Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕ ಹಾಗೂ ಮಹಿಳಾ ಸಂಘಟನೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ -ಉಡುಪಿ ಇವರ ನೇತೃತ್ವದಲ್ಲಿ ಕರಾವಳಿ ಮೊಗವೀರ ಮಹಾಜನ ಸಂಘ ಕೋಟ, ಎಚ್ ಕೆ. ಫ್ರೆಂಡ್ಸ್‌ಹೊಳೆಕೆರೆ -ಚಿತ್ರಪಾಡಿ, ಗಾಣಿಗ ಯುವ ಸಂಘಟನೆ ಕೋಟ, ಪಾಂಚಜನ್ಯ ಸಂಘ ಅಂಬಾಗಿಲುಕೆರೆ ಸಾಲಿಗ್ರಾಮ ರಕ್ತನಿಧಿ ಕೆ. ಎಮ್. ಸಿ. ಮಣಿಪಾಲ, ಜಿಲ್ಲಾಡಳಿತ ಉಡುಪಿ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಕರಾವಳಿ ಮೊಗವೀರ ಸಭಾಭವನ ಗುಂಡ್ಮಿ -ಸಾಲಿಗ್ರಾಮದಲ್ಲಿ ಭಾನುವಾರ  ಜರುಗಿತು. ಕಾರ್ಯಕ್ರಮದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಪ್ರವರ್ತಕರಾದ ನಾಡೋಜ ಡಾ.ಜಿ ಶಂಕರ್ ಶುಭ ಹಾರೈಸಿದರು. ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದ ಅಧ್ಯಕ್ಷರಾದ ಕಿರಣ್ ಕುಂದರ್ ಸಭಾಧ್ಯಕ್ಷತೆ ವಹಿಸಿದ್ದರು. ಕರಾವಳಿ ಮೊಗವೀರ ಮಹಾಜನ ಸಂಘದ ಡಾ.ಕೃಷ್ಣ ಕಾಂಚನ್, ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮೊ.ಯು. ಸಂಘಟನೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಜಯಂತ ಅಮೀನ್, ಮಾಜಿ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ, ಮೂಡ್ಲಕಟ್ಟೆಯ ತರಬೇತಿ ಮತ್ತು ಪ್ಲೇಸ್‌ಮೆಂಟ್ ಸೆಲ್, ಮಂಗಳೂರಿನ ಕೋಡ್‌ಲ್ಯಾಬ್ ಸಿಸ್ಟಮ್ಸ್ ಸಹಯೋಗದೊಂದಿಗೆ ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ ಆರು ದಿನಗಳ “ರಿಯಾಕ್ಟ್ ಜೆಎಸ್ ಮೂಲಕ ವೆಬ್ ಅಪ್ಲಿಕೇಶನ್ ಅಭಿವೃದ್ಧಿ” ಪ್ರಮಾಣೀಕೃತ ಪ್ರಾಯೋಗಿಕ ಕಾರ್ಯಾಗಾರವು ನಡೆಯಿತು. ತರಬೇತಿದಾರರಾದ ಕಾರ್ತಿಕ್, ಸುಜಾದ್ ಶೇಖ್ ಅಲಿ, ಮೊಹಮ್ಮದ್ ಜಝೀಲ್ ಮತ್ತು ಸ್ವಸ್ತಿಕ್ ಅವರು ಕಾರ್ಯಾಗಾರವನ್ನು ನಿರ್ವಹಿಸಿದರು. ಕಾರ್ಯಾಗಾರದಲ್ಲಿ ಅವರು ರಿಯಾಕ್ಟ್ ಜೆಎಸ್ ಮತ್ತು ಆಧುನಿಕ ವೆಬ್ ಅಪ್ಲಿಕೇಶನ್ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಆಳವಾದ ಪ್ರಾಯೋಗಿಕ ತರಬೇತಿಯನ್ನು ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಅವರ ಮಾರ್ಗದರ್ಶನದಲ್ಲಿ, ಪ್ಲೇಸ್‌ಮೆಂಟ್ ಅಧಿಕಾರಿ ಹಾಗೂ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಮುಖ್ಯಸ್ಥರಾದ ಸ್ವರ್ಣ ರಾಣಿ ಯು.