Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ವಲಯ ೧೫ರ ಜೇಸಿಐ ಕುಂದಾಪುರ ಘಟಕ ಹಾಗೂ ಜೇಸಿಐ ಕುಂದಾಪುರ ಚರಿಷ್ಮಾ ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ.) ಕುಂದಾಪುರ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಬಲೀಕರಣ ಮಾಹಿತಿ ಕಾರ್ಯಗಾರ ಆಯೋಜಿಸಲಾಯಿತು. ರಾಷ್ಟ್ರೀಯ ನಿರ್ದೇಶಕರು ಜೆಸಿರೇಟ್ ಹಾಗೂ ಲೇಡಿಲೋಮ್ ಜೇಸಿ ವಿಭಾಗ ಜೇಸಿ ರೂಪಶ್ರೀ ರತ್ನಾಕರ ಇಂದ್ರಾಳಿ ಮಹಿಳಾ ಸಬಲೀಕರಣ ಮಾಹಿತಿ ಕಾರ್ಯಗಾರ ಉದ್ಘಾಟಿಸಿದರು. ಜೇಸಿಐ ಕುಂದಾಪುರ ಚರೀಷ್ಮಾ ಅಧ್ಯಕ್ಷೆ ಗೀತಾಂಜಲಿ ಆರ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಲಯ ಅದಿಕಾರಿ ಜೆ.ಎಫ್.ಪಿ ವಿಷ್ಣು ಕೆ. ಬಿ, ಜೇಸಿಐ ಕುಂದಾಪುರದ ಅಧ್ಯಕ್ಷರಾದ ಜೆ.ಎಫ್.ಪಿ ಅಕ್ಷತಾ ಗಿರೀಶ್ ಉಪಸ್ಥಿತರಿದ್ದರು. ಸಭೆಯಲ್ಲಿ ಜೇಸಿರೇಟ್ ಅಧ್ಯಕ್ಷೆ ಜೇಸಿ ನಾಗರತ್ನ ಹೇರ್ಳೆ ಜೇಸಿರೇಟ್ ಸಂಯೋಜಕಿ ನಾಗರತ್ನ ಚಂದ್ರಶೇಖರ್, ಜೇಸಿರೇಟ್ ನ ನಿಕಟ ಪೂರ್ವಧ್ಯಕ್ಷೆ ಮಾಲತಿ ವಿಷ್ಣು ಜೇಸಿರೇಟ್ ಪೂರ್ವಧ್ಯಕ್ಷೆ ಗುಣರತ್ನ ಮಾಲಿನಿ ಸತೀಶ್ ಜೇಸಿಐ ಜ್ಯೂನಿಯರ್ ಜೇಸಿ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ ಗುಲ್ವಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಏಕರೂಪ ಮರಳು ನೀತಿ ಜಾರಿಗೆ ತರುವುದರಿಂದ ಮಾತ್ರ ಮರಳು ಸಮಸ್ಯೆ ನಿವಾರಣೆ ಸಾಧ್ಯವಿದೆ. ಸಿಆರ್‌ಝಡ್, ನಾನ್ ಸಿಆರ್‌ಝಡ್ ಬೇರೆ ಬೇರೆ ನೀತಿಯಿಂದ ರಾಜ್ಯದಲ್ಲಿ ಮರಳು ಸಮಸ್ಯೆ ಉದ್ಭವಿಸಲು ಮೂಲ ಕಾರಣ. ತಕ್ಷಣ ಸರಕಾರ ಏಕರೂಪ ಮರಳು ನೀತಿ ಜಾರಿಗೆ ತರುವ ಮೂಲಕ ಮರಳು ಸಮಸ್ಯೆಗೆ ಮುಕ್ತಿ ಕೊಡಲು ಮುಂದಾಗಬೇಕು ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಆಗ್ರಹಿಸಿದ್ದಾರೆ. ಅವರು ಕುಂದಾಪುರ ಬಿಜೆಪಿ ಕಛೇರಿಯಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಕಾರ ಈಗ ಸಮಿತಿ ರಚಿಸಿ ಮರಳು ನೀತಿಗೆ ಮುಂದಾಗುತ್ತಿದೆ. ಈಗ ಸಾಧ್ಯವಾಗುವುದಾದರೆ ನಾಲ್ಕುವರ್ಷದ ಹಿಂದೆಯೇ ಏಕರೂಪ ಮರಳು ನೀತಿ ಜಾರಿಗೆ ತರಲು ಏಕೆ ಸಾಧ್ಯವಾಗಿರಲಿಲ್ಲ ಎಂದ ಅವರು, ಏಕರೂಪ ಮರಳುನೀತಿಯನ್ನು ಜಾರಿಗೆ ತಂದು ಸಾಂಪ್ರದಾಯಿಕ ಮರಳುಗಾರಿಕೆಗೆ ಅವಕಾಶ ಮಾಡಿಕೊಡಬೇಕು. ಮರಳು ದಿಬ್ಬ ತೆರವಿನಿಂದ ಮೀನುಗಾರರಿಗೂ ನೆರವಾಗಲಿದೆ. ಶೀಘ್ರ ಮರಳುನೀತಿಯನ್ನು ಜಾರಿಗೆ ತರುವುರಿಂದ ಆಶ್ರಯ ಮನೆಯಂತಹ ಅನೇಕ ಸರಕಾರದ ಯೋಜನೆಯಡಿಯಲ್ಲಿ ಮನೆ ಕಟ್ಟಿಕೊಳ್ಳುವವರಿಗೆ ಅನುಕೂಲವಾಗಲಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎರಡು ದಿನದ ಹಿಂದೆ ಅಂಗಡಿಗೆ ತೆರಳಿದ್ದ ಬಾಲಕಿಯನ್ನು ಪುಸಲಾಯಿಸಿ, ಅತ್ಯಾಚಾರ ನಡೆಸಿದ ಘಟನೆ ತಾಲೂಕಿನ ಬಿದ್ದಲ್‌ಕಟ್ಟೆಯಲ್ಲಿ ನಡೆದಿದೆ. ಘಟನೆಯಲ್ಲಿ ತೀರ್ವ ಅಸ್ವಸ್ಥಗೊಂಡಿರುವ ಎಂಟು ವರ್ಷದ ಬಾಲಕಿಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲೂಕಿನ ಬಿದ್ಕಲ್‌ಕಟ್ಟೆಯಲ್ಲಿ ಅಂಗಡಿ ಇಟ್ಟುಕೊಂಡಿದ್ದ ರಾಮದಾಸ ಪ್ರಭು (53) ಅತ್ಯಾಚಾರ ನಡೆಸಿದ ಕಾಮುಕ. ಮೂಲತಃ ಉತ್ತರಕನ್ನಡದವರಾದ ಬಾಲಕಿಯ ಪೋಷಕರು ಬಿದ್ಕಲ್‌ಕಟ್ಟೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಏಕಾಂಗಿಯಾಗಿ ಅಂಗಡಿಗೆ ತೆರಳಿದ್ದ ಬಾಲಕಿಗೆ ಆಪಾದಿತ ರಾಮದಾಸ ಪುಸಲಾಯಿಸಿ ಅಮಾನುಷ ಕೃತ್ಯ ನಡೆಸಿದ್ದು, ಎರಡು ದಿನಗಳಿಂದ ಬಾಲಕಿ ಅಸ್ವಸ್ಥಗೊಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದಾಗ ಅತ್ಯಾಚಾರ ನಡೆದಿರುವುದು ದೃಢಪಟ್ಟಿದ್ದು, ತೀರ್ವ ಅಸ್ವಸ್ಥಗೊಂಡಿರುವುದರಿಂದ ಮಣಿಪಾಲಕ್ಕೆ ಕರೆದೊಯ್ಯಲಾಗಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ ಪೊಲೀಸರು ತನಿಕೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಪಾದಿತನನ್ನು ಬಂಧಿಸಲಾಗಿದೆ.  ಈ ಹೇಯ ಕೃತ್ಯವನ್ನು ಕುಂದಾಪುರದ ನಾಗರಿಕರು ಖಂಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಸೊಗಡು, ಕುಂದಗನ್ನಡದ ಕಂಪಿನೊಂದಿಗೆ ಜಾತಿ ಹಾಗೂ ಮೀಸಲಾತಿ ಹಿಂದಿನ ತಲ್ಲಣಗಳನ್ನು ತೆರೆಯ ಮೇಲೆ ಕಟ್ಟಿಕೊಟ್ಟ ’ರಿಸರ್ವೇಶನ್’ ಚಿತ್ರಕ್ಕೆ 64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಗಿದ್ದು, ಅತ್ಯುತ್ತಮ ಕನ್ನಡ (ಪ್ರಾದೇಶಿಕ) ಚಿತ್ರ ಪ್ರಶಸ್ತಿ ದೊರೆತಿದೆ. ಜಾತಿ ಹಾಗೂ ಮೀಸಲಾತಿ ವ್ಯವಸ್ಥೆಯು ಮಧ್ಯಮ ವರ್ಗದ ಕುಟುಂಬದ ಮೇಲೆ ಬೀರಬಹುದಾದ ಪ್ರಭಾವ – ತಲ್ಲಣಗಳು ಹಾಗೂ ಅದರಾಚೆಗಿನ ಪರಿಣಾಮವನ್ನು ಕಥಾವಸ್ತುವಾಗಿಸಿಕೊಂಡ ’ರಿಸರ್ವೆಶನ್’ ಕಲಾತ್ಮಕ ಚಿತ್ರವನ್ನು ಖ್ಯಾತ ನಿರ್ದೇಶಕ ನಿಖಿಲ್ ಮಂಜು ನಿರ್ದೇಶಿಸಿದ್ದರು. ಗುಲ್ವಾಡಿ ಟಾಕೀಸ್ ಬ್ಯಾನರ್‌ನಲ್ಲಿ ನಟ, ಸಾಹಿತಿ ಯಾಕೂಬ್ ಖಾದರ್ ಗುಲ್ವಾಡಿ ಚಿತ್ರ ನಿರ್ಮಾಣ ಮಾಡಿದ್ದರು. ಶ್ರೀಲಲಿತೆ ಅವರ ಕಥೆಯನ್ನಾಧರಿಸಿದ ಚಿತ್ರಕ್ಕೆ ಬಿ. ಶಿವಾನಂದ್ ಸಂಭಾಷಣೆ ಬರೆದಿದ್ದರೇ, ಪ್ರದೀಪ್ ಶೆಟ್ಟಿ ಕೆಂಚನೂರು, ನಿಖಿಲ್ ಮಂಜು ಹಾಗೂ ಬಿ. ಶಿವಾನಂದ ಚಿತ್ರಕಥೆ ಬರೆದಿದಾರೆ. ಪಿವಿಆರ್ ಸ್ವಾಮಿ ಅವರ ಛಾಯಾಗ್ರಹಣ, ಸಮೀರ್ ಅವರ ಸಂಗೀತದಲ್ಲಿ ಮಾನಸಿ ಸುಧೀರ್ ಸೇರಿದಂತೆ ಹಲವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಚಿತ್ರಕ್ಕೆ ರಾಷ್ಟ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಹಿಳೆಯರು ಸಮಾಜದಲ್ಲಿ ಮುಂಚೂಣಿಯಲ್ಲಿದ್ದರೆ ಸಮಾಜ ಪ್ರಗತಿ ಕಾಣುತ್ತದೆ. ಮಹಿಳೆ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವುದರೊಂದಿಗೆ ಪರಸ್ಪರ ಸಹಕಾರ ಮನೋಭಾವದಿಂದ ಜೀವನ ನಡೆಸಬೇಕಿದೆ. ಮಹಿಳಾ ಸಹಕಾರಿ ಸಂಘಗಳ ಸ್ಥಾಪನೆಯ ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಯತ್ನ ಶ್ಲಾಘನೀಯ. ಸಹಕಾರಿ ಸಂಘಗಳು ಮಹಿಳೆಯ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವತ್ತ ಗಮನಹರಿಸಬೇಕು ಹಾಗೂ ಸಂಘವನ್ನು ವ್ಯವಸ್ಥಿತ ರೀತಿಯಲ್ಲಿ ಮುನ್ನಡೆಸಿ ಸಹಕಾರಿ ಕ್ಷೇತ್ರದಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತಾಗಬೇಕು ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಎಸ್. ರಾಜು ಪೂಜಾರಿ ಹೇಳಿದರು. ಅವರು ಕೊಡಪಾಡಿಯ ಪಾಂಡುರಂಗ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಆರಂಭವಾಗಿರುವ ಮಾರಿಕಾಂಬಾ ಮಹಿಳಾ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ನಾರಾಯಣ ಕೆ., ಗುಜ್ಜಾಡಿ ಗ್ರಾಪಂ ಅಧ್ಯಕ್ಷ ಹರೀಶ ಮೇಸ್ತ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ ನಾಯ್ಕ್, ಕುಂದಾಪುರದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರಪ್ರತಿಮಾ ಎಂ.