Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ ನೀಡಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ಶಾಸಕ ಎ. ಕಿರಣ್‌ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು. ಆದರೆ 2015ರಿಂದ ಒಬ್ಬರೂ ಖಾಯಂ ವೈದ್ಯರಿಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ಸಿಗದೆ ತೊಂದರೆಯಾಗಿದೆ ಎಂದು ಕಿರಣ್ ಕುಮಾರ್ ಹೇಳಿದರು. ಕುಂದಾಪುರದ ಇಎಸ್‌ಐ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಖಾಯಂ ವೈದ್ಯರು ಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ಮೂರು ವಾರದಲ್ಲಿ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು. ಆಸ್ಪತ್ರೆ ಹೆಸರು ಬಿಟ್ಟಿದ್ದರೆ ಕ್ರಮ:ಇಎಸ್‌ಐ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಹಕಾರಿ ಸಂಘಗಳು ಸಮಾಜದ ಆಸ್ತಿಯಾಗಿದ್ದು, ಗ್ರಾಮೀಣ ಭಾಗದ ಜನರಲ್ಲಿ ಉಳಿತಾಯದ ಮನೋಭಾವ ಮೂಡಿಸುವುದಲ್ಲದೇ ಸುಲಭವಾಗಿ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಅವರ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸುತ್ತಿದೆ. ಇಲ್ಲಿನ ವ್ಯವಹಾರದ ಎಲ್ಲಾ ಲಾಭಗಳು ಒಂದಿಲ್ಲೊಂದು ರೀತಿಯಲ್ಲಿ ಸಮಾಜಕ್ಕೆ ವಿನಿಯೋಗವಾಗುತ್ತಿದೆ ಎಂದು ಮಾಜಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಮರವಂತೆಯಲ್ಲಿ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಎಸ್. ರಾಜು ಪೂಜಾರಿ ಹಿರಿಯ ಸಹಕಾರಿಯಾಗಿದ್ದಾರೆ. ಅವರ ಅಧ್ಯಕ್ಷತೆಯ ಈ ಸಂಸ್ಥೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಪ್ರಸ್ತುತ ಮರವಂತೆಯಲ್ಲಿ 6ನೇ ನೂತನ ಶಾಖೆಯನ್ನು ಆರಂಭಿಸಿದ್ದು, ಇದರಿಂದ ಗ್ರಾಮೀಣ ಭಾಗಕ್ಕೆ ಇನ್ನಷ್ಟು ಆರ್ಥಿಕ ಸಹಕಾರ ದೊರೆಯುವಂತಾಗಲಿ ಎಂದರು. ಸಂಸ್ಥೆಯ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ, ಗ್ರಾಹಕರ ವಿಶ್ವಾಸ ಮತ್ತು ಗುಣಮಟ್ಟದ ಸೇವೆ ಮೂಲಕ ಸಂಸ್ಥೆಯು ಪ್ರಗತಿ ಕಂಡಿದೆ. ಗ್ರಾಹಕರ ವಿಶ್ವಾಸದ ಜೊತೆಗೆ ಸಂಸ್ಥೆ ಇನ್ನಷ್ಟು ಹೊಸತನದೊಂದಿಗೆ ಉತ್ಕ್ರಷ್ಟ ಸೇವೆ ನೀಡಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮೂಡುಬಿದಿರೆ ಜನಸಾಮಾನ್ಯರ ಆರೋಗ್ಯ ಕಾಳಜಿಯನ್ನು ಮನಗಂಡು ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಆರೋಗ್ಯ ಕೇಂದ್ರವು ಮತ್ತೊಂದು ಮಹತ್ವದ ಹೆಜ್ಜೆಯಾಗಿ ಹೃದಯ ಚಿಕಿತ್ಸಾ ಕೇಂದ್ರ (ಕಾರ್ಡಿಯಾಕ್ ಸೆಂಟರ್) ವನ್ನು ಆರಂಭಿಸಿರುವುದು ಅತ್ಯಂತ ಶ್ಲಾಘನೀಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್. ವಿನಯ್ ಹೆಗ್ಡೆ ನುಡಿದರು. ಅವರು ಬುಧವಾರ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ನೂತನವಾಗಿ ಪ್ರಾರಂಭಗೊಂಡ ಆಳ್ವಾಸ್ ಕಾರ್ಡಿಯಾಕ್ ಸೆಂಟರ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೂಡುಬಿದಿರೆ, ಮುಲ್ಕಿ, ಕಾರ್ಕಳ ಹಾಗೂ ಬೆಳ್ತಂಗಡಿ ಪ್ರದೇಶಗಳಲ್ಲಿಯೇ ಮೊದಲ ಬಾರಿಗೆ ಸ್ಥಾಪನೆಯಾದ ಆಳ್ವಾಸ್ ಕಾರ್ಡಿಯಾಕ್ ಸೆಂಟರ್ ಈ ಭಾಗದ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದರು. ಹೃದಯ ಸಂಬಂಧಿತ ರೋಗಗಳು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದ್ದು, ಸಮಯೋಚಿತ ಚಿಕಿತ್ಸೆ ದೊರಕದಿದ್ದರೆ ಅವು ಜೀವಕ್ಕೆ ಅಪಾಯಕಾರಿಯಾಗುತ್ತವೆ. ಇಂತಹ ಸಂದರ್ಭದಲ್ಲಿ ಮೂಡುಬಿದಿರೆಯಲ್ಲೇ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಹೃದಯ ಚಿಕಿತ್ಸಾ ಕೇಂದ್ರ ಸ್ಥಾಪನೆಯಾಗಿರುವುದು ಈ ಪ್ರದೇಶದ ಜನರಿಗೆ ದೊಡ್ಡ ವರದಾನವಾಗಿದೆ. ಇದರಿಂದಾಗಿ ಈಗ ಚಿಕಿತ್ಸೆಗಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆಗಳ ಉತ್ಪನ್ನಗಳ ತಯಾರಿಕೆ ಮತ್ತು ಗುಣಮಟ್ಟ ಪರಿಸರ ಸ್ನೇಹಿ ಹಾಗೂ ಆರೋಗ್ಯದಾಯಕವಾಗಿರುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉದ್ದಿಮೆದಾರರಿಗೆ ಕರೆ ನೀಡಿದರು. ಅವರು ಬುಧವಾರ ನಗರದ ಕಡಿಯಾಳಿಯ ದಿ ಓಷ್ಯನ್ ಪರ್ಲ್ ಹೋಟೆಲ್‌ನಲ್ಲಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಎಂ.ಎಸ್.ಎಂ.ಇ ನಿರ್ದೇಶನಾಲಯ, ಕೆ.ಸಿ.ಟಿ.ಯು ಟೆಕ್ಸಾಕ್ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಮಣಿಪಾಲ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ರ್ಯಾಪ್) ಯೋಜನೆಯಡಿಯಲ್ಲಿ ಒಂದು ದಿನದ ಝೆಡ್ ಮತ್ತು ಲೀನ್ ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆಗಳು ಕೇವಲ ಆರ್ಥಿಕತೆಯ ಲಾಭಕ್ಕೆ ಹೆಚ್ಚು ಒತ್ತು ನೀಡುವ ಜೊತೆಗೆ ಪರಿಸರ ಸ್ನೇಹಿ ಹಾಗೂ ಆರೋಗ್ಯದಾಯಕ ಉತ್ಪನ್ನಗಳ ತಯಾರಿಕೆಗೆ ಮುಂದಾಗಬೇಕು. ಇದರಿಂದಾಗಿ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುತ್ತದೆ. ಕೈಗಾರಿಕೆಗಳು ಸುಧೀರ್ಘವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೈತ ಕಾಯಕ ಪ್ರಸ್ತುತ ಹಿರಿಯ ಜೀವಿಗಳಲ್ಲಿ ಕಾಣುತ್ತಿದ್ದೇವೆ ಆದರೆ ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಬೇಕು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಹೇಳಿದರು. ಅವರು ಮಂಗಳವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರ ಸಹಯೋಗದೊಂದಿಗೆ 50ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ವಿದ್ಯಾಕ್ಷೇತ್ರ ಸಾಕಷ್ಟು ಮುಂದುವರಿಯುವ ಕಾಲದಲ್ಲಿ ಕೃಷಿ ಕ್ಷೇತ್ರವು ಅದೇ ರೀತಿಯಲ್ಲಿ ಮುಂದುವರಿಯಬೇಕು, ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಸಾಕಷ್ಟು ಮುಂಚೂಣಿಗೆ ಬರುವುದನ್ನು ಕಾಣುತ್ತಿದ್ದೇವೆ ಅದೇ ರೀತಿ ರೈತ ಕಾಯಕ ಇಲ್ಲದಿದ್ದರೆ ಬದುಕು ಬರಡಾಗುವುದರಲ್ಲಿಅನುಮಾನವೇ ಇಲ್ಲ ಎಂದು ನೋವು ವ್ಯಕ್ತಪಡಿಸಿದರು. ಕೆ.ಎಂ.ಎಫ್ ನಿರ್ದೇಶಕ ಶಿವಮೂರ್ತಿ ಕೆ. ಮಾತನಾಡಿ, ಜೈ ಜವಾನ್ ಜೈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇದರ ಜಂಟಿ ಆಶ್ರಯದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆಯಿತು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಭಾಗ್ಯಲಕ್ಷ್ಮೀ ಮಾಹಿತಿ ನೀಡಿದರು. ಆಸ್ಪತ್ರೆಯ ಶುಶ್ರೂಶಾಧಿಕಾರಿ ಶೋಭಾ, ರೋಟರಿ ಸದಸ್ಯರಾದ ಉದಯಶಂಕರ ರಾವ್, ವಾಸುದೇವ ಶೇರುಗಾರ್, ಗೋಪಾಲ ಬಿಲ್ಲವ, ಜಗದೀಶ ಪೂಜಾರಿ, ಜನಾರ್ದನ ಪೂಜಾರಿ ಪೆರಾಜೆ, ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಚಂದ್ರಕಲಾ ತಾಂಡೇಲ ಕಾರ್ಯಕ್ರಮ ನಿರ್ವಹಿಸಿದರು. ಕೃಷ್ಣ ಪೂಜಾರಿ ಸ್ವಾಗತಿಸಿ, ಶೋಭಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಈ ವರ್ಷವೂ ಸಹ ಶಿಕ್ಷಣ ಕ್ಷೇತ್ರದಲ್ಲಿ ತನ್ನ ಸಾಧನೆಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ – 2025 ಅವಾರ್ಡನ್ನು ಪಡೆದುಕೊಂಡಿದೆ. ಅತ್ಯುತ್ತಮ ಸಹಪಠ್ಯ ಚಟುವಟಿಕೆಗಳು, ಅತ್ಯುತ್ತಮ ಬೋರ್ಡಿಂಗ್ ಶಾಲೆ, ಶಿಕ್ಷಣದಲ್ಲಿ ಜೀವನ ಕೌಶಲ್ಯಗಳ ಸಹಭಾಗಿತ್ವ ಈ ಮೂರು ಪ್ರತಿಷ್ಠಿತ ಶ್ರೇಣಿಗಳಲ್ಲಿ ಶಾಲೆಯ ಶಿಸ್ತುಬದ್ಧತೆ, ಕಾರ್ಯಗಳ ಅನುಷ್ಠಾನ, ಸುರಕ್ಷತಾ ವ್ಯವಸ್ಥೆ, ಹಸಿರು ವಾತಾವರಣ, ಶಾಲೆಯ ಕಟ್ಟಡ ಮೊದಲಾದ ವಿಭಾಗಗಳಲ್ಲಿ ಇರುವ ಸುವ್ಯವಸ್ಥಿತಿಗಳನ್ನು ಪರಿಶೀಲಿಸಿ ಈ ಗೌರವ ನೀಡಲ್ಪಟ್ಟಿದೆ. ಹೈದರಾಬಾದ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಶಾಲೆಯ ಸಹ ಸಂಯೋಜಕಿಯಾದ ಶ್ರುತಿ ಪೂಜಾರಿ, ಪ್ರಶಸ್ತಿಯನ್ನು ಸ್ವೀಕರಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಅವರು ಈ ಕುರಿತು ಸಂತೋಷ ವ್ಯಕ್ತಪಡಿಸಿ ಮಾತನಾಡಿ, ಸಮಾಜವು ನಮ್ಮನ್ನು ಗುರುತಿಸುತ್ತಿರುವುದು ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚು ಮಾಡುತ್ತಿದೆ. ಶಾಲೆಯ ವ್ಯವಸ್ಥೆಯನ್ನು ಇನ್ನಷ್ಟು ಆಧುನೀಕರಣಗೊಳಿಸಿಕೊಳ್ಳಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಪಾಠದ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲಿ ಕೂಡ ಹೆಚ್ಚು ತೊಡಗಿಸಿಕೊಳ್ಳಬೇಕು. ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಆಗಿ ವಿದ್ಯಾರ್ಥಿ ಜೀವನ ಉಜ್ವಲವಾಗಲು ಸಹಾಯಕವಾಗುತ್ತದೆ. ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ಅತ್ಯುತ್ತಮ ವಿದ್ಯಾಭ್ಯಾಸ ದೊರೆಯುತ್ತಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯುವಲ್ಲಿ ಸಫಲರಾಗಿದ್ದಾರೆ ಎಂದು ಉದ್ಯಮಿ ಶಿವಾನಂದ ಗಾಣಿಗ ಹೇಳಿದರು. ಅವರು ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಗಾಣಿಗ ಬಹುಮಾನ ವಿತರಿಸಿದರು. ಶಾಲೆಯ ಹಳೆ ವಿದ್ಯಾರ್ಥಿ ಶ್ರೀದೇವಿ ಮಧ್ಯಸ್ಥ ಸ್ವಸ್ತಿ ವಾಚನಗೈದರು. ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ. ವಿಠಲ ಶೆಣೈ, ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಶುಭ ಹಾರೈಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ, ಕನ್ನಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವಿವೇಕ ವಿದ್ಯಾರ್ಥಿ-2025, ಅವರು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ 8ನೇ ತರಗತಿಯ ವಿದ್ಯಾರ್ಥಿನಿಯಾದ ನೇಹ ಸತ್ಯನಾರಾಯಣ ಅವರು ರಾಜ್ಯ ಮಟ್ಟದಲ್ಲಿ ಐದನೇ ರ‍್ಯಾಂಕ್‌ ಪಡೆದಿರುತ್ತಾರೆ. ಅವರ ರಾಜ್ಯಮಟ್ಟದ ಸಾಧನೆಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡ ಹಾಗೂ ಶಿಕ್ಷಕ ವೃಂದದವರು ಅಭಿನಂದನೆಯನ್ನು ತಿಳಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 2 ದೇವಸ್ಥಾನಗಳಿಗೆ ಮತ್ತು ಈಗಾಗಲೇ ರಚನೆಗೊಂಡಿರುವ 2 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಒಂದು ಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ ಸಿ ದೇವಸ್ಥಾನಗಳ ವಿವರ:ಕುಂದಾಪುರ ತಾಲೂಕು ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಉಪ್ಪಿನಕುದ್ರು, ಶ್ರೀ ಶಾಂತೇಶ್ವರ ದೇವಸ್ಥಾನ ಹೊಸಂಗಡಿ. ಮರುಪ್ರಕಟಣೆ ಹೊರಡಿಸಲಾದ ದೇವಸ್ಥಾನಗಳ ವಿವರ:ಉಡುಪಿ ತಾಲೂಕು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪೆರಂಪಳ್ಳಿ, ಶಿವಳ್ಳಿ(ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ) ಕುಂದಾಪುರ ತಾಲೂಕು ಶ್ರೀ ಬೆಳವಿನಮಕ್ಕಿ ಶ್ರೀ ಮಹಾಗಣಪತಿ ದೇವಸ್ಥಾನ ಸೇನಾಪುರ(ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ) ಕಾಪು ತಾಲೂಕು ಶ್ರೀ ಮಹಾಲಿಂಗೇಶ್ವರ…

Read More