ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾಕಾರ್ಸ್ ಕಾಲೇಜಿನಲ್ಲಿ ನಡೆದ ಆಂತರಿಕ ಗುಣಮಟ್ಟ ಭರವಸೆ ಕೋಶ , ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆ್ಯಂಟಿ ಡ್ರಗ್ಸ್ ಅವೇರ್ನೆಸ್ ಸೆಲ್ ಇವರ ಜಂಟಿ ಆಶ್ರಯದಲ್ಲಿ “ಸೈಬರ್ ಅಪರಾಧಗಳ ಇತ್ತೀಚೆಗಿನ ಪ್ರವೃತ್ತಿಗಳು ಹಾಗೂ ಮಾದಕ ವಸ್ತು ವ್ಯಸನ ಮತ್ತು ಯುವಕರು ” ಎಂಬ ವಿಷಯದ ಕುರಿತು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕುಂದಾಪುರ ಪೋಲಿಸ್ ಠಾಣೆಯ ಸಬ್ಇನ್ಸ್ಪೆಕ್ಟರ್ರಾದ ನಂಜ ನಾಯ್ಕ್ ಅವರು ಮಾತನಾಡಿ, ಭಾರತದಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ ವ್ಯಸನ ಹೆಚ್ಚಾಗುತ್ತಿರುವುದು ವಿಷಾಧಕಾರ ಸಂಗತಿ ಹಾಗೂ ಪಂಜಾಬ್ ರಾಜ್ಯದಲ್ಲಿ ಅತಿ ಹೆಚ್ಚು ಜನರು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಭಾರತದಲ್ಲಿ ಪ್ರತಿದಿನ 10 ಜನರು ಇದರಿಂದ ಸಾಯುತ್ತಿದ್ದಾರೆ ಎಂದು ಹೇಳಿದರು. ವಿವಿಧ ರೀತಿಯ ಮಾದಕ ವಸ್ತುಗಳು ಮತ್ತು ಅವುಗಳ ಸೇವನೆಯ ರೀತಿ ಕುರಿತು ತಿಳಿಸಿದರು. ಅದರಿಂದ ಆಗುವ ದೈಹಿಕ ಮತ್ತು ಮಾನಸಿಕ ಪಯ್ನಾಮದ ಬಗ್ಗೆ ಮಾಹಿತಿ ನೀಡಿದರು. ಎಂ. ಡಿ. ಪಿ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಡಿತಲೆ ಹೊಸಬೆಂಗ್ರೆ ಪಂಚಶಕ್ತಿ ಸಂಘ ಸಂಘದ ರಜತ ಮಹೋತ್ಸವದ 2026-27ರ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಮಡಿ ವಿಶ್ವನಾಥ ಖಾರ್ವಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಕೇಶ ಬಂಗೇರ, ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ ಎಸ್ ಖಾರ್ವಿ , ಜೊತೆ ಕಾರ್ಯದರ್ಶಿಯಾಗಿ ಸಂದೇಶ ಖಾರ್ವಿ , ಕೋಶಾಧಿಕಾರಿಯಾಗಿ ಸಂದೀಪ ಬಿ.ಖಾರ್ವಿ ಹಾಗೂ ಪದಾಧಿಕಾರಿಗಳಾಗಿ ಅನಿಶ ಖಾರ್ವಿ, ಲಕ್ಷ್ಮಣ ಖಾರ್ವಿ, ಅನಿಲ ಖಾರ್ವಿ ಮತ್ತು ಪ್ರವೀಣ ಖಾರ್ವಿ ಆಯ್ಕೆಯಾಗಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರದ ಗ್ರೋಸ್ಪೈರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ, ಫ್ರಧಾನ ಕಛೇರಿ, ಕಿನ್ನಿಮುಲ್ಕಿ ಬಸ್ ನಿಲ್ದಾಣದ ಬಳಿ, ಉಡುಪಿ ಇಲ್ಲಿ ಅಕ್ಟೋಬರ್ 17 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಗ್ರೋಸ್ಪೈರ್ ಗ್ರೂಪ್ ಕಂಪನಿಯಲ್ಲಿ ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್, ಬ್ಯುಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ಮತ್ತು ಹೆಚ್.ಆರ್. ಹುದ್ದೆಗಳು ಖಾಲಿ ಇದ್ದು, ಪಿ.ಯು.ಸಿ, ಡಿಪ್ಲೋಮಾ, ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಉಡುಪಿ ಜಿಲ್ಲೆಯ ಉಡುಪಿ ತಾಲೂಕಿಗೆ ಒಳಪಟ್ಟಂತೆ ಗುರಿ ನಿಗಧಿಪಡಿಸಲಾಗಿದ್ದು, ಪ್ರಸಕ್ತ ಸಾಲಿಗೆ ಉಡುಪಿ ತಾಲೂಕಿನ ಪ.ಜಾತಿ/ಪ.