ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತನ್ನ ಮಗಳ ಮದುವೆ ಮಾಡಿಕೊಡಲು ನಿರಾಕರಿಸಿದ ತಾಯಿಗೆ ಹಲ್ಲೆ ನಡೆಸಿದ ಘಟನೆ ಕುಂದಾಪುರದ ದತ್ತಾತ್ರೇಯ ಅಪಾರ್ಟ್ಮೆಂಟ್ನಲ್ಲಿ ವರದಿಯಾಗಿದೆ. ಅಪಾರ್ಟ್ಮೆಂಟ್ ನಿವಾಸಿ ನಿತಿನ್ (28) ಹಲ್ಲೆ ನಡೆಸಿದ ಯುವಕ. ಸುಜಾತ ಗಾಣಿಗ (42) ಹಲ್ಲೆಗೆ ಒಳಗಾದ ಮಹಿಳೆ. ಕುಂದಾಪುರದ ಕಾರ್ಯಕ್ರಮವೊಂದಕ್ಕೆ ಮಗಳೊಂದಿಗೆ ತೆರಳಿದ್ದ ಸುಜಾತ, ತಾವು ವಾಸವಿದ್ದ ಅಪಾರ್ಟ್ಮೆಂಟ್ಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ಲಿಫ್ಟ್ ಮೂಲಕ ತೆರಳುತ್ತಿದ್ದ ವೇಳೆ ಏಕಾಏಕಿ ತಾಯಿ ಮತ್ತು ಮಗಳ ಹೊರಗೆಳೆದು ಥಳಿಸಿದ ಯುವಕ, ಮಹಿಳೆಗೆ ಹಲ್ಲೆಗೈದು ಆಸಿಡ್ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮಹಿಳೆಯ ತಲೆ, ಮುಖ, ಹೊಟ್ಟೆಯ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸುಜಾತಾ ಗಾಣಿಗ ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಆಕೆಯ ಮಗ ಮಣಿಪಾಲದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಮನೆಯಲ್ಲಿ ಸುಜಾತಾ ಗಾಣಿಗ ಹಾಗೂ ಆಕೆಯ ಮಗಳು ಇಬ್ಬರೇ ವಾಸಿಸುತ್ತಿದ್ದಾರೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಪ್ರದೇಶವಾದ ಬೈಂದೂರಿನಲ್ಲಿ ಹವ್ಯಾಸಿ ಕಲಾವಿದರ ಕೂಡುವಿಕೆಯಿಂದ ಆರಂಭಗೊಂಡ ಲಾವಣ್ಯ ಬೈಂದೂರು ಕಲಾ ಸಂಸ್ಥೆಯ 40ನೇ ವರ್ಷದ ಸಂಭ್ರಮದಲ್ಲಿದ್ದು, ಜನವರಿ 27ರಿಂದ ಫೆಬ್ರವರಿ 5ರ ವರೆಗೆ ರಂಗ ಲಾವಣ್ಯ 2017 – ಕಲಾಮಹೋತ್ಸವ ಹತ್ತು ದಿನಗಳ ಕಾರ್ಯಕ್ರಮ ಬೈಂದೂರಿನ ಶಾರದಾ ವೇದಿಕೆಯಲ್ಲಿ ಜರುಗಲಿದೆ. ಬೈಂದೂರಿನ ಲಾವಣ್ಯ ರಂಗಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಲಾವಣ್ಯ ಬೈಂದೂರು ಅಧ್ಯಕ್ಷ ಗಿರೀಶ್ ಬೈಂದೂರು ಮಾಹಿತಿ ನೀಡಿದರು. ಲಾವಣ್ಯ ಸಂಸ್ಥೆಯಲ್ಲಿ ಈವರೆಗೆ 80ಕ್ಕೂ ಅಧಿಕ ನಾಟಕ ರಚನೆಗೊಂಡು 800ಕ್ಕೂ ಅಧಿಕ ಪ್ರದರ್ಶನ ಕಂಡಿದೆ. ಖ್ಯಾತ ರಂಗ ನಿರ್ದೇಶಕರಾದ ಸೀತಾರಾಮ್ ಶೆಟ್ಟಿ ಕೂರಾಡಿ, ಸುರೇಶ್ ಆನಗಳ್ಳಿ, ರಾಜೇಂದ್ರ ಕಾರಂತ ಸೇರಿದಂತೆ ಹಲವು ಖ್ಯಾತನಾಮರಿಂದ ನಾಟಕ ನಿರ್ದೇಶನ, ರಾಜ್ಯ ಮಟ್ಟದ 23 ನಾಟಕ ಸ್ವರ್ಧೆಗಳಲ್ಲಿ ಭಾಗವಹಿಸಿ 125ಕ್ಕೂ ಹೆಚ್ಚು