Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಶ್ರೀಮದ್ ಸ್ವರ್ಣವಲ್ಲಿ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಕಟ್ಟೆ ಪರಮೇಶ್ವರ ಭಟ್ಟರ ನೇತೃತ್ವದಲ್ಲಿ ಬೈಂದೂರು ರಾಮಕ್ಷತ್ರಿಯ ಸಮಾಜದ ೧೨ನೇ ವರ್ಷದ ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಮತ್ತು ಶ್ರೀ ಸೀತಾರಾಮಚಂದ್ರ ದೇವರ ಬ್ರಹ್ಮಕಲಶೋತ್ಸವ ಜರುಗಿತು. ಸೇವಾಕರ್ತರಾಗಿ ಶಾರದಾ ಮತ್ತು ಕರ್ನಲ್ ಡಿ. ನರಸಿಂಹ ನಾಯಕ್ (ವಧುವಿನ ಕಡೆ) ಹಾಗೂ ಜಯಂತಿ ಮತ್ತು ದಿನಕರ್ ರಾವ್ ಹೈದರಾಬಾದ್ (ವರನ ಕಡೆ) ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಉದ್ಯಮಿ ಬಿಜೂರು ರಾಮಕೃಷ್ಣ ಶೇರೆಗಾರ್ ದಂಪತಿಗಳು ಮಧ್ಯಾಹ್ನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೆಂಗಳೂರಿನ ಡಾ. ಹರಾ ನಾಗರಾಜಾಚಾರ್ಯ ಮತ್ತು ಬಳಗದವರಿಂದ ನೃತ್ಯರೂಪ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ಮಹಾಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ಶ್ರೀ ಗಂಗಾಧರೇಂದ್ರ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಮಾಜಿ ಶಾಸಕ ಕೆ. ಲಕ್ಷ್ಮೀನರಾಯಣ ಇವರ ಅಧ್ಯಕ್ಷತೆಯಲ್ಲಿ ಧಾರ್ಮಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಧುರ ಮಧುರವೀ ಮಂಜುಳಗಾನ ಕಾರ್ಯಕ್ರಮದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯ ಪ್ರತಿಭೆಗಳು, ಎಲೆಮರೆಯ ಕಾಯಿಯಂತಿದ್ದವರು ಭಾಗವಹಿಸಿ ಹಾಡಿದ್ದಾರೆ. ಚಂದನ ವಾಹಿನಿಯ ಈ ಕಾರ್ಯಕ್ರಮದ ಮೂಲಕ ಅದೆಷ್ಟೋ ಬೆಳಕಿಗೆ ಬಾರದ ಪ್ರತಿಭೆಗಳು ಮೈಕ್ ಹಿಡಿಯುವಂತಾಗಿದೆ ಎಂದು ಬೆಂಗಳೂರು ದೂರದರ್ಶನ ಕೇಂದ್ರದ ಹೆಚ್ಚುವರಿ ಮಹಾನಿರ್ದೇಶಕ ಡಾ. ಮಹೇಶ್ ಜೋಶಿ ಹೇಳಿದರು. ಅವರು ದೂರದರ್ಶನ ಕೇಂದ್ರ ಬೆಂಗಳೂರು, ಬೈಲೂರು ಎಜುಕೇಶನ್ ಟ್ರಸ್ಟ್ ಕುಂದಾಪುರ, ಆಕಾಶವಾಣಿ ಮಂಗಳೂರು, ಇಸಿಆರ್ ಏವಿಏಷನ್ ಅಕಾಡೆಮಿ ಕೋಟೇಶ್ವರ, ಯುವ ಇನ್‌ಫ್ರಾಸ್ಟ್ರಕ್ಚರ್ ಕುಂದಾಪುರ ಆಶ್ರಯದಲ್ಲಿ ಕೋಟೇಶ್ವರ ಯುವ ಮೆರಿಡಿಯನ್ ಕನ್ವೆನ್‌ಶನ್ ಸೆಂಟರ್ ಮಧುರ ಮಧುರವೀ ಮಂಜುಳಗಾನ ಅಂದಿನ ಇಂದಿನ ನಾಯಕ ನಟರ ಖ್ಯಾತ ಹಾಡು ಹಾಗೂ ನೃತ್ಯಾವಳಿಗಳ ಕಾರ್ಯಕ್ರಮದಲ್ಲಿ ಮಾತನಾಡಿದರು. ಕರಾವಳಿಯ ಜನರಲ್ಲಿ ಸೌಹಾರ್ದತೆ ಇದೆ. ಅವರು ಓದುವಂತೆ ಬರೆಯುತ್ತಾರೆ. ಬರೆದಂತೆ ಮಾತನಾಡುತ್ತಾರೆ ಮತ್ತು ಮಾತಿನಂತೆ ನಡೆದುಕೊಳ್ಳುತ್ತಾರೆ ಇದು ಈ ಭಾಗದ ಹೆಚ್ಚುಗಾರಿಕೆ. ಕುಂದಾಪುರ ಜನರ ಪ್ರೀತಿ ನಾಲ್ಕನೇ ಭಾರಿಗೆ ಇಲ್ಲಿಯೇ ಕಾರ್ಯಕ್ರಮ ಆಯೋಜಿಸುವಂತೆ ಮಾಡಿದೆ ಎಂದರು. ಮಾಜಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜದ ಕಷ್ಟ ಸುಖಗಳಿಗೆ ಸ್ಪಂದಿಸುವ ಕೆಲಸ ಜಿ.ಶಂಕರ ಫ್ಯಾಮಿಲಿ ಟ್ರಸ್ಟ್ ಮಾಡುತ್ತಾ ಬಂದಿದ್ದು, ಮುಂದೆಯೂ ಕೂಡಾ ಸಜಮಾದ ಬೆನ್ನಿಗೆ ಟ್ರಸ್ಟ್ ನಿಲುತ್ತದೆ. ವಿದ್ಯೆ ಅಪಹರಿಸಲಾಗದ ಸಂಪತ್ತಾಗಿದ್ದು, ಎಲ್ಲಾ ಆಸ್ತಿಗಿಂತಲೂ ವಿದ್ಯೆ ಬದುಕಿನಲ್ಲಿ ಗಣಿಸಬಹುದಾದ ದೊಡ್ಡ ಆಸ್ತಿ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ.ಜಿಂ.ಶಂಕರ್ ಹೇಳಿದರು. ಉಡುಪಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಮೊಗವೀರ ಯುವ ಸಂಘಟನೆ ಆಶ್ರಯದಲ್ಲಿ ಕುಂದಾಪುರ ರೋಟರಿ ಲಕ್ಷೀನರಸಿಂಹ ಸಭಾಭವನದಲ್ಲಿ ನಡೆದ ಉಚಿತ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ಉದ್ಘಾಟಿಸಿ ಮಾತಾನಾಡುತ್ತಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ವಿದ್ಯಾರ್ಥಿಗಳಿಗೆ ಶಾಲಾರಂಭಕ್ಕೂ ಮುನ್ನಾ ನೋಟ್ ಬುಕ್ ಸಿಕ್ಕರೆ ಉತ್ತಮ ಎನ್ನುವ ಹಿನ್ನೆಲೆಯಲ್ಲಿ ಹೊಸನಗರ, ಸಾಗರ, ಶಿವಮೊಗ್ಗೆ, ಉಡುಪಿ ಹಾಗೂ ಕುಂದಾಪುರದಲ್ಲಿ ಪ್ರತಿಭಾಮವಂತ ಸುಮಾರು 10ಸಾವಿರ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷೆ ಗಣೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಬಗ್ವಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ತನ್ನ 2016-17ರ ಸಾಲಿನಲ್ಲಿ ನಡೆಸಿದ ಸಮಾಜ ಮುಖಿ ಸೇವೆಗಳು ಮತ್ತು ಬಹುಮುಖಿ ಕಾರ್ಯಕ್ರಮಗಳಿಂದ ರೋಟರಿ ಜಿಲ್ಲಾ ೩೧೮೨ ವತಿಯಿಂದ ದಾಖಲೆಯ ೩೧ ಜಿಲ್ಲಾ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಸಾಧನೆಯ ಮೈಲಿಗಲ್ಲನ್ನು ಸೃಷ್ಠಿಸಿದೆ. ಹಾಸನದಲ್ಲಿ ನಡೆದ ರೋಟರಿ 3182 ಆವಾರ್ಡ್ ನೈಟ್ ಮತ್ತು ಜಿಲ್ಲಾ ಎಸೆಂಬ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಗವರ್ನರ್ ಡಿ.