ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೇ ಜನತಾ ಪ್ರೌಡಶಾಲೆ ವಿಚಾರದಲ್ಲಿ ವೃಥಾ ಆರೋಪ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜಕೀಯದಿಂದ ಹೊರತಾಗಿರುವ ಹೆಮ್ಮಾಡಿ ಜನತಾ ಪ್ರೌಢಶಾಲೆಯನ್ನು ಮಾರಾಟ ಮಾಡಿದ್ದಾರೆ ಎಂಬ ಕಟು ಆಪಾದನೆಯನ್ನು ನನ್ನ ಮೇಲೆ ಹೊರಿಸಿ ಬಿಜೆಪಿಗರು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ದೀಪಕ್ಕುಮಾರ್ ಶೆಟ್ಟಿ ಹೊರಿಸಿರುವ ಆರೋಪ ಸಾಕ್ಷ ಸಮೇತ ಸಾಬೀತು ಮಾಡಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ. ಆದರೆ ಅವರು ಹೇಳಿರುವುದು ಸುಳ್ಳಾದರೆ ನೈತಿಕ ಹೊಣೆ ಹೊತ್ತು ರಾಜಕೀಯದಿಂದ ಹಿಂದೆ ಸರಿಯಲಿ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಸವಾಲು ಹಾಕಿದ್ದಾರೆ. ಕಟ್ಬೆಲ್ತೂರು ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಅಭಿವೃದ್ಧಿಗಾಗಿ ಬಹಳಷ್ಟು ಕೆಲಸ ನಡೆಯುತ್ತಿದ್ದು ಜನರೇ ಶ್ಲಾಘೀಸುತ್ತಿರುವ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೈಂದೂರು ಕ್ಷೇತ್ರದಲ್ಲಿ ಸಂಜೆಯ ಹೊತ್ತಿಗೆ ಸಭೆ ಮಾಡಿ ನನ್ನ ವಿರುದ್ಧ ಸುಳ್ಳಿನ ಕಂತೆಯನ್ನು ಹೊರಿಸಿ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಇದು ಖಂಡನಾರ್ಹ ಎಂದರು. ಕುಂದಾಪ್ರ ಡಾಟ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆ ಕೊಲ್ಲೂರು ಹಾಗೂ ಸ್ವತಂತ್ರ ಪದವಿ ಪೂರ್ವ ಕಾಲೇಜು ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸುಪರ್ಣಾ ಸೇವಾ ಟ್ರಸ್ಟ್ ವತಿಯಿಂದ ಮಾಸ್ಕಿಟೊ ಕಿಟ್ ವಿತರಿಸಲಾಯಿತು. ಸುಪರ್ಣಾ ಸೇವಾ ಟ್ರಸ್ಟ್ನ ಮ್ಯಾನೆಜಿಂಗ್ ಟ್ರಸ್ಟಿ ಕೊಲ್ಲೂರು ರಮೇಶ್ ಗಾಣಿಗ ಕೊಡುಗೆಯಾಗಿ ನೀಡಿದ ಕಿಟ್ನ್ನು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಹಣಾಧಿಕಾರಿ ಜನಾರ್ಧನ ಅವರು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಗ್ರೀಷ್ಮಾ ಗಿರಿಧರ ಭಿಡೆ, ಕೊಲ್ಲೂರಿನ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ ಹಾಗೂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅರುಣ್ ಪ್ರಕಾಶ್ ಶೆಟ್ಟಿ, ನಾಗರಾಜ್ ಅಡಿಗ, ಪ್ರೌಢ ಶಾಲೆಯ ಹಿರಿಯ ಶಿಕ್ಷಕ ಕೃಷ್ಣ ಮತ್ತು ಸುಪರ್ಣಾ ಸೇವಾ ಟ್ರಸ್ಟ್ ಸದಸ್ಯ ರಂಗ ನಾಯ್ಕ್, ವಿನಾಯಕ ಆಚಾರ್ಯ ಮೊದಲಾದವರು ಉಪಸ್ಥಿರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಭಾರತ ದೇಶದ ಶೇ.೧೬ ರಷ್ಟು ಜನರು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಮಕ್ಕಳ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸದೆ ಉನ್ನತ ಶಿಕ್ಷಣ ಪಡೆಯುವಲ್ಲಿ ಪೋಷಕರು ಸಹಕರಿಸಬೇಕು. ಪ್ರತಿಯೊಬ್ಬರು ಉನ್ನತ ಶಿಕ್ಷಣ ಪಡೆದು ಸಮೃದ್ಧ ದೇಶ ಕಟ್ಟುವಲ್ಲಿ ಕೈಜೋಡಿಸಬೇಕು. ಸತತ ೧೩ ವರ್ಷಗಳಿಂದ ಮಕ್ಕಳಿಗೆ ವಿದ್ಯಾರ್ಥಿವೇತನದ ಮೂಲಕ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಿರುವ ಪಂಚಗಂಗಾವಳಿ ವಿದ್ಯಾನಿಧಿ ಯೋಜನೆ ಕಾರ್ಯ ಪ್ರಶಂಸನೀಯ ಎಂದು ಭೂದಾಖಲೆಗಳ ನಿವೃತ್ತ ಸಹಾಯಕ ನಿರ್ದೇಶಕ ಕೃಷ್ಣ ತಾಂಡೇಲ ಕುಮಟಾ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವಿಜಯ ವಿಠಲ ಮಂಟಪದಲ್ಲಿ ಜರಗಿದ ಪಂಚಗಂಗಾವಳಿ ಬಳಗ ಗಂಗೊಳ್ಳಿ ಪ್ರಾಯೋಜಿತ ಪಂಚಗಂಗಾವಳಿ ವಿದ್ಯಾನಿಧಿ ಯೋಜನೆಯ ೧೩ನೇ ವರ್ಷದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷೆತೆ ವಹಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ನಿಟ್ಟೆಯ ಎನ್ಎಂಎಎಚ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಅಸಿಸ್ಟೆಂಟ್ ಪ್ರೋಫೆಸರ್ ಸಂದೀಪ ಖಾರ್ವಿ ಗಂಗೊಳ್ಳಿ ಶುಭ ಹಾರೈಸಿದರು. ಬಸ್ರೂರು ಸರಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಬದುಕಿನ ಸಮನ್ವಯತೆಯ ಸೂತ್ರವನ್ನು ತಮ್ಮ ಕಾವ್ಯದ ಮೂಲಕ ಸಾಧಿಸಿ ತೋರಿಸಿದವರು ಕವಿ ನಿಸಾರ್ ಅಹಮ್ಮದ್ ಅವರು. ಜೀವನದಲ್ಲಿ ಕಾಣುವ ಒಳಿತು-ಕೆಡುಕುಗಳನ್ನು ತಮ್ಮದೇ ಆದ ಕಾವ್ಯಭಾಷೆಯ ಮೂಲP, ಮಾಂತ್ರಿಕ ಶಕ್ತಿಯುಳ್ಳ ಸುಂದರ ಪದಪುಂಜಗಳ ಮೂಲಕ, ಪ್ರಾಸಾನುಪ್ರಾಸಯುಕ್ತ ಪದವಿನ್ಯಾಸದ ಮೂಲಕ, ಹೊಸ ಹೊಸ ಪದಗಳನ್ನು ಟಂಕಿಸಿ ಕನ್ನಡ ಸಾಹಿತ್ಯಕ್ಕೆ ಕೊಡುವ ಮೂಲಕ ಒದಗಿಸಿ ಕೊಟ್ಟವರು ಎಂದು ಡಾ. ಪಾರ್ವತಿ ಜಿ.ಐತಾಳ ಹೇಳಿದರು. ಅವರು ಹೈದರಾಬಾದಿನ ಕರ್ನಾಟಕ ಸಾಹಿತ್ಯ ಮಂದಿರದಲಿ ನಡೆದ ನಿಸಾರ್ ಅಹಮದ್-ಬದುಕು ಬರಹದ ಕುರಿತು ನಡೆದ ಒಂದು ದಿನದ ವಿಚಾರ ಸಂಕಿರಣzಲ್ಲಿ ’ನಿಸಾರ್ ಕಾವ್ಯದಲಿ ವ್ಯಕ್ತವಾಗುವ ಜೀವನ ದರ್ಶನ’ ಎಂಬ ವಿಷಯದ ಕುರಿತು ಮಾತನಾಡಿದರು. ಮನುಷ್ಯನ ಹುಟ್ಟಿನಿಂದ ಸಾವಿನವರೆಗೂ ಅವನ ಬದುಕು ಒಳಗೊಳ್ಳುವ ನೂರಾರು ಸನ್ನಿವೇಶಗಳನ್ನು ನೆಪವಾಗಿಸಿಕೊಂಡು ಅಲ್ಲಿ ಕಾಣುವ ಸೌಖ್ಯ ಸೌಂದರ್ಯಗಳಿಗೆ, ಲೋ-ದೋಷಗಳಿಗೆ ಪ್ರತಿಮೆ ರೂಪಕಗಳ ಮೂಲಕ ಸಮಾಂತರಗಳನ್ನು ಸೃಷ್ಟಿಸಿ ಜೀವನದ ಸಮಗ್ರ ದರ್ಶನವನ್ನು ನಿಸಾರರು ತಮ್ಮ ಕವಿತೆಗಳಲ್ಲಿ ಒಂದಿಲ್ಲೊಂದು ರೀತಿಯಲ್ಲಿ ನೆಯ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಲವು ವರ್ಷಗಳಿಂದ ಕಾಲ್ನಡಿಗೆಯಲ್ಲಿ ಪಾದ ಯಾತ್ರೆಯನ್ನು ಹಮ್ಮಿಕೊಳ್ಳುತ್ತಿರುವ ಉದ್ಯಮಿ ಹಾಗೂ ಶ್ರೀ ವೆಂಕಟೇಶ್ವರ ಸ್ವೀಟ್ ನ ಮಾಲೀಕ ಲಕ್ಷ್ಮೀ ನಾರಾಯಣ ರಾವ್ ಮತ್ತು ಶ್ರೀಧರ ಪಿ. ಎಸ್. ಅವರ ನೇತೃತ್ವದಲ್ಲಿ ಸುಮಾರು ನೂರಕ್ಕೂ ಮಿಕ್ಕಿದ ಭಕ್ತರ ತಂಡ ಕಾಲ್ಮಡಿಗೆಯಲ್ಲಿ ತಿರುಪತಿ ಯಾತ್ರೆಗೆ ಸಾಲಿಗ್ರಾಮದಿಂದ ಹೊರಟಿದೆ. ದಿನವೊಂದರ ಸುಮಾರು ೪೦ರಿಂದ ೫೦ ಕಿ.ಮಿ. ಸಂಚರಿಸುವ ಈ ತಂಡದಲ್ಲಿ ಕುಮಟಾ, ಅಂಕೋಲ, ಹೊನ್ನಾವರ ಸೇರಿದಂತೆ ಕೊಲ್ಲೂರಿನ ಭಕ್ತಾಧಿಗಳು ಬಾಗವಹಿಸುತ್ತಿದ್ದು, ಸುಮಾರು ಹದಿನೆಂಟು ದಿನಗಳಲ್ಲಿ ತಿರುಪತಿಯನ್ನು ತಲುಪುವ ಗುರಿಯನ್ನಿರಿಸಿಕೊಳ್ಳಲಾಗಿದೆಯೆಂದು ಯಾತ್ರಿಗಳು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೀತಿ ಮೀರಿದ ಬೇಕು ಬೇಡಗಳನ್ನು ಒಳಗೊಳ್ಳುತ್ತಾ ಸದ್ಯದ ಅವಶ್ಯಕತೆಗಳನ್ನು ಪೂರೈಸಿಕೊಳ್ಳುವ ಧಾವಂತದಲ್ಲಿ ನಿರಂತರ ಪ್ರಕೃತಿ ನಾಶದತ್ತ ಮುಖಮಾಡಿರುವ ಮಾನವ ಅರ್ಥವಿಲ್ಲದ ಬದುಕು ಬದುಕುತ್ತಿದ್ದಾನೆ. ಇಂದಿನಿಂದಲೇ ಜಾಗೃತಗೊಳ್ಳದಿದ್ದರೇ ಮುಂದೊಂದು ದಿನ ಅದು ಮನುಕುಲದ ನಾಶಕ್ಕೆ ಕಾರಣವಾಗಬಹುದು ಎಂದು ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜು ಎಸ್ಡಿಎಂಸಿ ಉಪಾಧ್ಯಕ್ಷ ಮಂಜುನಾಥ ಖಾರ್ವಿ ಹೇಳಿದರು. ಅವರು ರೋಟರಿ ಕ್ಲಬ್ ಬೈಂದೂರು ಆಶ್ರಯದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಉಪ್ಪುಂದದ ಹರಿದ್ರಾ ಇಕೋ ಕ್ಲಬ್ ಸಹಯೋಗದೊಂದಿಗೆ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಗೀಡ ನೆಟ್ಟು, ವನಮಹೋತ್ಸವ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದೇವರು ನೀಡಿರುವ ಪ್ರಕೃತಿಯನ್ನು ಮುಂದಿನ ಪೀಳಿಗೆಗೂ ತಲುಪುವಂತೆ ಮಾಡುವುದು ಅಗತ್ಯವಾಗಿದೆ. ಇಲ್ಲದೇ ಹೋದರೆ ಮುಂದಾಗಲಿರುವ ದುರಂತಕ್ಕೆ ನಾವುಗಳೇ ಕಾರಣರಾಗಲಿದ್ದೇವೆ ಎಂದರು. ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷ ಕೃಷ್ಣಪ್ಪ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ಅರಿಕೆಯಾದರೆ ಮಾತ್ರ ಅದರ ಉಳಿವು ಸಾಧ್ಯವಿದೆ. ನನ್ನೂರಿನ ಕೆರೆಗಳು ಬತ್ತುತ್ತಿವೆ. ಮರಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಸಮೀಪದ ಪಾಣ್ತಿ ಗರಡಿ ಹೈಗುಳಿ ಮತ್ತು ಪರಿವಾರ ದೈವಸ್ಥಾನದ ಜೀಣೋದ್ಧಾರ ಕಾರ್ಯ ನಡೆಯುತ್ತಿದ್ದು, ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಬೈಂದೂರು ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು 5 ಲಕ್ಷ ರೂ. ದೇಣಿಗೆಯನ್ನು ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಮೋಹನ ಪೂಜಾರಿ ಉಪ್ಪುಂದ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಮದನ್ಕುಮಾರ್ ಉಪ್ಪುಂದ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ನಾಗರಾಜ ಪಿ. ಯಡ್ತರೆ, ಸದಸ್ಯ ಮಹೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಸಿರಿ ಮಾಸ ಪತ್ರಿಕೆಯ ಸಂಪಾದಕ, ಲೇಖಕ ಸಂದೀಪ್ ಶೆಟ್ಟಿ ಹೆಗ್ಗದ್ದೆ ಯವರ ದುಬೈ ಪ್ರವಾಸ ಕಥನ ಕಿಂಗ್ ಕ್ಲೀನ್ ಕೃತಿ ಅ.5ರ ಶನಿವಾರ ಸಂಜೆ 4:30ಕ್ಕೆ ನಗರದ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಬೆಂಗಳೂರು ಇಲ್ಲಿ ಬಿಡುಗಡೆಯಾಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ರಾಮಚಂದ್ರ ಗುರೂಜಿ, ಪುಸ್ತಕ ಬಿಡುಗಡೆಯನ್ನು ಸಾಹಿತಿ ಪತ್ರಕರ್ತ ಜೋಗಿ, ಕೃತಿ ಪರಿಚಯವನ್ನು ಸಾಹಿತಿ ದೊಡ್ಡರಂಗೇಗೌಡ ಮತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್ ವಹಿಸಲಿದ್ದಾರೆ.ಅಲ್ಲದೇ ಕಾರ್ಯಕ್ರಮದಲ್ಲಿ ಕೆರಾಡಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ಮತ್ತು ಸಿರಿ ಮಾಸ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಸುರೇಶ್ ಚಿಕ್ಕಣ್ಣ ಕೂಡ ಭಾಗವಹಿಸಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದ ಸುರಕ್ಷತೆ ದೃಷ್ಟಿಯಿಂದ ಮತ್ತೊಮ್ಮೆ ಬಿಜೆಪಿ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮದ ಪ್ರತಿಯೊಂದು ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳನ್ನು