Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ (ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್) ಪದವಿ ಪ್ರವೇಶಾತಿಗಾಗಿ, ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್  https://uucms.karnataka.gov.in ಅಥವಾ https://www.cavamysore.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 0821-2438931 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಕ್ಕಳನ್ನು ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗಿರಿಸದೆ, ಮಕ್ಕಳು ಎಲ್ಲಾ ವಿಧದ ಜ್ಞಾನಗಳನ್ನು ಪಡೆಯುವ ಅವಕಾಶವನ್ನು ಕಲ್ಪಿಸಿಕೊಡಬೇಕು ಎಂದು ಹೆಸ್ಕುತೂರು  ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ಹೇಳಿದರು. ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಮೂರು ದಿನಗಳ ಶಿಕ್ಷಕರ ತರಬೇತಿ ಕಾರ್ಯಗಾರ ಒರಿಯೆಂಟೇಷನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಶಿಕ್ಷಣದ ನಿಜವಾದ ಕಲ್ಪನೆಯು ಮಕ್ಕಳಲ್ಲಿ ಅಡಕವಾಗಿರುವ ಎಲ್ಲಾ ಪ್ರತಿಭೆಯನ್ನು ಹೊರ ಜಗತ್ತಿಗೆ ಪರಿಚಯಿಸುವುದಾಗಿದೆ. ಹೆಚ್ಚು ಹೆಚ್ಚು ಚಟುವಟಿಕೆಗಳನ್ನು ಪಠ್ಯದ ಜೊತೆಯಲ್ಲಿ ಅಳವಡಿಸಿಕೊಂಡಾಗ ಮಕ್ಕಳು ಆಸಕ್ತಿದಾಯಕ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಕರು ಹೆಚ್ಚು ತರಬೇತಿಗಳಲ್ಲಿ,ಕಾರ್ಯಗಾರಗಳಲ್ಲಿ ಪಾಲ್ಗೊಂಡು ಹೆಚ್ಚಿನ ಜ್ಞಾನವನ್ನು ಪಡೆದಾಗ ಮಕ್ಕಳು ಹೆಚ್ಚು ಕ್ರಿಯಾಶೀಲತೆಯಿಂದ ಕಲಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸಾಧ್ಯವಾಗುತ್ತದೆ ಎಂದರು. ಮಕ್ಕಳ ಜ್ಞಾನವನ್ನು, ಬುದ್ಧಿ ಮಟ್ಟವನ್ನು ಅಳೆಯಲು ಪಠ್ಯದ ಅಂಕಗಳಿಕೆಯೊಂದೇ ಮೂಲ ಆಧಾರವಾಗಲಾರದು. ಮಕ್ಕಳು ಎಲ್ಲಾ ಜ್ಞಾನವನ್ನು ಪಡೆದು ಸರ್ವಾಂಗೀಣ ಪ್ರಗತಿ ಹೊಂದಿದಾಗ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ. ಇದಕ್ಕೆ ಶಿಕ್ಷಕರ ತರಬೇತಿ ಕಾರ್ಯಗಾರಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ (ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಜೂನ್ 16 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಸಾಮರ್ಥ್ಯದ ಹೆಚ್ಚಳಕ್ಕೆ ಉತ್ತಮ ವಾತಾವರಣ, ಸಂಸ್ಕಾರ ಬೇಕು. ಕಲಿಕೆಯ ವಿಷಯವು ಬರಿಯ ತಿಳಿವಳಿಕೆ ಮಾತ್ರವಲ್ಲ, ವಿಷಯವನ್ನು ಅರ್ಥಪೂರ್ಣ ಮಾಡಬಲ್ಲ ವ್ಯಕ್ತಿತ್ವದ ಅವಶ್ಯಕತೆ ಇರುತ್ತದೆ. ವಿದ್ಯಾರ್ಥಿಯು ಅನ್ಯಥಾ ಯೋಚಿಸದೆ ಪ್ರಸ್ತುತ ಕಲಿಕೆಯಲ್ಲಿ ಗಮನ ಕೇಂದ್ರೀಕರಿಸಿದರೆ ಶ್ರದ್ಧೆ ಮತ್ತು ಆತ್ಮವಿಶ್ವಾಸ  ಉಂಟಾಗಿ ಕಲಿಕೆಯಲ್ಲಿ ಪುಸ್ತಕ ಪಾಂಡಿತ್ಯಕ್ಕಿಂತ ಅನುಭವ ಪಾಂಡಿತ್ಯ ವೃದ್ಧಿಯಾಗುತ್ತದೆ. ತನ್ಮೂಲಕ ಭವಿಷ್ಯ ಉಜ್ವಲವಾಗುತ್ತದೆಂದು ಇಂಡಿಯನ್ ರೆಡ್‌ಕ್ರಾಸ್ ಕುಂದಾಪುರ ಘಟಕದ ಅಧ್ಯಕ್ಷ ಜಯಕರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ 18ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಒಂದು ಲಕ್ಷ ರೂಪಾಯಿ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ಅರ್ಹ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲ ರಾಮರಾಯ ಆಚಾರ್ಯ ನಮ್ಮ ಬಗ್ಗೆ ನಾವು ಆಲೋಚಿಸುವುದಕ್ಕಿಂತ ಇನ್ನೊಬ್ಬರು ಹೆಚ್ಚು ಆಲೋಚಿಸಿರುತ್ತಾರೆ ಜೊತೆಗೆ ಅವರು ನಿಮಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜನಪದ ಸಾಹಿತ್ಯ ಮತ್ತು ಕಲೆಗಳು ಜನಮನದ ಜೀವನಾಡಿ. ಇವುಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಡಾ| ಶಿವರಾಮ ಕಾರಂತರು ಕರಾವಳಿಯ ಕಲೆಯಾದ ಯಕ್ಷಗಾನವನ್ನು ಆ ಕಾಲಘಟ್ಟಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆಯುವಂತೆ ಮಾಡಿದರು ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ| ಬಾಲಾಜಿ ಎಸ್. ಹೇಳಿದರು. ಅವರು ಡಾ| ಶಿವರಾಮ ಕಾರಂತ ಟ್ರಸ್ಟ್, ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-5 ಮತ್ತು ಜಲಜಾನಪದ ಪುಸ್ತಕ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ಜಾನಪದ ವಿದ್ವಾಂಸ ಕನರಾಡಿ ವಾದಿರಾಜ ಭಟ್ ಜಲಜಾನಪದ ಪುಸ್ತಕ ಬಿಡುಗಡೆಗೊಳಿಸಿದರು. ಡಾ| ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ| ಗಣನಾಥ ಶೆಟ್ಟಿ ಎಕ್ಕಾರು ಆಶಯ ನುಡಿಗಳನ್ನಾಡಿ ಪುಸ್ತಕ ಪರಿಚಯಿಸಿದರು. ಡಾ|…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 15 ಮೆಟ್ರಿಕ್ ಪೂರ್ವ ಹಾಗೂ 8 ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಹೆಚ್.ಎಂ.ಐ.ಎಸ್ ತಂತ್ರಾಂಶದ ವೆಬ್‌ಸೈಟ್ https://swdhmis.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಡುಪಿ ದೂ.ಸಂಖ್ಯೆ: 0820-2528884, ಮೊ.ನಂ: 9480843209, ಕುಂದಾಪುರ ದೂ.ಸಂಖ್ಯೆ: 08254-230609, 298089, ಮೊ.ನಂ: 9480843208 ಹಾಗೂ ಕಾರ್ಕಳ ದೂರವಾಣಿ ಸಂಖ್ಯೆ: 08258-298134, 232133, ಮೊ.