೧೫ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಹಿತ್ಯ ಚಿಂತನೆ, ಮನೋರಂಜನೆ, ವೈಚಾರಿಕ ಮನೋಭಾವವನ್ನು ಹೆಚ್ಚಿಸುವುದರೊಂದಿಗೆ ಮಾನವನ ಹೃದಯಲ್ಲಿ ಬೇಕಾಗಿರುವ ಕರುಣೆ, ದಯೆಯನ್ನು ತುಂಬುತ್ತದೆ. ಆಮೂಲಕ ಕ್ಷೀಣಿಸುತ್ತಿರುವ ಭಾವನಾತ್ಮಕ ಸಂಬಂಧಗಳನ್ನು ಒಟ್ಟುಗೂಡಿಸಿಕೊಳ್ಳಿ ಎಂಬ ಮಾರ್ಮಿಕ ಧ್ವನಿ ಹೊರ ಹೊಮ್ಮಿಸುತ್ತದೆ. ಕನ್ನಡ ಅಭಿಮಾನ ಕನ್ನಡ ನಾಡಿನ ಸಂಸ್ಕೃತಿಯ ಜೊತೆಗೆ ಒಂದಾಗಬೇಕಿದೆ. ಸಾಹಿತಿ ಸಾಹಿತಿಯೇ ವಿನಃ ಆತನಿಗೆ ಜಾತಿ, ಧರ್ಮವಿಲ್ಲ ಎಂದು ಕರ್ನಾಟಕ ಜನಪದ ವಿವಿ ಸಿಂಡಿಕೇಟ್ ಸದಸ್ಯ ಡಾ. ಸೈಯ್ಯದ್ ಝಮೀರುಲ್ಲಾ ಶರೀಫ್ ಹೇಳಿದರು. ಅವರು ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದ ಆವರಣದ ಉಳ್ಳೂರು ಮೂಕಜ್ಜಿ ವೇದಿಕೆಯಲ್ಲಿ ಜರುಗಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ನೇತೃತ್ವದಲ್ಲಿ ಆಯೋಜನೆಗೊಂಡ ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಂಡಿಮ ೨೦೧೭ರ ಸಮಾರೋಪ ನುಡಿಗಳನ್ನಾಡಿದರು. ಸಮ್ಮೇಳನಗಳು ಪ್ರತಿಯೊಬ್ಬರ ಮೇಲೂ ಸಾಂಸ್ಕೃತಿಕ ಜವಾಬ್ದಾರಿಯನ್ನು ಹೊತ್ತು ಕಳುಹಿಸುತ್ತದೆ. ಸಾಹಿತ್ಯ ಸಮ್ಮೇಳನ ಹೊಸ ಸಾಹಿತಿಗಳ ಸೃಷ್ಠಿಗೆ ಕಾರಣವಾಗಬೇಕು. ಪ್ರತಿ ಸಾಹಿತಿಯೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಪ್ರಾಚೀನ ಭಾರತೀಯ ಸಂಸ್ಕೃತಿ ಯಿಂದಾಗಿ ವಿಶ್ವದಲ್ಲಿ ಭಾರತ ಅಗ್ರ ಮಾನ್ಯವಾಗಿ ಗುರುತಿಸಲ್ಪಟ್ಟಿದೆ. ಕವಿಗಳಿಂದ ಸಾಹಿತ್ಯ ಕ್ಷೇತ್ರ ಸಮೃದ್ಧಗೊಂಡಿದೆ. ಕುಂದಗನ್ನಡ ಅಚ್ಚ ಕನ್ನಡ ಹಾಗೂ ಆಡು ಮಾತಿನ ಆತ್ಮೀಯ ಭಾಷೆಯಾಗಿದ್ದು ಇದಕ್ಕೆ ಸರಕಾರದ ವಿಶೇಷ ಮಾನ್ಯತೆ ದೊರಕಿಸಿ ಕೊಡುವುದರ ಜತೆ ಕುಂದಗನ್ನಡ ಸಾಹಿತ್ಯ ಅಕಾಡೆಮಿ ಕೇಂದ್ರ ಸ್ಥಾಪನೆ ಯಾಗಬೇಕು, ಕುಂದಗನ್ನಡ ಶಬ್ದ ಅಳಿವಿ ನಂಚಿನಲ್ಲಿದ್ದು ಇದನ್ನು ಸಂಗ್ರಹಿಸುವ ಜತೆ ಅಧ್ಯಯನ ಕೇಂದ್ರ ಆರಂಭಿಸುವ ಕಾರ್ಯ ಸಾಧ್ಯವಾಗಬೇಕು ಎಂದು ಹಿರಿಯ ಸಾಹಿತಿ ಡಾ| ಎಚ್.