ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುಶಿಕ್ಷಿತ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ನಮ್ಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ, ಅದನ್ನು ಉಳಿಸಿ ಬೆಳೆಸುವಲ್ಲಿ ಅವರ ಪರಿಶ್ರಮ ಸಾಕಷ್ಟಿದೆ. ಗುರು ಹಿರಿಯರನ್ನು ಗುರುತಿಸಿ, ಗೌರವಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿರಬೇಕು. ಪ್ರಾಜ್ಞರ ಮಾರ್ಗದರ್ಶನ ಗುರಿಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು. ಉಪ್ಪುಂದದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಆದರ್ಶ ಶಿಕ್ಷಕ ದಂಪತಿಗಳಾದ ವೆಂಕಪ್ಪ ಐತಾಳ್ ಮತ್ತು ಶಾರದಾರವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತಮ್ಮ ಮಕ್ಕಳನ್ನು ಬೇರೆಯವರ ಕೈಯಲ್ಲಿಟ್ಟು, ಬೇರೆಯವರ ಮಕ್ಕಳಿಗೆ ವಿದ್ಯಾದಾನ ಮಾಡುವ ಶಿಕ್ಷಕ ದಂಪತಿಗಳು ನಿಜವಾಗಲೂ ಅನುಕರಣೀಯರು. ನಿಸ್ವಾರ್ಥದಿಂದ ವಿದ್ಯಾರ್ಥಿಗಳಿಗೆ ಜ್ಞಾನವನ್ನು ಧಾರೆಯೆರೆದು ಅವರ ಉನ್ನತಿಯನ್ನು ಕಂಡು ಸಂಭ್ರಮಿಸುವ ಅಧ್ಯಾಪಕರಿಂದಲೇ ನಮ್ಮ ಶಿಕ್ಷಣ ವ್ಯವಸ್ಥೆ ಮೇಲ್‌ಸ್ತರದಲ್ಲಿದೆ. ನಮ್ಮ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಶಿಕ್ಷಕ ದಂಪತಿಗಳ ಕುರಿತಾದ ಪುಸ್ತಕವನ್ನು ಹೊರತರುವ ಉದ್ದೇಶ ಪರಿಷತ್ತಿಗೆ ಇದ್ದು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಹಾಗೂ ಬಾಲಕಿಯರ ಪ್ರತ್ಯೇಕ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದೆ. ಬಾಲಕರ ತಂಡದಲ್ಲಿ ಮೊಗವೀರ ನಾಗೇಂದ್ರ, ಕಾರ್ತಿಕ್ ಬಿ, ನಾಗರಾಜ ನಾಯಕ್ ಪ್ರತೀಕ್ ಪ್ರಮೋದ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ತಂಡದಲ್ಲಿ ಮನಿಷಾ ಪೂಜಾರಿ,ರಕ್ಷಿತಾ ಕೊತ್ವಾಲ್, ಪ್ರತಿಭಾ ದೇವಾಡಿಗ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಮತ್ತು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಚಿತ್ರದಲ್ಲಿದ್ದಾರೆ. ವರದಿ : ನರೇಂದ್ರ ಎಸ್ ಗಂಗೊಳ್ಳಿ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ನೇತೃತ್ವದಲ್ಲಿ ಮನೆ ನಿವೇಶನ ರಹಿತರಿಗೆ ಭೂಮಿ ಹಕ್ಕು ಪತ್ರ ಮಂಜೂರು ಮಾಡಲು ಆಗ್ರಹಿಸಿ ಹಾಗೂ ಸರಕಾರದಿಂದ ಗುರುತಿಸಿರುವ ಸರಕಾರಿ ಭೂಮಿಯನ್ನು ಕಾಲಮಿತಿಯೊಳಗೆ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಕುಂದಾಪುರ ಮಿನಿ ವಿಧಾನ ಸೌಧ ಎದುರು ನಿವೇಶನ ರಹಿತ ಅರ್ಜಿದಾರರು ಬೃಹತ್ ಪ್ರತಿಭಟನೆ ನಡೆಸಿದರು. ಭೂಮಿ ಹಕ್ಕು ಪತ್ರ ಮಂಜೂರು ಮಾಡಲು ಆಗ್ರಹಿಸಿ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ನಿವೇಶನ ರಹಿತರ – ಅಂತಿಮ ಪಟ್ಟಿ ಸಿದ್ಧಪಡಿಸಿ ವರ್ಷ ಕಳೆದರೂ ಈ ತನಕ ಭೂಮಿ ಹಕ್ಕು ಪತ್ರ ಮಂಜೂರು ಮಾಡುವುದಕ್ಕೆ ಸರಕಾರಿ ಜಾಗ ಗುರುತಿಸಲಾಗಿದ್ದರೂ ನಿವೇಶನ ರಹಿತರಿಗೆ ವಿತರಣೆ ಮಾಡದೇ ನಿಧಾನ ದ್ರೋಹ ಮಾಡಲಾಗಿದೆ. ಆದ್ದರಿಂದ ಕಂದಾಯ ಇಲಾಖೆ ಗುರುತಿಸಿರುವ ಸರಕಾರಿ ಭೂಮಿಯನ್ನು ಕಾಲ ಮಿತಿಯೊಳಗೆ ವಿತರಣೆ ಮಾಡಲು ಕ್ರಮ ವಹಿಸಬೇಕೆಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಮಂಡ್ಯ ಜಿಲ್ಲಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟೇಶ್ವರ ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಮಕ್ಕಳು ’ಪುಷ್ಪಗಳ ದಿನಾಚರಣೆ’ ಸಂಭ್ರಮದಿಂದ ಆಚರಿಸಿದರು. ಪುಟಾಣಿ ಮಕ್ಕಳು ವಿವಿಧ ಬಗೆಯ ಆಕರ್ಷಕ ಹೂಗಳನ್ನು ತರುವುದರ ಜೊತೆಗೆ ರಂಗು ರಂಗಿನ ಉಡುಪು ಧರಿಸಿ ಸಂಭ್ರಮಿಸಿದರು. ಈ ದಿನದ ವಿಶೇಷವಾಗಿ ಪ್ರಾಥಮಿಕ ಕಟ್ಟಡವನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು. ಶಿಕ್ಷಕಿಯರು ಹೂಗಳ ಉಪಯೋಗ ಮತ್ತು ಮಹತ್ವದ ಕುರಿತು ಸವಿಸ್ತಾರ ಮಾಹಿತಿಯನ್ನು ಮಕ್ಕಳಿಗೆ ನೀಡಿದರು. ಜೊತೆಗೆ ಪುಟಾಣಿ ಮಕ್ಕಳು ತಮ್ಮ ಪುಟಾಣಿ ಕೈಗಳಿಂದ ಆಕರ್ಷಕ ಹೂವಿನ ರಂಗೋಲಿಯನ್ನು ಬಿಡಿಸುವ ಮೂಲಕ ಪುಷ್ಪಗಳ ದಿನಾಚರಣೆಗೆ ಇನ್ನಷ್ಟು ಮೆರಗು ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕಿ ಅನುಪಮ ಎಸ್. ಶೆಟ್ಟಿ ಹಾಗೂ ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಜನತೆ ಆಲೋಚನೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದರ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಇದು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣ ಯುವಜನತೆಯನ್ನು ಪ್ರಜ್ಞಾವಂತ ನಾಗರಿಕರನ್ನಾಗಿ ರೂಪಿಸುತ್ತದೆ. ಯುವಜನತೆ ಸಂವಿಧಾನಾತ್ಮಕ ತತ್ವ, ಮಾನವೀಯ ಮೌಲ್ಯಗಳನ್ನು ನೈಜ ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ, ಸದೃಢ ರಾಷ್ಟ್ರ ನಿರ್ಮಾಣದ ಕುರಿತು ವೈಯಕ್ತಿಕ ನೆಲೆಯಲ್ಲಿ ಚಿಂತಿಸಬೇಕು ಎಂದು ಭಾರತೀಯ ವಿದೇಶಾಂಗ ಸೇವೆಯ ನಿವೃತ್ತ ಅಧಿಕಾರಿ ಬಾಲಕೃಷ್ಣ ಶೆಟ್ಟಿ ಹೇಳಿದರು. ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಬಿ. ಎಮ್. ಸುಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಪ್ರೊ. ಎ. ಪಿ. ಮಿತ್ತಂತ್ತಾಯ, ಕಾರ್ಯದರ್ಶಿ ಸೀತರಾಮ ನಕ್ಕತ್ತಾಯ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್ ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗ ಉಪನ್ಯಾಸಕಿ ವನಿತಾ ಜಿ. ಭಂಡಾರಿ ಅತಿಥಿಗಳ ಪರಿಚಯಿಸಿದರು. ವಾಣಿಜ್ಯ ಉಪನ್ಯಾಸಕ ಜಯಶೀಲ್ ಕುಮಾರ್ ನಿರೂಪಿಸಿದರು. ವಾಣಿಜ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರನ್ನು ಸದೆಬಡಿದ ಭಾರತೀಯ ಯೋಧರ ಕಾರ್ಯವನ್ನು ಮತ್ತು ಉಗ್ರರ ದಮನಕ್ಕೆ ಕೇಂದ್ರ ಸರಕಾರ ಕೈಗೊಂಡ ಕ್ರಮವನ್ನು ಶ್ಲಾಘಿಸಿ ಗಂಗೊಳ್ಳಿಯ ನಾಗರಿಕರು ಗಂಗೊಳ್ಳಿಯಲ್ಲಿ ವಿಜಯೋತ್ಸವ ಆಚರಿಸಿದರು. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಬಿಜೆಪಿ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ವಿಜಯೋತ್ಸವ ನಡೆಸಿದ್ದಾರೆ. ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ, ಬಿಜೆಪಿ ಮುಖಂಡರಾದ ಉಮಾನಾಥ ದೇವಾಡಿಗ, ಮಂತಿ ಸುರೇಶ ಖಾರ್ವಿ, ಶ್ರೀನಿವಾಸ ಎಂ., ರಾಘವೇಂದ್ರ ಎಸ್.ಗಾಣಿಗ, ಗಂಗೊಳ್ಳಿ ಗ್ರಾಪಂ ಸದಸ್ಯ ಲಕ್ಷ್ಮೀಕಾಂತ ಮಡಿವಾಳ, ಭಗತ್ ಸಿಂಗ್ ಅಭಿಮಾನಿ ಬಳಗದ ಸದಸ್ಯರು ಹಾಗೂ ನಾಗರಿಕರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು. ಕುಂದಾಪುರದಲ್ಲಿ ಎಬಿವಿಪಿ ವಿಧ್ಯಾರ್ಥಿ ಸಂಘಟನೆಯ ಸದಸ್ಯರುಗಳು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ದೇಶದಲ್ಲಿ ನಡೆದ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿ ದೇಶದ ಭದ್ರತೆ ದೃಷ್ಟಿಯಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಸುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ನಮ್ಮಲ್ಲಿನ ಲೋಪ ದೋಷಗಳನ್ನು ಸರಿಮಾಡಿಕೊಂಡು ಬಲಿಷ್ಠ ಸಂಘಟನೆಯಾಗುವತ್ತ ನಾವು ಗಮನ ಹರಿಸಬೇಕು. ಆಗ ಮಾತ್ರ ಭಗತ್ ರಂತವರ ಆದರ್ಶಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾಧ್ಯ ಎಂದು ಗಂಗೊಳ್ಳಿಯ ಉದ್ಯಮಿ ವಿಠಲ್ ಶೆಣೈ ಹೇಳಿದರು. ಅವರು ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿನ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ಭಗತ್‌ಸಿಂಗ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ರ ಜನ್ಮದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ‍್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದರು. ಉಮನಾಥ ದೇವಾಡಿಗ ಭಗತ್‌ಸಿಂಗ್‌ರ ಆದರ್ಶಗಳ ಕುರಿತು ತಿಳುವಳಿಕೆ ನೀಡಿದರು. ಯಶವಂತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಾರ‍್ಯಕ್ರಮದಲ್ಲಿ ಭಗತ್‌ಸಿಂಗ್‌ರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಭಗತ್‌ಸಿಂಗ್ ಅಭಿಮಾನಿ ಬಳಗದ ಅಧ್ಯಕ್ಷ ಸುಬ್ರಮಣ್ಯ ಸ್ವಾಗತಿಸಿದರು. ಅರುಣ, ಕಿರಣ್, ರಂಜಿತ್, ರಾಘವೇಂದ್ರ, ಮೋಹನ ಮೊದಲಾದವರು ಉಪಸ್ಥಿತರಿದ್ದರು.