Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಅತ್ಯುತ್ತಮ ಸಿ.ಇ.ಟಿ ಮತ್ತು ನೀಟ್ ಕೋಚಿಂಗ್ ಪಡೆಯುವಂತಾಗಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪ್ರಯತ್ನದಿಂದ ಅತ್ಯುತ್ತಮ‌ ಫಲಿತಾಂಶ ಪಡೆದು ಒಳ್ಳೆಯ ಹೆಸರು ಮಾಡುವ ಆಶಯ ಹೊಂದಿದ್ದೇವೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಕಾಲೇಜಿನ‌ ಸಂಚಾಲಕರಾದ ಬಿ.ಎಮ್. ಸುಕುಮಾರ್ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಎಸಿಸಿಇ ಅಕಾಡೆಮಿಯ ಸಹಭಾಗಿತ್ವದಲ್ಲಿ ಆರಂಭವಾದ ಸಿಇಟಿ, ಎನ್‌ಇಇಟಿ, ಜೆಇಇ ಪರೀಕ್ಷಾ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಸೀತಾರಾಮ್ ನಕ್ಕತ್ತಾಯರವರು ತರಬೇತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸಿಸಿಇ ಅಕಾಡೆಮಿಯ ನಿರ್ದೇಶಕರಾದ ಲಾತವ್ಯ ಆಚಾರ್ಯ ಅವರು ವಿದ್ಯಾರ್ಥಿಗಳು‌ ಉಪನ್ಯಾಸಕರೊಂದಿಗೋ, ತಂದೆತಾಯಿಯವರೊಂದಿಗೆ ಆತ್ಮೀಯತೆಯಲ್ಲಿ ಮಾತಾಡಿ ತಮ್ಮ‌ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬಹುದು ಎನ್ನುತ್ತಾ, ತರಬೇತಿಯ ರೂಪುರೇಷೆ ಮತ್ತು ಯೋಜನೆಗಳನ್ನು ವಿವರಿಸಿದರು. ಕಾಲೇಜಿನ‌ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ‌ ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ, ಎಸಿಸಿಇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಜುಲೈ 24ರ ಸಂಜೆ 06-00ಕ್ಕೆ ಆನ್‌ಲೈನ್ ಮೂಲಕ ನಡೆಯಲಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪ್ರ ಕನ್ನಡ ಅಧ್ಯಯನ ಕ್ಷೇತ್ರ ಪೀಠದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬೈಂದೂರು ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮಂಗಳಳುರು ವಿಶ್ವವಿದ್ಯಾಲಯ ಕುಲಸಚಿವರಾದ ಕೆಎ ಎಸ್ ರಾಜು ಮೊಗವೀರ, ವಿಜ್ಞಾನಿ ಮತ್ತು ಉದ್ಯಮಿಗಳಾದ ಡಾ. ಎ.ಎ ಶೆಟ್ಟಿ , ಬೆಂಗಳೂರು ಕುಂದಾಪ್ರ ಕನ್ನಡ ಪ್ರತಿಷ್ಠಾನ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾದ ರಾಘವೇಂದ್ರ ಕಾಂಚನ್ ಕೋಟ, ಕನ್ನಡ ಚಲನಚಿತ್ರ ಬರಹಗಾರರಾದ ಪ್ರಮೋದ್ ಮರವಂತೆ, ಮಂಗಳೂರು ಭಾರತೀಯ ವೈದ್ಯಕೀಯ ಸಂಘ ಮತ್ತು ವಿಶ್ವಾಸಸ್ಥರು ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ ಮಾಜಿ ಅಧ್ಯಕ್ಷರಾದ ಎಂ. ಅಣ್ಣಯ್ಯ ಕುಲಾಲ್ ಉಳ್ತೂರು, ಬಂಟ್ವಾಳ ಸರಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳ ಎಂ.ಟಿ.ಎಸ್ ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://ssc.