ಬಹುಮಾನ, ಹಲವು ನಾಟಕೋತ್ಸವ, ನಾಟಕ ಸ್ವರ್ಧೆ, ಮಕ್ಕಳ ನಾಟಕ ಪ್ರಸ್ತುತಿ, ರಂಗ ತರಬೇತಿ ಮುಂತಾದವುಗಳೊಂದಿಗೆ ಸಾಮಾಜಿಕ ಕಾರ್ಯದಲ್ಲಿಯೂ ಸಂಸ್ಥೆ ತೊಡಗಿಕೊಂಡಿದ್ದು ಬೈಂದೂರಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜು ಪುರುಷರು ಹಾಗೂ ಆಳ್ವಾಸ್ ಮೂಡುಬಿದಿರೆ ಮಹಿಳಾ ತಂಡಗಳು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಸಾಫ್ಟ್ಬಾಲ್ ಪಂದ್ಯಾವಳಿಯ ಪ್ರಶಸ್ತಿ ಮುಡಿಗೇರಿಸಿಕೊಂಡಿವೆ. ಪುರುಷರ ವಿಭಾಗದಲ್ಲಿ ಆತಿಥೇಯ ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ದ್ವಿತೀಯ, ಗೋವಿಂದದಾಸ್ ಕಾಲೇಜು ಸುರತ್ಕಲ್ ತೃತೀಯ ಸ್ಥಾನ ಪಡೆದವು. ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ದೈಹಿಕ ಶಿಕ್ಷಣ ಕೇಂದ್ರ ತಂಡ ದ್ವಿತೀಯ, ಎಸ್ಡಿಎಂ ಉಜಿರೆ ಕಾಲೇಜು ತಂಡ ತೃತೀಯ ಸ್ಥಾನ ಪಡೆದವು. ಆಳ್ವಾಸ್ ಮೂಡುಬಿದಿರೆಯ ಶಾಂಭವಿ ಉತ್ತಮ ಎಸೆತಗಾರ್ತಿ, ಸೈಂಟ್ ಅಲೋಶಿಯಸ್ ಕಾಲೇಜಿನ ಹಾರೀಸ್ ಉತ್ತಮ ಎಸೆತಗಾರ, ಆಳ್ವಾಸ್ ಮೂಡುಬಿದಿರೆಯ ಸುಪ್ರಿಯಾ ಉತ್ತಮ ಹಿಡಿತಗಾರ್ತಿ ಮತ್ತು ಬಿ.ಬಿ. ಹೆಗ್ಡೆ ಕಾಲೇಜಿನ ಅಮಿತ್ ಉತ್ತಮ ಹಿಡಿತಗಾರ ವೈಯಕ್ತಿಕ ಪ್ರಶಸ್ತಿ ಪಡೆದರು. ವಿಜೇತರಿಗೆ ಶಾಶ್ವತ ಫಲಕ, ಬಿ.ಎಂ. ಸುಕುಮಾರ ಶೆಟ್ಟಿ ರೋಲಿಂಗ್ ಶೀಲ್ಡ್ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಮೇಲ್ಗಂಗೊಳ್ಳಿ ಶ್ರೀ ಬಸವೇಶ್ವರ ದೇವಸ್ಥಾನದ ಬಳಿ ನೂತನವಾಗಿ ನಿರ್ಮಿಸಲಾಗಿರುವ ಸುಮಾರು ೭ ಅಡಿ ಎತ್ತರದ ಕುಳಿತ ಭಂಗಿಯ ಶಿರಡಿ ಶ್ರೀ ಸಾಯಿಬಾಬಾ ಮೂರ್ತಿ ಅನಾವರಣ ಮತ್ತು ಶ್ರೀ ಸಾಯಿಬಾಬಾ ಮಂದಿರದ ಉದ್ಘಾಟನಾ ಕಾರ್ಯಕ್ರಮ ಶನಿವಾರ ಜರಗಿತು. ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವಾನಂದ ಪೂಜಾರಿ ಅವರು ಮೂರ್ತಿಯನ್ನು ಅನಾವರಣಗೊಳಿಸಿ ಮಾತನಾಡಿ, ಸಾಯಿಬಾಬಾ ಪವಾಡಗಳನ್ನು ವರ್ಣಿಸಲು ಸಾಧ್ಯವಿಲ್ಲ. ಯಾವುದೇ ಜಾತಿ ಮತ ಬೇಧವಿಲ್ಲದೆ ಎಲ್ಲರನ್ನೂ ಒಂದಾಗಿ ಕಾಣುವ ಮೂಲಕ ಅವರ ಅನೇಕ ಸಂಕಷ್ಟಗಳನ್ನು ಪರಿಹರಿಸಿದ ಪವಾಡ ಪುರುಷರು ಶ್ರೀ ಸಾಯಿಬಾಬಾ. ಭಕ್ತರ ಅಪೇಕ್ಷೆಯಂತೆ ಸಾಯಿ ಬಾಬಾರ ವಿಗ್ರಹವನ್ನು ಇಂತಹ ಪುಣ್ಯಸ್ಥಳದಲ್ಲಿ ಪ್ರತಿಷ್ಠಾಪಿಸಿರುವುದು ಈ ಪರಿಸರದ ಜನರ ಸೌಭಾಗ್ಯ ಎಂದರು. ಶ್ರೀ ಸಾಯಿಬಾಬಾ ಮಂದಿರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗುಟ್ಟು ಎದುರಾದಾಗ ನಡೆದ ಪವಾಡದಿಂದ ಪ್ರೇರಣೆ ಪಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ 154ನೇ ಜನ್ಮದಿನದ ಅಂಗವಾಗಿ ಬೈಂದೂರಿನಲ್ಲಿ ಜ.28ರಂದು ನಡೆಯುವ ವಿವೇಕ ಪರ್ವ ಕಾರ್ಯಕ್ರಮದಲ್ಲಿ ಹದಿನೈದು ಸಾವಿರಕ್ಕೂ ಮಿಕ್ಕಿ ಜನರು ಸೇರುವ ನಿರೀಕ್ಷೆಯಿದ್ದು ಕಾರ್ಯಕರ್ತರು ತಮ್ಮ ಜವಾಬ್ದಾರಿಯನ್ನು ಎಚ್ಚರಿಕೆಯಿಂದ ನಿಭಾಯಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಾ ಸಂಘದ ಪ್ರಮುಖ ಗೋಪಾಲಕೃಷ್ಣ ಶಿರೂರು ಹೇಳಿದರು. ಅವರು ಬೈಂದೂರು ಸೀತಾರಾಮಚಂದ್ರ ದೇವಸ್ಥಾನದ ಸಭಾಭವನದಲ್ಲಿ ಜರುಗಿದ ಸಮರ್ಥ ಭಾರತ ಬೈಂದೂರು ಸಂಘಟನೆಯ ಪೂರ್ವಭಾರಿ ಸಭೆ ಹಾಗೂ ಬೈಠಕ್ನಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಬೈಂದೂರಿನ ಗಾಂಧಿಮೈದಾನದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಸಂಘಚಾಲಕ ಡಾ. ವಾಮನ ಶೆಣೈ ಉಪಸ್ಥಿತರಿರಲಿದ್ದು, ನಟ ಉಪೇಂದ್ರ ಅತಿಥಿಯಾಗಿ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮುಖ್ಯ ಭಾಷಣಕಾರರಾಗಿ ಉಪಸ್ಥಿತರಿರಲಿದ್ದಾರೆ. ಯಡ್ತರೆಯಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಕಾರ್ಯಕ್ರಮಕ್ಕೆ ದೂರದಿಂದ ಆಗಮಿಸುವವರಿಗೆ ವಾಹನದ ವ್ಯವಸ್ಥೆ ಮುಂತಾದ ಪೂರಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದವರು ವಿವರಿಸಿದರು. ಸಮರ್ಥ ಭಾರತದ ಕಾರ್ಯಕರ್ತರಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ ೧೫೪ನೇ ಜನ್ಮದಿನದ ಅಂಗವಾಗಿ ಬೈಂದೂರಿನಲ್ಲಿ ಜ.೨೮ರಂದು ನಡೆಯುವ ವಿವೇಕ ಪರ್ವ ಕಾರ್ಯಕ್ರಮದ ಪೂರ್ವಭಾವಿ ಸಭೆ ಕಿರಿಮಂಜೇಶ್ವರದ ಗಂಗೆಬೈಲುವಿನಲ್ಲಿ ಜರುಗಿತು. ಸಮರ್ಥ ಭಾರತ ಬೈಂದೂರು ಘಟಕದ ಸಂಚಾಲಕ ಶ್ರೀಧರ ಬಿಜೂರು ವಿವರಿಸಿದರು. ಪ್ರತಿನಿಧಿ ಕೃಷ್ಣ ಕೊಡೇರಿ ಉಪಸ್ಥಿತರಿದ್ದರು. ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿ ಸೌಮ್ಯ ಹೇರಿಕುದ್ರು ಅವರ ’ಜ್ನಾನ ಮೀಮಾಂಸೆಯ ಆಧುನಿಕ ಜಿಜ್ನಾಸೆ: ತೇಜಸ್ವಿ ಕಥನದ ಹಿನ್ನೆಲೆಯಲ್ಲಿ’ ಎಂಬ ಸಂಶೋಧನಾ ಮಹಾಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿದೆ. ಮಂಗಳಗಂಗೋತ್ರಿ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಬಿ. ಶಿವರಾಮ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಅವರು ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದರು. ಸೌಮ್ಯ ಹೇರಿಕುದ್ರು ಅವರು ನಿವೃತ್ತ ಮುಖ್ಯೋಪಾಧ್ಯಾಯರಾದ ಪಡುವರಿ ಮಂಜಯ್ಯ ಶೆಟ್ಟಿ ಮತ್ತು ಸುಮತಿಯವರ ಪುತ್ರಿಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 94ಸಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡದೇ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರ ಹಾಗೂ ತಾಲೂಕು ಅಧಿಕಾರಿಗಳ ನಡೆಯನ್ನು ಖಂಡಿಸಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಇಲ್ಲಿನ ತಾಲೂಕು ಪಂಚಾಯತ್ ಎದುರು ಬೃಹತ್ ಸಾರ್ವಜನಿಕ ಸಭೆ ಹಾಗೂ ಕುಂದಾಪುರ ಶಾಸ್ತ್ರೀ ವೃತ್ತದಿಂದ ಪ್ರತಿಭಟನಾ ಮೆರವಣಿಗೆ, ವಿಧಾನಸೌಧ ಮುತ್ತಿಗೆಗೆ ಯತ್ನ ನಡೆಯಿತು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಕಳೆದ ತಿಂಗಳು ಮಿನಿ ವಿಧಾನಸೌಧದ ಎದುರು ಧರಣಿ ನಡೆಸಿದಾಗ ಹಕ್ಕುಪತ್ರ ವಿತರಣೆ ಮಾಡುತ್ತೇವೆ ಎಂಬ ಭರವಸೆ ನೀಡಿದ್ದರೂ ಈವರೆಗೆ ಒಂದೇ ಒಂದು ಹಕ್ಕುಪತ್ರ ವಿತರಣೆಯಾಗಿಲ್ಲ. ಮಿನಿ ವಿಧಾನಸೌಧ ಬಡವರ ಪಾಲಿಗೆ ದುರಂತ ಕೇಂದ್ರವಾಗಿ ಪರಿವರ್ತನೆಗೊಳ್ಳುತ್ತಿದೆ. ಬಡವರ ಹಕ್ಕುಪತ್ರ ವಿತರಣೆ ಬಗ್ಗೆ ಕಂದಾಯ ಇಲಾಖೆ, ರಾಜ್ಯ ಸರಕಾರ ನಿರ್ಲಕ್ಷ ವಹಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುಮಾರು 1700 ಅರ್ಜಿಗಳನ್ನು ತಾಲೂಕಿನಲ್ಲಿ ವಿಲೇವಾರಿ ಮಾಡಬಹುದು. ಆದರೆ ಇದರಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಶಕ್ತಿ ರಾಷ್ಟ್ರದ ಶಕ್ತಿ. ಯುವಕರಲ್ಲಿ ಅಗಾಧ ಪ್ರತಿಭೆಯಿದ್ದು, ತಮ್ಮ ಪ್ರತಿಭೆಯನ್ನು ಸಮಾಜದ ಅಭ್ಯುದಯಕ್ಕೆ ಬಳಸಿಕೊಳ್ಳಲು ಬದ್ಧತೆ ತೋರಿಸಬೇಕು. ಸಮಾಜದಲ್ಲಿ ಪ್ರತಿಯೊಬ್ಬರು ಸ್ವಾರ್ಥ ದ್ವೇಷ ಮರೆತು ಸತ್ಪ್ರಜೆಗಳಾಗಿ ಬದುಕಬೇಕಿದೆ. ಭಾರತದ ಶ್ರೇಷ್ಠತೆ, ಸನಾತನ ಧರ್ಮದ ಔಚಿತ್ಯವನ್ನು ಜಗತ್ತಿಗೆ ತೋರಿಸುವ ಸಲುವಾಗಿ ನಾವೆಲ್ಲ ಆದರ್ಶ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಜೇಸಿಸ್ನ ವಲಯ ೧೫ರ ಪೂರ್ವ ವಲಯಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆದ ಜೇಸಿಐ ಕುಂದಾಪುರ ಸಿಟಿಯ ಪದಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಅಂತರಾಷ್ಟ್ರೀಯ ಖ್ಯಾತೀಯ ಜಾದೂಗಾರ ಓಂಗಣೇಶ್ ಮಾತನಾಡಿ ಜೇಸಿಯಂತಹ ಘಟಕಗಳು ತಾಲೂಕು ಮಟ್ಟದಲ್ಲಿ ಹೆಚ್ಚು ಕ್ರಿಯಾಯೋಜನೆಗಳಲ್ಲಿ ಕ್ರಿಯಾತ್ಮಕವಾಗಿ ಸಮಾಜಮುಖಿ ಕಾರ್ಯಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಜೊತೆಗೆ ಯುವಕರಿಗೆ ಹೆಚ್ಚಿನ ತರಬೇತಿ, ಮಾರ್ಗದರ್ಶನವನ್ನು ನೀಡಬೇಕು ಎಂದರು. ಜೇಸಿ ವಲಯ೧೫ರ ಉಪಾಧ್ಯಕ್ಷೆ ಸೌಮ್ಯ ರಾಕೇಶ್ ನೂತನ ಸದಸ್ಯರಿಗೆ ಪ್ರಮಾಣ ವಚನ ಭೋಧಿಸಿ, ಜೇಸಿಐ ಕುಂದಾಪುರ ಸಿಟಿಯ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿದರು. ವೇದಿಕೆಯಲ್ಲಿ ಭಾರತೀಯ ಜೇಸಿಸ್ನ ಪೂರ್ವ ವಲಯಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುತ್ ರೆಡ್ ಕ್ರಾಸ್ ವಿಭಾಗ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಘಟಕಗಳ ಸಹಯೋಗದಲ್ಲಿ ಹದಿಹರೆಯದ ಹೆಣ್ಣುಮಕ್ಕಳ ಸಮಸ್ಯೆಗಳು ಕುರಿತು ಕುಂದಾಪುರದ ಮನೀಶ್ ಆಸ್ಪತ್ರೆಯ ಪ್ರಸೂತಿ ಮೆತ್ತು ಸ್ತ್ರೀರೋಗ ತಜ್ನೆ ಡಾ.ಪ್ರಮೀಯಾ ನಾಯಕ್ ಮಾತನಾಡಿದರು. ಆಧ್ಯಾತ್ಮ ಮತ್ತು ನೈತಿಕ ಶಿಕ್ಷಣದ ಮಹತ್ವವು ಹದಿಹರೆಯದ ಸಮಸ್ಯೆಗಳ ನೀಗಿಸುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.ಏಕೆಂದರೆ ಜೀವನದ ಗುರಿ ಮತ್ತು ಅದನ್ನು ತಲುಪುವಲ್ಲಿ ನಿರ್ಧಾರಗಳು ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಅವಲಂಬಿಸಿದೆ. ಕಠಿಣ ಪರಿಶ್ರಮ, ಸಾಧಿಸುವ ಛಲ, ದೇವರಲ್ಲಿ ನಂಬಿಕೆ ಸಮಾಜದಲ್ಲಿ ಹೆಣ್ಣಿನ ಪಾತ್ರವನ್ನು ಕುರಿತು ಹೇಳಿದರು. ಅಲ್ಲದೇ ಹದಿಹರೆಯದ ಸಮಸ್ಯೆಗಳಾದ ಖಿನ್ನತೆ, ಮತ್ತು ಅದಕ್ಕೆ ಪರಿಹಾರ, ಸರಳ ಜೀವನಕ್ರಮ, ಋತುಸ್ರಾವದ ಸಮಸ್ಯೆಗಳು ಅದಕ್ಕೆ ಕಾರಣಗಳು ಮತ್ತು ವಿದ್ಯಾರ್ಥಿಗಳ ಆರೋಗ್ಯಕ್ರಮದ ಕುರಿತು ಹೇಳಿದರು. ಈ ಸಂದರ್ಭದಲ್ಲಿ ಭಾರತೀಯ ಯುತ್ ರೆಡ್ ಕ್ರಾಸ್ ಕುಂದಾಪುರ ಘಟಕದ ಮುತ್ತಯ್ಯ ಶೆಟ್ಟಿ, ಕಾಲೇಜಿನಲ್ಲಿ ಯುತ್ ರೆಡ್ ಕ್ರಾಸ್ ಘಟಕದ…