ಜೆ., ಹೆಮ್ಮಾಡಿ ಪ್ರಗತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಜ್ಞಾನಗಂಗಾ ಕಾರ್ಯಕ್ರಮದ ಅಂಗವಾಗಿ ಶ್ರೀಮದ್ ಭಗವದ್ಗೀತಾ ಬೋಧನೆ ಕಾರ್ಯಕ್ರಮ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಖುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದ ಧಾರ್ಮಿಕ ಮುಖಂಡ ಮಂಗೇಶ ಶೆಣೈ ಅವರು ಭಗವದ್ಗೀತೆಯ ಪರಿಚಯ, ಶ್ಲೋಕಗಳ ಉಚ್ಛಾರ, ವ್ಯಾಕರಣ, ಪದಗಳ ಅರ್ಥ, ಭಾವಾರ್ಥ ಮುಂತಾದವುಗಳನ್ನು ತಿಳಿಸಿದರು. ಭಗವದ್ಗೀತೆಯ ಪ್ರಥಮ ಎರಡು ಅಧ್ಯಾಯಗಳನ್ನು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ವಿವರಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ ಅವರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸಂಸ್ಮರಣೆ ಹಾಗೂ ಗುರುವಂದನ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮುಂದಿನ ಒಂದು ವರ್ಷ ಪರ್ಯಂತ ಭಗವದ್ಗೀತೆಯ ಬೋಧನೆ ಹಾಗೂ ಮಕ್ಕಳಿಗೆ ಧಾರ್ಮಿಕ, ಬೌದ್ಧಿಕ ವ್ಯಕ್ತಿತ್ವ ವಿಕಸನದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಜಿ.ಸುದರ್ಶನ ಆಚಾರ್ಯ, ಬಿ.ಪ್ರಕಾಶ ಪಡಿಯಾರ್, ನಿನಾದ ಸಂಸ್ಥೆಯ ಪದಾಧಿಕಾರಿಗಳು, ಸಮಾಜಬಾಂಧವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಪರಿವರ್ತನ ಪುನರ್ವಸತಿ ಕೇಂದ್ರ, ಕೋಟ ಮತ್ತು ಮನಸ್ಮಿತಾ ಫೌಂಡೇಶನ್, ಕೋಟ ಇವರ ಆಶ್ರಯ ಹಾಗೂ ಭಾರತೀಯ ಜನತಾ ಪಾರ್ಟಿ, ಹಿಂದುಳಿದ ವರ್ಗಗಳ ಮೋರ್ಚಾ, ಕುಂದಾಪುರ ಘಟಕ ಇವರ ಸಹಯೋಗದಲ್ಲಿ ಎ.೦೫ರಂದು ಕೋಟದ ಪರಿವರ್ತನ ಪುನರ್ವಸತಿ ಕೇಂದ್ರದಲ್ಲಿ 18ನೇ ಮಾಸಿಕ ಉಚಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ನಡೆಯಿತು. ಪರಿವರ್ತನ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಪ್ರಕಾಶ್ ಸಿ. ತೋಳರ್ ರವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಈ ಶಿಬಿರವನ್ನು ಪ್ರತಿ ತಿಂಗಳು ಆಯೋಜಿಸಲಾಗುತ್ತಿದ್ದು, ಬಡ ರೋಗಿಗಳು ತಮ್ಮ ಚಿಕಿತ್ಸೆ ಹಾಗೂ ಔಷಧಗಳನ್ನು ಮುಂದುವರಿಸಲು ಮತ್ತು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿ ದಾನಿಗಳ ಸಹಕಾರಕ್ಕಾಗಿ ಅವರನ್ನು ಅಭಿನಂದಿಸಿದರು. ಕುಂದಾಪುರ ಪುರಸಭೆ ಉಪಾಧ್ಯಕ್ಷರಾದ ರಾಜೇಶ್ ಕಾವೇರಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಜೀವನದಲ್ಲಿ ಅವಿಭಕ್ತ ಕುಟುಂಬ ಪದ್ಧತಿ, ನಗು ಮತ್ತು ಸಂತೋಷದ ಮಹತ್ವ ಹಾಗೂ ಮಾನಸಿಕ ರೋಗಗಳಿಗೆ ಬೇಕಾಗುವ ಚಿಕಿತ್ಸೆಗಳ ಮಹತ್ವವನ್ನು ತಿಳಿಸಿ ಎಲ್ಲರೂ ಮಾನಸಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಕನ್ನಡ ಶಾಲೆ ಮುಚ್ಚುತ್ತಿದ್ದಾರೆ. ಎಂಬ ಕೂಗಿನ ನಡುವೆಯೇ ಒಂದಷ್ಟು ಶಾಲೆಗಳಲ್ಲಿ ಸಕಾರಾತ್ಮಕ ಬೆಳವಣಿಗೆಗಳು ಗೋಚರಿಸುತ್ತಿವೆ. ಕನ್ನಡ ಶಾಲೆಗಳ ಕಾಲ ಮುಗಿಯಿತೆನ್ನುವ ಆತಂಕದ ನಡುವೆಯೇ ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ತಾವು ಕಲಿತ ಶಾಲೆಯನ್ನು ಉಳಿಸಿಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದಾರೆ. ಖಾಸಗಿ ಶಾಲೆಗಳಿಗೆ ಸಮನಾಗಿ ಇಂದಿನ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರಕಿಸುವಲ್ಲಿ, ಶಾಲೆಗೆ ಅಗತ್ಯವಾದ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವಲ್ಲಿ ಶ್ರಮಿಸುತ್ತಿದ್ದಾರೆ ಎನ್ನುವುದು ಸದಸ್ಯ ಆಶಾದಾಯಕ ಸಂಗತಿ. ಯಳಜಿತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿಗಳು ಕೂಡ ತಮ್ಮ ಶಾಲೆಯ ಸರ್ವತೋಮುಖ ಏಳಿಗೆಗಾಗಿ ಪಣತೊಟ್ಟಿದ್ದಾರೆ. ತಾವು ಕಲಿತ ಶಾಲೆ ಅಭಿವೃದ್ಧಿಯನ್ನು ಕಾಣಬೇಕು ಇಂದಿನ ವಿದ್ಯಾರ್ಥಿಗಳ ಓದಿಗೆ ಪೂರಕವಾದ ವ್ಯವಸ್ಥೆಯನ್ನು ಮಾಡಕೊಡಬೇಕು ಎಂಬ ನೆಲೆಯಲ್ಲಿ ಹಳೆವಿದ್ಯಾರ್ಥಿಗಳು ಹಾಗೂ ಊರಿನವರ ಜೊತೆಗೂಡಿ ‘ಯಳಜಿತ ವಿದ್ಯಾಚಕ್ರ ಎಜುಕೇಶನಲ್ ಟ್ರಸ್ಟ್’ ಸ್ಥಾಪಿಸಿ ಆ ಮೂಲಕ ಶಾಲೆಗೆ ನೆರವಾಗುವ ಗಟ್ಟಿ ಮನಸ್ಸು ಮಾಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಟ್ರಸ್ಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶಕುಮಾರ್ ಎಂ. ಶೆಟ್ಟಿ ಉಪ್ಪುಂದ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರವು ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಹರೀಶಕುಮಾರ್ ಎಂ, ಶೆಟ್ಟಿ ಉಪ್ಪುಂದ, ವಂಡಬಳ್ಳಿ ಜಯರಾಮ ಶೆಟ್ಟಿ, ರಮೇಶ ಗಾಣಿಗ, ಅಂಬಿಕಾ ರಾಜು ದೇವಾಡಿಗ, ರಾಜೇಶ ಕಾರಂತ, ಜಯಂತಿ ವಿಜಯಕೃಷ್ಣ ಪಡುಕೋಣೆ, ನರಸಿಂಹ ಹಳಗೇರಿ, ಡಾ. ಅಭೀಷೆಕ್ ಪಿಳ್ಳೆ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರನ್ನು ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿತ್ತು. ಕೊಲ್ಲೂರಿನ ಜಗದಾಂಬಿಕಾ ಅತಿಥಿ ಗೃಹದಲ್ಲಿ ಕೊಲ್ಲೂರು ದೇಗುಲದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಗನ್ನಾಥ ಅವರ ನೇತೃತ್ವದಲ್ಲಿ ನಡೆದ ವ್ಯವಸ್ಥಾಪನಾ ಸಮಿತಿಯ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಸಲಾಗಿತ್ತು.  ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದ ಹರೀಶ್‌ಕುಮಾರ್ ಶೆಟ್ಟಿ ಅವರ ಪರವಾಗಿ ೬ ಮಂದಿ ಸದಸ್ಯರು ಕೈ ಎತ್ತುವ ಮೂಲಕ ಬಹುಮತ ತೋರಿದ್ದರಿಂದಾಗಿ ಅವರು ವ್ಯವಸ್ಥಾಪನಾ ಸಮಿತಿಯ…

Read More

ತಗ್ಗರ್ಸೆ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಗಳಲ್ಲಿ ಕುತೂಹಲ ಮತ್ತು ಆವಿಷ್ಕಾರ ಮಾಡುವ ಗುಣವಿದ್ದರೆ ಪಠ್ಯ ಚಟುವಟಿಕೆಯೊಂದಿಗೆ ಹೊಸ ಹೊಸ ಯೋಜನೆ ಯೋಜನೆಗಳನ್ನು ಅಳವಡಿಸಿಕೊಂಡು ಪ್ರಾಯೋಗಿಕ ಅನುಭವವನ್ನು ಪಡೆದುಕೊಳ್ಳಲು ಸಾಧ್ಯವಿದೆ ಎಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಧಿತಿ ಶೆಟ್ಟಿ ಹೇಳಿದರು. ಅವರು ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನದ ವತಿಯಿಂದ ಆಯೋಜಿಸಲಾದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ರಾಮನ್ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದರು. ತರಗತಿಯಲ್ಲಿ ಎಷ್ಟೇ ಪಾಠ ಪ್ರವಚನಗಳನ್ನು ಮಾಡಿದರೂ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ ದೊರೆಯದು. ವಿದ್ಯಾರ್ಥಿಗಳಿಗೆ ಪ್ರವಾಸ, ಪ್ರಾತ್ಯಕ್ಷಿಕೆ ಹಾಗೂ ವಸ್ತು ಪ್ರದರ್ಶನಗಳನ್ನು ಆಯೋಜಿಸಿ ಸುಲಭವಾಗಿ ಮನವರಿಕೆ ಮಾಡಬಹುದಾಗಿದ್ದು ಆ ದಿಸೆಯಲ್ಲಿ ತಗ್ಗರ್ಸೆ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ಆವಿಷ್ಕಾರ ಅಭಿಯಾನದ ಮೂಲಕ ಹಮ್ಮಿಕೊಂಡ ಕಾರ್ಯಕ್ರಮ ಸೃಜನಶೀಲ ಚಿಂತನೆಗೆ ದಾರಿಮಾಡಿಕೊಡುತ್ತದೆ ಎಂದರು. ತಾಲೂಕು ಪಂಚಾಯತ್ ಸದಸ್ಯೆ ಮಾಲಿಕೆ ಕೆ. ಕಾರ್ಯಕ್ರಮದ…

Read More