Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾವುದೇ ರೀತಿಯ ಒತ್ತಡ ವಿದ್ಯಾರ್ಥಿಗಳ ಮೇಲೆ ತರದೇ ಅವರು ಸ್ವಯಂಸ್ಪೂರ್ತಿಯಿಂದ ಕಲಿಯುವಂಥ ವಾತಾವರಣ ಆರ್.ಎನ್. ಎಸ್. ಕಾಲೇಜಿನಲ್ಲಿದ್ದಿದ್ದರಿಂದ ನನ್ನಂಥ ಹಲವು ವಿದ್ಯಾರ್ಥಿಗಳಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಪ್ರವೇಶಿಸಿ ಯಶಸ್ಸು ಪಡೆಯಲು ಸಾಧ್ಯವಾಯಿತು ಎಂದು ಕಾಲೇಜಿನ ಹಳೆ ವಿದ್ಯಾರ್ಥಿ, ಉಡುಪಿಯ ಟಿ.ಎಮ್.ಎ. ಪೈ ಆಸ್ಪತ್ರೆಯ ವೈದ್ಯೆ ಡಾ. ಶ್ರೀಪ್ರದಾ ಹೆಗ್ಡೆ ತಿಳಿಸಿದರು. ಅವರು ಕುಂದಾಪುರ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವದ ವೇದಿಕೆಯಲ್ಲಿ ನಡೆದ ಕುಂದಾಪುರದ ಆರ್. ಎನ್ .ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿಆಗಮಿಸಿದ ಇನ್ನೋರ್ವ ಹಳೆ ವಿದ್ಯಾರ್ಥಿ CA ಸಂಕೇತ್ ಹೆಗ್ಡೆ ಕಾಲೇಜಿನಲ್ಲಿ ಕಲಿಯುವಾಗ ಉಪನ್ಯಾಸಕರ ಸ್ಪೂರ್ತಿದಾಯಕ ನುಡಿಗಳು ತನ್ನಲ್ಲಿ ಸಿ.ಎಯಂಥ ಕಠಿಣ ವ್ಯಾಸಂಗ ಮಾಡಲು ಸಹಕಾರಿಯಾಯಿತು ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಸಿ.ಇ.ಎಸ್ ನ ಅಧ್ಯಕ್ಷರೂ, ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಅವರು ಸಂಸ್ಥೆಯನ್ನು ಊರ್ಜಿತಗೊಳಿಸುವಲ್ಲಿ ಎದುರಾದ ಭಾವುಕಕ್ಷಣಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಉಪ್ಪುಂದ ಗ್ರಾಮದಲ್ಲಿ ಸಂಭವಿಸಿದೆ. ಉಪ್ಪುಂದ ಜನತಾ ಕಾಲನಿ ಹರಿಶ್ಚಂದ್ರ ಖಾರ್ವಿ(48) ಮೃತಪಟ್ಟ ವ್ಯಕ್ತಿ. ಉಪ್ಪುಂದ ಗ್ರಾಮದ ಮಡಿಕಲ್ ಬಳಿ ಅರಬಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ನಿರತರಾಗಿದ್ದಾಗ ಹರಿಶ್ಚಂದ್ರ ಖಾರ್ವಿ ದೋಣಿಯಿಂದ ಆಯತಪ್ಪಿ ಸಮುದ್ರಕ್ಕೆ ನೀರಿಗೆ ಬಿದ್ದಿದ್ದು ಕೂಡಲೇ ಅವರನ್ನು ನೀರಿನಿಂದ ಮೇಲೆ ಎತ್ತಿ ಉಪಚರಿಸಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನುಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿ ಪೋಷಕರ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು. ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟದ ಜೊತೆಯಲ್ಲಿ 2023ರಲ್ಲಿ ಶಾಲೆಯ ವಿದ್ಯಾರ್ಥಿ ಪೋಷಕರಿಗೂ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕಂಡು ಬಂತು. ಹೊಸ ಬದಲಾವಣೆಗೂ ಕಾರಣವಾಯಿತು. ತಮ್ಮ ಮಕ್ಕಳ ಎದುರು ಪೋಷಕರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಮಕ್ಕಳಿಗೆ ಖುಷಿ ಪಡಿಸುವ ಅಪರೂಪದ ಸನ್ನಿವೇಶ ಸೃಷ್ಟಿಯಾಯಿತು. ಸೋಮವಾರ ನಡೆದ ಪೋಷಕರ ಕ್ರೀಡಾಕೂಟಕ್ಕೆ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಡಾ. ಪೂರ್ಣಿಮಾ ಅವರು ಚಾಲನೆ ನೀಡಿದರು. ಶಾಲಾ ಹಿರಿಯ ಮುಖ್ಯೋಪಾಧ್ಯಾಯರಾದ ಶಂಕರ ಅವರು ಶುಭ ಹಾರೈಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ನಾಗೇಂದ್ರ ಉಡುಪ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್. ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನೋವಿಗೆ ಸ್ಪಂದಿಸುವುದೇ ನಿಜವಾದ ಧರ್ಮ. ಅಂಧಕಾರ, ಅಸ್ಪೃಶ್ಯತೆ, ಮಾನವ ಬಲಿ, ವರದಕ್ಷಿಣೆ ಮೊದಲಾದ ಅಮಾನವೀಯ ಆಚರಣೆಗಳಿಂದ ಜನರನ್ನು ರಕ್ಷಿಸಿದ ಯೇಸು ನಡೆದ ದಾರಿಯೇ ಮಾನವ ಧರ್ಮ ಎಂದು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಬಿಷಪ್ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನಾ ನುಡಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕೃಷಿಸಿರಿಯ ಮುಂಡ್ರೆದೆಗುತ್ತು ಕೆ. ಅಮರನಾಥ್ ಶೆಟ್ಟಿ ಸಭಾಂಗಣದಲ್ಲಿ ನಡೆದ ಆಳ್ವಾಸ್ ಕ್ರಿಸ್ಮಸ್-2025 ಸಂಭ್ರಮಾಚರಣೆಯಲ್ಲಿ ಮಾತನಾಡಿದರು. ಹಸಿದವರಿಗೆ ಆಹಾರ, ದಣಿದವರಿಗೆ ನೀರು, ತೊಡಲು ವಸ್ತ್ರ ಒದಗಿಸುವುದೇ ಮಾನವ ಧರ್ಮ. ಪ್ರೀತಿ, ಸೇವೆ ಮತ್ತು ಕರುಣೆಯಿಂದ ಜಗತ್ತಿಗೆ ಬೆಳಕು ತೋರಿದವರು ಯೇಸು. ಎಲ್ಲಾ ಧರ್ಮಗಳಲ್ಲೂ ಪ್ರೀತಿ ಮತ್ತು ನೀತಿ ಅಡಗಿದ್ದು, ಯಾವ ಧರ್ಮವೂ ಇದಕ್ಕೆ ಹೊರತಲ್ಲ ಎಂಬ ಸತ್ಯವ ಜಗತ್ತಿಗೆ ಸಾರಿದವರು, ಅಹಂಕಾರ ಮತ್ತು ದ್ವೇಷವನ್ನು ತೊರೆದು ಒಳ್ಳೆಯದನ್ನೇ ಬಯಸುವ ಬದುಕು ಮಾನವೀಯತೆಗೆ ದಾರಿ ಎಂದು ತಿಳಿಸಿದ ದೇವಮಾನವರವರು ಎಂದರು. ಅಟಲ್ ಬಿಹಾರಿ ವಾಜಪೇಯಿ ಅವರು ಕ್ರೈಸ್ತ ಧರ್ಮದ ಸೇವೆ, ತ್ಯಾಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಾಡ-ನುಡಿಯಾದ ಕನ್ನಡ ಭಾಷೆಯನ್ನು ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಖಾಸಗಿ, ವಾಣಿಜ್ಯ ಹಾಗೂ ಇತರೆ ಸಂಸ್ಥೆಗಳು ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿಯೊಬ್ಬರೂ ಮಾತೃಭಾಷೆಯಾದ ಕನ್ನಡದ ಬಗ್ಗೆ ಅಭಿಮಾನ ಹೊಂದಿ, ದೈನಂದಿನ ಕಾರ್ಯಗಳಲ್ಲಿ ಹೆಚ್ಚಾಗಿ ಬಳಸಬೇಕು. ಜಿಲ್ಲೆಯಲ್ಲಿ ಉದ್ಯೋಗ ಅರಸಿ ಬಂದಿರುವ ಹೊರ ರಾಜ್ಯದ ಅನ್ಯ ಭಾಷಿಕರಿಗೂ ಸಹ ನಮ್ಮ ಭಾಷೆಯನ್ನು ಕಲಿಯಲು ಉತ್ತೇಜಿಸಬೇಕು ಎಂದ ಅವರು, ಎಲ್ಲಾ ಸರ್ಕಾರಿ ಕಚೇರಿಯ ಆಡಳಿತದಲ್ಲಿ ಕನ್ನಡ ಬಳಸಬೇಕು. ಆಡಳಿತದಲ್ಲಿ ಕನ್ನಡ ತಂತ್ರಾಶದ ಬಳಕೆಯನ್ನು ಅಳವಡಿಸಿಕೊಳ್ಳಬೇಕು ಎಂದರು. ರಾಜ್ಯದ ಸರ್ಕಾರಿ ಕಚೇರಿಗಳು, ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಅಂಗಡಿ, ಹೋಟೆಲ್, ಶಾಲಾ-ಕಾಲೇಜು, ಪ್ರವಾಸೋದ್ಯಮ ಸೇರಿದಂತೆ ಮತ್ತಿತರ ಕಡೆಗಳಲ್ಲಿ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿ ಕನ್ಯಾಣ ಶನೀಶ್ವರ ದೇಗುಲದ ಸನಿಹದಲ್ಲಿ ಇದೇ ಡಿ.21ರ ಭಾನುವಾರ ತಿರುಪತಿಯ ಶ್ರೀ ದೇವಿ ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ಉಂಜಾಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಅಂಗವಾಗಿ ಸ್ಥಳೀಯ ಗ್ರಾಮಸ್ಥರ ಹೊರೆಕಾಣಿಕೆ ಸಮರ್ಪಣೆ ಗುರುವಾರ ನಡೆಯಿತು. ಕೋಡಿ ಶ್ರೀ ರಾಮದೇಗುಲದಲ್ಲಿ ಚಾಲನೆಗೊಂಡ ಹೊರೆಕಾಣಿಕೆಗೆ ಉದ್ಯಮಿ ಧನಂಜಯ ಅಮೀನ್ ಪೇತ್ರಿ ಅವರು ಚಾಲನೆ ನೀಡಿದರು. ಅಲ್ಲದೆ ಕೋಡಿ ಮಹಾಸತೀಶ್ವರಿ ದೇಗುಲದಿಂದ ಸುತ್ತಮುತ್ತಲಿನ ಪರಿಸರದ ಭಕ್ತಾಧಿಗಳು ಹೊರೆಕಾಣಿಕೆಯನ್ನು ಸಮರ್ಪಸಿದರು. ಈ ಸಂದರ್ಭದಲ್ಲಿ ಉಂಜಲೋತ್ಸವ ಸಮಿತಿಯ ಪದಾಧಿಕಾರಿಗಳು ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಹಾಗೂ ರೈತ ಸಿರಿ, ರೈತ ಸೇವಾ ಒಕ್ಕೂಟ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ, ಹಿರಿಯ ರೈತರ ಸನ್ಮಾನ, ಸಾಧಕರಿಗೆ ರೈತಸಿರಿ ಗೌರವಾರ್ಪಣೆ ಹಾಗೂ ಹಾಲು ಉತ್ಪಾದಕರಿಗೆ ಪುರಸ್ಕಾರವು ಡಿ.23ರ ಮಂಗಳವಾರ ಅಪರಾಹ್ನ 3.00ಕ್ಕೆ ಉಪ್ಪುಂದದ ಸಂಘದ ರೈತಸಿರಿ ಸಭಾಭವನದಲ್ಲಿ ನಡೆಯಲಿದೆ.   