ಪಿ. ಯವರ ಬೆಂಬಲದೊಂದಿಗೆ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು. ಐಎಂಜೆಐಎಸ್‌ಸಿ ಯಲ್ಲಿ ನಡೆಯುತ್ತಿರುವ ನಿರಂತರ ಪ್ಲೇಸ್‌ಮೆಂಟ್ ಸಿದ್ಧತಾ ಉಪಕ್ರಮದ ಭಾಗವಾಗಿ ತರಬೇತಿ ಮತ್ತು ಪ್ಲೇಸ್‌ಮೆಂಟ್ ಸೆಲ್, ಶೈಕ್ಷಣಿಕ ವರ್ಷದ ಆರಂಭದಿಂದಲೇ ಉದ್ಯಮ-ಆಧಾರಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಿ.ಇ.ಟಿ, ಜೆ.ಇ.ಇ., ನೀಟ್, ಪಿ.ಜಿ.ಸಿ.ಇ.ಟಿ, ಸಿ.ಎಲ್.ಎ.ಟಿ ಹಾಗೂ ಐ.ಸಿ.ಎ.ಆರ್ ಮೂಲಕ ಆಯ್ಕೆಯಾಗುವ ಅಥವಾ ನ್ಯಾಕ್ ‘ಎ’ ಗ್ರೇಡ್ ಅಥವಾ ಅದಕ್ಕಿಂತ ಹೆಚ್ಚಿನ ಮಾನ್ಯತೆ ಹೊಂದಿರುವ ಅಥವಾ ಎನ್.ಐ.ಆರ್.ಎಫ್ ಶ್ರೇಯಾಂಕದ ಅಗ್ರ 100 ಸ್ಥಾನಗಳಲ್ಲಿರುವ ಕಾಲೇಜು, ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳು ನಡೆಸುವ ಪ್ರವೇಶ ಪರೀಕ್ಷೆಗಳ ಮೂಲಕ ಆಯ್ಕೆಯಾಗುವ ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್, ಬಿ.ಇ, ಬಿ.ಟೆಕ್, ಎಂ.ಇ., ಎಂ.ಟೆಕ್, ಬಿ.ಡಿ.ಎಸ್, ಎಂ.ಡಿ.ಎಸ್, ಬಿ.ಆಯುಷ್, ಎಂ.ಆಯುಷ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಆರ್ಚ್, ಎಂ.ಆರ್ಚ್, ಬಿ.ಎಸ್ಸಿ ಅಗ್ರಿಕಲ್ಚರ್, ಅಗ್ರಿ ಕಲ್ಚರ್ ಎಂಜಿನಿಯರಿಂಗ್, ಹಾರ್ಟಿಕಲ್ಚರ್, ಡೈರಿ ಟೆಕ್ನಾಲಜಿ, ಫಾರೆಸ್ಟ್ರಿ, ವೆಟರ್ನರಿ & ಅನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್ / ಕಮ್ಯುನಿಟಿ ಸೈನ್ಸಸ್, ಫುಡ್, ನ್ಯೂಟ್ರಿಷನ್ & ಡಯಟಿಟಿಕ್ಸ್, ಅಗ್ರಿಕಲ್ಚರ್ ಇಂಜಿನಿಯರಿಂಗ್, ಬಿ.ಫಾರ್ಮಾ, ಎಂ.ಫಾರ್ಮಾ, ಫಾರ್ಮಾ ಡಿ, ಡಿ ಫಾರ್ಮಾ, ಐ.ಟಿ.ಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ, ಪಿಎಚ್‌ಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜೋಗಿ ಸಮಾಜ ಸೇವಾ ಸಂಘ ಬೈಂದೂರು ತಾಲೂಕು ಇದರ ನಾಲ್ಕನೇ ವರ್ಷದ ಮಹಾಸಭೆಯ ಕಾರ್ಯಕ್ರಮ ಭಾನುವಾರದಂದು ನಾವುಂದ ಸ್ಕಂದ ಸಭಾಭವನದ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮದೊಂದಿಗೆ ಆಚರಣೆಗೊಂಡಿದೆ. ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಮಾತನಾಡಿ, ಸಮುದಾಯದ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುವಂತೆ ಕರೆಕೊಟ್ಟು, ಸಾಧಕರನ್ನು ಸನ್ಮಾನಿಸಿ ಎಲ್ಲರಿಗೂ ಶುಭವನ್ನು ಹಾರೈಸಿದರು. ಮಾಜಿ ಶಾಸಕರಾದ ಗೋಪಾಲ ಪೂಜಾರಿ ಅವರು ಮಾತನಾಡಿ, ಸಂಘದ ಆದರ್ಶಗಳನ್ನು ಕೊಂಡಾಡಿ, ಸಮಾಜವು ಶ್ರಮಿಸುತ್ತಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಸಮಾಜದ ಹಿರಿಯ ವ್ಯಕ್ತಿಗಳನ್ನು ಗೌರವಿಸಿ ಬಹುಮಾನ ವಿತರಿಸಿದರು. ಚಂದ್ರ ಬಳೆಗಾರ ಕೊಲ್ಲೂರು ಅವರು ಮುಂದಿನ ಎರಡು ವರ್ಷಗಳವರೆಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿವೇತನ, ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವ, ಬಹುಮಾನ ವಿತರಣೆ ಮತ್ತು ಸಮಾಜ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ವೇದಿಕೆಯಲ್ಲಿ ದಯಾನಂದ ಜೋಗಿ ನಾವುಂದ, ದೇವರಾಜ ಜೋಗಿ ಬೈಂದೂರು, ಗಣೇಶ ಜೋಗಿ ಕುಂದಾಪುರ, ಟಿ.ಎಸ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ನಡೆದ ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳು ಅತ್ಯಂತ ದುರದೃಷ್ಟಕರ ಮತ್ತು ಯಾರೂ ಸಹಿಸಲಾಗದ್ದು. ಲಕ್ಷಾಂತರ ಶ್ರಮಜೀವಿ ವಿದ್ಯಾರ್ಥಿಗಳು ಈ ಲೋಪಗಳಿಂದಾಗಿ ಸಂಕಟ ಅನುಭವಿಸಿದ ಬಗ್ಗೆ ನಮಗೆ ತೀವ್ರ ನೋವು ಹಾಗೂ ಸಂವೇದನೆ ಇದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತ ಸರ್ಕಾರವು ಈಗಾಗಲೇ ಪಾರದರ್ಶಕತೆ ತರಲು ಕಠಿಣ ಕಾನೂನುಗಳು ಹಾಗೂ ಸಮಗ್ರ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಹೀಗಿರುವಾಗ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಅವರ ಹೇಳಿಕೆಯು ಕೇವಲ ಅಗ್ಗದ ಪ್ರಚಾರ ಹಾಗೂ ರಾಜಕೀಯ ಅವಕಾಶವಾದಿತನವಾಗಿದೆ ಎಂದು ಕರ್ನಾಟಕ ಬಿಜೆಪಿಯ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಹಾಗೂ ಮಾಧ್ಯಮ ವಕ್ತಾರ ರತನ್ ರಮೇಶ್ ಪೂಜಾರಿ ಟೀಕಿಸಿದ್ದಾರೆ. ಕೇಂದ್ರ ಸರಕಾರ ನಾವು ವಿದ್ಯಾರ್ಥಿಗಳ ಪರವಾಗಿ ದೃಢವಾಗಿ ನಿಲ್ಲುತ್ತೇವೆ ಮತ್ತು ಈ ಕೃತ್ಯಕ್ಕೆ ಕಾರಣರಾದವರು ಕಾನೂನಿನ ಸಂಪೂರ್ಣ ಶಿಕ್ಷೆಯನ್ನು ಎದುರಿಸಲೇಬೇಕು.ಸೋರಿಕೆಯಲ್ಲಿ ಭಾಗಿಯಾದ ತಪ್ಪಿತಸ್ಥರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ. ಉಪ್ಪುಂದ ಗ್ರಾಮದ ಹೊಳೆಬಾಗಿಲು ಬೈಲುಮನೆಯ ಮಾಚ ದೇವಾಡಿಗ ಎಂಬುವವರು ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ತೀರಾ ಎಡಕ್ಕೆ ಚಲಾಯಿಸಿದ್ದರಿಂದ ರಸ್ತೆ ಬದಿಯ ಪುಟ್‌ಪಾತಿಗೆಗೆ ಡಿಕ್ಕಿಯಾಗಿ, ನಂತರ ಅಲ್ಲೇ ಮುಂದೆ ರಸ್ತೆ ದಾಟಲು ನಿಂತಿದ್ದ ಮಾಚ ದೇವಾಡಿಗರಿಗೆ ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯ ರಭಸಕ್ಕೆ ಮಾಚ ಅವರು ಸ್ವಲ್ಪ ದೂರಕ್ಕೆ ರಸ್ತೆಗೆ ಎಸೆಯಲ್ಪಟ್ಟು ರಸ್ತೆಯ ಮೇಲೆ ಕವಚಿ ಬಿದ್ದಿದ್ದು, ಪರಿಣಾಮ ಅವರ ಮುಖಕ್ಕೆ ಹಾಗೂ ದೇಹದ ಇತರ ಭಾಗಗಳಿಗೆ ಗಂಬೀರ ಗಾಯವಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಾಚ ದೇವಾಡಿಗ ಅವರು ಸ್ವಸಹಾಯ ಸಂಘದ ಹಣವನ್ನು ಕಟ್ಟಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳೀಯರು ತಕ್ಷಣದ ಸ್ಪಂದಿಸಿ ಮೃತದೇಹವನ್ನು ಸಾಗಿಸುವ ವ್ಯವಸ್ಥೆ ಮಾಡಿದರು. ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಆಫಘಾತದ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿಪ್ರ ಮಹಿಳಾ ಸಾಲಿಗ್ರಾಮ ವಲಯದ ವತಿಯಿಂದ ಗಮ್ಮತ್ತಿನ ಆಷಾಢ’ ಆಡಿ ಚುರ್ಕಾಪ ನೆನ್ಪ್ ಹೊತ್ಕಾಹೋಪ ಎಂಬ ಕಾರ್ಯಕ್ರಮವನ್ನು ಭಾನುವಾರ ಅನಘಾಮೃತ ಗೃಹದಲ್ಲಿ ಆಯೋಜಿಸಲಾಗಿದೆ. ಈ ವಿಶೇಷ ಸೌಹಾರ್ದ ಕೂಟವು ಕುಂದಾಪ್ರ ಭಾಷಿ ಬದ್ಕಿನ್ ಹೆಂಗ್ಸ್ರಿದ್ದಲ್ಲ್ ಮಾತ್, ಮಾತಿದ್ದಲ್ಲ್ ಖುಷಿ, ಖುಷಿಯಿದ್ದಲ್ಲ ಆರೋಗ್ಯ ಆರೋಗ್ಯಯಿದ್ದಲ್ಲ್ ನೆಮ್ಮದಿ ಎಂಬ ಗೆಡ್ಜ್, ಗೌಜ್, ಗಮ್ಮತ್ ಅಲ್ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕೊಚ್ಚಕ್ಕಿ ಕೂಳ್ ಹುರುಳಿ ಸಾರ್’ ಮುಂತಾದ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಸವಿಯೊಂದಿಗೆ, ಹೊಟ್ಟೆ ತುಂಬಾ ಉಣ್ಣುವಾ, ಬಾಯಿ ತುಂಬಾ ನಗಾಡ್ವಾ” ಎಂಬ ಸಂದೇಶದೊಂದಿಗೆ ಸಮುದಾಯವನ್ನು ಒಗ್ಗೂಡಿಸುವ ವೇದಿಕೆ ಕಲ್ಪಿಸಿತು. ಕಾರ್ಯಕ್ರಮದಲ್ಲಿ ಕ.ಸಾ.