ವಿ. ನರಸಿಂಹಮೂರ್ತಿ ಹೇಳಿದರು. ಅವರು ಕಿರಿಮಂಜೇಶ್ವರ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಉಳ್ಳೂರು ಮೂಕಜ್ಜಿ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ನಡೆದ 15ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಡಿಂಡಿಮ 2017 ಉದ್ಘಾಟಿಸಿ ಮಾತನಾಡಿದರು. ಸರಕಾರದ ಇಚ್ಛಾಶಕ್ತಿಯ ಕೊರತೆ ಯಿಂದಾಗಿ ಸಾಹಿತ್ಯ ಭಾಷಾ ಪ್ರತಿಷ್ಠಾನ ಮೈಸೂರಿನಲ್ಲಿ ಇರಬೇಕೊ ಅಥವಾ ಬೆಂಗಳೂರಿನಲ್ಲಿ ಇರಬೇಕೊ ಎಂಬ ಗೊಂದಲ ಉಂಟಾಗಿದ್ದು ಇದರಿಂದ…
ಕುಂದಾಪುರದ ತಾಲೂಕಿನ ಪುಟ್ಟ ಊರಾದ ಚಪ್ಪರಿಕೆಯಲ್ಲಿ ಜನಿಸಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತ ಸಾಧನೆ ಮಾಡುತ್ತಾ, ತಮ್ಮ ಕೃತಿಗಳ ಮೂಲಕ ಊರಿನ ಬೇರನ್ನು ಸೊಗಸಾಗಿ ಚಿತ್ರಿಸುತ್ತಾ ನಮ್ಮ ನಡುವಿನ ವಿಶೇಷ ವ್ಯಕ್ತಿಯಾಗಿ ಕಾಣಿಸಿಕೊಳ್ಳುತ್ತಾರೆ ಹಿರಿಯ ಪತ್ರಕರ್ತ, ಸಾಹಿತಿ ಸತೀಶ ಚಪ್ಪರಿಕೆ. ಅವರ ಜೀವನ ಪ್ರೀತಿ ಮತ್ತು ಮನುಷ್ಯತ್ವದ ಸೆಲೆ ಅವರನ್ನು ಎಲ್ಲರಿಂದಲೂ ಭಿನ್ನವಾಗಿ ನಿಲ್ಲುವಂತೆ ಮಾಡಿದೆ. ಕಳೆದ ಇಪ್ಪತ್ತೈದು ವರ್ಷಗಳಿಂದ ಪತ್ರಿಕಾರಂಗ, ಜೊತೆ ಜೊತೆಗೆ ನಡೆಸಿದ ಸಾಹಿತ್ಯ ಸೇವೆ ಅನನ್ಯ ವಿಶಿಷ್ಟವಾದುದು. ಈ ಭಾರಿ ಚಪ್ಪರಿಕೆ ಅವರಿಗೆ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕುಂದಾಪ್ರ ಡಾಟ್ ಕಾಂ ಅವರೊಂದಿಗೆ ನಡೆಸಿದ ಕಿರು ಸಂದರ್ಶನ ಇಲ್ಲಿದೆ. ಸಂದರ್ಶನ: ಸುನಿಲ್ ಹೆಚ್. ಜಿ. ಬೈಂದೂರು ಕುಂದಾಪ್ರ ಡಾಟ್ ಕಾಂ: ತಮ್ಮ ಹುಟ್ಟೂರಿನಲ್ಲಿ ನಡೆಯುತ್ತಿರುವ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದೀರಿ. ಏನನ್ನಿಸುತ್ತಿದೆ? ಚಪ್ಪರಿಕೆ: ನಾಗೂರು ನನ್ನ ಹುಟ್ಟೂರು. ನನ್ನ ಊರಿನವರು ತೋರಿದ ಈ ಪ್ರೀತಿವಿಶ್ವಾಸ ಮುಂದೆ ಪ್ರಪಂಚದ ಯಾವುದೇ…
ನೇರಪ್ರಸಾರ: 15ನೆಯ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನೇರಪ್ರಸಾರದ ಚಾನೆಲ್: https://www.youtube.com/user/KundapraDotCom
