Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕರ್ನಾಟಕ ರಾಜ್ಯ ಬರಹಗಾರರ ಸಂಘ ರಿ. ಹೂವಿನ ಹಡಗಲಿ ವತಿಯಿಂದ ಕೊಡಲ್ಪಡುವ ಕಾವ್ಯಶ್ರೀ ಪ್ರಶಸ್ತಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಹಾಗೂ ಲೇಖಕರಾದ ನರೇಂದ್ರ ಎಸ್. ಗಂಗೊಳ್ಳಿ ಆಯ್ಕೆಯಾಗಿರುತ್ತಾರೆ. ವೈವಿಧ್ಯಮಯ ವಿಚಾರಗಳ ಲೇಖಕರಾಗಿ ಗುರುತಿಸಿಕೊಂಡಿರುವ ಹಾಗು ಹೇಳದೆ ಹೋದ ಮಗಳಿಗೆ, ನಾಯಿ ನಾನು, ನಿಭ್ರತ, ರೂಮಿನೊಳಗಿಂದ ಸೇರಿದಂತೆ ಒಟ್ಟು ಏಳು ಕೃತಿಗಳನ್ನು ಹೊರತಂದಿರುವ ನರೇಂದ್ರ ಎಸ್ ಗಂಗೊಳ್ಳಿ ಅವರ ಮುಂದಿನ ಕೃತಿ ಅವಳ ಕೂಗು ಬಿಡುಗಡೆಯ ತಯಾರಿಯಲ್ಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್‌ನ್ನು ಮುಂಬರುವ ವರ್ಷದ ಜನವರಿಯಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು. ಈ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರವರ ಸ್ವಗೃಹದಲ್ಲಿ ನಡೆದ ಪ್ರಥಮ ಸಮಾಲೋಚನಾ ಸಭೆಯಲ್ಲಿ, ಈ ಬಾರಿ ಆಳ್ವಾಸ್ ನುಡಿಸಿರಿ ಹಾಗೂ ಆಳ್ವಾಸ್ ವಿರಾಸತ್ ಉತ್ಸವಗಳನ್ನು ಒಂದೇ ವೇಳೆಯಲ್ಲಿ ಅದ್ದೂರಿಯಾಗಿ ಆಯೋಜಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಪ್ರತಿವರ್ಷವೂ ಹೊಸ ಆಲೋಚನೆ, ಹೊಸ ಪರಿಕಲ್ಪನೆ ಮತ್ತು ಹೊಸ ತಲೆಮಾರಿನ ಭಾಗವಹಿಸುವಿಕೆಗೆ ಆದ್ಯತೆ ನೀಡುತ್ತಾ ಉತ್ಸವವನ್ನು ವಿಸ್ತರಿಸುತ್ತಿದ್ದೇವೆ. ಜನವರಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸುವುದರ ಜೊತೆಗೆ, ಯುವಜನತೆ, ಕನ್ನಡದ ಭವಿಷ್ಯ, ದೇಶೀಯತೆ, ಪರಿಸರ ಸಂರಕ್ಷಣೆ ಹಾಗೂ ಸಹಬಾಳ್ವೆಯಂತಹ ಸಮಕಾಲೀನ ವಿಷಯಗಳ ಕುರಿತು ಗಂಭೀರ ಚರ್ಚೆಗಳಿಗೆ ವೇದಿಕೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಸಮಾಜದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಕ್ಷ ಸಂಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಸದಾ ಮುಂಚೂಣಿಗೆ ನಿಲ್ಲುತ್ತದೆ. ಹಾಗೆಯೇ ಯುವ ಸಮುದಾಯದ ಬೆನ್ನಿ ಸದಾ ನಿಲ್ಲಲಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಭಾನುವಾರ ಸಾಲಿಗ್ರಾಮ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಯ್ಕೆಗೊಂಡ ಜಿ. ತಿಮ್ಮ ಪೂಜಾರಿ ಅವರ ಪದಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಯುವ ಸಮುದಾಯವನ್ನು ಕೇಂದ್ರ ಸರಕಾರ ನಿರ್ಲಕ್ಷಿಸಿದ ದೋರಣೆಯನ್ನು ಖಂಡಿಸಿ ಕಾಕ್ರೋಚ್ ಎಂಬ ಯುವ ಶಕ್ತಿಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಕೈಜೋಡಿಸಿ ಬದಲಾವಣೆಯ ಪರ್ವಕ್ಕೆ ಸಾಕ್ಷಿಯಾಗಿದೆ ಎಂದರಲ್ಲದೆ ಕೇಂದ್ರದ ನರೇಂದ್ರ ಮೋದಿ ಸರಕಾರ ನೀಟ್ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನು ಖಂಡಿಸಿದರು. ಸರಕಾರಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕೆ ವಿನಹ ಅವರ ಹಕ್ಕನ್ನು ಕಸಿಯುವ ಕಾರ್ಯ ಮಾಡಿದೆ. ಇನ್ನೊಂದೆಡೆ ಅಯೋಧ್ಯ ರಾಮನ ಹೆಸರಿನಲ್ಲಿ ಲೂಟಿ ಇಷ್ಟೆಲ್ಲ ನಡೆದರೂ ಮಾಧ್ಯಮಗಳು ಸ್ಪಷ್ಟ ವರದಿಗಾರಿಕೆಯನ್ನು ವಾಸ್ತವಾಂಶದ ಮೂಲಕ ವರದಿ ಪ್ರಕಟಿಸಬೇಕು ಎಂದು ಪತ್ರಿಕೋದ್ಯಮದಲ್ಲಿ ವಡ್ಡರ್ಸೆ ರಘುರಾಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೈಸೂರು ಸುತ್ತೂರು ಮಠದ ಪ್ರತಿಷ್ಠಿತ ಜೆ.ಎಸ್.ಎಸ್. ಮಹಾವಿದ್ಯಾಪೀಠದ ಅಧಿಕಾರಿಗಳಾದ ರವೀಶ್ ಮತ್ತು ರೇಣುಕಾಸ್ವಾಮೀ, ಜೆ.ಎಸ್.ಎಸ್. ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಮಧು, ಭೋಧಕರಾದ ತಮ್ಮಯ್ಯ, ವಿನೋದ್ ಕುಮಾರ್, ಕೋ ಆರ್ಡಿನೇಟರ್ ಭರತ್ ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಗೆ ಶ್ರೀಗಳ ಸೂಚನೆ ಮೇರೆಗೆ ಭೇಟಿ ನೀಡಿದರು. ಇಲ್ಲಿರುವ ಐರಿಸ್ ಎ.ಐ. ರೋಬೋ ಶಿಕ್ಷಕಿಯ ಕಾರ್ಯಶೈಲಿಯ ಬಗ್ಗೆ ತಿಳಿದುಕೊಂಡು ಅದನ್ನು ಅವರ ಶಿಕ್ಷಣ ಸಂಸ್ಥೆಗಳಲ್ಲಿ ಅನುಷ್ಠಾನ ಮಾಡುವ ಕುರಿತು ಯೋಜನೆ ರೂಪಿಸಿದ್ದು ಶಾಲೆಯ ಸಂಪೂರ್ಣ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ದೇವಾಡಿಗ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೈಂದೂರು ವಲಯದ ಮಾಜಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಉದಯ ಕುಮಾರ ಶೆಟ್ಟಿ, ರಾಜ್ಯ ಸರಕಾರಿ ನೌಕರರ ಸಂಘದ ಕುಂದಾಪುರ ತಾಲೂಕು ನಿರ್ದೇಶಕ ಪ್ರತಾಪ್ ಕುಮಾರ್ ಶೆಟ್ಟಿ, ಶಾಲಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸರ್ವರ ಮೂಲಕ ಸಮಾಜದ ಏಳಿಗೆ ಒಗ್ಗಟ್ಟಾಗಿ ಶ್ರಮಿಸಿದರೆ ಅಭಿವೃದ್ಧಿ ಸಾಧ್ಯವಿದೆ. ಗಳಿಕೆಯ ಹಣ ಟ್ರಸ್ಟ್ ಮೂಲಕ ಸದ್ವಿನಿಯೋಗವಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದು ವಿಶ್ವ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾದ ಶಶಿಧರ್ ನಾಯಕ್ ಹೇಳಿದರು. ಅವರು ಬೈಂದೂರು ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ ಇದರ ಹದಿನಾಲ್ಕನೆಯ ವರ್ಷದ ಟ್ರಸ್ಟ್ ದಿನಾಚರಣೆಯನ್ನು ಭಾನುವಾರ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಆಡಳಿತ ಟ್ರಸ್ಟ್ ಗಳಾದ ಬಿ. ರಾಮಕೃಷ್ಣ ಶೇರುಗಾರ್ ವಹಿಸಿ ಮಾತನಾಡಿ, ಟ್ರಸ್ಟಿಗೆ ದೇಣಿಗೆ ನೀಡಿದ ಹಣ ಸರಿಯಾದ ರೀತಿಯಲ್ಲಿ ವಿನಿಯೋಗ ಆಗಬೇಕು ಎಂಬುದು ನಮ್ಮ ಕಾಳಜಿ. ಆ ಮೂಲಕ ಸಮಾಜದಲ್ಲಿ ಅಗತ್ಯವುಳ್ಳವರಿಗೆ ನೆರವು ನೀಡಲು ಸಾಧ್ಯವಿದೆ.  ಟ್ರಸ್ಟ್ ಮೂಲಕ ಆರಂಭವಾದಗಲಿಂದ ಹಲವಾರು ಮಂದಿಗೆ ನೆರವು ನೀಡಲಾಗಿದೆ ಎಂದರು. ಈ ಸಂದರ್ಭ ಸುವರ್ಣ ವಾಹಿನಿ 2025ರ ಸ್ಟೇಟ್ ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್ ಪುರಸ್ಕೃತ ಡಾ. ಪ್ರಭಾಕರ ಹೆಚ್., ಮಾಹೆ ಮಣಿಪಾಲದ ಸಹ ಉಪಕುಲಪತಿ ಡಾ. ಕರುಣಾಕರ ಎ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಹಂಗಾರಕಟ್ಟೆ ಚೇತನಾ ಪ್ರೌಢಶಾಲೆಯಲ್ಲಿ ಸಂಸ್ಥಾಪನಾ ದಿನಾಚರಣೆ, ಚೇತನಾ ಶಾಲೆಯ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ, ಯಕ್ಷಗಾನ ತರಗತಿ ಉದ್ಘಾಟನಾ ಕಾರ್ಯಕ್ರಮವು ಜರಗಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಭರತ್ ಕುಮಾರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ ವಿದ್ಯಾರ್ಥಿ ಮಾರ್ಗದರ್ಶಿ ಬಿಡುಗಡೆ, ಐಡಿ ಕಾರ್ಡ್ ವಿತರಣೆ, ಯಕ್ಷಗಾನ ತರಗತಿ ಉದ್ಘಾಟನೆ, ಶಾಲಾ ಸರಕಾರ ಹಾಗೂ ವಿವಿಧ ಸಂಘಗಳನ್ನು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇದರ ಕಾರ್ಯದರ್ಶಿ ಮುರಳಿ ಕಡೆಕಾರ್ ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಿ ಈ ಪಂಚ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಿದರು. ಆಡಳಿತ ಮಂಡಳಿ, ಉಪಾಧ್ಯಕ್ಷ ಎ. ಜಗದೀಶ್ ಕಾರಂತ್ ಅವರು ಶಾಲಾ ಸಂಸ್ಥಾಪನ ದಿನದ ಕುರಿತು ಮಾತನಾಡಿದರು. ಫಾರ್ಚುನ್ ಕಾಲೇಜ್ ಚೇರ್ಮನ್ ತಾರಾನಾಥ ಶೆಟ್ಟಿ ವಿದ್ಯಾರ್ಥಿ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದರು. ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ. ರಾಜರಾಮ್ ಭಟ್ ಕೊಡಮಾಡಿದ ಐಡಿ ಕಾರ್ಡ್‌ಗಳನ್ನು ವಿದ್ಯಾರ್ಥಿಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯಪುಸ್ತಕದ ಶಿಕ್ಷಣಕ್ಕೆ ಸೀಮಿತವಾಗದೆ, ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಅವರ ಭವಿಷ್ಯಕ್ಕೆ ದಾರಿ ದೀಪವಾಗುವ ನಿಕಟಪೂರ್ವ ತರಬೇತಿಗಳನ್ನು ಆಯೋಜಿಸುವುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶ ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ‘ನಾಟಾʼ (NATA – National Aptitude Test in Architecture) ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಎಂಬುದು ಮುಗಿಯದ ಪಯಣ. ನಾವು ಎಷ್ಟೇ ಕಲಿತರೂ ಕಲಿಯುವುದು ಇನ್ನೂ ಇರುತ್ತದೆ. ಇಂದು ಡಿಸೈನ್, ವಾಸ್ತುಶಿಲ್ಪ ಮತ್ತು ಫ್ಯಾಷನ್ ರಂಗಗಳಲ್ಲಿ ಅಪಾರ ಅವಕಾಶಗಳಿವೆ. ವಿದ್ಯಾರ್ಥಿಗಳು ಇಂತಹ ತರಬೇತಿಗಳ ಮೂಲಕ ಸರ್ವತೋಮುಖವಾಗಿ ಸುಸಜ್ಜಿತರಾಗಬೇಕು. ಪಿಯುಸಿ ಹಂತದಲ್ಲೇ ಸಿಗುವ ಈ ರೀತಿಯ ವಿಶೇಷ ತರಬೇತಿಗಳು ನಿಮ್ಮ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ದಾರಿಯಾಗುತ್ತದೆ. ಕಾಲೇಜು ಒದಗಿಸುತ್ತಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಯುವ ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಶೈಕ್ಷಣಿಕ ಮಾನಸಿಕ ದೈಹಿಕ ಆರೋಗ್ಯವನ್ನು ಕಳೆದುಕೊಳ್ಳುತ್ತಿರುವ ಆಘಾತಕಾರಿ ಬೆಳವಣಿಗೆ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡು ಸತ್ಪ್ರಜೆಗಳಾಗಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್ ಹೇಳಿದರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಇದರ ಜಂಟಿ ಆಶ್ರಯದಲ್ಲಿ “ಡ್ರಗ್ಸ್ ಬೇಡ ಬ್ರೋ” ಅಭಿಯಾನ ದಡಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಶಾಮುಕ್ತದ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತೆ ಎಂ. ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ಬಿನ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಹಾಗೂ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸಾನಿಕ ಹಾಗೂ ನಿಸರ್ಗ ಪ್ರಾರ್ಥನೆಗೈದರು. ಕಾರ್ಯಕ್ರಮದ ಸಮನ್ವಯ ಅಧಿಕಾರಿ, ಉಪನ್ಯಾಸಕ ಪಿ. ಎ. ತೋಮಸ್ ಪ್ರಾಸ್ತಾವಿಕ ಮಾತುಗಳನ್ನಾನಾಡಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಈ ಬಾರಿ ಮಳೆ ಕೊರತೆಯ ಕಾರಣಕ್ಕೆ ಶೀಘ್ರವೇ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳು ಈಗಿನಿಂದಲೇ ಪರಿಸ್ಥಿತಿ ಎದುರಿಸಲು ಸಿದ್ದರಾಗಿರಬೇಕು. ಬೇಕಾದ ತಯಾರಿ ಮಾಡಿಕೊಳ್ಳಬೇಕು ಎಂದು ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶುಕ್ರವಾರ ಇಲ್ಲಿನ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಕುಂದಾಪುರ ವಿಧಾನಸಭ ಕ್ಷೇತ್ರ ವ್ಯಾಪ್ತಿಯ ಟಾಸ್ಕ್‌ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಕಳೆದ ಬಾರಿಯೂ ಅಂತಹ ನೀರಿನ ಸಮಸ್ಯೆ ಏನು ಇರಲಿಲ್ಲ. ಈ ಬಾರಿಯೂ ಕಾಣಿಸಲ್ಲ ಅನ್ನುವ ಭರವಸೆಯಿದೆ. ಬಹುತೇಕ ಎಲ್ಲ ಗ್ರಾಮ ಪಂಚಾಯಿತಿಗಳು ವಾರಾಹಿ ನೀರನ್ನೇ ಬೇಗ ಆಶ್ರಯಿಸಿದ್ದಾರೆ. ಆದಷ್ಟು ಬಾಕಿಯಿರುವ ಜೆಜೆಎಂ, ಅಮೃತ್ ಯೋಜನೆ ಕಾಮಗಾರಿ ಮುಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಕಾರ್ಯನಿರ್ವಹಿಸಿ, ನೀರಿನ ಕುರಿತಾದ ಬೇಡಿಕೆಗಳನ್ನು ಆದ್ಯತೆ ನೆಲೆಯಲ್ಲಿ ಬಗೆಹರಿಸಬೇಕು ಎಂದು ತಿಳಿಸಿದರು. ಆವರ್ಸೆಯಲ್ಲಿ 2 ಕಡೆ ಬೋರ್‌ವೆಲ್ ಬೇಡಿಕೆ, ಬೀಜಾಡಿ, ಗೋಪಾಡಿ, ತೆಕ್ಕಟ್ಟೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಭೆ ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮೋಹನ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ವೇಳೆ ಪ್ರಗತಿ ಪರಿಶೀಲನೆ ಮಾಡಿದ ಅಧ್ಯಕ್ಷರು, ಅನ್ನ ಭಾಗ್ಯ ಯೋಜನೆಯಡಿ ಇದುವರೆಗೆ 22313 ಬಿಪಿಎಲ್ ಫಲಾನುಭವಿಗಳಿಗೆ 477720 ಕ್ವಿಂಟಾಲ್ ಅಕ್ಕಿ ಹಾಗೂ 3219 ಅಂತ್ಯೋದಯ ಫಲಾನುಭವಿಗಳಿಗೆ 85525 ಕ್ವಿಂಟಾಲ್ ಅಕ್ಕಿ ವಿತರಿಸಿರುವ ಕುರಿತು ಪ್ರಗತಿ ಪರಿಶೀಲನೆ ಮಾಡಿದರು ನಂತರ ಶಿರೂರು ಹಡವಿನಕೋಣೆಯಲ್ಲಿ ಹೊಸದಾಗಿ ಪಡಿತರ ವಿತರಣಾ ಕೇಂದ್ರ ಆರಂಭಿಸಲು, ಮುಂದಿನ ವಾರದೊಳಗೆ ಅನುಮತಿ ಸಿಗುವುದಾಗಿ ಸಭೆಯಲ್ಲಿ ಅಧ್ಯಕ್ಷರು ತಿಳಿಸಿದರು. ಗೃಹ ಲಕ್ಷ್ಮಿ ಯೋಜನೆಯಡಿ ಫೆಬ್ರವರಿ ಮಾಹೆಯವರೆಗೆ ಫಲಾನುಭವಿಗಳ ಖಾತೆಗೆ ಅನುದಾನ ಜಮೆ ಆಗಿದ್ದು, ಎಪ್ರಿಲ್ ಮಾಹೆಯ ಗೃಹಲಕ್ಷ್ಮಿ ಅನುದಾನ ಜುಲೈ ಮಾಹೆಯಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಆಗಿರುವುದಾಗಿ ಹಾಗೂ ಮಾರ್ಚ ಮೇ ಜೂನ್ ಮಾಹೆಯ ಹಣ ಪಾವತಿಗೆ ಬಾಕಿ ಇರುವುದಾಗಿ ಅಧಿಕಾರಿಗಳು ನೀಡಿದ ಪ್ರಗತಿ ವರದಿಯನ್ನು…

Read More