ಪ ತಾಲೂಕು ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್ ಆಷಾಢಿ ತಿಂಗಳ್ ಅದರ ಆಚಾರ ವಿಚಾರಗಳ ಬಗ್ಗೆ ಒಂದಷ್ಟು ವಿಪ್ರ ಮಹಿಳೆಯರನ್ನು ರಸವತ್ತಾಗಿ ಉಣಬಡಿಸಿದರು. ಗ್ರಾಮೀಣ ಕ್ರೀಡೆಗಳು,ತಿಂಡಿ ತಿನಿಸುಗಳು ವಿಶೇಷವಾಗಿ ಗಮನ ಸೆಳೆದವು. ಕ್ರೀಡೆಯಲ್ಲಿ ವಿಜೇತರಾದರಿಗೆ ಬಹುಮಾನವನ್ನು ವಿತರಿಸಲಾಯಿತು.ಸಾಂಸ್ಕೃತಿಕ ಕಾರ್ಯಕ್ರಮ ಗ್ರಾಮ್ಯ ಪ್ರಹಸನಗಳು, ಹಿಂದಿನ ಕಾಲದ ಪರಂಪರೆಗಳನ್ನು ವಿಪ್ರ ಮಹಿಳೆಯರಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾದೀವಿಗೆ ಯೋಜನೆಗಳ ಸಂಚಾಲಕರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ. ಉಪ್ಪುಂದ ಜೆಸಿಐ ಸಂಸ್ಥೆಯ ಅಧ್ಯಕ್ಷರಾಗಿ, ಬೈಂದೂರು ರೋಟರಿ ಸಂಸ್ಥೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಇವರು ಬೈಂದೂರು ಉತ್ಸವ, ಕುಂದಾಪುರ ಕನ್ನಡ ಪ್ರತಿಷ್ಠಾನ ಮೊದಲಾದ ಕಾರ್ಯಕ್ರಮಗಳ ಸಂಯೋಜಕರಾಗಿಯೂ ಕೆಲಸ ಮಾಡಿದ್ದಾರೆ. ಪ್ರಸ್ತುತ ಬೈಂದೂರು ಬಂಟರ ಯಾನೆ ನಾಡವರ ಸಂಘದ ಯುವ ವೇದಿಕೆಯ ಸಂಚಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜುಲೈ 31 ಕಡೆಯ ದಿನ:2026ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 95% ಕ್ಕಿಂತ ಅಧಿಕ ಅಂಕ ಪಡೆದ ಬಂಟ ಸಮುದಾಯದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಯೋಜನೆಗೆ ಹಾಗೂ 60%ಕ್ಕಿಂತ ಅಧಿಕ ಅಂಕ ಪಡೆದ ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ವಿದ್ಯಾದೀವಿಗೆ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 31 ಆಗಿರುತ್ತದೆ ಎಂಬುದಾಗಿ ಸಂಘದ ಅಧ್ಯಕ್ಷ ನಿತೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಮೂಡುಬಿದಿರೆ: ‘ಆಳ್ವಾಸ್ ಪ್ರಗತಿ’ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಅತಿದೊಡ್ಡ ಉಚಿತ ಬೃಹತ್ ಉದ್ಯೋಗ ಮೇಳವಾಗಿದ್ದು, ಕಳೆದ ಎರಡು ದಶಕಗಳಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಅಭೂತಪೂರ್ವ ಉದ್ಯೋಗ ಅಭಿಯಾನವನ್ನು ನಿರಂತರವಾಗಿ ಆಯೋಜಿಸುತ್ತಿದೆ. ಇದೀಗ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ 2026’ ಆಗಸ್ಟ್ 7 ಮತ್ತು 8 ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್‌ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಹೇಳಿದರು. ಅವರು ಸೋಮವಾರ ಕುಂದಾಪುರದ ಪ್ರಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 2007ರಲ್ಲಿ ಆರಂಭಗೊಂಡ ‘ಆಳ್ವಾಸ್ ಪ್ರಗತಿ’ ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಉದ್ಯಮ ಸಂಸ್ಥೆಗಳು ಮತ್ತು ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ರಾಜ್ಯದ ಅತ್ಯಂತ ವಿಶ್ವಾಸಾರ್ಹ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಾಮಾಜಿಕ ಹೊಣೆಗಾರಿಕೆ ಉಪಕ್ರಮದ ಭಾಗವಾಗಿ ಈ ಬೃಹತ್ ಉದ್ಯೋಗ ಮೇಳವನ್ನು ಸಂಪೂರ್ಣ ಉಚಿತವಾಗಿ ಆಯೋಜಿಸಲಾಗುತ್ತಿದ್ದು, ವಿಶೇಷವಾಗಿ ಗ್ರಾಮೀಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಇ-ಕಾಮರ್ಸ್ ಆಹಾರ ವಿತರಣಾ ಸಂಸ್ಥೆಗಳಾದ ಸ್ವಿಗ್ಗಿ ಹಾಗೂ ಝೊಮ್ಯಾಟೊ ವಿಧಿಸುತ್ತಿರುವ ಅತಿಯಾದ ಕಮಿಷನ್, ಅಸಮರ್ಪಕ ಪಾವತಿ ವ್ಯವಸ್ಥೆ ಹಾಗೂ ಪೂರ್ವ ಮಾಹಿತಿ ನೀಡದೆ ಏಕಾಏಕಿ ಪಾವತಿಯಲ್ಲಿ ಕಡಿತ ಮಾಡುತ್ತಿರುವ ಕ್ರಮದಿಂದ ಹೋಟೆಲ್ ಉದ್ಯಮಿಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯಿಂದ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ, ಇ-ಕಾಮರ್ಸ್ ಸೇವೆಗಳ ಮೂಲಕ ಆಹಾರವನ್ನು ಆರ್ಡರ್ ಮಾಡುವ ಗ್ರಾಹಕರ ಮೇಲೆಯೂ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ. ಈ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕ್ರಮಗಳನ್ನು ರೂಪಿಸುವ ಉದ್ದೇಶದಿಂದ ಬೆಂಗಳೂರು ಹೋಟೆಲ್ ಉದ್ಯಮಿಗಳ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯು ರಾಜಾಜಿನಗರದ ಸ್ವಾತಿ ಹೋಟೆಲ್‌ನಲ್ಲಿ ನಡೆಯಲಿದ್ದು, ಹೋಟೆಲ್ ಉದ್ಯಮಿಗಳು, ಹಿತೈಷಿಗಳು ಹಾಗೂ ಸಂಬಂಧಿತ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೊಟೇಲ್ ಉದ್ಯಮಿಗಳಾದ ನವೀನ್ ಶೆಟ್ಟಿ ಐರ್‌ಬೈಲು, ಅಜಿತ್ ಶೆಟ್ಟಿ ಕಿರಾಡಿ ಹಾಗೂ ಹರೀಶ್ ಶೆಟ್ಟಿ ಅರೆಶಿರೂರು ಮನವಿ ಮಾಡಿದ್ದಾರೆ.

Read More