Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟೀವ್ ಮ್ಯಾನೇಜ್‌ಮೆಂಟ್, ಮೂಡುಬಿದಿರೆ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿಗೆ ನವೆಂಬರ್ 14 ಕೊನೆಯ ದಿನ. ಖಾಸಗಿ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕವಿರಲಿದ್ದು, ಬಿಪಿಎಲ್/ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಪ್ರವೇಶಾತಿ ಶುಲ್ಕದಿಂದ ವಿನಾಯಿತಿ ನೀಡಲಾಗುವುದು. ಈ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಪರವಾನಗಿ ನೀಡಲಾಗುವುದು. ಪರವಾನಗಿ ಪಡೆದ ಅಭ್ಯರ್ಥಿಗಳು ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಿ ಕಾರ್ಯನಿರ್ವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:7022429440, 8971361396 ಹಾಗೂ 7259729104 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್‌ಗೆ ಸಲ್ಲಿಸುವ ಮೂಲಕ ಟೊಯೋಟಾ ಕಾರು ಖರೀದಿ ಹಾಗೂ ಆಸ್ತಿ ಅಡಮಾನ ಸಾಲ ಪಡೆದು ಎಂ.ಸಿ.ಸಿ ಬ್ಯಾಂಕ್‌ ಯಡ್ತರೆ ಶಾಖೆಗೆ ಬರೋಬ್ಬರಿ 98.99 ಲಕ್ಷ ರೂ. ವಂಚಿಸಿರುವ ಆರೋಪದಡಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಉಡುಪಿಯ MCC Bank Ltd.ನ ಮುಖ್ಯ ವ್ಯವಸ್ಥಾಪಕ ಹಾಗೂ ವಸೂಲಾತಿ ಅಧಿಕಾರಿ ಸಂದೀಪ್ ಕ್ವಾಡ್ರಸ್ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣಗಳು ದಾಖಲಾಗಿವೆ. ಬೈಂದೂರು ಯಡ್ತರೆ ಶಾಖೆಯಲ್ಲಿ ನಡೆದಿರುವ ಈ ವಂಚನೆ ಪ್ರಕರಣಗಳಲ್ಲಿ ಆರೋಪಿಗಳು ನಕಲಿ ದಾಖಲೆಗಳನ್ನು ಅಸಲಿ ಎಂದು ನಂಬಿಸಿ ಬ್ಯಾಂಕ್‌ನಿಂದ ಲಕ್ಷಾಂತರ ರೂಪಾಯಿ ಸಾಲ ಪಡೆದಿರುವುದು ಬೆಳಕಿಗೆ ಬಂದಿದೆ. ಪ್ರಕರಣ 1: ಶಿರೂರಿನ ಜುಹಾ ಮಂಜಿಲ್ ನಿವಾಸಿ ಸಮೀರನ್ ಶೇಖ್ ಎಂಬಾತ ತನ್ನ ಜಾಮೀನುದಾರ ಅಸ್ನಾ ಶೇಖ್ ಅವರೊಂದಿಗೆ 2026ರ ಜುಲೈ 11ರಂದು ಬ್ಯಾಂಕ್‌ಗೆ ಹಾಜರಾಗಿ ಹೊಸ ಟೊಯೋಟಾ ಇನೋವಾ ಕ್ರಿಸ್ಟಾ ಕಾರು ಖರೀದಿಸುವುದಾಗಿ ಸಾಲಕ್ಕೆ ಅರ್ಜಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಣಿಪಾಲ ಇವರ ಆಶ್ರಯದಲ್ಲಿ ಸುಣ್ಣಾರಿಯ ವಿವೇಕೋದಯ ಶಾಲೆಯಲ್ಲಿ ಇತ್ತೀಚೆಗೆ ಜರುಗಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಪ್ರೌಢ ಹಾಗೂ ಹಿರಿಯ ಪ್ರಾಥಮಿಕ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಬರೋಬ್ಬರಿ 17 ಪ್ರಥಮ ಸ್ಥಾನಗಳನ್ನು ಗಳಿಸುವುದರ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಜ್ಞಾನ ಪದವಿಪೂರ್ವ ಕಾಲೇಜಿನ ಪ್ರೌಢ ವಿಭಾಗದಲ್ಲಿ  ವಿಜೇತರಾದ ವಿದ್ಯಾರ್ಥಿಗಳ ವಿವರ:ಪ್ರಥಮ ಸ್ಥಾನ:ಸೃಜನ್ ಶೆಟ್ಟಿ (ಮಿಮಿಕ್ರಿ), ಧನ್ವಿ (ಸಂಸ್ಕೃತ ಧಾರ್ಮಿಕ ಪಠಣ), ತುಷಾರ (ರಂಗೋಲಿ), ಫಾತಿಮಾ ನಜೀಫಾ (ಅರೇಬಿಕ್ ಧಾರ್ಮಿಕ ಪಠಣ), ಋತು & ತಂಡ (ಕವ್ವಾಲಿ), ಗರ್ವಿತಾ & ತಂಡ (ಜಾನಪದ ನೃತ್ಯ). ದ್ವಿತೀಯ ಸ್ಥಾನ:ವೃದ್ಧಿ (ಭಾವಗೀತೆ), ಸ್ಫೂರ್ತಿ (ಕನ್ನಡ ಭಾಷಣ), ಪೂರ್ವಿ (ಚಿತ್ರಕಲೆ), ಸಮೃದ್ಧಿ (ಕನ್ನಡ ಪ್ರಬಂಧ), ರಿಷಿ ಹಾಗೂ ವಿಲೋಕ್ ರಂಜನ್ (ಕ್ವಿಜ್),…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ,(ಪದವಿಪೂರ್ವ) ದ.ಕ. ಹಾಗೂ ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 32 ಚಿನ್ನ ಮತ್ತು 30 ಬೆಳ್ಳಿ ಪದಕಗಳೊಂದಿಗೆ 62 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 122 ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ 116 ಅಂಕ ಒಟ್ಟು 238 ಅಂಕದೊಂದಿಗೆ ಎರಡು ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯಲ್ಲಿರುವ 8 ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಬಾಕಿಯಿರುವ 4 ಅಂಗನವಾಡಿ ಕಾರ್ಯಕರ್ತೆ ಮತ್ತು 8 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿಮಾಡುವ ಕುರಿತು ಮರು ಅರ್ಜಿಸಲ್ಲಿಸಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ (ಅಭ್ಯರ್ಥಿಯು ಅದೇ ಗ್ರಾಮ/ವಾರ್ಡ್/ ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೇ ವ್ಯಾಪ್ತಿಯಲ್ಲಿ ವಾಸವಿರಬೇಕು) ಆಫ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಕಛೇರಿಯಲ್ಲಿಟ್ಟಿರುವ ಅರ್ಜಿ ಪೆಟ್ಟಿಗೆಯಲ್ಲಿ ನವೆಂಬರ್ 19ರ ಒಳಗಾಗಿ ಹಾಕಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಶಾಸ್ತ್ರೀಸರ್ಕಲ್ ಕುಂದಾಪುರ ದೂರವಾಣಿ ಸಂಖ್ಯೆ:08254-230807 ಅನ್ನು ಸಂಪರ್ಕಿಸುವAತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರು ಇಲ್ಲದೆ ಅವರ ಅಧಿಕಾರವನ್ನು ಅನುಭವಿಸುತ್ತಿರುವ ರಾಜ್ಯದ ಶಾಸಕರುಗಳು ಕೇವಲ ಅಧಿಕಾರ ವೀಕೆಂದ್ರಿಕರಣದ ಬಗ್ಗೆ ಮಾತನಾಡುತ್ತಾರೆ ಬಿಟ್ಟರೆ ಅಧಿಕಾರ ಹಂಚಿಕೆಗೆ ಯಾವೊಬ್ಬ ಶಾಸಕರು ತಯಾರು ಇಲ್ಲಾ. ಇದರ ಇನ್ನೊಂದು ಭಾಗವೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಅಕ್ರಮ-ಸಕ್ರಮ ಹೆಚ್ಚುವರಿ ಸಮಿತಿ ವಿರುದ್ಧ ಬೈಂದೂರು ಶಾಸಕರು ನ್ಯಾಯಾಲಯದ ಮೊರೆ ಹೋದದ್ದು ಎಂದು ಕೆಪಿಸಿಸಿ ಸಂಯೋಜಕ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ತಂದದ್ದು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪನವರು. ಈ ಯೋಜನೆಯನ್ನು ಸಮರ್ಪಕವಾಗಿ ತಮ್ಮ ಕ್ಷೇತ್ರದಲ್ಲಿ ಅನುಷ್ಠಾನ ಮಾಡಿ ಸಾವಿರಾರು ರೈತರಿಗೆ ಭೂಮಿಯ ಹಕ್ಕು ನೀಡಿದವರು ಹಿಂದಿನ ಬೈಂದೂರು ಶಾಸಕರಾದ ಕೆ. ಗೋಪಾಲ ಪೂಜಾರರು. ಅದೆಷ್ಟೋ ರೈತರಿಗೆ ಭೂಮಿಯ ಹಕ್ಕು ನೀಡಿದ ಮಾಜಿ ಶಾಸಕರು ಹೆಚ್ಚುವರಿ ಅಕ್ರಮ-ಸಕ್ರಮ ಸಮಿತಿ ರಚನೆ ಮಾಡಿದ್ದನ್ನು ಹಾಲಿ ಬೈಂದೂರು ಶಾಸಕರು ವಿರೋಧಿಸಿದ್ದು ಅವರ ಅಧಿಕಾರ ವೀಕೆಂದ್ರಿಕರಣದ ವಿರೋಧಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ದೀಪ ಬೆಳಗಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಪ್ಷಾರ್ಚನೆ ಮಾಡುವ ಮೂಲಕ ಆರಂಭಗೊಂಡಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಾಂಸ್ಕ್ರತಿಕ ಕಾರ್ಯಕ್ರಮಗಳು, ಭಾಷಣಗಳು, ಕನ್ನಡದ ಕಂಪನ್ನು ಪಸರಿಸಿ ನೆರೆದವರಲ್ಲಿ ಕನ್ನಡಾಭಿಮಾನವನ್ನು ಮೂಡಿಸಿದವು. ಕಾರ್ಯಕ್ರಮವು ನಾಡು ನುಡಿ ಮತ್ತು ಸಂಸ್ಕ್ರತಿಯ ಮೇಲಿನ ಗೌರವವನ್ನು ಹೆಚ್ಚಿಸುವುದರೊಂದಿಗೆ ಅರ್ಥ ಪೂರ್ಣವಾಗಿ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಐಎಂಜೆಐಎಸ್‌ಸಿ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ “ನಾಡು-ನುಡಿ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ವಾಣಿಜ್ಯ ತೆರಿಗೆ ನಿರೀಕ್ಷಕರು ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಆಗಮಿಸಿದ್ದರು. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕನ್ನಡ ಭಾಷೆಯ ಪ್ರಾಚೀನತೆ, ಬಳಕೆಯ ವೈಶಿಷ್ಟ್ಯತೆ ಮತ್ತು ಮಹತ್ವದ ಬಗ್ಗೆ ತಿಳಿಸಿದರು. ಇತರ ಭಾಷೆಗಳಿಗಿಂತ ಕನ್ನಡ ಹೇಗೆ ಭಿನ್ನವಾಗಿದೆ ಎಂಬುದನ್ನು ತೌಲನಿಕವಾಗಿ ವಿವರಿಸಿದರು. ಕನ್ನಡ ಸಾಹಿತಿಗಳ ವಿವಿಧ ಕೃತಿಗಳ ಆಯ್ದ ಭಾಗಗಳನ್ನು ಉದಾಹರಿಸಿ, ಕನ್ನಡದ ಶ್ರೇಷ್ಠತೆ ಮತ್ತು ತಾಯಿನುಡಿಯ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವೇದಿಕೆಯಲ್ಲಿ ಸಾಹಿತ್ಯ ಸಂಘದ ಸಂಯೋಜಕರು ಹಾಗೂ ಕನ್ನಡ ಪ್ರಾಧ್ಯಾಪಕರಾದ ರೇವತಿ ಹಾಗೂ ವಿದ್ಯಾರ್ಥಿ ಸಹ ಸಂಯೋಜಕಿ, ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಸೌಪರ್ಣಿಕಾ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಭಾಷಾ ವಿಭಾಗದ ಉಪನ್ಯಾಸಕರು, ಬಿಬಿಎ ಮತ್ತು ಬಿಕಾಂ ವಿಭಾಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಕ್ರಮವಾಗಿ ಕೊಜೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್‌ಗಳ ಅಡ್ಡಾದಿಡ್ಡಿ ಚಾಲನೆಯಿಂದ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿ ಟಿ.ಕೆ. ಮೊಹಮ್ಮದ್ ಶಯಾನ್ (18) ಅವರು ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಮತ್ತೊಬ್ಬ ವಿದ್ಯಾರ್ಥಿ ಮೊಹಮ್ಮದ್ ರಯಾನ್ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಕ್ಟೋಬರ್ 30ರಂದು ಬೆಳಿಗ್ಗೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ರಾಜ್ಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿಸಿತ್ತು. ಕಾಲೇಜಿಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಟಿಪ್ಟರ್‌ಗಳ ಅಜಾಗರೂಕ ಚಾಲನೆಯಿಂದ ಗಂಭೀರವಾಗಿ ಗಾಯಗೊಂಡಿದ್ದರು. ಅಂದು ಬೆಳಿಗ್ಗೆ, ಸುಮಾರು 8.45ರ ವೇಳೆಗೆ ಕುಂದಾಪುರ ಕಡೆಯಿಂದ ಎರಡು ಟಿಪ್ಟರ್‌ಗಳು ಸಂಚರಿಸುತ್ತಿದ್ದವು. ಮುಂಭಾಗದಲ್ಲಿದ್ದ ಟಿಪ್ಪರ್ ಚಾಲಕ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿ/ಬಸ್ ಗಮನಿಸಿ ವಾಹನದ ವೇಗ ಕಡಿಮೆ ಮಾಡಿದ್ದಾನೆ. ಈ ವೇಳೆ ಹಿಂಬದಿಯಿಂದ ಅತಿವೇಗವಾಗಿ ಬಂದ ಮತ್ತೊಂದು ಟಿಪ್ಪರ್ ಮುಂಭಾಗದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಎ ಹಾಗೂ ಎಂಸಿಎ ವಿದ್ಯಾರ್ಥಿಗಳಿಗಾಗಿ “ಅಡ್ವಾನ್ಸ್ಡ್ ಸ್ಕಿಲ್ಸ್ ಫಾರ್ ಹೈಯರ್ ಎಜುಕೇಶನ್ ಸ್ಟೂಡೆಂಟ್ಸ್” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟರಾಮ್ ಭಟ್ ಅವರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಅಗತ್ಯವಿರುವ ಕೌಶಲ್ಯಗಳ ಮಹತ್ವದ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿಯ ಜೊತೆಗೆ ವೃತ್ತಿಪರ ಜೀವನದಲ್ಲಿಯೂ ಯಶಸ್ಸು ಸಾಧಿಸಲು ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ, ಸಂವಹನ ಕೌಶಲ್ಯ, ನಾಯಕತ್ವ ಗುಣಗಳು, ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವು ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂಬುದನ್ನು ವಿವರಿಸಿದರು. ಈ ಉಪನ್ಯಾಸ ಕಾರ್ಯಕ್ರಮವು ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ…

Read More