Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಿರಿಯ ಮೀನುಗಾರ ಮುಖಂಡ, ಸಮಾಜ ಸೇವಕ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದ ಮೀನುಗಾರ ಸಮಾಜದ ಮುಖಂಡ ಕೆ. ಮುತ್ತಯ್ಯ ಖಾರ್ವಿ (67) ಉಪ್ಪುಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಸೋಮವಾರ ನಿಧನರಾಗಿದ್ದಾರೆ. ಕರ್ನಾಟಕ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಕಾರ್ಯದರ್ಶಿಯಾಗಿ, ಭಾರತೀಯ ಜನತಾ ಪಾರ್ಟಿ ಮುಖಂಡರಾಗಿ, ಉಪ್ಪುಂದ ಪಂಚಾಯತ್ ಉಪಾಧ್ಯಕ್ಷರಾಗಿ, ನಾಡ ದೋಣಿ ಮೀನುಗಾರರ ಸಂಘ ಬೈಂದೂರು ವಲಯದ ಅಧ್ಯಕ್ಷರಾಗಿ, ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಓಲಗ ಮಂಟಪದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಮಾಜದ ಹಿತವನ್ನೇ ಧೈಯವನ್ನಾಗಿಸಿಕೊಂಡು ನಿಸ್ವಾರ್ಥ ಸಮಾಜಸೇವೆ ಹಾಗೂ ಶುದ್ಧರಾಜಕೀಯದ ಪ್ರತೀಕರಾಗಿದ್ದವರು. ಅದೆಷ್ಟು ಮೀನುಗಾರರು ಅನಾರೋಗ್ಯ ಸಮಯದಲ್ಲಿ ರಾಜ್ಯ ಹಾಗೂ ಹೊರ ರಾಜ್ಯದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆಯನ್ನು ದೊರಕಿಸುವಲ್ಲಿ ಇವರ ಸೇವೆ ಅಮೂಲ್ಯವಾದದ್ದು. ಎಲ್ಲರನ್ನು ಒಗ್ಗೂಡಿ-ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿ “ಅಜಾತ ಶತ್ರು” ಎಂಬ ಬಿರುದಿಗೆ ತಕ್ಕವರು. ಸಮಾಜದ ಎಲ್ಲರ ಜತೆ ಬೆರೆತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ ಕಲೆ ಮುಂದಿನ ತಲೆಮಾರಿಗೆ ಕೊಂಡ್ಯೊಯಲು ಸಂಘ ಸಂಸ್ಥೆಗಳ ಪಾತ್ರ ಗಣನೀಯವಾದದ್ದು ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಡಿ ಕನ್ಯಾಣ‌ ಶ್ರೀರಾಮ ದೇಗುಲದ ವಠಾರದಲಿ ಶ್ರೀ ರಾಮ ಪ್ರಸಾದಿತ ಯಕ್ಷಗಾನ ಕಲಾ ಸಂಘ ಕೋಡಿ ಕನ್ಯಾಣ ಇವರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇಲ್ಲೆ ಇವರ ಸಹಯೋಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಲಿಕಾ ಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀ ಕೃಷ್ಣ ಯಕ್ಷ ವೇದಿಕೆ ಕೋಡಿ ಕನ್ಯಾಣ ಇವರ ಕೂಡುವಿಕೆಯಲ್ಲಿ ಪ್ರತೀಶ್ ಕುಮಾರ್ ಬ್ರಹ್ಮಾವರ ಇವರ ನಿರ್ದೇಶನದಲ್ಲಿ ಯಕ್ಷಗಾನ ಕುಶ-ಲವ ಕುಟುಂಬ, ಜಾನಪದ ನೃತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಕಲೆ ಅತ್ಯಂತ ಶ್ರೀಮಂತ ಕಲೆಯಾಗಿದ್ದು ಕರಾವಳಿ ಈ ಮಣ್ಣಿನ ಸೊಗಡಿಗೆ ಭಾಷಾ ಜ್ಞಾನದ ಜತೆಗೆ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ. ಈ ದಿಸೆಯಲ್ಲಿ ಶ್ರೀರಾಮಪ್ರಸಾದಿತ ಯಕ್ಷಗಾಮ ಕಲಾ ಸಂಘ ಯುವ ಕಲಾವಿದರಿಗೆ ಸ್ಪೂರ್ತಿಯ ನೆಲೆಯಾಗಿ ಕಾರ್ಯನಿರ್ವಹಿಸುತ್ತಿದೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೃಷಿಲೋಕ ಮುನಿಯಾಲಿನ ಗೋಧಾಮದಲ್ಲಿ ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ‌ ಶನಿವಾರ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆದ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲ ಶನಿವಾರ ರಾತ್ರಿ ಸಂಪನ್ನಗೊಂಡಿತು. ಶ್ರೀ ಭವಾನಿ ಭೋಜನಾಲಯದಲ್ಲಿ ನಡೆದ ಮಹಾ ಅನ್ನಸಂತರ್ಪಣೆಯನ್ನು ಸಹಸ್ರಾರು ಮಂದಿ ಸ್ವೀಕರಿಸಿ ಗೋಧಾಮದ ಸುಂದರ ಪ್ರಕೃತಿಯ ಪದತಲದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ವಿದ್ವಾನ್‌ ಕೊರಂಗ್ರಪಾಡಿ ಕೆ.ಪಿ. ಕುಮಾರಗುರು ತಂತ್ರಿಗಳ ನೇತ್ರತ್ವದಲ್ಲಿ ವಾಸುದೇವ ಭಟ್‌ ಅವರ ಸಹಯೋಗದಲ್ಲಿ ಪಾತ್ರಿಗಳಾದ ರಾಮಚಂದ್ರ ಕುಂಜಿತ್ತಾಯ ಹಾಗೂ ಗೋಳಿಯಂಗಡಿ ಸುಬ್ರಹ್ಮಣ್ಯ ವೈದ್ಯ ಅವರ ಮೇಳದೊಂದಿಗೆ ಹಾಲಿಟ್ಟು ಸೇವೆ, ಏಕಪವಿತ್ರ ಶೀಮನ್ನಾಗಮಂಡಲ ಸೇವೆ ನಡೆಯಿತು. ಮುನಿಯಾಲು ಸಂಜೀವಿನಿ ಗೋಧಾಮದ ಸಂಸ್ಥಾಪಕ ಡಾ. ಜಿ. ರಾಮಕೃಷ್ಣ ಆಚಾರ್, ಸವಿತಾ ಆರ್‌. ಆಚಾರ್‌, ಅನುಷಾ ಆಚಾರ್‌, ಪ್ರಜ್ವಲ್‌ ಆಚಾರ್‌, ಪೂಜಾ ಆಚಾರ್‌, ತೇಜಸ್‌ ಆಚಾರ್‌, ರಕ್ಷತ್‌ ಆಚಾರ್‌ ಹಾಗೂ ಕುಟುಂಬಸ್ಥರು, ಶ್ರೀಮನ್ನಾಗಮಂಡಲ ಸೇವಾ ಸಮಿತಿಯ ಅಧ್ಯಕ್ಷ ದೇವಿಪ್ರಸಾದ ಶೆಟ್ಟಿ ಸಾಣೂರುಗುತ್ತು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಾರಾಹಿ ನದಿಗೆ ಈಜಲು ತೆರಳಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ನಡೆದಿದೆ. ಉಳ್ಳೂರು-74 ಗ್ರಾಮದ ನಿಡುಕೋಡು ಸುಧೀರ ಶೆಟ್ಟಿ (26) ಅವರು ಹೊಸಂಗಡಿ ಗ್ರಾಮದ ಭಾಗೀಮನೆ ಎಂಬಲ್ಲಿ ವಾರಾಹಿ ನದಿಗೆ ಫೆ. 