Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ನಮ್ಮಲ್ಲಿನ ಲೋಪ ದೋಷಗಳನ್ನು ಸರಿಮಾಡಿಕೊಂಡು ಬಲಿಷ್ಠ ಸಂಘಟನೆಯಾಗುವತ್ತ ನಾವು ಗಮನ ಹರಿಸಬೇಕು. ಆಗ ಮಾತ್ರ ಭಗತ್ ರಂತವರ ಆದರ್ಶಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾಧ್ಯ ಎಂದು ಗಂಗೊಳ್ಳಿಯ ಉದ್ಯಮಿ ವಿಠಲ್ ಶೆಣೈ ಹೇಳಿದರು. ಅವರು ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿನ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ಭಗತ್‌ಸಿಂಗ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ರ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ‍್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದರು. ಉಮನಾಥ ದೇವಾಡಿಗ ಭಗತ್‌ಸಿಂಗ್‌ರ ಆದರ್ಶಗಳ ಕುರಿತು ತಿಳುವಳಿಕೆ ನೀಡಿದರು. ಯಶವಂತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಾರ‍್ಯಕ್ರಮದಲ್ಲಿ ಭಗತ್‌ಸಿಂಗ್‌ರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಭಗತ್‌ಸಿಂಗ್ ಅಭಿಮಾನಿ ಬಳಗದ ಅಧ್ಯಕ್ಷ ಸುಬ್ರಮಣ್ಯ ಸ್ವಾಗತಿಸಿದರು. ಅರುಣ, ಕಿರಣ್, ರಂಜಿತ್, ರಾಘವೇಂದ್ರ, ಮೋಹನ ಮೊದಲಾದವರು ಉಪಸ್ಥಿತರಿದ್ದರು.ಅನಿಲ್ ವಂದಿಸಿದರು. ವರದಿ : ನರೇಂದ್ರ ಎಸ್ ಗಂಗೊಳ್ಳಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಹಡಿಯಿಂದ ಬಿದ್ದು ತನ್ನ ಕಾಲಿನ ಬಲ ಕಳೆದುಕೊಂಡು ಮೂರು ವರ್ಷದಿಂದ ಹಾಸಿಗೆಯಲ್ಲಿಯೇ ಮಲಗಿರುವ ಯುವಕನಿಗೆ ನಮ್ಮ ಕುಂದಾಪುರ ವಾಟ್ಸಪ್ ಗ್ರೂಪಿನ ಸದಸ್ಯರು ಆರ್ಥಿಕ ಸಹಾಯ ಮಾಡಿದ್ದಾರೆ. ಬಡ ಕುಟುಂಬದ ಗುಡ್ಡಮ್ಮಾಡಿಯ ಸುಬ್ರಹ್ಮಣ್ಯ (22) ಮೂರು ವರ್ಷದಿಂದ ಸ್ಪೈನಲ್ ಕೋರ್ಡ್ ಸಮಸ್ಯೆಯಿಂದ ಬಳಲುತ್ತಿದ್ದು ಕಾಲಿನ ಬಲ ಕಳೆದುಕೊಂಡು ಹಾಸಿಗೆಯಲ್ಲಿಯೇ ಮಲಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರೂ ಈವರೆಗೆ ಗುಣಮುಖರಾಗಿಲ್ಲ. ಚಿಕಿತ್ಸಾ ವೆಚ್ಚ ಭರಿಸಲು ಸಂಕಷ್ಟದಲ್ಲಿರುವ ಬಗ್ಗೆ ನಮ್ಮ ಕುಂದಾಪುರ ವಾಟ್ಸಪ್ ಗ್ರೂಪಿನಲ್ಲಿ ಸದಸ್ಯರು ಗಮನ ಸೆಳೆದಾಗ ನಾಲ್ಕೈದು ದಿನದಲ್ಲಿ ಗ್ರೂಪಿನ ಒಂದಿಷ್ಟು ಸದಸ್ಯರು ಒಟ್ಟು 19,000ರೂ ಹಣ ಸಂಗ್ರಹಿಸಿದ್ದಾರೆ. ಯುವಕನ ಮನೆಗೆ ತೆರಳಿದ ಗ್ರೂಪಿನ ಅಡ್ಮಿನ್ ಸಂತೋಷ್ ಖಾರ್ವಿ, ಸದಸ್ಯರುಗಳಾದ ಹುಸೈನ್ ಹೈಕಾಡಿ, ಸುಭಾಷ್ ಗುಡ್ಡಮ್ಮಾಡಿ, ಪ್ರವೀಣ್, ವಿಜಯ ಮೊದಲಾದವರು ಹಣವನ್ನು ಯುವಕನ ತಾಯಿಗೆ ಹಸ್ತಾಂತರಿಸಿದರು. ಈ ಹಿಂದೆಯೂ ನಮ್ಮ ಕುಂದಾಪುರ ಗ್ರೂಪಿನ ಸದಸ್ಯರು ಶಿರೂರಿನ ರತ್ನಾ ಕೊಠಾರಿ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಿದ್ದರು. ಸಾಮಾಜಿಕ ತಾಣಗಳಲ್ಲಿ ಸಕ್ರಿಯವಾಗಿರುವವರು ಮೊಸಳೆ ಕಣ್ಣೀರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಟೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೃಷಿ ಕೂಲಿಕಾರರ ಸಂಘ ಹಾಗೂ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ ಕೊಟೇಶ್ವರ ಗ್ರಾಮದಲ್ಲಿ – ಸ್ವಂತ ಮನೆ, ಭೂಮಿ ಇಲ್ಲದ, ಬಾಡಿಗೆ ಮನೆಯಲ್ಲಿ ವಾಸವಾಗಿರುವ, ಒಂದೇ ಮನೆಯ ಸೂರಿನಡಿ ೨-೩ ಕುಟುಂಬ ಅನಿವಾರ‍್ಯ ಪರಿಸ್ಥಿತಿಯಲ್ಲಿ ವಾಸವಾಗಿರುವ ಬಡನಿವೇಶನ ರಹಿತರು ನಿವೇಶನ ಸ್ಥಳ ಸರಕಾರಿ ಭೂಮಿ ಗುರುತಿಸಿ – ಭೂಮಿ ಹಕ್ಕು ಪತ್ರ ಮಂಜೂರು ಮಾಡಲು ಒತ್ತಾಯಿಸಿ, ತಹಶೀಲ್ದಾರ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಜಿಲ್ಲಾಧಿಕಾರಿ ಕಛೇರಿ ಎದುರು ಹಾಗೂ ಬೆಂಗಳೂರು ವಿಧಾನ ಸೌಧ ಚಲೋ ಮುಂತಾದ ವಿವಿದ ಹಂತದ ಸಮರಶೀಲ ಹೋರಾಟ ಸಂಘಟಿಸಿ ಹೋರಾಟ ಮಾಡಲಾಗಿದ್ದರೂ-ನಿವೇಶನ ರಹಿತರ ಅಂತಿಮ ಪಟ್ಟಿ ಸಿದ್ಧಪಡಿಸಿ ವರ್ಷ ೨ ಕಳೆದರೂ ಈ ತನಕ ಸರಕಾರಿ ಜಮೀನು ಗುರುತಿಸಿ ಹಕ್ಕು ಪತ್ರ ಕೊಡದ ಬಗ್ಗೆ ಕೃಷಿ ಕೂಲಿಕಾರರ ಸಂಘದ ತಾಲೂಕು ಉಪಾಧ್ಯಕ್ಷ ಕರಿಯ ದೇವಾಡಿಗರವರು ಸರಕಾರದ ವಿಳಂಭ ನೀತಿಯನ್ನು ಖಂಡಿಸಿದರು. ಈ ಹಿನ್ನಲೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಲೇಖನ ನೀರು ನಿಮ್ಮ ಹೆಚ್ಚಿನೆಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಬಲ್ಲದು. ಮುಂಜಾನೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಹಲವಾರು ರೋಗಗಳನ್ನು ಗುಣಪಡಿಸಬಹುದು ಎಂದು ತಿಳಿದಿದೆಯಾ? ಹೆಚ್ಚಿನ ರೋಗಗಳು ಹೊಟ್ಟೆಯಿಂದಲೇ ಆರಂಭವಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಆಗ ನಿಮ್ಮ ಹೊಟ್ಟೆಯನ್ನು ಆರೋಗ್ಯವಾಗಿರಿಸಲು ಇದು ನೆರವಾಗಲಿದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಯೋಚನೆಯು ಮೊದಲು ಆರಂಭವಾಗಿದ್ದು ಜಪಾನ್ ನಲ್ಲಿ. ಜಪಾನಿನಲ್ಲಿ ಜನರು ಹಲ್ಲುಜ್ಜುವ ಮೊದಲು ನಾಲ್ಕು ಲೋಟ ನೀರು ಕುಡಿಯುತ್ತಾರೆ. ಉಪ್ಪು ಬೆರೆಸಿದ ಬೆಚ್ಚನೆಯ ನೀರು, ಆಯಸ್ಸು ನೂರು! ಇದರ ಬಳಿಕ ಅವರು ಅರ್ಧ ಗಂಟೆ ಏನೂ ತಿನ್ನುವುದಿಲ್ಲ ಅಥವಾ ಕುಡಿಯುವುದಿಲ್ಲ. ಈ ನೀರಿನ ಥೆರಪಿ ನಿಮ್ಮನ್ನು ಆರೋಗ್ಯಕರ ಹಾಗೂ ಚಟುವಟಿಕೆಯಿಂದಿಡುತ್ತದೆ. ಜಪಾನ್ ನ ಜನರು ವಿಶ್ವದಲ್ಲೇ ಅತ್ಯಂತ ಹೆಚ್ಚು ಚಟುವಟಿಕೆ ಹಾಗೂ ದಕ್ಷತೆಯನ್ನು ಹೊಂದಿರುವವರೆಂಬ ಹೆಗ್ಗಳಿಕೆಯಿದೆ. ಬೆಳ್ಳಂ ಬೆಳಿಗ್ಗೆ ಎದ್ದು ಎಳೆ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ ಬೆಳಗ್ಗೆ ಎದ್ದು ನೀರು ಕುಡಿಯುವುದರಿಂದ ಹಲವಾರು ರೀತಿಯ ಉಪಯೋಗಗಳಿವೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿ ರಾಮಮಂದಿರ ರಸ್ತೆಯ ಬದಿಯಲ್ಲಿದ್ದ ಭಾರಿಗಾತ್ರದ ಮರವೊಂದು ಧರಾಶಾಹಿಯಾಗಿದ್ದು ಮರದ ಕೆಳಕ್ಕೆ ನಿಲ್ಲಿಸಲಾಗಿದ್ದ ಲಾರಿ ಹಾಗೂ ಗಂಗೊಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಮೇಲೆರಗಿ ವಾಹನಗಳನ್ನು ಜಖಂಗೊಳಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಮಮಂದಿರದ ಬಳಿ ಇದ್ದ ಭಾರಿ ಗ್ರಾತ್ರದ ಆಲದ ಮರವು ಭಾರ ತಡೆಯಲಾಗದೆ ನೆಲಕ್ಕುರುಳಿದೆ ಎನ್ನಲಾಗಿದೆ. ಮರದ ಕೆಳಕ್ಕೆ ನಿಲ್ಲಿಸಲಾಗಿದ್ದ ಲಾರಿ ಮೇಲೆ ಬಿದ್ದು ನಂತರ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ಸಿನ ಮೇಲೆ ಬಿದ್ದಿದ್ದರಿಂದ ಬಸ್ಸಿನಲ್ಲಿದ್ದ ನಲವತ್ತಕ್ಕೂ ಅಧಿಕ ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ.  ಘಟನೆಯಿಂದ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ರಸ್ತೆ ತಡೆ ಉಂಟಾಯಿತು. ಬಳಿಕ ಸ್ಥಳೀಯ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು/ ಕುಂದಾಪ್ರ ಡಾಟ್ ಕಾಂ ಸುದ್ದಿ/

