ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.16: ತಾಲೂಕಿನ ಹೆಮ್ಮಾಡಿ – ಕೊಲ್ಲೂರು ಮಾರ್ಗದಲ್ಲಿ ಬಸ್ಸಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಅಪಘಾತದ ಸಂದರ್ಭ ಬೈಕಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿದೆ. ಮೃತ ಬೈಕ್ ಸವಾರನನ್ನು ಸಿಗಂದೂರಿನ ಶರತ್ (25) ಎಂದು ಗುರುತಿಸಲಾಗಿದೆ. ಸಿಗಂದೂರಿನಿಂದ ಕುಂದಾಪುರಕ್ಕೆ ಸಂಬಂಧಿಕರ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕೆಂಚನೂರು ಮಲ್ಲಾರಿ ರಸ್ತೆಯ ತಿರುವಿನಲ್ಲಿ ಸವಾರ ನಿಯಂತ್ರಣ ತಪ್ಪಿ ಹೆಮ್ಮಾಡಿ ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಶರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸಂಪೂರ್ಣ ಬೆಂಕಿಯಿಂದಾಗಿ ಸುಟ್ಟು ಕರಕಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಳೆದ ಐದು ದಿನಗಳ ಹಿಂದಷ್ಟೇ ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನು ಏಕಾಏಕಿ ಬದಲಾವಣೆ ಮಾಡಲಾಗಿದ್ದು, ನೂತನ ಅಧ್ಯಕ್ಷರಿಗೆ ಪಟ್ಟ ಕಟ್ಟಲಾಗಿದೆ. ಸೋಮವಾರ ಉಡುಪಿಯಲ್ಲಿ ಜರುಗಿದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಈ ನಡೆದ ಬಗ್ಗೆ ನಿರ್ಗಮಿತ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಕುಂದಾಪುರ ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 2024ರ ಜನವರಿಯಲ್ಲಿ ಕಿಶೋರ್ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಏಕಾಏಕಿ ಅಧ್ಯಕ್ಷ ಅವಧಿಗೆ ಪೂರ್ವದಲ್ಲೇ ನಿರ್ದಿಷ್ಟ ಕಾರಣ ನೀಡದೇ ಅವರಿಂದ ಅಧ್ಯಕ್ಷ ಸ್ಥಾನವನ್ನು ಕಸಿದುಕೊಳ್ಳಲಾಗಿದೆ. ಈ ಮೂಲಕ ಬಿಜೆಪಿಯ ಬಣ ರಾಜಕೀಯದ ಬಣ ಮತ್ತೊಮ್ಮೆ ಬಯಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಕಿಶೋರ್ ಕುಮಾರ್ ಅವರು ಮೊದಲಿನಿಂದಲೂ ನನಗೆ ಕಾರ್ಯಕರ್ತರ ಜೊತೆಗೆ ಹೆಚ್ಚಿನ ಒಡನಾಟವಿದ್ದು, ಜಿಲ್ಲಾಧ್ಯಕ್ಷನಾದ ಬಳಿಕವೂ ಅದನ್ನೇ ಮುಂದುವರಿಸಿದ್ದೆ. ನಾಯಕ ಹಿಂದೆ ತಿರುಗುವು ಕೆಲಸ ಮಾಡಿಲ್ಲ. ಜಿಲ್ಲಾಧ್ಯಕ್ಷನಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಬೈಂದೂರು ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ನದಿಗಳು ಉಕ್ಕಿ ಹರಿದು ಸೋಮವಾರ ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪರಿಣಾಮ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿ ನೀರು ಹಾಗೂ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸುತ್ತ ಬ್ರಹ್ಮಕುಂಡ ನದಿ ನೀರು ಉಕ್ಕಿ ಹರಿದು ಸುತ್ತುವರಿದಿದೆ. ನದಿ ಪಾತ್ರದ ಊರುಗಳು, ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಾತ್ರಿಯಿಡೀ ಭಾರೀ ಮಳೆಯಿಂದಾಗಿ ಸೌಪರ್ಣಿಕಾ ನದಿ ಪಾತ್ರದ ನಾವುಂದ ಗ್ರಾಮದ ಸಾಲ್ಬುಡ, ಅರೆಹೊಳೆ, ನಾಡ ಗ್ರಾಮದ ಚಿಕ್ಕಳ್ಳಿ, ಪಡುಕೋಣೆ ಸೇರಿದಂತೆ ಹಲವು ಭಾಗಗಳಲ್ಲಿ ನೆರೆ ಬಂದಿದ್ದು ಪರಿಣಾಮ ಮರವಂತೆ – ಪಡುಕೋಣೆ ರಸ್ತೆ ಜಲಾವೃತಗೊಂಡಿದೆ. ಹೆರಂಜಾಲು, ಶಿರೂರು ಗ್ರಾಮಗಳಲ್ಲಿಯೂ ನೆರೆ ಕಾಣಿಸಿಕೊಂಡಿದೆ. ಎಡಮಾವಿನ ಹೊಳೆ ಪಾತ್ರದ ಹೆರಂಜಾಲು, ಹಳಗೇರಿಯಲ್ಲಿ ಕೃಷಿ ಭೂಮಿಗಳು ಜಲಾವೃತಗೊಂಡಿದೆ. ಸುಮನಾವತಿ ನದಿ ಪಾತ್ರದ ಬಿಜೂರು, ಯಡ್ತರೆ, ತಗ್ಗರ್ಸೆಯ ಹಲವೆಡೆ ಜಲಾವೃತಗೊಂಡು ಮನೆಗಳಿಗೂ ನೆರೆ ನೀರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 525, ಸುಬ್ರಹ್ಮಣ್ಯ ಜಿ.515 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ತೃತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಳಗಾವಿ: ಯಾವುದೇ ಭೇದ ಭಾವವಿಲ್ಲದೆ ಆತಿಥ್ಯ ನೀಡುವುದರಲ್ಲಿ ಬಂಟರ ಸಮುದಾಯ ಹೆಸರುವಾಸಿ. ಈ ಸಮುದಾಯದವರು ಅತ್ಯಂತ ಶ್ರಮಜೀವಿಗಳು, ಅತಿಥಿ ದೇವೋಭವ ಎನ್ನುವ ಹಾಗೆ ಅತಿಥಿಗಳನ್ನು ದೇವರ ರೀತಿ ಭಾವಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಬಂಟರ ಯಾನೆ ನಾಡವರ ಸಂಘದ ವತಿಯಿಂದ ರಾಷ್ಟ್ರೀಯ ಹೆದ್ದಾರಿ 4 ರ ನ್ಯೂ ಗಾಂಧಿ ನಗರದಲ್ಲಿ ನವೀಕೃತಗೊಂಡಿರುವ ಬಂಟರ ಭವನದ ಉದ್ಘಾಟನಾ ಸಮಾರಂಭ ಹಾಗೂ ಮಾಣಿಕ್ಯ ಸಂಭ್ರಮದಲ್ಲಿ ಮಾತನಾಡಿದ ಸಚಿವರು, ಚಿಕ್ಕ ವಯಸ್ಸಿನಲ್ಲೇ ಮನೆಬಿಟ್ಟು ಹೋಗಿ ಸ್ವಂತ ಕಾಲಮೇಲೆ ನಿಲ್ಲುವ ಸ್ವಾಭಿಮಾನಿಗಳು. ದೇಶದ ವಿವಿಧೆಡೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು. ಸಂಸ್ಕೃತಿ, ಕಲೆಯಲ್ಲಿ ನಿಮ್ಮ ಸಮಾಜಕ್ಕೆ ಇರುವ ಆಸಕ್ತಿ ನೋಡಿ ಮಂತ್ರಮುಗ್ಧಳಾಗಿದ್ದೇನೆ. ಈ ಸಮುದಾಯದವರು ನಿಸ್ವಾರ್ಥಗಳು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವುದು ನನ್ನ ಪೂರ್ವ ಜನ್ಮದ ಪುಣ್ಯ. ಉಡುಪಿ ಶ್ರೀ ಕೃಷ್ಣ, ಕಟೀಲು ದುರ್ಗಾಪರಮೇಶ್ವರಿ, ಕಾಪು ಮಾರಿಗುಡಿ ದೇವರ ದರ್ಶನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.15: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 16ರಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ದ್ವಿತೀಯ ಪಿಯುಸಿ – 3 ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಜೆ ಘೋಷಿಸುವ ಪೂರ್ವದಲ್ಲಿ ಸೋಮವಾರ ಶಾಲೆಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಿಸಿರಲಿಲ್ಲ. ಆದರೆ ಆಯಾ ಊರಿನ ಪರಿಸ್ಥಿತಿಗೆ ಅನುಗುಣವಾಗಿ ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸಮಿತಿ ಚರ್ಚಿಸಿ ಶಾಲೆಗೆ ರಜೆಯನ್ನು ಘೋಷಿಸಬಹುದಾಗಿದೆ ಎಂದು ಜಿಲ್ಲಾಡಳಿತ ಸೂಚನೆ ನೀಡಿತ್ತು. ಭಾನುವಾರ ರಾತ್ರಿ 9 ಗಂಟೆಯ ಬಳಿಕ ಮಳೆ ಪರಿಸ್ಥಿತಿ ಅವಲೋಕಿಸಿ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ನಾಲ್ಕುದು ದಿನಗಳಿಂದ ರೆಡ್ ಅಲರ್ಟ್ ಇದ್ದುದರಿಂದ ಗುರುವಾರ ಹಾಗೂ ಶುಕ್ರವಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.15: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಉಡುಪಿಯಲ್ಲಿ ಶನಿವಾರ ಸರಾಸರಿ 60 ಮಿ.ಮೀ ಮಳೆ ದಾಖಲಾಗಿದೆ. ಇನ್ನು ಜೂನ್.16ರ ಸೋಮವಾರ ಶಾಲೆಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಿಸಲಾಗಿಲ್ಲ. ಆದರೆ ಆಯಾ ಊರಿನ ಪರಿಸ್ಥಿತಿಗೆ ಅನುಗುಣವಾಗಿ ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸಮಿತಿ ಚರ್ಚಿಸಿ ಶಾಲೆಗೆ ರಜೆಯನ್ನು ಘೋಷಿಸುವ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಭಾನುವಾರ ರಾತ್ರಿ ರೆಡ್ ಅಲರ್ಟ್ ಇದ್ದು ಸೋಮವಾರ ಬೆಳಿಗ್ಗೆ ಆರೆಂಜ ಅಲರ್ಟ್ ಇರುವುದರಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುತ್ತಿಲ್ಲ. ಆದರೆ ಮಕ್ಕಳ ಸುರಕ್ಷತೆ ಅತ್ಯಂತ ಮಹತ್ವದ್ದು. ಯಾವುದೇ ನಿರ್ಲಕ್ಷ ಮಾಡುವಂತಿಲ್ಲ. ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸಮಿತಿ ಚರ್ಚಿಸಿ ಶಾಲೆಗೆ ರಜೆಯನ್ನು ಘೋಷಿಸಬಹುದಾಗಿದೆ. ಶಾಲೆಗೆ ರಜೆಯನ್ನು ನೀಡಿದ ವಿಷಯ ವಿದ್ಯಾರ್ಥಿಗಳಿಗೆ ತಿಳಿಯದೇ ವಿದ್ಯಾರ್ಥಿಗಳು ಶಾಲೆಗೆ ಬರುವ ಸಾಧ್ಯತೆಗಳು ಇದ್ದಲ್ಲಿ ಶಾಲೆಯಲ್ಲಿ ಒಬ್ಬರಾದರೂ ಶಿಕ್ಷಕರಿದ್ದು ಅವರು ಅಂತಹ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ಜವಾಬ್ದಾರಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಿ.ಇಎಲ್.ಇಡಿ ಕೋರ್ಸ್ನ ದಾಖಲಾತಿಗಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಇಲಾಖಾ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ವೆಬ್ಸೈಟ್ www.schooleducation.kar.nic.in ಅನ್ನು ಸಂಪರ್ಕಿಸಿ, ಪ್ರಸಕ್ತ ಸಾಲಿನ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಡಯಟ್ ಕೇಂದ್ರದಲ್ಲಿ ನಿಗಧಿತ ದಿನಾಂಕದೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಯಟ್ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಸೋನಿಕ್ ಟಿ ಮೊ.