Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲೆಯಲ್ಲಿ ದಲಿತರಿಗಾಗಿ ಮೀಸಲಿರಿಸಿರುವ ಸುಮಾರು 800 ಏಕ್ರೆ ಡಿಸಿ ಮನ್ನಾ ಭೂಮಿಯಿದ್ದು, ಯಾವ ಪ್ರಮಾಣದಲ್ಲಿ ಯಾವ ಪ್ರಮಾಣದಲ್ಲಿ ಹಂಚಿಕೆ ಮಾಡಬೇಕು ಎನ್ನುವುದರ ಬಗ್ಗೆ ಸರ್ಕಾರ ಮಾನದಂಡದ ಅಗತ್ಯವಿದೆ. ಈ ಬಗ್ಗೆ ಶೀಘ್ರ ಹೊಸನೀತಿ ರೂಪಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ರಾಜ್ಯದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಆಶ್ರಯದಲ್ಲಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಭೂಹಿತ ಶೋಷಿತ ಸಮುದಾಯಗಳಿಗೆ ಡಿಸಿ ಮನ್ನಾ ಭೂಮಿ ಹಂಚಿಕೆ ಆಗ್ರಹಿಸಿ ನಡೆದ ಜನಶಕ್ತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಡಿ.ಸಿ. ಮನ್ನಾ ಭೂಮಿಯಲ್ಲಿ ಬಹುತೇಕ ಭೂಮಿ ಹಡಿಲು ಬಿದ್ದಿದೆ, ಇದನ್ನು ಶೀಘ್ರ ದಲಿತರಿಗೆ ಹಂಚಿದ್ದರೆ ಅವರು ಅದನ್ನು ಕೃಷಿ ಭೂಮಿಯನ್ನಾಗಿ ಪರಿವರ್ತಿಸಿ ಸ್ವಾವಲಂಬಿ ಜೀವನ ನಡೆಸುವಂತಾಗುತ್ತದೆ. ದಲಿತರು ತಮ್ಮಲ್ಲಿರುವ ಕೀಳರಿಮೆ ಬದಿಗೊತ್ತಿಗೆ ನಾನಾ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಆ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಕೋಟಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೌಖಿಕ ಪರಂಪರೆಯಲ್ಲಿ ಹುಟ್ಟಿಕೊಂಡ ಜಾನಪದ, ಸಂಸ್ಕೃತಿಯ ಭಾಗವಾಗಿ ಬದುಕಿನೊಂದಿಗೆ ಬೆಸೆದುಕೊಂಡಿದೆ. ಕರ್ನಾಟಕದ ಕರಾವಳಿಯಲ್ಲಿ ದೈವಾರಾಧನೆಯಂತಹ ಜಾನಪದ ಆಚರಣೆಗಳು ನಂಬಿಕೆ ಹಾಗೂ ಭಯದ ತಳಹದಿಯಲ್ಲಿ ಇಂದಿಗೂ ಉಳಿದುಕೊಂಡಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಇದರ ಉಡುಪಿ ಜಿಲ್ಲಾಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ ಹೇಳಿದರು. ಅವರು ಇಲ್ಲಿನ ಉಪ್ಪುಂದದ ಶಂಕರ ಕಲಾಮಂದಿರದ ಸಮೃದ್ಧ ಸಭಾಭವನದಲ್ಲಿ ಸುವಿಚಾರ ಬಳಗ, ಕುಂದ ಅಧ್ಯಯನ ಕೇಂದ್ರ ಉಪ್ಪುಂದ ನೇತೃತ್ವದಲ್ಲಿ ಆಯೋಜಿಸಲಾಗಿದ ತಿಂಗಳ ಕಾರ್ಯಕ್ರಮದಲ್ಲಿ ’ಕರಾವಳಿ ಜಾನಪದದ ವಿಶಿಷ್ಟತೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಜಾನಪದರಲ್ಲಿ ಭಾಷೆ, ಆಚರಣೆ ಹಾಗೂ ಸಂಪ್ರದಾಯದ ವಿಶಿಷ್ಟತೆಯನ್ನು ಕಾಣುತ್ತೇವೆ. ಕಂಬಳ, ಹೂವಿನಕೋಲು, ಪಾಣರಾಟ ಮುಂತಾದ ಸಾಂಪ್ರದಾಯಿಕ ಕಲೆಗಳು ಅಳಿವಿನಂಚಿನಲ್ಲಿದ್ದರೇ, ಯಕ್ಷಗಾನದಲ್ಲಿ ಹೊಸ ಪ್ರಯೋಗಗಳ ನಡೆಯುತ್ತಿದೆ. ಅಳಿನಂಚಿನಲ್ಲಿರುವ ಕಲೆಗಳನ್ನು ಯುವ ತಲೆಮಾರಿಗೆ ಪರಿಚಯಿಸಿ ಮುಂದುವರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಸುವಿಚಾರ ಬಳಗ ಅಧ್ಯಕ್ಷ ಬಿ. ರಾಮಕೃಷ್ಣ ಶೇರೆಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸತತ ಪರಿಶ್ರಮದಿಂದ ಉತ್ತಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಸಮಾಜ ಸೇವೆ, ದೇಶಭಕ್ತಿಯ ಗುಣಗಳನ್ನು ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುವ ಅಗತ್ಯವಿದೆ. ಅಂಕಗಳಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿನ ಪ್ರಾವೀಣ್ಯತೆಯ ತೋರಿದಂತೆ ತಾವು ಬೆಳೆದ ಸಮಾಜಕ್ಕೆ ಏನಾದರೂ ಸೇವೆಯನ್ನು ಸಲ್ಲಿಸಬೇಕೆಂಬ ಬದ್ಧತೆ ಇದ್ದರೆ ಶಿಕ್ಷಣದ ಉದ್ದೇಶ ಸಾರ್ಥಕವಾಗುತ್ತದೆ ಎಂದು ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಮೊಕ್ತೇಸರ ಟಿ. ನಾರಾಯಣ ಹೆಗ್ಡೆ ಹೇಳಿದರು. ಅವರು ಶುಕ್ರವಾರ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನಿರ್ಮಿಸಲಾದ ನೂತನ ಧ್ವಜಸ್ಥಂಭವನ್ನು ಉದ್ಘಾಟಿಸಿ, ಗಣರಾಜ್ಯೋತ್ಸವದ ಧ್ವಜಾರೋಹಣಗೈದು ಬಳಿಕ ಮಾತನಾಡಿದರು. ಮಕ್ಕಳನ್ನು ಪ್ರಾಥಮಿಕ ಹಂತದಲ್ಲಿಯೇ ತಿದ್ದಿ ಉತ್ತಮ ಶಿಕ್ಷಣವನ್ನು ನೀಡಲು ಶಿಕ್ಷಕರ ಶ್ರಮ ಶ್ಲಾಘನೀಯವಾದ್ದು. ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಜವಾಬ್ದಾರಿ ಶಿಕ್ಷಕರೊಂದಿಗೆ, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಜನಪ್ರತಿನಿಧಿಗಳಿಗೂ ಇದೆ ಎಂದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟರಮಣ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ ಸದಸ್ಯ ಶಂಕರ ಪೂಜಾರಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕರು ಶೇ.