Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರಿಕೆಟ್ ಜೊತೆ ಗ್ರಾಮೀಣ ಭಾಗದ ಕ್ರೀಡೆ ಹಾಗೂ ಜಾನಪದ ಕ್ರೀಡೆಗೆ ಹೆಚ್ಚಿನ ಆಧ್ಯತೆ ನೀಡಬೇಕು. ಕ್ರೀಡೆ ಸಹೋದರತೆ, ಭಾತೃತ್ವ, ಸಮಾನತೆ ಹಾಗೂ ಬಾಂಧವ್ಯ ವೃದ್ಧಿಸುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳ ಮೂಲಕ ಸೌಹಾರ್ಧ ಸಮ್ಮವರ್ಧನೆ ಸಾಧ್ಯ. ದೈಹಿಕ ಕ್ಷಮತೆ ಜೊತೆ ಕೌಶಲ್ಯ ವೃದ್ಧಿಗೂ ಕಾರಣವಾಗುತ್ತದೆ ಎಂದು ಉದ್ಯಮಿ ಹರ್ಕೂರು ಕಟ್ಟಿನಮಕ್ಕಿ ಚಿತ್ತರಂಜನ್ ಹೆಗ್ಡೆ ಅಭಿಪ್ರಾತ ಪಟ್ಟಿದ್ದಾರೆ. ಮುಳ್ಳಿಕಟ್ಟೆ ಅಂಬಾ ಕ್ರಿಕೆಟರ್ರ‍್ಸ್ ಆಶ್ರಯದಲ್ಲಿ ಹೊಸಾಡು ಮುಳ್ಳಿಕಟ್ಟೆಯಲ್ಲಿ ಎರಡು ದಿನ ನಡೆಯುವ ಹತ್ತೊಂಬತ್ತನೇ ವರ್ಷದ ಅಂಬಾ ಟ್ರೋಪಿ-೨೦೧೭ ಉದ್ಘಾಟಿಸಿ ಮಾತನಾಡುತ್ತಿದ್ದರು. ಯಾವುದೇ ಆಟೋಟಕಗಳ ಆರಂಭಿಸುವುದು ಸುಲಭವಾದರೆ, ಅದನ್ನು ಮುಂದುವರಿಸಿಕೊಂಡು ಹೋಗುವುದು ಕಷ್ಟದ ಕೆಲಸ. ಆದರೆ ಅಂಬಾ ಕ್ರಿಕೆಟರ್ರ‍್ಸ್ ೩೦ಗಜಗಳ ಆಂಡರ್ ಆರ್ಮ್ ಸೀಮಿತ ಓವರ್ ಕ್ರಿಕೆಟ್ ಪಂದ್ಯ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಗ್ರಾಮ ಭಾಗದಲ್ಲಿ ಪಂದ್ಯ ನಡೆಯುವುದರಿಂದ ಸ್ಥಳೀಯ ಆಟಗಾರರಿಗೆ ಉತ್ತೇಜನ ನೀಡುವ ಜೊತೆ, ಪರಿಸರದ ಜನರಿಗೆ ಮನೋರಂಜನೆ ಒದಗಿಸಿದಂತೆಯೂ ಆಗುತ್ತದೆ ಎಂದು ಬಣ್ಣಿಸಿದರು. ಅಂಬಾ ಟ್ರೋಪಿ ಸಂಯೋಜಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತ್ರಿಮಧುರ – ಗಾನ – ನೃತ್ಯ – ಅಭಿನಯದ ಸಮ್ಮಿಲನ – ಸಾಧನ ಕಲಾ ಸಂಗಮ ರಿ, ಕುಂದಾಪುರ ಪ್ರಸ್ತುತಪಡಿಸಿದ ಈ ಕಾರ್ಯಕ್ರಮವು ರೋ| ಲಕ್ಷ್ಮಿ ನರಸಿಂಹ ಕಲಾಮಂದಿರ, ಬೋರ್ಡ ಹ್ಯಸ್ಕೂಲ್, ಕುಂದಾಪುರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ೨೦೧೫- ೨೦೧೬ರ ಸಾಲಿನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಹಿನ್ನೆಲೆ ಗಾಯಕಿ ಕೆ. ಎಸ್. ಸುರೇಖಾ ಅವರು ಉದ್ಘಾಟಿಸಿ ಮಾತನಾಡಿ ಲಲಿತ ಕಲೆಗಳ ಮೂಲಕ ಯುವ ಪ್ರತಿಭೆಗಳಿಗೆ ಬೆಳಗಲು ಅವಕಾಶ ಮಾಡಿಕೊಡುತ್ತಿರುವ ಸಾಧನ ಕಲಾ ಸಂಗಮವನ್ನು ಅಭಿನಂದಿಸಿದರು. ನಿರಂತರ ಪ್ರಯತ್ನದಿಂದಷ್ಟೆ ಕಲೆಯಲ್ಲಿ ದೊಡ್ಡ ಸಾಧನೆ ಮಾಡಬಹುದು, ಅಂತಃವರಿಗೆ ಮಾರ್ಗದರ್ಶಕರಾಗಲು ಅನುದಿನವು ನಾವಿದ್ದವೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿದ್ವಾನ್ ಕೆ. ವಿ. ರಮಣ, ಕುಂದಗನ್ನಡದ ನಟರಾದ ಓಂ ಗುರು, ವಿಜಯ ಹಾಗು ಕ್ಷೇತ್ರ ಸಂಪ್ನಮೂಲ ವ್ಯಕ್ತಿಗಳಾದ ಸದಾನಂದ ಬೈಂದೂರು ಉಪಸ್ಥಿತರಿದ್ದರು. ಸಂಸ್ಥೆಯ ರೂವಾರಿ ನಾರಾಯಣ ಐತಾಳ್ ಸ್ವಾಗತಿಸಿದರು, ಸುಧೀಂದ್ರ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೈತರು ಬೆಳೆ ಉತ್ಪನ್ನಗಳಿಗೆ ನೇರೆ ಮಾರುಕಟ್ಟೆ ವ್ಯವಸ್ಥೆ, ನಿರ್ದಿಷ್ಟ ಬೆಲೆ ನೀಡುವ ಬಗ್ಗೆ ಸಕರಾರಕ್ಕೆ ಅಸಕ್ತಿ ಇಲ್ಲ. ಸಾಲ ಮನ್ನಾ ಬಗ್ಗೆ ರಾಜ್ಯ, ಕೇಂದ್ರ ಸರಕಾರಕ್ಕೆ ಆಸಕ್ತಿಯಿಲ್ಲ. ಕೃಷಿ ಕೂಲಿ ಕಾರ್ಮಿಕರ ಕೊರೆತೆ ಸರಕಾರದ ನಿರ್ಲಕ್ಷೆಯಿಂದ ಕೃಷಿ ಭೂಮಿ ಹಡಿಲು ಬೀಳುತ್ತಿದೆ. ರೈತರು ಏಕ ಬೆಳೆಗೆ ಜೋತು ಬೀಳದೆ ಮಿಶ್ರಬೆಳೆ ಕ್ರಮ ಅನುಸರಿಸುವುದು ಉತ್ತಮ ಎಂದು ಮಾಜಿ ಶಾಸಕ ಬಿ,ಅಪ್ಪಣ್ಣ ಹೆಗ್ಡೆ ಅಭಿಪ್ರಾಯಪಟ್ಟರು. ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ಹಾಗೂ ಕುಂದಾಪುರ ತಾಲೂಕು ಪ್ರಗತಿಪರ ಕೃಷಿಕರ ವೇದಿಕೆ ಆಶ್ರಯದಲ್ಲಿ ಬಾಂಡ್ಯಾ ಇಂದ್ರಪ್ರಸ್ತದಲ್ಲಿ ಸೋಮವಾರ ನಡೆದ ನೆಲೆ, ಜಲ, ಕೃಷಿ ಉಳಿಸೋಣ ಬನ್ನಿ ಹಸಿರು ಗೋಷ್ಠಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗಳೂರು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಉದ್ಘಾಟಿಸಿ ಮಾತನಾಡಿ ವಿಶ್ವದಲ್ಲೇ ಅಡಿಕೆ ಬೆಳೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದು, ಆರ್ಥಿಕ ಹಾಗೂ ಜನ ಜೀವನಕ್ಕೆ ಶಕ್ತಿ ಅಡಕೆ. ಅಡಕೆ ಹೊಟ್ಟೆ ತುಂಬುವ ಉತ್ಪನ್ನವಾಗಿಲ್ಲದ ಕಾರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಮ್ಮ ಭಾರತ ದೇಶದ ಹೆಗ್ಗಳಿಕೆಯನ್ನು ಜಗತ್ತಿನಾದ್ಯಂತ ಪಸರಿಸಿದ, ಬದುಕಿನ ಅತ್ಯಲ್ಪ ಅವಧಿಯಲ್ಲಿ ಹಿಂದು ಧರ್ಮದ ಚೈತನ್ಯವನ್ನು ಉಣಬಡಿಸಿ ದೇಶಪ್ರೇಮದ ಕಿಚ್ಚನ್ನು ಹಚ್ಚಿ ಹೋದ ಮಹಾನ್ ಸಂತ ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳು ನಮ್ಮ ಯುವಕರಿಗೆ ಮಾದರಿಯಾಗಬೇಕು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಷ್ಟ್ರೀಯವಾದಿಗಳಿಗೆ ವಿವೇಕಾನಂದರ ಜೀವನ ಮತ್ತು ಸಂದೇಶಗಳು ಬಹಳ ಪ್ರೇರಣೆ ನೀಡಿತ್ತು ಎಂದು ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ಗಂಗೊಳ್ಳಿಯ ಕ್ರಾಂತಿವೀರರ ಅಭಿಮಾನಿ ಬಳಗದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ೧೫೪ನೇ ಜನ್ಮದಿನೋತ್ಸವದ ಸಂಭ್ರಮಕ್ಕಾಗಿ ಗಂಗೊಳ್ಳಿ ಬಸ್ ನಿಲ್ದಾಣದ ಸಮೀಪದ ಜರಗಿದ ವಿವೇಕ ಉತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಕೋಮುವಾದ ಕೇಸರಿಕರಣದ ನೆಪದಿಂದ ಸರಕಾರ ಅನೇಕ ಕ್ರಾಂತಿವೀರರ ಬಗ್ಗೆ ಪಠ್ಯ ಪುಸ್ತಕಗಳಲ್ಲಿ ನೀಡುತ್ತಿಲ್ಲ. ಶಾಲಾ ಕಾಲೇಜುಗಳಲ್ಲಿ ಎಲ್ಲವನ್ನೂ ಹಾಳು ಮಾಡಿ ಬಿಂಬಿಸುವ ಕಾಲ ಬಂದಿದೆ. ಹೀಗಾಗಿ ಪೋಷಕರು ಮನೆಗಳಲ್ಲಿ ತಮ್ಮ ಮಕ್ಕಳಿಗೆ ಕ್ರಾಂತಿವೀರರ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಮಹಾನ್…

Read More

ಕುಂದಾಪ್ರಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಅಧ್ಯಕ್ಷ ರಾಗಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಬಂಗಾರಪ್ಪ ನೇತೃತ್ವದ ಕರ್ನಾಟಕ ಕ್ರಾಂತಿರಂಗ ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಗೋಪಾಲ ಪೂಜಾರಿ ಅವರು ಬಳಿಕ ಕಾಂಗ್ರೆಸ್‌ ಪಕ್ಷ ಕ್ಕೆ ಸೇರ್ಪಡೆಗೊಂಡು ಬೈಂದೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದರು. ಬಂಗಾರಪ್ಪನವರ ಕರ್ನಾಟಕ ಕ್ರಾಂತಿರಂಗದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಅವರು 1996ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಕ್ಕೆ ಸೇರ್ಪಡೆಗೊಂಡು ಜಯ ಗಳಿಸಿದ್ದರು. ನಂತರ 1998, 2003ರಲ್ಲಿ ವಿಜಯಿಯಾಗಿದ್ದರು. 2008ರಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮೀನಾರಾಯಣ ವಿರುದ್ಧ ಸೋತಿದ್ದ ಪೂಜಾರಿ 2014ರಲ್ಲಿ ಅವರ ವಿರುದ್ಧ 33 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಾಗಿಯೂ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗೆ ಶ್ರಮಿಸಿದ್ದ ಅವರು ಸಿದ್ದರಾಮಯ್ಯ ಮಂತ್ರಿ ಮಂಡಲದಲ್ಲಿ ಮಂತ್ರಿ ಪದವಿ ಪಡೆಯುವರು ಎಂಬ ನಂಬಿಕೆ ಕಾರ್ಯಕರ್ತರಲ್ಲಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ನಾಕಟ್ಟೆಯಲ್ಲಿ ಕೋಟಿ ಚೆನ್ನಯ ಪಂಜುರ್ಲಿ ಗರಡಿಯ ಜೀಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಸೋಮವಾರ ದೇವಳದ ಶಿಲಾ ಮುಹೂರ್ತ ಜರುಗಿತು. ಶಿಲ್ಪಿ ಕೃಷ್ಣ ನಾಯ್ಕ್ ಶಿಲಾ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನವನ್ನು ನಂಬಿದ ಭಕ್ತರಾದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಬೈಂದೂರು ಗ್ರಾಮ ಪಂಚಾಯತ್ ಸದಸ್ಯ ವೆಂಕ್ಟ ಪೂಜಾರಿ, ಗರಡಿಯ ಅರ್ಚಕ ಕುಟುಂಬದ ಮಂಜುನಾಥ ಪೂಜಾರಿ ಮೇಲ್ಹಿತ್ಲು, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಮಂಜಯ್ಯ ಪೂಜಾರಿ, ರಘುರಾಮ ಪೂಜಾರಿ ಶಿರೂರು, ಮಂಜುನಾಥ ಪೂಜಾರಿ ಮುಂಬೈ, ಕೋಟಿ ಪೂಜಾರಿ, ಚಂದ್ರ ಪೂಜಾರಿ ಕುದ್ರಿತ್ಲು, ಐ.ಆರ್.ಬಿ ಅಧಿಕಾರಿ ಯೋಗೇಂದ್ರಪ್ಪ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಹಿಳೆಯರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯವಿದೆ. ಆಕೆ ಎಚ್ಚೆತ್ತರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಬಹುದು. ಹಾಗಾಗಿ ಮಹಿಳೆಯರು ರಾಜಕೀಯವಾಗಿ ಗುರುತಿಸಿಕೊಳ್ಳವಂತಾಗಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು. ನಾಗೂರು ಶ್ರೀ ಕೃಷ್ಣಲಲಿತಾ ಕಲಾ ಮಂದಿರದಲ್ಲಿ ನಡೆದ ಬೈಂದೂರು ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮಗು ಜನಿಸಿದಾಗ ಅದರ ಮುಖ ನೋಡಿ ಪಡುವ ಖುಷಿಯಲ್ಲಿ ಹೆರಿಗೆ ಸಮಯದಲ್ಲಿ ಅನುಭವಿಸುವ ವೇದನೆಯನ್ನು ಮರೆಯುತ್ತೇವೆ. ಹಾಗೆಯೇ ದೇಶಕ್ಕೆ ಸ್ವಾತಂತ್ರ್ಯವೂ ಒಂದೇ ದಿನದಲ್ಲಿ ಸಿಗಲಿಲ್ಲಾ. ನೋಟು ರದ್ದತಿಯಿಂದ ಈಗ ಸ್ವಲ್ಪ ತೊಂದರೆಯಾದರೂ ಕೂಡಾ ಮುಂದಿನ ದಿನಗಳು ಸಂತೋಷದಾಯಕವಾಗಲಿದೆ ಎಂದು ನೆರೆಯ ದೇಶಗಳಿಂದ ಹರಿದು ಬರುವ ಸುಮಾರು ೫೦ ಸಾವಿರ ಕೋಟಿ ರೂ. ಕಪ್ಪು ಹಣವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ದಿಢೀರನೆ ೫೦೦ ಹಾಗೂ ೧೦೦೦ ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ಕ್ರಮವನ್ನು