ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ಯುವಕರಲ್ಲಿ ವಿಶೇಷವಾದ ಪ್ರತಿಭೆ ಇದೆ. ಏನನ್ನೂ ಸಾಧಿಸಬೇಕೆಂಬ ಛಲವಿದೆ. ಸಿನೆಮಾ ನಿರ್ಮಾಣ ನಿರ್ದೇಶನ ಎಂಬುದು ಬೆಂಗಳೂರಿಗೆ ಮಾತ್ರ ಸೀಮಿತವಾಗದೇ ಕುಂದಾಪುರ ಪರಿಸರದಲ್ಲಿಯೂ ಸಾಧ್ಯ ಎಂಬ ಛಲದೊಂದಿಗೆ ಈ ಭಾಗದ ಪ್ರತಿಭೆಗಳಿಗೂ ಅವಕಾಶ ನೀಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ನೇತಾಜಿ ಸಭಾ ಭವನದಲ್ಲಿ ಜರುಗಿದ ಮಿರಾಕಲ್ ಡಾನ್ಸ್ ಕ್ರೀವ್ ಉದ್ಘಾಟನಾ ಸಮಾರಂಭ ಹಾಗೂ ಕತ್ತಲೆಕೋಣೆ ಸಿನೆಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿ ಕುಂದಾಪುರದ ಯುವಕರು ಏನನ್ನೂ ಸಾಧಿಸಬಲ್ಲರು. ಸಿನೆಮಾ ಕ್ಷೇತ್ರದಲ್ಲಿಯೂ ಈ ಭಾಗದ ನಿರ್ದೇಶಕರು ಹೆಸರು ಮಾಡುತ್ತಿರುವುದು ಕೇಳಿದ್ದೇನೆ. ಸಂದೇಶ್ ಶೆಟ್ಟಿ ಅಜ್ರಿ ಅವರ ನಿರ್ದೇಶನದ ಕತ್ತಲೆಕೋಣೆ ಸಿನೆಮಾ ಯಶಸ್ಸು ಕಾಣುವಂತಾಗಲಿ ಎಂದು ಹಾರೈಸಿದರು. ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮದರ್ಶಿ ಸಜ್ಜಿದಾನಂದ ಚಾತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚಿತ್ರದ ನಿರ್ಮಾಪಕ ಪಿ.ಆರ್ ಅಮೀನ್,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಕೆ. ಗೋಪಾಲ ಪೂಜಾರಿ ಅವರನ್ನು ಮರವಂತೆಯ ಸೇವಾ ಸಾಂಸ್ಕೃತಿಕ ವೇದಿಕೆ ಸಾಧನಾ ವತಿಯಿಂದ ರವಿವಾರ ಅಭಿನಂದಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಗುರುದಾಸ್ ವಿ. ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಸ್ವಾಗತಿಸಿ, ಅಭಿನಂದನೆಯ ನುಡಿಗಳನ್ನಾಡಿದ ಸಾಧನಾ ಸ್ಥಾಪಕಾಧ್ಯಕ್ಷ ಎಸ್. ಜನಾರ್ದನ ತೀರ ಸಾಮಾನ್ಯ ಹಿನ್ನೆಲೆಯಿಂದ ಬಂದ ಪೂಜಾರಿ ಅವರು ರಾಜಕೀಯ ಕ್ಷೇತ್ರದಲ್ಲಿ ಮೂಡಿಸಿದ ಛಾಪು ಅಸದೃಶವಾದುದು. ನಾಲ್ಕು ಅವಧಿಗೆ ಬೈಂದೂರು ಶಾಸಕರಾಗಿ ನಡೆಸಿದ ಅಭಿವೃದ್ಧಿ ಕಾರ್ಯಗಳಿಗೆ ಸಾಟಿ ಇಲ್ಲ. ಶಿಕ್ಷಣ, ಸಂಪರ್ಕ, ವಿದ್ಯುದೀಕರಣ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅವರಿಂದ ಅನನ್ಯ ಕೊಡುಗೆ ಸಂದಿದೆ. ಬೈಂದೂರು ತಾಲೂಕು ರಚನೆ ಅವರ ಸಾಧನೆಯ ಕಿರೀಟಕ್ಕೆ ಸೇರಿದ ಅನರ್ಘ್ಯ ಗರಿ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಅವರಿಂದ ಬೈಂದೂರು ಕ್ಷೇತ್ರ ಇನ್ನಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದೆ ಎಂದರು. ಮಾತನಾಡಿದ ಗೋಪಾಲ ಪೂಜಾರಿ ತಮ್ಮ ಬಾಲ್ಯದ ಬದುಕು ಮತ್ತು ಸಾಧನೆಯ ಮೆಟ್ಟಿಲುಗಳನ್ನು ಏರಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಶಾರದಾ ಮಂಟಪದಲ್ಲಿ ಕಳೆದ ಮಾರ್ಚ್ ೨೩ ರಂದು ಭಗತ್‌ಸಿಂಗ್ ಅಭಿಮಾನಿ ಬಳಗದ ವತಿಯಿಂದ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಸ್ವಾತಂತ್ರ್ಯ ಯೋಧರಾದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಕಾರ‍್ಯಕ್ರಮದಲ್ಲಿ ವಾಸು ದೇವಾಡಿಗ, ವಿಠಲ ಶೆಣೈ, ಉಮನಾಥ ದೇವಾಡಿಗ, ರಾಘವೇಂದ್ರ ಗಾಣಿಗ, ಯಶವಂತ, ನವೀನ, ರತ್ನಾಕರ, ಮಣಿ, ನಿತ್ಯಾನಂದ, ಶಂಕರ, ರವೀಂದ್ರ ಪಠೇಲ, ಭಗತ್‌ಸಿಂಗ್ ಅಭಿಮಾನಿ ಬಳಗದ ಸುಬ್ರಮಣ್ಯ ,ಅರುಣ, ಕಿರಣ್, ರಂಜಿತ್, ರಾಘವೇಂದ್ರ, ವಿಶ್ವನಾಥ, ವಿವೇಕ್, ಪ್ರಸನ್ನ ಮೊದಲಾದವರು ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿಂದ ಬೆಂಗಳೂರಿಗೆ ಸಂಚರಿಸಲಿರುವ ನೂತನ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ಕೆಎಸ್‌ಆರ್‌ಟಿಸಿ ಕುಂದಾಪುರ ಘಟಕ ವ್ಯವಸ್ಥಾಪಕ ತಾರನಾಥ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಗ್ರಾ.ಪಂ ಸದಸ್ಯರುಗಳಾದ ಮಾಣಿಕ್ಯ ಹೋಬಳಿದಾರ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಾಗರಾಜ ಗಾಣಿಗ, ಬೈಂದೂರು ನಾಗರಿಕ ವೇದಿಕೆಯ ಅಧ್ಯಕ್ಷ ಜಗದೀಶ ಪಟವಾಲ್, ರವೀಂದ್ರ ಶ್ಯಾನುಭೋಗ್, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ.ವಿ, ನರಸಿಂಹ ಹಳಗೇರಿ, ವಿಠ್ಠಲ್ ಮಯ್ಯಾಡಿ, ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ನೂತನ ಬಸ್ಸು ರಾತ್ರಿ 8 ಗಂಟೆಗೆ ಬೈಂದೂರು ಕೊಲ್ಲೂರು, ಹೊಸನಗರ, ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಪತ್ತು ಮಾನವನಿಗೆ ಎಲ್ಲ ಸುಖ, ಸೌಲಭ್ಯಗಳನ್ನು ನೀಡುತ್ತದೆ ಎಂದು ನಂಬುವುದರಿಂದ ಅದರ ಗಳಿಕೆಗೆ ಎಲ್ಲಿಲ್ಲದ ಆದ್ಯತೆ ನೀಡಲಾಗುತ್ತಿದೆ. ಅದರ ಪರಿಣಾಮವಾಗಿ ಜನರು ಅತಿಗಳಿಕೆ ಹಾಗೂ ಸಂಚಯದ ದಾರಿ ಹಿಡಿಯುತ್ತಾರೆ. ಶಿಕ್ಷಣವನ್ನೂ ಸಂಪತ್ತು ಗಳಿಗೆಯ ಸಾಧನವೆಂದು ಭಾವಿಸಲಾಗುತ್ತದೆ. ಆದರೆ ಸಂಪತ್ತು ತಂದುಕೊಡಬಹುದಾದ ಸುಖ, ಸೌಲಭ್ಯಗಳಿಗೆ ಮಿತಿ ಇದೆ ಎನ್ನುವುದಕ್ಕೆ ಹಲವು ನಿದರ್ಶನಗಳು ಸಿಗುತ್ತವೆ. ಜನರು ಸಂತೃಪ್ತಿಯಿಂದ ಬದುಕಲು ಅಗತ್ಯವೆನಿಸುವಷ್ಟು ದುಡಿಯುವುದು ಶ್ರೇಯಸ್ಕರ ಎಂದು ಭಾರತೀಯ ಪರಂಪರೆ ಸಾರಿದೆ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಹೇಳಿದರು. ಹೊಂಬಾಡಿಯ ಕಾಮತ್ ಪಾಲಿಟೆಕ್ನಿಕ್ ವಾರ್ಷಿಕೋತ್ಸವದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ಉದ್ಘಾಟಿಸಿದ ಕಾಲೇಜು ಆಡಳಿತ ಮಂಡಳಿಯ ಮುಖ್ಯಸ್ಥ ಕೆ. ದೇವದಾಸ್ ಕಾಮತ್ ಗ್ರಾಮಾಂತರ ಪ್ರದೇಶದಲ್ಲಿರುವ ಪಾಲಿಟೆಕ್ನಿಕ್ ಎಲ್ಲ ಮೂಲ ಸೌಲಭ್ಯಗಳನ್ನು ಹೊಂದಿದ್ದು ವಿದ್ಯಾರ್ಥಿಗಳಿಂದ ಕನಿಷ್ಠ ಶುಲ್ಕ ಪಡೆದು ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡುತ್ತಿದೆ ಎಂದರು. ಉಪಸ್ಥಿತರಿದ್ದ ಭೂಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಸ್. ದಿನಕರ ಶೆಟ್ಟಿ ಶುಭ ಹಾರೈಸಿದರು. ಪ್ರಾಂಶುಪಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ದೇವಸ್ಥಾನದ ಬಳಿ ನಡೆದ ಬಸ್ಸು, ಟ್ಯಾಂಕರ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಟ್ಯಾಂಕರ್ ಚಾಲಕ ಶಿವಳ್ಳಿಯ ನಾರಾಯಣ ಆಚಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಬಸ್ಸಿನಲ್ಲಿದ್ದ ೪ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಇತರರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ವರದಿಯಾಗಿದೆ. ಕುಂದಾಪುರ ಕಡೆಯಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ನಾಗೂರು ಆಂಜನೇಯ ದೇವಸ್ಥಾನದ ಬಳಿ ಬರುತ್ತಿದ್ದಂತೆ ಅಡ್ಡಲಾಗಿ ಬಂದ ಬೈಕ್ ಸವಾರನನ್ನು ತಪ್ಪಿಸುವ ಬರದಲ್ಲಿ ರಸ್ತೆಯ ಬಲಭಾಗಕ್ಕೆ ಸಂಚರಿಸಿದ್ದರಿಂದ ಎದುರಿನಿಂದ ಬರುತ್ತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿತ್ತು. ಬಸ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬೈಕಿಗೆ ಡಿಕ್ಕಿ ಹೊಡೆದ ಬಸ್ ಬಳಿ ಟ್ಯಾಂಕರ್‌ಗೂ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆಪಘಾತದ ತೀವ್ರತೆಗೆ ಬಸ್ಸು, ಟ್ಯಾಂಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗದಲ್ಲಿದ್ದ ಕೆಲವರು ಗಾಜು ಒಡೆದು ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಬಸ್ಸಿನಲ್ಲಿ ೪ಕ್ಕೂ ಹೆಚ್ಚು ಮಂದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಸ್ಥಳೀಯ ಗ್ರಾಪಂ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಸ್ವ-ಸಹಾಯ ಗುಂಪುಗಳು, ಮಹಿಳಾ ಮಂಡಲ, ಆರೋಗ್ಯ ಕೇಂದ್ರ, ಪೋಲಿಸ್ ಇಲಾಖೆ, ವನ್ಯಜೀವಿ ವಲಯ, ದೇವಳದ ಕಾಲೇಜು ಹಾಗೂ ಪ್ರೌಢಶಾಲೆ, ಶ್ರೀಮೂಕಾಂಬಿಕಾ ವ್ಯ.ಸೇ.ಸ.ಸಂಘ ಮತ್ತು ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಅಭಿಯಾನಕ್ಕೆ ಚಾಲನೆ ನೀಡಿದರು. ಕೊಲ್ಲೂರು ವರ್ಷದುದ್ದಕ್ಕೂ ಅಮಿತಸಂಖ್ಯೆಯ ಶ್ರದ್ಧಾವಂತರನ್ನು ಆಕರ್ಷಿಸುವ ಪವಿತ್ರ ತೀಥಕ್ಷೇತ್ರ, ಇದು ದಕ್ಷಿಣ ಭಾರತದ ಒಂದು ಅತಿಪ್ರಮುಖ ಯಾತ್ರಾ ಕೇಂದ್ರವೂ ಹೌದು. ತನ್ನ ನಿಸರ್ಗಶುದ್ಧ ಪರಿಸರಕ್ಕೆ ಹೆಸರುವಾಸಿಯಾಗಿದ್ದ ಮಾತೆ ಮುಕಾಂಬಿಕೆಯ ಮನೆಯಾಗಿರುವ ಈ ಕ್ಷೇತ್ರದ ಪರಿಸರವು ಅನುಗಾಲವೂ ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ಪ್ರತಿಯೊಬ್ಬರೂ ಸಹಕರಿಸಬೇಕು ಎಂದರು. ಸ್ಥಳೀಯ ಠಾಣಾಧಿಕಾರಿ ಶೇಖರ್ ಮಾತನಾಡಿ, ಸ್ವಸ್ಥ ಭಾರತದ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ತಮ್ಮನ್ನು ತೊಡಗಿಸಿಕೊಳ್ಳಬೇಕು. ಮೊದಲಾಗಿ ತಮ್ಮ ಮನೆ, ಪರಿಸರ ಸ್ವಚ್ಛಮಾಡುವುದರ ಮೂಲಕ ಇತರರಿಗೆ ಮಾದರಿಯಾಗಬೇಕು. ಮಾಲಿನ್ಯ ರಹಿತ ಪರಿಸರ ನಿರ್ಮಾಣ ಮಾಡುವತ್ತ ಪ್ರಯತ್ನಗಳು ನಡೆಯಬೇಕಿದೆ ಎಂದರು. ಕೊಲ್ಲೂರು ದೇವಳದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯ ಕಳಿಹಿತ್ಲು ಶ್ರೀ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ನೂತನ ದ್ವಾರ ಗೋಪುರದ ಲೋಕಾರ್ಪಣೆ ಸಮಾರಂಭ ಜರಗಿತು. ಗಂಗೊಳ್ಳಿಯ ಪುರೋಹಿತರಾದ ಜಿ.ನಾರಾಯಣ ವಿಶ್ವನಾಥ ಆಚಾರ್ಯ ಅವರು ದೇವಸ್ಥಾನದ ನೂತನ ದ್ವಾರ ಗೋಪುರವನ್ನು ಲೋಕಾರ್ಪಣೆಗೊಳಿಸಿ ಆಶೀರ್ವದಿಸಿದರು. ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಚಿಕ್ಕಯ್ಯ ಪೂಜಾರಿ ಹೆಮ್ಮಾಡಿಮನೆ, ಶೀನ ಪೂಜಾರಿ ಸದಿಯನಮನೆ, ಶ್ರೀನಿವಾಸ ದೇವಾಡಿಗ ಓಣಿಮನೆ, ಕೃಷ್ಣ ದೇವಾಡಿಗ ಹೆಬ್ಬಾಗಿಲು ಮನೆ, ಆಡಳಿತ ಮಂಡಳಿ ಅಧ್ಯಕ್ಷ ಉಮಾನಾಥ ದೇವಾಡಿಗ, ಕಾರ್ಯದರ್ಶಿ ಗಣೇಶ ಟಿ.ಪೂಜಾರಿ, ಪಾತ್ರಿಗಳಾದ ರಘು ಪೂಜಾರಿ, ಜಗನ್ನಾಥ ಪೂಜಾರಿ, ಸುಶೀಲ ಪೂಜಾರಿ, ವಸಂತ ಭಂಡಾರಿ, ದೇವಪ್ಪ ಪೂಜಾರಿ, ಶಂಕರ ದೇವಾಡಿಗ, ಟಿ.