೧೦೦ರಷ್ಟು ಕೃಷಿಸಾಲವನ್ನು ಮರುಪಾವತಿ ಮಾಡಿದ ಹೆಗ್ಗಳಿಕೆ ಹೊಂದಿದ್ದಾರೆ. ಜನರ ಅಗತ್ಯಕ್ಕೆ ತಕ್ಕಂತೆ ಹತ್ತಾರು ಸಹಕಾರಿ ಸಂಸ್ಥೆಗಳು ಅವಿಭಜಿತ ಜಿಲ್ಲೆಯಲ್ಲಿ ಹುಟ್ಟಿಕೊಳ್ಳುತ್ತಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಸಹಕಾರಿ ರಂಗದಲ್ಲೂ ಪೈಪೋಟಿ ಇದ್ದಾಗಲೇ ಉತ್ತಮವಾಗಿ ಜನಸೇವೆ ಮಾಡಲು ಸಾಧ್ಯವಾಗಲಿದೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ಇಲ್ಲಿನ ಸಾಯಿ ಸೆಂಟರ್‌ನಲ್ಲಿ ಗುರುವಾರ ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕುಂದಾಪುರ ಶಾಖೆಯ ನೂತನ ಸ್ವಂತ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಬಳಿಕ ಮಾತನಾಡಿದರು. ಬ್ಯಾಂಕಿಂಗ್ ಕ್ಷೇತ್ರದ ನಿಯಮಗಳು ವಾಣಿಜ್ಯ ಬ್ಯಾಂಕುಗಳು ಹಾಗೂ ಸಹಕಾರಿ ಸಂಸ್ಥೆಗಳಿಗೆ ಒಂದೇಯಾಗಿದ್ದರೂ, ಬ್ಯಾಂಕುಗಳಿಗೆ ಸಮನಾಗಿ ಸಹಕಾರಿ ಸಂಸ್ಥೆಗಳು ಬೆಳೆದಿದ್ದರೂ ಕೇಂದ್ರ ಸರಕಾರ ಸಹಕಾರಿ ಕ್ಷೇತ್ರವನ್ನು ಸಂಪೂರ್ಣ ಕಡೆಗಣಿಸಿದೆ. ನಬಾರ್ಡ್‌ನ ಹಣ ಸಹಕಾರಿ ಸಂಸ್ಥೆಗಳಿಗೆ ಶೇ.೪೦ರಷ್ಟು ಮಾತ್ರ ದೊರೆಯುತ್ತಿದೆ. ಆದರೆ ಶೇ.೬೦ರಷ್ಟನ್ನು ಸಹಕಾರಿ ಸಂಸ್ಥೆಯ ಸ್ವಂತ ಠೇವಣಿಯನ್ನು ಹೊಂದಿ ಸಾಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಪ್ರತಿ ತಿಂಗಳು ನಡೆಯುತ್ತಿರುವ ಶ್ರೀಮದ್ ಭಗವದ್ಗೀತಾ ಬೋಧನೆ ಕಾರ್ಯಕ್ರಮವು ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಧಾರ್ಮಿಕ ಚಿಂತಕ ಮಂಗೇಶ ಶೆಣೈ ಯಳಜಿತ್ ಮಾತನಾಡಿ ಜೀವನದಲ್ಲಿ ತ್ಯಾಗದ ಮೂಲಕ ಆಧ್ಯಾತ್ಮದ ತುತ್ತತುದಿಯನ್ನು ತಲುಪಲು ಸಾಧ್ಯವಿದೆ. ಶ್ರೀಮದ್ ಭಗವದ್ಗೀತೆಯ ೯ನೇ ಅಧ್ಯಾಯದಲ್ಲಿ ಶ್ರೀಕೃಷ್ಣ ಪರಮಾತ್ಮನು ವಿವರಿಸಿದ ರಹಸ್ಯವಾದ ವಿದ್ಯೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಎಲ್ಲಾ ವಿದ್ಯೆಗಳ ರಾಜನಂತಿರುವ ಈ ವಿದ್ಯೆಯನ್ನು ಅರಿಯುವುದರಿಂದ ಎಲ್ಲಾ ವಿದ್ಯೆಗಳನ್ನು ಕಲಿಯಲು ಸಾಧ್ಯ. ನಿಸ್ವಾರ್ಥವಾಗಿ ನಮ್ಮ ಕರ್ತವ್ಯವನ್ನು ಮಾಡಿ ಅದನ್ನು ಪರಮಾತ್ಮನಿಗೆ ಶ್ರದ್ಧೆಯಿಂದ ಅರ್ಪಿಸಬೇಕು ಎಂದರು. ಭಗವದ್ಗೀತೆಯ ೧೦ನೇ ಅಧ್ಯಾಯದ ವಿಭೂತಿ ಯೋಗ ಪಠಣ ನಡೆಯಿತು. ವಿದ್ಯಾರ್ಥಿಗಳಾದ ಬಿ.ಪ್ರಾರ್ಥನಾ ಪೈ, ಎನ್.ಚೇತನಾ ನಾಯಕ್ ಮತ್ತು ಅಗ್ನೇಶ್ ನಾಯಕ್ ಅವರು ಭಗವದ್ಗೀತೆಯ ೯ನೇ ಅಧ್ಯಾಯದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಐದು ವರ್ಷಗಳಿಂದ ಚಿತ್ತೂರು ಪರಿಸರದಲ್ಲಿ ಜನಪರ ಕಾರ್ಯ ಆಯೋಜಿಸುತ್ತ ಬಂದಿರುವ ಪ್ರೇರಣಾ ಯುವ ವೇದಿಕೆ (ರಿ) ನೈಕಂಬ್ಳಿ ಚಿತ್ತೂರು ಇದರ ಐದನೇ ವಾರ್ಷಿಕೋತ್ಸವ ಯಶಸ್ವಿಯಾಯಿತು. ಪ್ರೇರಣಾ ಈ ಭಾಗದಲ್ಲಿ ಅತ್ಯುತ್ತಮ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿ ಯುವ ಜನತೆಗೆ ಪ್ರೇರಣೆಯಾಗಿದೆ ಎಂದು ತಾಲೂಕು ಪಂಚಾಯತ್ ಸದಸ್ಯರಾದ ಉದಯ ಜಿ ಪೂಜಾರಿ ಶುಭ ಹಾರೈಸಿದರು. ಅಶೋಕ ಶೆಟ್ಟಿ ಕೊಡ್ಲಾಡಿ ದಿಕ್ಸೂಚಿ ಭಾಷಣದಲ್ಲಿ ಮಾಡಿದರು. ವಂಡ್ಸೆ ಹೋಬಳಿ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಆಯೋಜಿಸಿದ ಪ್ರೇರಣಾ ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯ ವಿಜೇತರಿಗೆ ಪ್ರಶಸ್ತಿ ಮೊತ್ತ ಮತ್ತು ಫಲಕ ವಿತರಿಸಲಾಯಿತು . ಪ್ರೇರಣಾ ಹಿರಿಯ ನಾಗರಿಕ ಸನ್ಮಾನ ಸುಕ್ರ ಅವರಿಗೆ, ಗುರು ಸಮ್ಮಾನ ಚಂದ್ರ ಶೆಟ್ಟಿ ಅವರಿಗೆ, ಸಾಧಕ ಸಮ್ಮಾನ ವಿಶ್ವನಾಥ ಗಾಣಿಗ ಬಾಳಿಕೆರೆ ಇವರಿಗೆ ಮಾಡಲಾಯಿತು. ವೇದಿಕೆಯಲ್ಲಿ ಚಿತ್ತೂರು ಪಂಚಾಯತ್ ಅಧ್ಯಕ್ಷ ಸಂತೋಷ ಮಡಿವಾಳ , ಡಾ. ಅತುಲ್ ಕುಮಾರ ಶೆಟ್ಟಿ, ವೇದಿಕೆಯ ಗೌರವ ಅಧ್ಯಕರಾಮಚಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂಭಾಶಿ ಹರಿಹರ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ೧೦೦ನೇ ಗಾನ-ಆಖ್ಯಾನ ಕಾರ‍್ಯಕ್ರಮದಲ್ಲಿ ಯಕ್ಷಗಾನ ಭಾಗವತ ವಿದ್ವಾನ್ ಗಣಪತಿ ಭಟ್ ಯಲ್ಲಾಪುರ ಅವರಿಗೆ ಯಕ್ಷ ಗಂಧರ್ವ ಕಲಾಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ಸೋದೆ ಮಠ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿ, ನಮ್ಮ ಪರ್ಯಾಯ ಸಮಯದಲ್ಲಿ ರಾಮಾಯಣದ ಕಥಾಹದರಿಂದ ಆಯ್ಕೆ ಮಾಡಿಕೊಂಡ ಲವಕುಶ ಗಾನ-ವ್ಯಾಖ್ಯಾನದ ಮೂಲಕ ಗಾನ ವ್ಯಾಖ್ಯಾನಕ್ಕೆ ಲವಕುಶ ಮೂಲ ಪುರುಷರಾದರು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಉಡುಪಿ ಶ್ರೀ ಕೃಷ್ಣ ಮಠ ಸರ್ವಜ್ಞ ಪೀಠ ಏರಲಿರುವ ಪಲಿಮಾರ್ ಮಠ ಶ್ರೀ ವಿದ್ಯಾದೀಶಥೀರ್ಥ ಸ್ವಾಮೀಜಿ ಅವರಿಗೆ ಕೃಷ್ಣ ಭಾಮಾ ಟ್ರಸ್ಟ್ ತುಲಾಬಾರ ಸೇವೆ ಆಯೋಜಿಸಿತ್ತು. ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಕೆ.ವಿ.