Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ (ಕುಪ್ಮಾ) ವತಿಯಿಂದ ನೀಡಲಾಗುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಳ್ವಾಸ್‌ನ ಅನಿಲ್ ಮಸ್ಕರೇನ್ಹಾಸ್ ಭಾಜನರಾಗಿದ್ದಾರೆ. ಬೆಳ್ತಂಗಡಿಯ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ನ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅನಿಲ್ ಮಸ್ಕರೇನ್ಹಾಸ್‌ರವರೊಂದಿಗೆ ಜಿಲ್ಲೆಯ ಇತರ ಐವರು ಶಿಕ್ಷಕರೂ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ (ಪಿಯು ವಿಭಾಗ) ಸಿಬಿಎಸ್‌ಇ ವಿಭಾಗದ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿರುವ ಅನಿಲ್ ಮಸ್ಕರೇನ್ಹಾಸ್, ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು, ರೇಡಿಯೇಷನ್ ಫಿಸಿಕ್ಸ್ನಲ್ಲಿ ಅತ್ಯುತ್ತಮ ಸಾಧನೆಗಾಗಿ ಹೋಮಿ ಜೆ. ಭಾಭಾ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸೇಂಟ್ ಅಲೋಶಿಯಸ್ ಕಾಲೇಜು, ಮಂಗಳೂರು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಗಮನಾರ್ಹ ಅನುಭವ ಹೊಂದಿದ್ದಾರೆ. ಸಿಇಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯುತ್ತಿರುವ ಆದ್ಯತಾ (ಬಿಪಿಎಲ್) ಮತ್ತು ಅಂತ್ಯೋದಯ (ಎಎವೈ) ಪಡಿತರ ಚೀಟಿಯಲ್ಲಿರುವ ಅರ್ಹ ಫಲಾನುಭವಿಗಳು, ಈ ಹಿಂದೆ ಇ-ಕೆವೈಸಿ ಮಾಡಿಸಿ 5 ವರ್ಷಗಳು ಪೂರ್ಣಗೊಂಡಿರುವ ಪಡಿತರ ಚೀಟಿದಾರರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರವು ಪ್ರಸ್ತುತ ಅಕ್ಟೋಬರ್ 20ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಿ ಆದೇಶಿಸಿರುತ್ತದೆ. ಈ ಹಿಂದೆ ಸೆಪ್ಟಂಬರ್ 30ನ್ನು ಕೊನೆಯ ದಿನವಾಗಿ ನಿಗದಿಗೊಳಿಸಲಾಗಿದ್ದು, ಈ ಕುರಿತಾಗಿ ಪತ್ರಿಕೆಯ ಮೂಲಕ ಮತ್ತು ನ್ಯಾಯಬೆಲೆ ಅಂಗಡಿಯವರ ಮೂಲಕ ಪಡಿತರ ಚೀಟಿದಾರರಿಗೆ ಮಾಹಿತಿಯನ್ನು ನೀಡಲಾಗಿರುತ್ತದೆ. ಆದರೆ, ಈಗ ಸರ್ಕಾರದಿಂದ ಪ್ರಸ್ತುತ ಅಕ್ಟೋಬರ್ 20ರ ವರೆಗೆ ಇ-ಕೆವೈಸಿ ಮಾಡಲು ಕಾಲಾವಕಾಶವನ್ನು ವಿಸ್ತರಿಸಲಾಗಿದ್ದು, ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಇದುವರೆಗೂ ಇ-ಕೆವೈಸಿ ಮಾಡಿಸದೇ ಇರುವ ಅರ್ಹ ಫಲಾನುಭವಿಗಳು ಕೂಡಲೇ ಸದ್ರಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿಯಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2006–07ನೇ ಸಾಲಿನ ಪದವಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರು ಸಮ್ಮಾನ ಕಾರ್ಯಕ್ರಮವು ಕಾಲೇಜಿನಲ್ಲಿ ಸಂಭ್ರಮದಿಂದ ನಡೆಯಿತು. ಸುಮಾರು 19 ವರ್ಷಗಳ ಬಳಿಕ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಕಾಲೇಜು ಜೀವನದ ಸವಿನೆನಪುಗಳನ್ನು ಮೆಲುಕು ಹಾಕಿ, ಹಳೆಯ ಸ್ನೇಹವನ್ನು ಮತ್ತೆ ನವೀಕರಿಸಿಕೊಂಡರು. ವಿದ್ಯಾರ್ಥಿ ಜೀವನದಲ್ಲಿ ಜೊತೆಯಾಗಿ ಕಳೆದ ಕ್ಷಣಗಳು, ತರಗತಿಯ ಅನುಭವಗಳು ಹಾಗೂ ಅಂದಿನ ಒಡನಾಟವನ್ನು ನೆನಪಿಸಿಕೊಂಡು ಸಂತಸ ಹಂಚಿಕೊಂಡರು. ವಿದ್ಯಾರ್ಥಿಗಳ ಬದುಕಿಗೆ ಜ್ಞಾನದ ಬೆಳಕು ನೀಡಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಿದ ಗುರುಗಳನ್ನು ಗೌರವಿಸುವ ಸಲುವಾಗಿ ಗುರು ಸಮ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗುರುಗಳ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಬೋಧನೆಗಳು ಜೀವನದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ಹಳೆಯ ವಿದ್ಯಾರ್ಥಿಗಳು ಕೃತಜ್ಞತೆ ವ್ಯಕ್ತಪಡಿಸಿದರು. ಕಾರ್ಯಕ್ರಮವು ಹಳೆಯ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜೊತೆಗೆ, ಗುರು-ಶಿಷ್ಯರ ನಡುವಿನ ಆತ್ಮೀಯ ಸಂಬಂಧವನ್ನು ಸ್ಮರಿಸುವ ವಿಶೇಷ ಸಂದರ್ಭವಾಯಿತು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಗ್ರಾಮದ ಶಾನ್ಮಟ್ಟು ಉದಯ ಕುಮಾರ್ ಶೆಟ್ಟಿ (52) ಅವರು ಮನೆಯ ತೋಟದಲ್ಲಿ ಗೊಬ್ಬರದ ಮರಕ್ಕೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಾಯಿ ಮತ್ತು ತಂಗಿಯ ಜತೆಗೆ ಅಂಪಾರಿನ ಶಾನ್ಮಟ್ಟು ಮನೆಯಲ್ಲಿ ಕೃಷಿ ಕೆಲಸವನ್ನು ಮಾಡಿಕೊಂಡು ವಾಸವಾಗಿದ್ದರು. ಉದಯ ಕುಮಾರ್ ಶೆಟ್ಟಿ ಅವರಿಗೆ ಈವರೆಗೂ ವಿವಾಹವಾಗದೇ ಇದ್ದು ತನ್ನ ತಾಯಿಯ ನಂತರ ತನಗಾರು ಗತಿ ಎಂದು ಚಿಂತಿಸುತ್ತಿದ್ದು ಅದೇ ಚಿಂತೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿದ್ದವರನ್ನು ನೆರೆ ಕರೆಯವರ ಸಹಾಯದಿಂದ ಕೆಳಗಿಳಿಸಿ ಚಿಕಿತ್ಸೆಗೆ ಆ್ಯಂಬುಲೆನ್ಸ್ ನಲ್ಲಿ ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಅವರ ಸಹೋದರ ಕಿರಣ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾಕಾರ್ಸ್ ಕಾಲೇಜಿನಲ್ಲಿ ನಡೆದ ಆಂತರಿಕ ಗುಣಮಟ್ಟ ಭರವಸೆ ಕೋಶ , ರಾಷ್ಟ್ರೀಯ  ಸೇವಾ ಯೋಜನೆ ಮತ್ತು ಆ್ಯಂಟಿ ಡ್ರಗ್ಸ್ ಅವೇರ್ನೆಸ್ ಸೆಲ್ ಇವರ ಜಂಟಿ ಆಶ್ರಯದಲ್ಲಿ “ಸೈಬರ್ ಅಪರಾಧಗಳ ಇತ್ತೀಚೆಗಿನ ಪ್ರವೃತ್ತಿಗಳು ಹಾಗೂ ಮಾದಕ ವಸ್ತು ವ್ಯಸನ ಮತ್ತು ಯುವಕರು ” ಎಂಬ ವಿಷಯದ ಕುರಿತು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕುಂದಾಪುರ ಪೋಲಿಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್‌ರಾದ ನಂಜ ನಾಯ್ಕ್ ಅವರು ಮಾತನಾಡಿ, ಭಾರತದಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ ವ್ಯಸನ ಹೆಚ್ಚಾಗುತ್ತಿರುವುದು ವಿಷಾಧಕಾರ ಸಂಗತಿ ಹಾಗೂ ಪಂಜಾಬ್ ರಾಜ್ಯದಲ್ಲಿ ಅತಿ ಹೆಚ್ಚು ಜನರು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಭಾರತದಲ್ಲಿ ಪ್ರತಿದಿನ 10 ಜನರು ಇದರಿಂದ ಸಾಯುತ್ತಿದ್ದಾರೆ ಎಂದು ಹೇಳಿದರು. ವಿವಿಧ ರೀತಿಯ ಮಾದಕ ವಸ್ತುಗಳು ಮತ್ತು ಅವುಗಳ ಸೇವನೆಯ ರೀತಿ ಕುರಿತು ತಿಳಿಸಿದರು. ಅದರಿಂದ ಆಗುವ ದೈಹಿಕ ಮತ್ತು ಮಾನಸಿಕ ಪಯ್ನಾಮದ ಬಗ್ಗೆ ಮಾಹಿತಿ ನೀಡಿದರು. ಎಂ. ಡಿ. ಪಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಡಿತಲೆ ಹೊಸಬೆಂಗ್ರೆ ಪಂಚಶಕ್ತಿ ಸಂಘ ಸಂಘದ ರಜತ ಮಹೋತ್ಸವದ 2026-27ರ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಮಡಿ ವಿಶ್ವನಾಥ ಖಾರ್ವಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಕೇಶ ಬಂಗೇರ, ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ ಎಸ್ ಖಾರ್ವಿ , ಜೊತೆ ಕಾರ್ಯದರ್ಶಿಯಾಗಿ ಸಂದೇಶ ಖಾರ್ವಿ , ಕೋಶಾಧಿಕಾರಿಯಾಗಿ ಸಂದೀಪ ಬಿ.ಖಾರ್ವಿ ಹಾಗೂ ಪದಾಧಿಕಾರಿಗಳಾಗಿ ಅನಿಶ ಖಾರ್ವಿ, ಲಕ್ಷ್ಮಣ ಖಾರ್ವಿ, ಅನಿಲ ಖಾರ್ವಿ ಮತ್ತು ಪ್ರವೀಣ ಖಾರ್ವಿ ಆಯ್ಕೆಯಾಗಿದ್ದಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಗ್ರೋಸ್ಪೈರ್‌ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ ಸಂಘ, ಫ್ರಧಾನ ಕಛೇರಿ, ಕಿನ್ನಿಮುಲ್ಕಿ ಬಸ್ ನಿಲ್ದಾಣದ ಬಳಿ, ಉಡುಪಿ ಇಲ್ಲಿ ಅಕ್ಟೋಬರ್ 17 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಗ್ರೋಸ್ಪೈರ್‌ ಗ್ರೂಪ್ ಕಂಪನಿಯಲ್ಲಿ ಬ್ಯುಸಿನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್, ಬ್ಯುಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಮತ್ತು ಹೆಚ್.ಆರ್. ಹುದ್ದೆಗಳು ಖಾಲಿ ಇದ್ದು, ಪಿ.ಯು.