Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶ್ವವ್ಯಾಪಿಯಾದ ಸಂಸ್ಕೃತ ನಮ್ಮ ನೆಲದ ಅತ್ಯಂತ ಪ್ರಾಚೀನ ಭಾಷೆ. ಸಹಸ್ರಾರು ವರ್ಷಗಳು ಸಂದರೂ ಒಂದು ಶಬ್ದವೂ ಅಪಭ್ರಂಶಗೊಳ್ಳದೆ, ಪರಿಶುದ್ಧತೆಯನ್ನು ಕಾಪಾಡಿಕೊಂಡು ಬಂದಿರುವುದು ಇದರ ವೈಶಿಷ್ಟ್ಯ. ಕನ್ನಡ ಮೊದಲಾದ ರಾಜ್ಯ ಭಾಷೆಗಳ ಮೇಲೆ ಸಂಸ್ಕೃತ ಗಾಢವಾದ ಪ್ರಭಾವ ಬೀರಿದೆ. ವೇದಗಳಿಂದ ಮೊದಲ್ಗೊಂಡು ಜಾನಪದ ಸಾಹಿತ್ಯದವರೆಗೆ ವಿಪುಲವಾದ ಸಾಹಿತ್ಯವನ್ನು ಹೊಂದಿದ ಸಂಸ್ಕೃತ ತ್ರಿಕಾಲಾಭಾಧಿತವಾದ ಸುಂದರ ಸೂಕ್ತಿಗಳ ಸಾಗರ. ಅಂತಹ ಸೂಕ್ತಿಗಳಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಉಪಯುಕ್ತ ಸೂಕ್ತಿಗಳನ್ನು ಸಂಗ್ರಹಿಸಿ, ಸರಳ ಕನ್ನಡ ಅನುವಾದದೊಂದಿಗೆ ಪ್ರಕಟಿಸಲಾದ ಈ ಕೃತಿ ಸಾಹಿತ್ಯ ಲೋಕಕ್ಕೊಂದು ವಿಶಿಷ್ಟ ಕೊಡುಗೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಾಹಿತಿ ಶ್ರೀ ನೀಲಾವರ ಸುರೇಂದ್ರ ಅಡಿಗರು ಹೇಳಿದರು. ಅವರು ಇಲ್ಲಿನ ರೋಟರಿ ಭವನದಲ್ಲಿ ಹಿರಿಯ ಸಾಹಿತಿ, ವಿಶ್ರಾಂತ ಪ್ರಾಧ್ಯಾಪಕ ಡಾ| ಎಚ್.ವಿ. ನರಸಿಂಹಮೂರ್ತಿಯವರ ’ಸಂಸ್ಕೃತ ಸೂಕ್ತಿಗಳು’ ಎಂಬ ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದರು. ಕುಂದಾಪುರ ರೋಟರಿ ಅಧ್ಯಕ್ಷ ರೊ| ಉದಯಕುಮಾರ ಶೆಟ್ಟಿ ಅಧ್ಯಕ್ಷತೆ…

Read More

ದೋಹಾ ಕತಾರ್‌ನಲ್ಲಿ ‘ವಿಜನ್ ಇವೆಂಟ್ಸ್’ ಸಂಸ್ಥೆ ಲೋಕಾರ್ಪಣೆ ಕುಂದಾಪ್ರ ಡಾಟ್ ಕಾಂ ಸುದ್ದಿ. ದೋಹಾ: ನೂತನವಾಗಿ ಆರಂಭಗೊಂಡ ವಿಜನ್ ಇವೆಂಟ್ಸ್ ಸಂಸ್ಥೆಯು ಇಲ್ಲಿನ ಎಂಇಎಸ್ ಸ್ಕೂಲ್ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ’ಮೂರು ಮುತ್ತುಗಳು’ ನಾಟಕ ಪ್ರದರ್ಶನ ನೆರೆದಿದ್ದ ನೂರಾರು ಪ್ರೇಕ್ಷಕರ ಮನಸೂರೆಗೊಳಿಸಿತು. ಕತಾರ್‌ನಲ್ಲಿ ನೆಲೆಸಿರುವ ರಾಮಚಂದ್ರ ಶೆಟ್ಟಿ, ದೀಪಕ್ ಶೆಟ್ಟಿ ಹಾಗೂ ಸಮಾನ ಮನಸ್ಕ ಕನ್ನಡಿಗರು