ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸರಕಾರಿ ಕಚೇರಿಗಳಿಗೆ ಬಂದಾಗ ಅದಕ್ಕೆ ಸ್ಪಂದಿಸಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವುದಿಲ್ಲ ಸರಿಯಲ್ಲ. ಒಂದೊಮ್ಮೆ ನಿರ್ಲಕ್ಷ್ಯ ವಹಿಸುವುದು ಕಂಡು ಬಂದಲ್ಲಿ ಅವರು ಮೇಲೆ ಸೂಕ್ತ ಕ್ರಮ ಕೈಗೊಳ್ಳಗುವುದು ಎಂದು ರಾಜ್ಯದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ತಿಳಿಸಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ. ಎಸ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಗೆ 7 ಬಾರಿ ಭೇಟಿಯನ್ನು ನೀಡಿದ್ದೇನೆ. ಸರಕಾರಿ ಕಚೇರಿಗಳ ಕಾರ್ಯ ವೈಖರಿಗಳನ್ನು ಸೂಕ್ಷö್ಮವಾಗಿ ಗಮನಿಸುತ್ತಿದ್ದೇನೆ. ಸಾರ್ವಜನಿಕರು ತಮ್ಮ ಕೆಲಸದ ನಿಮಿತ್ತ ಕಚೇರಿಗಳಿಗೆ ಭೇಟಿ ನೀಡಿದಾಗ ನಿಯಮಾನುಸಾರ ನಿಮ್ಮ ಹಂತದಲ್ಲಿಯೇ ಮಾಡಿಕೊಡಲು ಸಾಧ್ಯವಿದ್ದಲ್ಲಿ ಕೂಡಲೇ ಸ್ಪಂದಿಸಬೇಕು. ಒಂದೊಮ್ಮೆ ಸರಕಾರದ ಹಂತದಲ್ಲಿ ಆಗುವಂತದಿದ್ದ÷ಲ್ಲಿ ಮೇಲಾಧಿಕಾರಿ ಅಥವಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೃತಕ ಬುದ್ಧಿಮತ್ತೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು ಉದ್ಯಮ ಹಾಗೂ ನಿರ್ವಹಣಾ ಕ್ಷೇತ್ರವನ್ನು ವೇಗವಾಗಿ ಪರಿವರ್ತಿಸುತ್ತಿದ್ದು, ವಿದ್ಯಾರ್ಥಿಗಳು ಬದಲಾವಣೆಗಳನ್ನು ಧನಾತ್ಮಕವಾಗಿ ಸ್ವೀಕರಿಸಬೇಕು ಎಂದು ಉದ್ಯಮಿ ಹಾಗೂ ಸ್ಟಾçಟೆಜಿಕ್ ಅಡ್ವೈಸರ್ ಸುಯೋಗ್ ಶೆಟ್ಟಿ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ವಿಭಾಗದ 2026–28ನೇ ಸಾಲಿನ ಎಂಬಿಎ ವಿದ್ಯಾರ್ಥಿಗಳಿಗಾಗಿ ಸೋಮವಾರ ಆಯೋಜಿಸಿದ್ದ ‘ಎಂಬಿಎ ಆಗಮನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವ್ಯವಹಾರ ಕ್ಷೇತ್ರದಲ್ಲಿ ಯಶಸ್ಸಿನಷ್ಟೇ ವೈಫಲ್ಯಗಳಿಂದ ಕಲಿಯುವ ಸಾಮರ್ಥ್ಯವೂ ಮಹತ್ವದ್ದಾಗಿದೆ. ಉದ್ಯಮ ನಡೆಸುವಾಗ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸ್ಥೈರ್ಯ ಯಶಸ್ಸಿಗೆ ಅಗತ್ಯವಾದ ಪ್ರಮುಖ ಗುಣವಾಗಿದೆ. ಮುಂದಿನ ಐದಾರು ವರ್ಷಗಳ ವೃತ್ತಿಜೀವನವನ್ನು ವಿದ್ಯಾರ್ಥಿ ನೆಲೆಯಿಂದಲೇ ಯೋಚಿಸಬೇಕು. ನೀವು ಆಯ್ಕೆ ಮಾಡುವ ಕ್ಷೇತ್ರಗಳ ಮೇಲೆ ಎಐ ಮತ್ತು ಹೊಸ ನಿರ್ವಹಣಾ ತಂತ್ರಜ್ಞಾನಗಳು ಬೀರುವ ಪರಿಣಾಮವನ್ನು ಅರ್ಥಮಾಡಿಕೊಂಡು, ಅದಕ್ಕೆ ಅಗತ್ಯವಾದ ಕೌಶಲಗಳನ್ನು ಇಂದೇ ಬೆಳೆಸಿಕೊಳ್ಳಿ ಎಂದರು. ವಿಭಾಗದ ಹಿರಿಯ ವಿದ್ಯಾರ್ಥಿನಿ ಮೇಘನಾ ವೆಂಕಟೇಶ್ ಮಾತನಾಡಿ, ಅವಕಾಶಗಳನ್ನು ಸೃಷ್ಟಿಸಿಕೊಳ್ಳಲು ವಿದ್ಯಾರ್ಥಿಗಳು ಬಲವಾದ ಸಂಪರ್ಕ ಜಾಲವನ್ನು ಬೆಳೆಸಿಕೊಳ್ಳಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಡಿಸೆಂಬರ್ 3ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಹಾಗೂ ವೈಯಕ್ತಿಕ ವಿಭಾಗದಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದಿ, ಮಣಿಪಾಲ (ದೂರವಾಣಿ ಸಂಖ್ಯೆ: 0820-2574810) ಇವರಿಂದ ಪಡೆದುಕೊಂಡು ಅರ್ಜಿ ನಮೂನೆಯಲ್ಲಿ ಅರ್ಜಿದಾರರ ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಬಗ್ಗೆ ಲಗತ್ತಿಸಿದ ಪ್ರಮಾಣ ಪತ್ರಗಳನ್ನು ಕ್ರಮ ಸಂಖ್ಯೆಯೊಂದಿಗೆ ನಮೂದಿಸಿ ಸಂಬಂಧಿಸಿದ ದಾಖಲೆಗಳನ್ನು ಕಡ್ಡಾಯವಾಗಿ ದ್ವಿಪ್ರತಿಯೊಂದಿಗೆ ಹಾರ್ಡ್ ಮತ್ತು ಸಾಫ್ಟ್ ಕಾಪಿಯೊಂದಿಗೆ ಪ್ರಸ್ತಾವನೆಯನ್ನು ನವೆಂಬರ್ 07ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಮ್ಮೆಲ್ಲರ ಬದುಕು ಭಾರತದ ಸಂವಿಧಾನವನ್ನು ಅವಲಂಬಿಸಿದೆ. ಭಾರತದ ಸಂವಿಧಾನವು ಕೇವಲ ರಾಜಕೀಯದ ಬಗ್ಗೆ ಆಸಕ್ತಿ ಇರುವವರಿಗೆ ಮಾತ್ರ ಸೀಮಿತವಾಗಿಲ್ಲ. ನಮ್ಮೆಲ್ಲರ ದಿನನಿತ್ಯದ ಜೀವನದಲ್ಲೂ ಸಂವಿಧಾನವು ಪ್ರಭಾವ ಬೀರುತ್ತಿದೆ. ಸಂವಿಧಾನಕ್ಕೆ ಬದ್ದವಾಗಿ ಸರಕಾರಗಳು ಜನಪರವಾದ ಕಾನೂನುಗಳನ್ನು, ನೀತಿ-ನಿಯಮಾವಳಿಗಳನ್ನು ರೂಪಿಸುತ್ತವೆ. ಶಿಕ್ಷಣ, ಜ್ಞಾನ, ಉದ್ಯೋಗ ಎಲ್ಲಾ ಕ್ಷೇತ್ರಗಳಲ್ಲೂ ತಾರತಮ್ಯವಿಲ್ಲದ ಎಲ್ಲರಿಗೂ ಸಮಾನ ಅವಕಾಶಗಳನ್ನು ಸಂವಿಧಾನ ನಮಗೆ ನೀಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು. ಅವರು ಸೋಮವಾರ ಮಣಿಪಾಲ ಗಣಿತ ನಗರದಲ್ಲಿರುವ ಜ್ಞಾನಸುಧಾ ಕಾಲೇಜಿನ ಶಾಂತಿ ರಮೇಶ್ ಪೈ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶ್ರೀ ದುರ್ಗಾ ಫ್ರೆಂಡ್ಸ್ ರಥಬೀದಿ ಉಪ್ಪುಂದ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ ದೇವಾಡಿಗ ಕೋಟೆಬೆಟ್ಟು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಎಲ್. ಮೇಲ್ಮನೆ ಅವರನ್ನು ಉಪ್ಪುಂದ ರಥಬೀದಿಯ ಸಂಘದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶಿವರಾಜ ಬೆಮ್ಮಣ್ಣನಮನೆ, ಗೌರವಾಧ್ಯಕ್ಷರಾಗಿ ಮಂಜು ದೇವಾಡಿಗ ಅರೆಹಾಡಿ, ಜೊತೆ ಕಾರ್ಯದರ್ಶಿಯಾಗಿ ಅರುಣ್ ರಾಯರಡಿ, ಪ್ರಚಾರ ಸದಸ್ಯರಾಗಿ ಸೂರಜ್ ಮತ್ತು ಸಂಜಯ, ಕೋಶಾಧಿಕಾರಿಯಾಗಿ ಸುಧೀರ್ ಬಾಕಿಮನೆ , ಕ್ರೀಡಾ ಸಂಚಾಲಕರಾಗಿ ಭರತ ಕೋಟೆಬೆಟ್ಟು ಮತ್ತು ರಮೇಶ ಮಣ್ಣಿಮನೆ, ನಂದೀಶ್ ಮಣ್ಣಿಮನೆ, ನಾಗೇಂದ್ರ ಕೋಟೆಬೆಟ್ಟು ಸಾಂಸ್ಕೃತಿಕ ಕಾರ್ಯದರ್ಶಿ ನಾಗೇಶ ಮೇಲ್ಮನೆ, ಸುಧಾಕರ ಹೊಳೆಬಾಗಿಲು, ಓಂಕಾರ ಡಿ ಉಪ್ಪುಂದ, ಭಾರ್ಗವ ಪುರಾಣಿಕ, ಸಂಘಟನಾ ಕಾರ್ಯದರ್ಶಿಯಾಗಿ ಕೇಶವ ಬಾಕಿಮನೆ, ಪ್ರಭಾಕರ ರಾಯರಡಿ, ಮಂಜುನಾಥ ರಥಬೀದಿ, ಮಂಜುನಾಥ ರಾಯರಡಿ, ವೆಂಕಟೇಶ ಕೋಟೆಬೆಟ್ಟು, ರಾಘವೇಂದ್ರ ಜೋಯಿಸರಹಿತ್ಲು ಅವರನ್ನು ಆಯ್ಕೆ ಮಾಡಲಾಯಿತು..
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನಲ್ಲಿ ನವೆಂಬರ್ 05 ಗುರುವಾರದಂದು ವ್ಯವಹಾರ ಮೇಳ ಜನತಾ ಆವಿಷ್ಕಾರ್ 2026 ವಿಜ್ಞಾನ, ವ್ಯವಹಾರ, ಸಾಂಸ್ಕೃತಿಕ ಸಂಗಮ ನಡೆಯಲಿದೆ. ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸುಮಾರು 150ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ವಿದ್ಯಾರ್ಥಿಗಳೇ ವ್ಯವಹಾರ ಮಾಡುವುದರ ಮೂಲಕ ಶೈಕ್ಷಣಿಕ ಸಂಚಲನ ಮೂಡಿಸಲಿದ್ದಾರೆ. ಅದ್ದೂರಿಯ ಉದ್ಘಾಟನಾ ಕಾರ್ಯಕ್ರಮ:ಪೂರ್ವಹ್ನ ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ವಿ.ವಿ.ವಿ. ಮಂಡಳಿ ರಿ. ಹೆಮ್ಮಾಡಿ ಇದರ ಅಧ್ಯಕ್ಷರಾದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ವಹಿಸಲಿದ್ದಾರೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಉಡುಪಿ ಇದರ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆದಾನಿ ಗ್ರೂಪ್, ಕರ್ನಾಟಕ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ ಅವರು ವ್ಯವಹಾರ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರಾವಳಿ ಜಿಲ್ಲೆಗಳು ಕಲೆ, ಸಾಹಿತ್ಯ ಸಂಸ್ಕೃತಿ ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಜಿಲ್ಲೆಯ ಅನೇಕ ಸಾಧಕರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹುಲಿ ಪರ್ವದಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಯುವ ಸಮುದಾಯವನ್ನು ಸಂಘಟಿಸುವ ಪ್ರಯತ್ನ ಶ್ಲಾಘನೀಯ ಎಂದು ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹೇಳಿದರು. ಅವರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೆವಳದ ರಥಬೀದಿಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕು ಇತಿಹಾಸದಲ್ಲಿ ಪ್ರಪ್ರಥಮ ಭಾರಿಗೆ ಯುವ ಮುಖಂಡ ಶೇಖರ ಪೂಜಾರಿ ಉಪ್ಪುಂದ ಇವರ ಸಾರಥ್ಯದಲ್ಲಿ ಶ್ರೀ ದುರ್ಗಾ ಟೈಗರ್ಸ್ ಉಪ್ಪುಂದ ಇವರ ಸಂಯೋಜನೆಯಲ್ಲಿ ಆಯೋಜಿಸಲಾದ ಮಂಗಳೂರು ಹಾಗೂ ಉಡುಪಿ ಭಾಗದ ಆಯ್ದ ಪ್ರತಿಷ್ಠಿತ ತಂಡಗಳ ಹುಲಿ ಪರ್ವ-2026 ಆಕರ್ಷಕ ಹುಲಿ ಕುಣಿತ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮ ಅತ್ಯಂತ ವೈಭವದಿಂದ ಸಂಘಟಿಸಲಾಗಿದೆ ಮತ್ತು ಜಿಲ್ಲೆಯ ಜನರ ಸಾಂಸ್ಕೃತಿಕ ಉತ್ಸಾಹದ ಪ್ರತೀಕವಾಗಿದೆ ಎಂದು ಶ್ಲಾಘಿಸಿದರು. ಹಿರಿಯರಾದ ಅರೆಹಾಡಿ ಮಂಜು ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಉಪ್ಪುಂದದಲ್ಲಿ ಹುಲಿ ಕುಣಿತ ನಡೆಸಿಕೊಂಡು ಬರುತ್ತಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಈ ಕೆಳಕಂಡ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾಳುಮೆಣಸು, ಗೇರು, ಜಾಯಿಕಾಯಿ, ಅನಾನಸು, ಅಂಗಾಂಶ ಬಾಳೆ ಹಾಗೂ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂತನ್, ಡ್ರಾö್ಯಗನ್ ಫೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ.40 ಸಹಾಯಧನ, ಸಣ್ಣ ಸಸ್ಯಾಗಾರಗಳ/ ನರ್ಸರಿಗಳ ಸ್ಥಾಪನೆಗೆ ಶೇ.50 ರ ದರದಲ್ಲಿ (ಗರಿಷ್ಠ ರೂ. 10 ಲಕ್ಷಗಳು) ಸಹಾಯಧನ, ಸಸ್ಯಾಗಾರಗಳ ಉನ್ನತೀಕರಣಕ್ಕಾಗಿ ಶೇ.50 ರಂತೆ ಪ್ರತಿ ಹೆಕ್ಟೇರಿಗೆ ರೂ. 2 ಲಕ್ಷಗಳಂತೆ 2 ಹೆಕ್ಟೇರಿಗೆ ರೂ.4 ಲಕ್ಷಗಳ ಸಹಾಯಧನ, ಅಂಗಾAಶ ಕೃಷಿ ಘಟಕ ಸ್ಥಾಪನೆಗೆ ಶೇ.40 ರಂತೆ (ಗರಿಷ್ಠ ರೂ. 100 ಲಕ್ಷಗಳು) ಸಹಾಯಧನ, ನೀರು ಸಂಗ್ರಹಣ ಘಟಕ (28*27*3 ಮೀ.ಅಳತೆ) ನಿರ್ಮಾಣಕ್ಕೆ ಗರಿಷ್ಠ 0.90 ಲಕ್ಷ ರೂಪಾಯಿಗಳ ಸಹಾಯಧನ, ಎರೆಹುಳ ಘಟಕ ನಿರ್ಮಾಣಕ್ಕೆ ಗರಿಷ್ಠ 0.50 ಲಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲಾವಿದರು ಇನ್ನಷ್ಟು ಸಾಧನೆಯನ್ನು ಮಾಡುವುದಕ್ಕೆ ಪ್ರೇರಣೆಯಾಗಲಿ ಎಂಬ ಉದ್ದೇಶದಿಂದ ಈ ಪುರಸ್ಕಾರವನ್ನು ನೀಡಿ ಗೌರವಿಸುವುದು ಎಂದು ಸ್ವಪ್ನ ಶಿಲ್ಪಿ ಶಿಕ್ಷಣ ತಜ್ಞ ಡಾ. ಹೆಚ್.ಶಾಂತಾರಾಮ್ ಹೇಳಿದರು. ಅವರು ಭಂಡಾರ್ಕಾರ್ಸ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ನಡೆದ “51ನೇ ರಾಜ್ಯೋತ್ಸವ ತಾಳಮದ್ದಳೆ ಮತ್ತು ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ” ಕಾರ್ಯಕ್ರಮದಲ್ಲಿ ಈ ವರ್ಷದ ಡಾ.ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ-2026 ನ್ನು ಮಹಾಬಲೇಶ್ವರ ಭಟ್ಟ ಕ್ಯಾದಗಿ ಅವರಿಗೆ ಪುರಸ್ಕರಿಸಿ ಮಾತನಾಡಿದರು. ಪ್ರಶಸ್ತಿ ಪುರಸ್ಕಾರಗಳು ಕಲಾವಿದನಲ್ಲಿ ಕಲೆಯನ್ನು ಉಳಿಸಿ ಬೆಳೆಸುವ ಮತ್ತು ಅದನ್ನು ಮುಂದಿನ ಪೀಳಿಗೆಗೆ ಹಂಚುವ ಗುರುತರ ಜವಾಬ್ದಾರಿಯನ್ನು ಕೊಡುತ್ತದೆ. ಅಂತೆಯೇ ಶ್ರೇಷ್ಠ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಯಕ್ಷಗಾನ ಪುರಸ್ಕಾರವನ್ನು ಆರಂಭಿಸಿದ್ದೇವೆ. ಉದಯೋನ್ಮುಖ ಕಲಾವಿದರನ್ನು ಗುರುತಿಸಿ ಅವರ ಸಾಧನೆಯನ್ನು ಬೆಂಬಲಿಸಿ ಪ್ರೋತ್ಸಾಹಿಸುವ ಮೂಲಕ ಈ ಕಲೆಯನ್ನು ಬೆಳೆಸುವುದಾಗಿದೆ. ಈ ಯಕ್ಷಗಾನ ಪುರಸ್ಕಾರವನ್ನು ಪಡೆದ ಕಲಾವಿದರಿಗೂ ಸಹ ಯಕ್ಷಗಾನ ಕಲೆಯನ್ನು ಉಳಿಸುವ ಜವಾಬ್ದಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲಾ ಪಂಚಾಯತ್ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ನೀಡಲ್ಪಡುವ ಅತ್ಯುನ್ನತ ಪ್ರಶಸ್ತಿಯಾದ “ನಾನಾಜಿ ದೇಶಮುಖ್ ಸರ್ವೋತ್ತಮ ಪಂಚಾಯತ್ ಸತತ ವಿಕಾಸ ಪುರಸ್ಕಾರ” 2026ಕ್ಕೆ ನಾಮ ನಿರ್ದೇಶನಗೊಂಡ ಹಿನ್ನಲೆಯಲ್ಲಿ ಆಯ್ದ ಗ್ರಾಮ ಪಂಚಾಯತ್ ಪರಿಶೀಲನೆ ಪ್ರಯುಕ್ತ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಸಹಾಯಕ ವಿಭಾಗೀಯ ಅಧಿಕಾರಿ ಆಶಾದೇವಿ ಹಾಗೂ ಹಿರಿಯ ಸಮಲೋಚಕಿ ವಿದ್ಯುಲತಾ ಅವರು ಕೋಡಿ ಗ್ರಾಮ ಪಂಚಾಯತ್ಗೆ ಭೇಟಿ ನೀಡಿ ದಾಖಲೆ ಹಾಗೂ ಸ್ಥಳ ಪರಿಶೀಲನೆ ನಡೆಸಿದರು. 24/7 ಕುಡಿಯುವ ನೀರಿನ ವ್ಯವಸ್ಥೆ, ಎಸ್.ಎಲ್.ಆರ್. ಎಮ್, ಕಛೇರಿ ದಾಖಲೆ ಇತ್ಯಾದಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು 2023-24ನೇ ಸಾಲಿನ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಹಾಗೂ ಸಿಬ್ಬಂದಿ ವರ್ಗ, ಸ್ಥಳೀಯ ಶಾಲಾ ಶಿಕ್ಷಕ ವರ್ಗ, ಸಂಜೀವಿನಿ ಸಂಘದ ಪದಾಧಿಕಾರಿಗಳು, ಹಾಗೂ ಸಿಬ್ಬಂಧಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯವರು, ಸ್ಥಳಿಯ ಆರೋಗ್ಯ ಇಲಾಖೆ…