ಎಸ್.ರವಿಯವರು ರೋಟರಿ ಸನ್ರೈಸ್ ಅಧ್ಯಕ್ಷರಾದ ಕೆ. ನರಸಿಂಹ ಹೊಳ್ಳರಿಗೆ 14 ಪ್ರಥಮ 9 ದ್ವಿತೀಯ 8 ತೃತೀಯ ಒಟ್ಟು 31 ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದಾರೆ. ಮಧ್ಯಮ ವಿಭಾಗದ ಕ್ಲಬ್ಗಳಲ್ಲಿ ರೋಟರಿ ಸನ್ರೈಸ್ ಇಡೀ ಜಿಲ್ಲೆಯಲ್ಲೇ ದ್ವಿತೀಯ ಅತ್ಯುತ್ತಮ ಕ್ಲಬ್ ಪ್ರಶಸ್ತಿ ಗಳಿಸಿದೆ. ಕ್ಲಬ್ ಸರ್ವಿಸ್, ಒಕೇಶನಲ್ ಸರ್ವಿಸ್ ಮತ್ತು ಟೀಚ್ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲೇ ಮೊದಲ ಸ್ಥಾನಕ್ಕೆ ಭಾಜನವಾಗಿದೆ. ಸಮುದಾಯ ಸೇವೆ ಮತ್ತು ಅಂತರಾಷ್ಟ್ರೀಯ ಸೇವೆಯಲ್ಲಿ ಜಿಲ್ಲೆಯಲ್ಲೇ ತೃತೀಯ ಪ್ರಶಸ್ತಿ ಗಳಿಸಿದೆ. ಕ್ಲಬ್ ಸರ್ವಿಸ್ನಲ್ಲಿ 8 ಪ್ರಶಸ್ತಿ ಒಕೇಶನಲ್ಲ್ಲಿ 5 ಪ್ರಶಸ್ತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕೇಂದ್ರ ಸರಕಾರ ದೇಶದಲ್ಲಿ ಗೋಹತ್ಯೆ ನಿಷೇಧಿಸುವ ಕುರಿತು ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸಿ ಗಂಗೊಳ್ಳಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಸಂಭ್ರಮಾಚರಣೆ ನಡೆಸಿದರು. ಮ್ಯಾಂಗನೀಸ್ ರಸ್ತೆಯ ಬಳಿ ಮುಖ್ಯರಸ್ತೆಯ ಸಮೀಪ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಕೇಂದ್ರ ಸರಕಾರದ ಗೋಹತ್ಯೆ ನಿಷೇಧದ ಅದೇಶವನ್ನು ಸ್ವಾಗತಿಸಿ ಸರಕಾರದ ಕ್ರಮವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಮೂರು ವರ್ಷ ಪೂರೈಸುತ್ತಿರುವ ಸುಸದಂರ್ಭದಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿರುವುದು ಸ್ವಾಗತಾರ್ಹ ಎಂದು ಕಾರ್ಯಕರ್ತರು ಕೇಂದ್ರ ಸರಕಾರ ಕಾರ್ಯವನ್ನು ಶ್ಲಾಘಿಸಿದರು. ಬೈಂದೂರು ಕ್ಷೇತ್ರ ಬಿಜೆಪಿ ಮುಖಂಡ ರಾಮಪ್ಪ ಖಾರ್ವಿ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಗ್ರಾಪಂ ಸದಸ್ಯ ಬಿ.ಗಣೇಶ ಶೆಣೈ, ಬಿಜೆಪಿ ಕಾರ್ಯಕರ್ತರಾದ ಶಂಕರ ದೇವಾಡಿಗ, ರತ್ನಾಕರ ಗಾಣಿಗ, ನವೀನ ದೊಡ್ಡಹಿತ್ಲು, ದಿಲೀಪ್ ಖಾರ್ವಿ, ಮೋಹನ ಖಾರ್ವಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ಕಾರ್ಯಗಾರ ಜರುಗಿತು. ಆದರ್ಶ ವಿದ್ಯಾಕೇಂದ್ರದ ಪ್ರಾಂಶುಪಾಲ ಬಿನಿಮೋನ್ ವಿ.ಆರ್ ಮಾತನಾಡಿ ಶಿಕ್ಷಕರು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯನ್ನು ಗುರುತಿಸುವ ಬಗೆ ಹೇಗೆ, ತರತಗತಿಯಲ್ಲಿ ಶಿಕ್ಷಕನ ವರ್ತನೆ ಎಷ್ಟು ಮಹತ್ವಪೂರ್ಣವಾಗಿರುತ್ತದೆ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ದಿನದಿಂದ ದಿನಕ್ಕೆ ಅಭಿವೃದ್ಧಿಗೊಳಿಸುವುದು ಹೇಗೆ ಎಂಬುದನ್ನು ವಿವರಿಸಿದರು. ಮಕ್ಕಳ ಮಾನಸಿಕ ಸ್ಥಿತಿ ಸೂಕ್ಷ್ಮತೆಯಿಂದ ಕೂಡಿರುತ್ತದೆ. ಅವರ ಸೂಕ್ಷ್ಮತೆಯನ್ನು ಅರಿತು, ಅರ್ಥೈಸಿಕೊಂಡು ಚಟುವಟಿಕೆಗಳ ಮೂಲಕ ಪ್ರೋತ್ಸಾಹಿಸುವುದು ಶಿಕ್ಷಕರ ಆದ್ಯ ಕರ್ತವ್ಯ. ಮಕ್ಕಳನ್ನು ಹೆದರಿಸುವುದರಿಂದ, ಉತ್ಸಾಹ ಮೊಟಕುಗೊಳಿಸುವುದರಿಂದ ಅವರ ಬೆಳವಣಿಗೆಯ ವ್ಯಕ್ತಿತ್ವಕ್ಕೆ ಧಕ್ಕೆಯುಂಟುಮಾಡಿದಂತಾಗುತ್ತದೆ. ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಉತ್ಸಾಹವನ್ನು ಪ್ರೋತ್ಸಾಹಿಸುವ ಬಗೆ ಹೇಗೆ, ಗುಣಮಟ್ಟ ಅಂಶಗಳನ್ನು ಸಂಗ್ರಹಿಸಿ ಬೋಧಿಸುವ ಬಗೆ ಏಷ್ಟು ಉಪಯುಕ್ತ ಎಂದರು. ಕಾರ್ಯಗಾರದಲ್ಲಿ ಶಾಲಾ ಪ್ರಿನ್ಸಿಪಾಲರಾದ ಸಾಯಿಜು.ಕೆ.ಆರ್. ನಾಯರ್ ಮತ್ತು ಉಪ ಪ್ರಾಂಶುಪಾಲರಾದ ಶ್ರೀ. ಸುನಂದಾ ಪಾಟೀಲ್ ರವರು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಶಿಕ್ಷಕರಾದ ಶ್ರೀ. ರಾಮಚಂದ್ರ ಹೆಬ್ಬಾರ್ ಸ್ವಾಗತಿಸಿದರು. ಸಮಾಜ ವಿಜ್ಞಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಖೆ ಹೊಂದಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಖಾಸಗಿ ವ್ಯಕ್ತಿಗಳಿಗೆ ಸೇರಿದ್ದ ಅಂಗಡಿಯ ಪ್ರತ್ಯೇಖ ದಾಸ್ತಾನು ಕೊಠಡಿಯಲ್ಲಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಅಡಿಕೆ, ಕಾಳು ಮೆಣಸು, ರಬ್ಬರ್ ಶೀಟ್ ಮುಂತಾದ ಉತ್ಪನ್ನಗಳನ್ನು ದೋಚಿಕೊಂಡು ತೆರಳಿರುವ ಘಟನೆ ವರದಿಯಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಜಡ್ಕಲ್ ಸೈಂಟ್ ಜಾಜ್ ಚರ್ಚ್ ಕಾಂಪೆಕ್ಸ್‌ನಲಿದ್ದ್ಲ ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ  ಜಡ್ಕಲ್ ಶಾಖೆ ದಾಸ್ತಾನು ಕೊಠಡಿಯ ಬಾಗಿಲು ಮುರಿದು ಸುಮಾರು 16ಲಕ್ಷ ಮೌಲ್ಯದ ಅಡಿಕೆ ಹಾಗೂ 2 ಲಕ್ಷ ಮೌಲ್ಯದ ಕಾಳುಮೆಣಸು ದೊಚಿರುವ ಕಳ್ಳರು, ಪಕ್ಕದ ಸಬಾಸ್ಟಿನ್ ಪಟ್ಟಾಮನ & ಸನ್ಸ್ ಅಂಗಡಿಗೆ ಸೇರಿದ್ದ ದಾಸ್ತಾನು ಕೊಠಡಿಯಿಂದ ಸುಮಾರು 2.44 ಲಕ್ಷ ಮೌಲ್ಯದ3 ಸಾವಿರ ಕೆ.