ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕನ್ನಡ ಭಾಷೆಯ ಬಗ್ಗೆ ನಮಗಿರುವ ಅಭಿಮಾನ ಕೇವಲ ಘೋಷಣೆಗಳಿಗೆ ಸೀಮಿತವಾಗಬಾರದು. ಅದು ನಮ್ಮ ಆಲೋಚನೆ, ಮಾತು ಮತ್ತು ನಡವಳಿಕೆಯಲ್ಲಿ ಪ್ರತಿಫಲಿಸಬೇಕು. ಇಂದು ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ. ಕನ್ನಡವನ್ನು ಉಳಿಸುವ ಬಗ್ಗೆ ಮಾತನಾಡುವುದಕ್ಕಿಂತ ಅದನ್ನು ದಿನನಿತ್ಯದ ಬದುಕಿನಲ್ಲಿ ಬಳಸುವ ಮೂಲಕ ಬೆಳೆಸುವ ಅಗತ್ಯವಿದೆ ಎಂದು ಚಿಂತಕ ಅರವಿಂದ ಚೊಕ್ಕಾಡಿ ಅಭಿಪ್ರಾಯಪಟ್ಟರು. ಅವರು ಭಾನುವಾರ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಕನ್ನಡ ಸಂಘ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ನವೆಂಬರ್ 1 ಕನ್ನಡ ರಾಜ್ಯೋತ್ಸವವಲ್ಲ. ಕರ್ನಾಟಕ ರಾಜ್ಯೋತ್ಸವ. ಕರ್ನಾಟಕ ರಾಜ್ಯದ ರಚನೆಯ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ. ಭಾಷೆಯೊಂದಕ್ಕೆ ನಿರ್ದಿಷ್ಟವಾಗಿ ಉದಯವಾದ ದಿನ ಎಂಬುದಿಲ್ಲ. ಕನ್ನಡಕ್ಕೆ ಸುಮಾರು ಎರಡರಿಂದ ಎರಡೂವರೆ ಸಾವಿರ ವರ್ಷಗಳ ದಾಖಲಿತ ಇತಿಹಾಸವಿದ್ದು, ಅದಕ್ಕೂ ಹಿಂದಿನ ಅಸ್ತಿತ್ವವೂ ಇದ್ದಿರಬಹುದು. ಹೀಗಾಗಿ ರಾಜ್ಯೋತ್ಸವದ ಆಚರಣೆಯನ್ನು ಭಾಷೆಯ ಇತಿಹಾಸ ಮತ್ತು ರಾಜ್ಯದ ಅಸ್ಮಿತೆಯ ವಿಶಾಲ ಹಿನ್ನೆಲೆಯಲ್ಲಿ ಅರ್ಥಮಾಡಿಕೊಳ್ಳಬೇಕು. ಹಲವು ಭಾಷೆಗಳನ್ನು ಕಲಿಯುವುದು ಒಳ್ಳೆಯ ಬೆಳವಣಿಗೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ವಹಿಸಿದ್ದರು. ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಕನ್ನಡ ಭಾಷೆಯ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕನ್ನಡ ಶಿಕ್ಷಕ ಮಹಾದೇವ ಅವರು ಕನ್ನಡ ಭಾಷೆಯ ಇತಿಹಾಸ, ಕರ್ನಾಟಕದ ಏಕೀಕರಣದ ಮಹತ್ವ ಹಾಗೂ ಕನ್ನಡಿಗರ ಅಭಿಮಾನ ಮತ್ತು ಸ್ವಾಭಿಮಾನದ ಕುರಿತು ಭಾಷಣ ಮಾಡಿದರು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯನ್ನು ತಿಳಿಸಿದರು. ಶಾಲಾ ಸಂಯೋಜಕರಾದ ಸುಬ್ರಮಣ್ಯ ಮಾರಾಟಿ ಹಾಗೂ ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ ರಾಘವೇಂದ್ರ ಬಿಲ್ಲವ, ಬೋಧಕ – ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕಿ ಶ್ವೇತಾ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕನ್ನಡ ಶಿಕ್ಷಕಿ ಸುಜಾತಾ ಅವರು ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಾಲಕಿಯರ ಪ್ರೌಢಶಾಲೆ ಅಜ್ಜರಕಾಡು, ಉಡುಪಿ ಇವರ ವತಿಯಿಂದ ಅಜ್ಜರಕಾಡು ಈಜುಕೊಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ 6ನೇ ತರಗತಿ ವಿದ್ಯಾರ್ಥಿನಿಯರಾದ ಆದ್ಯ ಎಸ್. ಕಿರಣ್ ಅವರು 50 ಮೀಟರ್ ಬೆಸ್ಟ್ ಸ್ಟ್ರೋಕ್ನಲ್ಲಿ ದ್ವಿತೀಯ ಸ್ಥಾನ ಮತ್ತು 50 ಮೀಟರ್ ಫ್ರೀ ಸ್ಟೈಲ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಹಾಗೆಯೇ ಅದಿತಿ ತಂತ್ರಿ ಅವರು 50 ಮೀಟರ್ ಬೆಸ್ಟ್ ಸ್ಟ್ರೋಕ್ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಸಾಧನೆಗೈದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್ಗಳನ್ನು ಸಂಗ್ರಹ ಮಾಡಲಾಗುತ್ತದೆ. ಅದಕ್ಕನುಗುಣವಾಗಿ ರಸ್ತೆಯಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಅವುಗಳ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರುಗಳಿಗೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ-66 ರ ಕೋಟ, ಪಡುಬಿದ್ರೆ, ತೆಕ್ಕಟ್ಟೆ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಸರಣಿ ಅಪಘಾತಗಳು ನಡೆಯುತ್ತಿರುವ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾವು-ನೋವುಗಳು ಉಂಟಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರು ಟೋಲ್ ಸಂಗ್ರಹವನ್ನು ಮಾಡುವುದೊಂದೆ ತಮ್ಮ ಗುರಿಯಾಗಿಸಿಕೊಂಡರೆ ಸಾಲದು. ಟೋಲ್ ವಸೂಲಿಯೊಂದಿಗೆ ನಿಯಮಾನುಸಾರ ರಾ. ಹೆದ್ದಾರಿಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರೊಂದಿಗೆ ಅಪಘಾತಗಳು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷಗಾನ ರಾಜಕಲೆಯಾಗಿ ಹೊರಹೊಮ್ಮಿದ್ದು ಸರಕಾರ ಇದನ್ನು ವಿಶೇಷವಾಗಿ ಗುರುತಿಸಿ ನಾಟಕ ಸೇರಿದಂತೆ ವಿವಿಧ ಕಲೆಗೆ ನೀಡಲಾಗುವ ಮಾನ್ಯತೆ ನೀಡಬೇಕು ಎಂದು ಯಕ್ಷಗಾನ ವಿಮರ್ಶಕ ಎಂ.ಎಸ್. ಸಾಮಗ ಹೇಳಿದರು. ಅವರು ಶುಕ್ರವಾರ ಗುಂಡ್ಮಿ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಇಲ್ಲಿ ಒಂದು ವಾರಗಳ ಯಕ್ಷ ಸಪ್ತಾಹ ಕಾಳಗೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಯಕ್ಷಗಾನಕ್ಕೆ ಯುನಿವರ್ಸಿಟಿ ಮಟ್ಟದಲ್ಲಿ ಗುರುತಿಸಿಕೊಂಡಿದೆ ಇಂತಹ ಕಲೆಯ ತನ್ನ ಚೌಕಟ್ಟನ್ನು ಮೀರದೆ ಅದರ ಪರಂಪರೆಯನ್ನು ಉಳಿಸಿ ಮುಂದಿನ ತಲೆಮಾರಿಗೆ ಕೊಂಡ್ಯೋಯುವ ಕಾರ್ಯ ಆಗಲಿ ಈ ದಿಸೆಯಲ್ಲಿ ಯಕ್ಷಗಾನ ಕಲಾಕೇಂದ್ರ ಹಲವಾರು ಕಲಾವಿದರನ್ನು ಧಾರೆ ಎರೆಯುವ ಮೂಲಕ ಯಕ್ಷಗಾನ ನೈಜ ಪರಂಪರೆಗೆ ಸಾಕ್ಷಿಯಾಗಿದೆ ಎಂದರು. ಸಭೆಯಲ್ಲಿ ವೈದ್ಯರಾದ ಡಾ. ಭಾರ್ಗವಿ ಐತಾಳ್, ನಿವೃತ್ತ ಬ್ಯಾಂಕ್ ಅಧಿಕಾರಿ ಮಂಜುನಾಥ್ ಉಪಾಧ್ಯಾ ಉಪಸ್ಥಿತರಿದ್ದರು. ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ವಿಭಾವನ್ ಹೇರ್ಳೆ ನಿರೂಪಿಸಿದರು.ವೆಂಕಟೇಶ ಕ್ರಮಾಧಾರಿ ವಂದಿಸಿದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಕೋಟದ ಪಂಚವರ್ಣ ಕಲಾತಂಡದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ನವೋನ್ಮೇಶ’ ರಾಜ್ಯ ಮಟ್ಟದ ವಿಜ್ಞಾನ, ವಾಣಿಜ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವದ ಸಮಾರೋಪ ಸಮಾರಂಭವು ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಖ್ಯಾತ ಚಲನಚಿತ್ರ ನಟ ವಜ್ರಂಗ್ ಶೆಟ್ಟಿ ಅವರು ಭಾಗವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೋರಿದ ಉತ್ಸಾಹವನ್ನು ಶ್ಲಾಘಿಸಿದರು ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭಕೋರಿದರು. ಈ ಬಾರಿಯ ‘ನವೋನ್ಮೇಶ’ ಫೆಸ್ಟ್ನಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮಂಗಳೂರಿನ ಕೆನರಾ ವಿಕಾಸ್ ಪಿಯು ಕಾಲೇಜಿನ ತಂಡವು ಸಮಗ್ರ ಚಾಂಪಿಯನ್ (Winner) ಪಟ್ಟವನ್ನು ಮುಡಿಗೇರಿಸಿಕೊಂಡಿತು. ಉಡುಪಿಯ ಎಂಜೆಎಂ ಪಿಯು ಕಾಲೇಜಿನ ತಂಡವು ಪ್ರಥಮ ರನ್ನರ್ ಅಪ್ ಹಾಗೂ ಕುಂದಾಪುರದ ಶ್ರೀ ವೆಂಕಟರಮಣ ಪಿಯು ಕಾಲೇಜ್ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಖ್ಯಾತ ಚಲನಚಿತ್ರ ನಟ ವಜ್ರಂಗ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಚರ್ಮ ಕುಶಲಕರ್ಮಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಡಿ ಸ್ವಾವಲಂಬಿ / ಸಂಚಾರಿ ಮಾರಾಟ ಮಳಿಗೆ, ನೇರಸಾಲ ಯೋಜನೆ, ಚರ್ಮಶಿಲ್ಪ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಹಾಗೂ ಮಾರುಕಟ್ಟೆ ಸಹಾಯ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಯೋಜನೆಯ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು ಮೊ.ನಂ: 9980431954 ಹಾಗೂ 6362891017, ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ: 9482300400 ಅಥವಾ ನಿಗಮದ ವೆಬ್ಸೈಟ್ http://lidkar.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ಸಂಯೋಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಮಾಂಡ್ ಸೊಭಾಣ್ ಸಂಸ್ಥೆಯ ಮುಂದಾಳತ್ವದಲ್ಲಿ ನವೆಂಬರ್ 3ರಿಂದ 15ರವರೆಗೆ ಮಂಗಳೂರಿನ ಟೌನ್ ಹಾಲ್ನಲ್ಲಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾಮೇಳ ಆಯೋಜಿಸಲಾಗಿದೆ. ಕೊಂಕಣಿ ಭಾಷೆ ಮತ್ತು ಸಂಗೀತ ಕ್ಷೇತ್ರದಲ್ಲಿ ವಿಶ್ವಮಟ್ಟದ ಹೊಸ ಇತಿಹಾಸ ನಿರ್ಮಿಸುವ ಉದ್ದೇಶದಿಂದ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ಕಾಲ ನಿರಂತರ ಸಮೂಹ ಗಾಯನ ನಡೆಸುವ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನವನ್ನು ಹಮ್ಮಿಕೊಳ್ಳಲಾಗಿದೆ. ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮದಲ್ಲಿ 300 ಗಾಯನ ತಂಡಗಳು ಭಾಗವಹಿಸಲಿದ್ದು, ಪ್ರತಿಯೊಂದು ತಂಡಕ್ಕೂ ಒಂದು ಗಂಟೆಯ ಗಾಯನದ ಅವಕಾಶ ನೀಡಲಾಗಿದೆ. ಒಟ್ಟು 6,789ಕ್ಕೂ ಅಧಿಕ ಗಾಯಕರು, 250ಕ್ಕೂ ಅಧಿಕ ಸಂಗೀತ ನಿರ್ದೇಶಕರ 4,500ಕ್ಕೂ ಅಧಿಕ ಹಾಡುಗಳನ್ನು ಪ್ರಸ್ತುತಪಡಿಸಲಿದ್ದಾರೆ. ವಿಶ್ವ ಕೊಂಕಣಿ ಕಲಾರತ್ನ ಎರಿಕ್ ಬಾಬ್ ಓಜಾರಿಯೋ ಅವರಿಗೆ ಗೌರವ ಸಮರ್ಪಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಸಂಗೀತ ಮಹಾಮೇಳವು ಕೊಂಕಣಿ ಭಾಷೆ, ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸುವ ಮಹತ್ವದ ವೇದಿಕೆಯಾಗಲಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆಡಳಿತವನ್ನು ಜನರ ಮನೆಬಾಗಿಲಿಗೆ ಕರೆದೊಯ್ಯುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರವು ಮಹತ್ವಾಕಾಂಕ್ಷಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಪ್ರಾರಂಭಿಸಿದೆ. ಜನಸಾಮಾನ್ಯರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿಯಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಮಣಿಪುರ ಗ್ರಾಮದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಉಡುಪಿ ಇವರ ವತಿಯಿಂದ ನಡೆದ ಉಡುಪಿ ತಾಲೂಕು ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರ ಸೇವೆಯನ್ನು ಮಾಡುವುದರೊಂದಿಗೆ ಸಮಾಜದ ಋಣ ತೀರಿಸಲು ಭಗವಂತ ಅವಕಾಶ ಮಾಡಿಕೊಟ್ಟಿದ್ದಾನೆ. ಸಮಾಜದಲ್ಲಿ ನೊಂದವರು, ಬೆಂದವರು, ಅಸಹಾಯಕರು ಇರುತ್ತಾರೆ. ಅವರುಗಳ ಸಮಸ್ಯೆಗಳನ್ನು ಹಗುರವಾಗಿ ಭಾವಿಸದೇ ಪ್ರಜೆಗಳ ಸೇವೆಯೇ ಪರಮಾತ್ಮನ ಸೇವೆ ಎಂಬ ಭಾವನೆಯಿಂದ ಕೆಲಸ ಮಾಡೋಣ ಎಂದರು. ಈವರೆಗೆ ನಡೆದ ಸಭೆಗಳಲ್ಲಿ ಸಾಮಾನ್ಯವಾಗಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳು ನಿಂತು ಹೋಗಿದೆ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ನಾಡು, ನುಡಿ, ಸಾಹಿತ್ಯ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಇಲ್ಲಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ಸಿರಿನುಡಿ ಸಂಭ್ರಮ’ಕಾರ್ಯಕ್ರಮವು ಅತ್ಯಂತ ಸಂಭ್ರಮ-ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. “ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಕನ್ನಡವನ್ನು ಕೇವಲ ಒಂದು ಭಾಷೆಯಾಗಿ ಕಲಿಯದೆ, ಪ್ರೀತಿಸಿ, ಗೌರವಿಸಿ, ದೈನಂದಿನ ಬದುಕಿನಲ್ಲಿ ಹೆಮ್ಮೆಯಿಂದ ಬಳಸಬೇಕು” ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿದ್ದ ಟ್ರಸ್ಟ್ನ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, “ಕನ್ನಡ ರಾಜ್ಯೋತ್ಸವದ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ವರ್ಷವಿಡೀ ಭಾಷೆಯ ಬೆಳವಣಿಗೆ ಹಾಗೂ ಪ್ರಚಾರಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು” ಎಂದರು. ಕಾಲೇಜಿನ ಪ್ರಾಂಶುಪಾಲ…
