ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟ ಶಿಕ್ಷಣ ನೀಡಲು ಮೂಲಭೂತ ಅವಶ್ಯಕತೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಒಂದು ಪ್ರಮುಖ ಅವಶ್ಯಕತೆ. ತರಗತಿಯಲ್ಲಿ ಬೋಧಿಸಿದ ಪಾಠಗಳ ಸ್ಥಿರೀಕರಣಕ್ಕೆ ಸ್ಮಾರ್ಟ್ ಕ್ಲಾಸ್ ಬಹಳ ಉಪಯುಕ್ತ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸಂಜೀವ ದೇವಾಡಿಗ ಕೊಡುಗೆ ನೀಡಿದ ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಶಾಲೆ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು. ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಕಾಂಚನ್ ಕೊಮೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕ್ ಪಂಚಾಯತ್ ಸದಸ್ಯೆ ಜೆತಿ ವಿ. ಪುತ್ರನ್, ತೆಕ್ಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಶಿಕ್ಷಣ ತಜ್ಞ ಕೆ.ವಿ.ನಾಯಕ್, ನಿವೃತ್ತ ಉಪನ್ಯಾಸಕ ಜಗದೀಶ್ ರಾವ್, ನಿವೃತ್ತ ಮುಖ್ಯೋಪಾಧ್ಯಾಯ ಮಾಲಾಡಿ ವಿಶ್ವನಾಥ ಶೆಟ್ಟಿ, ಉದ್ಯಮಿಗಳಾದ ಗಣಪತಿ ನಾಯಕ್, ಟಿ. ಸಂತೋಷ್ ನಾಯಕ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಸಂಜೀವ ದೇವಾಡಿಗ, ಕೋಟೇಶ್ವರ ವೃತ್ತ ಶಿಕ್ಷಣ ಸಂಯೋಜಕಿ ಅನಿತಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಫೋರ್ಟ್ಸ್ ಕ್ಲಬ್‌ನ ೩೩ನೇ ವಾರ್ಷಿಕೋತ್ಸವ ಸಮಾರಂಭ ಗಂಗೊಳ್ಳಿ ಕೆ.ಎಫ್.ಡಿ.ಸಿ ವಠಾರದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ರಮೇಶ ಕುಂದರ್ ಮಾತನಾಡಿ ನಮ್ಮೂರಿನ ಶಾಲಾ ಕಾಲೇಜುಗಳಿಂದ ಯುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ಅವರ ಬೆಳವಣಿಗೆ ಸಹಕರಿಸಬೇಕು. ಗ್ರಾಮದ ಅಭಿವೃದ್ಧಿ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದರು. ಮುಖ್ಯ ಅತಿಥಿಯಾಗಿ ಜಿಲ್ಲಾ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಠಲ ವಿ.