ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಪಡುಕರೆ ಸಹಕಾರಿ ಹಾಲು ಉತ್ಪಾದಕರ ಸಂಘದ ಮಹಾಸಭೆ ಗುರುವಾರ ಪಡುಕರೆ ಸದ್ಯೋಜಾತ ಸಭಾಂಗಣದಲ್ಲಿ ಜರಗಿತು. ಈ ಸಂದರ್ಭದಲ್ಲಿ ನೂತನವಾಗಿ ಕೆ.ಎಂ.ಎಫ್ ನಿರ್ದೇಶಕರಾಗಿ ಆಯ್ಕೆಗೊಂಡ ಕೆ. ಶಿವಮೂರ್ತಿ ಉಪಾಧ್ಯಾ ಅವರನ್ನು ಸಂಘದ ವತಿಯಿಂದ ವಿಶೇಷವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಉಪಾಧ್ಯಕ್ಷ ಭಾಸ್ಕರ್ ಶೆಟ್ಟಿ ಈ ಭಾಗದ ಒರ್ವ ನೈಜ ಹೈನುಗಾರ ಹಾಗೂ ಸಂಘಟಕ ಶಕ್ತಿಯನ್ನು ಕೆ.ಎಂ ಎಫ್ ಗೆ ಆಯ್ಕೆಗೊಳಿಸಿ ಈ ಭಾಗದ ಧ್ವನಿಯಾಗಿ ಕಾರ್ಯನಿರ್ವಹಿಸಲು ಅನುಕೂಲಕರ ವಾತಾವರಣ ಕಲ್ಪಿಸಲಿದೆ ಎಂದರಲ್ಲದೆ ಹೈನುಗಾರಿಕೆಗೆ ಒಕ್ಕೂಟದಿಂದ ಪ್ರೋತ್ಸಾಹಕ್ಕೆ ಬೇಕಾದ ಅಗತ್ಯ ಕ್ರಮ ಕೈಗೊಳ್ಳಲು ಸಲಹೆ ನೀಡಿದರು. ಹೈನುಗಾರಿಕೆ ವೃತ್ತಿಯಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂಬುವುದನ್ನು ಇತ್ತೀಚಿಗಿನ ಅಧ್ಯಯನದ ಮೂಲಕ ತಿಳಿದು ಬಂದಿದೆ. ಈ ದಿಸೆಯಲ್ಲಿ ಹೆಚ್ಚು ಹೆಚ್ಚು ಯುವ ಆಸಕ್ತರು ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವಂತೆ ಕರೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶಿವಮೂರ್ತಿ ಕೆ. ವಹಿಸಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರ್ವೋದಯದ ಸತ್ಯಾಗ್ರಹ, ಸ್ವರಾಜ್ಯದ ಪರಿಕಲ್ಪನೆಯ ಭಾರತವನ್ನು ನಾವು ಕಟ್ಟಬೇಕು. ರಾಜಕೀಯ ಚಿಂತನೆಗಳು ಮೂಲಭೂತ ಚಿಂತನೆಗಳಿಗೆ ಒಳಗಾಗಬೇಕು. ಅಂದಿನ ಚಿಂತನೆಗಳನ್ನು ಇಂದು ನೋಡಲು ಸಾಧ್ಯವಿಲ್ಲ . ಆದರೆ ಸರ್ವಧರ್ಮ ಸಮಭಾವ, ಸರ್ವೋದಯದ ಪರಿಕಲ್ಪನೆಯ ರಾಷ್ಟ್ರೀಯತೆ ರೂಪುಗೊಳ್ಳಬೇಕು ಎಂದು ಮಣಿಪಾಲ ಗಾಂಧಿಯನ್ ಸೆಂಟರ್ ಫಾರ್ ಫಿಲೋಸಾಫಿಕಲ್ ಆರ್ಟ್ಸ್ ಮತ್ತು ಸೈನ್ಸ್ ಹೈಯರ್ ಎಜುಕೇಷನ್ ಇದರ ನಿರ್ದೇಶಕರಾದ ವರದೇಶ್ ಹಿರೆಗಂಗೆ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ, ಆಂತರಿಕ ಗುಣಮಟ್ಟ ಭರವಸೆ ಕೋಶ, ಮತ್ತು ಮಂಗಳೂರು ವಿಶ್ವವಿದ್ಯಾಲಯದ ರಾಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ ಸಹಯೋಗದಲ್ಲಿ ಗುರುವಾರ ನಡೆದ ತೃತೀಯ ಸೆಮಿಸ್ಟರ್ ರಾಜ್ಯ ಶಾಸ್ತ್ರ ಪಠ್ಯಕ್ರಮದ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪಠ್ಯಕ್ರಮದ ನೆಲೆಯಲ್ಲಿ ರಾಜಕೀಯ ಚಿಂತನೆಗಳಲ್ಲಿ ಆಯಾ ಕಾಲಘಟ್ಟದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ರಾಜಕೀಯ ಶಾಸ್ತ್ರ ಎನ್ನುವುದು ವಿಶಾಲ ವ್ಯಾಪ್ತಿಯ ಕ್ಷೇತ್ರ. ಜಗತ್ತಿನಾದ್ಯಂತ ಹರಡಿಕೊಂಡ ಪ್ರಾಚೀನ ಜ್ಞಾನ ಶಾಸ್ತ್ರ. ವಿಶ್ವದೆಲ್ಲೆಡೆ ಹಲವು ಮಜಲುಗಳನ್ನು ಕಾಯ್ದುಕೊಂಡಿದೆ. ಹಲವು ಸಿದ್ಧಾಂತಗಳನ್ನು ಒಳಗೊಂಡಿದೆ. ಪ್ರಪಂಚದ ಬೇರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಒತ್ತೆಯಾಗಿಟ್ಟುಕೊಂಡು ಹೋರಾಡಿ ನಿವೃತ್ತಿ ಹೊಂದಿದ ಯೋಧರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಭಾರತೀಯ ಜನತಾ ಪಕ್ಷ ಮಾಡುತ್ತಿದೆ. ಬೈಂದೂರು ಮಂಡಲದ ವ್ಯಾಪ್ತಿಯ ಎಲ್ಲಾ ಮಹಾಶಕ್ತಿ ಕೇಂದ್ರಗಳಲ್ಲಿ ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಸೂಚನೆಯಂತೆ ನಿವೃತ್ತ ಯೋಧರನ್ನು ಗೌರವಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ ಹೇಳಿದರು. ಅವರು ಬಿಜೆಪಿ ಬೈಂದೂರು ಮಂಡಲ ವತಿಯಿಂದ ಗಂಗೊಳ್ಳಿಯಲ್ಲಿ ಗುರುವಾರ ನಡೆದ ನಿವೃತ್ತ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ಸಂದರ್ಭ ನಿವೃತ್ತ ವಾಯುಸೇನೆಯ ಯೋಧ ಟಿ. ದಿನಕರ ಶೆಣೈ ಅವರನ್ನು ಬಿಜೆಪಿ ಬೈಂದೂರು ಮಂಡಲ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮಂಡಲ ಉಪಾಧ್ಯಕ್ಷರಾದ ಮಿಥುನ್ ಎಂ.ಡಿ.ಬಿಜೂರು, ಮಾಲತಿ ನಾಯಕ್, ನಾಗರತ್ನ, ಖಜಾಂಚಿ ಗಣೇಶ ಗಾಣಿಗ, ತ್ರಾಸಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವೀಂದ್ರ ಖಾರ್ವಿ ಹೊಸಪೇಟೆ, ಯುವಮೋರ್ಚಾ ಪ್ರಮುಖ ಜಯಂತ ಶೇರುಗಾರ್, ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಇವರ ಸಂಯುಕ್ತಾ ಆಶ್ರಯದಲ್ಲಿ ನಡೆದ , ಕುಂದಾಪುರ ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರ ಕಲ್ಯಾಣಕ್ಕಾಗಿ, ಒಳಿತಿಗಾಗಿ ಯೋಜನೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತದೆ. ಸರಕಾರದ ವಿಮೆ, ಪಿಂಚಣಿ ಯೋಜನೆಯಲ್ಲಿ ನೊಂದಾಯಿಸಿಕೊಂಡು ಜೀವನದ ಭದ್ರತೆ ಕಡೆಗೆ ಗಮನ ನೀಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಅವರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಂಗೊಳ್ಳಿ ಶಾಖೆ ಆಶ್ರಯದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕೇಂದ್ರ ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಶಿಬಿರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಸರಕಾರ ಜಾರಿಗೆ ತಂದಿರುವ ಪಿಎಂಜೆಜೆಬಿವೈ ಮತ್ತು ಪಿಎಂಎಸ್ಬಿವೈ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆ ಉಪಯುಕ್ತವಾಗಿದ್ದು, ಗ್ರಾಹಕರು ಈ ಯೋಜನೆಯಡಿ ನೊಂದಾಯಿಸಿಕೊಳ್ಳಬೇಕು. ಆಪತ್ಕಾಲದಲ್ಲಿ ಇದರ ಪ್ರಯೋಜನ ನಮ್ಮ ಕುಟುಂಬದ ಸದಸ್ಯರಿಗೆ ದೊರೆಯಲಿದೆ ಎಂದರು. ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ಪಿಡಿಒ ಶೋಭಾ ಮತ್ತು ಪತ್ರಕರ್ತ ಬಿ.ರಾಘವೇಂದ್ರ ಪೈ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಮೆಮೋರಿಯಲ್ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ನೇಶನಲ್ ಪದವಿಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀ ರಾಮ ಭಟ್ ಸಜನ್ಗದ್ದೆ ಅವರು ಕಾರ್ಯಕ್ರಮ ಉದ್ಘಾಟಿಸಿ, ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಬದಕು ಮತ್ತು ಸಾಧನೆಗಳನ್ನು ಸ್ಮರಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಭಾಸ್ಕರ್ ಶೆಟ್ಟಿ ಎಸ್. ಅವರು ಕಾಲೇಜಿನ ಗ್ರಂಥಾಲಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು. ಕಾಲೇಜಿನ ಗ್ರಂಥಪಾಲಕ ಡಾ. ಹರೀಶ್ ಸಿ.ಕೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕಿ ರೋಹಿಣಿ ಹೆಚ್. ಬಿ . ಕಾರ್ಯಕ್ರಮವನ್ನು ನಿರೂಪಿಸಿ, ಅಧ್ಯಾಪಕ ಕಾರ್ಯದರ್ಶಿಗಳಾದ ಪಾಪಣ್ಣ ಎನ್. ಎ. ವಂದಿಸಿದರು. ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಯ್ಯಾಡಿ ಇವರ ಆತಿಥ್ಯದಲ್ಲಿ ನಡೆದ ಖಂಬದಕೋಣೆ ಹೋಬಳಿ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನ ಮೂರು ವಿದ್ಯಾರ್ಥಿಗಳು ಹೋಬಳಿ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 14ರ ವಯೋಮಾನದ ಹುಡುಗರ ವಿಭಾಗದಲ್ಲಿ ಹರಿಜಿತ್ (8ನೇ ತರಗತಿ ), ಸನ್ವಿತ್ (8ನೇ ತರಗತಿ) ಮತ್ತು ತನಿಷ್( 8ನೇತರಗತಿ), ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತು ವಿರೋಧಿ ಸಮಿತಿಯ ಆಶ್ರಯದಲ್ಲಿ ಸಾಮೂಹಿಕ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಾವತಿ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು ನಮ್ಮ ಜಿಲ್ಲೆ, ರಾಜ್ಯ ಹಾಗೂ ದೇಶ ನಶಾ ಮುಕ್ತ ಆಗುವಲ್ಲಿ ಯುವ ಜನತೆ ಪಣ ತೊಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ನಾರಾಯಣ ಪೈ ಹಾಗೂ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು. ಮಾದಕ ದ್ರವ್ಯ ವಿರೋಧಿ ಸಮಿತಿಯ ಸಂಚಾಲಕರು ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಪ್ರತಿಜ್ಞಾ ವಿಧಿ ಬೋಧಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ಸಮಿತಿಯು ಬುಧವಾರ ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಿತ್ಯ ಜೀವನದಲ್ಲಿ ಕಾನೂನು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಬಂಟ್ವಾಳದ ಹಿರಿಯ ನ್ಯಾಯವಾದಿ ಶೈಲಜಾ ರಾಜೇಶ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಕಾನೂನಿನ ಮಹತ್ವ ಹಾಗೂ ಜೀವನದಲ್ಲಿನ ಅದರ ಅನ್ವಯ ಕುರಿತು ಮಾರ್ಗದರ್ಶನ ನೀಡಿದರು. ಮನುಷ್ಯನ ಬದುಕಿನ ಪ್ರತಿಯೊಂದು ಹಂತವೂ ಕಾನೂನಿನ ನಿಯಮಗಳು, ಹಕ್ಕುಗಳು ಮತ್ತು ಕರ್ತವ್ಯಗಳಿಂದ ಕೂಡಿರುತ್ತದೆ. ಜನನದಿಂದ ಆರಂಭಿಸಿ ಸಾವಿನವರೆಗಿನ ಪ್ರತಿಯೊಂದು ಪ್ರಕ್ರಿಯೆಯು ಕಾನೂನು ನಿರ್ದಿಷ್ಟಗೊಳಿಸಿದ ವ್ಯವಸ್ಥೆಯೊಳಗೆ ನಡೆಯುತ್ತದೆ. ಕಾನೂನಿನ ಈ ಚೌಕಟ್ಟಿನ ಅರಿವಿದ್ದಾಗ ನಾವೂ ಜವಾಬ್ದಾರಿಯಿಂದ ಸಮಾಜದಲ್ಲಿ ಬದುಕಲು ಸಾಧ್ಯ ಎಂದರು. ಮಹಿಳೆಯರು ಸಮಾಜದಲ್ಲಿ ಅನೇಕ ಬಾರಿ ವಂಚನೆಗೆ ಒಳಗಾಗುತ್ತಾರೆ ಎಂಬುದು ಸತ್ಯ. ಆದರೆ ಕೆಲವರು ಅದೇ ಕಾನೂನನ್ನು ದುರುಪಯೋಗ ಪಡಿಸಿಕೊಂಡ ಉದಾಹರಣೆಗಳಿವೆ ಎಂದರು. ನಾವೆಲ್ಲ ಹಕ್ಕುಗಳ ಬಗ್ಗೆ ಹೆಚ್ಚು ಚರ್ಚಿಸುತ್ತೇವೆ, ಆದರೆ ಕರ್ತವ್ಯಗಳಿಂದ ದೂರವಾಗುತ್ತಿರುವುದು ದುಖಃಕರ. ಮಕ್ಕಳು ಸುಖ ಜೀವನದಲ್ಲೇ ಬೆಳೆದರೆ ಕಷ್ಟದ ಮೌಲ್ಯ ಅರಿಯಲಾರರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರದಂದು ” ಕ್ರಿಯೇಟಿವ್ ಪುಸ್ತಕ ಧಾರೆ – 2025 ” ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ…ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕಾರ್ಯಕ್ರಮ ನಡೆಯಿತು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಅವರು ಉದ್ಘಾಟಿಸಿ ಮಾತನಾಡಿ, “ಪುಸ್ತಕವೆಂದರೆ ಕೇವಲ ಅಕ್ಷರಗಳ ಸಂಗ್ರಹವಲ್ಲ. ಅದು ಕಾಲ, ಸಮಾಜ ಮತ್ತು ಮಾನವನ ಭಾವನೆಗಳ ಪ್ರತಿಬಿಂಬ. ಇಂತಹ ಕಾರ್ಯಕ್ರಮಗಳು ಓದುವ ಅಭ್ಯಾಸವನ್ನು ಪುನರುಜ್ಜೀವನಗೊಳಿಸುತ್ತವೆ ” ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ಸಾಹಿತಿಗಳು ಹಾಗೂ ಚಿತ್ರ ನಿರ್ದೇಶಕರಾದ ಡಾ. ನಾಗತಿಹಳ್ಳಿ ಚಂದ್ರಶೇಖರ್ ಅವರು ಮಾತನಾಡಿ, “ಪುಸ್ತಕವೆಂದರೆ ಕೇವಲ ಹಾಳೆಗಳ ಗುಚ್ಛವಲ್ಲ. ಅದು ಕಾಲದ ಸ್ಮರಣೆ, ಸಮಾಜದ ಕನ್ನಡಿ ಮತ್ತು ಮನಸ್ಸಿನ ಆಳದಿಂದ ಹೊರ ಹೊಮ್ಮುವ ಭಾವಧಾರೆ ಮತ್ತು ಮಾನವನ ಮನಸ್ಸಿನ ನಕ್ಷೆಯೇ ಆಗಿದೆ ” ಎಂದರು. ಸಹ ಸಂಸ್ಥಾಪಕರಾದ ಅಶ್ವತ್…
