ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವತ್ತಿನಕಟ್ಟೆ ಶ್ರೀ ನಾಗದೇವರ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಿಸಿದ ತಾಮ್ರದ ಹೊದಿಕೆಯ ಗರ್ಭಗುಡಿಯಲ್ಲಿ ನಾಗದೇವರ ಪುನಃಪ್ರತಿಷ್ಠೆ ಜರುಗಿತು. ಶ್ರೀ ಮಹಾಸತಿ ಅಮ್ಮನವರ ವರ್ಧಂತಿ ಮತ್ತು ನಾಗಮಂಡಲೋತ್ಸವದ ವರ್ಧಂತಿ ಪ್ರಯುಕ್ತ ಗುರುವಾರ ಬೆಳಿಗ್ಗೆ ಅಮ್ಮನವರ ಸನ್ನಿಧಿಯಲ್ಲಿ ದೇವಳದ ಪ್ರಧಾನ ಅರ್ಚಕ ಬಿ. ಕೃಷ್ಣಮೂತಿ ನಾವಡರ ನೇತೃತ್ವದಲ್ಲಿ ಕಲಶಾಭಿಷೇಕ, ಕಲಾತತ್ವಹೋಮ, ಚಂಡಿಕಾಹೋಮ, ಮಹಾಪೂಜೆ ನಂತರ ಮಹಾಅನ್ನಸಂತರ್ಪಣೆ ನಡೆಯಿತು. ಸಂಜೆ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷಾ ಬಲಿ ಹಾಗೂ ತನುತರ್ಪಣ ಸೇವೆ ನಡೆಯಿತು. ಶ್ರೀ ಮಹಾಸತಿ ಅಮ್ಮನವರ ಸೇವಾ ಸಮಿತಿ ಗೌರವಾಧ್ಯಕ್ಷ ಎಸ್. ರಾಜು ಪೂಜಾರಿ, ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶ್ರೀನಿವಾಸ ಕುಮಾರ್, ಶಂಕರ ಮೊಗವೀರ, ಮಂಜುನಾಥ ಆಚಾರ್ಯ, ಸತ್ಯಪ್ರಸನ್ನ, ಬಿ. ಮಾಧವ ರಾವ್, ದರ್ಶನ ಪಾತ್ರಿ ಅಣ್ಣಪ್ಪ ಪೂಜಾರಿ ಮೊದಲಾದವರು ಇದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸ್ವಂತ ಮನೆ ಭೂಮಿ ಇಲ್ಲದವರಿಗೆ ನಿವೇಶನ ಹಕ್ಕು ಪತ್ರ ಕೊಡಲು ಸರಕಾರವನ್ನು ಒತ್ತಾಯಿಸಿ ಗ್ರಾಮಾಂತರ ಪ್ರದೇಶದಲ್ಲಿ ನಿವೇಶನ ರಹಿತರ ಸಮಾವೇಶವನ್ನು ಅಯೋಜಿಸಲಾಗಿದ್ದು, ಬೈಂದೂರು ಮತ್ತು ಕುಂದಾಪುರ ಶಾಸಕರ ಮನೆ ಮುಂದೆ ಭೂಮಿ ಹಕ್ಕಿಗಾಗಿ ಧರಣಿ ಮುಷ್ಕರ ನಡೆಸುವುದಕ್ಕೆ ಪೂರ್ವಭಾವಿ ಸಭೆಯನ್ನು ಕುಂಭಾಶಿ ಗ್ರಾಮ ಪಂಚಾಯತ್ ಕಛೇರಿ ಬಳಿ ಅಂಬೇಡ್ಕರ್ ಭವನ ವಠಾರದಲ್ಲಿ ನಡೆಸಲಾಯಿತು. ಮನೆ ನಿವೇಶನ ರಹಿತರ ಬೃಹತ್ ಸಮಾವೇಶವನ್ನು ಕೃಷಿ ಕೂಲಿಕಾರರ ಸಂಘದ ನಾಗರತ್ನ ನಾಡರವರು ಉದ್ಘಾಟಿಸಿ ಮಾತನಾಡುತ್ತಾ, ಶಾಸಕರ ಮನೆ ಮುಂದೆ ಜರಗಲಿರುವ ಧರಣಿ ಮುಷ್ಕರವನ್ನು ಯಶಸ್ವಿಗೊಳಿಸಲು ಕರೆಕೊಟ್ಟರು. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರಾಸ್ತಾವಿಕವಾಗಿ ಮಾತನಾಡುತ್ತ, ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ನಿವೇಶನ ರಹಿತರು ನಿವೇಶನ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿ, ಮೂರು ವರ್ಷ…