15ರಂದು ಈಜಾಡಲು ತೆರಳಿದ್ದರು. ಈಜಲು ಸರಿಯಾಗಿ ಬಾರದ ಇರುವುದರಿಂದ ನೀರಿನಲ್ಲಿ ಮುಳುಗಿದರು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಫೆ.21ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಮೃತ ಸುಧೀರ ಶೆಟ್ಟಿ ಅವರು ಉಳ್ಳೂರು-74 ಗ್ರಾಮದ ಶ್ರೀ ಬನಶಂಕರಿ ಯುವಕ ಮಂಡಲದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸುಧೀರ ಶೆಟ್ಟಿ ಅವರು ಖಾಸಗಿ ಕಂಪನಿಯೊಂದರಲ್ಲಿ ರೈಟರ್ ಆಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2026-27ನೇ ಸಾಲಿನ, 6 ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆಯಲ್ಲಿ 20,146 ವಿದ್ಯಾರ್ಥಿಗಳು ಮೂಡುಬಿದಿರೆಯ ವಿದ್ಯಾಗಿರಿ ಹಾಗೂ ಪುತ್ತಿಗೆ ಆವರಣದಲ್ಲಿ ಭಾನುವಾರ ಹಾಜರಾದರು. ರಾಜ್ಯಾದ್ಯಂತ ಹಾಗೂ ಕರ್ನಾಟಕದ ಗಡಿ ಪ್ರದೇಶ ಕೇರಳದ ಕಾಸರಗೋಡು, ಮಹಾರಾಷ್ಟ್ರದ ಗಡಿ ಪ್ರದೇಶವೂ ಸೇರಿದಂತೆ 32 ಶೈಕ್ಷಣಿಕ ಜಿಲ್ಲೆಗಳ 23,141 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 20,146 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 6ನೇ ತರಗತಿಗೆ 16,014, 7ನೇ ತರಗತಿಗೆ 1,374, 8ನೇ ತರಗತಿಗೆ 1,983 ಹಾಗೂ 9ನೇ ತರಗತಿಗೆ 775 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು. ಬೆಳಗಾವಿ ಜಿಲ್ಲೆಯಿಂದ 7,353 ವಿದ್ಯಾರ್ಥಿಗಳು, ಬಾಗಲಕೋಟೆ ಜಿಲ್ಲೆಯಿಂದ 4,080 ಹಾಗೂ ವಿಜಯಪುರದಿಂದ ಕ್ರಮವಾಗಿ 2,961 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಪರೀಕ್ಷಾ ಅರ್ಜಿ ಸಲ್ಲಿಕಾ ವ್ಯವಸ್ಥೆಯು ಕಳೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಂಗೀತ ಕ್ಷೇತ್ರದಲ್ಲಿ ಗಾನ ನಿನಾದ ಆರ್ಕೇಸ್ಟ್ರಾ ತಂಡ ತನ್ನದೆ ಆದ ವಿಶಿಷ್ಟ ಕಾರ್ಯಕ್ರಮಗಳಿಂದ ಗುರುತಿಸಿಕೊಂಡಿದೆ. ಅಲ್ಲದೆ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಿ ರಾಜ್ಯಕ್ಕೆ ಮಾದರಿ ಕಾರ್ಯಕ್ರಮವನ್ನು ನೀಡಿದೆ ಎಂದು ಉಡುಪಿಯ ಭವಾನಿ ಬಿಲ್ಡರ್ ಮಾಲಿಕ ನಾರಾಯಣ ಆಚಾರ್ ಹೇಳಿದರು. ಅವರು ಪಾಂಡೇಶ್ವರದ ಶಾಲಾ ವಠಾರದಲ್ಲಿ ಗಾನ ನಿನಾದ ಆರ್ಕೇಸ್ಟ್ರಾ  ಪಾಂಡೇಶ್ವರ ಇದರ ದಶಮಾನೋತ್ಸವ ಸಂಭ್ರಮದ ಹಿನ್ನಲ್ಲೆಯಲ್ಲಿ ಸಿರಿ ಸಮೃದ್ಧಿ ಗೋಲ್ಡ್ ಪ್ಯಾಲೇಸ್ ಸಹಯೋಗದೊಂದಿಗೆ ರಾಜ್ಯ ಮಟ್ಟದ ಕರೋಕೆ ಗಾಯನ ಸ್ಪರ್ಧಾ ಕಾರ್ಯಕ್ರಮದಲ್ಲಿ ಟ್ರೋಫಿ ಅನಾವರಣಗೈದು ಮಾತನಾಡಿದರು. ಕಲಾವಿದರಿಗೆ ಅಥವಾ ಕಲಾ ತಂಡಗಳಿಗೆ ಪ್ರೋತ್ಸಾಹ ನೀಡುವ ಹೊಣೆಗಾರಿಕೆ ಪ್ರತಿಯೊರ್ವರಲ್ಲೂ ಇರಬೇಕು. ಈ ದಿಸೆಯಲ್ಲಿ ನಮ್ಮ ಸಂಸ್ಥೆ ಶ್ರೀಶ ಆಚಾರ್ ತಂಡದ ಜತೆ ಸದಾ ಬೆಂಗಾವಲಾಗಿ ಪ್ರೋತ್ಸಾಹ ನೀಡಲಿದೆ. ಇಂಥಹ ಕಾರ್ಯಕ್ರಮಗಳಿಂದ ಒಂದಿಷ್ಟು ಪ್ರತಿಭೆಗಳು ಅನಾವರಣಗೈಯಲು ವೇದಿಕೆ ಕಲ್ಪಿಸಲಿದೆ ಎಂದರು. ಕಾರ್ಯಕ್ರಮವನ್ನು ಉದ್ಯಮಿ ಎಂ.