Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶಾಲೆಯ ಸುತ್ತಮುತ್ತ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವಂತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲೆಯ ಸುತ್ತಮುತ್ತಲಿನ ಅಂಗಡಿಗಳಿಗೆ ತೆರಳಿ ಮನವಿ ಮಾಡಿಕೊಂಡರು. ಶಾಲಾ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ನೇತೃತ್ವದಲ್ಲಿ ಶಾಲೆಯ ಸಮೀಪದ ಅಂಗಡಿಗಳಿಗೆ ತೆರಳಿದ ವಿದ್ಯಾರ್ಥಿಗಳು ಅಂಗಡಿ ಮಾಲಿಕರಿಗೆ ಗುಲಾಬಿ ಹೂವು ನೀಡಿ ತಂಬಾಕು ಮತ್ತು ತಂಬಾಕು ಉತ್ಪನ್ನ ಮಾರಾಟದಿಂದ ವಿದ್ಯಾರ್ಥಿಗಳ ಮೇಲೆ ಆಗುವ ದುಷ್ಪರಿಣಾಮಗಳನ್ನು ವಿವರಿಸಿ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂದು ಆಗ್ರಹಿಸಿದರು. ಶಾಲೆಯ ಶಿಕ್ಷಕ ರಕ್ಷಕ ಸಮಿತಿಯ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ, ಶಾಲೆಯ ಶಿಕ್ಷಕರಾದ ಸುಜಾತಾ, ಶೋಭಾ, ದಿವ್ಯಶ್ರೀ, ಲಕ್ಷ್ಮೀ, ಜ್ಯೋತಿ, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಉತ್ತರಪ್ರದೇಶ, ಉತ್ತರಾಖಂಡ ಸಹಿತ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಗಣನೀಯ ಸಾಧನೆಗಾಗಿ ಕುಂದಾಪುರ, ಬೈಂದೂರು ಗಂಗೊಳ್ಳಿ ಬಿಜೆಪಿ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬೈಂದೂರು ಬೈಪಾಸ್ ಬಳಿ, ತಲ್ಲೂರು ಪೇಟೆಯಲ್ಲಿ, ಕುಂದಾಪುರ ಮಂಡಲ ಬಿಜೆಪಿ ಕಛೇರಿಯಲ್ಲಿ ಹಾಗೂ ಗಂಗೊಳ್ಳಿಯ ಸ್ಥಾನೀಯ ಸಮಿತಿ ವತಿಯಿಂದ ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಸಂಭ್ರಮ ನಡೆಸಲಾಯಿತು. ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಜಯಭೇರಿ ಬಾರಿಸಿದ್ದು, ಮತದಾರರು ಬಿಜೆಪಿ ಕೈಹಿಡಿದಿದ್ದಾರೆ. ಈ ಚುನಾವಣೆ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ನೀಡಿದ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದ ಅವರು, ಉತ್ತರಪ್ರದೇಶದ ವಿಧಾನಸಭಾ ಚುನಾಚಣಾ ಫಲಿತಾಂಶ ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಯಡಿಯೂರಪ್ಪನವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೊಂಕಣಿ ಖಾರ್ವಿ ಸಮಾಜ ಬಾಂಧವರ ಬಹುದೊಡ್ಡ ಆಚರಣೆ ಹೋಳಿಯನ್ನು ವಾರಗಳ ಕಾಲ ಅದ್ದೂರಿಯಾಗಿ ಆಚರಿಸಲಾಗಿದ್ದು ಕೊನೆಯ ದಿನ ಹೋಳಿ ಓಕುಳಿ ಹಾಗೂ ಬೃಹತ್ ಪುರಮೆರವಣಿಗೆಯೊಂದಿಗೆ ಸಮಾಪನಗೊಂಡಿತು. ಜನಪದ ವಾದ್ಯ ಗುಮಟೆ, ಚೆಂಡೆ ವಾದನ, ಹೋಳಿ ನೃತ್ಯ ಮನ ಸೆಳೆದರೇ, ಶಿವನ ಸ್ತಬ್ಧಚಿತ್ರ ಹೋಳಿ ಮೆರವಣಿಗೆಯ ಕಳೆ ಹೆಚ್ಚಿಸಿತು. ಎರಡು ತಾಸಿಗೂ ಮಿಕ್ಕಿ ನಡೆದ ಮೆರವಣಿಗೆಯಲ್ಲಿ ಕೊಂಕಣಿ ಖಾರ್ವಿ ಸಮಾಜದ ಪುರುಷರು, ಮಹಿಳೆಯರು, ಮಕ್ಕಳು ಹಾಗೂ ಊರವರು ಪರಸ್ಪರ ಬಣ್ಣ ಎರಚಿಕೊಂಡು ಬಣ್ಣದ ಹಬ್ಬದ ರಂಗು ತುಂಬಿದರು. ಮೆರವಣಿಗೆಯುದ್ದಕ್ಕೂ ಮೊಳಗಿದ ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸಿದರು. ಸಾರ್ವಜನಿಕರೂ ಕೂಡ ಹೋಳಿ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಾರಾಷ್ಟ್ರೀಯ ಎಫ್‌ಎಸ್‌ಎಲ್ ಸೇವಾ ಸಂಸ್ಥೆಯ ವಿದೇಶಿ ಸ್ವಯಂಸೇವಕರು ಹೋಳಿ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದು ವಿಶೇಷವಾಗಿತ್ತು. ಮೆರವಣಿಗೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ‘ರೂಪಕಲಾ ಕುಂದಾಪುರ’ ಜನಪ್ರಿಯ ನಾಟಕ ತಂಡವು ಕತಾರ್‌ನಲ್ಲಿ ‘ಮೂರು ಮುತ್ತುಗಳು’ ನಾಟಕದ 1300ನೇ ಪ್ರಯೋಗ ಮತ್ತು ಕಾಮಿಡಿ ಎಕ್ಸ್‌ಪ್ರೆಸ್ ಹಾಸ್ಯ ಪ್ರದರ್ಶನವನ್ನು ನೀಡಲಿದ್ದಾರೆ. ಹೊಸತಾಗಿ ಆರಂಭಗೊಂಡಿರುವ ವಿಜನ್ ಇವೆಂಟ್ಸ್ ಎಂಬ ಸಂಸ್ಥೆಯು ಎಂಇಎಸ್ ಸ್ಕೂಲ್ ಆಡಿಟೋರಿಯಂನಲ್ಲಿ ಮಾ.17ರ ಸಂಜೆ 4:30ಕ್ಕೆ ಪ್ರದರ್ಶನವನ್ನು ಆಯೋಜಿಸಿದೆ. ಕತಾರ್‌ನಲ್ಲಿ ನೆಲೆಸಿರುವ ರಾಮಚಂದ್ರ ಶೆಟ್ಟಿ, ದೀಪಕ್ ಶೆಟ್ಟಿ ಹಾಗೂ ಸಮಾನ ಮನಸ್ಕ ಕನ್ನಡಿಗರು ಒಟ್ಟು ಸೇರಿ ಕಲೆ, ಶಿಕ್ಷಣ, ಕ್ರೀಡೆ ಹಾಗೂ ಇನ್ನಿತರ ಕಾರ್ಯಕ್ರಮಗಳ ಆಯೋಜನೆಗಾಗಿ ಹುಟ್ಟುಹಾಕಿರುವ ಸಂಸ್ಥೆ ವಿಜನ್ ಇವೆಂಟ್ಸ್. ಈ ಸಂಸ್ಥೆಯ ಮೂಲಕ ಮೊದಲ ಭಾರಿಗೆ ಮೂರು ಮುತ್ತುಗಳು ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ನಾಟಕ ತಂಡದಲ್ಲಿ ಕರಾವಳಿ ಮುತ್ತು ಖ್ಯಾತಿಯ ಕೆ. ಸತೀಶ್ ಪೈ, ಕೆ. ಸಂತೋಷ್ ಪೈ, ಅಶೋಕ್ ಶ್ಯಾನುಭಾಗ್, ನಾಗೇಶ್ ಕಾಮತ್, ಗಣೇಶ್ ಪ್ರಸಾದ್ ಶೆಣೈ, ನವೀನ್ ನಂದಕುಮಾರ್, ಮಣಿಕಂಠ ಶೆಟ್ಟಿ, ಶ್ವೇತಾ ಮೊದಲಾದವರು ಇರಲಿದ್ದಾರೆ. ಕತಾರ್‌ನ ಕನ್ನಡ ನಾಟಕ ಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಮಟ್ಟದ ನೃತ್ಯ ಸ್ಪರ್ಧೆಯು ದಿನಾಂಕ ಸಮರೊಪಗೊಂಡಿತು. ಶಾಸ್ತ್ರೀಯ ಏಕವ್ಯಕ್ತಿ ನ್ರತ್ಯ ಸ್ಪರ್ಥೆಯಲ್ಲಿ ಪ್ರಥಮ ಸ್ಥಾನ ಎಂ.