ವಾಸುದೇವ ದೇವಾಡಿಗ, ನಿತ್ಯಾನಂದ ದೇವಾಡಿಗ, ವಸಂತ ದೇವಾಡಿಗ, ದಯಾನಂದ ದೇವಾಡಿಗ, ಸುಧಾಕರ ದೇವಾಡಿಗ, ವಾಸು ಪೂಜಾರಿ, ರಾಜ ಪೂಜಾರಿ, ನಾಗೇಶ ಭಂಡಾರ್‌ಕಾರ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮಸಭೆಯಲ್ಲಿ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು. ಅವರು ಜಾಗೃತರಾಗಿದ್ದರೆ ಊರಿನಲ್ಲಿ ನಡೆಯುವ ಕಳಪೆ ಕಾಮಗಾರಿ, ಅವ್ಯವಹಾರಕ್ಕೆ ತಡೆಯಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ ಹೇಳಿದರು. ಮರವಂತೆ ಗ್ರಾಮ ಪಂಚಾಯತ್ ಸುವರ್ಣ ಸೌಧದ ಅಟಲ್‌ಬಿಹಾರಿ ವಾಜಪೇಯಿ ವೇದಿಕೆಯಲ್ಲಿ ನಡೆದ ಎರಡನೆ ಸುತ್ತಿನ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ. ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಹರಿಶ್ಚಂದ್ರ ಆಚಾರ್ಯ ಸ್ವಾಗತಿಸಿ, ಪ್ರಥಮ ಸುತ್ತಿನ ಗ್ರಾಮಸಭೆಯ ವರದಿ ಮಂಡಿಸಿದರು. ಕರಸಂಗ್ರಾಹಕ ಶೇಖರ್ ಮರವಂತೆ ವಾರ್ಡ್‌ಸಭೆಯ ನಡಾವಳಿ, ಪ್ರಸಕ್ತ ಸಾಲಿನ ಕ್ರಿಯಾಯೋಜನೆ ಹಾಗೂ ಪ್ರಗತಿಯ ವಿವರ ನೀಡಿದರು. ಪಶು ವೈದ್ಯಾಧಿಕಾರಿ ಡಾ. ಅರುಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸವಿತಾ ಶೆಟ್ಟಿ ಇಲಾಖೆಯ ಯೋಜನೆಗಳ ಮಾಹಿತಿ ನೀಡಿದರು. ಮಾರ್ಗದರ್ಶಿ ಅಧಿಕಾರಿಯಾಗಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಗ್ರಾಮಸಭೆಯಲ್ಲಿ ಮಾತನಾಡುವಾಗ ಜನರು ಸಂಯಮ ವಹಿಸಿದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿಯೇ ವಿಶೇಷವಾಗಿ ಗುರುತಿಸಿಕೊಂಡ ಸಂಸ್ಥೆ. ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ, ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡುತ್ತಿರುವ ಈ ಸಂಸ್ಥೆ ಮುಂದಿನ ದಿನಗಳಲ್ಲಿ ಯಶಸ್ಸನ್ನು ಸಾಧಿಸಲಿ ಮತ್ತು ಸಂಸ್ಥೆಯ ಅಭಿವೃದ್ಧಿಗೆ ವೈಯಕ್ತಿಕ ನೆಲೆಯಲ್ಲೂ ನಾನು ಸಹಕರಿಸುತ್ತೇನೆ ಎಂದು ನಂದಿನಿ ಗ್ರೂಫ್ ಆಫ್ ಹೋಟೆಲಿನ ಮಾಲಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೇರಂಬಳ್ಳಿ ರಾಘವೇಂದ್ರ ರಾವ್ ಹೇಳಿದರು. ಅವರು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತರಾಮ ನಕ್ಕತ್ತಾಯ, ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಅನಿಲ್ ಚಾತ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್‌ರವರು ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ವಿಘ್ನೇಶ್ವರ್ ರಾವ್ ಸ್ವಾಗತಿಸಿದರು, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಾಕರ…