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಆಹಾರ ಪದ್ಧತಿ, ಒತ್ತಡ, ಆಹಾರ, ವಿಹಾರ ಮೊದಲಾದ ಅನೇಕ ಕಾರಣಗಳಿಂದ ಮನುಷ್ಯನು ವಿವಿಧ ರೀತಿಯ ಕಾಯಿಲೆಗಳು ಮತ್ತು ರೋಗಗಳಿಗೆ ತುತ್ತಾಗುತ್ತಿದ್ದಾನೆ. ಪ್ರಕೃತಿಯಲ್ಲಿ ಬೆಳೆಯುವ ಹಸಿರು ತರಕಾರಿಗಳಿಂದ ಮತ್ತು ತಾಜಾ ಆಹಾರಗಳ ಸೇವನೆಯಿಂದ ಆರೋಗ್ಯ ರಕ್ಷಣೆ ಮಾಡಿಕೊಳ್ಳಬಹುದು. ನಮ್ಮ ಜೀವಕ್ಕೆ ಬೇಕಾಗುವ ಪ್ರೋಟಿನ್ ಲವಣಾಂಶಯುಕ್ತ ಆಹಾರಗಳ ನಿಮಿಯಮಿತ ಸೇವನೆಯಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಕ್ರಾಂತಿವೀರರ ಅಭಿಮಾನಿ ಬಳಗ ಗಂಗೊಳ್ಳಿ ಇವರ ಸಹಕಾರದೊಂದಿಗೆ ಜರಗಿದ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ಜನರು ಆರೋಗ್ಯ ಬಗ್ಗೆ…

Read More

ಕುಂದಾಪ್ರ ಡಾಟ್ ಕಾಂ ಲೇಖನ ಭಾರತೀಯ ಚಿತ್ರರಂಗ ಕಂಡ ಮಹಾನ್ ಕಲಾವಿದರಲ್ಲೊಬ್ಬರಾದ ಗುರುದತ್ ಅವರ ಪೂರ್ಣ ಹೆಸರು ಗುರುದತ್ ಶಿವಶಂಕರ್ ಪಡುಕೋಣೆ. ಶಿವಶಂಕರ ರಾವ್ ಪಡುಕೋಣೆ ಹಾಗೂ ವಸಂತಿ ಪಡುಕೋಣೆ ದಂಪತಿಯ ಮಗನಾಗಿ ಗುರುದತ್ ಜುಲೈ 9, 1925ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ನಟನಾಗಿ ನಿರ್ಮಾಪಕ, ನಿರ್ದೇಶಕನಾಗಿ ಆತ ಚಿತ್ರರಂಗದಲ್ಲಿ ಮೂಡಿಸಿದ ಚಿತ್ರಗಳು ಅವಿಸ್ಮರಣೀಯವಾದುದು ಗುರುದತ್ ಅವರ ತಂದೆ ಮೊದಲು ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ ಮೊದಲು ಮುಖ್ಯೋಪಾಧ್ಯಾಯರಾಗಿ ನಂತರ ಬ್ಯಾಂಕ್ ಉದ್ಯೋಗಿಯಾಗಿದ್ದರು. ತಾಯಿ ವಸಂತಿ ಶಾಲೆಯೊಂದರಲ್ಲಿ ಉಪಾಧ್ಯಾಯಿನಿಯಾಗಿ, ಖಾಸಗಿ ಶಿಕ್ಷಕಿಯಾಗಿ ಕೆಲಸ ಮಾಡಿದರು. ಅವರು ಸಣ್ಣ ಕಥೆಗಳನ್ನು ಬರೆಯುತ್ತಿದ್ದರು ಹಾಗೂ ಹಲವಾರು ಬಂಗಾಳಿ ಲೇಖನಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ಚಲನಚಿತ್ರ ನಿರ್ದೇಶಕಿಯಾದ ಕಲ್ಪನಾ ಲಾಜ್ಮಿ ಇವರ ತಂಗಿಯ ಮಗಳು. ಗುರುದತ್ ತನ್ನ ಬಾಲ್ಯದ ಬಹುಪಾಲು ಸಮಯದಲ್ಲಿ ಪೋಸ್ಟರುಗಳನ್ನು ಬಿಡಿಸುತ್ತಿದ್ದ. ತಾಯಿಯ ತಮ್ಮನಾದ ಬಾಲಕೃಷ್ಣ ಬಿ.ಬೆನೆಗಲ್ ಅವರೊಂದಿಗೆ ಆಟವಾಡುತ್ತಿದ್ದ. ಖ್ಯಾತ ಚಲನಚಿತ್ರ ನಿರ್ದೇಶಕರಾದ ಶ್ಯಾಮ್ ಬೆನೆಗಲ್ ಬಾಲಕೃಷ್ಣರವರ ತಮ್ಮನಾದ ಶ್ರೀಧರ.ಬಿ.ಬೆನೆಗಲ್ ಅವರ ಮಗ. ಗುರುದತ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಲಯದ ಪ್ರೌಢಶಾಲೆಗಳ ಕನ್ನಡ ಬೋಧಕರ ಒಂದು ದಿನದ ಕಾರ್ಯಾಗಾರವು ಮರವಂತೆಯ ಸುಭಾಶ್ಚಂದ್ರ ಬೋಸ್ ಸರಕಾರಿ ಫೌಢಶಾಲೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ. ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಎಸ್. ಜನಾರ್ದನ ಶಿಕ್ಷಕರು ಕನ್ನಡ ಭಾಷೆಯ ಕಲಿಕೆಗೆ ಎದುರಾಗುವ ತೊಡಕುಗಳನ್ನು ಗುರುತಿಸಿಕೊಂಡು ಅವುಗಳನ್ನು ಮೀರುವ ಪ್ರಯತ್ನ ನಡೆಸಬೇಕು. ಕಾರ್ಯಾಗಾರದಲ್ಲಿ ಅದರ ಕುರಿತು ಚರ್ಚೆ ನಡೆಯಲಿ ಮತ್ತು ಕನ್ನಡ ಭಾಷೆಯ ಪರಿಣಾಮಕಾರಿ ಬೋಧನೆಯ ಮಾರ್ಗ ಹೊರಹೊಮ್ಮಲಿ ಎಂದು ಆಶಿಸಿದರು. ಕಾರ್ಯಾಗಾರದ ಸಹ ಪ್ರಾಯೋಜಕ ಉದ್ಯಮಿ ಮನ್ಸೂರ್ ಇಬ್ರಾಹಿಮ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಸರ್ವೋತ್ತಮ ಭಟ್ ಸ್ವಾಗತಿಸಿದರು. ಶಿಕ್ಷಕ ರಾಮಚಂದ್ರ ವಂದಿಸಿದರು. ಚಂದ್ರ ಡಿ. ನಿರೂಪಿಸಿದರು. ಹಕ್ಲಾಡಿ ಸರಕಾರಿ ಪ್ರೌಢಶಾಲೆಯ ಡಾ. ಕಿಶೋರಕುಮಾರ ಶೆಟ್ಟಿ ಮತ್ತು ಉಪ್ಪುಂದದ ಕನ್ನಡ ಶಿಕ್ಷಕ ನಾಗರಾಜ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚೆಚ್ಚು ಅವಿಷ್ಕಾರಗಳಿಂದ ಕೊಡಿರುವುದರಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಸಾರ್ವಜನಿಕ ಹುದ್ದೆಗಳಿಗೆ ಸ್ಪರ್ಧಿಸಿ ಹುದ್ದೆಗಿಟಿಸಿಕೊಳ್ಳುವ ಸಲುವಾಗಿ ಉದ್ಯೋಗದ ಬಗ್ಗೆ ಕೆಲವೂಂದು ಮಾಹಿತಿಗಳನ್ನು ತಿಳಿದುಕೊಂಡು ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮಾರ್ಗದರ್ಶನ ಶಿಬಿರಗಳ ಭಾಗವಹಿಸಿ ಸಂಪೂರ್ಣ ಪ್ರಯೋಜವನ್ನು ಪಡೆದುಕೊಂಡಾಗ ಮಾತ್ರ ವಿದ್ಯಾರ್ಥಿಗಳು ಸಮಾಜದಲ್ಲಿ ಯಶ್ವಸಿಯಾಗಲು ಸಾಧ್ಯ ಎಂದು ಜೀವ ವಿಮಾ ನಿಗಮದ ಅಧಿಕಾರಿ ಶಂಕರ ಐತಾಳ್ ಹೇಳಿದರು. ಅವರು ಕೋಟೇಶ್ವರ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ ಮಂಗಳೂರು ವಿಶ್ವ ವಿಧ್ಯಾನಿಲಯ, ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಹಾಗೂ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರ ಪ್ರಥರ್ಮ ದರ್ಜೇ ಕಾಲೇಜು ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉದ್ಯೋಗ ಮಾರ್ಗದರ್ಶನ ಹಾಗೂ ಸಾಹಿತ್ಯ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಸಭೆಯ ಅಧ್ಯಕ್ಷತೆ ವಹಿಸಿದರು. ಉಜಿರೆ ಎಸ್.ಡಿ.ಎಮ್. ಕಾಲೇಜಿ ಇಂಗ್ಲಿಷ್ ಪಿ,ಜಿ. ವಿಭಾಗ ಪ್ರೊ.ಮಾಧವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಡ್ತರೆ ಮಂಜಯ್ಯ ಶೆಟ್ಟಿ ಕಾಂಪ್ಲೆಕ್ಸ್‌ನಲ್ಲಿರುವ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಗೋಡೆಯನ್ನು ಕೊರೆದು ಒಳನುಗ್ಗಿರುವ ಕಳ್ಳರು ಚಿನ್ನ ಹಾಗೂ ನಗದು ದೋಚುವ ವಿಫಲ ಯತ್ನ ನಡೆಸಿದ್ದಾರೆ. ಬ್ಯಾಂಕಿನ ಎದುರಿನ ಶಟರ್ ಹಾಗೆಯೇ ಇದ್ದು, ಬಲಬಾಗದಲ್ಲಿ ಗೋಡೆಯನ್ನು ಕೊರೆದು ಒಳನುಗ್ಗಿದ್ದಾರೆ. ಬ್ಯಾಂಕಿನ ಒಳಗಡೆ ಇದ್ದ ಸಿಸಿ ಕ್ಯಾಮರಾವನ್ನು ಒಡೆದು ಹಾಕುವ ಪ್ರಯತ್ನ ನಡೆಸಿದ್ದು, ಮಾಹಿತಿ ದೊರೆಯಬಾರದೆಂಬ ಕಾರಣಕ್ಕೆ ಅದರ ಡಿವಿಆರ್’ ಕೊಂಡೊಯ್ದಿದ್ದಾರೆ. ಬ್ಯಾಕಿನ ಲಾಕರ್ ಎದುರು ಭಾಗದಲ್ಲಿಯೇ ಗೋಡೆ ಕೊರೆದಿದ್ದು, ವ್ಯವಸ್ಥಿತ ತಂಡ ಕಳ್ಳತನಕ್ಕೆ ಯತ್ನ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನದ ಹಿಂದಷ್ಟೇ ಆಸೋಡು ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಎರಡು ಅಂಗಡಿ ಕಳವು ಪ್ರಕರಣದಲ್ಲಿಯೂ ದೇವಸ್ಥಾನದಲ್ಲಿ ದೇವಳ ಪ್ರಭಾವಳಿಯೊಂದಿಗೆ ಅಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾ ಹಾಗೂ ಡಾಟಾ ಸಂಗ್ರಹವಾಗುವ ಡಿವಿಆರ್ ಕದ್ದೊಯ್ದಿದ್ದರು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More