ನಂಬರ್ 9480843207 ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ನವದೆಹಲಿ, ವಿಸ್ತರಣಾ ನಿರ್ದೇಶನಾಲಯ ಶಿವಮೊಗ್ಗ, ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ ಉಡುಪಿ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಗಂಗೊಳ್ಳಿ ಸಹಯೋಗದೊಂದಿಗೆ ಪೂರ್ವ ಮುಂಗಾರು ವಿಕಸಿತ ಕೃಷಿ ಸಂಕಲ್ಪ ಅಭಿಯಾನ-2025 ಕಾರ್ಯಕ್ರಮ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದ ಕೀಟಶಾಸ್ತ್ರ ಪ್ರಾಧ್ಯಾಪಕ ಡಾ. ರೇವಣ್ಣ ರೇವಣ್ಣನವರ್, ಕೃಷಿಯಲ್ಲಿ ಅನೇಕ ಸುಧಾರಣೆಗಳು ನಡೆದಿದ್ದರೂ ಕೂಡ ಕೃಷಿ ಕ್ಷೇತ್ರದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಲೇ ಇದೆ. ಕೃಷಿಕರು ಆಧುನೀಕ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಭತ್ತ, ಅಡಿಕೆ ಹಾಗೂ ತೆಂಗಿನ ಮರಗಳಿಗೆ ಬಾಧಿಸುವ ರೋಗ ಮತ್ತು ಕೀಟ ಬಾದೆಯನ್ನು ನಿಯಂತ್ರಿಸಲು ವೈಜ್ಞಾನಿಕ ಹತೋಟಿ ಕ್ರಮಗಳನ್ನು ಅನುಸರಿಸಬೇಕು. ಕರಾವಳಿ ಭಾಗಗಳಲ್ಲಿ ಮಣ್ಣಿನಲ್ಲಿ ಆಮ್ಲೀಯ ಸತ್ವ ಹೆಚ್ಚಾಗಿದ್ದು, ಮಣ್ಣು ಪರೀಕ್ಷೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ವಿವಿಧ ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ.     ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.depwd.gov.in ಮತ್ತು www.award.gov.in ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ  ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲು ಇಚ್ಛಿಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050370006 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ 2024 – 25ನೇ ಶೈಕ್ಷಣಿಕ ಸಾಲಿನಲ್ಲಿ ತರಗತಿವಾರು ಆಯೋಜಿಸಿದ ವಿವಿಧ ಪಂದ್ಯಾಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಕ್ರೀಡಾ ತಂಡವನ್ನು ಪ್ರತಿನಿಧಿಸಿದ ಸಾಧಕರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕ, ಪ್ರಾಕ್ತನ ವಿದ್ಯಾರ್ಥಿ ದೀಕ್ಷಿತ್ ಮೇಸ್ತ ಮಾತನಾಡಿ, ಒಬ್ಬ ಒಳ್ಳೆಯ ಕ್ರೀಡಾಪಟು ಶಿಸ್ತು ಮತ್ತು ಪರಿಶ್ರಮವನ್ನು ಮೈಗೂಡಿಸಿಕೊಳ್ಳಬೇಕು. ಸತತ ಪ್ರಯತ್ನದಿಂದ ಕ್ರೀಡೆಯಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದರು. ಇದೇ ಸಂದರ್ಭ ವಿವಿಧ ದೃಷ್ಟಾಂತಗಳ ಮೂಲಕ ಕೆಲವು ಕ್ರೀಡಾ ಸಾಧಕರ ಸಾಧನೆಯ ಹಾದಿಯನ್ನು ಪರಿಚಯಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ವಿ.ವಿ. ಮಟ್ಟದಲ್ಲಿ ಗುರುತಿಸಿಕೊಂಡ ಕಾಲೇಜಿನ ಕ್ರೀಡಾ ಸಾಧಕರನ್ನು ಸನ್ಮಾನಿಸಿ, ಶುಭ ಹಾರೈಸಿದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ…

Read More