ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೋಟಾರು ಸೈಕಲ್ನಲ್ಲಿ ಐಸ್ಕ್ರೀಮ್ ಹಾಗೂ ಮೀನು ವ್ಯಾಪಾರ ಮಾಡಿಕೊಂಡಿದ್ದ ಬಿಜೂರು ಉಪ್ಪುಂದ ಮಾಧವ ದೇವಾಡಿಗ (52) ಅವರು ತನಗಿದ್ದ ಬೆನ್ನುನೋವು ಹಾಗೂ ಪತ್ನಿಯ ಕಾಯಿಲೆಯಿಂದ ಮನೆಯ ಸಮೀಪದ ಹಾಡಿಯಲ್ಲಿ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಮುಂಜಾನೆ 04ಗಂಟೆಗೆ ಮೀನು ವ್ಯಾಪಾರ ಮಾಡಲು ಭಟ್ಕಳಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಬೆಳಗ್ಗೆ05:00ಗಂಟೆ ಸುಮಾರಿಗೆ ಅಳಿಯ ಚಂದ್ರರಿಗೆ ಕರೆ ಮಾಡಿ ತನಗೆ ಹಾಗೂ ಹೆಂಡತಿಗೆ ಹುಸಾರಿಲ್ಲ ಎಲ್ಲರನ್ನೂ ಚೆನ್ನಾಗಿ ನೋಡಿಕೋ ಎಂದು ಹೇಳಿದ್ದರು. ಬಳಿಕ ಎಲ್ಲರೂ ಸೇರಿ ಹುಡುಕಿದಾಗ ಮನೆಯ ಬಳಿಯ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ನೇತಾಡುತ್ತಿರುವುದುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಯಿತು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದು. ಇಂದಿನ ಯುವಜನತೆಯೇ ನಾಳಿನ ಸಮಾಜದ ರೂವಾರಿಗಳು. ಆಧುನಿಕತೆ ಹಾಗೂ ತಂತ್ರಜ್ಞಾನದ ಭರಾಟೆಯಲ್ಲಿ ಪಾಶ್ಚಿಮಾತ್ಯ ಜೀವನಶೈಲಿಗೆ ಮಾರುಹೋಗದೆ, ನಮ್ಮ ಸನಾತನ ಮೌಲ್ಯಗಳಾದ ಹಿರಿಯರಿಗೆ ಗೌರವ ನೀಡುವುದು, ಸಹಿ?ತೆ, ಕುಟುಂಬ ವ್ಯವಸ್ಥೆ ಹಾಗೂ ’ವಸುಧೈವ ಕುಟುಂಬಕಂ’ ಎಂಬ ವಿಶಾಲ ಮನೋಭಾವವನ್ನು ಉಳಿಸಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ನಮ್ಮ ಸಂಸ್ಕೃತಿಯೇ ನಮ್ಮ ಗೌರವದ ಪ್ರತೀಕ ಎಂದು ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇವರ ಸಹಯೋಗದಲ್ಲಿ ಶಂಕರನಾರಾಯಣದ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ಯುವ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ದೇಶದ ಭವ್ಯ ಇತಿಹಾಸ, ನೃತ್ಯ, ಸಂಗೀತ, ಸಾಹಿತ್ಯ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜಾನುವಾರುಗಳನ್ನು ಅಕ್ರಮವಾಗಿ ಗೋಹತ್ಯೆ ಮತ್ತು ಮಾಂಸ ಮಾರಾಟದ ಉದ್ದೇಶದಿಂದ ಸಾಗಿಸುತ್ತಿದ್ದ ಜಾಲವೊಂದನ್ನು ಕೋಟ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಜಂಕ್ಷನ್ ಬಳಿ ನಡೆಸಿದ ಸಕಾಲಿಕ ಕಾರ್ಯಾಚರಣೆಯಲ್ಲಿ ಬುಲೆರೋ ಪಿಕ್ಅಪ್ ವಾಹನದಲ್ಲಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಟೇಶ್ವರ ಕಡೆಯಿಂದ ಉಡುಪಿ ಕಡೆಗೆ ಬುಲೆರೋ ಪಿಕ್ ಅಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಕೋಟ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ ಕುಮಾರ್ ಆರ್ ರವರಿಗೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ತಪಾಸಣೆ ಆರಂಭಿಸಿದರು. ಪೊಲೀಸರು ಸಮವಸ್ತ್ರದಲ್ಲಿದ್ದು ಹತ್ತಿರ ಬರುತ್ತಿದ್ದಂತೆ ವಾಹನದಲ್ಲಿದ್ದ ನಾಲ್ವರು ಪರಾರಿಯಾಗಲು ಯತ್ನಿಸಿದರಾದರೂ, ಸಿಬ್ಬಂದಿಗಳು ಅವರನ್ನು ಬೆನ್ನಟ್ಟಿ ವಶಕ್ಕೆ ಪಡೆದರು. ವಿಚಾರಣೆ ನಡೆಸಿದಾಗ ಬಂಧಿತರನ್ನು ಚಿಕ್ಕಬಳ್ಳಾಪುರದ ಪುನೀತ್ (27), ಕೃಷ್ಣಪ್ಪ (40), ಶ್ರೀನಿವಾಸ (56) ಹಾಗೂ ಕೋಲಾರದ ಗಣೇಶ (26) ಎಂದು ಗುರುತಿಸಲಾಗಿದೆ. ವಾಹನವನ್ನು ಪರಿಶೀಲಿಸಿದಾಗ ಜಾಯವಾರುಗಳಿಗೆ ಯಾವುದೇ ಆಹಾರ, ಮೇವು ಹಾಗೂ ನೀರು ನೀಡದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೈಸೂರು ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ವಿನೀಶ್ ರಾವ್ ಅವರು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ISAP (Information Search, Analysis and Presentation) ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಉಪಸ್ಥಿತರಿದ್ದ ಗಣ್ಯರನ್ನು, ಅಧ್ಯಾಪಕರನ್ನು ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ISAP ಕಾರ್ಯಕ್ರಮದ ಮಹತ್ವವನ್ನು ವಿವರಿಸುತ್ತಾ, ತಂತ್ರಜ್ಞಾನ ಲೋಕದಲ್ಲಿ ಯಶಸ್ಸು ಗಳಿಸಲು ಸರಿಯಾದ ಮಾಹಿತಿಯನ್ನು ಹುಡುಕುವುದು, ಅದನ್ನು ವಿಶ್ಲೇಷಿಸುವುದು ಹಾಗೂ ಸಮರ್ಥವಾಗಿ ಪ್ರಸ್ತುತಪಡಿಸುವುದು ಅತ್ಯಗತ್ಯ. ಈ ಕೌಶಲ್ಯಗಳು ವಿದ್ಯಾರ್ಥಿಗಳಲ್ಲಿ ಸ್ವಯಂ ಕಲಿಕೆ ಮತ್ತು ವೃತ್ತಿಪರ ಬೆಳವಣಿಗೆಗೆ ಭದ್ರ ಬುನಾದಿ ಹಾಕುತ್ತವೆ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ. ಜಗದೀಶ ನಾವಡ ಅವರು ಭಾಗವಹಿಸಿ ಮಾತನಾಡಿ, “ಇಂದಿನ ಯುವ ಪೀಳಿಗೆಯಲ್ಲಿ ಅಪಾರ ಪ್ರತಿಭೆ ಹಾಗೂ ಅಗಾಧವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಅವರು ಬುಧವಾರ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ತಾಲೂಕು ಪಂಚಾಯತ್ನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಜ್ಯೋತಿ ಯೋಜನೆ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯಲ್ಲಿ ಫಲಾನುಭವಿಗಳು ಮನೆಗಳಿಗೆ ಬೀಗ ಹಾಕಿರುವುದು, ಪರಿಶೀಲನಾ ಸಮಯದಲ್ಲಿ ಫಲಾನುಭವಿಗಳು ಲಭ್ಯವಿಲ್ಲದೇ ಇರುವುದು, ಸೇರಿದಂತೆ ಮತ್ತಿತರ ಕಾರಣಗಳಿಂದ ಮರುಪರಿಶೀಲನಾ ಪ್ರಕ್ರಿಯೆ ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳದೇ ಇರುವುದರಿಂದ ಸದರಿ ಪ್ರಕ್ರಿಯೆಯನ್ನು ಅ. 31 ರ ವರೆಗೆ ವಿಸ್ತರಿಸಲಾಗಿರುತ್ತದೆ. ಮೆಸ್ಕಾಂ ಸಿಬ್ಬಂದಿಗಳು ಮೂರು ಬಾರಿ ಮನೆ ಭೇಟಿ ನೀಡಿದಾಗಲು ಫಲಾನುಭವಿಗಳು ಲಭ್ಯವಿಲ್ಲದಿದ್ದಲ್ಲಿ, ಫಲಾನುಭವಿಗಳು ಸಂಬಂಧಪಟ್ಟ ಮೆಸ್ಕಾಂ ಕಚೇರಿಗೆ ತೆರಳಿ ಮಾಹಿತಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರುತ್ತಿದ್ದು, ಶಿಕ್ಷಕರು ಎಐ ತಂತ್ರಜ್ಞಾನದ ಬಳಕೆಯಲ್ಲಿ ಪರಿಣತಿ ಬೆಳೆಸಿಕೊಂಡು, ವಿದ್ಯಾರ್ಥಿಗಳಿಗೆ ಸಮರ್ಥವಾಗಿ ಮಾರ್ಗದರ್ಶನ ನೀಡುವ ಸಾಮರ್ಥ್ಯ ಹೊಂದಬೇಕು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ನುಡಿದರು. ಅವರು ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಸಕ್ಷಮ- ಆಳ್ವಾಸ್ನ ಮಹಿಳಾ ಘಟಕದ ವತಿಯಿಂದ ‘’ಶಿಕ್ಷಕರಿಗಾಗಿ ಜನರೇಟಿವ್ ಎಐ’’ ವಿಷಯದಲ್ಲಿ ಆಯೋಜಿಸಲಾದ ಒಂದು ದಿನದ ಶಿಕ್ಷಕ ಪುನಶ್ಚೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಕೃತಕ ಬುದ್ಧಿಮತ್ತೆಯ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ ನಡೆಯುತ್ತಿದೆ. ಕಡಿಮೆ ವೆಚ್ಚದಲ್ಲಿ ಕೆಲಸಗಳನ್ನು ನಿರ್ವಹಿಸುವ ಮಾನವ ಸಂಪನ್ಮೂಲವನ್ನು ಸಂಸ್ಥೆಗಳು ನಿರೀಕ್ಷಿಸುತ್ತಿದ್ದು, ಹಲವು ಕಾರ್ಯಗಳನ್ನು ಎಐ ತಂತ್ರಜ್ಞಾನ ನಿರ್ವಹಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಎಐ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸುವ ಕೌಶಲ ಹೊಂದಿರುವವರಿಗೆ ಹೆಚ್ಚಿನ ಮಹತ್ವ ದೊರೆಯಲಿದೆ. ಕಾಲಕ್ರಮೇಣ ಕೇವಲ ಅರ್ಹತೆಗಿಂತ ವ್ಯಕ್ತಿಯ ಸಾಮರ್ಥ್ಯ, ಕೌಶಲ ಮತ್ತು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಸಾಮರ್ಥ್ಯಕ್ಕೆ ಹೆಚ್ಚಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್ವರ್ಕ್ ಸಂಬAಧಿತ ಸಮಸ್ಯೆಗಳನ್ನು ಪರಿಹರಿಸಿ ಖಾಸಗಿ ಕಂಪನಿಗಳಿಗೆ ಕಡಿಮೆ ಇಲ್ಲದಂತೆ ಗುಣಮಟ್ಟದ ಸೇವೆ ಒದಗಿಸಬೇಕೆಂದು ಅಧಿಕಾರಿಗಳಿಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಬಿ.ಎಸ್.ಎನ್.ಎಲ್ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಾದ್ಯಂತ ಇರುವ ಬಿ.ಎಸ್.ಎನ್.ಎಲ್ ಸ್ಥಾವರಗಳನ್ನು 3ಜಿ ಯಿಂದ 4 ಜಿ ಗೆ ಬದಲಾವಣೆ ಮಾಡುವುದರೊಂದಿಗೆ ಗ್ರಾಹಕರಿಗೆ ಉತ್ತಮ ರೀತಿಯ ಸೇವೆಗಳನ್ನು ಒದಗಿಸಬೇಕು. ಟವರ್ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವುದರೊಂದಿಗೆ ನೆಟ್ವರ್ಕ್ ಸಮಸ್ಯೆ ಉಂಟಾಗದಂತೆ ನೋಡಿಕೊಂಡು ಗ್ರಾಹಕರಿಗೆ ಗುಣಮಟ್ಟದ ಸೇವೆಯನ್ನು ದೊರಕಿಸಿ ಕೊಡಬೇಕು ಎಂದರು. ಜಿಲ್ಲೆಯ ಎಲ್ಲಾ ಸ್ಥಾವರಗಳಿಗೆ ಡಿ.