ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಬುಧವಾರದಂದು ಗುರುಪೂರ್ಣಿಮೆಯನ್ನು ಶ್ರದ್ಧಾ – ಭಕ್ತಿಯಿಂದ ಆಚರಿಸಲಾಯಿತು. ಶಾಲೆಯ ಸಹ ಶಿಕ್ಷಕರಾದ ರಾಮಕೃಷ್ಣ ಉಡುಪರು ಶಾಸ್ತ್ರೋಕ್ತವಾಗಿ ಮಂತ್ರಗಳನ್ನು ಪಠಿಸಿ ಆದಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆಯನ್ನು ನೆರವೇರಿಸುವುದರ ಜೊತೆಗೆ ಮಕ್ಕಳಿಗೆ ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಮಹತ್ವದ ಕುರಿತು ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗುರ್ವಷ್ಟಕ, ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿ ಗುರುವಿನ ಮಹಿಮೆಯನ್ನು ತಿಳಿಸಿಕೊಡುವ ಹಾಡನ್ನು ಹಾಡಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು. ಶಾಲೆಯಲ್ಲಿ ಈ ರೀತಿಯ ಆಚರಣೆಯು ವಿದ್ಯಾರ್ಥಿಗಳಲ್ಲಿ ಗುರುಭಕ್ತಿಯನ್ನು ತುಂಬಿ, ಸಾಂಸ್ಕೃತಿಕ ಮೌಲ್ಯಗಳ ಪರಿಚಯವನ್ನು ಮೂಡಿಸಿ ಶಿಸ್ತನ್ನು ಬೆಳೆಸಲು ಪೂರಕವಾಗಿರುತ್ತದೆ. ಈ ಸಂದರ್ಭದಲ್ಲಿ ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯವರಾದ ಹೇಮಮಾಲಿನಿ, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ನವದೆಹಲಿ: ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಲಭಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ‘ಇಂಡಿಯನ್ ಹ್ಯಾಬಿಟಾಟ್ ಸೆಂಟರ್’ನಲ್ಲಿ ಮಂಗಳವಾರ ನಡೆದ ‘Education Excellence Conference & Awards–2026’ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವರಾದ ಡಾ. ಸುಕಾಂತ್ ಮಜುಂದಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಈ ಗೌರವವನ್ನು ಪ್ರದಾನ ಮಾಡಿದರು. ʼFit India’ ಹಾಗೂ ‘School Grads’ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ಈ ಸಮಾರಂಭದಲ್ಲಿ ದೇಶದ ಅತ್ಯಂತ ಆಯ್ದ ಕೆಲವು ಪ್ರಮುಖ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಈ ಪುರಸ್ಕಾರ ನೀಡಲಾಯಿತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಲ್ಪಾವಧಿಯಲ್ಲೇ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ, ಗುಣಮಟ್ಟದ ಬೋಧನೆ, ಕ್ರೀಡೆ, ಸಾಹಿತ್ಯ, ಸಂಸ್ಕೃತಿ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ನೀಡಿರುವ ಆದ್ಯತೆ ಮತ್ತು ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಂಸ್ಥೆಯ ಪರವಾಗಿ ಅಧ್ಯಕ್ಷರಾದ ಡಾ. ರಮೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಇದರ ಹಾಲಾಡಿ-ಶಂಕರನಾರಾಯಣ ಘಟಕದ ನೂತನ ಅಧ್ಯಕ್ಷರಾಗಿ ಶರತ್ ಸೌಡ, ನೂತನ ಕಾರ್ಯದರ್ಶಿಯಾಗಿ ರಂಜಿತ್ ಬೈಲೂರು ರವಿವಾರ ಪದಗ್ರಹಣ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಯುವ ಸಂಘಟನೆ ಜಿಲ್ಲಾಧ್ಯಕ್ಷ ರವೀಶ ಕೊರವಡಿ ಮೊದಲಾದವರ ಸಮಕ್ಷಮದಲ್ಲಿ ಪದಪ್ರದಾನ ನೆರವೇರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೀಕ್ಷಾರಂಭ ಕಾರ್ಯಕ್ರಮದ ಅಂಗವಾಗಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ, ಮೂಡ್ಲಕಟ್ಟೆಯ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಸಂಘವು ಮೊದಲ ವರ್ಷದ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗಳು ಉಪ್ಪೂರಿನ ಕೆಎಂಎಫ್ ಕೈಗಾರಿಕಾ ಘಟಕಕ್ಕೆ ಇತ್ತೀಚಿಗೆ ಭೇಟಿ ನೀಡಿದರು. ಈ ಭೇಟಿಯಲ್ಲಿ ಸುಮಾರು 150 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೈಗಾರಿಕಾ ಕಾರ್ಯಾಚರಣೆಗಳ ಪ್ರಾಯೋಗಿಕ ಅನುಭವ ನೀಡುವುದು ಹಾಗೂ ಹಾಲು ಉದ್ಯಮದ ಕಾರ್ಯವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ನೇರ ಪರಿಚಯ ಮಾಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ಕೆಎಂಎಫ್ನ ಮಾರ್ಕೆಟಿಂಗ್ ಮುಖ್ಯಸ್ಥ ಸುಧಾಕರ್ ಅವರು ಮಾತನಾಡಿ, ಕೆಎಂಎಫ್ನ ಬೆಳವಣಿಗೆ, ಮಾರ್ಕೆಟಿಂಗ್ ತಂತ್ರಗಳು, ಗುಣಮಟ್ಟದ ಮಾನದಂಡಗಳು ಮತ್ತು ವಿತರಣಾ ಜಾಲದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಮಾರ್ಗದರ್ಶಕರಾದ ಸತೀಶ್ ಅವರು ವಿದ್ಯಾರ್ಥಿಗಳನ್ನು ಸಂಸ್ಕರಣಾ ಘಟಕಕ್ಕೆ ಕರೆದೊಯ್ದು ಹಾಲಿನ ಸಂಸ್ಕರಣೆ, ಪ್ಯಾಕಿಂಗ್ ಮತ್ತು ಗುಣಮಟ್ಟ ನಿಯಂತ್ರಣದ ವಿವಿಧ ಹಂತಗಳನ್ನು ಪ್ರತ್ಯಕ್ಷವಾಗಿ ತೋರಿಸಿಕೊಟ್ಟರು. ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶಿಲ್ಪಾಶ್ರೀ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಓಂ ಶ್ರೀ ಮಂಜುನಾಥಾಯ ನಮಃ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ರಿ. ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಹಾಗೂ ಪೆರ್ಡೂರು ಪ್ರೌಢಶಾಲೆ, ಪೆರ್ಡೂರು ಇವರ ಜಂಟಿ ಆಶ್ರಯದಲ್ಲಿ ಬುಧವಾರದಂದು ಪೆರ್ಡೂರು ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸತೀಶ್ ಶೆಟ್ಟಿ ಕುತ್ಯಾರು ಬೀಡು ಅವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರ್ಡೂರು ಪ್ರೌಢಶಾಲೆಯ ಶಿಕ್ಷಕ ಹಸೀನ ಬಾನು ಅವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಡುಪಿ ಎಸ್.ಪಿ. ಕಚೇರಿಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅವರು ವಿದ್ಯಾರ್ಥಿ ಜೀವನದಲ್ಲಿ ದಾರಿ ತಪ್ಪುವ ಕಾರಣಗಳು ಮತ್ತು ಪರಿಣಾಮಗಳ ಬಗ್ಗೆ ತಿಳಿಸಿ ದರು. ಯಾವ ರೀತಿ ಯುವ ಜನತೆ ಎಚ್ಚೆತ್ತುಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಬಹುದು ಎಂಬ ಬಗ್ಗೆ ಉದಾಹರಣೆಗಳ ಮೂಲಕ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಡ್ರಗ್ ಮಾದಕ ವಸ್ತುಗಳ ಸೇವನೆಯಿಂದ ಅಪರಾಧಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾಬರಿ ಮಸೀದಿ ದ್ವಂಸ ಮಾಡಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುಟುಂಬವನ್ನು ನಾಶ ಮಾಡುತ್ತೇವೆ ಎನ್ನುವ ಉಡುಪಿ ಬೆತ್ತಲೆ ಪ್ರಕರಣದ ಆರೋಪಿ, ಅದೆಷ್ಟೋ ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿತನಾಗಿರುವ ಬುದ್ದಿವಂತರ, ಶಾಂತಿ ಪ್ರಿಯರ ನಾಡಾದ ಉಡುಪಿಯ ಶಾಸಕ ಯಶ್ಪಾಲ್ ಸುವರ್ಣರ ಹೇಳಿಕೆ ದ್ವೇಷ ಪೂರಿತ ಹಾಗೂ ಸಮಾಜದ ಶಾಂತಿ ಕದಡುವ ಹೇಳಿಕೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕ್ರಿಮಿನಲ್ ಹಿನ್ನೆಲೆಯ ಮೂಲಕವೇ ಸಾಮಾಜಿಕ ಜೀವನಕ್ಕೆ ಬಂದು, ಒಬ್ಬ ಜನಪ್ರತಿನಿದಿಯಾದ ಮೇಲೂ ಕಿಂಚಿತ್ತೂ ಬದಲಾವಣೆಯಾಗದೆ ಅದೇ ಕ್ರಿಮಿನಲ್ ಮನಸ್ಥಿತಿಯೊಂದಿಗೆ ಮುಂದುವರಿದಿರುವ ಉಡುಪಿ ಶಾಸಕರ ನಡೆ ನಾಗರಿಕ ಸಮಾಜ ಹಾಗೂ ಅವರನ್ನು ಆಯ್ಕೆ ಮಾಡಿದ ಮತದಾರರು ಸಹಿಸದೇ ಇರುವ ವರ್ತನೆ. ತ್ಯಾಗ ಬಲಿದಾನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹಾಗೂ ದೇಶದ ಐಕ್ಯತೆ ಹಾಗೂ ಅಖಂಡತೆ ಉಳಿವಿಗೆ ಪ್ರಾಣವನ್ನೇ ಮೂಡಿಪಾಗಿಟ್ಟ ರಾಹುಲ್ ಗಾಂಧಿ ಕುಟುಂಬವನ್ನು ದ್ವಂಸ ಮಾಡುತ್ತೇವೆ ಎನ್ನುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ, ಸಾಮರಸ್ಯ, ಕ್ರೀಡಾ ಮನೋಭಾವ ಹಾಗೂ ಸಮುದಾಯ ಸೇವೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಾರ್ಗದರ್ಶನದಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನ ಸ್ಥಾಪಿಸಲು ಪಾಲಿಸಬೇಕಾದ ಮಾರ್ಗಸೂಚಿಗಳ ಕುರಿತು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾಹಿತಿ ನೀಡಿದರು. ಅವರು ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗಳ ಅಧ್ಯಕ್ಷರು, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ತಹಸೀಲ್ದಾರರು, ನಗರಸಭೆ, ಪುರಸಭೆಗಳ ಆಯುಕ್ತರು, ಪಿಡಿಒಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ದೇಶದ ಅಭಿವೃದ್ಧಿಗಾಗಿ ಯುವಜನರ ಸಾಮರ್ಥ್ಯವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯ. ಈ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳು ಯುವಕರಲ್ಲಿ ನಾಯಕತ್ವ ಗುಣ, ಶಿಸ್ತು ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವ ವೇದಿಕೆಯಾಗಬೇಕು ಎಂದು ಅವರು ಹೇಳಿದರು. ಯುವ ಸಂಘಗಳ ರಚನೆ ಪ್ರಕ್ರಿಯೆಯು ನಿಯಮಾನುಸಾರವಾಗಿ, ಪಾರದರ್ಶಕ ಹಾಗೂ ಯಶಸ್ವಿಯಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಕಲ್ಯಾಣ ಅಭಿವೃದ್ಧಿಗೆ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು, ವಿಶೇಷ ಕಾಯ್ದೆಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಹಿತ ರಕ್ಷಣಾ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸರ್ವಾಂಗೀಣ ಅಭಿವೃದ್ಧಿಗಾಗಿ ಅನೇಕ ಯೋಜನೆಗಳು, ಕಾರ್ಯಕ್ರಮಗಳು, ವಿಶೇಷ ಕಾಯಿದೆಗಳು ಹಾಗೂ ಅನುದಾನಗಳನ್ನು ಒದಗಿಸುವುದು ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಜಾರಿಗೆ ತಂದಿದೆ. ಇವುಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದೆ ಲಾಭ ಪಡೆಯುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದರು. ಜಿಲ್ಲೆಯ ತಾಲೂಕುಗಳಲ್ಲಿ ಲಭ್ಯವಿರುವ ಡಿ.ಸಿ ಮನ್ನಾ ಜಾಗವನ್ನು ಗುರುತಿಸಿ, ಅರ್ಹ ಭೂ ರಹಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಲಕ್ಷಾಂತರ ರೂ. ಮೌಲ್ಯದ ಅಕ್ಕಿಯನ್ನು ಅಧಿಕಾರಿಗಳು ಹಾಗೂ ಪೊಲೀಸರು ಮಂಗಳವಾರ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಕುಮಟಾದ ನಾಡ ಮಸ್ಕಿರಿಯ ಶ್ರೀ ಗಣೇಶ್ ರೈಸ್ ಇಂಡಸ್ಟ್ರೀಸ್ ಮಾಲಕ ನಾಗರಾಜ್ ನಾಯ್ಕ್ ಅಕ್ಕಿಯನ್ನು ಲಾರಿಗೆ ಲೋಡ್ ಮಾಡಿ, ಕೇರಳ ರಾಜ್ಯದ ಕಾಸರಗೋಡಿನ ಶಾಜಿ ಟ್ರೆಡಿಂಗ್ ಕಂಪೆನಿಗೆ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಲಾರಿ ಮಾಲಕ ಗಿರೀಶ್ ನಾಯ್ಕ್ ತಿಳಿಸಿದಂತೆ ಲಾರಿ ಚಾಲಕ ಕೆ. ನರಸಿಂಹ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಬ್ರಹ್ಮಾವರ ಆಹಾರ ನಿರೀಕ್ಷಕ ವಸಂತ ಕುಮಾರ್ ಅವರಿಗೆ ದೊರೆತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಠಾಣಾ ಎಸ್ಸೈ ಪ್ರವೀಣ್ ಕುಮಾರ್ ಸಿಬ್ಬಂದಿ ಜೊತೆ ಮಣೂರು ಗ್ರಾಮದ ಮಹಾಲಕ್ಷ್ಮೀ ಹೊಟೇಲ್ ಎದುರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ತಡೆದು 3,84,000 ರೂ. ಮೌಲ್ಯದ 320 ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ ಒಟ್ಟು 160 ಕ್ವಿಂಟಾಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ‘ದೀಕ್ಷಾರಂಭ’ ಕಾರ್ಯಕ್ರಮದ ಅಂಗವಾಗಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC), ಮೂಡ್ಲಕಟ್ಟೆ ಇಲ್ಲಿನ ಐಟಿ ಮತ್ತು ಕೋಡಿಂಗ್ ಕ್ಲಬ್ ವತಿಯಿಂದ ಮೊದಲ ವರ್ಷದ ಬಿಸಿಎ ವಿದ್ಯಾರ್ಥಿಗಳಿಗಾಗಿ ಮಣಿಪಾಲ್ ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಶೈಕ್ಷಣಿಕ ಭೇಟಿಯನ್ನು ಆಯೋಜಿಸಲಾಗಿತ್ತು. ಐಟಿ ಕ್ಷೇತ್ರದಲ್ಲಿನ ಉದ್ಯಮ ಆಧಾರಿತ ತರಬೇತಿ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ವೃತ್ತಿ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ ನೀಡಿ ಅರಿವು ಮೂಡಿಸುವುದೇ ಈ ಭೇಟಿಯ ಮುಖ್ಯ ಉದ್ದೇಶವಾಗಿತ್ತು. ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಶ್ರೀಮತಿ ರಾಜಲಕ್ಷ್ಮಿ ಮತ್ತು ಶ್ರೀಮತಿ ಸಾವಿತ್ರಿ ಪ್ರಭು ಅವರು ಸ್ವಾಗತಿಸಿ ಪರಿಚಯಿಸಿ ಕಾರ್ಯಕ್ರಮದ ಸಂಯೋಜನೆಯನ್ನು ಅವರು ನಿರ್ವಹಿಸಿದರು. ಕೇಂದ್ರದಲ್ಲಿನ ತರಬೇತಿ ಸೌಲಭ್ಯಗಳು, ಕೌಶಲ್ಯಾಭಿವೃದ್ಧಿ ಉಪಕ್ರಮಗಳು ಮತ್ತು ಉದ್ಯಮ ಆಧಾರಿತ ಕಾರ್ಯಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಂಪ್ಯೂಟರ್ ಅಪ್ಲಿಕೇಷನ್ಸ್ ವಿಭಾಗದ ಮುಖ್ಯಸ್ಥರಾದ ಸ್ವರ್ಣರಾಣಿ ಯು.ಪಿ. ಅವರ ನೇತೃತ್ವದಲ್ಲಿ ವಿಭಾಗದ ಬೋಧಕ ಸಿಬ್ಬಂದಿ ಈ ಭೇಟಿಯಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉದ್ಯಮಕ್ಕೆ ಅಗತ್ಯವಿರುವ…
