Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಸತಿಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಾಂಗ ಮಾಡಲು ಪೋಷಕರು ತಮ್ಮ ಮಕ್ಕಳನ್ನು ವಿಶ್ವಾಸದಿಂದ ಕಳುಹಿಸುತ್ತಾರೆ. ವಿದ್ಯಾರ್ಥಿಗಳ ಜವಾಬ್ದಾರಿ ನಿಮ್ಮ ಮೇಲೆ ಇರುತ್ತದೆ. ಅವರ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ, ಉತ್ತಮ ಶಿಕ್ಷಣವಂತರನ್ನಾಗಿಸಬೇಕು. ಈ ಕಾರ್ಯ ಕೈಗೊಳ್ಳಲು ಯಾವುದೇ ರೀತಿಯ ಮೂಲ ಸೌಲಭ್ಯಗಳ ನ್ಯೂನ್ಯತೆಗಳಿದ್ದಲ್ಲಿ ಸಮಿತಿಯ ಗಮನಕ್ಕೆ ತರಬೇಕು ಎಂದು ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಸಮುದಾಯದವರ ಕಲ್ಯಾಣಕ್ಕಾಗಿ ಅನುಷ್ಠಾನಗೊಳ್ಳುತ್ತಿರುವ ಯೋಜನೆ/ ಕಾರ್ಯಕ್ರಮ/ ಸೌಲಭ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದೆ. ಇಲ್ಲಿ ಶೈಕ್ಷಣಿಕ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ, ಹೊರಜಿಲ್ಲೆಗಳಿಂದ ವ್ಯಾಸಾಂಗಕ್ಕಾಗಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿ, ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಇದ್ದುಕೊಂಡು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಹೂಡಿಕೆ ಮಾಡಿದ ಹಣವನ್ನು ಕೆಲವೇ ದಿನಗಳಲ್ಲಿ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಹೋಟೆಲ್ ಉದ್ಯಮಿಯೊಬ್ಬರಿಂದ 5.76 ಲಕ್ಷ ರೂ. ಪಡೆದು ವಂಚಿಸಿರುವ ಆರೋಪದಡಿ ಮೂವರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ ತಾಲೂಕಿನ ವಡೇರಹೋಬಳಿ ನಿವಾಸಿ ಪ್ರಕಾಶ್ (38 ವರ್ಷ) ಎಂಬವರು ವಂಚನೆಗೊಳಗಾದವರು. ದೂರಿನ ಆಧಾರದಲ್ಲಿ ಬಸ್ರೂರಿನ ಜ್ಯೋತಿ, ಸಾಲಿಗ್ರಾಮದ ಅಕ್ಷತಾ ದೇವಾಡಿಗ ಹಾಗೂ ಮೈಸೂರಿನ ಹಿರಿಯಪಟ್ಟಣದ ಪ್ರಶಾಂತ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿ ಪ್ರಕಾಶ್ ಅವರು ಕೋಟದಲ್ಲಿ ಹಲವು ವರ್ಷಗಳಿಂದ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿದ್ದಾರೆ. ಈ ಅವಧಿಯಲ್ಲಿ ಬಸ್ರೂರು ನಿವಾಸಿ ಜ್ಯೋತಿ ಎಂಬವರು ಅವರಿಗೆ ಪರಿಚಯವಾಗಿದ್ದರು. ತಮ್ಮ ಬಳಿ ವಿವಿಧ ಹಣಕಾಸು ವ್ಯವಹಾರಗಳು ಹಾಗೂ ಹೂಡಿಕೆ ಮಾಡಿದ ಹಣವನ್ನು ದುಪ್ಪಟ್ಟು ಮಾಡುವ ಯೋಜನೆಗಳಿವೆ ಎಂದು ಜ್ಯೋತಿ ತಿಳಿಸಿದ್ದರು. ಈ ಯೋಜನೆಗಳಲ್ಲಿ ಹಣ ಹೂಡಿದರೆ ಕಡಿಮೆ ಅವಧಿಯಲ್ಲಿ ಉತ್ತಮ ಲಾಭ ದೊರೆಯುತ್ತದೆ ಎಂದು ನಂಬಿಸಿ ಪ್ರಕಾಶ್ ಅವರಿಂದ ಹಂತ ಹಂತವಾಗಿ ಹಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳಿಗಾಗಿ “ಇನೋವೆಷನ್ ಅಂಡ್ ಡಿಸೈನ್ ಥಿಂಕಿಂಗ್” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ನಾವೀನ್ಯತೆಯ ಮಹತ್ವ, ಸೃಜನಶೀಲ ಚಿಂತನೆ ಹಾಗೂ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವಲ್ಲಿ ವಿನ್ಯಾಸ ಚಿಂತನೆಯ ಪಾತ್ರದ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈ ಕಾರ್ಯಕ್ರಮದಲ್ಲಿ ಎಂಬಿಎ ಮತ್ತು ಎಂಸಿಎ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಎಂಬಿಎ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ, ಎಂಸಿಎ ಉಪನ್ಯಾಸಕರಾದ ಪ್ರಸನ್ನ ಕುಮಾರ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಎಂಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ಅದಿತಿ ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಂದಾಪ್ರ ಡಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಮತ್ತು ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ) ತೆಕ್ಕಟ್ಟೆ ಇದರ ಸಹಯೋಗದೊಂದಿಗೆ ತೆಕ್ಕಟ್ಟೆಯ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ವಠಾರದಲ್ಲಿ ನಡೆದ 2026-27ನೇ ಸಾಲಿನ ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಇಲ್ಲಿನ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು ವತಿಯಿಂದ ಪಂಚಮ ವರ್ಷಾಚರಣೆ ಕಾರ್ಯಕ್ರಮ ಸರಣಿ 3ರ ಅಂಗವಾಗಿ ‘ಮೌಲ್ಯ ಚಿಂತನಾ ಶಿಬಿರʼ ಕಾಲೇಜಿನ ಅಮೃತ ಮಹೋತ್ಸವದ ಕಟ್ಟಡದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮಂಗಳೂರಿನ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಶ್ರೀ ಯುಗೇಶಾನಂದಜಿ ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ಸ್ವಾಮಿ ಯುಗೇಶಾನಂದಜಿ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದ ಆಡಳಿತಾಧಿಕಾರಿ ಡಾ. ಕೆ. ಶ್ರೀಧರ ಆರ್. ಪೈ ಅಧ್ಯಕ್ಷತೆ ವಹಿಸಿದ್ದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ ಜಿ. ಪೈ, ಉಪಪ್ರಾಂಶುಪಾಲರು ಹಾಗು ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ, ಬಿಕಾಂ,ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ, ಮಾಲತಿ ದೇವಿ ಪ್ರಾಂಶುಪಾಲರು ಎಂಜಿಎಂ ಪದವಿಪೂರ್ವ ಕಾಲೇಜು, ಟಿ ಮೋಹನದಾಸ್ ಪೈ ಕೌಶಲ್ಯ ಕೇಂದ್ರದ ನಿರ್ದೇಶಕರಾದ ಟಿ. ರಂಗ ಪೈ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಮಹಾತ್ಮ ಗಾಂಧಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆ ಹಾಗೂ ಸಿಆರ್‌ಆರ್ ಪದವಿಪೂರ್ವ ಕಾಲೇಜು ದೊಡ್ಡಕನ್ನಲ್ಲಿ, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಬಾಲಕಿಯರ ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು. ಬಾಲಕಿಯರ ವಿಭಾಗ:  ಬಾಲಕಿಯರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಮಂಡ್ಯ ಜಿಲ್ಲೆಯನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಲಾವಣ್ಯ ಹಾಗೂ ಉತ್ತಮ ಓಟಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್‌ನ ವಿಜಯಲಕ್ಷ್ಮೀ ಪಡೆದರು.   ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಾಲಿಗ್ರಾಮ ದೇಗುಲ ಸಮೀಪದ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ರಚನೆ ಕುರಿತಂತೆ ದೇಗುಲದ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಕೇಂದ್ರ ಸರಕಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಆಡಳಿತ ಮಂಡಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಬಂಟ್ವಾಳ ನರಿಕೊಂಬು ಪ್ರಕಾಶ್ ಕಾರಂತ್ ಕಲ್ಲಡ್ಕ ಪ್ರಭಾಕರ್ ಭಟ್ ರವರಿಗೆ ಪ್ರಸಾದ ನೀಡಿ ಗೌರವಿಸಿದರು. ದೇಗುಲದಲ್ಲಿ  ಅರ್ಚಕರಾದ ವೇ.ಮೂ ಜನಾರ್ದನ ಅಡಿಗ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಗುಲದ ಉಪಾಧ್ಯಕ್ಷ ಚಂದ್ರಶೇಖರ್ ಉಪಾಧ್ಯಾಯ,ಮಾಜಿ ಅಧ್ಯಕ್ಷ ಐರೋಡಿ ಜಗದೀಶ್ ಕಾರಂತ, ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ, ಕೋಶಾಧಿಕಾರಿ  ಎಂ ಲಕ್ಷ್ಮೀನಾರಾಯಣ ಹೊಳ್ಳ, ಸದಸ್ಯರಾದ   ಕೆ.