ಜಿ ಸೆಟ್ಗಳನ್ನು ಅಳವಡಿಸುವುದರೊಂದಿಗೆ ಅವುಗಳು ಕಾರ್ಯಪ್ರವೃತ್ತರಾಗುವಂತೆ ನೋಡಿಕೊಳ್ಳಬೇಕು ಎಂದ ಅವರು ಪವರ್ ಪ್ಲಾö್ಯಂಟ್ಗಳು ನಿರಂತರವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಅವಶ್ಯವಿರುವಲ್ಲಿ ಬ್ಯಾಟರಿ ಅಥವಾ ಸೋಲಾರ್ ಬ್ಯಾಟರಿಗಳ ಅಳವಡಿಸಬೇಕು ಎಂದರು. ಹೊಸದಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಧುನಿಕ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುನ್ನಡೆಯುವುದರ ಜೊತೆಗೆ ಸಂವೇದನಾಶೀಲತೆಯನ್ನು ಬೆಳೆಸಿಕೊಳ್ಳಬೇಕು. ಆತ್ಮಾವಲೋಕನದ ಮೂಲಕ ತಮ್ಮ ಸಾಮರ್ಥ್ಯ ಹಾಗೂ ಕೌಶಲ್ಯಗಳನ್ನು ಗುರುತಿಸಿಕೊಂಡು, ಕಲೆ ಮತ್ತು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ವಿಮರ್ಶಾತ್ಮಕ ಚಿಂತನೆಯೊಂದಿಗೆ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಭವಿಷ್ಯದ ಬದುಕು ಅರ್ಥಪೂರ್ಣವಾಗಲು ಸಾಧ್ಯ ಎಂದು ಬ್ರಹ್ಮಾವರದ ಎಸ್ಎಂಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಅಭಿಲಾಷ ಎಸ್. ಹೇಳಿದರು. ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ್ದ ‘ಜೀವನ ಮೌಲ್ಯ’ ಸರಣಿ ಉಪನ್ಯಾಸ ಮಾಲಿಕೆ-3ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವರಲಕ್ಷ್ಮಿ ಅತಿಥಿಗಳನ್ನು ಪರಿಚಯಿಸಿದರು. ಸಿಂಚನಾ ಮತ್ತು ನಿರೀಕ್ಷಾ ಪ್ರಾರ್ಥಿಸಿದರು. ಪ್ರಮಿತಾ ಸ್ವಾಗತಿಸಿ, ನವ್ಯ ಕಾರ್ಯಕ್ರಮ ನಿರೂಪಿಸಿ, ಧನ್ಯಶ್ರೀ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2023ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಸಮಿತಿಯಿಂದ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಅಕ್ಟೋಬರ್ 12 ರಿಂದ 14 ರವರೆಗೆ ಬೆಂಗಳೂರಿನ ಎಂ.ಸಿ. ಬಡಾವಣೆಯಲ್ಲಿರುವ ಡಾ. ವಿಷ್ಣುವರ್ಧನ ಸ್ಮಾರಕ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಪುಸ್ತಕಗಳ ಪಟ್ಟಿಯನ್ನು ಉಡುಪಿ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯಗಳ ಸೂಚನಾ ಫಲಕಗಳಲ್ಲಿ ಹಾಗೂ ಇಲಾಖೆಯ ವೆಬ್ ಸೈಟ್ http://dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಲೇಖಕರು, ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರು ತಮ್ಮ ಲಿಖಿತ ಮನವಿಗಳನ್ನು ಅಕ್ಟೋಬರ್ 22 ರೊಳಗೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಇಲ್ಲಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