ಜಿ ರಬ್ಬರ್ ಶೀಟ್, 45,600ರೂ ಮೌಲ್ಯದ 40 ಡಬ್ಬಿ ಸ್ಟಿಕ್‌ವೆಲ್ ಗಮ್, 44.800ರೂ ಮೌಲ್ಯದ 310ಕೆ.ಜಿ ಪ್ಲಾಸ್ಟಿಕ್ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ಹೊಳೆ ಬದಿಯಲ್ಲಿ ಕುಡಿಯುವ ನೀರಿಗಾಗಿ ತೆಗೆಯಲಾದ ಹೊಂಡಕ್ಕೆ 11 ವರ್ಷದ ಬಾಲಕಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಗುರುವಾರ ಹೆಂಗವಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೋಡಾಬೈಲು ಮರೂರು ಸಂಪರ್ಕದ ಮಧ್ಯ ಭಾಗದಲ್ಲಿ ಹರಿಯುವ ತೊಂಭತ್ತು ಹೊಳೆಯಲ್ಲಿ ನಡೆದಿದೆ. ಕೋಡಾಬೈಲು ಸರಸ್ವತಿ ಹಾಗೂ ಮೋಹನ ದಂಪತಿಯ ಇಬ್ಬರು ಹೆಣ್ಣು ಮಕ್ಕಳಲ್ಲಿ ಸ್ವಾತಿ ಹಿರಿಯಳು. ತೊಂಭತ್ತು ಶ್ರೀ ದುರ್ಗಾ ಪರಮಮೇಶ್ವರಿ ಅನು ದಾನಿತ ಶಾಲೆಯ 6ನೇ ತರಗತಿಗೆ ತೇರ್ಗಡೆಯಾಗಿದ್ದ ವಿದ್ಯಾರ್ಥಿನಿ. ಘಟನೆ: ಸ್ವಾತಿ ಹಾಗೂ ಸಂಬಂಧಿಕರ ಮಕ್ಕಳೊಂದಿಗೆ ಮನೆ ಸಮೀಪದಲ್ಲಿ ನೀರಿಲ್ಲದೇ ಬತ್ತಿದ ಹೊಳೆಯ ಕಡೆಗಳಲ್ಲಿ ಆಟವಾಡಲು ಹೋಗಿದ್ದರು. ಆ ಸಂದರ್ಭದಲ್ಲಿ ಸ್ವಾತಿ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾಳೆ. ಜತೆಗಿದ್ದ ಮಕ್ಕಳು ಕೂಡ ಆಟವಾಡುತ್ತಿದ್ದರು. ಮಕ್ಕಳಿಗೆ ಸ್ವಾತಿ ಕಾಣದ್ದರಿಂದ ಗಿಡದ ನಡುವೆ ಅಡಗಿ ಕೊಂಡಿರಬೇಕೆಂದು ಹುಡುಕಾಡಿದ್ದಾರೆ. ಸ್ವಲ್ಪ ಹೊತ್ತಿನ ಅನಂತರ ಮಕ್ಕಳು ಸ್ವಾತಿಯನ್ನು ಮನೆಯ ತನಕ ಹುಡುಕಿಕೊಂಡು ಹೋಗಿದ್ದಾರೆ. ಮನೆಯವರಲ್ಲಿ ಮಕ್ಕಳು ಸ್ವಾತಿಯನ್ನು ಹುಡುಕಿದರೂ ಸಿಗಲಿಲ್ಲವೆಂದು ತಿಳಿಸಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಗಂಗೊಳ್ಳಿ ಗ್ರಾಮದ ವಿನಾಯಕ ಸೋಮಿಲ್ ಸಮೀಪದ ನಿವಾಸಿ ಹರೀಶ ಜಿ.ಕೆ. (26) ಅವರು ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದು, ಅವರ ವೈದ್ಯಕೀಯ ಚಿಕಿತ್ಸೆಗೆ ಮಾನವೀಯ ನೆರವಿನ ಅಗತ್ಯವಿದೆ. ಕುಟುಂಬದ ಆಧಾರಸ್ತಂಭವಾಗಿದ್ದ ಹರೀಶ ಜಿ.ಕೆ. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಕಳೆದ ನಾಲ್ಕು ತಿಂಗಳ ಹಿಂದೆ ಇವರ ಎರಡೂ ಮೂತ್ರಪಿಂಡಗಳು ವೈಫಲ್ಯವಾಗಿದ್ದು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂ.ಗಳನ್ನು ಮೂತ್ರಪಿಂಡದ ಚಿಕಿತ್ಸೆಗಾಗಿ ಖರ್ಚು ಮಾಡಿರುವ ಇವರು ಮುಂದಿನ ಚಿಕಿತ್ಸೆಗಾಗಿ ಹಣ ಹೊಂದಿಸಲಾಗದೆ ಕಂಗಾಲಾಗಿದ್ದಾರೆ. ಮನೆಯಲ್ಲಿ ದುಡಿಯುವವರು ಬೇರೆ ಯಾರೂ ಇಲ್ಲವಾದ್ದರಿಂದ ಈ ಕುಟುಂಬ ಭಾರೀ ಅತಂತ್ರತೆಯಲ್ಲಿ ಸಿಲುಕಿದೆ. ನೆರವಿಗೆ ಮನವಿ: ಕಳೆದ ನಾಲ್ಕು ತಿಂಗಳಿನಿಂದ ಮೂತ್ರಪಿಂಡಗಳ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಹರೀಶ ಅವರಿಗೆ ವಾರಕ್ಕೆ ಎರಡು ಬಾರಿ ಡಯಾಲಿಸಿಸ್ ಮಾಡುವ ಅನಿವಾರ್ಯತೆ ಇದೆ. ಡಯಾಲಿಸಿದ್ ಹಾಗೂ ಔಷಧೋಪಚಾರಕ್ಕಾಗಿ ಪ್ರತಿವಾರ ಸುಮಾರು 10 ಸಾವಿರ ರೂ.ಗಳ ಅವಶ್ಯತೆ ಇದ್ದು ಇಷ್ಟೊಂದು ಹಣವನ್ನು ಹೊಂದಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಭಟ್ಕಳ: ತಾಲೂಕಿನ ಅನಂತವಾಡಿ ಸಮೀಪ ರಾ.ಹೆ 66ರಲ್ಲಿ ಬೆಳಿಗ್ಗೆ ಖಾಸಗಿ ಬಸ್ ಹಾಗೂ ಟೆಂಪೋ ನಡುವಿನ ನಡೆದ ಭೀಕರ ಅಪಘಾತದಲ್ಲಿ ಮದುಮಗಳು ಸೇರಿದಂತೆ 7 ಮಂದಿ ದಾರುಣವಾಗಿ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿಗೆ ಗಾಯಗಳಾದ ಘಟನೆ ವರದಿಯಾಗಿದೆ. ಮೃತರನ್ನು ಮಧುಮಗಳು ದಿವ್ಯಾ ಕುರ್ಡೇಕರ್ (35), ಪಾಲಾಕ್ಷಿ (42), ಬೇಬಿ (38), ಸುಬ್ರಹ್ಮಣ್ಯ (15), ಖಾಸಗಿ ಬಸ್ ಚಾಲಕ ವಾಲ್ಮೀಕಿ (35), ಟೆಂಪೋ ಚಾಲಕ ನಾಗಪ್ಪ ಗಣಿಗಾರ್ (48) ಎಂದು ಗುರುತಿಸಲಾಗಿದೆ. ಸಿರಸಿ-ಧಾರವಾಡದಿಂದ ಮದುವೆಯ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಹೊನ್ನಾವರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಅನಂತವಾಡಿ ಬಳಿ ಮುಖಮುಖಿ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಟೆಂಪೋ ಮಗುಚಿ ಬಿದ್ದಿದ್ದು ಬಸ್ಸಿನ ಮುಂಭಾಗ ನಚ್ಚುಗುಜ್ಜಾಗಿದೆ. ಗಾಯಾಳುಗಳನ್ನು ಭಟ್ಕಳ, ಮುರ್ಡೇಶ್ವರ, ಕುಂದಾಪುರ ಹಾಗೂ ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಹಾಗೂ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More