Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ‘ಪ್ರತಿ ವ್ಯಕ್ತಿಯ ಯಶಸ್ಸಿಗೆ ಗುರು ಮತ್ತು ಗುರಿ ಮುಖ್ಯ. ಬದುಕಿನಲ್ಲಿ ಹಿರಿಯರ ಮೌಲ್ಯಗಳೇ ಗುರು. ಯುವ ಸಮುದಾಯದ ಅಭ್ಯುದಯವೇ ಗುರಿ. ಆ ಮೂಲಕ ಸಮಾಜದ ‘ಪ್ರಗತಿ’ಯೇ ಆಳ್ವಾಸ್ ಆಶಯ. ಅದರ ಯಶಸ್ಸಿಗೆ ಸಮುದಾಯಗಳ ಸಹಭಾಗಿತ್ವ ಅತ್ಯಗತ್ಯ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯಲ್ಲಿ ಆಗಸ್ಟ್ 7 ಮತ್ತು 8 ರಂದು ನಡೆಯಲಿರುವ ಬೃಹತ್ ಉಚಿತ ಉದ್ಯೋಗ ಮೇಳ `ಆಳ್ವಾಸ್ ಪ್ರಗತಿ- 2026’ರ ಪೂರ್ವಭಾವಿಯಾಗಿ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡ ‘ನಾಯಕತ್ವಸಮ್ಮಿಲನ’ವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿವಿಧ ಸಮುದಾಯ, ಧಾರ್ಮಿಕ, ರಾಜಕೀಯ ಸೇರಿದಂತೆ ಹಲವಾರು ಸಂಘಟನೆಗಳ ಪ್ರಮುಖರ ಜೊತೆ ಮಾತನಾಡಿದ ಅವರು, ‘ಗ್ರಾಮೀಣ ಭಾಗದ ಯುವ ಸಮುದಾಯಕ್ಕೆ ಔದ್ಯೋಗಿಕ ಅವಕಾಶ ಕಲ್ಪಿಸುವ ಮೂಲಕ ಅವರನ್ನು ಸಾಮಾಜಿಕ, ಆರ್ಥಿಕವಾಗಿ ಸಶಕ್ತೀಕರಣಗೊಳಿಸಲು ‘ಆಳ್ವಾಸ್ ಪ್ರಗತಿ’ಯು 19 ವರ್ಷಗಳ ಹಿಂದೆ ಕೇವಲ 38…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 121ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಗೊಂಬೆ ಮನೆಯಲ್ಲಿ ಜರುಗಿತು. ನಿವೃತ್ತ ಅಧ್ಯಾಪಕ ಸುಬ್ರಾಯ ಮಯ್ಯ, ಪ್ರಸಂಗಕರ್ತ ಡಾ. ಶಿವಕುಮಾರ ಅಳಗೋಡು, ಶಿಕ್ಷಕಿ ಹಾಗೂ ಯಕ್ಷಗಾನ ಕಲಾವಿದೆ ನಾಗರತ್ನ ಹೇರ್ಳೆ ಗಿಳಿಯಾರು, ಉಪ್ಪಿನಕುದ್ರು ಗೊಂಬೆಯಾಟದ ಅರ್ಥಧಾರಿ ರಾಮ ಬಳೆಗಾರ್ ಹೆರೂರು, ತಲ್ಲೂರು ನಾರಾಯಣ ವಿಕಲ ಚೇತನ ಶಾಲೆಯ ಮುಖ್ಯಸ್ಥ ತಲ್ಲೂರು ಸುರೇಶ್ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಕಾಡೆಮಿಯ ವತಿಯಿಂದ ನಾಗರತ್ನ ಹೇರ್ಳೆ ಅವರನ್ನು ಸಮ್ಮಾನಿಸಲಾಯಿತು. ಚಂದ್ರ ದೇವಾಡಿಗ ಉಪ್ಪಿನಕುದ್ರು ಅವರಿಗೆ ಅಕಾಡೆಮಿಯ ವತಿಯಿಂದ ವೈದ್ಯಕೀಯ ನೆರವು ನೀಡಲಾಯಿತು. ಕಾರ್ಯಕ್ರಮದ ಕೊನೆಗೆ ಜಾಬಾಲಿ ನಂದಿನಿ ಯಕ್ಷಗಾನ ತಾಳಮದ್ದಲೆ ನೆರೆದ ಪ್ರೇಕ್ಷಕರನ್ನು ರಂಜಿಸಿದರು. ದೇವಕಿ ಸುರೇಶ್ ಪ್ರಭು ಪ್ರಾರ್ಥಿಸಿದರು. ನಿವೃತ್ತ ಶಿಕ್ಷಕ ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ ಅವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೇವೆಯಲ್ಲಿ ಪ್ರಾಮಾಣಿಕತೆ, ನಿಷ್ಠೆ ಸಂಘದ ಅಭಿವೃದ್ಧಿಗೆ ನಿರಂತರ ಪರಿಶ್ರಮ ಜನಮಾನಸದಲ್ಲಿ ಸರಳತೆಯ ಸಾಕಾರಮೂರ್ತಿಯಾಗಿ ಗುರುತಿಸಿಕೊಂಡವರು ಎಚ್. ನಾಗರಾಜ್ ಹಂದೆ. ಇಂತಹ ವ್ಯಕ್ತಿತ್ವ ಬೆರಳೆಣಿಕೆಯಷ್ಟು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು. ಅವರು ಕೋಟ ಸಹಕಾರಿ ವ್ಯವಸಾಯಕ ಸಂಘ ಇದರ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಇತ್ತೀಚಿಗೆ ನಿಧನರಾದ ಸಂಘದ ಉಪಾಧ್ಯಕ್ಷ ಎಚ್. ನಾಗರಾಜ್ ಹಂದೆ ಅವರಿಗೆ ಸಂಘದ ವತಿಯಿಂದ ಸಲ್ಲಿಸಿದ ನುಡಿನಮನ ಕಾರ್ಯಕ್ರಮದಲ್ಲಿ ಪುಷ್ಭನಮನ ಸಲ್ಲಿಸಿ ಮಾತನಾಡಿದರು. ಸಮಾಜದ ಬಗ್ಗೆ ಅವರಿಗಿರುವ ತುಡಿತ ಕಾಳಜಿ ನಮ್ಮೆಲ್ಲರಿಗೂ ಸ್ಪೂರ್ತಿದಾಯಕ ಇಂತಹ ಶಕ್ತಿಗಳು ನಮ್ಮನ್ನಗಲಿದ್ದು ಸಂಸ್ಥೆಗೆ ತುಂಬಲಾರದ ನಷ್ಟ ಎಂದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಗಣ್ಯರು ಎಚ್ ನಾಗರಾಜ್ ಹಂದೆಯವರ ಭಾವಚಿತ್ರಕ್ಕೆ ಪುಷ್ಭನಮನ ಸಲ್ಲಿಸಿದರು. ಕೋಟ ಸಹಕಾರಿ ವ್ಯವಸಾಯಕ ಸಂಘದ ಉಪಾಧ್ಯಕ್ಷ ರವೀಂದ್ರ ಕಾಮತ್, ನಿರ್ದೇಶಕರಾದ ಜಿ. ತಿಮ್ಮ ಪೂಜಾರಿ, ಟಿ. ಮಂಜುನಾಥ ಗಿಳಿಯಾರು, ಉದಯ ಕುಮಾರ್ ಶೆಟ್ಟಿ, ಶೇಖರ್ ಮರಕಾಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ರವರು, ಅಂದಿನ ಕಾಲದಲ್ಲಿ ಸಮಾಜವು ಎದುರಿಸುತ್ತಿದ್ದ ಮೌಢ್ಯತೆಗಳನ್ನು ಧಿಕ್ಕರಿಸಿ, ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಶರಣರಾಗಿದ್ದರು. ಅವರ ವಚನಗಳು ಹಾಗೂ ಚಿಂತನೆಗಳು ಇಂದಿಗೂ ಮನುಕುಲದ ಉದ್ಧಾರಕ್ಕೆ ದಾರಿದೀಪವಾಗಿದೆ ಎಂದು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕಾಲಕಾಲಕ್ಕೆ ಹಲವಾರು ನಾಯಕರು, ಸಂತರು, ದಾಸರು, ದಾರ್ಶನಿಕರು ಜನ್ಮತಾಳಿ ಸಮಾಜದ ಸುಧಾರಣೆಗಾಗಿ ಹೆಜ್ಜೆ ಇಟ್ಟಿದ್ದಾರೆ. ಅದೇ ರೀತಿ 12 ನೇ ಶತಮಾನದಲ್ಲಿ ಬಸವಣ್ಣನವರು ಅಂದಿನ ಕಾಲಘಟ್ಟದಲ್ಲಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಉಡುಪಿ ಜಿಲ್ಲಾ ಯುವ ವಿಭಾಗದ ನೂತನ ಜಿಲ್ಲಾಧ್ಯಕ್ಷರಾಗಿ ಮೀನುಗಾರರ ಸಮುದಾಯದ ಪ್ರಮುಖ ಯುವ ಮುಖಂಡರಾದ ಸುಬ್ರಹ್ಮಣ್ಯ ಮೊಗವೀರ ಅವರನ್ನು ನೇಮಕ ಮಾಡಿ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ರವಿ ಶೆಟ್ಟಿ ಬೈಂದೂರು ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಸುಬ್ರಹ್ಮಣ್ಯ ಮೊಗವೀರ ಅವರು ಮೀನುಗಾರರ ಸಮುದಾಯದಲ್ಲಿ ಅತ್ಯಂತ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯುವ ಮುಖಂಡರಾಗಿದ್ದು, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನಲ್ಲಿ ಈಗಾಗಲೇ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಜವಾಬ್ದಾರಿಯುತ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅಪಾರ ಸಂಘಟನಾ ಅನುಭವ ಹೊಂದಿದ್ದಾರೆ. ಇವರ ಸುದೀರ್ಘ ಸೇವೆ ಹಾಗೂ ಸಂಘಟನಾ ಚತುರತೆಯನ್ನು ಗುರುತಿಸಿ, ಸಂಸ್ಥೆಯ ವೈಸ್ ಚೇರ್ಮನ್ ಹಾಗೂ ಮಹಿಳಾ ರಾಜ್ಯಾಧ್ಯಕ್ಷರಾದ ಪೂಜಾ ಶೆಟ್ಟಿ ಮತ್ತು ರಾಜ್ಯ ಸಮಿತಿಯ ಪ್ರಮುಖರು ಅವರ ಹೆಸರನ್ನು ಶಿಫಾರಸು ಮಾಡಿದ್ದರು. ರಾಜ್ಯ ಸಮಿತಿಯ ಸೂಚನೆಯನ್ನು ಪರಿಗಣಿಸಿದ ರಾಜ್ಯಾಧ್ಯಕ್ಷರಾದ ಡಾ. ರವಿ ಶೆಟ್ಟಿ ಬೈಂದೂರು ಅವರು ಸುಬ್ರಹ್ಮಣ್ಯ ಮೊಗವೀರ ಅವರ ನೇಮಕಾತಿಗೆ ಅಂತಿಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ಹಾಗೂ ಪತಂಜಲಿ ಯೋಗ ಸಮಿತಿ ಅನೆಗುಡ್ಡೆ–ಕುಂಭಾಶಿ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಅನೆಗುಡ್ಡೆಯ ಶ್ರೀ ವಿನಾಯಕ ಸಭಾಭವನದಲ್ಲಿ ಯೋಗ ಹಾಗೂ ಗುರುವಂದನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವು ಬೆಳಿಗ್ಗೆ 5.30 ಗಂಟೆಗೆ ಯೋಗಗುರು ಶ್ರೀ ಗಣೇಶ್ ಹೆಮ್ಮಾಡಿ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸದೊಂದಿಗೆ ಆರಂಭವಾಯಿತು. ಯೋಗಾಭ್ಯಾಸದಲ್ಲಿ ಅನೇಕ ಸದಸ್ಯರು ಹಾಗೂ ಯೋಗಾಸಕ್ತರು ಭಾಗವಹಿಸಿದರು. ಗುರು ವಂದನಾ ಕಾರ್ಯಕ್ರಮದಲ್ಲಿ ಶ್ರೀ ರವಿರಾಜ ಉಪಾಧ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಟರಿ ಕ್ಲಬ್ ತೆಕ್ಕಟ್ಟೆಯ ಅಧ್ಯಕ್ಷ ರೋಟೇರಿಯನ್ ಟಿ. ರಾಜೀವ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಯೋಗದ ಮಹತ್ವ ಹಾಗೂ ಆರೋಗ್ಯದ ದೃಷ್ಟಿಯಿಂದ ಅದರ ಉಪಯೋಗಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಯೋಗ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಯೋಗಗುರು ಗಣೇಶ್ ಹೆಮ್ಮಾಡಿ ಅವರನ್ನು ಸನ್ಮಾನಿಸಲಾಯಿತು. ರೋಟರಿ ವಲಯ–2ರ ಸಹಾಯಕ ಗವರ್ನರ್ ರೋಟೇರಿಯನ್ ಟಿ. ಸುಧಾಕರ ಶೆಟ್ಟಿ ಅವರು ಮಾತನಾಡಿ, ಉತ್ತಮ ಶಿಕ್ಷಕರ ಮಾರ್ಗದರ್ಶನದಲ್ಲಿ ಯೋಗ ತರಗತಿಗಳು ಅತ್ಯುತ್ತಮವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನೂರಾರು ವರ್ಷಗಳ ಇತಿಹಾಸವಿರುವ ಯಕ್ಷಗಾನದ ಶ್ರೀಮಂತ ಪ್ರಕಾರವಾಗಿರುವ ಗೊಂಬೆಯಾಟವನ್ನು ಕಲಾ ಪ್ರೋತ್ಸಾಹಕರು ಪ್ರೇಕ್ಷಕರು ಜೊತೆಗೂಡಿ ಉಳಿಸಬೇಕಾಗಿದೆ. ಯಕ್ಷಗಾನ ವಿವಿಧ ಪ್ರಕಾರಗಳಿಗೆ ವಿಪುಲವಾದ ಅವಕಾಶಗಳಿದ್ದರೂ ಪಡುವಲಪಾಯ ಎಂದು ಕರೆಸಿಕೊಳ್ಳುವ ಈ ಜನಪದ ಕಲೆಯಲ್ಲಿ ಇಂದು ಎರಡೇ ಗೊಂಬೆಯಾಟ ತಂಡಗಳು ಉಳಿದುಕೊಂಡಿವೆ. ಯಕ್ಷಗಾನ ವಾಲ್ಮೀಕಿ ಎಂದು ಕರೆಸಿಕೊಂಡಿರುವ ಪಾರ್ತಿಸುಬ್ಬನ ವಂಶದವರಿಂದ ಪ್ರಾರಂಭವಾದ ಕಾಸರಗೋಡು ಗೋಪಾಲಕೃ? ಯಕ್ಷಗಾನ ಗೊಂಬೆಯಾಟ ತಂಡ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಕೋಟ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಬೆಂಗಳೂರಿನ ಯಕ್ಷದೇಗುಲ ಸಂಸ್ಥೆಯ ಸಂಯೋಜನೆಯಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಆಯೋಜಿಸಲಾದ ಯಕ್ಷಗಾನ ಗೊಂಬೆಯಾಟ ಉತ್ಸವವನ್ನು ಗೊಂಬೆಯ ಮೂಲಕ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಕಾರಂತ ಪ್ರತಿಷ್ಠಾನ ಕೋಟ ಇದರ ಅಧ್ಯಕ್ಷರಾದ ಆನಂದ ಸಿ. ಕುಂದರ್, ಉಡುಪಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನೀಲಾವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ವಿರುದ್ಧ ನಿಂದನಾತ್ಮಕ ಪದ ಬಳಸಿ, ಸಾರ್ವಜನಿಕರಲ್ಲಿ ದ್ವೇಷ ಹಾಗೂ ಅಭದ್ರತೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೋಟ ಬ್ಲಾಕ್ ಕಾಂಗ್ರೆಸ್ ಕೋಟ ಆರಕ್ಷಕ ಠಾಣೆಗೆ ದೂರು ನೀಡಿತು. ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಕೋಟ ಪೊಲೀಸ್ ಎ.ಎಸ್‌ಐ ಗೋಪಾಲ್ ಪೂಜಾರಿ ಅವರಿಗೆ ದೂರಿನ ಪ್ರತಿ ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಶಾಸಕರ ಭಾಷಣದ ವಿಡಿಯೋ ತುಣುಕುಗಳನ್ನು ಆಧರಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಗೋಪಾಲ್ ಬಂಗೇರ, ರಮೇಶ್ ಮೆಂಡನ್ ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಬುಧವಾರದಂದು ಗುರುಪೂರ್ಣಿಮೆಯನ್ನು   ಶ್ರದ್ಧಾ – ಭಕ್ತಿಯಿಂದ ಆಚರಿಸಲಾಯಿತು. ಶಾಲೆಯ ಸಹ ಶಿಕ್ಷಕರಾದ ರಾಮಕೃಷ್ಣ ಉಡುಪರು ಶಾಸ್ತ್ರೋಕ್ತವಾಗಿ ಮಂತ್ರಗಳನ್ನು ಪಠಿಸಿ ಆದಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆಯನ್ನು ನೆರವೇರಿಸುವುದರ ಜೊತೆಗೆ ಮಕ್ಕಳಿಗೆ ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಮಹತ್ವದ ಕುರಿತು ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗುರ್ವಷ್ಟಕ, ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿ ಗುರುವಿನ ಮಹಿಮೆಯನ್ನು ತಿಳಿಸಿಕೊಡುವ ಹಾಡನ್ನು ಹಾಡಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು. ಶಾಲೆಯಲ್ಲಿ ಈ ರೀತಿಯ ಆಚರಣೆಯು ವಿದ್ಯಾರ್ಥಿಗಳಲ್ಲಿ ಗುರುಭಕ್ತಿಯನ್ನು ತುಂಬಿ, ಸಾಂಸ್ಕೃತಿಕ ಮೌಲ್ಯಗಳ ಪರಿಚಯವನ್ನು ಮೂಡಿಸಿ ಶಿಸ್ತನ್ನು ಬೆಳೆಸಲು ಪೂರಕವಾಗಿರುತ್ತದೆ. ಈ ಸಂದರ್ಭದಲ್ಲಿ ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯವರಾದ ಹೇಮಮಾಲಿನಿ, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ನವದೆಹಲಿ: ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಲಭಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ‘ಇಂಡಿಯನ್ ಹ್ಯಾಬಿಟಾಟ್ ಸೆಂಟರ್’ನಲ್ಲಿ ಮಂಗಳವಾರ ನಡೆದ ‘Education Excellence Conference & Awards–2026’ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವರಾದ ಡಾ. ಸುಕಾಂತ್ ಮಜುಂದಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಈ ಗೌರವವನ್ನು ಪ್ರದಾನ ಮಾಡಿದರು. ʼFit India’ ಹಾಗೂ ‘School Grads’ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಈ ಸಮಾರಂಭದಲ್ಲಿ ದೇಶದ ಅತ್ಯಂತ ಆಯ್ದ ಕೆಲವು ಪ್ರಮುಖ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಈ ಪುರಸ್ಕಾರ ನೀಡಲಾಯಿತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಲ್ಪಾವಧಿಯಲ್ಲೇ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ, ಗುಣಮಟ್ಟದ ಬೋಧನೆ, ಕ್ರೀಡೆ, ಸಾಹಿತ್ಯ, ಸಂಸ್ಕೃತಿ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ನೀಡಿರುವ ಆದ್ಯತೆ ಮತ್ತು ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಂಸ್ಥೆಯ ಪರವಾಗಿ ಅಧ್ಯಕ್ಷರಾದ ಡಾ. ರಮೇಶ್…

Read More