ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಣಿಪಾಲ ಇವರ ಆಶ್ರಯದಲ್ಲಿ ಸುಣ್ಣಾರಿಯ ವಿವೇಕೋದಯ ಶಾಲೆಯಲ್ಲಿ ಇತ್ತೀಚೆಗೆ ಜರುಗಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಪ್ರೌಢ ಹಾಗೂ ಹಿರಿಯ ಪ್ರಾಥಮಿಕ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಬರೋಬ್ಬರಿ 17 ಪ್ರಥಮ ಸ್ಥಾನಗಳನ್ನು ಗಳಿಸುವುದರ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಜ್ಞಾನ ಪದವಿಪೂರ್ವ ಕಾಲೇಜಿನ ಪ್ರೌಢ ವಿಭಾಗದಲ್ಲಿ ವಿಜೇತರಾದ ವಿದ್ಯಾರ್ಥಿಗಳ ವಿವರ:ಪ್ರಥಮ ಸ್ಥಾನ:ಸೃಜನ್ ಶೆಟ್ಟಿ (ಮಿಮಿಕ್ರಿ), ಧನ್ವಿ (ಸಂಸ್ಕೃತ ಧಾರ್ಮಿಕ ಪಠಣ), ತುಷಾರ (ರಂಗೋಲಿ), ಫಾತಿಮಾ ನಜೀಫಾ (ಅರೇಬಿಕ್ ಧಾರ್ಮಿಕ ಪಠಣ), ಋತು & ತಂಡ (ಕವ್ವಾಲಿ), ಗರ್ವಿತಾ & ತಂಡ (ಜಾನಪದ ನೃತ್ಯ). ದ್ವಿತೀಯ ಸ್ಥಾನ:ವೃದ್ಧಿ (ಭಾವಗೀತೆ), ಸ್ಫೂರ್ತಿ (ಕನ್ನಡ ಭಾಷಣ), ಪೂರ್ವಿ (ಚಿತ್ರಕಲೆ), ಸಮೃದ್ಧಿ (ಕನ್ನಡ ಪ್ರಬಂಧ), ರಿಷಿ ಹಾಗೂ ವಿಲೋಕ್ ರಂಜನ್ (ಕ್ವಿಜ್),…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ,(ಪದವಿಪೂರ್ವ) ದ.ಕ. ಹಾಗೂ ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 32 ಚಿನ್ನ ಮತ್ತು 30 ಬೆಳ್ಳಿ ಪದಕಗಳೊಂದಿಗೆ 62 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 122 ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ 116 ಅಂಕ ಒಟ್ಟು 238 ಅಂಕದೊಂದಿಗೆ ಎರಡು ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯಲ್ಲಿರುವ 8 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಬಾಕಿಯಿರುವ 4 ಅಂಗನವಾಡಿ ಕಾರ್ಯಕರ್ತೆ ಮತ್ತು 8 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿಮಾಡುವ ಕುರಿತು ಮರು ಅರ್ಜಿಸಲ್ಲಿಸಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ (ಅಭ್ಯರ್ಥಿಯು ಅದೇ ಗ್ರಾಮ/ವಾರ್ಡ್/ ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೇ ವ್ಯಾಪ್ತಿಯಲ್ಲಿ ವಾಸವಿರಬೇಕು) ಆಫ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಕಛೇರಿಯಲ್ಲಿಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ನವೆಂಬರ್ 19ರ ಒಳಗಾಗಿ ಹಾಕಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಶಾಸ್ತ್ರೀಸರ್ಕಲ್ ಕುಂದಾಪುರ ದೂರವಾಣಿ ಸಂಖ್ಯೆ:08254-230807 ಅನ್ನು ಸಂಪರ್ಕಿಸುವAತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರು ಇಲ್ಲದೆ ಅವರ ಅಧಿಕಾರವನ್ನು ಅನುಭವಿಸುತ್ತಿರುವ ರಾಜ್ಯದ ಶಾಸಕರುಗಳು ಕೇವಲ ಅಧಿಕಾರ ವೀಕೆಂದ್ರಿಕರಣದ ಬಗ್ಗೆ ಮಾತನಾಡುತ್ತಾರೆ ಬಿಟ್ಟರೆ ಅಧಿಕಾರ ಹಂಚಿಕೆಗೆ ಯಾವೊಬ್ಬ ಶಾಸಕರು ತಯಾರು ಇಲ್ಲಾ. ಇದರ ಇನ್ನೊಂದು ಭಾಗವೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಅಕ್ರಮ-ಸಕ್ರಮ ಹೆಚ್ಚುವರಿ ಸಮಿತಿ ವಿರುದ್ಧ ಬೈಂದೂರು ಶಾಸಕರು ನ್ಯಾಯಾಲಯದ ಮೊರೆ ಹೋದದ್ದು ಎಂದು ಕೆಪಿಸಿಸಿ ಸಂಯೋಜಕ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ತಂದದ್ದು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪನವರು. ಈ ಯೋಜನೆಯನ್ನು ಸಮರ್ಪಕವಾಗಿ ತಮ್ಮ ಕ್ಷೇತ್ರದಲ್ಲಿ ಅನುಷ್ಠಾನ ಮಾಡಿ ಸಾವಿರಾರು ರೈತರಿಗೆ ಭೂಮಿಯ ಹಕ್ಕು ನೀಡಿದವರು ಹಿಂದಿನ ಬೈಂದೂರು ಶಾಸಕರಾದ ಕೆ. ಗೋಪಾಲ ಪೂಜಾರರು. ಅದೆಷ್ಟೋ ರೈತರಿಗೆ ಭೂಮಿಯ ಹಕ್ಕು ನೀಡಿದ ಮಾಜಿ ಶಾಸಕರು ಹೆಚ್ಚುವರಿ ಅಕ್ರಮ-ಸಕ್ರಮ ಸಮಿತಿ ರಚನೆ ಮಾಡಿದ್ದನ್ನು ಹಾಲಿ ಬೈಂದೂರು ಶಾಸಕರು ವಿರೋಧಿಸಿದ್ದು ಅವರ ಅಧಿಕಾರ ವೀಕೆಂದ್ರಿಕರಣದ ವಿರೋಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ದೀಪ ಬೆಳಗಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಪ್ಷಾರ್ಚನೆ ಮಾಡುವ ಮೂಲಕ ಆರಂಭಗೊಂಡಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಾಂಸ್ಕ್ರತಿಕ ಕಾರ್ಯಕ್ರಮಗಳು, ಭಾಷಣಗಳು, ಕನ್ನಡದ ಕಂಪನ್ನು ಪಸರಿಸಿ ನೆರೆದವರಲ್ಲಿ ಕನ್ನಡಾಭಿಮಾನವನ್ನು ಮೂಡಿಸಿದವು. ಕಾರ್ಯಕ್ರಮವು ನಾಡು ನುಡಿ ಮತ್ತು ಸಂಸ್ಕ್ರತಿಯ ಮೇಲಿನ ಗೌರವವನ್ನು ಹೆಚ್ಚಿಸುವುದರೊಂದಿಗೆ ಅರ್ಥ ಪೂರ್ಣವಾಗಿ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಐಎಂಜೆಐಎಸ್‌ಸಿ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ “ನಾಡು-ನುಡಿ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ವಾಣಿಜ್ಯ ತೆರಿಗೆ ನಿರೀಕ್ಷಕರು ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಆಗಮಿಸಿದ್ದರು. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕನ್ನಡ ಭಾಷೆಯ ಪ್ರಾಚೀನತೆ, ಬಳಕೆಯ ವೈಶಿಷ್ಟ್ಯತೆ ಮತ್ತು ಮಹತ್ವದ ಬಗ್ಗೆ ತಿಳಿಸಿದರು. ಇತರ ಭಾಷೆಗಳಿಗಿಂತ ಕನ್ನಡ ಹೇಗೆ ಭಿನ್ನವಾಗಿದೆ ಎಂಬುದನ್ನು ತೌಲನಿಕವಾಗಿ ವಿವರಿಸಿದರು. ಕನ್ನಡ ಸಾಹಿತಿಗಳ ವಿವಿಧ ಕೃತಿಗಳ ಆಯ್ದ ಭಾಗಗಳನ್ನು ಉದಾಹರಿಸಿ, ಕನ್ನಡದ ಶ್ರೇಷ್ಠತೆ ಮತ್ತು ತಾಯಿನುಡಿಯ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವೇದಿಕೆಯಲ್ಲಿ ಸಾಹಿತ್ಯ ಸಂಘದ ಸಂಯೋಜಕರು ಹಾಗೂ ಕನ್ನಡ ಪ್ರಾಧ್ಯಾಪಕರಾದ ರೇವತಿ ಹಾಗೂ ವಿದ್ಯಾರ್ಥಿ ಸಹ ಸಂಯೋಜಕಿ, ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಸೌಪರ್ಣಿಕಾ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಭಾಷಾ ವಿಭಾಗದ ಉಪನ್ಯಾಸಕರು, ಬಿಬಿಎ ಮತ್ತು ಬಿಕಾಂ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ರಮವಾಗಿ ಕೊಜೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್‌ಗಳ ಅಡ್ಡಾದಿಡ್ಡಿ ಚಾಲನೆಯಿಂದ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿ ಟಿ.ಕೆ. ಮೊಹಮ್ಮದ್ ಶಯಾನ್ (18) ಅವರು ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಮತ್ತೊಬ್ಬ ವಿದ್ಯಾರ್ಥಿ ಮೊಹಮ್ಮದ್ ರಯಾನ್ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಕ್ಟೋಬರ್ 30ರಂದು ಬೆಳಿಗ್ಗೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ರಾಜ್ಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿಸಿತ್ತು. ಕಾಲೇಜಿಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಟಿಪ್ಟರ್‌ಗಳ ಅಜಾಗರೂಕ ಚಾಲನೆಯಿಂದ ಗಂಭೀರವಾಗಿ ಗಾಯಗೊಂಡಿದ್ದರು. ಅಂದು ಬೆಳಿಗ್ಗೆ, ಸುಮಾರು 8.45ರ ವೇಳೆಗೆ ಕುಂದಾಪುರ ಕಡೆಯಿಂದ ಎರಡು ಟಿಪ್ಟರ್‌ಗಳು ಸಂಚರಿಸುತ್ತಿದ್ದವು. ಮುಂಭಾಗದಲ್ಲಿದ್ದ ಟಿಪ್ಪರ್ ಚಾಲಕ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿ/ಬಸ್ ಗಮನಿಸಿ ವಾಹನದ ವೇಗ ಕಡಿಮೆ ಮಾಡಿದ್ದಾನೆ. ಈ ವೇಳೆ ಹಿಂಬದಿಯಿಂದ ಅತಿವೇಗವಾಗಿ ಬಂದ ಮತ್ತೊಂದು ಟಿಪ್ಪರ್ ಮುಂಭಾಗದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಎ ಹಾಗೂ ಎಂಸಿಎ ವಿದ್ಯಾರ್ಥಿಗಳಿಗಾಗಿ “ಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟರಾಮ್ ಭಟ್ ಅವರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಅಗತ್ಯವಿರುವ ಕೌಶಲ್ಯಗಳ ಮಹತ್ವದ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿಯ ಜೊತೆಗೆ ವೃತ್ತಿಪರ ಜೀವನದಲ್ಲಿಯೂ ಯಶಸ್ಸು ಸಾಧಿಸಲು ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ, ಸಂವಹನ ಕೌಶಲ್ಯ, ನಾಯಕತ್ವ ಗುಣಗಳು, ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವು ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂಬುದನ್ನು ವಿವರಿಸಿದರು. ಈ ಉಪನ್ಯಾಸ ಕಾರ್ಯಕ್ರಮವು ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸರಕಾರಿ ಕಚೇರಿಗಳಿಗೆ ಬಂದಾಗ ಅದಕ್ಕೆ ಸ್ಪಂದಿಸಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವುದಿಲ್ಲ ಸರಿಯಲ್ಲ. ಒಂದೊಮ್ಮೆ ನಿರ್ಲಕ್ಷ್ಯ ವಹಿಸುವುದು ಕಂಡು ಬಂದಲ್ಲಿ ಅವರು ಮೇಲೆ ಸೂಕ್ತ ಕ್ರಮ ಕೈಗೊಳ್ಳಗುವುದು ಎಂದು ರಾಜ್ಯದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ತಿಳಿಸಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ. ಎಸ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಗೆ 7 ಬಾರಿ ಭೇಟಿಯನ್ನು ನೀಡಿದ್ದೇನೆ. ಸರಕಾರಿ ಕಚೇರಿಗಳ ಕಾರ್ಯ ವೈಖರಿಗಳನ್ನು ಸೂಕ್ಷö್ಮವಾಗಿ ಗಮನಿಸುತ್ತಿದ್ದೇನೆ. ಸಾರ್ವಜನಿಕರು ತಮ್ಮ ಕೆಲಸದ ನಿಮಿತ್ತ ಕಚೇರಿಗಳಿಗೆ ಭೇಟಿ ನೀಡಿದಾಗ ನಿಯಮಾನುಸಾರ ನಿಮ್ಮ ಹಂತದಲ್ಲಿಯೇ ಮಾಡಿಕೊಡಲು ಸಾಧ್ಯವಿದ್ದಲ್ಲಿ ಕೂಡಲೇ ಸ್ಪಂದಿಸಬೇಕು. ಒಂದೊಮ್ಮೆ ಸರಕಾರದ ಹಂತದಲ್ಲಿ ಆಗುವಂತದಿದ್ದ÷ಲ್ಲಿ ಮೇಲಾಧಿಕಾರಿ ಅಥವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೃತಕ ಬುದ್ಧಿಮತ್ತೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು ಉದ್ಯಮ ಹಾಗೂ ನಿರ್ವಹಣಾ ಕ್ಷೇತ್ರವನ್ನು ವೇಗವಾಗಿ ಪರಿವರ್ತಿಸುತ್ತಿದ್ದು, ವಿದ್ಯಾರ್ಥಿಗಳು ಬದಲಾವಣೆಗಳನ್ನು ಧನಾತ್ಮಕವಾಗಿ ಸ್ವೀಕರಿಸಬೇಕು ಎಂದು ಉದ್ಯಮಿ ಹಾಗೂ ಸ್ಟಾçಟೆಜಿಕ್ ಅಡ್ವೈಸರ್ ಸುಯೋಗ್ ಶೆಟ್ಟಿ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ವಿಭಾಗದ 2026–28ನೇ ಸಾಲಿನ ಎಂಬಿಎ ವಿದ್ಯಾರ್ಥಿಗಳಿಗಾಗಿ ಸೋಮವಾರ ಆಯೋಜಿಸಿದ್ದ ‘ಎಂಬಿಎ ಆಗಮನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವ್ಯವಹಾರ ಕ್ಷೇತ್ರದಲ್ಲಿ ಯಶಸ್ಸಿನಷ್ಟೇ ವೈಫಲ್ಯಗಳಿಂದ ಕಲಿಯುವ ಸಾಮರ್ಥ್ಯವೂ ಮಹತ್ವದ್ದಾಗಿದೆ. ಉದ್ಯಮ ನಡೆಸುವಾಗ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸ್ಥೈರ್ಯ ಯಶಸ್ಸಿಗೆ ಅಗತ್ಯವಾದ ಪ್ರಮುಖ ಗುಣವಾಗಿದೆ. ಮುಂದಿನ ಐದಾರು ವರ್ಷಗಳ ವೃತ್ತಿಜೀವನವನ್ನು ವಿದ್ಯಾರ್ಥಿ ನೆಲೆಯಿಂದಲೇ ಯೋಚಿಸಬೇಕು. ನೀವು ಆಯ್ಕೆ ಮಾಡುವ ಕ್ಷೇತ್ರಗಳ ಮೇಲೆ ಎಐ ಮತ್ತು ಹೊಸ ನಿರ್ವಹಣಾ ತಂತ್ರಜ್ಞಾನಗಳು ಬೀರುವ ಪರಿಣಾಮವನ್ನು ಅರ್ಥಮಾಡಿಕೊಂಡು, ಅದಕ್ಕೆ ಅಗತ್ಯವಾದ ಕೌಶಲಗಳನ್ನು ಇಂದೇ ಬೆಳೆಸಿಕೊಳ್ಳಿ ಎಂದರು. ವಿಭಾಗದ ಹಿರಿಯ ವಿದ್ಯಾರ್ಥಿನಿ ಮೇಘನಾ ವೆಂಕಟೇಶ್ ಮಾತನಾಡಿ, ಅವಕಾಶಗಳನ್ನು ಸೃಷ್ಟಿಸಿಕೊಳ್ಳಲು ವಿದ್ಯಾರ್ಥಿಗಳು ಬಲವಾದ ಸಂಪರ್ಕ ಜಾಲವನ್ನು ಬೆಳೆಸಿಕೊಳ್ಳಬೇಕು.…