ಪಂ/ಹಿಂದುಳಿದ ವರ್ಗ/ಸಾಮಾನ್ಯ ವರ್ಗದ ಅರ್ಹ ಗ್ರಾಮೀಣ ರೈತ ಮಹಿಳೆಯರಿಂದ 5 ವಾರದ 20 ದೇಶಿ/ನಾಟಿ ಕೋಳಿ ಮರಿಗಳ ವಿತರಿಸಿ, ಅವರ ಆದಾಯ ಹೆಚ್ಚಿಸುವ ಕಾರ್ಯಕ್ರಮ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುವೈದ್ಯ ಸಂಸ್ಥೆ ಅಥವಾ ಉಡುಪಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೋಟಾರು ಸೈಕಲ್ನಲ್ಲಿ ಐಸ್ಕ್ರೀಮ್ ಹಾಗೂ ಮೀನು ವ್ಯಾಪಾರ ಮಾಡಿಕೊಂಡಿದ್ದ ಬಿಜೂರು ಉಪ್ಪುಂದ ಮಾಧವ ದೇವಾಡಿಗ (52) ಅವರು ತನಗಿದ್ದ ಬೆನ್ನುನೋವು ಹಾಗೂ ಪತ್ನಿಯ ಕಾಯಿಲೆಯಿಂದ ಮನೆಯ ಸಮೀಪದ ಹಾಡಿಯಲ್ಲಿ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಮುಂಜಾನೆ 04ಗಂಟೆಗೆ ಮೀನು ವ್ಯಾಪಾರ ಮಾಡಲು ಭಟ್ಕಳಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಬೆಳಗ್ಗೆ05:00ಗಂಟೆ ಸುಮಾರಿಗೆ ಅಳಿಯ ಚಂದ್ರರಿಗೆ ಕರೆ ಮಾಡಿ ತನಗೆ ಹಾಗೂ ಹೆಂಡತಿಗೆ ಹುಸಾರಿಲ್ಲ ಎಲ್ಲರನ್ನೂ ಚೆನ್ನಾಗಿ ನೋಡಿಕೋ ಎಂದು ಹೇಳಿದ್ದರು. ಬಳಿಕ ಎಲ್ಲರೂ ಸೇರಿ ಹುಡುಕಿದಾಗ ಮನೆಯ ಬಳಿಯ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ನೇತಾಡುತ್ತಿರುವುದುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಯಿತು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದು. ಇಂದಿನ ಯುವಜನತೆಯೇ ನಾಳಿನ ಸಮಾಜದ ರೂವಾರಿಗಳು. ಆಧುನಿಕತೆ ಹಾಗೂ ತಂತ್ರಜ್ಞಾನದ ಭರಾಟೆಯಲ್ಲಿ ಪಾಶ್ಚಿಮಾತ್ಯ ಜೀವನಶೈಲಿಗೆ ಮಾರುಹೋಗದೆ, ನಮ್ಮ ಸನಾತನ ಮೌಲ್ಯಗಳಾದ ಹಿರಿಯರಿಗೆ ಗೌರವ ನೀಡುವುದು, ಸಹಿ?ತೆ, ಕುಟುಂಬ ವ್ಯವಸ್ಥೆ ಹಾಗೂ ’ವಸುಧೈವ ಕುಟುಂಬಕಂ’ ಎಂಬ ವಿಶಾಲ ಮನೋಭಾವವನ್ನು ಉಳಿಸಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ನಮ್ಮ ಸಂಸ್ಕೃತಿಯೇ ನಮ್ಮ ಗೌರವದ ಪ್ರತೀಕ ಎಂದು ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇವರ ಸಹಯೋಗದಲ್ಲಿ ಶಂಕರನಾರಾಯಣದ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ಯುವ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ದೇಶದ ಭವ್ಯ ಇತಿಹಾಸ, ನೃತ್ಯ, ಸಂಗೀತ, ಸಾಹಿತ್ಯ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜಾನುವಾರುಗಳನ್ನು ಅಕ್ರಮವಾಗಿ ಗೋಹತ್ಯೆ ಮತ್ತು ಮಾಂಸ ಮಾರಾಟದ ಉದ್ದೇಶದಿಂದ ಸಾಗಿಸುತ್ತಿದ್ದ ಜಾಲವೊಂದನ್ನು ಕೋಟ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಜಂಕ್ಷನ್ ಬಳಿ ನಡೆಸಿದ ಸಕಾಲಿಕ ಕಾರ್ಯಾಚರಣೆಯಲ್ಲಿ ಬುಲೆರೋ ಪಿಕ್ಅಪ್ ವಾಹನದಲ್ಲಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಟೇಶ್ವರ ಕಡೆಯಿಂದ ಉಡುಪಿ ಕಡೆಗೆ ಬುಲೆರೋ ಪಿಕ್ ಅಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಕೋಟ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ ಕುಮಾರ್ ಆರ್ ರವರಿಗೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ತಪಾಸಣೆ ಆರಂಭಿಸಿದರು. ಪೊಲೀಸರು ಸಮವಸ್ತ್ರದಲ್ಲಿದ್ದು ಹತ್ತಿರ ಬರುತ್ತಿದ್ದಂತೆ ವಾಹನದಲ್ಲಿದ್ದ ನಾಲ್ವರು ಪರಾರಿಯಾಗಲು ಯತ್ನಿಸಿದರಾದರೂ, ಸಿಬ್ಬಂದಿಗಳು ಅವರನ್ನು ಬೆನ್ನಟ್ಟಿ ವಶಕ್ಕೆ ಪಡೆದರು. ವಿಚಾರಣೆ ನಡೆಸಿದಾಗ ಬಂಧಿತರನ್ನು ಚಿಕ್ಕಬಳ್ಳಾಪುರದ ಪುನೀತ್ (27), ಕೃಷ್ಣಪ್ಪ (40), ಶ್ರೀನಿವಾಸ (56) ಹಾಗೂ ಕೋಲಾರದ ಗಣೇಶ (26) ಎಂದು ಗುರುತಿಸಲಾಗಿದೆ. ವಾಹನವನ್ನು ಪರಿಶೀಲಿಸಿದಾಗ ಜಾಯವಾರುಗಳಿಗೆ ಯಾವುದೇ ಆಹಾರ, ಮೇವು ಹಾಗೂ ನೀರು ನೀಡದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೈಸೂರು ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ವಿನೀಶ್ ರಾವ್ ಅವರು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ISAP (Information Search, Analysis and Presentation) ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಉಪಸ್ಥಿತರಿದ್ದ ಗಣ್ಯರನ್ನು, ಅಧ್ಯಾಪಕರನ್ನು ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ISAP ಕಾರ್ಯಕ್ರಮದ ಮಹತ್ವವನ್ನು ವಿವರಿಸುತ್ತಾ, ತಂತ್ರಜ್ಞಾನ ಲೋಕದಲ್ಲಿ ಯಶಸ್ಸು ಗಳಿಸಲು ಸರಿಯಾದ ಮಾಹಿತಿಯನ್ನು ಹುಡುಕುವುದು, ಅದನ್ನು ವಿಶ್ಲೇಷಿಸುವುದು ಹಾಗೂ ಸಮರ್ಥವಾಗಿ ಪ್ರಸ್ತುತಪಡಿಸುವುದು ಅತ್ಯಗತ್ಯ. ಈ ಕೌಶಲ್ಯಗಳು ವಿದ್ಯಾರ್ಥಿಗಳಲ್ಲಿ ಸ್ವಯಂ ಕಲಿಕೆ ಮತ್ತು ವೃತ್ತಿಪರ ಬೆಳವಣಿಗೆಗೆ ಭದ್ರ ಬುನಾದಿ ಹಾಕುತ್ತವೆ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ. ಜಗದೀಶ ನಾವಡ ಅವರು ಭಾಗವಹಿಸಿ ಮಾತನಾಡಿ, “ಇಂದಿನ ಯುವ ಪೀಳಿಗೆಯಲ್ಲಿ ಅಪಾರ ಪ್ರತಿಭೆ ಹಾಗೂ ಅಗಾಧವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಅವರು ಬುಧವಾರ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ತಾಲೂಕು ಪಂಚಾಯತ್ನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಜ್ಯೋತಿ ಯೋಜನೆ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯಲ್ಲಿ ಫಲಾನುಭವಿಗಳು ಮನೆಗಳಿಗೆ ಬೀಗ ಹಾಕಿರುವುದು, ಪರಿಶೀಲನಾ ಸಮಯದಲ್ಲಿ ಫಲಾನುಭವಿಗಳು ಲಭ್ಯವಿಲ್ಲದೇ ಇರುವುದು, ಸೇರಿದಂತೆ ಮತ್ತಿತರ ಕಾರಣಗಳಿಂದ ಮರುಪರಿಶೀಲನಾ ಪ್ರಕ್ರಿಯೆ ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳದೇ ಇರುವುದರಿಂದ ಸದರಿ ಪ್ರಕ್ರಿಯೆಯನ್ನು ಅ. 31 ರ ವರೆಗೆ ವಿಸ್ತರಿಸಲಾಗಿರುತ್ತದೆ. ಮೆಸ್ಕಾಂ ಸಿಬ್ಬಂದಿಗಳು ಮೂರು ಬಾರಿ ಮನೆ ಭೇಟಿ ನೀಡಿದಾಗಲು ಫಲಾನುಭವಿಗಳು ಲಭ್ಯವಿಲ್ಲದಿದ್ದಲ್ಲಿ, ಫಲಾನುಭವಿಗಳು ಸಂಬಂಧಪಟ್ಟ ಮೆಸ್ಕಾಂ ಕಚೇರಿಗೆ ತೆರಳಿ ಮಾಹಿತಿಯನ್ನು…
