: ಭಾನುವಾರ ಮುಂಜಾನೆ ಹರಿದ್ವಾರದಲ್ಲಿ ಅಸ್ತಂಗತರಾಗಿರುವ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರಿಗೆ ಗಂಗೊಳ್ಳಿಯ ಜಿಎಸ್ಬಿ ಸಮಾಜಬಾಂಧವರು ಭಕ್ತಿಪೂರ್ವಕ ಶ್ರದ್ಧಾಂಜಲಿ ಅರ್ಪಿಸಿದರು. ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ದೇವ ಸನ್ನಿಧಿಯಲ್ಲಿ ಗೌರ ಸಾರಸ್ವತ ಸಮಾಜದ ಭಕ್ತಾದಿಗಳು ಹಾಗೂ ಸಮಾಜ ಬಾಂಧವರು ಶ್ರೀದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀಗಳ ಆತ್ಮಕ್ಕೆ ದೇವರು ಚಿರಶಾಂತಿ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥನೆ ಸಲ್ಲಿಸಿ ಭಕ್ತಿಪೂರ್ವಕ ಶ್ರದ್ಧಾಂಜಲಿ ಅರ್ಪಿಸಿದರು. ವೇದಮೂರ್ತಿ ಕೆ.ರಾಮದಾಸ ಭಟ್, ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ, ವೇದಮೂರ್ತಿ ಜಿ.ವೇದವ್ಯಾಸ ಕೃಷ್ಣಾನಂದ ಆಚಾರ್ಯ, ಎಚ್.ರಂಗನಾಥ ಕಾಮತ್ ಹಾಗೂ ಎಂ.ಜಿ.ಪ್ರಕಾಶ ಪೈ ಶ್ರೀಗಳಿಗೆ ಗಂಗೊಳ್ಳಿಯ ಮೇಲಿದ್ದ ಅಭಿಮಾನ ಪ್ರೀತಿ ವಿಶ್ವಾಸ ಬಗ್ಗೆ ಮಾತನಾಡಿ ನುಡಿ ನಮನ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಮೋಹನದಾಸ ಭಟ್, ಶ್ರೀ ಅಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಅನಂತಕೃಷ್ಣ ಭಟ್, ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ…
Author: ನ್ಯೂಸ್ ಬ್ಯೂರೋ
ಬೈಂದೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಜಿಪಂ ಸದಸ್ಯೆ ಗೌರಿ ದೇವಾಡಿಗ ಮತ್ತು ತಾಪಂ ಸದಸ್ಯ ಎಸ್.ರಾಜು ಪೂಜಾರಿ ಜಂಟಿಯಾಗಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಂದ್ರ ಕುಮಾರ್ ಶೆಟ್ಟಿ, ರೋಟರಿ ಅಧ್ಯಕ್ಷ ರಘುರಾಮ ಶೆಟ್ಟಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗಂಗೊಳ್ಳಿ: ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ – 2016ಕ್ಕೆ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯೆ ಪೂರ್ಣಿಮಾ…
ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ರಾಜ್ಯದ ಬರಗಾಲ, ಬತ್ತಿರುವ ಜಲಾಶಯ ಹಾಗೂ ರೈತ ಆತ್ಮಹತ್ಯೆಯ ಕಾರಣವೊಡ್ಡಿ ವಿಶೇಷ ಅನುದಾನ ನೀಡುವಂತೆ ವಿನಂತಿ ಮಾಡಿಕೊಂಡಿದ್ದೆವು. ಅದರಂತೆ ಕರ್ನಾಟಕ ರಾಜ್ಯಕ್ಕೆ 1540ಕೋಟಿ ಅನುದಾನ ಬಿಡುಗಡೆಯಾಗಿದೆ. ಪ್ರಧಾನಮಂತ್ರಿಗಳಿಗೆ ಸದಾ ಬೆಟ್ಟು ತೋರಿಸಿ ಟೀಕೆ ಮಾಡುವ ಸಿದ್ಧರಾಮಯ್ಯನವರು ಇನ್ನಾದರೂ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ರಾಜ್ಯದ ಜನರ ನೋವಿಗೆ ಸ್ಪಂದಿಸಲಿ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಿ. ಎಸ್. ಯಡಿಯೂರಪ್ಪ ಸಲಹೆಯಿತ್ತರು. ಭಾನುವಾರ ಬೈಂದೂರು ಬೈಪಾಸ್ ಬಳಿ ಬಿಜೆಪಿ ಬೈಂದೂರು ಘಟಕ ಆಯೋಜಿಸಿದ್ದ ಕಾರ್ಯಕರ್ತರ ಸಾರ್ವಜನಿಕ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಭಿನಂದಿಸಿ ಬಳಿಕ ಮಾತನಾಡಿದರು. ಕರ್ನಾಟಕದ ಕಾಂಗ್ರೆಸ್ ಸರಕಾರ ಬದುಕಿದೆಯೋ ಸತ್ತಿದೆಯೋ ಎಂಬ ಅನುಮಾನ ಕಾಡುತ್ತಿದೆ. ಆಡಳಿತ ಯಂತ್ರ ನಿಧಾನಗತಿಯಲ್ಲಿ ಸಾಗುತ್ತಿದೆ. ಅಹಿಂದ್ ಸರಕಾರ ಎಂದು ಹೇಳಿಕೊಳ್ಳುತ್ತಿದ್ದ ಮುಖ್ಯಮಂತ್ರಿಗಳು ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಸೇರಬೇಕಾದ ಹಣವನ್ನು ಇಲಾಖೆಯಲ್ಲಿಯೇ ಉಳಿಸಿಕೊಂಡು ಅಧಿಕಾರಿಗಳ ಮೇಲೆ ರೇಗಾಡುತ್ತಿರುವುದು ಮತ್ತೆ ಅಹಿಂದ್ ಜನರ…
ಕುಂದಾಪುರ: ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. ಕಾವ್ರಾಡಿ ಗ್ರಾಪಂ ಅಧ್ಯಕ್ಷೆ ಗೌರಿ ಆರ್. ಅಮೀನ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಸ್ಥಳೀಯ ರೋಟರಿ ಅಧ್ಯಕ್ಷ ಸಂತೋಷ್ಕುಮಾರ್ ಶೆಟ್ಟಿ, ಕಾರ್ಯದರ್ಶಿ ಕಾಳಿಂಗ ಶೆಟ್ಟಿ ಹಾಗೂ ಸದಸ್ಯರು, ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ವೈದ್ಯಾಧಿಕಾರಿ ಡಾ. ಲತಾ ನಾಯಕ್ ಪ್ರಾಸ್ತಾವಿಸಿ ವಂದಿಸಿದರು.
ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚಿಗೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೋ ಭೇಟಿ ನೀಡಿ ಚರ್ಚ್ ಸಿಮಿಟ್ರಿ ದ್ವಾರ ಹಾಗೂ ಹಾಗೂ ಏಸುವಿನ ಗುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಾಮೂಹಿಕ ಪ್ರಾರ್ಥನೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಪ್ರತಿ ಧರ್ಮದ ಜನರಲ್ಲೂ ಬಡವರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡುವ ಗುಣ ಬೆಳೆದಾಗ ಮಾನವೀಯ ಮೌಲ್ಯಗಳಿಗೆ ಅರ್ಥ ಬರುತ್ತದೆ ಎಂದರು. ಚರ್ಚಿನ ರರ್ಸೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಓದಗಿಸುತ್ತಿರುವ ಬೈಂದೂರು ಶಾಸಕ ಗೋಪಾಲ ಪೂಜಾರಿ ಹಾಗೂ ತಾಲೂಕು ಪಂಚಾಯತ್ ಸದದ್ಯ ರಾಜು ಪೂಜಾರಿ ಅವರನ್ನು ಚರ್ಚಿನ ವತಿಯಿಂದ ಸನ್ಮಾನಿಸಲಾಯಿತು. ಬೈಂದೂರು ಧರ್ಮಪ್ರಾಂತದ ಧರ್ಮಗುರು ರೋನಾಲ್ಡ್ ಮಿರಾಂದ, ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಡೆನಿಯಲ್ ನಜ್ರತ್, ಯಡ್ತರೆ ಗ್ರಾ.ಪಂ ಸದಸ್ಯ ಮಾರ್ಟಿನ್ ಎವರೆಸ್ಟ್ ಡಯಾಸ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪುರ: ಭಾರತೀಯ ಜೀವ ವಿಮಾ ನಿಗಮ ಕುಂದಾಪುರ ಶಾಖೆಯ ವಿಮಾ ಸಲಹೆಗಾರರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು 2015ರಲ್ಲಿ ಉತ್ತಮ ಜೀವ ವಿಮೆ ವ್ಯವಹಾರವನ್ನು ನಡೆಸಿ ಎಂಡಿಅರ್ಟಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕೋಣಿಯ ಮಾತಾ ಮಾಂಟೆಸ್ಸೋರಿ ಮಕ್ಕಳ ಶಾಲೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಕೆನಡಾದಲ್ಲಿ ನಡೆಯಲಿರುವ ಮಿಲಿಯನ್ ಡಾಲರ್ ರೌಂಡ್ ಟೇಬಲ್ ಜಾಗತಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಪ್ರೀಮಿಯಂ ಆಧಾರದಲ್ಲಿ ಇವರು ಅರ್ಹತೆಯನ್ನು ಪಡೆದಿದ್ದಾರೆ. ಕುಂದಾಪುರದ ಹಿರಿಯ ಜೀವವಿಮಾ ಅಭಿವೃದ್ಧಿ ಅಧಿಕಾರಿ ಕೆ. ಕರುಣಾಕರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ಅಸಿಸ್ಟೆಂಟ್ ಮೆನೇಜರ್ ಗುರುರಾಜ್ ಎಂ. ಎ, ಶಾಖೆಯ ಸರ್ವ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಎಂದು ಕುಂದಾಪುರ ಶಾಖೆ ಹಿರಿಯ ಶಾಖಾಧಿಕಾರಿ ಪ್ರೇಮನಾಥ ರಾವ್ ತಿಳಿಸಿದ್ದಾರೆ.
ಗಂಗೊಳ್ಳಿ: ನಮ್ಮ ಜೀವನಾವಧಿಯಲ್ಲಿ ದೇವರಿಗೆ ಹತ್ತಿರವಾದ ಮಾಡಿದ ಕೆಲಸ ಕಾರ್ಯಗಳು ಶಾಶ್ವತವಾಗುತ್ತದೆ. ಬಡತನ, ಮೂಡನಂಬಿಕೆ, ಅಜ್ಞಾನ ದೂರವಾಗಬೇಕಾದರೆ ವಿದ್ಯಾಭ್ಯಾಸ ಅತಿ ಮುಖ್ಯ. ಸಮಾಜದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲು ಭಕ್ತಿಯಿಂದ ಪ್ರೀತಿಯಿಂದ ಪ್ರಾರ್ಥನೆ ಮಾಡುವ ಪ್ರಾರ್ಥನಾ ಮಂದಿರಗಳ ಬಗ್ಗೆ ಹೆಚ್ಚಿನ ಕಾಳಜಿ ಆಸಕ್ತಿ ವಹಿಸಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಅವರು ಜರಗಿದ ಗಂಗೊಳ್ಳಿಯ ಇಮಾಕ್ಯುಲೇಟ್ ಕನ್ಸೆಪ್ಸನ್ ಚರ್ಚಿನ ನವೀಕರಣ ಹಾಗೂ ಪುನರ್ ನಿರ್ಮಾಣದ ಶಿಲಾನ್ಯಾಸ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸುಮಾರು 385 ವರ್ಷಗಳ ಇತಿಹಾಸ ಹೊಂದಿರುವ ಪೋರ್ಚುಗೀಸರ ಕಾಲದಲ್ಲಿ ನಿರ್ಮಾಣಗೊಂಡಿರುವ ಇತಿಹಾಸ ಪವಿತ್ರವಾದ ಗಂಗೊಳ್ಳಿಯ ಇಮಾಕ್ಯುಲೇಟ್ ಕನ್ಸೆಪ್ಸನ್ ಚರ್ಚಿನ ನವೀಕರಣ ಹಾಗೂ ಪುನರ್ ನಿರ್ಮಾಣ ಕಾರ್ಯದಲ್ಲಿ ರಾಜ್ಯ ಸರಕಾರ ಸಹಭಾಗಿತ್ವ ನೀಡಲಿದ್ದು, ಸರಕಾರದಿಂದ ದೊರೆಯುವ ಅನುದಾನವನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಪುರಾತನ ಪವಿತ್ರವಾದ ಪ್ರಾರ್ಥನಾ ಮಂದಿರಗಳ ನವೀಕರಣ ಅಭಿವೃದ್ಧಿಯಲ್ಲಿ ರಾಜ್ಯ ಸರಕಾರದ ಕೈಜೋಡಿಸಲಿದೆ ಎಂದು ಅವರು ಹೇಳಿದರು. ಗಂಗೊಳ್ಳಿಯ ಇಮಾಕ್ಯುಲೇಟ್…
ಕುಂದಾಪುರ: ರೋಟರಿ 3180 ಇದರ ರೋಟರಿ ಜಿಲ್ಲಾ ಗವರ್ನರ್ ಭರತೇಶ್ ಅಧಿರಾಜ್ ಅವರು ರೋಟರಿ ಕ್ಲಬ್ ಕುಂದಾಪುರಕ್ಕೆ ಅಧಿಕೃತ ಭೇಟಿ ನೀಡಿದ ಸಂದರ್ಭ ಹಟ್ಟಿಯಂಗಡಿಯ ಅತಿಶಯ ಜೈನಕ್ಷೇತ್ರ ಶ್ರೀ ಚಂದ್ರನಾಥ ಸ್ವಾಮಿ ಜೈನ ಮಂದಿರ ಹಾಗೂ ಶ್ರೀ ಜಟ್ಟಿಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರಕ್ಕೆ ಆಗಮಿಸಿದ ರೋಟರಿ ಜಿಲ್ಲಾ ಗವರ್ನರ್ ಭರತೇಶ್ ಅಧಿರಾಜ್, ರೋಟರಿ ಜಿಲ್ಲಾ ಪ್ರಥಮ ಮಹಿಳೆ ಜಯಶ್ರೀ ಭರತೇಶ್ ಅಧಿರಾಜ್, ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರನ್ನು ದೇವಳದ ಆಡಳಿತ ಮೋಕ್ತೆಸರರಾದ ಚಂದ್ರ ರಾಜೇಂದ್ರ ಅರಸರು ಕ್ಷೇತ್ರದ ವತಿಯಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್, ರೋಟರಿ ಸದಸ್ಯರಾದ ಆವರ್ಸೆ ಮುತ್ತಯ್ಯ ಶೆಟ್ಟಿ, ಡಾ. ಛಾಯಾ ವಿ. ಹೆಬ್ಬಾರ್, ಎಚ್. ಎಸ್. ಹತ್ವಾರ್, ಕಾರ್ಯದರ್ಶಿ ಸಂತೋಷ ಕೋಣಿ ಇನ್ನಿತರರು ಉಪಸ್ಥಿತರಿದ್ದರು.
ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾರ್ವಿಕೇರಿ ಪರಿಸರದಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣ ಮಾಡಲು 20 ಸೆಂಟ್ಸ್ ಸರಕಾರಿ ಜಾಗವನ್ನು ಮೀಸಲಿರಿಸಲಾಗಿದ್ದು, ಸುಸಜ್ಜಿತ ಹಿಂದು ರುದ್ರಭೂಮಿ ನಿರ್ಮಾಣಕ್ಕೆ ಸರಕಾರ ಹಾಗೂ ಇತರ ಅನುದಾನಗಳಿಂದ ಸುಮಾರು 16 ಲಕ್ಷ ರೂ.ಗಳನ್ನು ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಇತ್ತೀಚಿಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾರ್ವಿಕೇರಿ ಪರಿಸರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಹಿಂದು ರುದ್ರ ಭೂಮಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ, ಗ್ರಾಪಂ ಸದಸ್ಯರಾದ ಸುರೇಖಾ ಕಾನೋಜಿ, ಸುರೇಂದ್ರ ಖಾರ್ವಿ, ಮಾಜಿ ಗ್ರಾಪಂ ಸದಸ್ಯ ದುರ್ಗರಾಜ್ ಪೂಜಾರಿ, ಹಿಂದು ರುದ್ರ ಭೂಮಿ ನಿರ್ಮಾಣ ಸಮಿತಿ ಅಧ್ಯಕ್ಷ ರವಿಶಂಕರ ಖಾರ್ವಿ, ವೈ.ಅಣ್ಣಪ್ಪ ಖಾರ್ವಿ, ಸಂತೋಷ ಖಾರ್ವಿ, ರಾಮದಾಸ ಖಾರ್ವಿ, ಪರಮೇಶ್ವರ ಕೋಟಾನ್, ಶ್ರೀನಿವಾಸ ಕೋಟಾನ್, ಖಾರ್ವಿಕೇರಿ ಯುತ್ ಕ್ಲಬ್ನ ಮತ್ತು ಕೆ.ಕೆ.ಬಾಯ್ಸ್ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
ಬೈಂದೂರು: ಇಲ್ಲಿನ ಬಹುಪ್ರಸಿದ್ಧ ಪುರಾತನ ಕಾರಣಿಕ ಕ್ಷೇತ್ರ ತಗ್ಗರ್ಸೆ ದೊಡ್ಡ ಮೊಗವೀರ ಗರಡಿ ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನದಲ್ಲಿ ಜನವರಿ 16ರಿಂದ 20ರ ವರೆಗೆ ಶ್ರೀ ಜೈನ ಜಟ್ಟಿಗೇಶ್ವರ ಮತ್ತು ಸಪರಿವಾರ ದೈವ ಹಾಗೂ ನಾಗದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ವಾರ್ಷಿಕ ಗೆಂಡಸೇವೆ, ಹಾಲುಹಬ್ಬ ವಿಜೃಂಭಣೆಯಿಂದ ಜರುಗಲಿದೆ. ದೊಡ್ಡಮೊಗವೀರ ಗರಡಿಯಲ್ಲಿ ಶ್ರೀ ಜೈನಜಟ್ಟಿಗೇಶ್ವರ ಹಾಗೂ ನಲವತ್ತೆಂಟು ಸಪರಿವಾರ ದೈವಗಳಿವೆ. ಅನಾದಿ ಕಾಲದಿಂದಲೂ ಪೂಜಿಸುತ್ತಾ ಬಂದಿರುವ ಈ ದೈವಸ್ಥಾನದ ಬಗ್ಗೆ ಭಕ್ತರಲ್ಲಿಯೂ ಅಪಾರವಾದ ನಂಬಿಕೆ ಬೇರೂರಿದೆ. ಎಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಾನು ನಂಬಿದ ದೈವವನ್ನು ಸ್ಮರಿಸಿದರೇ ಕಷ್ಟ ದೂರವಾಗುವುದು ಎಂಬುದು ಹಲವಾರು ನಿದರ್ಶನಗಳ ಮೂಲಕವೂ ಸಾಬೀತಾಗಿದೆ. ಹಾಗಾಗಿಯೇ ವರ್ಷಕ್ಕೊಮ್ಮೆಯಾದರೂ ಎಲ್ಲಿಯೇ ಇರಲಿ ಮೊಗವೀರ ಗರಡಿಗೆ ಬಂದು ದೇವರಿಗೆ ಹರಕೆ, ಪೂಜೆ ಸಲ್ಲಿಸಿ ತೆರಳುತ್ತಾರೆ. ತಗ್ಗರ್ಸೆ, ಬೈಂದೂರು ಭಾಗದ ಭಕ್ತರಷ್ಟೇ ಅಲ್ಲದೇ ಉಡುಪಿ, ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಯ ಜನರು, ಬೆಂಗಳೂರು, ಮುಂಬೈಗಳಲ್ಲಿ ನೆಲೆಸಿರುವವರು ತಾವು ನಂಬಿದ ದೇವರನ್ನು ಕಾಣಲು ಹಬ್ಬದ ದಿನ ಬಂದು, ಹರಕೆ, ಪೂಜೆ…