ಸಿ. ಚಂದ್ರಶೇಖರ ಪೂಜಾರಿ ಪಾಂಡೇಶ್ವರ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯನಿರ್ವಹಿಸಿದಗಾಯಕರಿಗೆ ಗೌರವಾರ್ಪಣೆ ಜರಗಿತು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರಕಾರ ಮೀನುಗಾರರ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಹೆಚ್ಚು ಫಲಾನುಭವಿಗಳು ಇರುವ ಹಿನ್ನೆಲೆ, ಹೆಚ್ಚುವರಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆಯು ಸರ್ವಋತು ಬಂದರಾಗಿದ್ದು, ಜಿಲ್ಲೆಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮೀನುಗಾರರು ಮೀನುಗಾರಿಕೆ ಹಾಗೂ ಪೂರಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಅವರುಗಳಿಗೆ ಸರಕಾರದಿಂದ ವಿವಿಧ ಯೋಜನೆಯಡಿ ನೀಡಲಾಗುವ ಆರ್ಥಿಕ ಸೌಲಭ್ಯ, ಸಹಾಯಧನಗಳ ಕುರಿತ ಮಾಹಿತಿಯನ್ನು ತಲುಪಿಸುವುದರೊಂದಿಗೆ ಯೋಜನೆಯ ಫಲಾನುಭವಿಗಳನ್ನಾಗಿ, ಸ್ವಾವಲಂಭಿ ಜೀವನ ನಡೆಸಲು ಅನುವು ಮಾಡಿಕೊಡಬೇಕು. ಪ್ರಸ್ತುತ ನಿಗಧಿಪಡಿಸಿರುವ ಸೌಲಭ್ಯಗಳು ಹೆಚ್ಚಿನ ಜನರಿಗೆ ತಲುಪಿಸಲು ಆಗುತ್ತಿಲ್ಲ. ಈ ಹಿನ್ನೆಲೆ, ಸರಕಾರಕ್ಕೆ ಹೆಚ್ಚುವರಿ ಅನುದಾನ ಹಾಗೂ ಗುರಿ ನೀಡಲು ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಸೂಚನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ ಶಿಕ್ಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಂದಾಪುರ ಪೋಲಿಸ್ ಸಬ್ ಇನ್ಸಪೆಕ್ಟರ್‌ಯಾದ ನಂಜಾ ನಾಯ್ಕ್ ಎನ್., ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, 9ನೇ ತರಗತಿ ಪರೀಕ್ಷಾ ತಯಾರಿಯಲ್ಲಿ ಪೋಷಕರ ಪಾತ್ರ ಹಾಗೂ ಮೊಬೈಲ್ ಫೋನಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರು ತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳ ಬಗ್ಗೆ ಗಮನಹರಿಸಿ, ತಾವೇ ಅವರಿಗೆ ಮಾದರಿಯಾಗಿದ್ದು, ಅವರನ್ನು ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕೆಂದು ತಿಳಿಸಿದರು. ವೇದಿಕೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹಾಗೂ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿ ನೇತ್ರಾವತಿ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಅಭಿವೃದ್ಧಿಯಲ್ಲಿ ಹೊಸಾಡು ಸುಬ್ರಾಯ ಶೇರುಗಾರ್ ಅವರ ಕೊಡುಗೆ ಅಪಾರ ಎಂದು ಮಾಜಿ ಸಚಿವ ಜೆ. ಕೃಷ್ಣ ಪಾಲೇಮರ್ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ಜೈಸಿರಿ-2026ರ ಪ್ರಯುಕ್ತ ಆಯೋಜಿಸಿದ ದಿ. ಹೊಸಾಡು ಸುಬ್ರಾಯ ಶೇರುಗಾರ್ ಸಂಸ್ಕರಣೆಯ ಸಾಂಸ್ಕೃತಿಕೋತ್ಸವದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಲೆ ಮತ್ತು ಸಾಹಿತ್ಯಕ್ಕೆ ಉಡುಪಿ ಜಿಲ್ಲೆ ದೇಶದಲ್ಲಿಯೇ ಖ್ಯಾತಿ ವಡೆದಿದ್ದು, ಈ ಜಿಲ್ಲೆಯು ಅನೇಕ ಪ್ರತಿಭಾವಂತರನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದೆ. ಬೈಂದೂರಿನ ಸುರಭಿ ಕೂಡ ತನ್ನದೇ ಆದ ಸಮಾನ ಲೋಕಕಟ್ಟಿಕೊಂಡು ವಿಶೇಷವಾಗಿ ಈ ಭಾಗದ ಮಕ್ಕಳಿಗೆ ಬಾಲ್ಯದಿಂದಲೇ ಸಾಂಸ್ಕೃತಿಕವಾಗಿ ಬೆಳೆಸುತ್ತಿರುವುದು ಎಂದರು. ಹೃದ್ರೋಗ ತಜ್ಞ ಡಾ. ಎಚ್. ಪ್ರಭಾಕರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ನೃತ್ಯಗುರು ನಟರಾಜ ಗಂಗೊಳ್ಳಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಡಾ. ಶಿವರಾಮ ಕಾರಂತ ಬಾಲ ಪ್ರಶಸ್ತಿ ಪುರಸ್ಕೃತೆ ತ್ರೀಷಾ ಅವರನ್ನು ಗೌರವಿಸಲಾಯಿತು. ಸೇವಾ ಸಂಗಮ ಶಿಶುಮಂದಿರ ಅಧ್ಯಕ್ಷ ಮಂಜುನಾಥ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ದೂರದರ್ಶನ ಚಂದನದ ಉದಯ ಶಂಕರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ರಾಮ ಬಿಜೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಅಧ್ಯಕ್ಷತೆಯಲ್ಲಿ ಶನಿವಾರ ಬೈಂದೂರು ಪ್ರವಾಸಿ ಬಂಗಲೆಯಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿಜಯವಾಣಿಯ ನರಸಿಂಹ ನಾಯಕ್, ಕೋಶಾಧಿಕಾರಿಯಾಗಿ ಉದಯವಾಣಿಯ ಕೃಷ್ಣ ಬಿಜೂರು ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ವಿಫೋರ್ ನ್ಯೂಸ್‌ನ ಜಯಪ್ರಕಾಶ್ ವಿ. ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು. ಈ ಸಂದರ್ಭದಲ್ಲಿ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಉಪಸ್ಥಿತರಿದ್ದರು.

Read More