ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಛತ್ತೀಸ್‌ಘಡನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ.ಪೂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್ ಜಿ.(ಪ್ರಥಮ ವಾಣ್ಯಿಜ್ಯ ವಿಭಾಗ) ಹಾಗೂ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದ ೯೬ ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರಥ್ವೀನ್ (ದ್ವಿತೀಯ ವಾಣಿಜ್ಯ ವಿಭಾಗ) ಇವರನ್ನು ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆ ಪ.ಪೂ ಶಿಕ್ಷಣ ಇಲಾಖೆಯ ಉಪನೀರ್ದೇಶಕ ಆರ್.ಬಿ ನಾಯಕ್ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಎಸ್ ಅರುಣ್‌ಪ್ರಕಾಶ್ ಶೆಟ್ಟಿ, ವೇದಮೂರ್ತಿ ಮಂಜುನಾಥ ಅಡಿಗ ಕರ್ಕಮುಡಿ, ಕೊಲ್ಲೂರು ಗ್ರಾಪಂ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಮಾವಿನಕಾರು, ಮಾಜಿ ಅಧ್ಯಕ್ಷ ಉದಯ ಶೇರುಗಾರ. ತಾಪಂ ಸದಸ್ಯೆ ಗ್ರೀಷ್ಮಾ ಜಿ. ಬಿಢೆ, ಮಾಜಿ ಸದಸ್ಯ ಕೆ. ರಮೇಶ್ ಗಾಣಿಗ, ಉದ್ಯಮಿ ಅರುಣ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸನತ್ ಅಡಿಗ, ದೈಹಿಕ ಶಿಕ್ಷಣ ಉಪನ್ಯಾಸಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಾನವಹಕ್ಕುಗಳ ಕೋಶದ ಆಶ್ರಯದಲ್ಲಿ ರಾಷ್ಟ್ರೀಯ ಮತದಾನ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಮುಖ್ಹ್ಯ ಅತಿಥಿಯಾಗಿ ಆಗಮಿಸಿದ್ದ ಡಾ.ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ನಿತ್ಯಾನಂದ ಎನ್. ಮಾತನಾಡಿ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾರತದಲ್ಲಿ ಮತದಾನವು ಪ್ರಜೆಗಳಿಗೆ ಇರುವಂಅತಹ ಅತಿ ಮುಖ್ಯವಾದ ಹಕ್ಕಾಗಿದೆ. ಇದರ ಕುರಿತು ವಿಶೇಷವಾಗಿ ಯುವಜನರಲ್ಲಿ ಜಾಗೃತಿ ಮೂಡಬೇಕಾಗಿದೆ. ಮತದಾನದ ಅತಿಮುಖ್ಯವಾದ ಪ್ರಕ್ರಿಯೆಯಲ್ಲಿ ಬರುವ ಚುನಾವಣೆಯ ಮಹತ್ವವನ್ನು ಕುರಿತು ಅರಿಯಬೇಕಾಗಿದೆ. ಆಧುನಿಕ ತಂತ್ರಜ್ನಾನದ ಕುರಿತು ತಿಳುವಳಿಕೆಯನ್ನು ಪಡೆಯಬೇಕು ಎಂದು ಹೇಳಿದರು. ಅವರು ಈ ಸಂದರ್ಭದಲ್ಲಿ ಚುನಾವಣೆಯಲ್ಲಿ ಪ್ರಸ್ತುತ ಬಳಕೆಯಾಘುತ್ತರುವ ವಿದ್ಯನ್ಮಾನ ಮತದಾನ ಯಂತ್ರದ ವಿಡಿಯೊವನ್ನು ತೋರಿಸಿ ಅದರ ಕಾರ್ಯವೈಖರಿಯ ಕುರಿತು ಪ್ರಾಯೋಗಿಕವಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಂ.ಗೊಂಡ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಜಿ.ಎಂ…
ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ೧೫೪ನೇ ಜನ್ಮದಿನಾಚರಣೆಯ ಅಂಗವಾಗಿ ಜನವರಿ ೨೮ರಂದು ಸಮರ್ಥ ಭಾರತ ಬೈಂದೂರು ವತಿಯಿಂದ ಆಯೋಜಿಸಲಾಗಿರುವ ‘ವಿವೇಕ ಪರ್ವ’ ಬೃಹತ್ ಸಾರ್ವಜನಿಕ ಸಮಾರಂಭಕ್ಕೆ ಸಕಲ ಸಿದ್ಧತೆಗಳು ಭರದಿಂದ ನಡೆದಿದೆ. ಕಾರ್ಯಕ್ರಮಕ್ಕಾಗಿ ಬೈಂದೂರು ಪೇಟೆಯೇ ಅಲಂಕೃತಗೊಂಡಿದ್ದು, ನಗರದ ತುಂಬೆಲ್ಲಾ ಭಗವಧ್ವಜ ಹಾಗೂ ವಿವೇಕಪರ್ವದ ಸಂದೇಶಗಳು ರಾರಾಜಿಸುತ್ತಿದೆ. ಬೈಂದೂರಿನ ಕೇಂದ್ರಭಾಗದಲ್ಲಿರುವ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ಜರುಗಲಿದೆ. ಬೈಂದೂರಿನ ಏಳು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರತಿ ಮನೆ ಮನೆಗೂ ಆಮಂತ್ರಣ ತಲುಪಿದ್ದು, ಸಾವಿರ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ. ಭವ್ಯ ಮೆರವಣಿಗೆ: ಸಮಾರಂಭಕ್ಕೂ ಮುನ್ನ ಮಧ್ಯಾಹ್ನ 2:30ಕ್ಕೆ ಬೈಂದೂರು ಯಡ್ತರೆ ವೃತ್ತದಿಂದ ಗಾಂಧಿ ಮೈದಾನದ ವರೆಗೆ ಸ್ವಾಮಿ ವಿವೇಕಾನಂದರ ದಿವ್ಯಮೂರ್ತಿಯೊಂದಿಗೆ ಬೃಹತ್ ಮೆರವಣಿಗೆ ಜರುಗಲಿದೆ. ಮಾತೆಯರು ಪೂರ್ಣಕುಂಭದೊಂದಿಗೆ ಸಾಗಿದರೇ, ವಿವಿಧ ಭಾಗಗಳಿಂದ ಆಗಮಿಸುವ ೫೦ಕ್ಕೂ ಹೆಚ್ಚು ಭಜನಾ ತಂಡಗಳು ಹಾಗೂ ಕಲಾತಂಡಗಳು ಮೆರವಣಿಗೆಗೆ ಮೆರಗು ತುಂಬಲಿವೆ. ವಿವಿಧ ಭಾಗಗಳಿಂದ ಆಗಮಿಸುವ ಸಾರ್ವಜನಿಕರು ಹಾಗೂ ಪ್ರಮುಖರು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಂವೇದನಾ ಟ್ರಸ್ಟ್ ರಿ. ನಾಯ್ಕನಕಟ್ಟೆ, ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ವಿಶೇಷ ಘಟಕ ಯೋಜನೆ ಪ್ರಾಯೋಜಿತ ಸುಗಮ ಸಂಗೀತ ಕಾರ್ಯಕ್ರಮ ಯುವ ಕಲಾವಿದ ಪ್ರಕಾಶ್ ಮತ್ತು ತಂಡ ಸಮೃದ್ಧಿ ಕಲಾಬಳಗ ಕುಂದಾಪುರ ಇವರಿಂದ ವಡೇರಹೋಬಳಿಯ ಪಿವಿಎಸ್ ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿತು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲೆಮರೆಯ ಕಾಯಿಯಂತಿದ್ದ ಪ್ರತಿಭಾವಂತರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವಂತೆ ಮಾಡುವುದು ಅಗತ್ಯ. ಸೂಕ್ತ ಅವಕಾಶಗಳನ್ನು ಬಳಸಿಕೊಂಡಾಗ ಕಲಾವಿದರು ಬೆಳೆಯಲು ಸಾಧ್ಯ. ಸ್ಥಳೀಯ ಕಲಾವಿದರ ಕಲಾಪ್ರತಿಭೆಗಳು ಹೆಚ್ಚು ಅನಾವರಣಗೊಳ್ಳುವ ನಿಟ್ಟಿನಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ರೂಪಿಸಿದ ಕಾರ್ಯಕ್ರಮಗಳು ಸಾಕಷ್ಟು ಸಹಕಾರಿಯಾಗಿವೆ ಎಂದರು. ಶಾಲಾ ಮುಖ್ಯಶಿಕ್ಷಕ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಶುಭಹಾರೈಸಿದರು. ಶಾಲಾ ಸಹಶಿಕ್ಷಕರು ಉಪಸ್ಥಿತರಿದ್ದರು. ಸುಗಮ ಸಂಗೀತ ಕಾರ್ಯಕ್ರಮದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ತಿಂಗಳ ಕಾರ್ಯಕ್ರಮದ ಅಂಗವಾಗಿ ಧರ್ಮಶ್ರೀ ರಿಲೀಫ್ ಫೌಂಡೇಶನ್ (ರಿ) ಮಟ್ನಕಟ್ಟೆ ಆಶ್ರಯದಲ್ಲಿ ಸ್ತುತಿ ಇವೆಂಟ್ ಮ್ಯಾನೇಜ್‌ಮೆಂಟ್ (ರಿ) ಸಹಭಾಗಿತ್ವದಲ್ಲಿ ಕಲಾ ಕುಸುಮಾಂಜಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಧರ್ಮಶ್ರೀ ರಿಲೀಫ್ ಫೌಂಡೇಶನ್‌ನ ಅಧ್ಯಕ್ಷ ನಾಗರಾಜ ಸುವರ್ಣ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಉದ್ಯಮಿ ಧೀರಜ್ ಹೆಜಮಾಡಿ, ಮೂಡುಬಗೆಯ ವಾಗ್ಜೋತಿ ಶಾಲೆಯ ಪ್ರಾಂಶುಪಾಲರಾದ ರವೀಂದ್ರ ಎಚ್, ನಿವೃತ್ತ ಶಿಕ್ಷಕ ಸದಾಶಿವ ಐತಾಳ್, ಸ್ತುತಿ ಇವೆಂಟ್ ಮ್ಯಾನೇಜ್‌ಮೆಂಟ್‌ನ ಮುಖ್ಯಸ್ಥ ಗಣೇಶ್ ಆರ್.ಎಂ ಇನ್ನಿತರರು ಉಪಸ್ಥಿತರಿದ್ದರು. ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಅಧ್ಯಕ್ಷ ಭಾಸ್ಕರ ಕೊಗ್ಗ ಕಾಮತ್ ಸ್ವಾಗತಿಸಿದರು. ಶಿಕ್ಷಕ ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರ್ವಹಿಸಿದರು. ರಾಜೇಂದ್ರ ಪೈ, ಮಂಜುನಾಥ ಮೈಪಾಡಿ ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು ಇದರ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಪ್ರೇರಣಾ ಪ್ರಣಮ್ಯ ೨೦೧೭ ನೈಕಂಬ್ಳಿಯ ಹಳೆಯಮ್ಮ ದೈವಸ್ಥಾನ ವಠಾರದಲ್ಲಿ ಸಂಭ್ರಮದಿಂದ ಜರುಗಿತು. ಕಾರ್ಯಕ್ರಮ ಉಧ್ಘಾಟಿಸಿದ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಅಧ್ಯಕ್ಷಟಿ. ಶಿವಾನಂದ ಶೆಟ್ಟಿ ಮಾತನಾಡಿ ರಾಜ್ಯದಲ್ಲಿ ಏಕರೂಪ ಶಿಕ್ಷಣ ಜಾರಿಯಾದಾಗ ಮಾತ್ರ ಕನ್ನಡದ ಉಳಿವು ಸಾಧ್ಯ. ಇಲ್ಲವಾದಲ್ಲಿ ಭಾಷೆಯ ಉಳಿವು ಭಾಷಣಕಷ್ಟೆ ಸೀಮಿತ ಆಗಿರುತ್ತದೆ ಎಂದರು. ರೈತ ದೇಶದ ಆಸ್ತಿ, ಸಂಘ ಸಂಸ್ಥೆಗಳು ಗ್ರಾಮದ ಆಸ್ತಿ. ನಿರಂತರವಾಗಿ ರೈತಪರ ಸಮಾಜಮುಖಿ ಕಾರ್ಯಗಳನ್ನು ಆಯೋಜಿಸಿ ಕೊಡುವವರ ಮತ್ತು ಅಗತ್ಯಯುಳ್ಳವರ ನಡುವಿನ ಕೊಂಡಿಯಾಗಿ ಸಂಘ ಸಂಸ್ಥೆಗಳ ಕಾರ್ಯನಿರ್ವಹಿಸಬೇಕು. ಹಾಗೆ ಪ್ರತಿ ಊರಿನಲ್ಲಿ ಆರ್ಥಿಕವಾಗಿ ಕಷ್ಟದಲ್ಲಿರುವ ಪ್ರತಿಭಾವಂತರನ್ನು ಹುಡುಕಿ ಅವರನ್ನು ದತ್ತು ತೆಗೆದುಕೊಂಡು ಭಾರತದ ಸತ್ಪ್ರಜೆಯಾಗಿಸಲು ಶ್ರಮಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ತಗ್ಗರ್ಸೆ, ಚಿತ್ತೂರು ಗ್ರಾಮ ಪಂಚಾಯತ್ ಅದ್ಯಕ್ಷಸಂತೋಷ ಮಡಿವಾಳ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಇಂಜಿನಿಯರಿಂಗ್ ಪದವಿ ಪರೀಕ್ಷೆಯ ಆಟೊಮೊಬೈಲ್ ವಿಭಾಗದಲ್ಲಿ ಬೆಂಗಳೂರಿನ ಆಕ್ಸ್‌ಫರ್ಡ್ ತಾಂತ್ರಿಕ ಮಹಾವಿದ್ಯಾಲಯದ ಸಂದೇಶ್ ಎ. ತೋಳಾರ್ ದ್ವಿತೀಯ ರ‍್ಯಾಂಕ್ ಗಳಿಸಿರುವರು. ಅವರು ನಾವುಂದದ ಆನಂದ ಆರ್. ತೋಳಾರ್, ಗಿರಿಜಾ ಎ. ತೋಳಾರ್ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕಾರ್ಯನಿರ್ವಹಣಾಧಿಕಾರಿ ಎಸ್. ಯೋಗೇಶ್ವರ ಮತ್ತು ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಸಚಿವ ದಂಪತಿಗಳನ್ನು ಸ್ವಾಗತಿಸಿ ಗೌರವಿಸಿದರು. ಕಂಬಳ ಉಳಿವಿಗೆ ಮನವಿ: ಸ್ಥಳೀಯ ಬಿಜೆಪಿ ಮುಖಂಡರು ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೂ ಸುಗ್ರೀವಾಜ್ಞೆ ಹೊರಡಿಸಿ ಕಾನೂನು ಅನುಮತಿ ದೊರಕಿಸಿಕೊಂಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಜಿಲ್ಲಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಯಶಪಾಲ್ ಸುವರ್ಣ, ಬೈಂದೂರು ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಯುವ ಮೋರ್ಚ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ವಕೀಲರಾದ ಕೆ.ಬಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇನ್ಸಿಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಅವರು ಡಿಸೆಂಬರ್ ತಿಂಗಳಿನಲ್ಲಿ ನಡೆಸಿದ ಸಿ.ಎ-ಸಿಪಿಟಿ ಪರೀಕ್ಷೆಯಲ್ಲಿ ಬಸ್ರೂರಿನ ಎಮ್.ಸತೀಶ ಭಟ್ ಪ್ರಥಮ ಪ್ರಯತ್ನದಲ್ಲೇ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಪ್ರಸ್ತುತ ಕುಂದಾಪುರದ ಭಂಡಾರ್‌ಕಾರ‍್ಸ್ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ. ಪದವಿಯ ವಿದ್ಯಾರ್ಥಿಯಾಗಿರುವ ಇವರು ಸತೀಶ ಭಟ್ ಮತ್ತು ಸ್ನೇಹ ಭಟ್ ಇವರ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ವಿನಾಯಕ ಯುವಕ ಸಂಘ ರಿ., ನೆಂಪು ಮತ್ತು ಭಟ್ ಬಳಗದ ವತಿಯಿಂದ ನೆಂಪು ಗ್ರಾಮಸ್ಥರ ಸಹಯೋಗದಲ್ಲಿ ನೆಂಪು ಶ್ರೀ ವಿನಾಯಕ ದೇವಸ್ಥಾನದ ೨೫ನೇ ವರ್ಷದ ಪ್ರತಿಷ್ಠಾ ವರ್ಧಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ರಾಮಕೃಷ್ಣ ಭಟ್ ನೆಂಪು ಶುಭ ಹಾರೈಸಿದರು. ಶ್ರೀ ವಿನಾಯಕ ಯುವಕ ಸಂಘದ ಅಧ್ಯಕ್ಷರಾದ ಸಂತೋಷ ಮಂಗಲ್ಸನಕಟ್ಟೆ, ಗೌರವಾಧ್ಯಕ್ಷರಾದ ಸುಕುಮಾರ ಶಾರಾಳ, ಉಪಾಧ್ಯಕ್ಷರಾದ ಪ್ರಶಾಂತ ಮಂಗಲ್ಸನಕಟ್ಟೆ, ಹರೀಶ ಆಚಾರ‍್ಯ ಹೆರ್ಜಾಡಿ, ಜೊತೆ ಕಾರ್ಯದರ್ಶಿ ರಾಜೇಂದ್ರ ಹರ್ಜಿಮನೆ, ನೆಂಪು ಫ್ರೆಂಡ್ಸ್ ಅಧ್ಯಕ್ಷರಾದ ರಾಘವೇಂದ್ರ ನೆಂಪು, ಉಪನ್ಯಾಸಕ ಮಂಜುನಾಥ ಚಂದನ್ ನೀರ್‌ಕೊಡ್ಲು, ಭಟ್ ಬಳಗದ ವೆಂಕಟರಾಮ್ ಭಟ್, ಪ್ರಶಾಂತ್ ಭಟ್ ಮತ್ತಿತ್ತರು ಉಪಸ್ಥಿತರಿದ್ದರು. ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯ ತನಕ ದೇವಳ ಪರಿಸರ, ಕೆರೆ ಹಾಗೂ ಸ್ಥಳೀಯ ಅಂಗನವಾಡಿ ಪರಿಸರವನ್ನು ಸ್ವಚ್ಚಗೊಳಿಸಲಾಯಿತು.