ಗಾಂವಕರ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಮದನ ಕುಮಾರ ಹಾಗೂ ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ ಶುಭ ಹಾರೈಸಿದರು. ಇದೇ ಸಂದರ್ಭ ರಾಪ್ಟ್ರೀಯ ಜ್ಯೂನಿಯರ್ ಕರಾಟೆ ಪಟು ಕುಂದಾಪುರದ ಸನಿಯಾ ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಮೋಹನ ಖಾರ್ವಿ ಸ್ವಾಗತಿಸಿದರು. ಸಂಘದ ಶಿಕ್ಷಣನಿಧಿಯ ಗೌರವ ಸದಸ್ಯ ಜಿ.ಪುರುಷೋತ್ತಮ ಆರ್ಕಾಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಸತೀಶ ಜಿ. ಖಾರ್ವಿ ವರದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮನೆಗಳಲ್ಲಿ ತಂದೆ ತಾಯಂದಿರು ಸಂಸ್ಕಾರದ ಮೂಲಕ ಸುಸಂಸ್ಕೃತರಾಗಬೇಕು. ಮಕ್ಕಳಲ್ಲಿ ಉತ್ತಮ ಸಂಸ್ಕಾರ ಸಂಸ್ಕೃತಿ ಬೆಳೆಯಬೇಕಾದರೆ ಮನೆ ಹಾಗೂ ಶಾಲೆಗಳಲ್ಲಿ ಹಿಂದು ಸಂಸ್ಕೃತಿಯ ಶಿಕ್ಷಣ ನೀಡಬೇಕು. ಸಂಸ್ಕಾರ ಸಂಸ್ಕೃತಿ ನೀಡುವ ಭಾಷೆಯನ್ನು ಬಾಲ್ಯದಲ್ಲಿ ಮಕ್ಕಳಿಗೆ ನೀಡಬೇಕು. ಮಕ್ಕಳನ್ನು ಸತ್ರ್ಪಜೆಗಳನ್ನಾಗಿ ರೂಪಿಸುವ ಮಹತ್ತರವಾದ ಜವಾಬ್ದಾರಿ ಮಕ್ಕಳ ಪೋಷಕರ ಮೇಲಿದೆ. ಮಕ್ಕಳಿಗೆ ಅಗತ್ಯವಾಗಿರುವ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಬೆಳೆಯಲು ಅವಕಾಶ ಕಲ್ಪಿಸಬೇಕು. ಗೋವುಗಳ ಸಂರಕ್ಷಣೆಗೆ ಮುಂದಾಗಬೇಕು ಎಂದು ಉಡುಪಿಯ ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ಸ್ವಾಮೀಜಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವಿಠಲ ರಖುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಶ್ರೀ ಸುಧೀಂದ್ರ ಕೃಪಾ ಸದನದಲ್ಲಿ ಜರಗಿದ ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ 30ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಗಂಗೊಳ್ಳಿಯಲ್ಲಿ ಕಳೆದ ೩೦ ವರ್ಷಗಳಿಂದ ಪುಟ್ಟ ಮಕ್ಕಳಿಗೆ ಭಾರತೀಯ ಸಂಸ್ಕೃತಿಯ ಶಿಕ್ಷಣ ನೀಡುತ್ತಿರುವ ಸೇವಾ ಸಂಗಮ ನಿವೇದಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಜಾತ್ಯತೀತ ಜನತಾ ಪಕ್ಷದ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮರವಂತೆಯ ಮನ್ಸೂರ್ ಇಬ್ರಾಹಿಂ ನೇಮಕಗೊಂಡಿದ್ದಾರೆ. ಪಕ್ಷದ ಕಾರ್ಯಾಧ್ಯಕ್ಷರಾದ ಎಂ. ಎಸ್. ನಾರಾಯಣ ರಾವ್ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಈ ನೇಮಕ ಮಾಡಿದ್ದಾರೆ ಎಂದು ಜಿಲ್ಲಾಧ್ಯಕ್ಷ ಯೋಗೀಶ ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶಾಲೆಯ ಸುತ್ತಮುತ್ತ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವಂತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲೆಯ ಸುತ್ತಮುತ್ತಲಿನ ಅಂಗಡಿಗಳಿಗೆ ತೆರಳಿ ಮನವಿ ಮಾಡಿಕೊಂಡರು. ಶಾಲಾ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ನೇತೃತ್ವದಲ್ಲಿ ಶಾಲೆಯ ಸಮೀಪದ ಅಂಗಡಿಗಳಿಗೆ ತೆರಳಿದ ವಿದ್ಯಾರ್ಥಿಗಳು ಅಂಗಡಿ ಮಾಲಿಕರಿಗೆ ಗುಲಾಬಿ ಹೂವು ನೀಡಿ ತಂಬಾಕು ಮತ್ತು ತಂಬಾಕು ಉತ್ಪನ್ನ ಮಾರಾಟದಿಂದ ವಿದ್ಯಾರ್ಥಿಗಳ ಮೇಲೆ ಆಗುವ ದುಷ್ಪರಿಣಾಮಗಳನ್ನು ವಿವರಿಸಿ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂದು ಆಗ್ರಹಿಸಿದರು. ಶಾಲೆಯ ಶಿಕ್ಷಕ ರಕ್ಷಕ ಸಮಿತಿಯ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ, ಶಾಲೆಯ ಶಿಕ್ಷಕರಾದ ಸುಜಾತಾ, ಶೋಭಾ, ದಿವ್ಯಶ್ರೀ, ಲಕ್ಷ್ಮೀ, ಜ್ಯೋತಿ, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಉತ್ತರಪ್ರದೇಶ, ಉತ್ತರಾಖಂಡ ಸಹಿತ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಗಣನೀಯ ಸಾಧನೆಗಾಗಿ ಕುಂದಾಪುರ, ಬೈಂದೂರು ಗಂಗೊಳ್ಳಿ ಬಿಜೆಪಿ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬೈಂದೂರು ಬೈಪಾಸ್ ಬಳಿ, ತಲ್ಲೂರು ಪೇಟೆಯಲ್ಲಿ, ಕುಂದಾಪುರ ಮಂಡಲ ಬಿಜೆಪಿ ಕಛೇರಿಯಲ್ಲಿ ಹಾಗೂ ಗಂಗೊಳ್ಳಿಯ ಸ್ಥಾನೀಯ ಸಮಿತಿ ವತಿಯಿಂದ ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಸಂಭ್ರಮ ನಡೆಸಲಾಯಿತು. ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಜಯಭೇರಿ ಬಾರಿಸಿದ್ದು, ಮತದಾರರು ಬಿಜೆಪಿ ಕೈಹಿಡಿದಿದ್ದಾರೆ. ಈ ಚುನಾವಣೆ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ನೀಡಿದ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದ ಅವರು, ಉತ್ತರಪ್ರದೇಶದ ವಿಧಾನಸಭಾ ಚುನಾಚಣಾ ಫಲಿತಾಂಶ ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಯಡಿಯೂರಪ್ಪನವರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೊಂಕಣಿ ಖಾರ್ವಿ ಸಮಾಜ ಬಾಂಧವರ ಬಹುದೊಡ್ಡ ಆಚರಣೆ ಹೋಳಿಯನ್ನು ವಾರಗಳ ಕಾಲ ಅದ್ದೂರಿಯಾಗಿ ಆಚರಿಸಲಾಗಿದ್ದು ಕೊನೆಯ ದಿನ ಹೋಳಿ ಓಕುಳಿ ಹಾಗೂ ಬೃಹತ್ ಪುರಮೆರವಣಿಗೆಯೊಂದಿಗೆ ಸಮಾಪನಗೊಂಡಿತು. ಜನಪದ ವಾದ್ಯ ಗುಮಟೆ, ಚೆಂಡೆ ವಾದನ, ಹೋಳಿ ನೃತ್ಯ ಮನ ಸೆಳೆದರೇ, ಶಿವನ ಸ್ತಬ್ಧಚಿತ್ರ ಹೋಳಿ ಮೆರವಣಿಗೆಯ ಕಳೆ ಹೆಚ್ಚಿಸಿತು. ಎರಡು ತಾಸಿಗೂ ಮಿಕ್ಕಿ ನಡೆದ ಮೆರವಣಿಗೆಯಲ್ಲಿ ಕೊಂಕಣಿ ಖಾರ್ವಿ ಸಮಾಜದ ಪುರುಷರು, ಮಹಿಳೆಯರು, ಮಕ್ಕಳು ಹಾಗೂ ಊರವರು ಪರಸ್ಪರ ಬಣ್ಣ ಎರಚಿಕೊಂಡು ಬಣ್ಣದ ಹಬ್ಬದ ರಂಗು ತುಂಬಿದರು. ಮೆರವಣಿಗೆಯುದ್ದಕ್ಕೂ ಮೊಳಗಿದ ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸಿದರು. ಸಾರ್ವಜನಿಕರೂ ಕೂಡ ಹೋಳಿ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಾರಾಷ್ಟ್ರೀಯ ಎಫ್‌ಎಸ್‌ಎಲ್ ಸೇವಾ ಸಂಸ್ಥೆಯ ವಿದೇಶಿ ಸ್ವಯಂಸೇವಕರು ಹೋಳಿ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದು ವಿಶೇಷವಾಗಿತ್ತು. ಮೆರವಣಿಗೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ‘ರೂಪಕಲಾ ಕುಂದಾಪುರ’ ಜನಪ್ರಿಯ ನಾಟಕ ತಂಡವು ಕತಾರ್‌ನಲ್ಲಿ ‘ಮೂರು ಮುತ್ತುಗಳು’ ನಾಟಕದ 1300ನೇ ಪ್ರಯೋಗ ಮತ್ತು ಕಾಮಿಡಿ ಎಕ್ಸ್‌ಪ್ರೆಸ್ ಹಾಸ್ಯ ಪ್ರದರ್ಶನವನ್ನು ನೀಡಲಿದ್ದಾರೆ. ಹೊಸತಾಗಿ ಆರಂಭಗೊಂಡಿರುವ ವಿಜನ್ ಇವೆಂಟ್ಸ್ ಎಂಬ ಸಂಸ್ಥೆಯು ಎಂಇಎಸ್ ಸ್ಕೂಲ್ ಆಡಿಟೋರಿಯಂನಲ್ಲಿ ಮಾ.17ರ ಸಂಜೆ 4:30ಕ್ಕೆ ಪ್ರದರ್ಶನವನ್ನು ಆಯೋಜಿಸಿದೆ. ಕತಾರ್‌ನಲ್ಲಿ ನೆಲೆಸಿರುವ ರಾಮಚಂದ್ರ ಶೆಟ್ಟಿ, ದೀಪಕ್ ಶೆಟ್ಟಿ ಹಾಗೂ ಸಮಾನ ಮನಸ್ಕ ಕನ್ನಡಿಗರು ಒಟ್ಟು ಸೇರಿ ಕಲೆ, ಶಿಕ್ಷಣ, ಕ್ರೀಡೆ ಹಾಗೂ ಇನ್ನಿತರ ಕಾರ್ಯಕ್ರಮಗಳ ಆಯೋಜನೆಗಾಗಿ ಹುಟ್ಟುಹಾಕಿರುವ ಸಂಸ್ಥೆ ವಿಜನ್ ಇವೆಂಟ್ಸ್. ಈ ಸಂಸ್ಥೆಯ ಮೂಲಕ ಮೊದಲ ಭಾರಿಗೆ ಮೂರು ಮುತ್ತುಗಳು ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ನಾಟಕ ತಂಡದಲ್ಲಿ ಕರಾವಳಿ ಮುತ್ತು ಖ್ಯಾತಿಯ ಕೆ. ಸತೀಶ್ ಪೈ, ಕೆ. ಸಂತೋಷ್ ಪೈ, ಅಶೋಕ್ ಶ್ಯಾನುಭಾಗ್, ನಾಗೇಶ್ ಕಾಮತ್, ಗಣೇಶ್ ಪ್ರಸಾದ್ ಶೆಣೈ, ನವೀನ್ ನಂದಕುಮಾರ್, ಮಣಿಕಂಠ ಶೆಟ್ಟಿ, ಶ್ವೇತಾ ಮೊದಲಾದವರು ಇರಲಿದ್ದಾರೆ. ಕತಾರ್‌ನ ಕನ್ನಡ ನಾಟಕ ಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಮಟ್ಟದ ನೃತ್ಯ ಸ್ಪರ್ಧೆಯು ದಿನಾಂಕ ಸಮರೊಪಗೊಂಡಿತು. ಶಾಸ್ತ್ರೀಯ ಏಕವ್ಯಕ್ತಿ ನ್ರತ್ಯ ಸ್ಪರ್ಥೆಯಲ್ಲಿ ಪ್ರಥಮ ಸ್ಥಾನ ಎಂ.