ಅರಿತುಕೊಂಡು, ಕೇಂದ್ರ ಸರಕಾರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಬೇಕು. ಪಕ್ಷದ ಕಾರ್ಯಕರ್ತರು ಕೇಂದ್ರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವುದನ್ನು ಮೈಮರೆತರೆ ಜನರು ಅಪಪ್ರಚಾರಗಳಿಗೆ ಬಲಿಯಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಹಿನ್ನಡೆಯಾಗುವ ಸಾಧ್ಯತೆಗಳಿವೆ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರಕಾರದ ನಾಮಫಲಕ ಅಳವಡಿಸಿ ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಗುರುವಾರ ಸಂಜೆ ಜರಗಿದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಗಂಗೊಳ್ಳಿ ಸ್ಥಾನೀಯ ಸಮಿತಿ ಪದಾಧಿಕಾರಿಗಳ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಕೇಂದ್ರ ಸರಕಾರ ಉಚಿತವಾಗಿ ಎಲ್ಪಿಜಿ ಸಂಪರ್ಕವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ವ್ಯವಸ್ಥೆಯು ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದ್ದು, ಕಾವ್ಯ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ವಿನಃ ಕಾರಣ ಸಂಸ್ಥೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ ಸಂಸ್ಥೆಯಲ್ಲಿ ಕೊಲೆ ಪ್ರಕರಣ ಹಿಂದೆ ಎಂದಿಗೂ ನಡೆದಿಲ್ಲ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಮಾಧ್ಯಮ ಅಥವಾ ವೈಯಕ್ತಿಕವಾಗಿ ಯಾರೇ ತನಿಖೆ ಮುಂದಾದರೂ ಯಾವುದೇ ತನಿಖೆ ನಾವು ಸಿದ್ಧರಿದ್ದೇವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಪ್ರತಿಕ್ರಿಯಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ. ಜುಲೈ 20ರಂದು ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡುತ್ತಿರುವ ವದಂತಿಗಳಿಗೆ ಅವರು ಪ್ರತಿಕ್ರಿಯಿಸಿದ್ದಾರೆ. ಯಾವುದೇ ಅಪರಾಧ ನಡೆದರೆ ಅದು ಪೊಲೀಸ್ ತನಿಖೆಯಾಗಬೇಕು. ಆದರೆ ಸಮಾಜದಲ್ಲಿ ಗೊಂದಲ ಸೃಷ್ಠಿಸಿ, ಜವಾಬ್ದಾರಿಯು ಸ್ಥಾನದಲ್ಲಿರುವ ನನ್ನನು ಹಾಗೂ ಕಳೆದ ಎರಡುವರೆ ದಶಕಗಳಿಂದ ಪಾರದರ್ಶಕವಾಗಿ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಸಂಸ್ಥೆಯನ್ನು ಟಾರ್ಗೆಟ್ ಮಾಡುವುದರ ಮೂಲಕ ನಮಗೆ ಮಾನಸಿಕ ಹಿಂಸೆ ನೀಡುತ್ತಿರುವುದು ಸರಿಯಲ್ಲ.…
