ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಕರ್ನಾಟಕದಲ್ಲಿ ಅಂಚೆ ಕಚೇರಿಗಳು ವಹಿಸುತ್ತಿರುವ ಮಹತ್ವದ ಪಾತ್ರ, ಹಣಕಾಸು ಒಳಗೊಳ್ಳುವಿಕೆ ಹಾಗೂ ಗ್ರಾಮೀಣ ಸೇವಾ ವಿತರಣೆ ಕುರಿತು ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ. ಅಂಚೆ ಕಚೇರಿಗಳ ಮೂಲಕ ಬ್ಯಾಂಕಿಂಗ್, ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ (DBT), ಡಿಜಿಟಲ್ ಸೇವೆಗಳು ಹಾಗೂ ಲಾಸ್ಟ್–ಮೈಲ್ ಡೆಲಿವರಿ ಬಲಪಡಿಸುವ ಕುರಿತು ಅವರು ಸರ್ಕಾರದ ಗಮನ ಸೆಳೆದಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಂವಹನ ಸಚಿವಾಲಯದ ರಾಜ್ಯ ಸಚಿವರು, ಕರ್ನಾಟಕದಲ್ಲಿ ಅಂಚೆ ಕಚೇರಿಗಳು ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಮೂಲಕ ಹಣಕಾಸು ಒಳಗೊಳ್ಳುವಿಕೆ ಮತ್ತು ಗ್ರಾಮೀಣ ಆರ್ಥಿಕ ಚಟುವಟಿಕೆಗಳು ಬಲಪಡಿಸಲಾಗುತ್ತಿವೆ ಎಂದು ಸದನಕ್ಕೆ ತಿಳಿಸಿದರು. ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ 48.5 ಲಕ್ಷಕ್ಕೂ ಹೆಚ್ಚು IPPB ಖಾತೆಗಳು ತೆರೆಯಲ್ಪಟ್ಟಿದ್ದು, 28,000 ಕೋಟಿಗೂ ಅಧಿಕ ಮೊತ್ತದ 23 ಕೋಟಿ ಡಿಬಿಟಿ ವ್ಯವಹಾರಗಳು ಅಂಚೆ ಕಚೇರಿಗಳ ಮೂಲಕ ನೆರವೇರಿವೆ ಎಂದು ಸಚಿವರು ವಿವರಿಸಿದರು. ರಾಜ್ಯದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಆಗಿದೆ. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಇತ್ತೀಚೆಗೆ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ತಮಿಳುನಾಡು ಮೂಲದ ಇಬ್ಬರು ದಂಪತಿಗಳಿಗೆ ಹಾಗೂ ಹಾಸನ ಮೂಲದ ಓರ್ವ ದಂಪತಿಗಳಿಗೆ ಒಟ್ಟು ಮೂರು ಮಕ್ಕಳ ಅಂತಿಮ ದತ್ತು ಆದೇಶ ನೀಡಿ, ಮಾತನಾಡಿದರು. ದತ್ತು ಪಡೆಯಲು ಇಚ್ಛಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಜ್ಞಾನ ಪತ್ರಿಕೆ ಬೆಂಗಳೂರು ಇವರು ಪ್ರತೀ ವರ್ಷ ಕೊಡಮಾಡುವ ಪ್ರಾಥಮಿಕ ಶಾಲಾ ವಿಭಾಗದ ರಾಜ್ಯ ಮಟ್ಟದ ʼಜ್ಞಾನಜ್ಯೋತಿ ಪ್ರಶಸ್ತಿ-2025ʼ ಕ್ಕೆ ತಾಲೂಕಿನ ಮೊಳಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆಯಾಗಿದ್ದಾರೆ. 1997ರಲ್ಲಿ ಶಿಕ್ಷಕ ವೃತ್ತಿಗೆ ಸೇರಿದ ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಯ್ಕನಕಟ್ಟೆಯಲ್ಲಿ ಐದುವರೆ ವರ್ಷಗಳ ಸೇವೆ ಸಲ್ಲಿಸಿ ಉತ್ತಮ ಶಿಕ್ಷಕಿ ಎನಿಸಿಕೊಂಡರು. 2002ರಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರು ಸದಾಕಾಲ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸುತ್ತಾ, ಶಿಕ್ಷಕರ ಟಿ.ಎಲ್.ಎ೦ ಮೇಳದಲ್ಲಿ ಪ್ರಶಸ್ತಿ ಪಡೆದಿದ್ದು, 2001-2002 ರಲ್ಲಿ ಬೆಂಗಳೂರಿನ ಚಂದನ ವಾಹಿನಿಯಲ್ಲಿ ಬರುವ ಥಟ್ ಅ೦ಥ ಹೇಳಿ’ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಿಂದ ಭಾಗವಹಿಸಿದ ಏಕೈಕ ಪ್ರಾಥಮಿಕ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಅದರಲ್ಲಿ ವಿದ್ಯಾರ್ಥಿಗಳು ಪ್ರಶಸ್ತಿ ಪಡೆಯಲು ಶ್ರಮ ವಹಿಸಿದ್ದಾರೆ. ಈವರೆಗೆ ಐದು ಬಾರಿ ಪ್ರಭಾರ ಮುಖ್ಯೋಪಾಧ್ಯಾಯರ ಕರ್ತವ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬಿಜೂರು ಗ್ರಾಮದ ಕಂಚಿಕಾನ ಎಂಬಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಕೆ. ಲೀಲಾವತಿ ಭಟ್ಟ (71) ಎಂಬ ವೃದ್ಧೆಯು ಸುಮಾರು ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 5 ಅಡಿ ಎತ್ತರ, ಉರುಟು ಮುಖ, ಎಣ್ಣೆಕಪ್ಪು ಮೈಬಣ್ಣ, ಸದೃಢ ಶರೀರ ಹೊಂದಿದ್ದು, ಕನ್ನಡ ಹಾಗೂ ಸಂಸ್ಕೃತ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕೆ ಮಾಡುವ ವಾಹನಗಳು ಓವರ್ ಲೋಡ್ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಎಲ್ಲೆಡೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಆಗುತ್ತಿವೆ. ಅಂತಹ ವಾಹನಗಳಿಗೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ, ಎಲ್ಲೆಂದರಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಹಿಂದೆ ಈ ಬಗ್ಗೆ ಆರ್.ಟಿ.ಓ ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚಿಸಲಾಗಿತ್ತು. ಆದರೂ ಸುಧಾರಣೆ ಕಂಡುಬಂದಿಲ್ಲ. ಪ್ರತೀ ಮಾಹೆಯೂ ನಿಯಮವನ್ನು ಉಲ್ಲಂಘಿಸಿದಂತಹ ಬಸ್ಗಳ ಮೇಲೆ ಪ್ರಕರಣ ದಾಖಲಿಸಬೇಕು ಎಂದ ಅವರು, ಪ್ರತಿಯೊಂದು ಬಸ್ಗಳಿಗೂ ಸಹ ಡೋರ್ಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರ ವಿಫುಲ ಅವಕಾಶಗಳಿವೆ. ಪಾಠದ ಜೊತೆಗೆ ಕ್ರೀಡೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೆಳವಣಿಗೆಯಾಗಲು ಸಾಧ್ಯವಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚು ಸಹಾಯಕವಾಗುತ್ತದೆ ಎಂದು ಪತ್ರಕರ್ತ ಬಿ. ರಾಘವೇಂದ್ರ ಪೈ ಹೇಳಿದರು. ಅರು ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿ ಮಾತನಾಡಿದರು. ಉದ್ಯಮಿ ಸುರೇಶ ಪೂಜಾರಿ ಧ್ವಜಾರೋಹಣಗೈದು ಶುಭ ಹಾರೈಸಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಎಂಸಿ ಸದಸ್ಯ ಅಶೋಕ ಪೂಜಾರಿ, ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ದೈ.ಶಿ.ಶಿಕ್ಷಕಿ ಪವಿತ್ರ, ಎಸ್ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯ ಉಷಾ ಕುಮಾರಿ ಸ್ವಾಗತಿಸಿ, ಸಹಶಿಕ್ಷಕಿ ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ಶಿಕ್ಷಣ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸಾಧನೆಗಾಗಿ ರಾಷ್ಟ್ರೀಯ ಪ್ರಶಸ್ತಿಯಾದ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಪಡೆದುಕೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ತರಲಾಗುತ್ತಿರುವ ಕ್ರಾಂತಿಕಾರಿ ಬದಲಾವಣೆಗಳು-ಸುಧಾರಣೆಗಳು, ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, ಪರಿಸರ ಸ್ನೇಹಿ ಕಾರ್ಯಕ್ರಮಗಳು, ಸಮಾಜಕ್ಕೆ ನೀಡಲಾಗುತ್ತಿರುವ ಕೊಡುಗೆಗಳು ಮತ್ತು ಪಠ್ಯೇತರ ಚಟುವಟಿಕೆ ವಿಭಾಗದಲ್ಲಿ ಶಾಲೆಯು ತೋರಿಸುತ್ತಿರುವ ವಿಶೇಷ ಆಸಕ್ತಿ ಮತ್ತು ಪ್ರೋತ್ಸಾಹಗಳನ್ನು ಗಮನಿಸಿ ಈ ಗೌರವ ನೀಡಲಾಗಿದೆ. ಈ ಪ್ರಶಸ್ತಿಯನ್ನು ಶಾಲೆಯ ಹಿರಿಯ ಅಧ್ಯಾಪಕಿಯಾದ ಬೇಬಿ ಎಸ್. ನಾಯ್ಕ್ ಅವರು ಶಾಲೆಯ ಪರವಾಗಿ ಸಮಾರಂಭದಲ್ಲಿ ಸ್ವೀಕರಿಸಿದರು. ಮುಂಬೈನಲ್ಲಿ ನಡೆದ ಈ ಕಾರ್ಯಕ್ರಮವು ESFE ಹಾಗೂ ಟೈಮ್ಸ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ಎಜುಕೇಶನ್ ಸಪ್ಲೈ ಮತ್ತು ಫ್ರಾಂಚೈಸಿ ಎಕ್ಸ್ಪೋ ಕೂಡ ನಡೆಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರು ಶಾಲೆಯ ಸಿಬ್ಬಂದಿವರ್ಗ ಮತ್ತು ಆಡಳಿತ ಮಂಡಳಿಯು ಪ್ರೋತ್ಸಾಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೇವಾ ಮನೋಭಾವದಿಂದ ಮಾಡುವ ಯಾವುದೇ ಕೆಲಸ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ಆದ್ದರಿಂದ ರಾಷ್ಟ್ರೀಯ ಸೇವಾ ಯೋಜನೆ ಇಂತಹ ಸೇವೆಯನ್ನು ಸಮುದಾಯಕ್ಕೆ ನೀಡಲು ಒಳ್ಳೆಯ ವೇದಿಕೆಯನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತದೆ. ವಿದ್ಯಾರ್ಥಿಗಳು ಒಂದು ದಿನದ ವಿಶೇಷ ಶಿಬಿರದಲ್ಲಿ ಪಡೆದ ಅನುಭವವನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡು ಉತ್ತಮ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಹೇಳಿದರು. ಅವರು ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಒಂದು ದಿನದ ವಿಶೇಷ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡ್ಲಾಡಿ, ಬಾಂಡ್ಯದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. , ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡ್ಲಾಡಿ ಬಾಂಡ್ಯ ಇಲ್ಲಿನ ಮುಖ್ಯೋಪಾಧ್ಯಾಯರಾದ ಸಂತೋಷ ಕುಮಾರ್ ಶೆಟ್ಟಿ ಚೋನಾಳಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವೆಯ ಮನೋಭಾವನೆ ರೂಪುಗೊಳ್ಳಬೇಕಾದರೆ ಎನ್.ಎಸ್.ಎಸ್. ಶಿಬಿರದಲ್ಲಿ ಪಾಲ್ಗೊಂಡಾಗ ಸ್ವಾವಲಂಬನೆ ಬದುಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಜ್ಞಾನ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಿ, ಮಂಗಳವಾರದಂದು ವಂಡಾರಿನ ‘ಕೃಷ್ಣ ಪ್ರಸಾದ್ ಕ್ಯಾಶ್ಯೂಸ್ ಪ್ರೈವೇಟ್ ಲಿಮಿಟೆಡ್’ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಿದರು. ವಿದ್ಯಾರ್ಥಿಗಳಿಗೆ ಕೈಗಾರಿಕಾ ಕಾರ್ಯಾಚರಣೆಗಳ ಬಗ್ಗೆ ಪ್ರಾಯೋಗಿಕ ಜ್ಞಾನವನ್ನು ನೀಡುವ ಉದ್ದೇಶದಿಂದ ಈ ಭೇಟಿಯನ್ನು ಆಯೋಜಿಸಲಾಗಿತ್ತು. ಭೇಟಿಯ ಸಂದರ್ಭದಲ್ಲಿ, ವಿದ್ಯಾರ್ಥಿಗಳಿಗೆ ಗೋಡಂಬಿ ಸಂಸ್ಕರಣೆಯ ಸಂಪೂರ್ಣ ಹಂತಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಯಿತು. ಕಾರ್ಖಾನೆಯ ಅಧಿಕಾರಿಗಳು ಅಲ್ಲಿನ ವಿವಿಧ ಯಂತ್ರೋಪಕರಣಗಳ ಕಾರ್ಯವೈಖರಿ, ಗುಣಮಟ್ಟ ನಿಯಂತ್ರಣ ವ್ಯವಸ್ಥೆ ಮತ್ತು ಒಟ್ಟಾರೆ ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ವಿವರಿಸಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸಂಪತ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವೃತ್ತಿಜೀವನದ ಅವಕಾಶಗಳು, ವೃತ್ತಿಪರ ಬೆಳವಣಿಗೆ ಹಾಗೂ ಜೀವನದಲ್ಲಿ ಶಿಸ್ತು ಮತ್ತು ಸಮರ್ಪಣಾ ಭಾವದ ಮಹತ್ವದ ಬಗ್ಗೆ ಅಮೂಲ್ಯವಾದ ಸಲಹೆಗಳನ್ನು ನೀಡಿ ಪ್ರೇರೇಪಿಸಿದರು. ಈ ಸಂದರ್ಭದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಮತ್ ಶೆಟ್ಟಿ ಹಾಗೂ ಇತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನಾ ಯೋಜನೆ, ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್ಸೈಟ್ https://sevasindhu.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ ಅಥವಾ ಉಡುಪಿ, ಕುಂದಾಪುರ, ಬ್ರಹ್ಮಾವರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
