ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನುಷ್ಯನ ಬಗೆ ಬಗೆಯ ಮುಖಗಳನ್ನು ರಂಗಭೂಮಿಯಿಂದ ಮಾತ್ರ ಬಯಲು ಮಾಡಲು ಸಾಧ್ಯವಿದೆ. ಬದುಕಿನ ಪ್ರತಿಬಿಂಬದಂತೆ ಕಾಣುವ ರಂಗಭೂಮಿಯಲ್ಲಿ ಹೆಣ್ಣಿನ ಧ್ವನಿ ಇನ್ನಷ್ಟು ಸಶಕ್ತವಾಗಿ ಮೂಡಿಬರಬೇಕಿದೆ ಎಂದು ಪತ್ರಕರ್ತೆ ರೂಪಾ ಕೋಟೇಶ್ವರ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ’ರಂಗಸುರಭಿ 2016’ ನಾಟಕ ಸಪ್ತಾಹದಲ್ಲಿ ದಿನದ ನುಡಿಗಳನ್ನಾಡುತ್ತಿದ್ದರು. ಮಹಿಳೆಯರು ನಟನೆ, ನಿರ್ದೇಶನದ ಜೊತೆಗೆ ರಂಗ ಪರಿಕಲ್ಪನೆಗಳನ್ನು ಹುಟ್ಟುಹಾಕುವಲ್ಲಿ ಯಶಸ್ವಿಯಾಗಬೇಕು. ಆಗ ಮಾತ್ರ ರಂಗಭೂಮಿಯಲ್ಲಿ ಹೊಸ ಆಯಾಮ ಕಂಡುಕೊಳ್ಳಲು ಸಾಧ್ಯವಿದೆ ಎಂದು ಆಶಯ ವ್ಯಕ್ತಪಡಿಸಿದ ಅವರು ಪ್ರಾದೇಶಿಕ ಭಾಷಾ ಸೊಗಡನ್ನು ರಂಗಭೂಮಿಯಲ್ಲಿ ಅಳವಡಿಸಿಕೊಂಡರೆ ಸುಲಭವಾಗಿ ಜನರ ಮನಸ್ಸನ್ನು ತಟ್ಟಲು ಸಾಧ್ಯವಿದೆ ಎಂದರು. ರಂಗ ಹಾಗೂ ಚಲನಚಿತ್ರ ನಿರ್ದೇಶಕ ರಾಜ್ಗುರು ಹೊಸ್ಕೋಟೆ ಅವರನ್ನು ಸನ್ಮಾನಿಸಲಾಯಿತು. ಜಿ.ಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ತಾಲೂಕು ಅಧ್ಯಕ್ಷ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹುಲ್ಕಡಿಕೆ ದೇವಸ್ಥಾನದಲ್ಲಿ ಆಧ್ಯಾತ್ಮ ಚಿಂತಕ ಮಂಗೇಶ ಶ್ಯಾನುಭೋಗ ಏಳಜಿತ ಅವರ ನೇತೃತ್ವದಲ್ಲಿ ಆಸಕ್ತರಿಗಾಗಿ ಭಗವದ್ಗೀತಾ ಅಭಿಯಾನ ಜರುಗಿತು. ಹಳ್ಳಿಹೊಸೂರು ಮಹಾಬಲೇಶ್ವರ ಮಯ್ಯ ಅವರ ಕುಟುಂಬಿಕರು ಕಾರ್ಯಕ್ರಮ ಭಾಗವಹಿಸಿ ಭಗವದ್ದೀತೆ ಪಾರಾಯಣ ಮಾಡಿದರು.
ಸಾರ್ವಜನಿಕರ ಸಹಭಾಗಿತ್ವದಿಂದ ಕನ್ನಡ ಶಾಲೆಯ ಯಶಸ್ಸು: ಶಾಸಕ ಗೋಪಾಲ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರದೊಂದಿಗೆ ಸಾರ್ವಜನಿಕರ ಸಹಭಾಗಿತ್ವವಿದ್ದರೆ ಕನ್ನಡ ಶಾಲೆಯಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಈ ಬಗ್ಗೆ ಶಿಕ್ಷಕರು ಹಾಗೂ ಊರಿನವರು ಗಂಭೀರವಾಗಿ ಚಿಂತಿಸಿ ಸರಕಾರಿ ಶಾಲೆಗಳ ಉಳಿವಿಗೆ ಕೈಜೊಡಿಸುವ ಅಗತ್ಯವಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ವಲಯದ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಬಿಸಿಯೂಟ, ಹಾಲು, ಪುಸ್ತಕ, ಸಮವಸ್ತ್ರ, ಬೂಟು, ಸ್ಕಾಲರ್ಶಿಪ್ ಮೂಲಕ ಕನ್ನಡ ಶಾಲೆಯ ಮಕ್ಕಳ ಕಲಿಕೆಗೆ ಸರಕಾರ ವಿಶೇಷ ಆದ್ಯತೆಯನ್ನು ನೀಡುತ್ತಿದೆ. ಆದಾಗ್ಯೂ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಉತ್ತಮ ಶಿಕ್ಷಣದೊಂದಿಗೆ ಸಾರ್ವಜನಿಕರ ಸಹಕಾರದಿಂದ ಸರಕಾರಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದರೆ ಕನ್ನಡ ಮಾಧ್ಯಮ ಶಾಲೆಯಲ್ಲಿಯೂ ಮಕ್ಕಳ ಉನ್ನತಿಯನ್ನು ಕಾಣಬಹುದಾಗಿದೆ ಎಂದರು. ಕುಂದಾಪ್ರ ಡಾಟ್…
ಕುಂದಾಪ್ರ ಡಾಟ್ ಕಾಂ ವರದಿ. ಯಾವುದೇ ಊರಿನ ಶ್ರೀಮಂತಿಕೆ ತೆರೆದುಕೊಳ್ಳುವುದು ಅಲ್ಲಿ ಇರುವ ವಿದ್ಯಾ ಸಂಸ್ಥೆಗಳ ವೈಭವದಲ್ಲಿ. ವಿದ್ಯೆ ನೀಡುವ ಶಾಲೆಗಳು ಊರಿನ ಅತ್ಯಮೂಲ್ಯ ಆಸ್ತಿ. ಊರಿನ ಪ್ರತಿಯೊಬ್ಬ ವ್ಯಕ್ತಿ ಮತ್ತು ಸಮಾಜದ ಬೆಳವಣಿಗೆಯ ಹಿಂದೆ ಶಾಲೆಗಳು ವಹಿಸುವ ಪಾತ್ರ ಅನನ್ಯವಾದದ್ದು. ಅಂತಹ ಶಾಲೆಗಳನ್ನು ಉಳಿಸಿ ಬೆಳೆಸಿ ಅಭಿವೃದ್ಧಿಗೊಳಿಸಿ ಭವಿತವ್ಯವನ್ನು ಮತ್ತಷ್ಟು ಸುಂದರವಾಗಿಸುವ ಹೊಣೆಗಾರಿಕೆ ಎಲ್ಲರದ್ದೂ ಆಗಿದೆ ಕಳೆದ ಐವತ್ತು ವರುಷಗಳಿಂದ ಊರ ಪರವೂರ ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಾ ಸಾರ್ಥಕ ಐವತ್ತು ವರುಷಗಳನ್ನು ಪೂರೈಸಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿರುವ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಫ್ರೌಢಶಾಲೆ ಇದೀಗ ತನ್ನ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ 1966ರಲ್ಲಿ ಪೂಜ್ಯ ಫಾದರ್ ಮೈಕಲ್ ನೊರೊನ್ನಾ ಅವರು ಗಂಗೊಳ್ಳಿಯ ಕಡಲ ತಡಿಯಲ್ಲಿ ಹೆಣ್ಮಕ್ಕಳಿಗಾಗಿಯೇ ವಿಶೇಷವಾದ ಫ್ರೌಢಶಾಲೆಯನ್ನು ತೆರೆಯುವ ಕನಸು ಹೊತ್ತು ಗಂಗೊಳ್ಳಿಯ ಮಾತಾ ಕೊಸೆಸಾಂವ್ ಅಮ್ಮನವರ ಇಗರ್ಜಿಯ ಸನಿಹದಲ್ಲಿ ಶಾಲೆಯೊಂದನ್ನು ಸಣ್ಣ ಕೊಠಡಿಯೊಂದರಲ್ಲಿ ಆರಂಭಿಸಿದರು.ಕಡಲ ತಾರೆ ಎನ್ನುವ ಅನ್ವರ್ಥ ನಾಮದೊಂದಿಗೆ ಆ ಶಾಲೆಗೆ ಸ್ಟೆಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಭಾರತದ ಪರ ಪ್ರಮುಖ ಮೂರು ಯುದ್ಧಗಳಲ್ಲಿ ಹೋರಾಟ ನಡೆಸಿದ ಹಾಗೂ ಪ್ರಥಮ ರಾಷ್ಟ್ರಧ್ಯಕ್ಷ ಬಾಬು ರಾಜೇಂದ್ರ ಪ್ರಸಾದ್ ಅಂಗ ರಕ್ಷಕರಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಯೋಧ ಸಾಸ್ತಾನ ನಿವಾಸಿ ಮೇಜರ್ ನಾರಾಯಣ(೮೫)ಗುರುವಾರದಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಮತ್ತು ಇರ್ವರು ಪುತ್ರಿಯರನ್ನು ಅಗಲಿದ್ದಾರೆ. ೧೯೫೨ರಲ್ಲಿ ಸೇನೆಗೆ ಸೇರ್ಪಡೆಗೊಂಡು ೧೯೬೨ ರ ಭಾರತ ಚೀನ ಯುದ್ಧ, ೧೯೭೧ ರ ಭಾರತ ಪಾಕಿಸ್ಥಾನ ಯುದ್ಧ ಹಾಗೂ ಭಾರತ ಬಾಂಗ್ಲಾ ಯುದ್ಧದಲ್ಲಿ ಹೋರಾಟ ನೆಡೆಸಿ ವೀರ ಪದಕ ಫಡೆದಿದ್ದರು ಮತ್ತು ನಾಗಲ್ಯಾಂಡ್ ಬಂಡುಕೋರರನ್ನು ಹಿಮ್ಮೆಟ್ಟಿಸಿದ ತಂಡದಲ್ಲಿ ಪ್ರಮುಖರಾಗಿದ್ದು ಕಿಂಗ್ ಆಫ್ ನಾಗ ಹಿಲ್ಸ್ ಬಿರುದು ಪಡೆದಿದ್ದರು. ಸೇನೆಯಲ್ಲಿರುವಾಗ ಪ್ರಥಮ ರಾಷ್ಟ್ರಾಧ್ಯಕ್ಷ ಬಾಬು ರಾಜೇಂದ್ರ ಪ್ರಸಾದ್ ಅವರ ಅಂಗರಕ್ಷಕರಾಗಿ ಸೇವೆ ಸಲ್ಲಿಸಿದ್ದರು. ೧೯೭೨ ರಲ್ಲಿ ಸೇನೆಯಿಂದ ನಿವೃತ್ತಿ ಪಡೆದು ಮಾಜಿ ಸೈನಿಕರ ಸಂಘದ ಪದಾಧಿಕಾರಿಯಾಗಿ, ಹವ್ಯಾಸಿ ಲೇಖಕರಾಗಿ ನಿವೃತ್ತ ಜೀವನ ನಡೆಸುತ್ತಿದ್ದರು.ಪ್ರಶಸ್ತಿ, ಪುರಸ್ಕಾರಗಳಿಗೆ ಆಸೆ ಪಡದ ಅವರನ್ನು ಸಾಸ್ತಾನದಲ್ಲಿ ಯುವಬ್ರಿಗೇಡ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ವತಃ ಜಾಗವಿಲ್ಲದೇ ಸರಕಾರಿ ಜಾಗದಲ್ಲಿ ಹತ್ತಾರು ವರ್ಷಗಳಿಂದ ನೆಲೆ ಕಂಡಿರುವರಿಗೆ ಹಕ್ಕಪತ್ರ ನೀಡಲು ಜಿಲ್ಲಾಡಳಿತ ಹಾಗೂ ತಾಲೂಕು ಕಂದಾಯ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿದ್ದು, ಅರ್ಹ ಫಲಾನುಭಾವಿಗಳು ಮೂಲಭೂತ ಸೌಕರ್ಯಗಳಿಲ್ಲದೇ ಪರದಾಡುವಂತಾಗಿದೆ. ಇಲಾಖಾಧಿಕಾರಿಗಳ ಬೇಜವಾಬ್ದಾರಿಯಿಂದ ಬಡವರು ಸಂಕಷ್ಟದಲ್ಲಿ ಸಿಲುಕುವಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ವಿಷಾದ ವ್ಯಕ್ತಪಡಿಸಿದರು ಕುಂದಾಪುರ ತಾಲ್ಲೂಕಿನಾದ್ಯಾಂತ ೯೪ಸಿ ಕಾಯಿದೆಯನ್ವಯ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಹಕ್ಕು ಪತ್ರ ನೀಡುವಲ್ಲಿ ಕಂದಾಯ ಇಲಾಖೆಯ ವಿಳಂಬ ಧೋರಣೆ ಖಂಡಿಸಿ ಶುಕ್ರವಾರ ಇಲ್ಲಿನ ಮಿನಿ ವಿಧಾನಸೌಧದ ಎದುರು ನಡೆದ ಬೃಹತ್ ಪ್ರತಿಭಟನಾ ಧರಣಿಯಲ್ಲಿ ಅವರು ಮಾತನಾಡಿದರು. ಜಿಲ್ಲಾಡಳಿತ ಹಾಗೂ ತಾಲೂಕು ಕಂದಾಯ ಇಲಾಖೆಯ ವಿಳಂಬ ನೀತಿಯಿಂದಾಗಿ ತಾಲೂಕಿನ ಸಾವಿರಾರು ಬಡ ಜನರು ಮೂಲಸೌಕರ್ಯದಿಂದ ವಂಚಿತರಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಶಾಸನ ಸಭೆಯಲ್ಲಿ ಭರವಸೆ ಹಾಗೂ ಕಂದಾಯ ಮಂತ್ರಿಗಳ ಆದೇಶವನ್ನೂ ಲೆಕ್ಕಿಸದೇ ಇಲಾಖೆ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಬಡವರ ಕೆಲಸದ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ರೀಯಾತ್ಮಕ ಹಾಗೂ ರಚನಾತ್ಮಕ ಸಾಂಸ್ಕೃತಿಕ ಮನಸ್ಸು ನಿರಂತರವಾಗಿ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಸುಂದರ ವಾತಾವರಣ ನಿರ್ಮಾಣವಾಗುತ್ತದೆ. ಯಕ್ಷಗಾನ, ರಂಗಭೂಮಿ,ಕಲೆ ಸಾಹಿತ್ಯ ಕ್ಷೇತ್ರದಲ್ಲಿ ಹತ್ತಾರು ದಿಗ್ಗಜರುಗಳು ಹುಟ್ಟಿದ ಕರಾವಳಿಯ ಮಣ್ಣಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿಪುಲ ಅವಕಾಶಗಳಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು. ಅವರು ಸುರಭಿ ರಿ. ಬೈಂದೂರು ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ ರಂಗಸುರಭಿ – ೨೦೧೬ರ ನಾಟಕ ಸಪ್ತಾಹದಲ್ಲಿ ಪಡುವರಿ ಗ್ರಾಮದ ಮಾವಿನಕುಳಿಯಲ್ಲಿ ಸುರಭಿ ಕಲಾಗ್ರಾಮಕ್ಕೆ ಶಿಲನ್ಯಾಸಗೈದ ಬಳಿಕ ಶಾರದಾ ವೇದಿಕೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಲಾ ರಸಿಕರು ಕಲಾ ಪ್ರೋತ್ಸಾಹಕರು ಇಲ್ಲದೇ ಇದ್ದರೇ ಏನನ್ನೂ ಮಾಡಲು ಸಾಧ್ಯವಿಲ್ಲ. ಎಲ್ಲರ ಬೆಂಬಲದಿಂದ ಮಾತ್ರ ಉತ್ತಮ ಕಾರ್ಯಕ್ರಮಗಳ ಆಯೋಜನೆ ಸಾಧ್ಯ. ಸುರಭಿ ಸಂಸ್ಥೆಯ ನಿರಂತರವಾಗಿ ವಿದ್ಯಾರ್ಥಿಗಳಿಗೆ ಸಂಗೀತ, ಕಲೆಗಳ ತರಬೇತಿ ನೀಡುತ್ತಾ, ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಾಂಸ್ಕೃತಿಕ ಜಾಗೃತಿ ಮೂಡಿಸುತ್ತಿದ್ದು, ಸರಕಾರದ ಮಟ್ಟದಲ್ಲಿ ಅಗತ್ಯ ನೆರವು…
ಇಂದಿರಾ ಗಾಂಧಿಯ ಕ್ರಾಂತಿಕಾರಿ ಹೆಜ್ಜೆಗಳು ಬಡತನ ನಿವಾರಣೆಗೆ ಶ್ರಮಿಸಿದ್ದವು ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಗತ್ತಿನ ಕೆಲವೇ ಮುಂಚೂಣಿ ಮಹಿಳಾ ನಾಯಕಿಯಾಗಿ ಪೈಕಿ ಗುರುತಿಸಿಕೊಂಡಿದ್ದ ಇಂದಿರಾ ಗಾಂಧಿ, ಹದಿನಾರು ವರ್ಷ ದೇಶದ ಪ್ರಧಾನಿಯಾಗಿ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟು, ಜನಪರ ಕಾರ್ಯಕ್ರಮಗಳ ಮೂಲಕ ಬಡತನ ನಿವಾರಣೆಗೆ ಶ್ರಮಿಸಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದರು. ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಜೆಎನ್ಆರ್ ಕಲಾಮಂದಿರದಲ್ಲಿ ನಡೆದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಮತ್ತು ಬ್ಲಾಕ್ ನೂತನ ಅಧ್ಯಕ್ಷೆ ಗೌರಿ ದೇವಾಡಿಗರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾಗತಿಕ ಶಾಂತಿಗೆ ಇಂದಿಗಾ ಗಾಂಧೀ ಅವರ ಕೊಡುಗೆ ವಿಶೇಷವಾದುದು. ದೇಶದ ಮಹಿಳೆಯರಿಗೆ ಶಕ್ತಿ, ಅವಕಾಶ ಬಂದುದು ಅವರಿಂದ. ದೇಶದ ಅಖಂಡತೆಗಾಗಿ ಅವರು ಬಲಿದಾನವಾದರು. ದೇಶದ ಜನ ಆತ್ಮಸ್ಥೈರ್ಯ ಕಳೆದುಕೊಳ್ಳದೆ, ಗೌರವ ಬರುವಂತೆ ಕೆಲಸ ಮಾಡಬೇಕು ಎಂದರು. ಮಹಿಳೆಯರು ರಾಜಕೀಯ ಕ್ಷೇತ್ರಕ್ಕೆ ಬಂದಾಗ ಹಲವು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಟಕವನ್ನು ಚಂದಗೊಳಿಸುವ ಕಡೆಗೆ ನಿರ್ದೇಶಕರು ಗಮನ ಹರಿಸುವುದಕ್ಕಿಂತ ಹೆಚ್ಚಾಗಿ ರಂಗಭೂಮಿಯನ್ನು ಸದೃಢವಾಗಿ ಕಟ್ಟುವ ಬಗೆಗೆ ಮನಸ್ಸು ಮಾಡಿ, ವೈಚಾರಿಕ ಬೆಳೆ ತೆಗೆಯಲು ಪ್ರಯತ್ನಿಸಬೇಕಿದೆ ಎಂದು ಹೊನ್ನಾವರದ ರಂಗ ನಿರ್ದೇಶಕ ಕಿರಣ್ ಭಟ್ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಬೈಂದೂರಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ’ರಂಗಸುರಭಿ ೨೦೧೬’ ನಾಟಕ ಸಪ್ತಾಹದ ಎರಡನೇ ದಿನ ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದರು. ರಂಗಭೂಮಿಯ ಪ್ರತಿನಟನೂ ಎದುರಿಗೆ ತನ್ನನ್ನು ನೋಡುವವರಿದ್ದಾರೆ ಎಂಬ ಗ್ರಹಿಕೆಯ ಮೆಲೆ ನಟಿಸುತ್ತಾನೆ. ಆ ಮೂಲಕ ಪಾತ್ರವನ್ನು ಜೀವಿಸುತ್ತಾನೆ. ನಾಟಕ ಪ್ರೇಕ್ಷಕರನ್ನು ಭ್ರಮೆಯಿಂದ ವಾಸ್ತಗಳತ್ತ ಕರೆದೊಯ್ಯುವಂತಿರಬೇಕು. ರಂಗಭೂಮಿ ಲೋಕಭೂಮಿಯಾದಾಗ ನಮ್ಮಲ್ಲಿನ ತುಮುಲುಗಳನ್ನು, ಸಂವೇದನೆಯನ್ನು ಹಂಚಿಕೊಳ್ಳಲು ಸಾಧ್ಯವಿದೆ. ನಮ್ಮನ್ನು ಮಾತನಾಡದೇ ಇರುವ ಹಾಗೆ ಮಾಡುವ ಪ್ರಯತ್ನಗಳು ಸುತ್ತಲು ನಡೆಯುತ್ತಿರುವ ಈ ಸಮಯದಲ್ಲಿ ರಂಗಭೂಮಿಯ ಜವಾಬ್ದಾರಿ ಹೆಚ್ಚಿದೆ. ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳುವ ತಾಕತ್ತು ಇಲ್ಲಿರುವುದರಿಂದ…
