Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ | ಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಇಂದು ಮಧ್ಯಾಹ್ನ ಸಾಂಕೇತಿಕ ಚಾಲನೆ ದೊರೆಯಿತು. ಚಾರಿತ್ರಿಕ ಹಿನ್ನೆಲೆಯುಳ್ಳ ಬೈಂದೂರು ರಥೋತ್ಸವದಲ್ಲಿ ಊರ ಪರವೂರ ಸಾವಿರಾರು ಭಕ್ತಸಮೂಹ ಪಾಲ್ಗೊಂಡು ಪುನೀತರಾಗುತ್ತಾರೆ. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯಕ್ಕೆ ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡುತ್ತದೆ. ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಸಂಜೆಯ ವೇಳೆಗೆ ನಗರದ ರಥವನ್ನು ಬೈಂದೂರು ಬೈಪಾಸ್ ವರೆಗೆ ಏಳೆಯಲಾಗುತ್ತದೆ. ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ. ರಥೋತ್ಸವದ ಪೂರ್ವದಲ್ಲಿ ಮುಸ್ಲಿಂ ಭಾಂದವರನ್ನು ಆಹ್ವಾನಿಸುವ, ರಥೋತ್ಸವದ ಆರಂಭದಲ್ಲಿ ಬೈಂದೂರಿನ ಪೊಲೀಸ್ ಠಾಣಾಧಿಕಾರಿಯನ್ನು ಕರೆತಂದು ಚಾಲನೆ ದೊರಕಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ತೆಕ್ಕಟ್ಟೆ: ಈ ದೇಶದಲ್ಲಿ ಹೊಟ್ಟೆ ಹಸಿದವನಿಗೆ ಊಟ ಹಾಕುವ ಪದ್ಧತಿಯ ಬದಲು ಹೊಟ್ಟೆ ತುಂಬಿದವರಿಗೆ ಊಟ ಹಾಕುವ ಪ್ರವೃತ್ತಿ ಈ ಸಮಾಜದಲ್ಲಿದೆ. ಹೊಟ್ಟೆ ಹಸಿದವನಿಗೆ ಊಟ ಹಾಕುವ ಪದ್ಧತಿಯಂತೆ ಇಲ್ಲಿನ ಯುವ ಸಮುದಾಯ ನಿಜವಾಗಿಯೂ ಒಂದು ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಗ್ರಾಮದ ಯೋಧರನ್ನು ಭಾರತ ಸೇವೆಗಾಗಿ ಈ ಭೂಮಿ ಕೊಟ್ಟಿದೆ ಅದು ಈ ಭೂಮಿಯ ಧನ್ಯತೆ ಎಂದು ಕುಂದಾಪುರ ಪೊಲೀಸ್‌ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್‌. ಹೇಳಿದರು. ಅವರು ಕೊರವಡಿ ಹೆಗ್ಗೂರುಬೆಟ್ಟು ಶ್ರೀ ನಂದಿಕೇಶ್ವರ ಮತ್ತು ಪರಿವಾರ ದೈವಗಳ ದೈವಸ್ಥಾನ ಇದರ ದಶಮಾನೋತ್ಸವದ ಪ್ರಯುಕ್ತ ಹಮ್ಮಿಕೊಂಡ ದೇಶಸೇವೆಯಲ್ಲಿರುವ ಯೋಧರನ್ನು ಗುರುತಿಸುವ ಸಲುವಾಗಿ ನಡೆದ ಸೇನಾ ಸತ್ಕಾರ -2017 ಉದ್ದೇಶಿಸಿ ಮಾತನಾಡಿದರು. ಸೈನಿಕರಿಗೆ ಸಮ್ಮಾನ ಮಾಡುವ ಸುಯೋಗ ಒದಗಿ ಬಂದಿರುವುದೇ ತನ್ನ ಭಾಗ್ಯ. ಇಲ್ಲಿನ ಯುವಕರು ಬಹಳ ವಿಚಾರವಂತರಾಗಿದ್ದು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷವಾದ ಗೌರವವನ್ನು ತಂದುಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಿ ಸ್ವತ್ಛ ಪರಿಸರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯ ಅಪೂರ್ವ ಹೊಟೇಲ್‌ ಬಳಿ ಮಾರುತಿ ಆಲ್ಟೋ ಹಾಗೂ ಸ್ವಿಫ್ಟ್ ಕಾರುಗಳ ನಡುವೆ ಸೋಮವಾರ ಮಧ್ಯಾಹ್ನ ಸಂಭವಿಸಿದ ಮುಖಾಮುಖೀ ಢಿಕ್ಕಿಯಲ್ಲಿ ಆಲ್ಟೋ ಕಾರಿನ ಚಾಲಕ ಮೂಲತಃ ತಮಿಳುನಾಡು ಮೂಲದ ಪ್ರಸ್ತುತ ಬೆಂಗಳೂರಿನ ಎಂ.ಜಿ. ರಸ್ತೆಯ ನಿವಾಸಿ ಧನ ಪಾಂಡ್ಯನ್‌ (36) ಮೃತಪಟ್ಟಿದ್ದು, ಓರ್ವ ಬಾಲಕ ಸಹಿತ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರಿನಿಂದ ಪಣಜಿಗೆ ತೆರಳುತ್ತಿದ್ದ ಕುಟುಂಬವಿದ್ದ ಸ್ವಿಫ್ಟ್ ಕಾರು ಹಾಗೂ ಮುರುಡೇಶ‌Ìರ ಯಾತ್ರೆ ಮುಗಿಸಿ ಧರ್ಮಸ್ಥಳದ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಕುಟುಂಬವಿದ್ದ ಆಲ್ಟೋ ಕಾರು ನಡುವೆ ಢಿಕ್ಕಿ ಸಂಭವಿಸಿತ್ತು. ಢಿಕ್ಕಿಯಾದ ರಭಸಕ್ಕೆ ಆಲ್ಟೋ ಕಾರು ನುಜ್ಜು ಗುಜ್ಜಾಗಿದ್ದು, ಅದೇ ಕಾರಿನಲ್ಲಿದ್ದ ಧನ ಪಾಂಡ್ಯನ್‌ ಅವರ ಪುತ್ರ ಕಮಲಿ (4), ತಂದೆ ಕಾಮಾಟಿ (65), ತಾಯಿ ಸರೋಜಾ (55) ಗಂಭೀರವಾಗಿ ಗಾಯಗೊಂಡಿದ್ದಾರೆ. ಪುತ್ರ ನಿದರ್ಶನ (8) ಹಾಗೂ ಪತ್ನಿ ವಾಸುಕಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವಿಫ್ಟ್ ಕಾರಿನ ಚಾಲಕ ಸಚಿನ್‌,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿದ್ದಾಪುರ: ಅಮಾಸೆಬೈಲು ಗ್ರಾಮ ಪಂಚಾಯತ್‌, ಅಮಾಸೆಬೈಲು ಚಾರಿಟೆಬಲ್‌ ಟ್ರಸ್ಟ್‌ (ರಿ.), ಕರ್ಣಾಟಕ ಬ್ಯಾಂಕ್‌ (ಲಿ.) ಮಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ, ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ, ಜಿಲ್ಲಾ ಪಂಚಾಯತ್‌ ಉಡುಪಿ, ತಾಲೂಕು ಪಂಚಾಯತ್‌ ಕುಂದಾಪುರ ಇವರ ಆಶ್ರಯದಲ್ಲಿ ಅಮಾಸೆಬೈಲು ಗ್ರಾಮ ಪಂಚಾಯತ್‌ನಲ್ಲಿ ಅನುಷ್ಠಾನಗೊಂಡಿರುವ ಸೋಲಾರ್‌ ಗ್ರಾಮ ಘೋಷಣೆಯು ಗಣ್ಯರ ಉಪಸ್ಥಿತಿಯಲ್ಲಿ ಎ. 27ರಂದು ಅಮಾಸೆಬೈಲು ಸರಕಾರಿ ಪ್ರೌಢಶಾಲಾ ವಠಾರದಲ್ಲಿ ಜರಗಿತು. ಮೀನುಗಾರಿಕಾ ಹಾಗೂ ಯುವಜನಸೇವೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಅಮಾಸೆಬೈಲು ಗ್ರಾ. ಪಂ.