ಒಟ್ಟು ಸೇರಿ ಕಲೆ, ಶಿಕ್ಷಣ, ಕ್ರೀಡೆ ಹಾಗೂ ಇನ್ನಿತರ ಕಾರ್ಯಕ್ರಮಗಳ ಆಯೋಜನೆಗಾಗಿ ಹುಟ್ಟುಹಾಕಿರುವ ಸಂಸ್ಥೆ ವಿಜನ್ ಇವೆಂಟ್ಸ್‌ನ ಉದ್ಘಾಟನಾ ಸಮಾರಂಭ ಹಾಗೂ ಬಳಿಕ ನಾಟಕ ಪ್ರದರ್ಶನ ಯಶಸ್ವಿಯಾಗಿ ಸಮಾಪನಗೊಂಡವು. ಉದ್ಘಾಟನಾ ಕಾರ್ಯಕ್ರಮದಲ್ಲಿ ಇಂಡಿಯನ್ ಕಲ್ಚರಲ್ ಸೆಂಟರ್ ಅಧ್ಯಕ್ಷರಾದ ಮಿಲಾನ್ ಅರುಣ್ ಮುಖ್ಯ ಅತಿಥಿಗಳಾಗಿದ್ದರು. ದುಬೈ ಫಾರ್ಚೂನ್ ಗ್ರೂಫ್ ಹೋಟೆಲ್ಸ್‌ನ ಮಾಲಕ ಪ್ರವೀಣಕುಮಾರ್ ಶೆಟ್ಟಿ, ಅಲ್-ಝಮಾನ್ ಎಕ್ಸ್‌ಚೆಂಚ್‌ನ ಬಿಜಿನೆಸ್ ಡೆವೆಲಪ್‌ಮೆಂಟ್ ಮ್ಯಾನೆಜರ್ ಫಯಾಝ್ ಸಿ.ಕೆ, ಅಡ್ವಾಸ್ ಟೆಕ್ನಿಕಲ್ ಸರ್ವಿಸ್ ಎಂ.ಡಿ. ರವಿ ಶೆಟ್ಟಿ, ಅಲ್-ಮುಫ್ತಾಹ್ ಜನರಲ್ ಮ್ಯಾನೆಜರ್ ವೀರೇಶ್ ಮಾನಂಗಿ ಮೊದಲಾದವರು ಅತಿಥಿಗಳಾಗಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬೈಪಾಸ್ ಬಳಿ ಮೇಲ್ಸೆತುವೆ ನಿರ್ಮಾಣ ಮಾಡುವಂತೆ ಸ್ಥಳೀಯರು ಸಂಸದ ಯಡಿಯೂರಪ್ಪ ಅವರಿಗೆ ಈ ಹಿಂದೆ ನೀಡಲಾಗಿದ್ದ ಮನವಿಯ ಸಂಬಂಧ ಸಂಸದರ ಖಾಸಗಿ ಆಪ್ತ ಸಹಾಯಕ ಪುರುಷೋತ್ತಮ ಅವರು ಉಡುಪಿ ಜಿಲ್ಲಾಧಿಕಾರಿಯೊಂದಿಗೆ ಬೈಂದೂರಿಗೆ ಭೇಟಿ ನೀಡಿ ಚರ್ಚಿಸಿದರು. ಮೇಲ್ಸೆತುವೆ ನಿರ್ಮಾಣಕ್ಕೆ ಸಂಸದರ ಶಿಪಾರಸ್ಸು: ಕೇಂದ್ರ ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿರುವ ಸಂಸದರು ಗುತ್ತಿಗೆದಾರ ಕಂಪೆನಿಗೆ ಶಿಪಾರಸ್ಸು ಪತ್ರ ನೀಡಿದ್ದಾರೆ. ಈ ಸಂಬಂಧ ಗುತ್ತಿಗೆದಾರ ಕಂಪೆನಿಯ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಚರ್ಚಿಸುವ ಸಲುವಾಗಿ ಮೇಲ್ಸೇತುವೆ ಕಾಮಗಾರಿಗೆ ಶೀಘ್ರ ಅಂದಾಜು ಪಟ್ಟಿ ತಯಾರಿಸಿ, ಕಾಮಗಾರಿಗೆ ಅಗತ್ಯ ಕ್ರಮ ಕೈಗೆತ್ತಿಕೊಳ್ಳುವಂತೆ ಚತುಷ್ಪಥ ಹೆದ್ದಾರಿ ಗುತ್ತಿಗೆದಾರ ಕಂಪೆನಿಯ ಅಧಿಕಾರಿಗಳಿಗೆ ಸಂಸದರ ನಿರ್ದೇಶನದಂತೆ ಅವರ ಆಪ್ತ ಸಹಾಯಕ ಸೂಚಿಸಿದರು. ಸಂತ್ರಸ್ಥ ಕುಟುಂಬದ ಪರಿಹಾರಕ್ಕೆ ಕ್ರಮ ಕೈಗೊಳ್ಳಿ: ಸ್ಥಳದಲ್ಲಿದ್ದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರೊಂದಿಗೆ ಅಳಲು ತೋಡಿಕೊಂಡ ಸ್ಥಳೀಯರು ಚತುಷ್ಪಥ ಕಾಮಗಾರಿಯಿಂದಾಗಿ ಭೂಮಿ ಕಳೆದುಕೊಂಡ ಸಂತೃಸ್ತ ಕುಟುಂಬಗಳಿಗೆ ನೀಡಲಾದ ಪರಿಹಾದ ಮೊತ್ತದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ದೇಶಕ್ಕೆ ಸ್ವಾತಂತ್ರ್ಯ ಬಂದು ೭ ದಶಕ ಪೂರೈಸುವ ಅವಧಿಯಲ್ಲಿದ್ದೇವೆ. ದೇಶದ ಮೂಲಭೂತ ಸೌಕರ‍್ಯಕ್ಕೆ ಕೇಂದ್ರ ರಾಜ್ಯ ಸರಕಾರ ಕೋಟ್ಯಾಂತರ ಹಣ ಖರ್ಚು ಮಾಡಿದೆ. ಆದಾಗ್ಯೂ ಈಗಲೂ ಬಡತನ, ನಿರುದ್ಯೋಗ ಹಸಿವು ಮಹಿಳೆಯರ ಮೇಲೆ ದೌರ್ಜನ್ಯ ಜಾತಿ ತಾರತಮ್ಯ ಅಸ್ಪೃಶ್ಯತೆ ಕಡಿಮೆಯಾಗಲಿಲ್ಲ. ಬದಲಿಗೆ ಹೆಚ್ಚುತ್ತಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರತ್ನ ನಾಡ ಹೇಳಿದರು. ಮನೆ ನಿವೇಶನ ರಹಿತರ ಅರ್ಜಿದಾರರ ಬೃಹತ್ ಸಮಾವೇಶವನ್ನು ಗಂಗೊಳ್ಳಿ ವಿರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ದೇಶಾದ್ಯಂತ ೨೦ ಕೋಟಿ, ರಾಜ್ಯದಲ್ಲಿ ೧ ಕೋಟಿಗೂ ಹೆಚ್ಚು ಕೃಷಿ ಕೂಲಿಕಾರರು ಇದ್ದಾರೆ. ಪ್ರತಿಯೊಬ್ಬನ ತಲೆ ಮೇಲೊಂದು ಸೂರು ನಮ್ಮ ಮೂಲಭೂತ ಹಕ್ಕು. ನಮ್ಮ ಹಕ್ಕನ್ನು ಪಡೆಯಲು ಹೋರಾಟ ಚಳವಳಿಯನ್ನು ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಬೈಂದೂರು ಹಾಗೂ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರ ಮನೆ ಮುಂದೆ ನಿವೇಶನ ರಹಿತರಿಂದ ಭೂಮಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರ, ಪಟ್ಟಣ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅನುಕೂಲವಿದ್ದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಬಂಟ ಸಮಾಜ ಯುವಕರು ಹಿರಿಯರ ಮಾರ್ಗದರ್ಶನಲ್ಲಿ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳ ತೆರೆಯುವ ಮೂಲಕ ಎಲ್ಲರಿಗೂ ಉತ್ತಮ ಶಿಕ್ಷಣ ಸಿಗುವಂಣh ವ್ಯವಸ್ಥೆಗೆ ಮುಂದಾಗಬೇಕು. ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಬೆಂಗಳೂರು ಬಂಟರ ಸಂಘ ಗೌರವ ಪ್ರಧಾನ ಕಾರ‍್ಯದರ್ಶಿ ಜಪ್ತಿ ಸಂತೋಷ ಶೆಟ್ಟಿ ಸಲಹೆ ಮಾಡಿದ್ದಾರೆ. ಕುಂದಾಪುರ ತಾಲೂಕು ಯುವ ಬಂಟರ ಸಂಘ ಆಶ್ರಯದಲ್ಲಿ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಬಂಟ್ಸ್ ಕ್ರಿಕೆಟ್ ಟ್ರೋಪಿ ಉದ್ಘಾಟಿಸಿ, ಮಾತನಾಡುತ್ತಿದ್ದರು. ಬಾಂಬೆ ಹೊರತು ಹೊರತು ಪಡಿಸಿದರೆ ಬಂಟ ಸಮುದಾಯಕ್ಕೆ ಹೆಚ್ಚಿನ ರಾಜಕೀಯ ಪ್ರಧಾನ್ಯತೆ ಸಿಗುತ್ತಿಲ್ಲ. ಬಂಟ ಸಮುದಾಯದ ಹಿರಿಯರು ಯುವ ಬಂಟರನ್ನ ರಾಜಕೀಯದಲ್ಲಿ ಬೆಳಸುವ ಮೂಲಕ ರಾಜಕೀಯ ಪ್ರಧಾನತೆ ಸಿಗುವಂತೆ ಮಾರ್ಗದರ್ಶನ ನೀಡಬೇಕು ಎಂದು ಅವರು ಸಲಹೆ ಮಾಡಿದರು. ಕುಂದಾಪುರ ತಾಲೂಕು ಯುವ ಬಂಟ ಸಂಘ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಬಿಜೆಪಿ ಪಕ್ಷವನ್ನು ಸೇರಿದ ಬಳಿಕ ಮೊದಲ ಭಾರಿಗೆ ಕುಂದಾಪುರ ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಕುಂದಾಪುರ ಬಿಜೆಪಿ ಪದಾಧಿಕಾರಿಗಳು ಜೆಪಿ ಹೆಗ್ಡೆ ಅವರನ್ನು ಬರಮಾಡಿಕೊಂಡು ಘೋಷಣೆಯೊಂದಿಗೆ ಪಕ್ಷದ ಕಛೇರಿಗೆ ಸ್ವಾಗತಿಸಿಕೊಂಡರು. ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆ.ಪಿ ಹೆಗ್ಡೆ, ಕಾರ‍್ಯಕರ್ತರ ಬಲ ಜೊತೆಗಿದ್ದರೇ ನಾಯಕರಿಗೆ ಆನೆ ಬಲ ಬಂದಂತಾಗುತ್ತದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಎಲ್ಲರೂ ಒಟ್ಟು ಸೇರಿದರೆ ಪಕ್ಷಕ್ಕೆ ಶಕ್ತಿ ಬರುತ್ತದೆ. ಒಗ್ಗಟ್ಟಾಗಿ ಅಭಿವೃದ್ಧಿ ಬಗ್ಗೆ ಆಲೋಚನೆ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಅಭಿವೃದ್ಧಿಯ ಚಿಂತನೆ: ಈ ಹಿಂದೆ ಶಾಸಕನಾಗಿದ್ದಾಗ ಬ್ರಹ್ಮಾವರ ತಾಲೂಕು ಕೇಂದ್ರವಾಗಿ ಪರಿವರ್ತಿಸುವ ಚಿಂತನೆಯನ್ನು ಗಟ್ಟಿಗೊಳಿಸಿದ್ದೆ. ಗುಲ್ವಾಡಿ ಕಿಂಡಿ ಆಣೆಕಟ್ಟು