ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಲಾಲ ಸಮುದಾಯ ಈ ನೆಲದ ನಾಗರಿಕತೆಯ ಹುಟ್ಟಿನೊಂದಿಗೆ ಜನ್ಮ ತಾಳಿದ ಶ್ರೇಷ್ಠ ಸಮುದಾಯ. ಕುಂಬಾರ, ಮೂಲ್ಯ, ಹಾಂಡ, ಗುನುಗ ಹೀಗೆ ಬೇರೆ ಬೇರೆ ಹೆಸರುಗಳಿಂದ ಈ ನಾಡಿನ ಮೂಲೆ ಮೂಲೆಯಲ್ಲೂ ಸಾಕಷ್ಟು ಸಂಖ್ಯೆಯಲ್ಲಿರುವ ಕುಂಬಾರ ಸಮುದಾಯ ಇಂದು ಬಲಿಷ್ಠ ಸಂಘಟನೆಯಲ್ಲಿ ಒಗ್ಗೂಡುತ್ತಿವೆ. ಈ ಕುಂಬಾರ ಸಮುದಾಯಕ್ಕೆ ಮುಂಬರುವ ಚುನಾವಣೆಯಲ್ಲಿ ರಾಜಕೀಯ ಸ್ಥಾನಮಾನ ಕೊಡುವ ಕೆಲಸವನ್ನು ಎಲ್ಲ ರಾಜಕೀಯ ಪಕ್ಷಗಳು ಮಾಡಬೇಕು ಎಂದು ಕರಾವಳಿ ಕುಲಾಲಧಿ ಕುಂಬಾರರ ಯುವ ವೇದಿಕೆಯ ಸ್ಥಾಪಕಾಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್ ಅವರು ಹೇಳಿದರು. ಅವರು ಕರಾವಳಿ ಕುಲಾಲ ಕುಂಬಾರರ ಯುವ ವೇದಿಕೆ ಕುಂದಾಪುರ ಕುಂಬಾರರ ಯುವ ವೇದಿಕೆ ಹೆಂಗವಳ್ಳಿ ಘಟಕದ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿ ಅಭಿಮತ ವ್ಯಕ್ತಪಡಿಸಿದರು. ಕುಂಬಾರ ಸಮುದಾಯದ ಸಂಘಟನೆಗೆ ಕರಾವಳಿ ಕುಲಾಲ ಕುಂಬಾರ ಯುವ ವೇದಿಕೆ ರಾಜ್ಯಕ್ಕೆ ಮಾದರಿಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಮುಂಚೂಣಿಯಲ್ಲಿವೆ. ಕುಂದಾಪುರ, ಕಾರ್ಕಳ, ಕಾಪು, ಸುರತ್ಕಲ್, ಕುಳಾಯಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಾರಾಹಿ ಎಡದಂಡೆ ಕಾಲುವೆಯಲ್ಲಿ ನೀರಿನ ಒತ್ತಡ ಹೆಚ್ಚಿದ ಕಾರಣ ಎಡದಂಡೆಯ 26ನೇ ಕಿಲೋ ಮೀಟರ್‌ನಲ್ಲಿ ಕೊಯ್ಕಡಿ ಕೆಳಹೆಬ್ಟಾಗಿಲು ಎಂಬಲ್ಲಿ ನಾಲೆಯ ಕೆಳಭಾಗದ ಟರ್ಫ್ ಒಡೆದು ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿದೆ. ಈ ಪ್ರದೇಶದಲ್ಲಿ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಕಾಲುವೆ ಅಡಿಭಾಗ ಕುಸಿಯಿತು. ರಭಸದಿಂದ ಹರಿಯುತ್ತಿದ್ದ ನೀರು ಕಾಲುವೆಯ ಅಡಿಯಿಂದ ತಿರುವು ಪಡೆದು ಸಮೀಪದ ನೈಸರ್ಗಿಕ ತೋಡುಗಳ ಮೂಲಕ ಹರಿದು ಕೃಷಿಭೂಮಿಗೆ ನುಗ್ಗಿದೆ. ಪರಿಸರದ ನೂರಾರು ಎಕರೆ ಪ್ರದೇಶದ ಜಮೀನುಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ತುಂಬಿ ನಿಂತಿದೆ. ಕೆಳಹೆಬ್ಟಾಗಿಲು ಮನೆಯ ಕೊಯ್ಕಡಿ ಬೇಬಿ ಶೆಟ್ಟಿ ಅವರ ಮನೆಗೂ ನೀರು ನುಗ್ಗಿದೆ. ಕಳೆದ ನಾಲ್ಕು ದಿನಗಳಿಂದ ಸಣ್ಣ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಬಗ್ಗೆ ವಾರಾಹಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಇದುವರೆಗೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಲಾಲ್, ಜಿಲ್ಲಾ ಪಂಚಾಯತ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಆಳ್ವಾಸ್ ಸ್ನಾತ್ತಕೋತ್ತರ ಪತ್ರಿಕೋದ್ಯಮ ವಿಭಾಗದ ಅಂತಿಮ ಎಂಸಿಜೆ ವಿದ್ಯಾರ್ಥಿನಿ ಶ್ರೀಗೌರಿ ಎಸ್ ಜೋಶಿ ‘ಯುವ ಚೇತನಾ ಪ್ರಶಸ್ತಿ-2017’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬೆಂಗಳೂರು ಮೂಲದ ‘ಯೂತ್ ಫಾರ್ ಸೇವಾ’ ಎನ್.ಜಿ.ಓ ಸಂಘಟನೆ ‘ಬದಲಾವಣೆಯ ಸೈನಿಕರು’ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಸ್ಪರ್ಧೆಯನ್ನು ಏರ್ಪಡಿಸಿತ್ತು. ಧನಾತ್ಮಕ ಪತ್ರಿಕೋದ್ಯಮ, ಪರಿಣಾಮಕಾರಿ ಬರಹ, ಕ್ರಿಯಾತ್ಮಕ ಬರಹ ವಿಭಾಗದಲ್ಲಿ ನಡೆದ ವಿವಿಧ ಸ್ಪರ್ಧೆಯಲ್ಲಿ, ಧನಾತ್ಮಕ ಪತ್ರಿಕೋದ್ಯಮ ವಿಭಾಗದಿಂದ ಇವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೊದಲ ಹಂತದ ದೂರವಾಣಿ ಸಂದರ್ಶನದ ನಂತರ ಮುಖಾಮುಖಿ ಸಂದರ್ಶನ ಹಾಗೂ ಸ್ಕೈಪ್ ಸಂದರ್ಶನದ ಸಾಮಾರ್ಥ್ಯದ ಆಧಾರದ ಮೇಲೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಫ್ರಶಸ್ತಿಗೆ ದಕ್ಷಿಣ ಭಾರತದಿಂದ 30 ವಿದ್ಯಾರ್ಥಿಗಳನ್ನು ಆಯ್ಕೆಮಾಡಲಾಗಿದ್ದು, ಕೊನೆಯ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾರ್ಚ 26ರಂದು ನವದೆಹಲಿಯಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು. ಶ್ರೀಗೌರಿ ಅವರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ವಿಭಾಗದ ಮುಖ್ಯಸ್ಥೆ ಡಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಮಾರಂಭ ಹಾಗೂ ಅಂತರ ಕಾಲೇಜು ಪ್ರತಿಭಾ ಸ್ಪರ್ಧೆ ಸಂದರ್ಭದಲ್ಲಿ ದೇಶ ವಿದೇಶಗಳಲ್ಲಿ ಸಾವಿರಾರು ನಾಟಕ ಪ್ರದರ್ಶನ ನೀಡಿರುವ ಕುಂದಾಪುರ ರೂಪಕಲಾ ನಾಟಕ ತಂಡದ ಖ್ಯಾತ ನಾಟಕ ಕಲಾವಿದರಾದ ಸತೀಶ್ ಪೈ(ಕುಳ್ಳಪ್ಪು), ಅಶೋಕ್ ಶ್ಯಾನುಭಾಗ್, ಸಂತೋಷ ಪೈ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ| ಎನ್. ಪಿ. ನಾರಾಯಣ ಶೆಟ್ಟಿ, ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ (ನಿ)ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ, ಕರ್ಣಾಟಕ ಬ್ಯಾಂಕ್ ಕುಂದಾಪುರ ಶಾಖೆಯ ಮುಖ್ಯ ಪ್ರಬಂಧಕ ರಮೇಶ್ ವೈದ್ಯ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ಕಾರ್ತೀಕೇಯ ಮಧ್ಯಸ್ಥ, ಪೂರ್ವಾಧ್ಯಕ್ಷ ರಾಘವೇಂದ್ರಚರಣ ನಾವಡ, ಕಾರ್ಯದರ್ಶಿ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆಯಲ್ಲಿ ನಿರ್ಮಾಣವಾಗುತ್ತಿರುವ ಮೀನುಗಾರಿಕಾ ಹೊರಬಂದರು ಪ್ರದೇಶದಲ್ಲಿ ಆಗುತ್ತಿರುವ ಕಡಲ್ಕೊರೆತ ಅಪಾಯಕಾರಿ ಹಂತ ತಲಪಿದೆ. ಒಂದೆಡೆ ಬಂದರು ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದ್ದರೆ, ಇನ್ನೊಂದೆಡೆ ಕಡಲ್ಕೊರೆತ ತಡೆಗೆ ಕ್ಷಿಪ್ರ ಕ್ರಮ ಕೈಗೊಳ್ಳುತ್ತಿಲ್ಲ. ಇದೇ ಸ್ಥಿತಿ ಮಳೆಗಾಲದ ವರೆಗೆ ಮುಂದುವರಿದರೆ ಇಲ್ಲಿ ತೀವ್ರ ಸ್ವರೂಪದ ಜೀವ ಮತ್ತು ಆಸ್ತಿಪಾಸ್ತಿ ಹಾನಿ ಸಂಭವಿಸಲಿದೆ ಎಂದು ಮೀನುಗಾರರು ದೂರಿದರು. ಸ್ಥಳ ಪರಿಶೀಲನೆಗೆ ಬರಬೇಕಾಗಿದ್ದ ಜಿಲ್ಲಾಧಿಕಾರಿಗಳ ಬದಲಾಗಿ ಬಂದಿದ್ದ ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಅವರೆದುರು ಅಳಲು ತೋಡಿಕೊಂಡ ಮೀನುಗಾರರು ಇದಕ್ಕೆ ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಇಂಜಿನಿಯರ್ ಹಾಗೂ ಬಂದರು ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆದಾರ ಕಾರಣ ಎಂದು ಅವರ ವಿರುದ್ಧ ಹರಿಹಾಯ್ದರು. ಇಲ್ಲಿ ಬೇಸಿಗೆಯಲ್ಲೂ ಕಡಲ್ಕೊರೆತ ನಡೆಯುತ್ತಿರುವುದಕ್ಕೆ ಬಂದರು ಕಾಮಗಾರಿಯ ನಿಧಾನಗತಿಯ ನಿರ್ವಹಣೆ ಕಾರಣ. ಅದು ಈ ವರ್ಷವೂ ಪೂರ್ಣಗೊಳ್ಳುವ ಲಕ್ಷಣ ಇಲ್ಲವಾಗಿರುವುದರಿಂದ ಕೊರೆತ ತಡೆಗೆ ತಾತ್ಕಾಲಿಕ ತಡೆಯನ್ನಾದರೂ ಹಾಕಬೇಕು ಎಂದು ಅವರು ಆಗ್ರಹಿಸಿದರು. ವಾರದ ಹಿಂದೆ ಶಾಸಕರು ಭೇಟಿನೀಡಿ ತಾತ್ಕಾಲಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯರು ಹಾಗೂ ಸಿಬಂದಿ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೇ ರೋಗಿಗಳಿಗೆ ಸರಿಯಾದ ಚಿಕಿತ್ಸೆಯನ್ನು ನೀಡುವ ಬಗ್ಗೆ ನಿಗಾ ವಹಿಸುತ್ತಿಲ್ಲ ಎನ್ನುವ ದೂರಿನ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಮಿಕ ವೇದಿಕೆಯ ಸದಸ್ಯರು ಮಂಗಳವಾರ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಆಸ್ಪತ್ರೆಗೆ ಧಾವಿಸಿದ ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ನೇತೃತ್ವದ ವೇದಿಕೆಯ ಸದಸ್ಯರು ಭೇಟಿ ನೀಡಿ ಅಲ್ಲಿ ರೋಗಿಗಳಿಗೆ ನೀಡುತ್ತಿರುವ ಔಷಧೋಪಚಾರಗಳ ಬಗ್ಗೆ ಮಾಹಿತಿ ಪಡೆದು ಕೆಲವು ರೋಗಿಗಳಿಂದ ಬಂದ ದೂರಿನ ವಿಚಾರವನ್ನು ತೆಗೆದುಕೊಂಡು ವೈದ್ಯರನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಎಲ್ಲ ವಿಭಾಗವನ್ನು ಭೇಟಿ ಮಾಡಿದ ಸದಸ್ಯರು ಅಲ್ಲಿನ ಮೂಲ ಸೌಕರ್ಯದ ಬಗ್ಗೆ ಮಾಹಿತಿಯನ್ನು ಪಡೆದರಲ್ಲದೇ ಕುಡಿಯುವ ನೀರಿನ ಯಂತ್ರವನ್ನು ಪರಿಶೀಲಿಸಿ ಅದು ಅಶುದ್ಧವಾಗಿರುವ ಬಗ್ಗೆ ಆಕ್ರೊಶ ವ್ಯಕ್ತಪಡಿಸಿದರಲ್ಲದೇ ಅದನ್ನು ವೈದ್ಯಾಧಿಕಾರಿಗಳಿಗೆ ತೋರಿಸಿದರು. ಅಲ್ಲದೇ ಆಸ್ಪತ್ರೆಯ ಆವರಣದಲ್ಲಿ ಕೊಳಚೆ ನೀರು ಹರಿಯುತ್ತಿರುವ ಬಗ್ಗೆ ಆಕ್ರೋಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಿವಿಧಡೆ ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿದ ಗಣಿ ಇಲಾಖೆಯ ಅಧಿಕಾರಿಗಳು, ಕುಂದಾಪುರ ತಹಶೀಲ್ದಾರರು ಈ ಪ್ರದೇಶಗಳಲ್ಲಿನ ಮರಳನ್ನು ವಶಪಡಿಸಿಕೊಂಡಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಡಾ| ಮಹದೇಶ್ವರ, ತಹಶೀಲ್ದಾರ್ ಜಿ.ಎಂ. ಬೋರ್ಕರ್ ಅವರು ಕುಂದಾಪುರ ಪೊಲೀಸರ ಸಹಕಾರದಲ್ಲಿ ಹಳ್ನಾಡು ಸೇರಿದಂತೆ ತಾಲೂಕಿನ ವಿವಿಧಡೆ ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ದಾಳಿ ನಡೆಸಿ ಮರಳುಗಾರಿಕೆ ನಡೆಸುತ್ತಿದ್ದ ಪ್ರದೇಶದಲ್ಲಿ ಶೇಖರಿಸಿ ಇಟ್ಟ ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮರಳುಗಾರಿಕೆ ನಡೆಸುತ್ತಿದ್ದವರಿಗೆ ಸೂಚನೆ ನೀಡಿದ ಅಧಿಕಾರಿಗಳು ಈ ಪ್ರದೇಶದಲ್ಲಿ ಅಧಿಕೃತವಾಗಿ ಮರಳುಗಾರಿಕೆ ನಡೆಸಲು ಟೆಂಡರ್ ಅಗಿದ್ದು ಅವರಿಗೆ ಅವಕಾಶ ಮಾಡಿಕೊಡಬೇಕು. ಇನ್ನು ಮುಂದೆ ಅಕ್ರಮವಾಗಿ ಮರಳುಗಾರಿಕೆ ನಡೆಸಿದಲ್ಲಿ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎನ್ನುವ ಎಚ್ಚರಿಕೆ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗ್ರಾಹಕರು ತಮ್ಮ ಹಕ್ಕುಗಳ ಬಗೆಗೆ ಜಾಗೃತರಾಗಿರಬೇಕು. ಲಭ್ಯವಿರುವ ಕಾನೂನಿನ ಬಗೆಗೆ ಒಂದಷ್ಟು ವಿಚಾರಗಳನ್ನು ತಿಳಿದುಕೊಂಡಿರಬೇಕು. ಆಗ ಮಾತ್ರ ಗ್ರಾಹಕರು ಶೋಷಣೆಗೊಳಗಾಗುವುದು ತಪ್ಪುತ್ತದೆ. ಮಾಹಿತಿಯ ಕೊರತೆಯೇ ಸೋಲಿಗೆ ಕಾರಣ. ಹಾಗಾಗಿ ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಅಗತ್ಯವಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಬಾರ್ ಅಸೋಸಿಯೇಶನ್ ಕುಂದಾಪುರ, ಅಭಿಯೋಗ ಇಲಾಖೆ ಮತ್ತು ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ ವಿಶ್ವ ಗ್ರಾಹಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕುಂದಾಪುರ ಬಾರ್ ಅಸೋಶಿಯೇಶನ್ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ಕುಂದಾಪುರದ ಸಹಾಯಕ ಸರಕಾರಿ ಅಭಿಯೋಜಕ ಸಂದೇಶ್ ಭಂಡಾರಿ, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರಿನಲ್ಲಿ ಮಾ. 20ರಂದು ನಡೆಯಲಿರುವ ರಥೋತ್ಸವದ ಅಂಗವಾಗಿ ಮಾ. 13ರಂದು ಗಣಪತಿ ಪ್ರಾರ್ಥನೆ, ನಾಂದಿ, ಪುಣ್ಯಾಹ, ಅಂಕುರಾಧಿವಾಸ, ಸಿಂಹಯಾಗದೊಡನೆ ರಥೋತ್ಸವದ ಧ್ವಜಾರೋಹಣ ಕಾರ್ಯ ಕ್ರಮ ನಡೆಯಿತು. ದೇಗುಲದ ತಂತ್ರಿ ರಾಮಚಂದ್ರ ಅಡಿಗ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು. ಭಕ್ತರ ಸಮ್ಮುಖದಲ್ಲಿ ಕೌತುಕ ಬಂಧನ, ಮುಹೂರ್ತ ಬಲಿ, ಭೇರಿತಾಡನ ಉತ್ಸವ ಜರಗಿತು. ದೇಗುಲದ ಕಾರ್ಯನಿರ್ವಹಣಾಧಿಕಾರಿ ಎಸ್. ಯೋಗೇಶ್ವರ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಹಾಗೂ ಅರ್ಚಕರ ಸಮ್ಮುಖದಲ್ಲಿ ರಥೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ 30ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಗಂಗೊಳ್ಳಿಯ ಪೋಸ್ಟ್ ಆಫೀಸಿನ ಬಳಿಯಿಂದ ಶಿಶು ಮಂದಿರದವರೆಗೆ ನಡೆದ ಉಡುಪಿಯ ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ಸ್ವಾಮೀಜಿಯವರನ್ನು ಸ್ವಾಗತಿಸುವ ಪುರಮೆರವಣಿಗೆಯಲ್ಲಿ ಪಾಲ್ಗೊಂಡ ಶಿಶು ಮಂದಿರದ ಬಾಲಗೋಕುಲ ಪುಟಾಣಿಗಳ ಹುಲಿವೇಷ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.
