ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುರಗಂಗಾ ಕಲಾ-ಸಾಹಿತ್ಯ ಮಹಿಳಾ ವೇದಿಕೆ ಕುಂದಾಪುರ ಆಯೋಜಿಸಿದ ಕರಾವಳಿ ಮಹಿಳಾ ಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ವಿಜಯಶ್ರೀ ಎಂ. ಹಾಲಾಡಿ ಅವರ ಮುಂಡಪ್ಪ ಮಾವಿನ ಮರʼ ಕಥೆ ಪ್ರಥಮ ಸ್ಥಾನ ಪಡೆದಿದೆ. ಪೂರ್ಣಿಮಾ ಹೆಗಡೆ ಅವರ ನಾಳೆಗಳನ್ನು ಬಿತ್ತಿದ ನಿನ್ನೆಗಳು’ಕಥೆ ದ್ವಿತೀಯ, ಶ್ರೀರಂಜಿನಿ ಅವರ ’ಮಂಜುಮಾಮಿಯ ಹೂದೋಟ’ಕಥೆ ತೃತೀಯ ಸ್ಥಾನ ಪಡೆದಿದೆ. ತೀರ್ಪುಗಾರರ ಮೆಚ್ಚುಗೆ ಪಡೆದ ಕಥೆಗಳು:ಶಾಂತಲಾ ರಾವ್ (ಮನೆಯೊಳಗೊಂದು ಮನೆ), ಭಾರತಿ ಮರವಂತೆ (ಗಂಗಿ) ಭವ್ಯ ಹಳೆಯೂರು (ಅವಳ ನಿರ್ಧಾರ), ಯಶಸ್ವಿನಿ ಶ್ರೀಧರ ಮೂರ್ತಿ (ಕಥೆಯ ಹೂವೊಂದು ಅರಳಿ), ನಿರ್ಮಲಾ ನಾಯಕ್ (ತನು ಸುಟ್ಟ ಬೂದಿಯಲ್ಲಿ ಪುನಃ ಹುಟ್ಟಿ) ಆಶಾ ಮಯ್ಯ ಪುತ್ತೂರು (ಟ್ರಂಕಿನೊಳಗಣ ಬೆಚ್ಚನೆ ಕನಸು). ಈ ಕಥಾಸ್ಪರ್ಧೆಯಲ್ಲಿ 125ಕ್ಕೂ ಹೆಚ್ಚು ಕಥೆಗಳು ಬಂದಿದ್ದವು. ತೀರ್ಪುಗಾರರಾಗಿ ಖ್ಯಾತ ಲೇಖಕರಾದ ಪ್ರೊ.ಉದಯಕುಮಾರ್ ಹುಬ್ಬು, ಡಾ.ಬಿ.ಜನಾರ್ದನ ಭಟ್ ಬೆಳ್ಮಣ್ಣು, ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಸಹಕರಿಸಿದ್ದರು. ಆಗಸ್ಟ್ 8ರಂದು ಶನಿವಾರ ಮಧ್ಯಾಹ್ನ 2.30ಕ್ಕೆ ಬಹುಮಾನ ವಿತರಣಾ ಕಾರ್ಯಕ್ರಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಿಕ್ಕಮಗಳೂರಿನ ಸೆಂಟ್ ಮೇರಿಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ನಡೆದ (CISCE)ವಲಯ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಪಂದ್ಯಾವಳಿಯಲ್ಲಿ ಶಾಲೆಯ 14 ವರ್ಷದ ಬಾಲಕಿಯರ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇವರಲ್ಲಿ ಶ್ರಾವಣಿ ಪಾಟೀಲ್, ವರ್ಷಿಣೀ ಐ ಪಿ, ಸನ್ನಿಧಿ ಬಿ, ಹೆಚ್ ಯಾಮಿನಿ, ಲಕ್ಷ್ಮಿ, ಆಷಾ ಎಸ್. ಎಲ್, ವೇದಶ್ರೀ, ಸಹನ ಎಸ್ ಕೆ, ಆರಾಧ್ಯಾ ಆರ್ ಹೆಚ್ ಎಂಬ ೯ ಜನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಹಾಗೆಯೇ, 14 ವರ್ಷದೊಳಗಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಇವರಲ್ಲಿ ವಿಕಾಸ್ ಗೌಡ, ಅಕುಲ್ ಡಿ ಜಿ, ಆಯುಷ್ ಹಿರೇಮಠ ಎಂಬ 3 ಜನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. 17 ವರ್ಷದೊಳಗಿನ ಬಾಲಕರ ತಂಡವು ತೃತೀಯ ಸ್ಥಾನವನ್ನು ಪಡೆದು ಕೊಂಡಿದೆ. ಇವರಲ್ಲಿ ಅಭಿಷೇಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಹಾಗೂ ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ, ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಕೋಡಿಗ್ರಾಮದಲ್ಲಿ ಮೂರನೇ ವರ್ಷದ ಪಂಚವರ್ಣ ಹಸಿರು ಹೆಜ್ಜೆ ಮನೆಗೊಂದು ಗಿಡ ನೆಡುವ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಕೋಡಿ ಹೊಸಬೇಂಗ್ರೆಯ ಕರ್ನಾಟಕ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊರಗ ಪೂಜಾರಿ ಮನೆಯಿಂದ ಮನೆಗೊಂದು ಪಾರಿಜಾತ, ಲಕ್ಷ್ಮಣ ಫಲ ಹಾಗೂ ವಿವಿಧ ಹಣ್ಣುಗಳ ಗಿಡ ನೆಡುವ ಕಾರ್ಯಕ್ರಮದ ಚಾಲನೆ ನೀಡಲಾಯಿತು. ಕಾರ್ಯಕ್ರಮ ಸಂಯೋಜಕರಾಗಿ ಅಂಗನವಾಡಿ ಕಾರ್ಯಕರ್ತೆ ಯಮುನಾ ಲಕ್ಶ್ಮಣ ಕುಂದರ್ ನೆರೆದಿದ್ದ ಪರಿಸರಾಸಕ್ತರಿಗೆ ಹಸಿರು ಹಸಿರು ಹೆಜ್ಜೆ ಮಹತ್ವ ತಿಳಿಸಿದರು. ಕಾರ್ಯಕ್ರಮ ಸಂಯೋಜಕರಾದ ಕೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷಗಳಾದ ಪ್ರಭಾಕರ್ ಮೆಂಡನ್, ಗೀತಾ ಖಾರ್ವಿ ಹಸಿರು ಮಹತ್ವ ಸಾರಿದರು.ಕೋಡಿ ಕನ್ಯಾನ ಅಂಗನವಾಡಿ ಕಾರ್ಯಕರ್ತೆ ಪ್ರೀತಿ ಎಸ್, ಸಮನ್ವಯ ಸಂಜೆವಿನಿ ಮಾಜಿ ಅಧ್ಯಕ್ಷೆ ದೀಪಾ ಆರ್ ಖಾರ್ವಿ, ಸ್ತ್ರೀ ಶಕ್ತಿ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಲಯನ್ಸ್ ಕ್ಲಬ್ ತೆಕ್ಕಟ್ಟೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಕುಂಭಾಶಿಯ ಗ್ರಾಯತ್ರಿ ಸಭಾಂಗಣದಲ್ಲಿ ಬುಧವಾರ ಜರುಗಿತು. ಪದಪ್ರದಾನ ಅಧೀಕಾರಿ MJF Ln ಹೃಷಿಕೇಶ್ ಹೆಗ್ಡೆ ಮತ್ತು ಜಿಲ್ಲಾ GAT ಆಫೀಸರ್ ಲಯನ್ ಅರುಣ್ ಹೆಗ್ಡೆ ಅವರ ನೇತೃತ್ವದಲ್ಲಿ ನೂತನ ಅಧ್ಯಕ್ಷರಾಗಿ ವಕ್ವಾಡಿ ಸಂಪತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ಅರುಣ್ ಶೆಟ್ಟಿ ಉಳ್ತೂರು ಮತ್ತು ಖಜಾಂಚಿಯಾಗಿ ಹೆಚ್. ಚಂದ್ರಕಾಂತ್ ಶೆಟ್ಟಿ ಮತ್ತು ಪದಾಧಿಕಾರಿಗಳ ತಂಡ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಲಯ II ರ ವಲಯಾಧ್ಯಕ್ಷರಾದ ಲಯನ್ ಪ್ರವೀಣ್ ಹೆಗ್ಡೆ ಬನ್ನಾಡಿ, ಪ್ರಾಂತ್ಯ 2ರ ಪ್ರಾಂತ್ಯಾಧ್ಯಕ್ಷರಾದ ಲಯನ್ ಸರಸ್ವತಿ ಜಿ. ಪುತ್ರನ್, ಕಾರ್ಯದರ್ಶಿ ಲಯನ್ ಆಶಾ ಶಿವರಾಮ ಶೆಟ್ಟಿ, ಎಕ್ಸ್ಟೆಂಶನ್ ಚೇರ್‌ಪರ್ಸನ್ ಮಲ್ಯಾಡಿ ಸೀತಾರಾಮ ಶೆಟ್ಟಿ, ಮುಖ್ಯಅತಿಥಿಯಾಗಿ ಆಗಮಿಸಿದ ಗೌತಮ್ ಶೆಟ್ಟಿ ಟಾರ್ಪೊಡಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಲಯನ್ ಕೆ. ಸೀತಾರಾಮ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. 2025-26ನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾದಕ ದ್ರವ್ಯಗಳ ಸೇವನೆಯು ಯುವಜನತೆಯ ಭವಿಷ್ಯ, ಆರೋಗ್ಯ ಹಾಗೂ ಕುಟುಂಬ ವ್ಯವಸ್ಥೆಯ ಮೇಲೆಯೇ ತೀವ್ರ ಹಾನಿ ಉಂಟು ಮಾಡುತ್ತದೆ. ದುರಭ್ಯಾಸಗಳಿಗೆ ಬಲಿಯಾಗದೆ, ‘ನೋ’ ಹೇಳುವ ಧೈರ್ಯ ಬೆಳೆಸಿಕೊಂಡು ಯುವಜನತೆ ಮಾದಕ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕುಂದಾಪುರದ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್ ಕರೆ ನೀಡಿದರು. ಅವರು ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಕುಂದಾಪುರ, ಬಾರ್ ಅಸೋಸಿಯೇಷನ್ ರಿ. ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ (ಕಂಡ್ಲೂರು) ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮ-2026 ಅನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಾದಕ ವ್ಯಸನವೆಂಬ ಸೈಲೆಂಟ್ ಕಿಲ್ಲರ್‌ನಿಂದ ಯುವ ಜನತೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಳೆಗಾಲದಲ್ಲಿ ಮಲೇರಿಯಾ ಡಂಗ್ಯೂ ಅಂತಹ ಸೊಳ್ಳೆಗಳ ಮೂಲಕ ಹರಡುವ ರೋಗದಿಂಗ ಜಾಗೃತಿ ವಹಿಸಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಅಗತ್ಯತೆಗಳನ್ನು ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಅವರು ಬುಧವಾರ ಪಂಚಾಯತ್ ಸಭಾಂಗಣದಲ್ಲಿ ಪಾಂಡೇಶ್ವರ ಗ್ರಾಮ ಪಂಚಾಯತ್‌ನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯಡಿ 2025-26ನೇ ಸಾಲಿನ ಸಾಮಾಜಿಕ ಪರಿಶೋಧನೆಗೆ ಸಂಬಂಧಿಸಿದ ವಿಶೇಷ ಗ್ರಾಮ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಸ್ತುತ ಸಾಂಕ್ರಾಮಿಕ ರೋಗಗಳು ನಿಯಂತ್ರಣದಲ್ಲಿದ್ದು ಆಸ್ಪತ್ರೆಗಳ ಸಮ್ಮುಖದಲ್ಲಿ ನಡೆಯುವ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆಯಿರಿ ಎಂದು ಜನಸಂಖ್ಯಾ ನಿಯಂತ್ರಣ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಬ್ರಹ್ಮಾವರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಜಯನಾರಾಯಣ ನಾಯ್ಕ್ ಅಧ್ಯಕ್ಷತೆಯನ್ನು ವಹಿಸಿದ್ದರು. ತಾಲೂಕು ಸಂಯೋಜಕ ಹುಸೇನಸಾಬ ಕರನಾಚಿ ವಿ.ಬಿ ರಾಮ್ ಜಿ. ಉದ್ಯೋಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ವತಿಯಿಂದ ಇಲ್ಲಿನ ಮ್ಯಾಂಗನೀಸ್ ರಸ್ತೆಯ ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಮಕ್ಕಳಿಗೆ ಕಲಿಕೆಯ ಪರಿಕರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷ ಗೋಪಾಲ ಪೂಜಾರಿ, ಉಪಾಧ್ಯಕ್ಷೆ ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ಯ, ನಾಗಭೂಷಣ ಶೇಟ್, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಅಂಗನವಾಡಿ ಕೇಂದ್ರದ ಸಹಾಯಕಿ ಸೀಮಾ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಸಂಗೀತ ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಇಂಜಿನಿಯರಿಂಗ್ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ (Student Induction Programme) ಬುಧವಾರದಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದ ಆರಾಕಲ್ (Oracle) ಸಂಸ್ಥೆಯ ಹೆಚ್.ಆರ್. ಅಲೆಕ್ಸಾಂಡರ್ ಆರ್, “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಉದ್ಯೋಗಗಳು ನಷ್ಟವಾಗುವುದಿಲ್ಲ. ಬದಲಿಗೆ ಅದನ್ನು ಸರಿಯಾಗಿ ಬಳಸಿಕೊಳ್ಳಲು ತಿಳಿದಿರುವವರು ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೇವಲ ಸಂವಹನ ನಡೆಸುವುದಷ್ಟೇ ಅಲ್ಲದೆ, ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವ ಕೌಶಲ್ಯ ಹಾಗೂ ನಿರಂತರ ಕಲಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಸಂಸ್ಥೆಯ ಧ್ಯೇಯೋದ್ದೇಶಗಳನ್ನು ವಿವರಿಸಿ, “ಸಮಾಜದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಜಿನಿಯರಿಂಗ್ ಶಿಕ್ಷಣ ಅತ್ಯಗತ್ಯ. ವಿದ್ಯಾರ್ಥಿಗಳು ಉತ್ತಮ ಇಂಜಿನಿಯರ್ ಆಗಿ ಹೊರಹೊಮ್ಮಿ ಸಮಾಜಕ್ಕೆ ಸಕಾರಾತ್ಮಕ ಕೊಡುಗೆ ನೀಡಬೇಕು” ಎಂದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ಪ್ರಕಟಗೊಂಡ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ತಾಲೂಕಿನ ಕೆಂಚನೂರಿನ ಸಾಧಕ, ಉಪನ್ಯಾಸಕ, ಬರಹಗಾರ ಡಾ. ಪ್ರದೀಪ್ ಕುಮಾರ ಶೆಟ್ಟಿ ಅವರಿಗೆ ಸ್ವರ್ಣಕಮಲ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಅವರ ಬರಹ ‘ನಾನಿರುವುದು ನಮಗಾಗಿ ನಾಡಿರುವುದು ನಮಗಾಗಿ- ಕನ್ನಡ ಸಿನಿಮಾದ ತತ್ವ ಮತ್ತು ರಾಜಕೀಯ’ ಕೃತಿಯು ಅತ್ಯುನ್ನತ ಪ್ರಶಸ್ತಿ ಗೆದ್ದುಕೊಂಡಿದೆ. ಚಲನಚಿತ್ರ ಕುರಿತ ಅತ್ಯುತ್ತಮ ಕೃತಿಗೆ ನೀಡಲಾಗುವ ಈ ಪ್ರಶಸ್ತಿಯು ಕನ್ನಡ ಸಾಹಿತ್ಯ ಲೋಕಕ್ಕೆ ಅಷ್ಟೇ ಅಲ್ಲ ಕರಾವಳಿಗೆ ಸಂದ ಬಹುದೊಡ್ಡ ಗೌರವಾಗಿದೆ. ಮಂಗಳೂರು ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪ್ರದೀಪ್ ಅವರು, ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ‘ಕನ್ನಡ ಸಿನಿಮಾದ ಸೈದ್ಧಾಂತಿಕತೆ ಮತ್ತು ಸಾಂಸ್ಕೃತಿಕ ಪ್ರಶ್ನೆಗಳು’ ವಿಷಯದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಪ್ರಸ್ತುತ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುಣೆಯ ಪ್ರತಿಷ್ಠಿತ ಎಫ್ ಟಿಐಐ ನಿಂದ ಫಿಲ್ಡ್ ಅಫ್ರಿಸಿಯೇಶನ್ ಕೋರ್ಸ್, ಕೋಲೊತ್ತಾದ ಎಸ್‌ಆರ್‌ಎಫ್‌ಟಿಐಐ ನಿಂದ ಧ್ವನಿ ಕೋರ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ,.ಮೂಡುಬಿದಿರೆ: ದೇಶದ ಯುವಜನರ ಉದ್ಯೋಗ ಕನಸುಗಳಿಗೆ ಬಲ ತುಂಬುತ್ತಿರುವ ರಾಜ್ಯದ ಪ್ರತಿಷ್ಠಿತ ಉಚಿತ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ-2026’ರ 16ನೇ ಆವೃತ್ತಿ ಆ.7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2007ರಿಂದ ನಿರಂತರವಾಗಿ ಆಯೋಜಿಸಲಾಗುತ್ತಿರುವ ಆಳ್ವಾಸ್ ಪ್ರಗತಿ, ಉದ್ಯೋಗಾಕಾಂಕ್ಷಿಗಳು ಮತ್ತು ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಕಂಪನಿ ಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ವಿಶ್ವಾಸಾರ್ಹ ಉದ್ಯೋಗ ಮೇಳವಾಗಿ ಗುರುತಿಸಿಕೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಮಾಜಿಕ ಹೊಣೆಗಾರಿಕೆ ಯೋಜನೆಯ ಅಂಗವಾಗಿ ಈ ಮೇಳವನ್ನು ಸಂಪೂರ್ಣ ಉಚಿತ ವಾಗಿ ಆಯೋಜಿಸಲಾಗುತ್ತಿದ್ದು, ಗ್ರಾಮೀಣ ಹಾಗೂ ಹಿಂದುಳಿದ ಭಾಗಗಳ ಯುವಜನರಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದರು. ಈ ವರ್ಷದ ಉದ್ಯೋಗ ಮೇಳದಲ್ಲಿ ಈಗಾಗಲೇ 276ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಸುಮಾರು…