ನಿರ್ಮಾಣ ಮಾಡಿದ್ದರಿಂದ ಇಂದು ಕುಂದಾಪುರ ಪುರಸಭೆಗೆ ಶಾಶ್ವತ ಕುಡಿಯುವ ನೀರು ದೊರಕಿದೆ. ಕುಂದಾಪುರ ಪುರಸಭೆ ಒಳಚರಂಡಿ ಯೋಜನೆ ಕೂಡಾ ಸಂಸದನಾಗಿದ್ದ ಕಾಲದಲ್ಲಿ ಮಂಜೂರಾಗಿತ್ತು. ಕಾರ‍್ಯಕರ್ತರು ಅಭಿವೃದ್ದಿ ಹಾಗೂ ಸಮಸ್ಯೆ ಬಗ್ಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಬ್ಬರು ಸರಗಳ್ಳರನ್ನು ಕೋಟ ಪೊಲೀಸ್‌ ಠಾಣೆಯ ಸಿಬ್ಭಂದಿಯೋರ್ವರು ಸಾಹಸ ಮೆರೆದು ಬಂಧಿಸಿದ್ದು, ಆರೋಪಿಗಳನ್ನು ಬುಧವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನಾವುಂದ ನಿವಾಸಿಗಳಾದ ನಾಗೇಶ ಖಾರ್ವಿ(22), ಮಧುಕರ ಖಾರ್ವಿ (25) ಆರೋಪಿಗಳು. ಬೈಕ್‌ನಲ್ಲಿ 15 ಕಿ.ಮೀ. ಬೆನ್ನಟ್ಟಿ ಬಂಧನ ಆರೋಪಿಗಳು ಸೋಮವಾರ ರಾತ್ರಿ ಪಲ್ಸರ್‌ ಬೈಕ್‌ನಲ್ಲಿ ಬಂದು ಸಾಲಿಗ್ರಾಮ ಸಮೀಪ ಕಾರ್ಕಡ ಹಿ.ಪ್ರಾ. ಶಾಲೆ ಹತ್ತಿರ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವಳ ಕುತ್ತಿಗೆಯಿಂದ ಸರ ಅಪಹರಿಸಲು ಪ್ರಯತ್ನಿಸಿದ್ದು, ಈ ಸಂದರ್ಭ ಆಕೆ ಜೋರಾಗಿ ಕೂಗಿಕೊಂಡಿದ್ದರು. ಆಗ ಸಮೀಪ ಕರ್ತವ್ಯ ನಿರತರಾಗಿದ್ದ ಕೋಟ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಪ್ರದೀಪ್‌ ನಾಯಕ್‌ ಬೈಕ್‌ನಲ್ಲಿ ಅವರನ್ನು ಬೆನ್ನಟ್ಟಿದ್ದು, ಆರೋಪಿಧಿಗಳು ಬೈಕಿನಲ್ಲಿ ಬ್ರಹ್ಮಾವರ ಕಡೆಗೆ ವೇಗವಾಗಿ ಸಾಗಿದರು. ಅನಂತರ ಬ್ರಹ್ಮಾವರ ಆಕಾಶವಾಣಿ ಸರ್ಕಲ್‌ನಿಂದ ಬಾಕೂìರು ರಸ್ತೆಯ ಮೂಲಕ ಪರಾರಿಯಾಗಲು ಯತ್ನಿಸಿದಾಗ ಪ್ರದೀಪ್‌ ನಾಯಕ್‌ ಕೂಡ ಅಷ್ಟೇ ವೇಗದಲ್ಲಿ ಅವರನ್ನು ಬೆನ್ನಟ್ಟಿ ಘಟನೆ ಈ ಕುರಿತು ಸ್ಥಳೀಯರಿಗೆ ಹಾಗೂ ಉನ್ನತ ಪೊಲೀಸ್‌…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಸುಬ್ರಹ್ಮಣ್ಯ ದೇವಾಡಿಗ (36) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ. ಬೈಂದೂರು ವಿದ್ಯಾನಗರ ನಿವಾಸಿಯಾದ ಸುಬ್ರಹ್ಮಣ್ಯ ಅವರು ಅತಿಥಿ ಉಪನ್ಯಾಸಕರಾಗಿ ಬೈಂದೂರು ಕಾಲೇಜು ಹಾಗೂ ಭಟ್ಕಳದ ಸಿದ್ಧಾರ್ಥ ಕಾಲೇಜಿನಲ್ಲಿ ಸೇವೆಸಲ್ಲಿಸುತ್ತಿದ್ದರು. ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಿರ್ದೇಶಕಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಅವಿವಾಹಿತರಾಗಿದ್ದು, ತಾಯಿ, ಓರ್ವ ಸಹೋದರ, ಈರ್ವರು ಸಹೋದರಿಯರು, ಬಂಧುಗಳು ಹಾಗೂ ವಿದ್ಯಾರ್ಥಿ ವೃಂದವನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತಿಹಾಸ ಪ್ರಸಿದ್ಧ ಕಳವಾಡಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನದ ಸಾನಿಧ್ಯ ಸಂಕೋಚ ಹಾಗೂ ಬಾಲಾಲಯ ಪ್ರತಿಷ್ಠೆ ಧಾರ್ಮಿಕ ಕಾರ್ಯಕ್ರಮಗಳು ಎರಡು ದಿನಗಳ ಪರ್ಯಾಂತ ಸಾಂಗವಾಗಿ ಜರುಗಿದವು. ಶ್ರೀ ದೇವಳದ ಅಮೂಲಾಗ್ರ ಜೀಣೋದ್ಧಾರದ ಪ್ರಯುಕ್ತ ವೇದಮೂರ್ತಿ ಕುತ್ಯಾರು ಕೇಂಜಿ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಸಾನಿಧ್ಯ ಸಂಕೋಚ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮಗಳು ಜರುಗಿದವು. ನಾಗದೇವರ ದರ್ಶನ, ಕಾಲಭೈರವ ದೇವರ ದರ್ಶನ, ವಿವಿಧ ಹೋಮ ಹವನಾದಿಗಳು ಜರುಗಿದವು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ವೆಂಕಟ ಪೂಜಾರಿ, ಧಾರ್ಮಿಕ ಮುಂದಾಳು ಬಿ.ಎಂ. ಸುಕುಮಾರ ಶೆಟ್ಟಿ ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಗಂಗಾನಾಡು, ತೊಕ್ತಿ, ಕ್ಯಾರ್ತೂರು, ಎತ್ತೆಬೇರು ಗ್ರಾಮಗಳಿಗೆ ತಾಲೂಕು ಪಂಚಾಯತ್ ಅನುದಾನದಡಿಯಲ್ಲಿ ಅಳವಡಿಸಲಾದ ಸೋಲಾರ್ ದೀಪಗಳನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ ಕೆ., ಬೈಂದೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ವೆಂಕಟ ಪೂಜಾರಿ, ಭಾಸ್ಕರ ಮರಾಠಿ, ಸ್ಥಳೀಯ ಸಿ.ಜೆ. ಪೌಲೋಸ್ ಹಾಗೂ ಇತರರು ಉಪಸ್ಥಿತರಿದ್ದರು.

Read More