ರೈತರ ದಿನಾಚರಣೆಯ ಉದ್ಘಾಟನೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಅವರು ನೆರವೇರಿಸಲಿದ್ದಾರೆ. ಖಂಬದಕೋಣೆ ರೈ.ಸೇ.ಸ.ಸಂಘದ ಅಧ್ಯಕ್ಷರಾದ ಎಸ್‌. ಪ್ರಕಾಶ್ವಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಮಾಜಿ ನಿರ್ದೇಶಕ ಹಾಗೂ ಪ್ರಗತಿಪರ ಕೃಷಿಕರು ಮತ್ತು ಹಿರಿಯ ಸದಸ್ಯರಾದ ದೀಟಿ ಸೀತಾರಾಮ ಮಯ್ಯ ಅವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿದೆ. ಈ ವೇಳೆ ವಿವಿಧ ಅತಿಥಿ ಗಣ್ಯರು, ಸಂಘದ ನಿರ್ದೇಶಕರುಗಳು ಉಪಸ್ಥಿತರಿರಲಿದ್ದಾರೆ. ಅಂದು ಮಧ್ಯಾಹ್ನ ಗಂಟೆ 2.00ರಿಂದ ಪ್ರಸಿದ್ದ ಕಲಾವಿದರ ಕೊಡುವಿಕೆಯಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಪ್ರಸಿದ್ಧ  ದೇಗುಲ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನ ಇದರ ವಾರ್ಷಿಕ ಜಾತ್ರೆ ಬರುವ ಜನವರಿ 10 ಮತ್ತು 11ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಪ್ರತಿ ವರ್ಷ ಸಾವಿರಾರು ಮಂದಿ ಶ್ರೀ ಕ್ಷೇತ್ರದ ಗೆಂಡೋತ್ಸವ ಹಾಗೂ ತುಲಾಭಾರ ಸೇವೆಯಲ್ಲಿ ಪಾಲ್ಗೊಳ್ಳುತ್ತಿದ್ದು ಜಾತ್ರೆಯನ್ನುಶ್ರದ್ಧಾ ಭಕ್ತಿಯಿಂದ ಯಶಸ್ವಿಗೊಳಿಸುತ್ತಿದ್ದಾರೆ ಅದೇ ರೀತಿಯಲ್ಲಿ ಈ ಬಾರಿ ಜಾತ್ರೆಯನ್ನು ಯಶಸ್ವಿಗೊಳಿಸಲು ಭಕ್ತಾಧಿಗಳಲ್ಲಿ ಮನವಿ ಮಾಡಿದರು. ದೇಗುಲದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ, ಅರ್ಚಕ ಪ್ರತಿನಿಧಿ ಕೃಷ್ಣ ಜೋಗಿ, ಉದಯ್ ಜೋಗಿ, ಕೋಟ ಪಂಚಾಯತ್ ಸದಸ್ಯ ಭುಜಂಗ ಗುರಿಕಾರ, ಸ್ಥಳೀಯರಾದ ದೇವದಾಸ್ ಕಾಂಚನ್, ಜೀವನ್ ಕದ್ರಿಕಟ್ಟು, ಶೇವಧಿ ಸುರೇಶ್ ಗಾಣಿಗ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ ಇದ್ದರು. ಕಾರ್ಯಕ್ರಮವನ್ನು ವ್ಯವಸ್ಥಾಪನಾ ಸಮಿತಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದುಶ್ಚಟಗಳಿಗೆ ಬಲಿಯಾದವರು ಜೀವನದಲ್ಲಿ ಎಂದಿಗೂ ಉದ್ಧಾರ ಆಗಲು ಸಾಧ್ಯವಿಲ್ಲ. ಸಹವಾಸ ದೋಷ ಮತ್ತಿತರ ಕಾರಣಗಳಿಂದ ಯುವಕ ಯುವತಿಯರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಕ್ಷಣಿಕ ಸುಖಕ್ಕಾಗಿ ಮಾದಕ ದ್ರವ್ಯಗಳನ್ನು ಸೇವಿಸಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದು, ಮಾದಕ ದ್ರವ್ಯ ಸೇವನೆಯಿಂದ ನಮ್ಮ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯುವ ಜನಾಂಗಕ್ಕೆ ಅರಿವು ಮೂಡಿಸಬೇಕಿದೆ. ಯುವ ಜನಾಂಗ ಇಂತಹ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಿಬೇಕು ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಜನಜಾಗೃತಿ ವೇದಿಕೆ ತ್ರಾಸಿ ವಲಯ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಹಕಾರದೊಂದಿಗೆ ಗಂಗೊಳ್ಳಿ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಕ್ಷೇತ್ರದ ಮಹೋನ್ನತ ಗುರಿಯೊಂದಿಗೆ ಏಳು ಜನ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ 2022ರಲ್ಲಿ ತನ್ನ ಶಿಕ್ಷಣ ಸೇವೆಯನ್ನು ಉಡುಪಿಗೂ ವಿಸ್ತರಿಸುವ ಯೋಜನೆಯೊಂದಿಗೆ ಕಲ್ಯಾಣಪುರದ ತ್ರಿಶಾ ಪಪೂ. ಕಾಲೇಜಿನ ಶೈಕ್ಷಣಿಕ ಸಹಭಾಗಿತ್ವ ವಹಿಸಿಕೊಂಡಿತು. ಈಗಾಗಲೇ ಪಿ.ಯು ಫಲಿತಾಂಶದಲ್ಲಿ ಆರಂಭಿಕ ವರ್ಷದಲ್ಲೇ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಸಂಸ್ಥೆ ಉಡುಪಿಯ ಶಾಖೆಯಲ್ಲೂ ಆ ಯಶಸ್ಸನ್ನು ಮುಂದುವರೆಸಿದೆ. ತನ್ನ ಪ್ರಥಮ ವರ್ಷದ ಫಲಿತಾಂಶದಲ್ಲೇ 100% ಗಳಿಸುವುದರ ಜೊತೆಗೆ ಪಿ.ಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ರ್ಯಾಂಕ್‌ಗಳಿಸುವ ಮೂಲಕ ಸಂಸ್ಥೆ ಕೀರ್ತಿ ಗಳಿಸಿದೆ. 94 ಮಕ್ಕಳೊಂದಿಗೆ ಪ್ರಾರಂಭವಾದ ವಿದ್ಯಾಸಂಸ್ಥೆಯಲ್ಲಿ ಇಂದು 400ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೇವಲ ಅಂಕ ಗಳಿಕೆಯ ಹಸಿವನ್ನು ಮಾತ್ರ ಬೆಳೆಸದೆ ಜೀವನ ಮೌಲ್ಯಗಳು, ನೈತಿಕತೆ, ಸದ್ವಿಚಾರಗಳನ್ನು ಪ್ರತಿನಿತ್ಯ ಬೋಧಿಸುತ್ತಿರುವುದು ಸಂಸ್ಥೆಯು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ಉಡುಪಿಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಯಶಸ್ಸಿನ ಪಯಣ ಅತೀ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿ…

Read More