ಮಹಾಬಲ ಭಟ್ ಹಾಗೂ ಇನ್ನಿತರ ಗಣ್ಯರು ಇದ್ದರು. ಕಾರ‍್ಯಕ್ರಮದ ನಂತರ ನೂರನೇ ಕಾರ‍್ಯಕ್ರಮದ ಗಾನ ವ್ಯಾಖ್ಯಾನದ ಕೃಷ್ಣಾರ್ಪಣೆ ನಡೆಯಿತು. ಭಾಗವತರಾಗಿ ವಿದ್ವಾನಿ ಗಣಪತಿ ಭಟ್ ಯಲ್ಲಾಪುರ ಹಾಗೂ ಹರಿಹರ ಕ್ಷೇತ್ರದ ವಿದ್ವಾಂಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉತ್ತಮ ಪ್ರೇರಣೆ, ದೊರೆತರೆ, ಅವಕಾಶವನ್ನು ಬಳಸಿಕೊಳ್ಳುವ ಛಲ ಇದ್ದರೆ, ಪರಿಶ್ರಮ ವಹಿಸಿದರೆ, ಸಾಧನೆಯ ಏಣಿ ಏರಬಹುದು. ಯುವಕರು ಅವಕಾಶ ಬಳಸಿಕೊಂಡು ಉತ್ತಮ ವ್ಯಕ್ತಿಗಳ ಪ್ರೇರಣೆ ಪಡೆದರೆ ಖಂಡಿತವಾಗಿಯೂ ಸಾಧನೆ ಮಾಡಲು ಸಾಧ್ಯ ಎಂದು ಕೇಂದ್ರ ರಕ್ಷಣಾ ಇಲಾಖೆ ಪ್ರಾಕ್ತನ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಜಯಪ್ರಕಾಶ್ ರಾವ್ ಹೇಳಿದರು. ಕುಂದಪ್ರಭ ಸಂಸ್ಥೆ ಆಶ್ರಯದಲ್ಲಿ ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜು ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಕೋ.ಮ.ಕಾರಂತ ಪ್ರಶಸ್ತಿ ಸ್ವೀಕರಿಸಿ, ಮಾತನಾಡುತ್ತಿದ್ದರು. ಕೋ.ಮ.ಕಾರಂತರು ಯುವಕರಲ್ಲಿ ನಾಯಕತ್ವ ಗುಣ, ಬೆಳೆಸುವಲ್ಲಿ ಪ್ರೇರಣೆ ತುಂಬಿ ತರಬೇತಿ ನೀಡಿದವರು. ನಾನೂ ಅವರ ಶಿಷ್ಯ ಎನ್ನಲು ಸಂತೋಷವಾಗುತ್ತದೆ.ಜೀವನದಅನುಭವ ಪಡೆಯಲು ವಿವಿಧರೀತಿಯ ಕೆಲಸಗಳನ್ನು ಮಾಡುತ್ತಾ ಪ್ರವೃತ್ತಿಯಲ್ಲೂ ಆಸಕ್ತಿ ವಹಿಸಬೇಕಾಗುತ್ತದೆ. ಅನುಭವ ಪಡೆಯುತ್ತಾ ಬೆಳೆಯಬೇಕು ಎಂದುಹೇಳಿದರು. ನಿವೃತ್ತಐ.ಎಫ್.ಎಸ್. ಅಧಿಕಾರಿ ಬಿ.ಜಗನ್ನಾಥ ಶೆಟ್ಟಿಅಧ್ಯಕ್ಷತೆವಹಿಸಿದರು. ಸ್ವಚ್ಛ ಭಾರತ, ಸ್ವಸ್ಥ ಭಾರತಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆಲೇಖಕಡಾ.ನಾಗೇಶ ಕುಮಾರ್‌ಜಿ.ರಾವ್ ಮಣಿಪಾಲ ವಿತರಿಸಿದರು. ಹಿರಿಯ ಲೋಕೋಪ ಯೋಗಿಗುತ್ತಿಗೆದಾರರಾದ ಬಿ.ರಾಮಕೃಷ್ಣ ಶೇರುಗಾರ ವಿವಿಧ ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ಪುರಸ್ಕಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಎಳಜಿತ್ ಗ್ರಾಮದ ಸಾಂತೇರಿಗೆ ಹೋಗುವ ಮಾರ್ಗದ ಹೊಳೆಗೆ ಸಂಪರ್ಕ ಸೇತುವೆ ನಿರ್ಮಿಸಬೇಕೆಂಬುದು ಬಹುವರ್ಷಗಳ ಬೇಡಿಕೆಯಾಗಿದ್ದು, ಜನಪ್ರತಿನಿಧಿಗಳು ಈ ಭಾಗದ ಜನರ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಇಂದು ಹೀಗೆಯೇ ಮುಂದುವರಿದರೆ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಕರ್ನಾಟಕ ಕಾರ್ಮಿಕ ವೇದಿಕೆ ಜಿಲ್ಲಾಧ್ಯಕ್ಷ, ಜೆಡಿಎಸ್ ಪ್ರಮುಖ ರವಿ ಶೆಟ್ಟಿ ಅವರ ಗಮನಕ್ಕೆ ತಂದಿದ್ದು, ಅವರ ಗ್ರಾಮಸ್ಥರೊಂದಿಗೆ ಸಮಾಲೋಚಿಸಿ ಸಮಸ್ಯೆಯನ್ನು ಒಂದು ವಾರದೊಳಕ್ಕೆ ಬಗೆಹರಿಸದಿದ್ದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ. ಈ ಭಾಗದ ಜನಕ್ಕೆ ನ್ಯಾಯ ಸಿಗುವ ತನಕ ಹೋರಾಟ ಮುಂದುವರಿಸುವುದಾಗಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಪ್ರದೀಪ್ ದೇವಾಡಿಗ ಮತ್ತು ಉಪ್ಪುಂದ ಘಟಕದ ಕೆ. ರವಿಚಂದ್ರ, ರಾಜೇಶ್ ಕಿಣಿ, ಗಜೇಂದ್ರ ಗೌಡ. ವಿಜೇಂದ್ರ ಶೆಟ್ಟಿ, ರಾಮು, ರಾಘವೇಂದ್ರ ಸುಬ್ರಮಣ್ಯ, ಚಂದ್ರು, ಪ್ರಭಾಕರ್ ಗೌಡ, ಸುಂದರ್ ಇನ್ನಿತರರು ಉಪಸ್ಥಿತರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಮಹಾಪ್ರಬಂಧಕ, ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಸಂಸ್ಥಾಪಕ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳ ಪ್ರಾಯೋಜಕ ಕೆ. ಎಸ್. ಪ್ರಕಾಶ ರಾವ್ (77) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಖಂಬದಕೋಣೆಯ ಹಿಂದಿನ ತಲೆಮಾರಿನ ಧುರೀಣ ಆರ್. ಕೆ. ಸಂಜೀವ ರಾವ್-ಸುಶೀಲಾ ರಾವ್ ದಂಪತಿಯ ಪುತ್ರರಾದ ಪ್ರಕಾಶ ರಾವ್ ಪದವಿ ಶಿಕ್ಷಣದ ಬಳಿಕ ಮುಂಬೈ ಕೆನರಾ ಬ್ಯಾಂಕ್‌ನಲ್ಲಿ ವೃತ್ತಿ ಆರಂಭಿಸಿ, ಬಳಿಕ ಸಿಂಡಿಕೇಟ್ ಬ್ಯಾಂಕ್ ಸೇರಿ ಮಣಿಪಾಲ ಧಾರವಾಡ, ನವದೆಹಲಿ, ಕೊಲ್ಕತ್ತದಲ್ಲಿ ಕೆಲಸ ಮಾಡಿದರು, ಕೊಲ್ಕತ್ತ, ನವದೆಹಲಿಯಲ್ಲಿ ವಲಯ ಪ್ರಬಂಧಕರಾಗಿ ದುಡಿದ ಬಳಿಕ ಪ್ರಧಾನ ಕಚೇರಿಯಲ್ಲಿ ಮಹಾ ಪ್ರಬಂಧಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಸಹೃದಯಿಗಳೂ, ಪರೋಪಕಾರಿಗಳೂ ಆಗಿದ್ದ ಅವರು ಸೇವಾವಧಿಯಲ್ಲಿ ಸಹೋದ್ಯೋಗಿಗಳ ಮತ್ತು ಸಾರ್ವಜನಿಕರ ಅಪಾರ ಪ್ರಶಂಸೆ ಗಳಿಸಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯಾಂಕ್ ಅಧಿಕಾರಿಗಳ ಒಕ್ಕೂಟದಲ್ಲಿ ಸಕ್ರಿಯರಾಗಿದ್ದ ಪ್ರಕಾಶ ರಾವ್ ಅದರ ರಾಜ್ಯಾಧ್ಯಕ್ಷರಾಗಿ ದುಡಿದಿದ್ದರು. ನೌಕರರ ಬಗ್ಗೆ ತೀವ್ರ ಕಾಳಜಿ…

Read More