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ನವೀಕೃತ ಕುಂಭಾಶಿ ರಾಧಾಬಾಯಿ ವೆಂಕಟರಮಣ ಪ್ರಭು ರಂಗಮಂದಿರವನ್ನು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಂ ಅವರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಕಾಲೇಜು ಆರಂಭವಾಗಿ ಐದು ದಶಕಗಳನ್ನು ಪೊರೈಸಿದೆ. ಯಾವುದೇ ಸಂಸ್ಥೆಯಾಗಲಿ ಕಾಲ ಕಾಲಕ್ಕೆ ತಕ್ಕಂತೆ ಬದಲಾವಣೆಗಳಿಗೆ ಹೊಂದಿಕೊಳ್ಳಬೇಕಾಗುತ್ತದೆ. ಆಯಾ ಕಾಲದ ಅನುಸಾರ ಬದಲಾವಣೆಗಳು ಅತ್ಯಗತ್ಯವಾಗಿರುತ್ತದೆ. ಅದರ ಹಿನ್ನೆಲೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಕಾಲೇಜು ಹಮ್ಮಿಕೊಂಡಿದೆ. ಅದರಲ್ಲಿ ಸಫಲತೆಯನ್ನು ಕಂಡಿದ್ದೇವೆ. ಯಾವುದೇ ಕೆಲಸವನ್ನಾಗಲಿ ಒಳ್ಳೆಯ ಮನಸ್ಸಿನಿಂದ ಮಾಡಿದಾಗ ಆರ್ಥಿಕ ಸಹಾಯ ತನ್ನಂತಾನೆ ಒದಗಿಬರುತ್ತದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೇ ಭೌತಿಕ ಸವಲತ್ತುಗಳು ಪರಿಪೂರ್ಣವಾಗಿ ಸಫಲತೆ ಬರಬೇಕಾದರೆ ಅದನ್ನು ಕ್ರೀಯಾತ್ಮಕ ಚಟುವಟಿಕೆಗಳಿಗೆ ಬಳಸಿಕೊಳ್ಳಬೇಕು. ತನ್ಮೂಲಕ ಹೊರಗಿನವರಿಗೂ ಇದರ ಕುರಿತು ತಿಳಿದಂತಾಗುತ್ತದೆ. ಅಲ್ಲದೇ ಒಳ್ಳೆಯ ಕಾರ್ಯಗಳಿಗೆ ಉಪಯೋಗವಾಗಲಿ ಎಂದು ಶುಭಹಾರೈಸಿದರು. ಲಯನೆಸ್ ಶೋಭಾ ಸೋನ್ಸ್ ಲಯನ್ಸ್ ಪಿ.ಡಿಜೆ ಪ್ರಕಾಶ್ ಸೋನ್ಸ್ ಮತ್ತು ವೇದಿಕೆಯನ್ನು ವಿಶ್ವಸ್ಥ ಮಂಡಳಿಯ ಸದಸ್ಯರಾದ ಲಯನ್ಸ್ ಪ್ರಕಾಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯ ಗುರುನಾರಾಯಣ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾಧನಾ ಮಂಟಪದಲ್ಲಿ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಸಮುದಾಯ ಸಂಘಟಿತವಾದರೆ ಅದು ಎದುರಿಸುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಶಕ್ತಿ ದೊರೆಯುತ್ತದೆ. ಸಂಘಟನೆ ಎಲ್ಲಕ್ಕಿಂತ ಹೆಚ್ಚಾಗಿ ಯುವಜನರ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಬೇಕು. ಸಂಘಟನೆಯನ್ನು ಇನ್ನೊಂದು ಸಮುದಾಯದೊಂದಿಗೆ ಸ್ಪರ್ಧೆಗೆ ಬಳಿಸಿಕೊಳ್ಳದೆ ಎಲ್ಲರ ಪ್ರೀತಿ, ವಿಶ್ವಾಸ ಗಳಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಂ. ಅಣ್ಣಪ್ಪ ಬಿಲ್ಲವ ಸ್ವಾಗತಿಸಿದರು. ಮುಖ್ಯ ಅತಿಥಿಗಳಲ್ಲಿ ಒಬ್ಬರಾಗಿದ್ದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ನಾರಾಯಣಗುರುಗಳು ಸಮಾನತೆಯ ಸಮಾಜ ನಿರ್ಮಿಸಲು ಶ್ರಮಿಸಿದರು. ಇದನ್ನು ಬಿಲ್ಲವ ಸಂಘಟನೆ ಅರ್ಥಮಾಡಿಕೊಳ್ಳಬೇಕು. ತಮ್ಮ ಸಮುದಾಯದ ಸದಸ್ಯರು ಸ್ವಾವಲಂಬಿಗಳಾಗಿ, ಗೌರವಯುತವಾಗಿ ಬದುಕಲು ಅಗತ್ಯ ಅವಕಾಶ ಸೃಷ್ಟಿಸಬೇಕು ಎಂದರು. ಮರವಂತೆ ಬಡಾಕೆರೆ ವ್ಯವಸಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅಧಿಕಾರ ವಹಿಸಿಕೊಂಡಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಗೆ ಜಿಲ್ಲಾಧಿಕಾರಿಯಾಗಿದ್ದ ಟಿ. ವೆಂಕಟೇಶ್ ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. 2009 ಬ್ಯಾಚ್‌ನ ಐಎಎಸ್ ಅಧಿಕಾರಿ ಆಗಿರುವ ಪ್ರಿಯಾಂಕಾ ಫ್ರಾನ್ಸಿಸ್ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದರು. ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಅವರು, ಬೆಳಗಾಂ ಜಿಲ್ಲೆಯಾ ಸಹಾಯಕ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಬಳಿಕ ಬೆಳಗಾಂ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. 2015 ನವೆಂಬರ್‌ನಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಟಿ. ವೆಂಕಟೇಶ್ ಅವರು ಮೈಸೂರು ಶುಗರ್ ಎಂ.ಡಿ ಆಗಿ ವರ್ಗಾವಣೆಗೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯು ಕಳೆದ ಮೂರು ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದವರನ್ನು ಗುರುತಿಸಿ ನೀಡಲಾಗುತ್ತಿರುವ ಬಿಂದುಶ್ರೀ ಪ್ರಶಸ್ತಿಗೆ ಪ್ರಸ್ತುತ ಸಾಲಿನಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ, ಪದ್ಮಶ್ರೀ ಪುರಸ್ಕೃತ ಗಿರೀಶ್ ಕಾಸರವಳ್ಳಿ ಅವರನ್ನು ಆಯ್ಕೆಮಾಡಲಾಗಿದೆ. ತೀರ್ಥಹಳ್ಳಿ ತಾಲೂಕಿನ ಕೆಸಲೂರಿನವರಾದ ಗಿರೀಶ್ ಕಾಸರವಳ್ಳಿ ಅವರು ದೇಶದ ಪ್ರತಿಭಾನ್ವಿತ ಚಲನಚಿತ್ರ ನಿರ್ದೇಶಕರು. ಮಣಿಪಾಲದಲ್ಲಿ ಬಿ.