ಮದುವೆ ನಡೆಯಬೇಕಿದ್ದ ಮನೆಯಲ್ಲಿ ಮಸಣ ಮೌನ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ೬೬ರ ಬಸ್ರೂರು ಮೂರುಕೈ ಬಳಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಯುವಕನಿಗೆ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ವರದಿಯಾಗಿದೆ. ಕಟ್ಕೆರಿ ರಾಜೀವ ಎಂಬುವವರ ಪುತ್ರ ದೀಪಕ್ (26) ಮೃತ ದುರ್ದೈವಿ. ಕೆಲಸ ನಿಮಿತ್ತ ಕುಂದಾಪುರಕ್ಕೆ ತೆರಳಿದ್ದ ದೀಪಕ್ ಸಂಜೆ ಮನೆಗೆ ಹಿಂದಿರುಗಲು ಬಸ್ರೂರು ಮೂರುಕೈ ಬಳಿ ರಸ್ತೆ ದಾಟುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮಾಚ್.6ರಂದು ದೀಪಕ್ ಅವರ ಮದುವೆ ನಿಶ್ಚಯವಾಗಿತ್ತು. ಮದುವೆಗೆ ನಾಲ್ಕು ದಿನವಿರುವಾಗಲೇ ಈ ದುಘಟನೆ ನಡೆದಿರುವುದು ಕುಟುಂಬಿಕರಿಗೆ ತೀವ್ರ ಆಘಾತವನ್ನುಂಟುಮಾಡಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಲವು ವರ್ಷಗಳಿಂದ ಚರಂಡಿಯನ್ನು ಒತ್ತುವರಿ ಮಾಡಿ ಕಾರು ಶೇಡ್ ನಿರ್ಮಿಸಿದ್ದ ಜಾಗದ ತೆರವು ಕಾರ್ಯಾಚರಣೆ ನಡೆಯಿತು. ಕುಂದಾಪುರ ಪುರಸಭೆಯ ಏಳನೇ ವಾರ್ಡಿನ ಸದಸ್ಯ ಶ್ರೀಧರ್ ಶೇರೆಗಾರ್ ಅವರ ನೇತೃತ್ವದಲ್ಲಿ ಒತ್ತುವರಿ ಕಾರ್ಯ ನಡೆಯಿತು. ಕುಂದಾಪುರ ಚಿಕ್ಕನ್ಸಾಲ್ ರಸ್ತೆಯ ಮೈಲಾರೇಶ್ವರ ರಸ್ತೆ ಸಮೀಪದಲ್ಲಿ ಮನೆಯೊಂದರ ಮಾಲಿಕರು ಅನಾದಿ ಕಾಲದಿಂದ ನಿರ್ಮಿಸಲಾಗಿದ್ದ ಚರಂಡಿಗೆ ಹದಿನೈದು ವರ್ಷಗಳ ಹಿಂದೆಯೇ ಶಿಲೆಗಲ್ಲಿನ ಚಪ್ಪಡಿ ಹಾಕಿ ಕಾರಿನ ಶೆಡ್ ನಿರ್ಮಿಸಿದ್ದರು. ಇದರಿಂದ ಚರಂಡಿಯಲ್ಲಿ ತುಂಬಿದ್ದ ಮಣ್ಣನ್ನು ತೆಗೆಯಲಾಗದೇ ಮಳೆಗಾಲದ ನೀರೆಲ್ಲಾ ಮನೆಯೊಳಗೆ ನುಗ್ಗುವ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲಿಯೇ ಸಮೀಪದ ಸಸಿಹಿತ್ಲು ಪ್ರದೇಶಕ್ಕೆ ನಡೆದು ಹೋಗಲೂ ಈ ಚರಂಡಿ ಹಿಂದೆ ಬಳಕೆಯಾಗುತ್ತಿದ್ದು, ಒತ್ತುವರಿ ಪರಿಣಾಮ ಸಸಿಹಿತ್ಲು ಪ್ರದೇಶದ ಜನ ಸುತ್ತು ಹಾಕಿಕೊಂಡು ಬರುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಸಾರ್ವಜನಿಕ ವಲಯದಿಂದ ಆಕ್ಷೇಪಣೆಗಳೂ ಕೇಳಿ ಬಂದಿತ್ತಾದರೂ ಪುರಸಭೆ ಒತ್ತುವರೆ ತೆರವು ಕಾರ್ಯಾಚರಣೆ ನಡೆಸಿರಲಿಲ್ಲ. ಕಳೆದ ಮೂರೂವರೆ ವರ್ಷಗಳಿಂದ ಸತತವಾಗಿ ಆ ವಾರ್ಡಿ ಸದಸ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮನುಷ್ಯ ಜೀವನದಲ್ಲಿ ದೇವರನ್ನು ನಿರಂತರ ಸ್ಮರಿಸಿ ಆರಾಧಿಸಿ ಪೂಜಿಸುವುದರಿಂದ ಜೀವನವು ಅಭಿವೃದ್ಧಿಗೊಂಡು ಸಾಕ್ಷಾತ್ಕಾರವಾಗುತ್ತದೆ. ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು ದೇವಾಲಯಗಳ ಮೂಲಕ ಮನುಷ್ಯ ಜನ್ಮ ಪಾವನವಾಗುತ್ತದೆ. ನಮ್ಮ ಜೀವನದ ನಿಯಮವನ್ನು ಉಲ್ಲಂಘಿಸಿದರೆ ಯಾವುದೇ ಪುಣ್ಯ ಪ್ರಾಪ್ತಿಯಾಗುವುದಿಲ್ಲ ಹಾಗೂ ಜೀವನದಲ್ಲಿ ಆನಂದವೂ ದೊರೆಯುವುದಿಲ್ಲ. ಇದನ್ನು ಅರಿತು ಜೀವನ ನಡೆಸಿದರೆ ಮತ್ತು ಭಕ್ತಿಭಾವದಿಂದ ದೇವರನ್ನು ಗುರುಗಳನ್ನು ನಿತ್ಯನಿರಂತವಾಗಿ ಸ್ಮರಿಸಿಕೊಂಡರೆ ನಮ್ಮ ಜೀವನದ ಎಲ್ಲಾ ಸಂಕಷ್ಟಗಳು ದೂರವಾಗಿ ಆನಂದಮಯ ಜೀವನ ಪ್ರಾಪ್ತಿಯಾಗುತ್ತದೆ ಎಂದು ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಹೇಳಿದರು. ಅವರು ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಿತ್ತೈಸಿ ಆಶೀರ್ವಚನ ನೀಡಿ ಮಾತನಾಡಿದರು. ಐದು ನದಿಗಳ ಸಂಗಮ ತಾಣವಾಗಿರುವ ಗಂಗೊಳ್ಳಿಯ ಪುಣ್ಯಕ್ಷೇತ್ರದಲ್ಲಿರುವ ಸುಮಾರು ೩೫೦ ವರ್ಷ ಇತಿಹಾಸವಿರುವ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನವು ಶ್ರೀ ಮಠದ ಶಾಖಾ ಮಠವಾಗಿದ್ದು ಪಂಚಪರ್ವಾದಿ ಉತ್ಸವಗಳು ಅತಿ ವಿಜೃಂಭಣೆಯಿಂದ ಗುರುಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಜೆ.ಸಿ.ಐ ಶಿರೂರು ಇದರ ವತಿಯಿಂದ ಹತ್ತು ದಿನಗಳ ಕಾಲ ಪತಂಜಲಿ ಯೋಗಪೀಠ ಹರಿದ್ವಾರ, ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ ನ್ಯೂಸ್ ಉಡುಪಿ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ಸ್ವಾಮಿ ರಾಮ್ದೇವ್ ಜಿ ಇವರಿಂದ ಶಿಕ್ಷಣ ಪಡೆದ ಶಿಕ್ಷಕರಿಂದ ಆರೋಗ್ಯ ಭಾಗ್ಯ ಯೋಗ ಶಿಬಿರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅರಮನೆಹಕ್ಲುವಿನ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಉದ್ಯಮಿ ಪಾಲಾಕ್ಷ ಮೇಸ್ತ ಶಿಬಿರವನ್ನು ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಅವರು ಆಧುನಿಕತೆಯ ಒತ್ತಡದ ಬದುಕಿನಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ರೀತಿಯ ಸವಾಲು. ಯೋಗ, ದ್ಯಾನ, ಪ್ರಾಣಾಯಾಮಗಳಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದರು.ಶಿರೂರು ಜೆ.ಸಿ.ಐ ಅಧ್ಯಕ್ಷ ಅರುಣ ಕುಮಾರ್ ಶಿರೂರು ಅಧ್ಯಕ್ಷತೆ ವಹಿಸಿದ್ದರು.ಈ ಸಂಧರ್ಭದಲ್ಲಿ ಪತಂಜಲಿ ಯೋಗ ಸಮಿತಿಯ ಶಿಕ್ಷಕ ಶ್ರೀನಿವಾಸ ಶ್ಯಾನುಭಾಗ್,ಜೆ.ಸಿ.ಐ ಸ್ಥಾಪಕಾಧ್ಯಕ್ಷ ಮೋಹನ್ ರೇವಣಕರ್, ಜೇಸಿರೇಟ್ ರೂಪಾ ರೇವಣಕರ್ ಉಪಸ್ಥಿತರಿದ್ದರು. ಮಂಜುನಾಥ ನಾಯ್ಕ ಸ್ವಾಗತಿಸಿದರು.ಕಾರ್ಯದರ್ಶಿ ಪಾಂಡುರಂಗ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ಗುಡಿಯೊಳಗಿನ ದೇವರಲ್ಲಿನ ನಂಬಿಕೆಯಂತೆ ದೇಹದ ಆತ್ಮದೊಳಗಿನ ನಂಬಿಕೆಯು ಪವಿತ್ರವಾದದ್ದು. ಧಾರ್ಮಿಕ ಆಚರಣೆಗಳಲ್ಲಿ ಪರಿಶುದ್ಧತೆ ಆವಶ್ಯ. ಮಕ್ಕಳಿಗೆ ಶಿಕ್ಷಣದ ಆವಶ್ಯಕತೆಯಂತೆ ಧಾರ್ಮಿಕತೆಯ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರು ಹೇಳಿದರು. ಅವರು ಕೊಂಜಾಡಿ ಶ್ರೀ ದುರ್ಗಾಪರಮೇಶ್ವರೀ ದೇಗುಲದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರವಚನ ನೀಡಿ ಮಾತನಾಡಿದರು. ಹಿಂದೂ ಧರ್ಮ ಶ್ರೇಷ್ಠವಾದದ್ದು. ಮಕ್ಕಳಲ್ಲಿ ಧಾರ್ಮಿಕತೆಯ ವಾಸ್ತವದ ವಿಚಾರಗಳ ಅರಿವಿನ ಕೊರತೆಯಿಂದ, ಧರ್ಮಕ್ಕೆ ಹಿನ್ನಡೆಯಾಗುತ್ತಿದೆ. ಹಿಂದೆ ವೃದ್ಧಾಶ್ರಮಗಳಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಜನತೆಯಲ್ಲಿ ಸಂಸ್ಕಾರ ಹಾಗೂ ಜೀವನ ಮೌಲ್ಯಗಳ ಕೊರತೆಯಿಂದಾಗಿ ಹಿರಿಯರ ಬಗ್ಗೆ ಗೌರವವಿಲ್ಲದೆ. ಇದರ ಪರಿಣಾಮ ಹಿರಿಯರನ್ನು ವೃದ್ಧಾಶಮಕ್ಕೆ ಸೇರಿಸುತ್ತಿರುವುದು ವಿಷಾದನೀಯ. ದೇವಸ್ಥಾನಗಳು ಕೇವಲ ಪೂಜೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಸಿಮೀತವಾಗದೆ, ಸಾಮಾಜಿಕ ಕ್ಷೇತ್ರಗಳ ಅಭಿವೃದ್ಧಿಯ ಚಟುವಟಿಕೆಗಳೊಂದಿಗೆ ಸಮಾಜದ ಕುಂದು ಕೊರತೆಗಳಿಗೆ ಸ್ವಂದಿಸುವ ಕೇಂದ್ರಗಳಾಗಬೇಕು ಎಂದು ಹೇಳಿದರು. ಕೊಂಜಾಡಿ ಶ್ರೀ ದುರ್ಗಾಪರಮೇಶ್ವರೀ ದೇಗುಲದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯೆಂದೂರು: ಉಡುಪಿ ಜಿ.