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅನ್‌ಲೈನ್ ನೋಂದಣಿಗೆ ಜುಲೈ 24 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎಸ್. ಪ್ರಕಾಶ್ಚಂದ್ರ ಶೆಟ್ಟಿ ಒಬ್ಬ ಕಾಯಕ ಯೋಗಿ. ಅಪ್ಪಟ ಕೃಷಿಕ, ಹೈನುಗಾರ. ಅರ್ಹ ವಾಗಿ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಸಂದಿದೆ. ತಾಲೂಕಿನ 23 ಕೃಷಿ ಪತ್ತಿನ ಸಹಕಾರ ಸಂಸ್ಥೆಗಳು ಅವರನ್ನು ಸನ್ಮಾನಿಸಿದ್ದರಿಂದ ಸನ್ಮಾನದ ಗೌರವ ಹೆಚ್ಚಿದೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಹೇಳಿದರು. ಅವರು ಇಲ್ಲಿನ ಆರ್.ಎನ್.ಶೆಟ್ಟಿ ಕಲ್ಯಾಣ ಭವನದ ಸಭಾಂಗಣದಲ್ಲಿ ಅವಿಭಜಿತ ಕುಂದಾಪುರ ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಸ್ಥೆಗಳು ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರಕಾರದ 2024-25ನೇ ಸಾಲಿನ ʼಸಹಕಾರ ರತ್ನ ಪ್ರಶಸ್ತಿʼ ಪುರಸ್ಕೃತ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರ ಅಭಿನಂದನೆ ಸಮಾರಂಭದಲ್ಲಿ ಭಾನುವಾರ ಅಭಿನಂದನಾ ಭಾಷಣ ಮಾಡಿದರು. ಸಂಕಷ್ಟದಲ್ಲಿದ್ದ ಖಂಬದಕೋಣೆ ರೈತರ ಸೇವಾ ಸಂಘವನ್ನು ರಾಜ್ಯದಲ್ಲೇ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿ ಕಟ್ಟಿ ಬೆಳೆಸಿದ ಪರಿ, ಹೈನುಗಾರಿಕೆಯಲ್ಲಿ ರಾಜ್ಯದಲ್ಲಿ ಮಾಡಿರುವ ಅಪರಿಮಿತ ಸಾಧನೆ, ಒಬ್ಬ ಕೃಷಿಕನಾಗಿ ಕೃಷಿ ತಾಕು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸಹಜೀವನದ ಸಂವೇಧನೆಯನ್ನು ಕಲಿಯುವುದರ ಜೊತೆಗೆ ನಿರ್ಧರಿತ ವ್ಯಕ್ತಿತ್ವ ರೂಪಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯು ಸಹಕಾರಿ ಎಂದು ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ಶೇಷಪ್ಪ ಕೆ. ನುಡಿದರು. ಅವರು ಆಳ್ವಾಸ್ ಪದವಿ (ಸ್ವಾಯತ್ತ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2025-26ರ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆ ಯುವಶಕ್ತಿಯನ್ನು ಸಕಾರಾತ್ಮಕ ದಿಕ್ಕಿನಲ್ಲಿ ಸಾಗಲು ಮಾರ್ಗದರ್ಶನ ನೀಡುವ ಶ್ರೇಷ್ಠ ವೇದಿಕೆ. ಇದು ವಿದ್ಯಾರ್ಥಿಗಳಲ್ಲಿ ಸಾಂಘಿಕ, ಮಾನವೀಯ ಮತ್ತು ರಾಷ್ಟ್ರೀಯ ಬದ್ಧತೆಯನ್ನು ಬೆಳೆಸಲು ಪೂರಕ ವಾತವರಣ ಕಲ್ಪಿಸುತ್ತದೆ. ಗಾಂಧೀಜಿಯ ಜನ್ಮ ಶತಮಾನೋತ್ಸವವನ್ನು ಸ್ಮರಿಸುವ ನೆಲೆಯಲ್ಲಿ 1969ರಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಪ್ರಾರಂಭವಾಯಿತು. ಇಂದು ಭಾರತದಲ್ಲಿ 50,000 ಅಧಿಕ ಘಟಕಗಳೊಂದಿಗೆ 40 ಲಕ್ಷಕ್ಕೂ ಅಧಿಕ ಸ್ವಯಂಸೇವಕರು ಇದರ ಭಾಗವಾಗಿದ್ದಾರೆ. ಎನ್‌ಎಸ್‌ಎಸ್‌ನ ಲಾಂಛನ ಹೃದಯ ವೈಶಾಲ್ಯತೆಯನ್ನು ಪ್ರತಿನಿಧಿಸುತ್ತದೆ. ಯಾವುದೇ ಭಾಷೆ, ಜಾತಿ, ಧರ್ಮ ಅಥವಾ ವಯಸ್ಸಿನ ಭೇದವಿಲ್ಲದೆ ಎಲ್ಲರಿಗೂ ಸಹಾಯ ಮಾಡುವ ಮನಸ್ಸನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೊಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಡಿ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ಅರ್ಹ ಅಭ್ಯರ್ಥಿಗಳು ಅಗಸ್ಟ್ 7 ರ ವರೆಗೆ ನಡೆಯಲಿರುವ ಯುವನಿಧಿ ವಿಶೇಷ ನೋಂದಣಿ ಅಭಿಯಾನದಲ್ಲಿ ಕರ್ನಾಟಕ ಒನ್, ಗ್ರಾಮ ಒನ್, ಸೇವಾ ಸಿಂಧೂ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಹಾಗೂ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಬಿ. ಬ್ಲಾಕ್ ರೂ. ನಂಬರ್ 201 ಮೊದಲನೆ ಮಹಡಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 2024-25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರಿಗೆ ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು 3,000 ರೂ. (ಪದವೀಧರ ನಿರುದ್ಯೋಗಿಗಳಿಗೆ) ಹಾಗೂ 1,500 ರೂ. (ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ:ಯುವನಿಧಿ ಯೋಜನೆಯ ಫಲಾನುಭವಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮನುಕುಲಕ್ಕೆ ಹಸಿರೇ ಯೋಗ್ಯವಾದ ವಾತಾವರ ಕಲ್ಪಿಸಿತ್ತಿದೆ ಆದರೆ ಇತ್ತೀಚಿಗಿನ ದಿನಗಳಲ್ಲಿ ಅದರ ಅವನತಿಗೆ ಮನುಷ್ಯ ಮುಂದಾಗುತ್ತಿರುವುದು ಶೋಚನೀಯ ಈ ದಿಸೆಯಲ್ಲಿ ಮನುಕುಲಕ್ಕೆ ಸಂಕಷ್ಟ ತಪ್ಪಿದಲ್ಲ ಎಂದು ಕೋಟ  ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ಅಜಿತ್ ದೇವಾಡಿಗ ಹೇಳಿದರು. ಅವರು ಭಾನುವಾರ ಕೋಟದ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಇವರ ಸಂಯೋಜನೆಯೊಂದಿಗೆ ಕೋಟದ ರಾಷ್ಟ್ರೀಯ ಹೆದ್ದಾರಿ ಹಾಗೂ ದೇಗುಲದ ವಠಾರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ ಇವರ ಸಹಭಾಗಿತ್ವದಡಿ 264ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮಸುತ್ತಮುತ್ತಲಿನ ವನಗಳಿಲ್ಲದೆ ಕಾಂಕ್ರೀಟ್ ಕಾಡಿನಲ್ಲಿ ವಾಸ್ತವ್ಯ ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಗಿಡನೆಟ್ಟು ಮುಂದಿನ ಪೀಳಿಗೆಗೆ ಯೋಗ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆನಗಳ್ಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ  ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಗಳ ಕುರಿತು ಪ್ರಾಯೋಗಿಕ ಜ್ಞಾನವನ್ನು  ನೀಡಲು ಕೆಸರಲ್ಲೊಂದಿನ  ನೆಟ್ಟಿ ಎನ್ನುವ ವಿಶೇಷ ಕಾರ್ಯಕ್ರಮ ಆಯೋಜಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಅವರು ಚಾಲನೆ ನೀಡಿದರು. ಉಪ ಪ್ರಾಂಶುಪಾಲರಾದ ಸುಜಯ್ ಕೊಟೆಗಾರ್, ವಾಣಿಜ್ಯ ಶಾಸ್ತ್ರ ವಿಭಾಗದ ಇನ್ ಚಾರ್ಜ್ ಲತಾ ಪೈ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ಅನೇಕ ಮನೋರಂಜನಾ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಯಿತು. ತದನಂತರ ವಿದ್ಯಾರ್ಥಿಗಳಿಂದ ಗದ್ದೆ ನಾಟಿಯನ್ನು ಮಾಡಿಸುವುದರ ಮೂಲಕ ನೆಟ್ಟಿಯ ಬಗ್ಗೆ ಪ್ರಾಯೋಗಿಕ ಮಾಹಿತಿಯನ್ನು ನೀಡಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಾಜಿ ಸೈನಿಕರ ಸಂಘ ಉಡುಪಿ ಜಿಲ್ಲೆ ಇವರ ವತಿಯಿಂದ  ಉಡುಪಿ ಹಾಗೂ ಚಿಕ್ಕಮಂಗಳೂರು ಕ್ಷೇತ್ರದ ಸಂಸದ ಕೋಟ  ಶ್ರೀನಿವಾಸ ಪೂಜಾರಿ ಅವರನ್ನು ಭಾನುವಾರ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಇಸಿಎಚೆಸ್ ಮಾಜಿ ಸೈನಿಕರು ಹಾಗೂ ವೀರನಾರಿಯರ ಚಿಕಿತ್ಸಾ ಸೌಲಭ್ಯಕ್ಕಾಗಿ ಉಡುಪಿಯಲ್ಲಿ ಯಾವುದೇ ಆಸ್ಪತ್ರೆಗಳಿಲ್ಲದಿರುವುದನ್ನು ಸಂಸದರ ಗಮನಕ್ಕೆ ತರಲಾಯಿತು. ಆದಷ್ಟು ಬೇಗ ಎಂಪನಾಲ್ಡ್ ಹಾಸ್ಪಿಟಲ್‌ಗಳು ಉಡುಪಿಯಲ್ಲಿ ಲಭ್ಯ ಮಾಡಿಕೊಡಬೇಕಾಗಿ ಅವರಲ್ಲಿ ಬೇಡಿಕೆ ಸಲ್ಲಿಸಿ, ಉಡುಪಿಯಲ್ಲಿ ಮಾಜಿ ಸೈನಿಕರ ಪುನರ್ವಸತಿ ಇಲಾಖೆಯನ್ನು ಸ್ಥಾಪಿಸುವುದು ಸೇರಿದಂತೆ ಮಾಜಿ ಸೈನಿಕರಿಗೆ ಜಮೀನು ನೀಡುವುದರ ಬಗ್ಗೆ ಕೂಡ ಮನವಿಯನ್ನು ಕೊಡಲಾಯಿತು. ಇದೇ ವೇಳೆ ಸಂಸದರು ಮಾಜಿ ಸೈನಿಕರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಿ ಕೊಡುವುದಾಗಿ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೇಶವ ಮಲ್ಪೆ, ಉಪಾಧ್ಯಕ್ಷರಾದ ಚಂದ್ರ ಅಮೀನ್, ಖಜಾಂಚಿ ಸುರೇಶ್ ಸಿ. ರಾವ್, ಕಾರ್ಯದರ್ಶಿ ಅಶೋಕ, ಸಂಘಟನೆಯ ಅಡ್ವೈಸರ್ ಶಿವಕುಮಾರ್ ನಾಯಿರಿ ಹಾಗೂ ಸಂಘಟನೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೂರದ ಕರಾವಳಿಯ ಕುಂದಾಪುರದಿಂದ ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದ್ರೂ ತಾಯಿ ನೆಲದ ಸಂಸ್ಕ್ರತಿ ಒಂದನ್ನು ಬೀಡದೇ ಕುಂದಾಪುರ ಕನ್ನಡದ ಕಂಪನ್ನು ಟೀಮ್ ಕುಂದಾಪುರಿಯನ್ಸ್ ‌ಪಸರಿಸುತ್ತಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದರು. ಅವರು ಟೀಮ್ ಕುಂದಾಪುರಿಯನ್ಸ್ ಆಯೋಜಿಸಿರೋ ಕುಂದಾಪ್ರ ಕನ್ನಡ ಉತ್ಸವದಲ್ಲಿ ಆಶೀರ್ವದಿಸಿ ಮಾತನಾಡಿದರು. ಭಾಷೆ, ಸಂಸ್ಕ್ರತಿ, ಆಚಾರ ವಿಚಾರವನ್ನು ಯಾವತ್ತೂ ಮರೆಯಬಾರದು. ಕುಂದಾಪುರ ಪುಟ್ಟ ಪ್ರದೇಶ ಆದ್ರೂ ಕುಂದಾಪುರಿಗರು ಸಾಧನೆ ದೊಡ್ಡದು ಎಂದರು. ಬೆಂಗಳೂರಿನ ಬಸವೇಶ್ವರ ನಗರದ ನೇತಾಜಿ ಮೈದಾನದಲ್ಲಿ ಕುಂದಾಪುರ ಉತ್ಸವವು ಅದ್ದೂರಿಯಾಗಿ ನಡೆದಿದೆ. ಬೆಳಿಗ್ಗೆ ರಾಜಾಜಿನಗರ ಮೆಟ್ರೋ ನಿಲ್ದಾಣದಿಂದ ಕೊಲ್ಲೂರು ಮೂಕಾಂಬಿಕೆಯ ಟ್ಯಾಬ್ಲೋ ಮೆರವಣಿಗೆ ಹಾಗೂ ಸಂಕಲ್ಪಯಾತ್ರೆ ‌ನಡೆಸಲಾಗಿದೆ. ನಾಗಸಾಧುಗಳಾದ ಧನಂಜಯ ಗಿರಿ ಮಹರಾಜ್, ಬೈಂದೂರು ‌ಶಾಸಕ ಗುರುರಾಜ್ ಗಂಟಿಹೊಳೆ, ಬೇಳೂರು ರಾಘವೇಂದ್ರ ಶೆಟ್ಟಿ, ಕುಂದಾಪುರ ಪ್ರತಿಷ್ಠಾನ ಅಧ್ಯಕ್ಷರಾದ ದೀಪಕ್ ಶೆಟ್ಟಿ ಬಾರ್ಕೂರು ಭಾಗಿಯಾಗಿದ್ದರು. ಕುಂದಾಪುರ ಕನ್ನಡ ‌ಉತ್ಸವದಲ್ಲಿ ಕುಂದಾಪುರ ಪರಿಸರ ಹಳೆ ಕಾಲದ ವಸ್ತುಗಳ ಪ್ರದರ್ಶನ, ಸಂಸ್ಕ್ರತಿ…

Read More