ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ಆಶ್ರಯದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳದ ಸಂಸ್ಥೆಗಳ ಆವರಣದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ಕೆಸರಲ್ಲೊಂದಿನ ಕಾರ್ಯಕ್ರಮವನ್ನು ತಂತ್ರಾಡಿಯ ಶ್ರೀ ಚಿಕ್ಕು ಅಮ್ಮ ದೇವಸ್ಥಾನದ ಎದುರುಗಡೆ ಇರುವ ಕೆಸರುಗದ್ದೆಯಲ್ಲಿ ನಡೆಸಲಾಯಿತು. ಎನ್. ಎಸ್. ಎಸ್ ಸ್ವಯಂ ಸೇವಕರು ವಿಶಾಲಗದ್ದೆಯಲ್ಲಿ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಆಡುವ ಮೂಲಕ ಗ್ರಾಮಸ್ಥರ ಮನಗೆದ್ದರು. ಮಂದಾರ್ತಿ ದೇವಾ ಸಹಕಾರಿ ಸಂಘ, ಮಂದಾರ್ತಿ ಇದರ ನಿರ್ದೇಶಕರಾದ ಪ್ರವೀಣ್ ಶೆಟ್ಟಿ ಚಾವಡಿಮನೆ ಉದ್ಘಾಟಿಸಿದರು. ಶ್ರೀ ದುರ್ಗಾಪರಮೇಶ್ವರಿ ದೇವಳದ ಪದವಿಪೂರ್ವ ಕಾಲೇಜು ಮಂದಾರ್ತಿ ಇದರ ಪ್ರಾಕ್ತನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಯುವ ಯಕ್ಷಗಾನ ಪ್ರಸಂಗಕರ್ತ ನಂದೀಶ್ ಶೆಟ್ಟಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾl ಕೆ. ಉಮೇಶ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಪದವಿ ಪೂರ್ವ ಕಾಲೇಜು ಮಂದಾರ್ತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಹಾಗೂ ಯೋಗ ತರಬೇತುದಾರರಾದ ಭಾರತಿ ಎಂ. ಬಿಜೂರು ಅವರಿಗೆ ರೋಟರಿ ಬೆಂಗಳೂರು ಗ್ಲೋಬಲ್ ಯೋಗ ವತಿಯಿಂದ ರಾಷ್ಟ್ರಮಟ್ಟದ ಯೋಗ ಜ್ಯೋತಿ ಅವಾರ್ಡ್ 2026 ಲಭಿಸಿದೆ. ಶಿಕ್ಷಕಿ ಭಾರತಿ ಎಂ. ಬಿಜೂರು ಅವರಿಗೆ ಬೆಂಗಳೂರಿನ ಪುಟ್ಟಣ್ಣ ಶೆಟ್ಟಿ ಟೌನ್ ಹಾಲ್‌ನಲ್ಲಿ ಆಯೋಜಿಸಿದ ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ 2026 ಇದರಲ್ಲಿ ಇವರು ಶಾಲೆಯ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ನೀಡಿದ ಯೋಗ ಸಾಧನೆಯನ್ನು ಗುರುತಿಸಿ ಯೋಗ ಜ್ಯೋತಿ ಅವಾರ್ಡ್ ನೀಡಿ ಗೌರವಿಸಲಾಯಿತು. ಇದನ್ನೂ ಓದಿ – ಯೋಗ ಸಂಘಟಕ ಮಂಜುನಾಥ್ ಬಿಜೂರು ಅವರಿಗೆ ಲೈಫ್ ಟೈಮ್ ಅಚಿವ್‌ಮೆಂಟ್ ಇನ್ ಯೋಗ ಅವಾರ್ಡ್- https://kundapraa.com/?p=103674 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಮಂಗಳೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು. ತಲಪಾಡಿಯ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಳ್ವಾಸ್ ತಂಡವು ಎಸ್‌ಡಿಎಂ ಕಾಲೇಜ್ ಆಫ್ ನ್ಯಾಚುರೋಪಥಿ ತಂಡವನ್ನು 34–16 ಅಂಕಗಳ ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಆರಂಭದಿಂದಲೇ ಉತ್ತಮ ಆಟ ಪ್ರದರ್ಶಿಸಿದ ಆಳ್ವಾಸ್ ತಂಡವು ಸಂಘಟಿತ ದಾಳಿ, ಪರಿಣಾಮಕಾರಿ ರಕ್ಷಣಾ ತಂತ್ರ ಹಾಗೂ ಉತ್ತಮ ತಂಡದ ಹೊಂದಾಣಿಕೆಯ ಮೂಲಕ ಎದುರಾಳಿ ತಂಡದ ಮೇಲೆ ಮೇಲುಗೈ ಸಾಧಿಸಿತು. ವಿಜೇತ ತಂಡದ ಸದಸ್ಯರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿನ ಹಾದಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಮಯಪರಿಪಾಲನೆಯ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ PCMB ವಿಭಾಗದ ವಿದ್ಯಾರ್ಥಿಗಳ ಶಿಕ್ಷಕ- ಪಾಲಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು ಮಾತುಗಳನ್ನಾಡಿ, ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ತಕ್ಕಂತೆ ಉನ್ನತ ಶಿಕ್ಷಣದ ಆಯ್ಕೆಗಳನ್ನು ಗುರುತಿಸಿಕೊಂಡು ತಮ್ಮ ಗುರಿ ಸಾಧನೆಯತ್ತ ಆತ್ಮವಿಶ್ವಾಸದಿಂದ ಹೆಜ್ಜೆ ಇಟ್ಟು ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಕಾಲೇಜಿನ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು, ಇಂದಿನ ಆಧುನಿಕ ಕಾಲಘಟ್ಟದಲ್ಲಿ ಮಕ್ಕಳ ಮನಸ್ಥಿತಿಯ ಬಗ್ಗೆ ನಾವು ಅರಿತುಕೊಳ್ಳದೆ ಹೋದರೆ ನಮ್ಮ ಉದ್ದೇಶ ಈಡೇರದು ಮಾತ್ರವಲ್ಲದೆ ವಿದ್ಯಾರ್ಥಿಗಳು ತಮ್ಮ ಕನಸನ್ನು ಈಡೇರಿಸಿಕೊಳ್ಳುವಲ್ಲಿ ಗುರು ಮತ್ತು ತಂದೆ ತಾಯಿಯ ಪಾತ್ರ ಪ್ರಮುಖವಾದುದು ಎಂದು ತಿಳಿಸಿದರು. ಸಹ ಸಂಸ್ಥಾಪಕರಾದ ಗಣನಾಥ ಶೆಟ್ಟಿ ಬಿ. ರವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾದರೆ ವಿದ್ಯಾರ್ಥಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿ ಸವಾರರು ಗಾಯಗೊಂಡ ಘಟನೆ ಕುಂದಾಪುರ ನಗರದ ಸಂಗಮ್ ರಸ್ತೆಯಲ್ಲಿ ಇತ್ತೀಚಿಗೆ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಣೇಶ್ ಪ್ರಭು ಗಭೀರ ಗಾಯಗೊಂಡಿದ್ದು, ಎದುರಿನ ಬೈಕಿನ ಅಕ್ಷಿತ್, ಸುಜನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಣೇಶ್ ಪ್ರಭು ಅವರು ಸಂಗಮ್ ಕಡೆಯಿಂದ ತಮ್ಮ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಕ್ಷಿತ್ ಎಂಬಾತ ಸುಜನ್ ಅವರನ್ನು ಸಹ ಸವಾರರನ್ನಾಗಿ ಕುಳ್ಳಿರಿಸಿಕೊಂಡು ಸಂಗಮ್ ಕಡೆಗೆ ತನ್ನ ಬೈಕ್ ಚಲಾಯಿಸಿಕೊಂಡು ಬಂದು ಗಣೇಶ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಪರಿಣಾಮ ಗಣೇಶ್ ತೀವ್ರ ಗಾಯಗೊಂಡು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ರಿವಿಕ್ರಮ ಪೈ ನೀಡಿದ ದೂರಿನಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎದುರಿನ ಬೈಕ್ ಸವಾರ ಹಾಗೂ ಸಹಸವಾರ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಸಹಸವಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹಳೆಯ ಪಾದರಕ್ಷೆಯನ್ನು ಎಸೆಯುವ ಮೂಲಕ ಪರಿಸರ ಮಾರಕ ಈ ದಿಸೆಯಲ್ಲಿ ಹಳೆಯ ಪಾದರಕ್ಷೆಯ ಒಗ್ಗೂಡಿಸಿ ಮರುಬಳಸುವ ಕಾರ್ಯಯೋಜನೆ ನಿಜಕ್ಕೂ ಶ್ಲಾಘನೀಯ ಎಂದು ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ಪ್ರವರ್ತಕ ಸಂಪತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕೋಟದ ಪಂಚವರ್ಣ ಕಛೇರಿಯಲ್ಲಿ ತಾಲೂಕು ವ್ಯಾಪ್ತಿಯ ಕೋಟದ ಪಂಚವರ್ಣ ಸಂಘಟನೆಯ ಸಂಯೋಜನೆಯೊಂದಿಗೆ ರೋಟರಿ ಸಮುದಾಯದಳ ಕೋಟೇಶ್ವರ,ಹಂಗಾರಕಟ್ಟೆ ದೂಳಂಗಡಿ ಶಾಲೆ,ಚೇತನಾ ಪ್ರೌಢಶಾಲೆ ಮಾಬುಕಳ,ಮಹಿಳಾ ಮಂಡಲ ಪಾಂಡೇಶ್ವರ,ಮಿತ್ರ ಸಂಗಮ ಬೀಜಾಡಿ ಇವರ ಸಹಭಾಗಿತ್ವದಲ್ಲಿ ಉಡುಪಿ ಸಮಾಜಸೇವಕ ಅವಿನಾಶ್ ಕಾಮತ್ ಅವರ ವಿನೂತನ ಯೋಜನೆ ನಡಿಗೆ ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ ಕಾರ್ಯಕ್ರಮದಲ್ಲಿ ಹಳೆಯ ಪಾದರಕ್ಷೆ ಹಸ್ತಾಂತರಿಸಿ ಮಾತನಾಡಿದರು. ಸಮಾಜಕ್ಕೆ ತಮ್ಮನ್ನು ತಾನು ಸಮರ್ಪಿಸಿಕೊಳ್ಳುವ ಯೋಚನೆ ಹಾಗೂ ಯೋಜನೆ ಅತ್ಯಂತ ಪ್ರಶಂಸನೀಯ ಹಾಗೇ ಪರಿಸರಕ್ಕೆ ಮಾರಕವಾಗುವ ಹಳೆಯ ಪಾದರಕ್ಷೆಯನ್ನು ಸಂಬಂಧಿಸಿದ ಸಂಸ್ಥೆಯ ಮೂಲಕ ನವೀಕರಿಸಿ ಬಡ ಮಕ್ಕಳಿಗೆ ಧಾರೆ ಎರೆಯುವ ಅವಿನಾಶ್ ಕಾಮತ್ ರವರ ಕಲ್ಪನೆ ಹೊಸ ಆಯಾಮಕ್ಕೆ ಮುನ್ನುಡಿ ಬರೆದಿದೆ.ಅಂತಯೇ ಪಂಚವರ್ಣ ಸಂಘಟನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಜ್ರ ಮಹೋತ್ಸವ ಅಂಗವಾಗಿ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಯೋಗದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಮಟ್ಟದ ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಸಮಗ್ರ ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಕ್ಷಗಾನ ಸ್ಪರ್ಧೆಯ ವೈಯುಕ್ತಿಕ ವಿಭಾಗದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ. ಪುರುಷ ವೇಷ – ಪ್ರಥಮ ಅನಂತಕೃಷ್ಣ ನಾವಡ – ತೃತೀಯ ಬಿ ಕಾಂ, ಸ್ತ್ರೀವೇಷ – ಅಶ್ವಿನಿ ಐತಾಳ್- ತೃತೀಯ ಬಿ ಎಸ್ಸಿ , ಹಾಸ್ಯ- ತನ್ಮಯ್- ದ್ವಿತೀಯ ಬಿ ಎಸ್ಸಿ ಬಹುಮಾನ ವಿಜೇತರಾಗಿದ್ದಾರೆ. ಕಾಲೇಜಿನ ತೃತೀಯ ಬಿ.ಎಸ್.ಸಿ ವಿದ್ಯಾರ್ಥಿ ಸಾತ್ಯಕಿ, ತೃತೀಯ ಬಿ.ಕಾಮ್ ನ ವಿದ್ಯಾರ್ಥಿಗಳಾದ ಅನೂಪ್ ಉರಾಳ ಮತ್ತು ವಿದಾತ ಉಡುಪ ಈ ಸ್ಪರ್ಧೆಯಲ್ಲಿ ಭಾಗವಹಿಸಿ ಮೆಚ್ಚುಗೆ ಗಳಿಸಿದ್ದಾರೆ. ಕಾಲೇಜಿನ ಇಂಗ್ಲಿಷ್ ವಿಭಾಗದ ಉಪನ್ಯಾಸಕ ಮತ್ತು ಲಲಿತಾ ಕಲಾ ಸಂಘದ ಸಂಯೋಜಕ ಶಶಾಂಕ್ ಪಟೇಲ್,ಕೆಳಮನೆ ಅವರ ನಿರ್ದೇಶನದಲ್ಲಿ ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ 35ನೇ ವರ್ಷದ ಯಕ್ಷೋತ್ಸವ2026 ಹಾಗೂ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಯಕ್ಷಗವಿಷ್ಟ2026-27 ಯಕ್ಷಗಾನ ಸ್ಪರ್ಧೆಗಳಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪ್ರಥಮ ಬಹುಮಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದೆ. ಎಸ್‌ಡಿಎಂ ಕಾಲೇಜು ಆಯೋಜಿಸಿದ ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ಕಾಲೇಜುಗಳ ಒಟ್ಟು ಒಂಬತ್ತು ತಂಡಗಳು ಭಾಗವಹಿಸಿದ್ದವು. ಆಳ್ವಾಸ್ ತಂಡವು ಪ್ರಥಮ ಸ್ಥಾನ ಪಡೆದು 15,000 ನಗದು ಬಹುಮಾನದೊಂದಿಗೆ ಪರ್ಯಾಯ ಫಲಕವನ್ನು ತನ್ನದಾಗಿಸಿಕೊಂಡಿತು. ವೈಯಕ್ತಿಕ ವಿಭಾಗದಲ್ಲಿ ಅಮೃತ್ ಮತ್ತು ಹಸ್ತಾ ಬಹುಮಾನ ಪಡೆದರು. ನಿಟ್ಟೆ ವಿದ್ಯಾಸಂಸ್ಥೆ ಆಯೋಜಿಸಿದ ಯಕ್ಷಗವಿಷ್ಟ ಸ್ಪರ್ಧೆಯಲ್ಲಿ ಆಯ್ದ ಐದು ತಂಡಗಳು ಭಾಗವಹಿಸಿದ್ದವು. ಈ ಸ್ಪರ್ಧೆಯಲ್ಲಿ ಆಳ್ವಾಸ್ ತಂಡವು ಪ್ರಥಮ ಬಹುಮಾನ ಹಾಗೂ 20,000 ನಗದು ಬಹುಮಾನ ಗಳಿಸಿತು. ಈ ಸ್ಪರ್ಧೆಯಲ್ಲಿಯೂ ಪರ್ಯಾಯ ಫಲಕ ಆಳ್ವಾಸ್ ತಂಡದ ಪಾಲಾಯಿತು. ವೈಯಕ್ತಿಕ ವಿಭಾಗದಲ್ಲಿ ಅಮೃತ್, ಶ್ರೀನಿಧಿ, ನಿಹಾಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಗಳೂರು, ಬ್ರಹ್ಮಾವರ ಕ್ಷೇತ್ರ ಸಮಿತಿ ಹಾಗೂ ಕೋಟ-ಸಾಲಿಗ್ರಾಮ ವಲಯ ಸಮಿತಿಯ ವತಿಯಿಂದ ಅಶಕ್ತರಿಗೆ ಸಹಾಯಧನ ಹಾಗೂ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಕೋಟ ಸಿ ಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಉದ್ಘಾಟಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಾವರ ಕ್ಷೇತ್ರ ಸಮಿತಿ ಅಧ್ಯಕ್ಷ ಗಣೇಶ್ ಪೂಜಾರಿ ವಹಿಸಿದ್ದರು. ಸಹಾಯಧನ, ವಿದ್ಯಾರ್ಥಿ ವೇತನ ವಿತರಣೆಯನ್ನು ಶಬರಿ ಕನ್ಸ್ಟ್ರಕ್ಷನ್, ಕೋಟ ಮುಖ್ಯಸ್ಥ ಸುರೇಶ್ ಕಾಂಚನ್ ಬಾರಿಕೆರೆ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಅನಂತ್ ನಾಯಕ್, ಕುಸುಮ ದೇವಾಡಿಗ, ಉಡಪಿ ಜಿಲ್ಲಾಧ್ಯಕ್ಷ ದಯಾನಂದ ಕೋಟ್ಯಾನ್, ಬ್ರಹ್ಮಾವರ ಕ್ಷೇತ್ರ ಸಮಿತಿಯ ಕೋಶಾಧಿಕಾರಿ ವೀಣಾಶ್ರೀ, ಕೋಟ ಸಾಲಿಗ್ರಾಮ ವಲಯ ಸಮಿತಿ ಉಪಾಧ್ಯಕ್ಷ ಪರಮೇಶ್ವರ ಗಾಣಿಗ, ಬ್ರಹ್ಮಾವರ ನಗರ ಸಮಿತಿ ಅಧ್ಯಕ್ಷ ಪವಿತ್ರ ಕುಮಾರ್, ಬಾರ್ಕೂರಿ ವಲಯ ಸಮಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೈಕಲ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ. ಮೃತರನ್ನು ಕೋಟ ಮಣೂರು ನಿವಾಸಿ, ಹಿರಿಯ ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ (68)ಎಂದು ಗುರುತಿಸಲಾಗಿದೆ. ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಬರುತ್ತಿದ್ದ ಕಾರು ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುವನ್ನು ಆಂಬುಲೆನ್ಸ್‌ನಲ್ಲಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಲು ನೆರವಾದರು. ಇವರ…