ಫಾರ್ಮಾ, ಪುಣೆ ರಾಷ್ಟ್ರೀಯ ಚಲನಚಿತ್ರ ಸಂಸ್ಥೆಯಲ್ಲಿ ನಿರ್ದೇಶನ ವಿಭಾಗದಲ್ಲಿ ಡಿಪ್ಲೊಮಾ ಪಡೆದು ನಿರ್ದೇನಕ್ಕಿಳಿದವರು. ತನ್ನ 27ನೇ ವಯಸ್ಸಿಗೆ ಘಟಶ್ರಾದ್ಧ ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಹಾಗೂ ಸ್ವರ್ಣಕಮಲ ಪಡೆಯುವುದರೊಂದಿಗೆ ನಾಲ್ಕು ಸ್ವರ್ಣಕಮಲ ಪ್ರಶಸ್ತಿ ಪಡೆದ ಹಿರಿಮೆ ಗಿರೀಶ್ ಕಾಸರವಳ್ಳಿಯವರದ್ದು. ಸದಭಿರುಚಿಯ ಪ್ರಾದೇಶಿಕ ಚಲನಚಿತ್ರವನ್ನು ನೀಡುವುದರ ಮೂಲಕ ವ್ಯಾಪಾರಿ ಚಿತ್ರಗಳಿಂದ ದೂರ ಉಳಿದವರು. ಅವರ ನಿರ್ದೇಶನದ ಎಲ್ಲಾ ಚಿತ್ರಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹತ್ತಾರು ರಾಷ್ಟ್ರ, ಅಂತರಾಷ್ಟ್ರೀಯ ಪ್ರಶಸ್ತಿಗಳು ಅರಸಿ ಬಂದಿವೆ. ಕಾಸರವಳ್ಳಿ ಅವರು ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅನನ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಗುರುಕುಲ ವಿದ್ಯಾ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು ತಮ್ಮ ಅಜ್ಜಿ-ಅಜ್ಜಂದಿರಿಗಾಗಿ ವಿಶೇಷ ಕಾರ‍್ಯಕ್ರಮವನ್ನು ಆಯೋಜಿಸಲಾಗಿತ್ತು. ಡಾ.ಎಚ್.ವಿ.ನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಾಲೆ ಎಂದರೆ ಕೇವಲ ಮಕ್ಕಳಿಗೆ ಅಂಕ ಪಟ್ಟಿ ನೀಡುವ ಸಂಸ್ಥೆ ಅಲ್ಲ, ಬದಲಾಗಿ ಮಕ್ಕಳಲ್ಲಿ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು. ಪಾಶ್ಚಾತ್ಯ ಶಿಕ್ಷಣದ ಹಾವಳಿಯಿಂದ ನಮ್ಮ ತನ ಮರೆಯಾಗುತ್ತಿರುವ ಈ ಕಾಲದಲ್ಲಿ ಅದನ್ನು ಉಳಿಸಿಕೊಳ್ಳಲು ಇಂತಹ ಕಾರ‍್ಯಕ್ರಮಗಳು ಹೆಚ್ಚಾಗಿ ಮೂಡಿ ಬರಬೇಕು. ಕೂಡು ಕುಟುಂಬದಲ್ಲಿ ಇರುವ ಆಚಾರ-ವಿಚಾರಗಳ ಮಹತ್ವದ ಕುರಿತು ತಿಳಿಸಿದರು. ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ‍್ಯನಿರ್ವಾಹಕಿ ಅನುಪಮ ಎಸ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಪ್ರಾಂಶುಪಾಲ ಶಾಯಿಜು ಕೆ. ಆರ್ ನಾಯರ್ ಉಪಸ್ಥಿತರಿದ್ದರು. ವಿಶಾಲ.ಶೆಟ್ಟಿ ಕಾರ‍್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಿದ್ಯಾ ಸ್ವಾಗತಿಸಿದರು, ಶಿಕ್ಷಕಿ ವಿಜೇತ ವಂದಿಸಿದರು.