ಪಂ, ಕೃಷಿ ಇಲಾಖೆ ಕುಂದಾಪುರ, ಕೆ.ಆರ್.ಐ.ಡಿ.ಎಲ್ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಬ್ಯೆಂದೂರಿನಲ್ಲಿ ನಿರ್ಮಾಣವಾದ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡವನ್ನು ಬ್ಯೆಂದೂರು ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಸರಕಾರ ರೈತರ ಅಭಿವೃದ್ದಿಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ.ಬಡ್ಡಿಮನ್ನಾ ಪ್ರಸ್ತಾವನೆ ಬಗ್ಗೆ ಸರಕಾರದ ಚಿಂತನೆಯಿದೆ.ಬರಗಾಲ ಪೀಡಿತ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಕಲ್ಪಿಸಲಾಗಿದೆ.ರೈತ ಸಂಪರ್ಕ ಕೇಂದ್ರದ ಮೂಲಕ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ರೈತರಿಗೆ ತಲುಪುವ ಕೆಲಸವಾಗಬೇಕು ಎಂದರು.ಕುಂದಾಪುರ ತಾ.ಪಂ ಅಧ್ಯಕ್ಷೆ ಜಯಶ್ರೀ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯರಾದ ಶಂಕರ ಪೂಜಾರಿ, ಸುರೇಶ್ ಬಟ್ವಾಡಿ, ಗೌರಿ ದೇವಾಡಿಗ, ಕೆ.ಡಿ.ಪಿ ಸದಸ್ಯ ಎಸ್.ರಾಜು ಪೂಜಾರಿ, ತಾ.ಪಂ ಉಪಾಧ್ಯಕ್ಷ ಪ್ರವೀಣ ಕುಮಾರ್ ಕಡ್ಕೆ, ತಾಲೂಕು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹೇಂದ್ರ ಪೂಜಾರಿ, ತಾ.ಪಂ ಸದಸ್ಯ ಪುಷ್ಪರಾಜ್ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸಾಸ್ತಾನ ಟೋಲ್ ಕೇಂದ್ರದಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ಮುಂದುವರಿಸುವಂತೆ ಕೋರಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ಸದಸ್ಯರು ಫೆ.25ರಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭ ಹೆದ್ದಾರಿ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಲಾಯಿತು ಹಾಗೂ ಅವೈಜ್ಞಾನಿಕ, ಅಪೂರ್ಣ ಕಾಮಗಾರಿ ಬಗ್ಗೆ ಜಿಲ್ಲಾಧಿಧಿಕಾರಿಗಳಿಗೆ ವಿವರಣೆ ನೀಡಲಾಯಿತು. ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡದಿದ್ದಲ್ಲಿ ಹೋರಾಟ ಮುಂದುವರಿಸುವುದಾಗಿ ತಿಳಿಸಲಾಯಿತು ಹಾಗೂ ಜಿಲ್ಲೆಯ ಮರಳು ಸಮಸ್ಯೆಗೆ ಪರಿಹಾರ ಒದಗಿಸುವಂತೆ ಕೋರಲಾಯಿತು.ಟೋಲ್ ಸಮಸ್ಯೆಯ ಕುರಿತು ತನ್ನ ವ್ಯಾಪ್ತಿಗೆ ಬರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ಜಿಲ್ಲಾಧಿಕಾರಿಗಳು ಈ ಸಂದರ್ಭ ನೀಡಿದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಹೆದ್ದಾರಿ ಜಾಗೃತಿ ಸಮಿತಿಯ ಪ್ರತಾಪ್ ಶೆಟ್ಟಿ ಸಾಸ್ತಾನ, ಜಿಲ್ಲಾ ಲಾರಿ ಮಾಲಿಕರ ಸಂಘದ ಅಧ್ಯಕ್ಷ ರಾಜೇಶ ಕಾವೇರಿ ಹಾಗೂ ಹೆದ್ದಾರಿ ಜಾಗೃತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಲ್ಲವ ಅಸೋಸಿಯೇಶನ್ ಬೆಂಗಳೂರು ಇದರ ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಮಹಿಳಾ ದಿನಾಚರಣೆಯನ್ನು ಬೆಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಜಿ. ಪದ್ಮಾವತಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಮಹಿಳೆಯರ ಸಶಕ್ತೀಕರಣವನ್ನು ಮುಂದುವರಿಸಿಕೊಂಡು ಹೋಗಬೇಕಾದ ಅಗತ್ಯವನ್ನು ತಿಳಿಸಿದರು. ಮಹಿಳೆಯರ ಶಕ್ತಿ ಅವರಿಗೆ ಅಧಿಕಾರ ಕೊಟ್ಟಾಗಲೇ ತಿಳಿಯುವುದು. ಮಹಿಳೆ ಯರು ಸಹನಾಶೀಲರು, ಬದ್ಧತೆ ಇರುವ ಶ್ರಮಜೀವಿಗಳು ಎಂದರು. ಬಿಲ್ಲವ ಅಸೋಸಿಯೇಶನ್ನ ಅಧ್ಯಕ್ಷ ಎಂ. ವೇದಕುಮಾರ್ ಅವರು ಸ್ವಾಗತಿಸಿ ಮಾತನಾಡಿ, ಬಿಲ್ಲವ ಮಹಿಳಾ ಘಟಕದೊಂದಿಗೆ ಬಿಲ್ಲವ ಅಸೋಸಿಯೇಶನ್ನ ಕಾರ್ಯ ಚಟುವಟಿಕೆ ಬಗ್ಗೆ ತಿಳಿಸಿದರು.ಬನ್ನೇರುಘಟ್ಟ ರಸ್ತೆಯಲ್ಲಿರುವ ಜೆ.ಡಿ. ಮರ ಜಂಕ್ಷನ್ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನಿಡುವಂತೆ ಮಾಡಿದ ಮನವಿಗೆ ಮಹಾ ಪೌರರು ಪೂರಕವಾಗಿ ಸ್ಪಂದಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸತೀಶ್ ರೆಡ್ಡಿ ಅವರು ಬಿಲ್ಲವ ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿ ಸಾಮಾ ಜಿಕ ಜವಾಬ್ದಾರಿ ನಿಭಾಯಿಸುತ್ತಿರುವು ದನ್ನು ಶ್ಲಾಘಿಸಿದರು. ಅರೆಕೆರೆ…
