Author: ನ್ಯೂಸ್ ಬ್ಯೂರೋ

ಸಂಘಟನಾತ್ಮಕ ಕಾರ್ಯದಿಂದ ಪಕ್ಷ ಸದೃಢ: ಶ್ರೀನಿವಾಸ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಮಹತ್ತರವಾದ ಜವಾಬ್ದಾರಿ ಬಿಜೆಪಿಯ ಕಾರ್ಯಕರ್ತರಿಗಿದ್ದು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಿದೆ. ಬಿಜೆಪಿಯ ವಿವಿಧ ಮೋರ್ಚಾಗಳು ಸಂಘಟನಾತ್ಮವಾಗಿ ಕಾರ್ಯನಿರ್ವಹಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನಾಗೂರು ಮಹಾಲಸಾ ಕಲ್ಚರಲ್ ಹಾಲ್‌ನಲ್ಲಿ ನಡೆದ ಬೈಂದೂರು ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾಗಳ ಪದಗ್ರಹಣ ಸಮಾರಂಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಬಡವರು ಹಾಗೂ ದುರ್ಬಲ ವರ್ಗದವರನ್ನು ಮರೆತಿದೆ. ಕುಂದಾಪುರ ತಾಲೂಕಿನಲ್ಲಿ 2,000ಕ್ಕೂ ಹೆಚ್ಚು ಮಂದಿ ಹಕ್ಕುಪತ್ರಕ್ಕಾಗಿ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಸರಣಿ ರೈತರ ಆತ್ಮಹತ್ಯೆಗಳು ನಡೆದಿವೆ. ಕಾವೇರಿ ನೀರಿನ ವಿಷಯದಲ್ಲಿಯೂ ರಾಜಕೀಯ ಮಾಡಿದೆ ಎಂದ ಅವರು ಜನಪರ ಕಾಳಜಿಯ ಕಾರ್ಯಗಳಬೇಕಾದರೆ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕಿದೆ ಎಂದರು. ರಾಜ್ಯ ಬಿಜೆಪಿ ಕಾರ್ಯಕಾರಿಣಿ…

Read More

ಬೈಂದೂರು ಪ್ರಥಮ ದರ್ಜೆ ಕಾಲೇಜು ವಿಜ್ಞಾನ ವಿಭಾಗ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು:  ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಸೌಕರ್ಯ ಒದಗಿಸಿ ಪೂರಕ ಶೈಕ್ಷಣಿಕ ವಾತಾವರಣ ನಿರ್ಮಿಸುವುದು ನಮ್ಮ ಗುರಿಯಾಗಿದ್ದು, ಆ ನೆಲೆಯಲ್ಲಿ ಕಾರ್ಯೋನ್ಮಖರಾಗಿ ಬೈಂದೂರು ಪದವಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಆರಂಭಿಸಿ ಅಗತ್ಯ ಸೌಕರ್ಯ ಒದಗಿಸಲಾಗಿದೆ. ಈ ಭಾಗದ ವಿದ್ಯಾರ್ಥಿಗಳೂ ಕುಂದಾಪುರ ಅಥವಾ ಭಟ್ಕಳಕ್ಕೆ ತೆರಳುವುದು ಬಡ ಮತ್ತು ಮಧ್ಯಮ ವರ್ಗದ ಕುಟುಂಬಕ್ಕೆ ಹೊರೆಯಾಗುವುದನ್ನು ಮನಗಂಡು ಬೈಂದೂರು ಕಾಲೇಜಿನಲ್ಲಿ ವಿಜ್ಞಾನ ಕಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗ ಮತ್ತು ವಿವಿಧ ಪ್ರಯೋಗಾಲಯಗಳನ್ನು ಉದ್ಘಾಟಿಸಿ ಮಾತನಾಡಿ ಸದ್ಯ ಭೌತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಗಣಿತ ಶಾಸ್ತ್ರ ವಿಷಯಗಳನ್ನು ಕಲಿಸಲಾಗುವುದು. ಮುಂದಿನ ವರ್ಷ ಅನ್ಯ ವಿಷಯಗಳ ಬೋಧನೆಯನ್ನೂ ಇಲ್ಲಿ ಆರಂಭಿಸಲಾಗುವುದು. ವಿಜ್ಞಾನ ವಿಷಯ ಬೋಧನೆಗೆ ಈಗಾಗಲೇ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರಯೋಗಾಲಯಗಳನ್ನು ಸಜ್ಜುಗೊಳಿಸಲಾಗಿದೆ. ಕಾಲೇಜಿಗೆ ಯಾವುದೇ ಕೊರತೆ ಎದುರಾಗದಂತೆ ನೋಡಿಕೊಳ್ಳಲಾಗುವುದು ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೇಡ್ ಪೋನ್ ಧರಿಸಿ ಹಳಿಯ ಮೇಲೆ ತೆರಳುತ್ತಿದ್ದ ಯುವಕನಿಗೆ ರೈಲು ಢಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕುಂದಬಾರಂದಾಡಿಯಲ್ಲಿ ಬಳಿ ವರದಿಯಾಗಿದೆ. ಕುಂದಬಾರಂದಾಡಿ ಮೂಲದ ಯುವಕ ಜಗತ್ ಹೆಗ್ಡೆ (23) ಮೃತ ದುರ್ದೈವಿ. ಮೂಲತಃ ಕುಂದಬಾರಂದಾಡಿಯವರಾದ ಜಗತ್ ಹೆಗ್ಡೆ ಕುಟುಂಬ ಪ್ರಸ್ತುತ ಬೆಂಗಳೂರಿನಲ್ಲಿದೆ. ತನ್ನ ಅಜ್ಜಿಯನ್ನು ಊರಿಗೆ ಬಿಡುವ ಸಲುವಾಗಿ ಕುಂದಬಾರಂದಾಡಿಯ ಮನೆಗೆ ಬಂದಿದ್ದ ಜಗತ್ ಹೆಗ್ಡೆ ಪ್ರತಿಭಾರಿಯಂತೆ ಸಂಜೆಯ ವೇಳೆ ಸಮಯ ಕಳೆಯುವುದಕ್ಕಾಗಿ ರೈಲು ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಡೆಮೋ ರೈಲು ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಂಜಿನಿಯರಿಂಗ್ ವಿಧ್ಯಾರ್ಥಿಯಾಗಿದ್ದ ಜಗತ್ ಹೆಗ್ಡೆ ರಾತ್ರಿ ಮರಳಿ ಬೆಂಗಳೂರಿಗೆ ತೆರಳುವವರಿದ್ದರು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಂಗೊಳ್ಳಿ ಠಾಣಾಧಿಕಾರಿ ಹಾಗೂ ಸಿಬ್ಬಂಧಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಅ.೦೧ರಿಂದ ಶರನ್ನವರಾತ್ರಿ ಉತ್ಸವವು ಆರಂಭವಾಗಲಿದ್ದು ಅ.೧೧ರವರೆಗೆ ನಡೆಯಲಿದೆ. ಶ್ರೀ ಗುರು ಪರಾಶಕ್ತಿ ಮಠ ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ಬ್ರಹ್ಮಶ್ರೀ ವೇ. ಮೂ. ಕೋಟ ಚಂದ್ರಶೇಖರ ಸೋಮಯಾಜಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ಸಂಪನ್ನಗೊಳ್ಳಲಿದೆ. ಅ.೦೧ರಂದು ಕಲಶ ಸ್ಥಾಪನೆ ಪೂಜೆಯಿಂದ ಆರಂಭಗೊಂಡು ಪ್ರತಿದಿನ ವಿಶೇಷ ಪೂಜೆ, ಸಂಜೆ ಭಜನೆ, ಅ.೦೯ರಂದು ಬೆಳಿಗ್ಗೆ ಪುಣ್ಯಾಹ ಗಣಪತಿ ಪೂಜೆ, ಚಂಡಿಕಾಯಾಗ, ಮಹಾಪೂಜೆ, ಅನ್ನಸಂತರ್ಪಣೆ ಜರುಗಲಿರುವುದು. ಅ.೧೧ರಂದು ಕಲಶ ವಿಸರ್ಜನಾ ಪೂಜೆ ನಡೆಯಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುಶಿಕ್ಷಿತ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ನಮ್ಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ, ಅದನ್ನು ಉಳಿಸಿ ಬೆಳೆಸುವಲ್ಲಿ ಅವರ ಪರಿಶ್ರಮ ಸಾಕಷ್ಟಿದೆ. ಗುರು ಹಿರಿಯರನ್ನು ಗುರುತಿಸಿ, ಗೌರವಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿರಬೇಕು. ಪ್ರಾಜ್ಞರ ಮಾರ್ಗದರ್ಶನ ಗುರಿಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಉಪ್ಪುಂದದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಆದರ್ಶ ಶಿಕ್ಷಕ ದಂಪತಿಗಳಾದ ವೆಂಕಪ್ಪ ಐತಾಳ್ ಮತ್ತು ಶಾರದಾರವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತಮ್ಮ ಮಕ್ಕಳನ್ನು ಬೇರೆಯವರ ಕೈಯಲ್ಲಿಟ್ಟು, ಬೇರೆಯವರ ಮಕ್ಕಳಿಗೆ ವಿದ್ಯಾದಾನ ಮಾಡುವ ಶಿಕ್ಷಕ ದಂಪತಿಗಳು ನಿಜವಾಗಲೂ ಅನುಕರಣೀಯರು. ನಿಸ್ವಾರ್ಥದಿಂದ ವಿದ್ಯಾರ್ಥಿಗಳಿಗೆ ಜ್ಞಾನವನ್ನು ಧಾರೆಯೆರೆದು ಅವರ ಉನ್ನತಿಯನ್ನು ಕಂಡು ಸಂಭ್ರಮಿಸುವ ಅಧ್ಯಾಪಕರಿಂದಲೇ ನಮ್ಮ ಶಿಕ್ಷಣ ವ್ಯವಸ್ಥೆ ಮೇಲ್‌ಸ್ತರದಲ್ಲಿದೆ. ನಮ್ಮ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಶಿಕ್ಷಕ ದಂಪತಿಗಳ ಕುರಿತಾದ ಪುಸ್ತಕವನ್ನು ಹೊರತರುವ ಉದ್ದೇಶ ಪರಿಷತ್ತಿಗೆ ಇದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದೆ. ಬಾಲಕರ ತಂಡದಲ್ಲಿ ಮೊಗವೀರ ನಾಗೇಂದ್ರ, ಕಾರ್ತಿಕ್ ಬಿ, ನಾಗರಾಜ ನಾಯಕ್ ಪ್ರತೀಕ್ ಪ್ರಮೋದ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ತಂಡದಲ್ಲಿ ಮನಿಷಾ ಪೂಜಾರಿ,ರಕ್ಷಿತಾ ಕೊತ್ವಾಲ್, ಪ್ರತಿಭಾ ದೇವಾಡಿಗ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಮತ್ತು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಚಿತ್ರದಲ್ಲಿದ್ದಾರೆ. ವರದಿ : ನರೇಂದ್ರ ಎಸ್ ಗಂಗೊಳ್ಳಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ನೇತೃತ್ವದಲ್ಲಿ ಮನೆ ನಿವೇಶನ ರಹಿತರಿಗೆ ಭೂಮಿ ಹಕ್ಕು ಪತ್ರ ಮಂಜೂರು ಮಾಡಲು ಆಗ್ರಹಿಸಿ ಹಾಗೂ ಸರಕಾರದಿಂದ ಗುರುತಿಸಿರುವ ಸರಕಾರಿ ಭೂಮಿಯನ್ನು ಕಾಲಮಿತಿಯೊಳಗೆ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಕುಂದಾಪುರ ಮಿನಿ ವಿಧಾನ ಸೌಧ ಎದುರು ನಿವೇಶನ ರಹಿತ ಅರ್ಜಿದಾರರು ಬೃಹತ್ ಪ್ರತಿಭಟನೆ ನಡೆಸಿದರು. ಭೂಮಿ ಹಕ್ಕು ಪತ್ರ ಮಂಜೂರು ಮಾಡಲು ಆಗ್ರಹಿಸಿ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ನಿವೇಶನ ರಹಿತರ – ಅಂತಿಮ ಪಟ್ಟಿ ಸಿದ್ಧಪಡಿಸಿ ವರ್ಷ ಕಳೆದರೂ ಈ ತನಕ ಭೂಮಿ ಹಕ್ಕು ಪತ್ರ ಮಂಜೂರು ಮಾಡುವುದಕ್ಕೆ ಸರಕಾರಿ ಜಾಗ ಗುರುತಿಸಲಾಗಿದ್ದರೂ ನಿವೇಶನ ರಹಿತರಿಗೆ ವಿತರಣೆ ಮಾಡದೇ ನಿಧಾನ ದ್ರೋಹ ಮಾಡಲಾಗಿದೆ. ಆದ್ದರಿಂದ ಕಂದಾಯ ಇಲಾಖೆ ಗುರುತಿಸಿರುವ ಸರಕಾರಿ ಭೂಮಿಯನ್ನು ಕಾಲ ಮಿತಿಯೊಳಗೆ ವಿತರಣೆ ಮಾಡಲು ಕ್ರಮ ವಹಿಸಬೇಕೆಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಮಂಡ್ಯ ಜಿಲ್ಲಾಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟೇಶ್ವರ ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಮಕ್ಕಳು ’ಪುಷ್ಪಗಳ ದಿನಾಚರಣೆ’ ಸಂಭ್ರಮದಿಂದ ಆಚರಿಸಿದರು. ಪುಟಾಣಿ ಮಕ್ಕಳು ವಿವಿಧ ಬಗೆಯ ಆಕರ್ಷಕ ಹೂಗಳನ್ನು ತರುವುದರ ಜೊತೆಗೆ ರಂಗು ರಂಗಿನ ಉಡುಪು ಧರಿಸಿ ಸಂಭ್ರಮಿಸಿದರು. ಈ ದಿನದ ವಿಶೇಷವಾಗಿ ಪ್ರಾಥಮಿಕ ಕಟ್ಟಡವನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು. ಶಿಕ್ಷಕಿಯರು ಹೂಗಳ ಉಪಯೋಗ ಮತ್ತು ಮಹತ್ವದ ಕುರಿತು ಸವಿಸ್ತಾರ ಮಾಹಿತಿಯನ್ನು ಮಕ್ಕಳಿಗೆ ನೀಡಿದರು. ಜೊತೆಗೆ ಪುಟಾಣಿ ಮಕ್ಕಳು ತಮ್ಮ ಪುಟಾಣಿ ಕೈಗಳಿಂದ ಆಕರ್ಷಕ ಹೂವಿನ ರಂಗೋಲಿಯನ್ನು ಬಿಡಿಸುವ ಮೂಲಕ ಪುಷ್ಪಗಳ ದಿನಾಚರಣೆಗೆ ಇನ್ನಷ್ಟು ಮೆರಗು ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕಿ ಅನುಪಮ ಎಸ್. ಶೆಟ್ಟಿ ಹಾಗೂ ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಜನತೆ ಆಲೋಚನೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದರ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಇದು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣ ಯುವಜನತೆಯನ್ನು ಪ್ರಜ್ಞಾವಂತ ನಾಗರಿಕರನ್ನಾಗಿ ರೂಪಿಸುತ್ತದೆ. ಯುವಜನತೆ ಸಂವಿಧಾನಾತ್ಮಕ ತತ್ವ, ಮಾನವೀಯ ಮೌಲ್ಯಗಳನ್ನು ನೈಜ ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ, ಸದೃಢ ರಾಷ್ಟ್ರ ನಿರ್ಮಾಣದ ಕುರಿತು ವೈಯಕ್ತಿಕ ನೆಲೆಯಲ್ಲಿ ಚಿಂತಿಸಬೇಕು ಎಂದು ಭಾರತೀಯ ವಿದೇಶಾಂಗ ಸೇವೆಯ ನಿವೃತ್ತ ಅಧಿಕಾರಿ ಬಾಲಕೃಷ್ಣ ಶೆಟ್ಟಿ ಹೇಳಿದರು. ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಬಿ. ಎಮ್. ಸುಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಪ್ರೊ. ಎ. ಪಿ. ಮಿತ್ತಂತ್ತಾಯ, ಕಾರ್ಯದರ್ಶಿ ಸೀತರಾಮ ನಕ್ಕತ್ತಾಯ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್ ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗ ಉಪನ್ಯಾಸಕಿ ವನಿತಾ ಜಿ. ಭಂಡಾರಿ ಅತಿಥಿಗಳ ಪರಿಚಯಿಸಿದರು. ವಾಣಿಜ್ಯ ಉಪನ್ಯಾಸಕ ಜಯಶೀಲ್ ಕುಮಾರ್ ನಿರೂಪಿಸಿದರು. ವಾಣಿಜ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರನ್ನು ಸದೆಬಡಿದ ಭಾರತೀಯ ಯೋಧರ ಕಾರ್ಯವನ್ನು ಮತ್ತು ಉಗ್ರರ ದಮನಕ್ಕೆ ಕೇಂದ್ರ ಸರಕಾರ ಕೈಗೊಂಡ ಕ್ರಮವನ್ನು ಶ್ಲಾಘಿಸಿ ಗಂಗೊಳ್ಳಿಯ ನಾಗರಿಕರು ಗಂಗೊಳ್ಳಿಯಲ್ಲಿ ವಿಜಯೋತ್ಸವ ಆಚರಿಸಿದರು. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಬಿಜೆಪಿ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ವಿಜಯೋತ್ಸವ ನಡೆಸಿದ್ದಾರೆ. ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ, ಬಿಜೆಪಿ ಮುಖಂಡರಾದ ಉಮಾನಾಥ ದೇವಾಡಿಗ, ಮಂತಿ ಸುರೇಶ ಖಾರ್ವಿ, ಶ್ರೀನಿವಾಸ ಎಂ., ರಾಘವೇಂದ್ರ ಎಸ್.ಗಾಣಿಗ, ಗಂಗೊಳ್ಳಿ ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಮಡಿವಾಳ, ಭಗತ್ ಸಿಂಗ್ ಅಭಿಮಾನಿ ಬಳಗದ ಸದಸ್ಯರು ಹಾಗೂ ನಾಗರಿಕರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು. ಕುಂದಾಪುರದಲ್ಲಿ ಎಬಿವಿಪಿ ವಿಧ್ಯಾರ್ಥಿ ಸಂಘಟನೆಯ ಸದಸ್ಯರುಗಳು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ದೇಶದಲ್ಲಿ ನಡೆದ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿ ದೇಶದ ಭದ್ರತೆ ದೃಷ್ಟಿಯಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

Read More