ಜಿ.ಎಂ ಕಾಲೇಜು, ಉಡುಪಿ,ದ್ವಿತೀಯ ಸ್ಥಾನ ಪಿ.ಪಿ.ಸಿ ಕಾಲೇಜು, ಉಡುಪಿ ಹಾಗೂ ತ್ರತೀಯ ಸ್ಥಾನವನ್ನು ಆಳ್ವಾಸ್ ಕಾಲೇಜು ಮೂಡಬಿದ್ರೆ ಪಡೆದುಕೊಂಡಿತು. ಹಾಗೆಯೇ ಜಾನಪದ ಗುಂಪು ನೃತ್ಯ ಸ್ಪರ್ಥೆಯಲ್ಲಿ ಪ್ರಥಮ ಸ್ಥಾನ ಆಳ್ವಾಸ್ ಕಾಲೇಜು, ಮೂಡಬಿದ್ರೆ, ದ್ವಿತೀಯ ಸ್ಥಾನ ಎಂ.ಜಿ.ಎಂ ಕಾಲೇಜು, ಉಡುಪಿ ಹಾಗೂ ತ್ರತೀಯ ಸ್ಥಾನವನ್ನು ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜು ಕೋಟ ಪಡೆದುಕೊಂಡಿತು. ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಅಧ್ಯಕ್ಷ ಪ್ರೊ.ಬಿ.ಉದಯ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳಿಗೆ ದೂರದ್ರಷ್ಟಿ ಇರಬೇಕು. ಶಿಕ್ಷಣದ ಜೊತೆಗೆ ಸಮಾಜ ಕಟ್ಟುವ ಕಾರ್ಯವಾಗಬೇಕು ಓದು ಬದುಕು ಕಟ್ಟುವಂತಾಗಲಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿ.ಎಮ್. ಸುಕುಮಾರ್ ಶೆಟ್ಟಿ ವಿದ್ಯಾರ್ಥಿಗಳಿಗೆ ವಿದ್ಯಾವಂತರಾಗಿ ಜೊತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ರಮೇಶ್ ಗಾಣಿಗ ಕೊಲ್ಲೂರು ಹಾಗೂ ನಯನಾ ರಮೇಶ್ ಗಾಣಿಗ ಮತ್ತು ಮಕ್ಕಳು ನಂಬಿರುವ ನಾಗಬನದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವ ಸಾಂಗವಾಗಿ ನೆರವೇರಿತು. ಮಹಾಅನ್ನಸಂತರ್ಪಣೆ, ಮಂಡಲಸೇವೆ, ಹಾಲಿಟ್ಟು ಸೇವೆ, ಮಂಡಲಪೂಜೆ, ಡಮರು ಸೇವೆಯನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕುಂದಾಪುರ ವ್ಯಾಸರಾಜ ಮಠಾಧೀಶ ಶ್ರೀ ಲಕ್ಷ್ಮೀಂದ್ರ ತೀರ್ಥ ಶ್ರೀಪಾಂದಗಳವರು ಆಶೀರ್ವಚನ ನೀಡಿದರು. ಬಳಿಕ ಜರುಗಿದ ಸಮಾರಂಭದಲ್ಲಿ ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅರ್ಚಕ ಡಾ. ಕೆ.ಎನ್. ನರಸಿಂಹ ಅಡಿಗ ಆಶೀರ್ವಚನ ನುಡಿಗಳನ್ನಾಡಿದರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಎಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಬಿಡೆ, ಕೊಲ್ಲೂರು ಗ್ರಾಪಂ ಅಧ್ಯಕ್ಷ ಎಚ್. ಜಯಪ್ರಕಾಶ್ ಶೆಟ್ಟಿ, ಜಿಲ್ಲಾ…