ತಾರಾನಾಥ ಹೊಳ್ಳ, ಪ್ರಸನ್ನ ತುಂಗ, ಪೂರ್ವ ಉಪಾಧ್ಯಕ್ಷ ಬಿ. ರಘುನಾಥ ಸೋಮಯಾಜಿ, ಕೂಟಮಹಾಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಯ ಅಧ್ಯಕ್ಷ  ಎಚ್ ಸತೀಶ್ ಹಂದೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟೀವ್ ಮ್ಯಾನೇಜ್‌ಮೆಂಟ್, ಮೂಡುಬಿದಿರೆ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿಗೆ ನವೆಂಬರ್ 14 ಕೊನೆಯ ದಿನ. ಖಾಸಗಿ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕವಿರಲಿದ್ದು, ಬಿಪಿಎಲ್/ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಪ್ರವೇಶಾತಿ ಶುಲ್ಕದಿಂದ ವಿನಾಯಿತಿ ನೀಡಲಾಗುವುದು. ಈ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಪರವಾನಗಿ ನೀಡಲಾಗುವುದು. ಪರವಾನಗಿ ಪಡೆದ ಅಭ್ಯರ್ಥಿಗಳು ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಿ ಕಾರ್ಯನಿರ್ವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:7022429440, 8971361396 ಹಾಗೂ 7259729104 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್‌ಗೆ ಸಲ್ಲಿಸುವ ಮೂಲಕ ಟೊಯೋಟಾ ಕಾರು ಖರೀದಿ ಹಾಗೂ ಆಸ್ತಿ ಅಡಮಾನ ಸಾಲ ಪಡೆದು ಎಂ.ಸಿ.ಸಿ ಬ್ಯಾಂಕ್‌ ಯಡ್ತರೆ ಶಾಖೆಗೆ ಬರೋಬ್ಬರಿ 98.99 ಲಕ್ಷ ರೂ. ವಂಚಿಸಿರುವ ಆರೋಪದಡಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಉಡುಪಿಯ MCC Bank Ltd.ನ ಮುಖ್ಯ ವ್ಯವಸ್ಥಾಪಕ ಹಾಗೂ ವಸೂಲಾತಿ ಅಧಿಕಾರಿ ಸಂದೀಪ್ ಕ್ವಾಡ್ರಸ್ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣಗಳು ದಾಖಲಾಗಿವೆ. ಬೈಂದೂರು ಯಡ್ತರೆ ಶಾಖೆಯಲ್ಲಿ ನಡೆದಿರುವ ಈ ವಂಚನೆ ಪ್ರಕರಣಗಳಲ್ಲಿ ಆರೋಪಿಗಳು ನಕಲಿ ದಾಖಲೆಗಳನ್ನು ಅಸಲಿ ಎಂದು ನಂಬಿಸಿ ಬ್ಯಾಂಕ್‌ನಿಂದ ಲಕ್ಷಾಂತರ ರೂಪಾಯಿ ಸಾಲ ಪಡೆದಿರುವುದು ಬೆಳಕಿಗೆ ಬಂದಿದೆ. ಪ್ರಕರಣ 1: ಶಿರೂರಿನ ಜುಹಾ ಮಂಜಿಲ್ ನಿವಾಸಿ ಸಮೀರನ್ ಶೇಖ್ ಎಂಬಾತ ತನ್ನ ಜಾಮೀನುದಾರ ಅಸ್ನಾ ಶೇಖ್ ಅವರೊಂದಿಗೆ 2026ರ ಜುಲೈ 11ರಂದು ಬ್ಯಾಂಕ್‌ಗೆ ಹಾಜರಾಗಿ ಹೊಸ ಟೊಯೋಟಾ ಇನೋವಾ ಕ್ರಿಸ್ಟಾ ಕಾರು ಖರೀದಿಸುವುದಾಗಿ ಸಾಲಕ್ಕೆ ಅರ್ಜಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಣಿಪಾಲ ಇವರ ಆಶ್ರಯದಲ್ಲಿ ಸುಣ್ಣಾರಿಯ ವಿವೇಕೋದಯ ಶಾಲೆಯಲ್ಲಿ ಇತ್ತೀಚೆಗೆ ಜರುಗಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಪ್ರೌಢ ಹಾಗೂ ಹಿರಿಯ ಪ್ರಾಥಮಿಕ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಬರೋಬ್ಬರಿ 17 ಪ್ರಥಮ ಸ್ಥಾನಗಳನ್ನು ಗಳಿಸುವುದರ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಜ್ಞಾನ ಪದವಿಪೂರ್ವ ಕಾಲೇಜಿನ ಪ್ರೌಢ ವಿಭಾಗದಲ್ಲಿ  ವಿಜೇತರಾದ ವಿದ್ಯಾರ್ಥಿಗಳ ವಿವರ:ಪ್ರಥಮ ಸ್ಥಾನ:ಸೃಜನ್ ಶೆಟ್ಟಿ (ಮಿಮಿಕ್ರಿ), ಧನ್ವಿ (ಸಂಸ್ಕೃತ ಧಾರ್ಮಿಕ ಪಠಣ), ತುಷಾರ (ರಂಗೋಲಿ), ಫಾತಿಮಾ ನಜೀಫಾ (ಅರೇಬಿಕ್ ಧಾರ್ಮಿಕ ಪಠಣ), ಋತು & ತಂಡ (ಕವ್ವಾಲಿ), ಗರ್ವಿತಾ & ತಂಡ (ಜಾನಪದ ನೃತ್ಯ). ದ್ವಿತೀಯ ಸ್ಥಾನ:ವೃದ್ಧಿ (ಭಾವಗೀತೆ), ಸ್ಫೂರ್ತಿ (ಕನ್ನಡ ಭಾಷಣ), ಪೂರ್ವಿ (ಚಿತ್ರಕಲೆ), ಸಮೃದ್ಧಿ (ಕನ್ನಡ ಪ್ರಬಂಧ), ರಿಷಿ ಹಾಗೂ ವಿಲೋಕ್ ರಂಜನ್ (ಕ್ವಿಜ್),…

Read More