Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಯನ್ಸ್ ಕ್ಲಬ್ ಕೋಸ್ಟಲ್ ಮತ್ತು ಬಸ್ರೂರು ಇಂಟರಾಕ್ಟ್ ಕ್ಲಬ್ ನಿವೇದಿತಾ ಪ್ರೌಢಶಾಲೆ ಇದರ ಸಹಯೋಗದೊಂದಿಗೆ ಬುಧವಾರದಂದು ಬಸ್ರೂರಿನ ನಿವೇದಿತಾ ಪ್ರೌಢಶಾಲೆ ದಿ. ವೀರ ರಾಜೇಂದ್ರ ಹೆಗ್ಡೆ ಸಭಾಭವನದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯರಾದ ಹೇರಿಕುದ್ರು ಕೊರಗಯ್ಯ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಸುಬ್ಬ ಕೆ. ವಹಿಸಿದ್ದರು. ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.  ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರಾದ ಲ.ರತ್ನಾಕರ ಶೆಟ್ಟಿ ಕಂದಾವರ, ಪ್ರಧಾನ ಕಾರ್ಯದರ್ಶಿ ಲ. ಭುಜಂಗ ಶೆಟ್ಟಿ ರಟ್ಟಾಡಿ, ನಿರ್ದೇಶಕರಾದ ಸುಕುಮಾರಶೆಟ್ಟಿ ಹೇರಿಕುದ್ರು, ಲ. ಪ್ರಭಾಕರ ಶೆಟ್ಟಿ ಕೋಟೇಶ್ವರ, ಲ. ಪ್ರಶಾಂತ್ ಶೆಟ್ಟಿ ಶಿರೂರು, ಲ. ಪ್ರತೀಶ್ ಶೆಟ್ಟಿ ಕೊಕ್ಕರ್ಣೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿ ಶಾಲೆಯ ಇಂಟರ್ ಆಕ್ಟ್ ಕ್ಲಬ್ ನ ನಿರ್ದೇಶಕರಾದ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಶಾಲಾ ಶಿಕ್ಷಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಆಚರಣೆಯ ಸಲುವಾಗಿ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟಂತೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾನ ಮಾಡುವುದರಿಂದ ಪರಿಸರಕ್ಕೆ ಮಾರಕವಾಗುವುದನ್ನು ತಪ್ಪಿಸಬಹುದು. ಪಿ.ಓ.ಪಿ ಯಿಂದ ನಿರ್ಮಿಸಿರುವ ಹಾಗೂ ಬಣ್ಣಲೇಪಿತ ಗಣೇಶ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸಿದಾಗ ವಿಷಕಾರಿ ರಾಸಾಯನಿಕಗಳು ಜಲಮೂಲಗಳಾದ ಕೆರೆ, ಬಾವಿ, ಹಳ್ಳ ಸೇರಿ ನೀರು ಕಲುಷಿತಗೊಳ್ಳುತ್ತದೆ. ಇದು ಜಲಚರಗಳಿಗೆ ಹಾಗೂ ಮಾನವನಿಗೆ ಅತ್ಯಂತ ಹಾನಿಕರ ಎಂದರು. ಜಿಲ್ಲೆಯಲ್ಲಿ ಪಿ.ಓ.ಪಿ ಯಿಂದ ಗಣೇಶ ಮೂರ್ತಿಗಳ ತಯಾರಿ ಅಥವಾ ಹೊರ ಜಿಲ್ಲೆಗಳಿಂದ ಪಿ.ಓ.ಪಿ ವಿಗ್ರಹಗಳು ಬರುವ ಸಾಧ್ಯತೆ ಇರುವ ಹಿನ್ನೆಲೆ, ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಿ, ಪಿ.ಓ.ಪಿ ಗಣೇಶ ಮೂರ್ತಿಗಳು ಬಳಕೆಯಾಗದಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂ.ವಿ.ಎ) ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಪ್ರಥಮ ಬಿ.ವಿ.ಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಎಂ.ವಿ.ಎ ಪ್ರವೇಶಾತಿಗಾಗಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನ. ಆ.11 ರಂದು ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಮಧ್ಯಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರದ ವೆಬ್‌ಸೈಟ್ http://www.mysore.nic.in ಮತ್ತು http://www.cavamysore.karnataka.gov.in ಅಥವಾ ದೂ.ಸಂಖ್ಯೆ: 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ರಿಜಿಸ್ಟರ್, ಯೂತ್ ಎಂಪವರ್ಮೆಂಟ್ ಅಂಡ್ ಸ್ಪೋರ್ಟ್ಸ್ ಗವರ್ಮೆಂಟ್ ಆಫ್ ಕರ್ನಾಟಕ ಅವರು ಹಾಸನ ಇಂಟರ್ ಡಿಸ್ಟ್ರಿಕ್ಟ್ ಯೋಗಾಸನ ಚಾಂಪಿಯನ್‌ಶಿಪ್‌ 2025ರ ಡಾ. ಬಿ.ಆರ್ ಅಂಬೇಡ್ಕರ್ ತಾಲೂಕ್ ರೌಂಡ್ ಯೋಗ ಮಂದಿರ ಕಡೂರಿನಲ್ಲಿ ನಡೆಯಿತು. ಈ ಯೋಗ ಸ್ಪರ್ಧೆಯಲ್ಲಿ ಧನ್ವಿ ಪೂಜಾರಿ ಮರವಂತೆ ಅವರು ಮೂರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ಆದೇಶವನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳು ಹೊರಡಿಸಿದ್ದಾರೆ. ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ ಹೇರ್ ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಸುರಿದ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮಣ್ಣು ಕುಸಿತವಾಗಿರುವ ಭಾಗದಲ್ಲಿ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಮತ್ತೆ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ, ಸುರಕ್ಷತಾ ದೃಷ್ಟಿಯಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟಿ ಮಾರ್ಗ ವ್ಯಾಪ್ತಿಯಲ್ಲಿ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲದವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಆದೇಶಿಸಿದ್ದಾರೆ. ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ:ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ-52 ರಸ್ತೆಯ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು (ತೀರ್ಥಹಳ್ಳಿ- ರಾವೆ ಕಾನುಗೋಡು ಮಾಸ್ತಿಕಟ್ಟೆ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ-ಮೂಲಕ ಕುಂದಾಪುರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೇರೆಂಜಾಲು ಕಂಬದಕೋಣೆ ಅವರು ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮದ್ಯಸ್ಥ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ ಕ್ರಿಯೇಟಿವ್ ಕೆಸರ್ಡೊಂಜಿ ದಿನ ‘ ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು ಮಂಗಳವಾರ ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಬೆಂಗಳೂರು ಫೆಡರೇಷನ್ ಆಫ್ ಕ್ವಾರಿ ಮತ್ತು ಕ್ರಷರ್ ಓನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಉದ್ಘಾಟನಾ ಭಾಷಣದಲ್ಲಿ ಪ್ರಕೃತಿಯ ಮಹತ್ವ, ಸಾಂಸ್ಕೃತಿಕ ಪರಂಪರೆಯ ಹಿನ್ನೆಲೆ ಮತ್ತು ಯುವ ಪೀಳಿಗೆಗೆ ಉತ್ತಮವಾದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಅಗತ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಸಭೆಯನ್ನು ಉದ್ದೇಶಿಸಿ ಮಾತುಗಳನ್ನಾಡಿದರು . “ಕೆಸರಿನಲ್ಲಿ ಆಡೋದು ಕೇವಲ ಆಟವಲ್ಲ, ಅದು ಒಂದು ಅನುಭವ, ಜೀವನಕ್ಕೆ ಪಾಠ ಕಲಿಸುವ ಕ್ರಿಯೆ”ಎಂದು ತಿಳಿಸಿದರು. ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ. ಬಿ. ಅವರು ಪ್ರಾಸ್ತಾವಿಕ ನುಡಿಗಳನ್ನಡುತ್ತಾ, ನಮ್ಮ ಸಂಸ್ಥೆಯ ವಿದ್ಯಾರ್ಥಿ ಗಳಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವ ಉದ್ದೇಶಗಳ ಬಗ್ಗೆ ತಿಳಿಸುತ್ತಾ, ಆಗಮಿಸಿದ ಸರ್ವರನ್ನು ಸ್ವಾಗತಿಸಿದರು . ಸ್ಥಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ‌ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ಕಂಡು ಬರುತ್ತಿದೆ. ಇದರ ದುಷ್ಪರಿಣಾಮಗಳನ್ನು ಅರ್ಥಮಾಡಿಕೊಂಡು ಎಚ್ಚರಿಕೆಯಿಂದ ಬದುಕುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಿದೆ ಎಂದು ಉಡುಪಿ ಜಿಲ್ಲೆ ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹೇಳಿದರು. ಅವರು ಉಪ್ಪುಂದ ಜೇಸಿಐ ಆಶ್ರಯದಲ್ಲಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ಕಾನೂನು ಮಾಹಿತಿ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿದರು. ಯಾವುದೇ ರೀತಿಯ ಮಾದಕ ಸೇವನೆಯ ಪ್ರಕರಣಕ್ಕೆ ನ್ಯಾಯಾಲಯದಲ್ಲಿ ಜಾಮೀನು ಸಿಗುವುದಿಲ್ಲ. ಜೈಲೇ ಗತಿಯಾಗುವುದು. ಈ ವಿಷಯದಲ್ಲಿ ಕಾಯ್ದೆ ಕಠಿಣವಾಗಿದೆ. ನಿಮ್ಮ ನಂಬಿದ ಇಡೀ ಕುಟುಂಬ ನೋವು ಅನುಭವಿಸಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಈ ದುಶ್ಚಟಗಳಿಂದ ದೂರವಿದ್ದು, ತಮ್ಮ ಸುತ್ತಮುತ್ತಲಿನಲ್ಲೂ ಈ ಬಗ್ಗೆ ಅರಿವು ಮೂಡಿಸಬೇಕು ಎಂದರು. ಉಪ್ಪುಂದ ಜೇಸಿಐ ಅಧ್ಯಕ್ಷ ಭರತ್ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಜೆಸಿಐ ಸಂಸ್ಥೆ ಮಾನವೀಯ ಸೇವೆಗಳೊಂದಿಗೆ ವ್ಯಕ್ತಿತ್ವ ವಿಕಸನ ಹಾಗೂ ಜೀವನದ ಕಲೆಯನ್ನು ಕಲಿಸುವುದರ ಮುಖಾಂತರ ಸದೃಢ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಈ ವರ್ಷದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ತುಂಬಾಡಿ ರಾಮಯ್ಯ ಅವರ “ಜಾಲ್ಗಿರಿ” ಕಾದಂಬರಿಗೆ ದೊರೆತಿದೆ. ತಮ್ಮ ಆತ್ಮಕಥನ ‘ಮಣೆಗಾರ’ದ ಮೂಲಕ ಕನ್ನಡ ಓದುಗರಲ್ಲಿ ಹೊಸ ಸಂಚಲನವನ್ನೇ ಉಂಟು ಮಾಡಿದ ತುಂಬಾಡಿಯವರ ಅನುಭವ ಪ್ರಪಂಚ ಬಹು ದೊಡ್ಡದು. ‘ಮಣೆಗಾರ’ ಇಂಗ್ಲಿಷ್ ಹಾಗೂ ಮಲಯಾಳಂ ಭಾಷೆಗೆ ಅನುವಾದಗೊಂಡಿದ್ದು, ನಾಟಕವಾಗಿಯೂ ಜನಪ್ರಿಯವಾಗಿದೆ. ‘ಮುತ್ತಿನ ಜೋಳ ‘ ಮಣೆಗಾರ ಕೃತಿಯ ಮುಂದುವರಿದ ಭಾಗ. ‘ಸ್ಪರ್ಶ’ ಮತ್ತು ‘ದಲಿತಕಾರಣ’ ಅವರ ಲೇಖನಗಳ ಸಂಗ್ರಹವಾದರೆ, ‘ಓದೋ ರಂಗ ‘ ಮೊದಲ ಕಾದಂಬರಿ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಬೆಳ್ಳಿಯ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಆಗಸ್ಟ್ 13ರಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅರಿವು ಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 9448451111 ಅಥವಾ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More