳ್ಕೊಡುಗೆ ಸಮಾರಂಭ ಮತ್ತು ರೈತ ಕೂಟದ ಮಾಸಿಕ ಸಭೆಯು ಸಂಘದ ರೈತಸಿರಿ ಸಭಾಭವನದಲ್ಲಿ ನಡೆಯಿತು. ನಿವೃತ್ತರಾದ ಚಂದ್ರ ಬಿ. ನಾಗೂರು ಅವರಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿ ವತಿಯಿಂದ, ಸಂಘದ ಸಿಬ್ಬಂದಿಗಳಿಂದ ಹಾಗೂ ನಿವೃತ ನೌಕರರಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತಾನಾಡಿ, ಸಹಕಾರಿ ಕ್ಷೇತ್ರದಲ್ಲಿ ಚಂದ್ರ ಬಿ. ಅವರು ಜನಸ್ನೇಹಿಯಾಗಿ ವೃತ್ತಿ ಜೀವನದಲ್ಲಿ ಸದಾ ನಗುಮೊಗದಿಂದ ಕಾರ್ಯನಿರ್ವಹಿಸಿದ್ದಾರೆ. ಅವರ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭಹಾರೈಸಿದರು. ನಿವೃತ್ತ ನೌಕರರಾದ ಕೆ. ಹಾವಳಿ ಬಿಲ್ಲವ ಹಾಗೂ ಸಂಘದ ಕೃಷಿ ಸಹಾಯಕರಾದ ಈಶ್ವರ ನಾಯ್ಕ ಅವರು ನಮ್ಮ ಸಂಘದಿಂದ ನಿವೃತ್ತರಾದ ಶಾಖಾ ವ್ಯವಸ್ಥಾಪಕರಾದ ಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ ಕಾರ್ಯಕ್ರಮವು ಎಂಜಿಎಂ ಕ್ಯಾಂಪಸ್ನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಅಧ್ಯಕ್ಷ ಧೀರಜ್ ಪ್ರವೀಣ್ ಕುಮಾರ್ ಸ್ವಾಗತ ಭಾಷಣ ಮಾಡಿದರು. ಬಳಿಕ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕರೇನ್ ಲಿಸಾ ಅರೋನ್ ಮಂಡಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಡಾ. ಎಂ. ವಿಶ್ವನಾಥ್ ಪೈ ವಿದ್ಯಾರ್ಥಿಗಳ ಚಟುವಟಿಕೆಗಳ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳ ಪರಿಚವನ್ನು ಸೂರಜ್ ತೃತೀಯ ಬಿಸಿಎ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಖ್ಯಾತ ನೃತ್ಯ ನಿರ್ದೇಶಕ, ನಟ ಹಾಗೂ ನಿರ್ದೇಶಕರಾದ ಎಲ್ಟನ್ ಜೆಫ್ ಮತ್ತು ತುಳು-ಕನ್ನಡ ನಟಿ ಅನ್ವಿತಾ ಸಾಗರ್ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಸಾಂಸ್ಕೃತಿಕ ಹಾಗೂ ವಿದ್ಯಾರ್ಥಿ ಕಲ್ಯಾಣ ಮಂಡಳಿ ಕಾರ್ಯಕ್ರಮಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯದರ್ಶಿ ಪ್ರಜ್ಞಾ ಆಚಾರ್ಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಂಜಿಎಂ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದ ಮಹತ್ವದ ಉದ್ದೇಶವನ್ನು ಹೊಂದಿಕೊಂಡು ಕುಂದಾಪುರದ ಎಲ್.ಜಿ. ಫೌಂಡೇಶನ್ ವತಿಯಿಂದ “ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಹಾಗೂ ಸಾಧಕರ ಸನ್ಮಾನ ಸಮಾರಂಭ – 2026” ಕಾರ್ಯಕ್ರಮವು ಹೆಮ್ಮಾಡಿಯ ಹೊಸಕಳಿಯ ಬೊಬ್ಬರ್ಯ ದೈವಸ್ಥಾನದ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶೈಕ್ಷಣಿಕ ಸಾಧನೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಇತರ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ನಾಲ್ವರು ವಿದ್ಯಾರ್ಥಿಗಳಾದ ರಿಷಿಕಾ ದೇವಾಡಿಗ, ಶ್ರಾವ್ಯ ಜಿ. ದೇವಾಡಿಗ, ವರ್ಷಾ ಕೆ. ದೇವಾಡಿಗ, ರಶ್ಮಿತಾ ರವಿ ದೇವಾಡಿಗ ಅವರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಲ್.ಜಿ. ಫೌಂಡೇಶನ್ನ ವ್ಯವಸ್ಥಾಪಕ ಟ್ರಸ್ಟಿಗಳಾದ ನಾಗರಾಜ್ ಪಡುಕೋಣೆ ವಹಿಸಿದ್ದರು. ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಅವರು ಎಲ್.ಜಿ. ಫೌಂಡೇಶನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಗ್ರಾಮೀಣ ಭಾಗದ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವಾಗುವುದು ಸಂಸ್ಥೆಯ ಪ್ರಮುಖ ಧ್ಯೇಯವಾಗಿದ್ದು, ಶಿಕ್ಷಣದ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ತಿಳಿಸಿದರು. ಕಾರ್ಯಕ್ರಮವನ್ನು ಹೆಮ್ಮಾಡಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ನಂದಿ…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಏಳು ಜನರ ತಂಡ ಸೋಡಾ ಬಾಟಲಿ ಹಾಗೂ ಹೆಲ್ಮೆಟ್ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಕುಂಭಾಶಿಯ ಕೊರವಡಿ ಎಂಬಲ್ಲಿ ನಡೆದಿದೆ. ತೆಕ್ಕಟ್ಟೆ ಗ್ರಾಮದ ರಂಜಿತ್ ಹಲ್ಲೆಗೊಳಗಾದವರು. ಸದ್ಯ ಇವರು ಗಂಭೀರ ಸ್ಥಿತಿಯಲ್ಲಿ ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೇ.17ರಂದು ರಾತ್ರಿ 10 ಗಂಟೆಯ ಸುಮಾರಿಗೆ ರಂಜಿತ್ ಅವರು ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಜೋರಾಗಿ ಮಳೆ ಬರುತ್ತಿದ್ದ ವೇಳೆ ಕುಂಭಾಶಿಯ ಕೊರವಡಿ ಬಳಿಯ ಅಂಗಡಿಯೊಂದರ ಎದುರು ತಮ್ಮ ಬೈಕ್ ನಿಲ್ಲಿಸಿ ಆಶ್ರಯ ಪಡೆದಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿಗಳಾದ ವಿಕಾಸ್ ಪೂಜಾರಿ, ಶರತ್ ಪೂಜಾರಿ, ಮಹೇಂದ್ರ ಪೂಜಾರಿ, ಸುಕೇಶ್ ಪೂಜಾರಿ, ಅಭಿಲಾಷ್ ಪೂಜಾರಿ, ಮಂಜುನಾಥ ಮತ್ತು ಸಂದೇಶ್ ಇವರು ಒಟ್ಟು ಸೇರಿ, ರಂಜಿತ್ನನ್ನು ಕೊಲ್ಲುವ ಉದ್ದೇಶದಿಂದ ಸೋಡಾ ಬಾಟಲಿ ಹಾಗೂ ಹೆಲ್ಮೇಟ್ನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದ ಪರಿಣಾಮ ರಂಜಿತ್ ಅವರಿಗೆ ಗಂಭೀರ ಸ್ವರೂಪದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಕೋಟ ಬೊಬ್ಬರ್ಯನಕಟ್ಟೆ ಸಮೀಪ ಸಂಭವಿಸಿದೆ. ಕೋಟಿ ಗಿಳಿಯಾರು ನಿವಾಸಿ, ಲಾರಿ ಲೋಡರ್ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ದೇವಾಡಿಗ (60) ಮೃತಪಟ್ಟ ದುರ್ದೈವಿ. ಉಡುಪಿ ಕಡೆಯಿಂದ ಕುಂದಾಪುರದತ್ತ ಸಂಚರಿಸುತ್ತಿದ್ದ ಕಾರು, ರಸ್ತೆ ದಾಟಲು, ನಿಂತಿದ್ದ ಕೃಷ್ಣ ದೇವಾಡಿಗ ಅವರಿಗೆ ಢಿಕ್ಕಿ ಹೊಡೆಯಿತು. ‘ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಅವರನ್ನು ‘ಜೀವನ್ ಮಿತ್ರ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನೆಯ ಮಾಹಿತಿ ತಿಳಿದು ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನ ಎಂಬುವುದು ಮಹತ್ತರವಾದ ಘಟ್ಟ. ಈ ಆರಂಭಿಕ ಶೈಕ್ಷಣಿಕ ದಿನಗಳನ್ನು ನೈಜವಾಗಿ ಸದ್ಭಳಕೆ ಮಾಡಿಕೊಳ್ಳಿ ಎಂದು ಕೋಟದ ಶೈಕ್ಷಣಿಕ ಪ್ರೋತ್ಸಾಹಕ, ಉದ್ಯಮಿ ಆನಂದ್ ಸಿ. ಕುಂದರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ-ಪಡುಕರೆ ಇದರ 2025-26ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ತಮ್ಮ ಗೀತಾನಂದ ಫೌಂಡೇಶನ್ ವತಿಯಿಂದ ಕೊಡಮಾಡಿದ ವಿದ್ಯಾನಿಧಿಯನ್ನು ಹಸ್ತಾಂತರಿಸಿ ಮಾತನಾಡಿದರು. ಗ್ರಾಮೀಣ ಪರಿಸರದ ಮಕ್ಕಳ ವಿದ್ಯಾರ್ಜನೆಯಿಂದ ವಂಚಿತಗೊಳ್ಳಬಾರದೆಂದು ಈ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ.ಗೀತಾನಂದ ಫೌಂಡೇಶನ್ ನಿರಂತರವಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ ಸರಕಾರಿ ವ್ಯವಸ್ಥೆಯನ್ನು ಪ್ರತಿಯೊರ್ವರು ಸದ್ಭಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಉನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ವತಿಯಿಂದ ವಿಧ್ಯಾನಿಧಿಯನ್ನು ಹಸ್ತಾಂತರಿಸಲಾಯಿತು.ಅಲ್ಲದೆ ಉಪನ್ಯಾಸಕಿ ಡಾ. ಸುನಿತಾ ವಿ.ಸುಬ್ರಹ್ಮಣ್ಯ ಅವರು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವೇದಿಕೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ ಸಂಘಟನೆಗಳಲ್ಲೊಂದಾದ ಕರ್ನಾಟಕ ಸಂಘ ಕತಾರ್ನ 2026–2028ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ಐಸಿಸಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಸರ್ವಸದಸ್ಯರ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭೆಯಲ್ಲಿ ಉಪಸ್ಥಿತರಿದ್ದ ಅಪಾರ ಸಂಖ್ಯೆಯ ಸದಸ್ಯರು ಅವರ ನಾಯಕತ್ವದ ಮೇಲೆ ಅಪಾರ ವಿಶ್ವಾಸ ಮತ್ತು ಬೆಂಬಲ ವ್ಯಕ್ತಪಡಿಸಿದರು. ಕರ್ನಾಟಕ ಮೂಲದ ಕುಂದಾಪುರ ತಾಲ್ಲೂಕಿನ ಬೈಂದೂರಿನವರಾದ ಸುಬ್ರಮಣ್ಯ ಹೆಬ್ಬಾಗಿಲು ಅವರು ಭಾರತೀಯ ಸಮುದಾಯದಲ್ಲಿ ಸಾಮಾಜಿಕ ಮತ್ತು ಸಮುದಾಯ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಅವರು ಹಲವು ವರ್ಷಗಳಿಂದ ಮಾನವೀಯ, ಸಾಂಸ್ಕೃತಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ಸಮುದಾಯದ ಗೌರವಾನ್ವಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಸುಬ್ರಮಣ್ಯ ಹೆಬ್ಬಾಗಿಲು ಅವರು ಈ ಹಿಂದೆ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಉಪಾಧ್ಯಕ್ಷರಾಗಿ, ಭಾರತೀಯ ಕ್ರೀಡಾ ಕೇಂದ್ರದ (ISC) ಸಲಹಾ ಮಂಡಳಿ ಸದಸ್ಯರಾಗಿ ಹಾಗೂ ಭಾರತೀಯ ಸಮುದಾಯ…