ಜಿ.ಎಂ ಕಾಲೇಜು, ಉಡುಪಿ,ದ್ವಿತೀಯ ಸ್ಥಾನ ಪಿ.ಪಿ.ಸಿ ಕಾಲೇಜು, ಉಡುಪಿ ಹಾಗೂ ತ್ರತೀಯ ಸ್ಥಾನವನ್ನು ಆಳ್ವಾಸ್ ಕಾಲೇಜು ಮೂಡಬಿದ್ರೆ ಪಡೆದುಕೊಂಡಿತು. ಹಾಗೆಯೇ ಜಾನಪದ ಗುಂಪು ನೃತ್ಯ ಸ್ಪರ್ಥೆಯಲ್ಲಿ ಪ್ರಥಮ ಸ್ಥಾನ ಆಳ್ವಾಸ್ ಕಾಲೇಜು, ಮೂಡಬಿದ್ರೆ, ದ್ವಿತೀಯ ಸ್ಥಾನ ಎಂ.ಜಿ.ಎಂ ಕಾಲೇಜು, ಉಡುಪಿ ಹಾಗೂ ತ್ರತೀಯ ಸ್ಥಾನವನ್ನು ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜು ಕೋಟ ಪಡೆದುಕೊಂಡಿತು. ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಅಧ್ಯಕ್ಷ ಪ್ರೊ.ಬಿ.ಉದಯ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳಿಗೆ ದೂರದ್ರಷ್ಟಿ ಇರಬೇಕು. ಶಿಕ್ಷಣದ ಜೊತೆಗೆ ಸಮಾಜ ಕಟ್ಟುವ ಕಾರ್ಯವಾಗಬೇಕು ಓದು ಬದುಕು ಕಟ್ಟುವಂತಾಗಲಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿ.ಎಮ್. ಸುಕುಮಾರ್ ಶೆಟ್ಟಿ ವಿದ್ಯಾರ್ಥಿಗಳಿಗೆ ವಿದ್ಯಾವಂತರಾಗಿ ಜೊತೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ರಮೇಶ್ ಗಾಣಿಗ ಕೊಲ್ಲೂರು ಹಾಗೂ ನಯನಾ ರಮೇಶ್ ಗಾಣಿಗ ಮತ್ತು ಮಕ್ಕಳು ನಂಬಿರುವ ನಾಗಬನದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವ ಸಾಂಗವಾಗಿ ನೆರವೇರಿತು. ಮಹಾಅನ್ನಸಂತರ್ಪಣೆ, ಮಂಡಲಸೇವೆ, ಹಾಲಿಟ್ಟು ಸೇವೆ, ಮಂಡಲಪೂಜೆ, ಡಮರು ಸೇವೆಯನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕುಂದಾಪುರ ವ್ಯಾಸರಾಜ ಮಠಾಧೀಶ ಶ್ರೀ ಲಕ್ಷ್ಮೀಂದ್ರ ತೀರ್ಥ ಶ್ರೀಪಾಂದಗಳವರು ಆಶೀರ್ವಚನ ನೀಡಿದರು. ಬಳಿಕ ಜರುಗಿದ ಸಮಾರಂಭದಲ್ಲಿ ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅರ್ಚಕ ಡಾ. ಕೆ.ಎನ್. ನರಸಿಂಹ ಅಡಿಗ ಆಶೀರ್ವಚನ ನುಡಿಗಳನ್ನಾಡಿದರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಎಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಬಿಡೆ, ಕೊಲ್ಲೂರು ಗ್ರಾಪಂ ಅಧ್ಯಕ್ಷ ಎಚ್. ಜಯಪ್ರಕಾಶ್ ಶೆಟ್ಟಿ, ಜಿಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗೌಡ ಸಾರಸ್ವತ ಬ್ರಾಹ್ಮಣ ಸಮಾಜದಲ್ಲಿ ಅನೇಕ ಮಂದಿ ಸಾಧಕರಿದ್ದು, ಬ್ಯಾಂಕಿಂಗ್, ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ನಮ್ಮ ಸಮಾಜದವರಿಗೆ ಉತ್ತಮ ಸ್ಥಾನಮಾನ ಗೌರವ ಇದೆ. ಈ ಗೌರವವನ್ನು ಕಾಪಾಡಿಕೊಂಡು ಹೋಗಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಮಾಜಕ್ಕೆ ಮಾರ್ಗದರ್ಶನ ನೀಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಆದ್ದರಿಂದ ಹಿರಿಯರನ್ನು ಗೌರವಿಸುವುದು, ಹಿರಿಯರ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು ಎಂದು ಕುಂದಪ್ರಭ ಪತ್ರಿಕೆಯ ಸಂಪಾದಕ ಯು.ಎಸ್.ಶೆಣೈ ಹೇಳಿದರು. ಅವರು ಗಂಗೊಳ್ಳಿಯ ವೇದಮೂರ್ತಿ ಕೃಷ್ಣಾನಂದ ವಿಶ್ವನಾಥ ಆಚಾರ್ಯ ಸ್ಮಾರಕ ದತ್ತಿನಿಧಿ ವತಿಯಿಂದ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಮ್ಮ ಹಿರಿಯರು ಆಚರಿಸಿಕೊಂಡು ಬಂದಿರುವ ಸಂಪ್ರದಾಯಗಳನ್ನು ಹಬ್ಬ ಹರಿದಿನಗಳನ್ನು ಆಚರಿಸಬೇಕು. ತಂದೆ, ತಾಯಿ ಗುರು ಹಿರಿಯರನ್ನು ಸದಾ ಸ್ಮರಿಸಿಕೊಳ್ಳುತ್ತಿರಬೇಕು. ದಿ.ಕೃಷ್ಣಾನಂದ ವಿಶ್ವನಾಥ ಆಚಾರ್ಯ ಅವರು ಸಮಾಜಕ್ಕೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು. ಅವರ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ಅನೇಕ ಉತ್ತಮ ಕೆಲಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದ ಗ್ರಾಮದ ಕಂತಿಹೊಂಡ ಎಂಬಲ್ಲಿನ 10 ಎಕ್ರೆ ಪ್ರದೇಶದಲ್ಲಿ ಹೆದ್ದಾರಿ ವಿಸ್ತರಣೆ ಕಾಮಗಾರಿ ಗುತ್ತಿಗೆದಾರ ಸಂಸ್ಥೆ ಐಆರ್‌ಬಿ ಇನ್ಫ್ರಾಸ್ಟ್ರಕ್ಚರ್ ಡೆವಲಪರ‍್ಸ್ ಸ್ಥಾಪಿಸಿರುವ ಮಿಕ್ಸಿಂಗ್ ಪ್ಲಾಂಟ್‌ನಿಂದ ಪರಿಸರದ ನಿವಾಸಿಗಳಿಗೆ ಆಗುತ್ತಿರುವ ತೊಂದರೆಯ ವಿರುದ್ಧ ಪ್ರತಿಭಟನೆ ನಡೆಯಿತು. ಸಂಸ್ಥೆ ಈ ನಿವೇಶನದಲ್ಲಿ ಸಾಮಗ್ರಿ ದಾಸ್ತಾನು ಮಾಡಲಾಗುವುದೆಂದು ತಿಳಿಸಿ, ಆ ಉದ್ದೇಶಕ್ಕೆ ಗ್ರಾಮ ಪಂಚಾಯಿತಿಯ ಅನುಮತಿ ಪಡೆದಿತ್ತು. ಆದರೆ ಅಲ್ಲಿ ಬೃಹತ್ ಯಂತ್ರ್ರಗಳನ್ನು ಸ್ಥಾಪಿಸಿಕೊಂಡು ಜಲ್ಲಿ ಪುಡಿ ಮಾಡಲಾಗುತ್ತಿದೆ. ಜಲ್ಲಿ ಮತ್ತು ಟಾರು ಬೆರೆಸಲಾಗುತ್ತಿದೆ. ಜಲ್ಲಿಪುಡಿ ಮತ್ತು ಜಲ್ಲಿ ಬೆರೆಸಿ ವೆಟ್ ಮಿಕ್ಷ್ಚರ್ ತಯಾರಿಸಲಾಗುತ್ತಿದೆ. ಇಲ್ಲಿ ಸೃಷ್ಟಿಯಾಗುವ ಜಲ್ಲಿ, ಸಿಮೆಂಟಿನ ಧೂರು ಇಡೀ ಪರಿಸರವನ್ನು ವ್ಯಾಪಿಸಿ, ಮನೆಗಳಿಗೆ ಪ್ರವೇಶಿಸುತ್ತದೆ. ಉಸಿರಾಟದೊಂದಿಗೆ ಜನರ ದೇಹ ಪ್ರವೇಶಿಸುವ ಈ ಧೂಳಿನಿಂದ ಹಲವರಲ್ಲಿ ಕೆಮ್ಮು, ಉಬ್ಬಸ ಕಾಣಿಸಿಕೊಂಡಿದೆ. ಸಾಮಗ್ರಿಗಳ ಅವಿರತ ಸಾಗಾಟಕ್ಕಾಗಿ ಸಂಸ್ಥೆ ಬಳಸಿಕೊಳ್ಳುತ್ತಿರುವ ಅರೆಹೊಳೆ-ಉಳ್ಳೂರು ರಸ್ತೆ ಸಂಪೂರ್ಣ ಕೆಟ್ಟುಹೋಗಿದ್ದು, ಸಣ್ಣ ವಾಹನ, ಜನ ಸಂಚಾರ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯಿತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ಕೇಂದ್ರ ವಿಭಾಗ ಮಟ್ಟದ ಕನ್ಸಲ್ಟಿಂಗ ಸಿವಿಲ್ ಇಂಜಿನಿಯರ‍್ಸ್ ಇಂಡಿಯಾ ಸಂಸ್ಥೆ ಹಾಗೂ ಅಲ್ಟ್ರಾಟೆಕ್ ಸಿಮೆಂಟ್ ಪ್ರಾಯೋಜಕತ್ವದಲ್ಲಿ ನೀಡುವ ಅಲ್ಟ್ರಾಟೆಕ್ ಸಿಮೆಂಟ್ ಅವಾರ್ಡ ೨೦೧೬ನೇ ಉತ್ತಮ ಕಟ್ಟಡ ವಿನ್ಯಾಸಗಾರ ಪ್ರಶಸ್ತಿ ಇಕ್ಬಾಲ್ ಪಿ.ಎಂ ಅವರಿಗೆ ಲಭಿಸಿದೆ. ಗಂಗೊಳ್ಳಿ ಖೈರ ಮಂಝಿಲಗೆ ನೀಡಿದ ಅದ್ಬುತವಾದ ವಿನ್ಯಾಸಕ್ಕೆ ಈ ಪ್ರಶಸ್ತಿ ಲಭಿಸಿದೆ. ಇವರು ಕುಂದಾಪುರ ಗುತ್ತಿಗೆದಾರ ಪಿ.ಎಂ ಇಬ್ರಾಹಿಂ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪರಭಾಷಾ ಚಿತ್ರಗಳನ್ನು ರಿಮೇಕ್‌ ಮಾಡಲು ಅವಕಾಶ ನೀಡಿರುವುದರಿಂದ ಡಬ್ಬಿಂಗ್‌ನ ಅಗತ್ಯ ಇಲ್ಲ. ರಿಮೇಕ್‌ ಮಾಡುವುದರ ಮೂಲಕ ಆ ಚಿತ್ರಗಳಲ್ಲಿ ನಮ್ಮ ಸಂಸ್ಕೃತಿ, ಸಂಪ್ರ ದಾಯಗಳನ್ನು ಅಳವಡಿಕೊಳ್ಳಬಹುದು ಆದರೆ ಡಬ್ಬಿಂಗ್‌ ಮಾಡುವುದರಿಂದ ಕನ್ನಡದ ಪ್ರತಿಭೆಗಖಳಿಗೆ ಅವಕಾಶದಿಂದ ವಂಚಿತರಾಗುತ್ತಾರೆ, ತಂತ್ರಜ್ಞರಿಗೆ ಅನ್ಯಾಯವಾಗುತ್ತದೆ ಎಂದು ಮಾಜಿ ಶಾಸಕ , ಚಿತ್ರ ನಟ ಬಿ.ಸಿ. ಪಾಟೀಲ್‌ ಹೇಳಿದರು. ಅವರು ಕುಂದಾಪುರದ ವೈದ್ಯ ಡಾ| ಉಮೇಶ್‌ ಭಟ್‌ ಅವರ “ಕಲರ್ಸ್‌ ಆಫ್‌ ದಿ ರೈನ್‌’ ಕಾದಂಬರಿ ಬಿಡುಗಡೆಗೆ ಕುಂದಾಪುರಕ್ಕೆ ಬಂದಾಗ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ಎರಡು ವರ್ಷಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಯುವ ಕಲಾವಿದರು ಬರುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಹೊಸ ಕಲಾವಿದರ ಆಗಮನದ ಬಳಿಕ ಚಿತ್ರರಂಗದಲ್ಲಿ ಮತ್ತೂಮ್ಮೆ ಹೊಸ ಅಲೆ ಎದ್ದಿದೆ. ಇತ್ತೀಚೆಗೆ ಬಿಡುಗಡೆಗೊಂಡ ಕಿರಿಕ್‌ ಪಾರ್ಟಿ ಇದಕ್ಕೆ ಒಂದು ಉದಾಹರಣೆೆ ಎಂದರು. ಪನ್ನಗ ನಾಗಭರಣ ನಿರ್ದೇಶನದಲ್ಲಿ “ಹ್ಯಾಪಿ ನ್ಯೂ ಇಯರ್‌’ ಚಿತ್ರ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಗೊಳ್ಳಲಿದೆ. ಈ…

Read More