ಸಿ, ಡಿಪ್ಲೋಮಾ, ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಉಡುಪಿ ಜಿಲ್ಲೆಯ ಉಡುಪಿ ತಾಲೂಕಿಗೆ ಒಳಪಟ್ಟಂತೆ ಗುರಿ ನಿಗಧಿಪಡಿಸಲಾಗಿದ್ದು, ಪ್ರಸಕ್ತ ಸಾಲಿಗೆ ಉಡುಪಿ ತಾಲೂಕಿನ ಪ.ಜಾತಿ/ಪ.ಪಂ/ಹಿಂದುಳಿದ ವರ್ಗ/ಸಾಮಾನ್ಯ ವರ್ಗದ ಅರ್ಹ ಗ್ರಾಮೀಣ ರೈತ ಮಹಿಳೆಯರಿಂದ 5 ವಾರದ 20 ದೇಶಿ/ನಾಟಿ ಕೋಳಿ ಮರಿಗಳ ವಿತರಿಸಿ, ಅವರ ಆದಾಯ ಹೆಚ್ಚಿಸುವ ಕಾರ್ಯಕ್ರಮ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುವೈದ್ಯ ಸಂಸ್ಥೆ ಅಥವಾ ಉಡುಪಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮೋಟಾರು ಸೈಕಲ್‌ನಲ್ಲಿ ಐಸ್‌ಕ್ರೀಮ್ ಹಾಗೂ ಮೀನು ವ್ಯಾಪಾರ ಮಾಡಿಕೊಂಡಿದ್ದ ಬಿಜೂರು ಉಪ್ಪುಂದ ಮಾಧವ ದೇವಾಡಿಗ (52) ಅವರು ತನಗಿದ್ದ ಬೆನ್ನುನೋವು ಹಾಗೂ ಪತ್ನಿಯ ಕಾಯಿಲೆಯಿಂದ ಮನೆಯ ಸಮೀಪದ ಹಾಡಿಯಲ್ಲಿ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಮುಂಜಾನೆ 04ಗಂಟೆಗೆ ಮೀನು ವ್ಯಾಪಾರ ಮಾಡಲು ಭಟ್ಕಳಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಬೆಳಗ್ಗೆ05:00ಗಂಟೆ ಸುಮಾರಿಗೆ ಅಳಿಯ ಚಂದ್ರರಿಗೆ ಕರೆ ಮಾಡಿ ತನಗೆ ಹಾಗೂ ಹೆಂಡತಿಗೆ ಹುಸಾರಿಲ್ಲ ಎಲ್ಲರನ್ನೂ ಚೆನ್ನಾಗಿ ನೋಡಿಕೋ ಎಂದು ಹೇಳಿದ್ದರು. ಬಳಿಕ ಎಲ್ಲರೂ ಸೇರಿ ಹುಡುಕಿದಾಗ ಮನೆಯ ಬಳಿಯ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ನೇತಾಡುತ್ತಿರುವುದುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಯಿತು. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದು. ಇಂದಿನ ಯುವಜನತೆಯೇ ನಾಳಿನ ಸಮಾಜದ ರೂವಾರಿಗಳು. ಆಧುನಿಕತೆ ಹಾಗೂ ತಂತ್ರಜ್ಞಾನದ ಭರಾಟೆಯಲ್ಲಿ ಪಾಶ್ಚಿಮಾತ್ಯ ಜೀವನಶೈಲಿಗೆ ಮಾರುಹೋಗದೆ, ನಮ್ಮ ಸನಾತನ ಮೌಲ್ಯಗಳಾದ ಹಿರಿಯರಿಗೆ ಗೌರವ ನೀಡುವುದು, ಸಹಿ?ತೆ, ಕುಟುಂಬ ವ್ಯವಸ್ಥೆ ಹಾಗೂ ’ವಸುಧೈವ ಕುಟುಂಬಕಂ’ ಎಂಬ ವಿಶಾಲ ಮನೋಭಾವವನ್ನು ಉಳಿಸಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ನಮ್ಮ ಸಂಸ್ಕೃತಿಯೇ ನಮ್ಮ ಗೌರವದ ಪ್ರತೀಕ ಎಂದು ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇವರ ಸಹಯೋಗದಲ್ಲಿ ಶಂಕರನಾರಾಯಣದ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ಯುವ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ದೇಶದ ಭವ್ಯ ಇತಿಹಾಸ, ನೃತ್ಯ, ಸಂಗೀತ, ಸಾಹಿತ್ಯ ಹಾಗೂ…

Read More