ನಂ:9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾರುತಿ ಇಂಟರ್ನ್ಯಾಶನಲ್ ಸ್ಕೂಲ್ ಸುಳ್ಯ ಇಲ್ಲಿ ಸಿಐಎಸ್ಸಿಇ ಶಾಲೆಗಳ ನ್ಯಾಷನಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ 2025-26 ವಲಯಮಟ್ಟದ ಯೋಗಸ್ಪರ್ಧೆಗಳಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. 14 ವರ್ಷದೊಳಗಿನ ವಯೋಮಿತಿಯ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಾದ ಅನ್ಮೋಲ್ ಪ್ರಥಮ ಸ್ಥಾನವನ್ನು, ಅಪರಾಜಿತ್ ನಾಲ್ಕನೇ ಸ್ಥಾನವನ್ನೂ ಪಡೆದಿರುತ್ತಾರೆ. 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 9ನೇ ತರಗತಿಯ ಪ್ರಫುಲ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. 14 ವರ್ಷದೊಳಗಿನ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿನಿಯಾದ ಮಾನ್ಯತಾ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 14 ವರ್ಷದೊಳಗಿನ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಸ್ಥಾನವನ್ನು ಅನ್ಮೋಲ್ ಪಡೆದಿರುತ್ತಾನೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಕರನ್ನು ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟ ಆರಕ್ಷಕ ಠಾಣೆಗೆ ರಾಜ್ಯದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಶನಿವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೋಟ ಪೋಲಿಸ್ ಠಾಣೆಯಲ್ಲಿರುವ ಕಡತಗಳನ್ನು ಪರಿಶೀಲಿಸಿದರಲ್ಲದೆ ಸುಮಾರು ಮುಕಾಲು ಗಂಟೆ ಪೋಲಿಸರು ಇಲಾಖೆಯಾಧಿಕಾರಿಗಳೊಂದಿಗೆ ಚರ್ಚಿಸಿದರು. ಇದೇ ವೇಳೆ ದಲಿತ ಸಮುದಾಯಗಳ ಸಭೆ ಮತ್ತು ಅವರೊಂದಿಗಿನ ಸಮನ್ವಯಗಳ ಕುರಿತು ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಬಳಿ ಚರ್ಚಿಸಿದರು. ಕೋಟ ಆರಕ್ಷಕ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಮಾಹಿತಿ ಪಡೆದ ಅವರು ಕೇಸು ದಾಖಲಿಸಿದರನ್ನು ಸಂಪರ್ಕಿಸಿ ಅವರೊಂದಿಗೂ ಫೋನ್ ಮೂಲಕ ಚರ್ಚಿಸಿದರು. ಅಪಘಾತ, ಕ್ರೂರ ಪ್ರಕರಣಗಳು, ಅಧಿಕೃತ ರಕ್ಷಣಾ ಆಯುಧಗಳ ಪರವಾನಿಗೆ, ಹೊಂದಿರುವವರ ಕುರಿತು ಮಾಹಿತಿ ಪಡೆದರು. ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಸಿವಿಲ್ ವ್ಯಾಜ್ಯಗಳ ಕುರಿತು ಠಾಣಾ ಉಪನಿರೀಕ್ಷಕ ರಾಘವೇಂದ್ರ ಸಿ. ಬಳಿ ಗೃಹ ಸಚಿವರು ಪ್ರಶ್ನಿಸಿ ಗಮನ ಸೆಳೆದರು. ಅಪಘಾತವನ್ನು ಘೋರ ಪಾತಕ ಕೃತ್ಯಗಳಲ್ಲಿ ಪರಿಗಣಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ಉಡುಪಿ ಜಿಲ್ಲಾ ಎಸ್.ಪಿ. ಹರಿರಾಂ ಶಂಕರ್ ಉತ್ತರ…