ನ್ನು ಸೋಲಾರ್‌ ಗ್ರಾಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ದೇವಸ್ಥಾನಗಳಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಕೊಡಮಾಡಿದ ಸೋಲಾರ್‌ ದೀಪವನ್ನು ಕರ್ಣಾಟಕ ಬ್ಯಾಂಕ್‌ ಜನರಲ್‌ ಮೆನೇಜರ್‌ ಚಂದ್ರಶೇಖರ ರಾವ್‌ ಅವರು ಉದ್ಘಾಟಿಸಿದರು. ಮನೆಗಳಿಗೆ ಸೋಲಾರ್‌ ದೀಪಗಳನ್ನು ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಉದ್ಘಾಟಿಸಿದರು. ಅಮಾಸೆಬೈಲು ಗ್ರಾಮದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:  ತಾಲೂಕು ಆಲೂರು ಸಮೀಪದ ಗುಂಡೂರು ಹೊಳೆಗೆ ನಿರ್ಮಿಸಲಾದ ಡ್ಯಾಂನ ಸಾಧಕ – ಬಾಧಕಗಳ ವೀಕ್ಷಣೆಗೆ ಉಡುಪಿ ಜಿಲ್ಲಾ ರೈತ ಸಂಘ ಭೇಟಿ ನೀಡಿ ಪರಿಶೀಲಿಸಿತು. ಆಲೂರು ಎದ್ರುಬೈಲುವಿನಲ್ಲಿ ಹರಿಯುವ ಹೊಳೆಗೆ ಅಡ್ಡವಾಗಿ ಡ್ಯಾಂ ನಿರ್ಮಿಸಿ, ನೀರನ್ನು ಶೇಖರಿಸಿ ಕೆಳಭಾಗಕ್ಕೆ ಕಿಂಡಿ ಅಣೆಕಟ್ಟುಗಳ ಮೂಲಕ ನೀರು ನೀಡುವ ಯೋಜನೆ ಇದಾಗಿದ್ದು, ಈ ಯೋಜನೆ ರೈತರಿಗೆ ಎಷ್ಟರಮಟ್ಟಿಗೆ ತಲುಪುತ್ತದೆ ಎನ್ನುವುದನ್ನು ರೈತ ಸಂಘ ವೀಕ್ಷಿಸಿತು. ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರತಾಪಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ರೈತರ ನಿಯೋಗ ಗುಂಡೂರು ಡ್ಯಾಂ, ಆಲೂರಿನಲ್ಲಿ ಕಿಂಡಿ ಅಣೆಕಟ್ಟು, ನೀರು ಹರಿದು ಹೋಗುವ ಅಚ್ಚುಕಟ್ಟು ಪ್ರದೇಶಗಳ ವೀಕ್ಷಣೆ ನಡೆಸಿತು. ಈ ಸಂದರ್ಭದಲ್ಲಿ ಪ್ರತಾಪಚಂದ್ರ ಶೆಟ್ಟಿ ಅವರು ವಾರಾಹಿ ನೀರಾವರಿ ಯೋಜನೆಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಸರಕಾರದ ಯೋಜನೆ ವ್ಯರ್ಥವಾಗಬಾರದು. ರೈತರಿಗೆ ನಿರಂತರ ನೀರು ಸಿಗುವಂತಾಗಬೇಕು. ಆ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಬಸ್ರೂರು ಮೂರು ಕೈಯಲ್ಲಿರುವ ಕರ್ನಾಟಕ-ರಸ್ತೆ ಸಾರಿಗೆ ಇಲಾಖೆಯ ಕುಂದಾಪುರ ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಸಾರ್ವಜನಿಕ ಜನ ಸಂಪರ್ಕ ಸಭೆ ಜರಗಿತು. ಸಭೆಯಲ್ಲಿ ಸಾರ್ವಜನಿಕರಿಂದ ಅನೇಕ ಬೇಡಿಕೆಗಳು ಹಾಗೂ ಆಗ್ರಹ ಗಳು ಕೇಳಿಬಂದವು. ಕಾವ್ರಾಡಿ – ಕುಂದಾಪುರ ಕರ್ಕುಂಜೆ ಮಾರ್ಗವಾಗಿ ಕೊಲ್ಲೂರಿಗೆ ಗ್ರಾಮಾಂತರ ಸಾರಿಗೆ, ಕುಂದಾಪುರ-ತೀರ್ಥಹಳ್ಳಿ ಮಾರ್ಗವಾಗಿ ಶೃಂಗೇರಿಗೆ ಬಸ್‌ ಓಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು. ಅಲ್ಲದೇ ಸರಕಾರಿ ಬಸ್ಸುಗಳ ದರ ಹೆಚ್ಚಾಗಿದೆ ಖಾಸಗಿ ಬಸ್ಸುಗಳಿಗಿಂತ ಹೆಚ್ಚು ದರ ನಿಗದಿ ಪಡಿಸುವುದು ಸರಿಯಲ್ಲ ತತ್‌ಕ್ಷಣ ದರವನ್ನು ಪರಿಷ್ಕರಿಸಬೇಕು, ಕುಂದಾಪುರದಿಂದ ಈಗಾಗಲೇ ಓಡುತ್ತಿದ್ದ ವೋಲ್ವೋ ಬಸ್ಸುಗಳು ಬೇರೆ ಕಡೆಗೆ ವರ್ಗಾವಣೆಯಾಗಿದ್ದು ಕೂಡಲೇ ಅವುಗಳನ್ನು ಕುಂದಾಪುರಕ್ಕೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು. ಕುಂದಾಪುರ ರೈಲು ನಿಲ್ದಾಣಕ್ಕೆ ಸರಕಾರಿ ಬಸ್ಸು ಸಂಚಾರ ಕಲ್ಪಿಸಬೇಕು ಎನ್ನುವ ಬೇಡಿಕೆ ಇಡಲಾಯಿತು. ಸಾರ್ವಜನಿಕರ ಬೇಡಿಕೆಗಳ ಆಗ್ರಹಕ್ಕೆ ಉತ್ತರಿಸಿದ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ಅಧಿಕಾರಿ ಜೈಶಾಂತ್‌ ಕುಮಾರ್‌ ಈ ಭಾಗದ ಹಲವಾರು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಸಿದ್ದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಂಸ್ಕೃತಿಕ ಪ್ರೀತಿ ಮಾನವೀಯ ಮೌಲ್ಯ ವೃದ್ಧಿಸಿ ಸಮಾಜಮುಖಿ ಚಿಂತನೆಗಳನ್ನು ಕಲ್ಪಿಸುತ್ತದೆ. ಹಾಗೆಯೇ ಕೇವಲ ಪುಸ್ತಕದ ಜ್ಞಾನ ಜೀವನಕ್ಕೆ ಸಾಕಾಗುವುದಿಲ್ಲ. ಶಿಕ್ಷಣೇತರ ಚಟುವಟಿಕೆಗಳು ಜೀವನದದ್ದುಕ್ಕಕ್ಕೂ ನೆನಪಿನಲ್ಲಿ ಉಳಿದು ಸಾಂಸ್ಕೃತಿಕವಾಗಿ ಎಲ್ಲವನ್ನು ಎದುರಿಸುವ ಧೈರ್ಯ ಮಕ್ಕಳಲ್ಲಿ ತುಂಬಲು ರಂಗ ಶಿಬಿರಗಳು ಸಹಕಾರಿಯಾಗುತ್ತದೆ ಎಂದು ಮುಂಬೈ ಉದ್ಯಮಿ ಗೋವಿಂದ ಬಾಬು ಪೂಜಾರಿ ಹೇಳಿದರು. ಇಲ್ಲಿನ ಶ್ರೀ ಶಾರದಾ ವೇದಿಕೆಯಲ್ಲಿ ಲಾವಣ್ಯ ಮಕ್ಕಳ ರಂಗ ತರಬೇತಿ ಶಿಬಿರದಲ್ಲಿ ರೂಪುಗೊಂಡ ಎರಡು ನಾಟಕ ಪ್ರದರ್ಶನಗಳನ್ನು ಉದ್ಘಾಟಿಸಿ ಮಾತನಾಡಿದರು. ಸ್ವಕೇಂದ್ರಿತ ಸಮಾಜ ನಿರ್ಮಾಣವಾಗುತ್ತಿರುವ ಕಾಲಘಟ್ಟದಲ್ಲಿ ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿರುವ ರಂಗ ಚಟುವಟಿಕೆಗಳು ಮುಖ್ಯ ಎಂದೆನಿಸಿಕೊಳ್ಳುತ್ತವೆ. ರಂಗಭೂಮಿಗಳು ಸಮಾಜಕ್ಕೆ ಹೊಸ ಸಂದೇಶ ನೀಡಿ, ಮನುಷ್ಯನ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡುವುದಲ್ಲದೇ, ಜೀವನದಲ್ಲಿನ ಲೋಪದೋಷಗಳನ್ನು ತಿದ್ದಿಕೊಳ್ಳಲು ಸಹಕಾರಿಯಾಗುತ್ತದೆ. ಬೈಂದೂರಿನ ಲಾವಣ್ಯ ಸಂಸ್ಥೆ ಕಳೆದ ನಾಲ್ಕು ದಶಕಗಳಿಂದ ತಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೇ, ಪರಸ್ಪರ ವಿಶ್ವಾಸದಿಂದ ಮುನ್ನೆಡೆದುಕೊಂಡು ಹೋಗುತ್ತಿರುವುದಲ್ಲದೇ, ಈ ಭಾಗದ ಜನರಿಗೆ ಮನೋರಂಜನೆಯೊಂದಿಗೆ ಉತ್ತಮ ಸಂದೇಶ ನೀಡುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಇದರ ನೂತನ ಅಧ್ಯಕ್ಷರಾಗಿ ಉದಯ ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ದಿನೇಶ ಶೆಟ್ಟಿ ಅವರನ್ನು ಆಯ್ಕೆ ಆಗಿದ್ದಾರೆ. ಸಾಮಾಜಿಕ ಕಳಕಳಿಯ ಮೂಲಕ ಜನಮನ್ನಣೆಗಳಿಸಿದ ಹೆಮ್ಮೆಯ ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು ನಾಲ್ಕು ವರ್ಷಗಳನ್ನು ಪೂರೈಸಿದ್ದು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಪದಾಧಿಕಾರಿಗಳು: ಗೌರವ ಅಧ್ಯಕ್ಷರು : ರಾಮಚಂದ್ರ ಮಂಜರು ಅಧ್ಯಕ್ಷರು: ಉದಯ ಆಚಾರ್ಯ ಉಪಾಧ್ಯಕ್ಷರು ದಿನೇಶ್ ಶೆಟ್ಟಿ ಕಾರ್ಯದರ್ಶಿ : ನಾಗರಾಜ ಶೆಟ್ಟಿ ಖಜಾಂಚಿ : ಪ್ರತಾಪ ಶೆಟ್ಟಿ ಗಾಂದಾಡಿ ಜೊತೆ ಕಾರ್ಯದರ್ಶಿ : ಅಣ್ಣಪ್ಪ ಶೆಟ್ಟಿ ಸಂಘಟನಾ ಉಸ್ತುವಾರಿ : ರಾಘು ಶೆಟ್ಟಿ ಮುಲ್ಲಿಮನೆ – ಪ್ರಶಾಂತ ಶೆಟ್ಟಿ ನಿರ್ಕೋಡ್ಲ – ಸುಚೇಂದ್ರ ಶೆಟ್ಟಿ ಸಾಂಸ್ಕೃತಿಕ ಉಸ್ತುವಾರಿ : ಪ್ರದೀಪ ಶೆಟ್ಟಿ – ಚೇತನಾ ಮಲ್ಲೋಡ್ ಕ್ರೀಡಾ ಉಸ್ತುವಾರಿ : ಸಂತೋಷ ಶೆಟ್ಟಿ ಮುಲ್ಲಿಮನೆ – ಮಂಜುನಾಥ ಪೂಜಾರಿ. ಪತ್ರಿಕಾ ಮತ್ತು ಪ್ರಚಾರ ಉಸ್ತುವಾರಿ : ಸುಪ್ರತಾ…

Read More

ಗಂಗನಾಡು, ಮದ್ದೋಡಿ, ತೂದಳ್ಳಿ, ದೊಂಬೆ ಮಾರ್ಗಕ್ಕೆ ನಾಲ್ಕು ಬಸ್ಸುಗಳು ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು, ಆಲಂದೂರು, ತೂದಳ್ಳಿ, ಮದ್ದೋಡಿ, ಗಂಗನಾಡು, ಕರಾವಳಿ, ದೊಂಬೆ ಮುಂತಾದ ಊರುಗಳಿಂದ ಸಾರ್ವಜನಿಕರು ಸರಕಾರಿ ಬಸ್ಸುಗಳನ್ನು ಪ್ರಾರಂಭಿಸುವ ಕುರಿತು ಕ.ರಾ.ರ.ಸಾ.ಸಂಸ್ಥೆಯ ಅಧ್ಯಕ್ಷರಾದ ಕೆ.