ಸಮರ್ಥಿಸಿಕೊಂಡರು. ರಾಜ್ಯದಲ್ಲಿ ಬಿಜೆಪಿ ಸರ್ಕಾರಾವಧಿಯಲ್ಲಿ ಜಾರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಆರ್ಥಿಕ ಸಂಸ್ಥೆಯು ಲಾಭದ ಕಡೆ ಹೆಚ್ಚು ಗಮನ ನೀಡಿದೆ, ಲಾಭದಲ್ಲಿ ಹೆಚ್ಚಿನ ಹಣವನ್ನು ಮಕ್ಕಳ ವಿದ್ಯಾಭ್ಯಾಸ ಮೊದಲಾದ ಸಾಮಾಜಿಕ ಕಳಕಳಿಯ ಕಾರ್ಯಕ್ರಮಕ್ಕೆ ವಿನಿಯೋಗಿಸಬೇಕಿದೆ. ಮನ್ನಣೆಯ ದಾಹ ಕಡಿಮೆಯಿರುವ ಸಂಸ್ಥೆಗಳಿಗೆ ಅವನತಿ ಇಲ್ಲ ಹಾಗೂ ಇವುಗಳ ಬೆಳವಣಿಗೆಗೆ ಯಾವುದೂ ಅಡ್ಡಿಯಾಗುವುದಿಲ್ಲ. ಆರ್ಥಿಕ ಸಂಸ್ಥೆಗಳು ಆಧುನಿಕತೆಗೆ ತೆರದುಕೊಳ್ಳುವ ಮೂಲಕ ಸದಸ್ಯರ ಅವಶ್ಯಕತೆಗಳಿಗೆ ಸ್ಪಂದಿಸಬೇಕಿದೆ. ಸಂಸ್ಥೆಯ ಸಂಸ್ಥಾಪಕರನ್ನು ಸ್ಮರಿಸುವ ಹಾಗೂ ಅವರ ಆದರ್ಶ, ಚಿಂತನೆಗಳನ್ನು ಆರ್ಥಿಕ ಸಂಸ್ಥೆಗಳಲ್ಲಿ ಅಳವಡಿಸಿಕೊಂಡು ಮಾದರಿ ಸಂಸ್ಥೆಯನ್ನಾಗಿ ಬೆಳೆಸಬೇಕಿದೆ ಎಂದು ಅಂಕಣಕಾರ ಓಂಗಣೇಶ ಉಪ್ಪುಂದ ಅಭಿಪ್ರಾಯಪಟ್ಟರು. ಅವರು ಆದಿತ್ಯವಾರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿಮಲಾ ವಿ.ಪೈ ಸಭಾಂಗಣದಲ್ಲಿ ಜರಗಿದ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಸಂಸ್ಥಾಪಕರ ಸ್ಮರಣೀಯ ದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು ಸದೃಢ ಆರ್ಥಿಕ ಸಂಸ್ಥೆಯಾಗಿ ಬೆಳೆದು ನಿಂತಿದೆ. ಸಹಕಾರಿಯು ಸಾಮಾಜಿಕ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಿರುವುದರ ಜೊತೆಗೆ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುತ್ತಿರುವುದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತದ ಶ್ರೇಷ್ಠತೆಯನ್ನು, ಸನಾತನ ಧರ್ಮದ ಔನತ್ಯವನ್ನು ಜಗತ್ತಿಗೆ ತೋರಿಸಿಕೊಟ್ಟ ಮಹಾನ್ ಸಂತ ಸ್ವಾಮಿ ವಿವೇಕಾನಂದರನ್ನು ಸದಾ ಸ್ಮರಿಸುವುದರೊಂದಿಗೆ ಅವರ ತತ್ವ, ಆದರ್ಶಗಳನ್ನು ನಮ್ಮ ಜೀವನದಲ್ಲಿಯೂ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ಸ್ವಾರ್ಥ, ದ್ವೇಷ ಮರೆತು ಎಲ್ಲರಿಗೂ ಉಪಕಾರಿಯಾಗಿ ಸತ್ಪ್ರಜೆಗಳಾಗಿ ಬದುಕಬೇಕಿದೆ ಎಂದು ಭಗವದ್ಗೀತಾ ಅಭಿಯಾನ ಸಮಿತಿ ಜಿಲ್ಲಾಧ್ಯಕ್ಷ ಬಿಜೂರು ರಾಮಕೃಷ್ಣ ಶೇರುಗಾರ್ ಹೇಳಿದರು. ಉಪ್ಪುಂದ ಜೇಸಿಐ ಘಟಕ ಹಾಗೂ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರ ಯಳಜಿತ್ ಇವರ ಜಂಟಿ ಆಶ್ರಯದಲ್ಲಿ ಮಾತೃಶ್ರೀ ಸಭಾಭವನದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವ ಮತ್ತು ಸಂತ ವೈ. ಮಂಗೇಶ್ ಶೆಣೈ ರಚಿಸಿದ ’ಭರತಭೂಮಿ-ಪುಣ್ಯಭೂಮಿ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಜೇಸಿಐನಂತಹ ಸಂಘಸಂಸ್ಥೆಗಳು ಗ್ರಾಮ ಮಟ್ಟದಿಂದ ಹೆಚ್ಚು ಹೆಚ್ಚು ಕ್ರಿಯಾಯೋಜನೆಗಳಲ್ಲಿ ಕ್ರಿಯಾತ್ಮಕವಾಗಿ, ಸಮಾಜಮುಖಿ ಕಾರ್ಯಪ್ರವೃತ್ತಿಯನ್ನು ಬೆಳೆಸಿಕೊಂಡಲ್ಲಿ ಆ ಗ್ರಾಮವು ಆದರ್ಶ ಗ್ರಾಮವಾಗಲಿದೆ. ಅಲ್ಲದೇ ಸ್ವಸ್ಥ ಸಮಾಜ ನಿರ್ಮಾಣ ಪ್ರಜ್ಞಾವಂತ, ಕ್ರಿಯಾಶೀಲ, ನಾಗರಿಕರನ್ನು ರೂಪಿಸುವ ಜವಾಬ್ದಾರಿಯೂ ಕೂಡಾ ಸಂಘ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದರು. ಜೇಸಿಐ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಪುರಾಣ ಪ್ರಸಿದ್ಧ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಜ. 14ರಂದು ಮಕರ ಸಂಕ್ರಮಣ ಉತ್ಸವ ಸಂಭ್ರಮದಿಂದ ಜರುಗಿತು. ಮಾರಣಕಟ್ಟೆ ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ, ಕ್ಷೇತ್ರದ ಅರ್ಚಕರು, ದರ್ಶನ ಪಾತ್ರಿಗಳು, ಚಿತ್ತೂರು ಗುಡಿಕೇರಿ ಮನೆಯವರು ಉತ್ಸವದಲ್ಲಿ ಪಾಲ್ಗೊಂಡರು. ಜ. 14ರಿಂದ ಜ. 16ರ ವರೆಗೆ ಮಾರಣಕಟ್ಟೆ ಕ್ಷೇತ್ರದಲ್ಲಿ ಮಹಾ ಮಂಗಳಾರತಿ ಅನಂತರ ಮಂಡಲ ಸೇವೆ ಜರಗಲಿದೆ. ಉಡುಪಿ ಹಾಗೂ ಕುಂದಾಪುರ ತಾಲೂಕಿನಿಂದ ಆಗಮಿಸಿದ ಭಕ್ತರಿಗೆ ಸಕಲ ಸೌಕರ್ಯ ಒದಗಿಸುವಲ್ಲಿ ಆಡಳಿತ ಮಂಡಳಿ ಹಾಗೂ ಗ್ರಾಮಸ್ತರು ಹೆಚ್ಚಿನ ಕಾಳಜಿ ವಹಿಸಿ ಪೊಲೀಸರೊಡನೆ ಸಹಕರಿಸಿದರು. ಸಿಂಗಾರ ಮತ್ತು ಸೇವಂತಿಗೆ ಬ್ರಹ್ಮಲಿಂಗೇಶ್ವರನಿಗೆ ಪ್ರಿಯ ವಾದುದರಿಂದ ಬುಟ್ಟಿಯಲ್ಲಿ ಅವುಗಳನ್ನು ಹೊತ್ತು ಭಕ್ತರು ಸರದಿಯಲ್ಲಿ ಕಾಣಿಕೆ ಸಲ್ಲಿಸಿದರು. ಮೂರು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಪಾಲ್ಗೊಳ್ಳಲು ಕುಂದಾಪುರ ಹಾಗೂ ಉಡುಪಿ ತಾಲೂಕಿನಿಂದ 50 ಸಾವಿರಕ್ಕೂ ಮಿಕ್ಕಿ ಭಕ್ತರು ಆಗಮಿಸಿದ್ದರು. ವಿಶೇಷ ಬಸ್‌ ಸೌಕರ್ಯವಿತ್ತು. ಬೈಂದೂರು ಶಾಸಕ ಕೆ.…

Read More