ಗೋಪಾಲ ಪೂಜಾರಿಯವರಿಗೆ ಮನವಿ ಸಲ್ಲಿಸಿದ್ದರು. ಮನವಿಗೆ ಸಂದಿಸಿದ ಶಾಸಕರು ಅತೀ ಶೀಘ್ರದಲ್ಲಿ ನಾಲ್ಕು ಹೊಸ ಬಸ್ಸುಗಳನ್ನು ಗ್ರಾಮಾಂತರ ಸಾರಿಗೆ ಸೇವೆ ಮೂಲಕ ನೀಡಿರುವುದು ಶ್ಲಾಘನೀಯ ಎಂದು ಶಿರೂರು ಜೆ.ಸಿ.ಐ ಅಧ್ಯಕ್ಷ ಅರುಣ ಕುಮಾರ್ ಶಿರೂರು ಹೇಳಿದರು. ಅವರು ದೊಂಬೆ, ಕರಾವಳಿ, ತೂದಳ್ಳಿ, ಮದ್ದೋಡಿ, ಗಂಗನಾಡು ಮುಂತಾದ ಊರುಗಳಿಗೆ ನೂತನ ಸರಕಾರಿ ಬಸ್ಸುಗಳ ಓಡಾಟಕ್ಕೆ ಶಿರೂರಿನಲ್ಲಿ ಚಾಲನೆ ನೀಡಿ ಮಾತನಾಡಿ ನೂತನ ಬಸ್ಸು ಸೇವೆ ಆರಂಭಿಸಿದ್ದರಿಂದ ಪ್ರತಿದಿನ ಹತ್ತಾರು ಕಿ.ಮೀ ನಡೆದುಕೊಂಡು ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಇಂತಹ ಜನಪರ ಕಾರ್ಯಗಳು ಸದಾ ಜನಮಾನಸದಲ್ಲಿ ಉಳಿಯುತ್ತದೆ ಎಂದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಕೆ.ಡಿ.ಪಿ ಸದಸ್ಯ ಎಸ್.ರಾಜು ಪೂಜಾರಿ ಮಾತನಾಡಿ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿಯವರು ಕರ್ನಾಟಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸ್ಪೋರ್ಟ್ಸ್ ಕ್ಲಬ್ ರಿ. ಬೈಂದೂರು ಆಶ್ರಯದಲ್ಲಿ ರಾಜ್ಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ‘ಬೈಂದೂರು ಟ್ರೋಪಿ 2017’ ಎಪ್ರಿಲ್ 28, 29, 30ರಂದು ಬೈಂದೂರಿನ ಗಾಂಧಿ ಮೈದಾನದಲ್ಲಿ ಜರುಗಲಿದೆ. ಬೈಂದೂರು ಟ್ರೋಫಿ ವಿಜೇತರಿಗೆ ಪ್ರಥಮ ಬಹುಮಾನವಾಗಿ 2,00,001 ಹಾಗೂ ಆಕರ್ಷಕ ಟ್ರೋಫಿ ದೊರೆಯಲಿದ್ದು ದ್ವಿತೀಯ ಬಹುಮಾನ 1,00,001 ಹಾಗೂ ಆಕರ್ಷಕ ಟ್ರೋಫಿ ಇರಲಿದೆ. ಸರಣಿ ಶ್ರೇಷ್ಠ, ಪಂದ್ಯ ಪುರುಷೋತ್ತಮ, ಉತ್ತಮ ಎಸೆತಗಾರ, ಉತ್ತಮ ಕ್ಷೇತ್ರ ರಕ್ಷಕ ಉತ್ತಮ ಗೂಟ ರಕ್ಷಕ, ಉತ್ತಮ ದಾಂಡಿಗ ಮೊದಲಾದ ಬಹುಮಾನಗಳೊಂದಿಗೆ ಟ್ರೋಫಿ ಆಟಗಾರರಿಗೆ ದೊರೆಯಲಿದೆ. ಎ.28ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ರಿದಂ ನೃತ್ಯ ಶಾಲೆ ಬೈಂದೂರು ಇವರಿಂದ ನೃತ್ಯ ವೈಭವ, ರಾಜಾಯದು ಉಡುಪಿ ಹಾಗೂ ಜ್ಯೂನಿಯರ್ ರಾಜಕುಮಾರ್ ಖ್ಯಾತಿಯ ಶ್ರೀರಾಮ ಬೈಂದೂರು ಇವರಿಂದ ಸಂಗೀತ ರಸಸಂಜೆ ಜರುಗಲಿದೆ. ಎ.30ರಂದು ಸಮಾರೋಪ ಸಮಾರಂಭ ಅದ್ದೂರಿಯಾಗಿ ಜರುಗಲಿದ್ದು ಸಾಧಕರಿಗೆ…

Read More