ಅನಿಲ್ ವಂದಿಸಿದರು. ವರದಿ : ನರೇಂದ್ರ ಎಸ್ ಗಂಗೊಳ್ಳಿ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಹಡಿಯಿಂದ ಬಿದ್ದು ತನ್ನ ಕಾಲಿನ ಬಲ ಕಳೆದುಕೊಂಡು ಮೂರು ವರ್ಷದಿಂದ ಹಾಸಿಗೆಯಲ್ಲಿಯೇ ಮಲಗಿರುವ ಯುವಕನಿಗೆ ನಮ್ಮ ಕುಂದಾಪುರ ವಾಟ್ಸಪ್ ಗ್ರೂಪಿನ ಸದಸ್ಯರು ಆರ್ಥಿಕ ಸಹಾಯ ಮಾಡಿದ್ದಾರೆ. ಬಡ ಕುಟುಂಬದ ಗುಡ್ಡಮ್ಮಾಡಿಯ ಸುಬ್ರಹ್ಮಣ್ಯ (22) ಮೂರು ವರ್ಷದಿಂದ ಸ್ಪೈನಲ್ ಕೋರ್ಡ್ ಸಮಸ್ಯೆಯಿಂದ ಬಳಲುತ್ತಿದ್ದು ಕಾಲಿನ ಬಲ ಕಳೆದುಕೊಂಡು ಹಾಸಿಗೆಯಲ್ಲಿಯೇ ಮಲಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರೂ ಈವರೆಗೆ ಗುಣಮುಖರಾಗಿಲ್ಲ. ಚಿಕಿತ್ಸಾ ವೆಚ್ಚ ಭರಿಸಲು ಸಂಕಷ್ಟದಲ್ಲಿರುವ ಬಗ್ಗೆ ನಮ್ಮ ಕುಂದಾಪುರ ವಾಟ್ಸಪ್ ಗ್ರೂಪಿನಲ್ಲಿ ಸದಸ್ಯರು ಗಮನ ಸೆಳೆದಾಗ ನಾಲ್ಕೈದು ದಿನದಲ್ಲಿ ಗ್ರೂಪಿನ ಒಂದಿಷ್ಟು ಸದಸ್ಯರು ಒಟ್ಟು 19,000ರೂ ಹಣ ಸಂಗ್ರಹಿಸಿದ್ದಾರೆ. ಯುವಕನ ಮನೆಗೆ ತೆರಳಿದ ಗ್ರೂಪಿನ ಅಡ್ಮಿನ್ ಸಂತೋಷ್ ಖಾರ್ವಿ, ಸದಸ್ಯರುಗಳಾದ ಹುಸೈನ್ ಹೈಕಾಡಿ, ಸುಭಾಷ್ ಗುಡ್ಡಮ್ಮಾಡಿ, ಪ್ರವೀಣ್, ವಿಜಯ ಮೊದಲಾದವರು ಹಣವನ್ನು ಯುವಕನ ತಾಯಿಗೆ ಹಸ್ತಾಂತರಿಸಿದರು. ಈ ಹಿಂದೆಯೂ ನಮ್ಮ ಕುಂದಾಪುರ ಗ್ರೂಪಿನ ಸದಸ್ಯರು ಶಿರೂರಿನ ರತ್ನಾ ಕೊಠಾರಿ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಿದ್ದರು. ಸಾಮಾಜಿಕ ತಾಣಗಳಲ್ಲಿ ಸಕ್ರಿಯವಾಗಿರುವವರು ಮೊಸಳೆ ಕಣ್ಣೀರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಟೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೃಷಿ ಕೂಲಿಕಾರರ ಸಂಘ ಹಾಗೂ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ ಕೊಟೇಶ್ವರ ಗ್ರಾಮದಲ್ಲಿ – ಸ್ವಂತ ಮನೆ, ಭೂಮಿ ಇಲ್ಲದ, ಬಾಡಿಗೆ ಮನೆಯಲ್ಲಿ ವಾಸವಾಗಿರುವ, ಒಂದೇ ಮನೆಯ ಸೂರಿನಡಿ ೨-೩ ಕುಟುಂಬ ಅನಿವಾರ‍್ಯ ಪರಿಸ್ಥಿತಿಯಲ್ಲಿ ವಾಸವಾಗಿರುವ ಬಡನಿವೇಶನ ರಹಿತರು ನಿವೇಶನ ಸ್ಥಳ ಸರಕಾರಿ ಭೂಮಿ ಗುರುತಿಸಿ – ಭೂಮಿ ಹಕ್ಕು ಪತ್ರ ಮಂಜೂರು ಮಾಡಲು ಒತ್ತಾಯಿಸಿ, ತಹಶೀಲ್ದಾರ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಜಿಲ್ಲಾಧಿಕಾರಿ ಕಛೇರಿ ಎದುರು ಹಾಗೂ ಬೆಂಗಳೂರು ವಿಧಾನ ಸೌಧ ಚಲೋ ಮುಂತಾದ ವಿವಿದ ಹಂತದ ಸಮರಶೀಲ ಹೋರಾಟ ಸಂಘಟಿಸಿ ಹೋರಾಟ ಮಾಡಲಾಗಿದ್ದರೂ-ನಿವೇಶನ ರಹಿತರ ಅಂತಿಮ ಪಟ್ಟಿ ಸಿದ್ಧಪಡಿಸಿ ವರ್ಷ ೨ ಕಳೆದರೂ ಈ ತನಕ ಸರಕಾರಿ ಜಮೀನು ಗುರುತಿಸಿ ಹಕ್ಕು ಪತ್ರ ಕೊಡದ ಬಗ್ಗೆ ಕೃಷಿ ಕೂಲಿಕಾರರ ಸಂಘದ ತಾಲೂಕು ಉಪಾಧ್ಯಕ್ಷ ಕರಿಯ ದೇವಾಡಿಗರವರು ಸರಕಾರದ ವಿಳಂಭ ನೀತಿಯನ್ನು ಖಂಡಿಸಿದರು. ಈ ಹಿನ್ನಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಲೇಖನ ನೀರು ನಿಮ್ಮ ಹೆಚ್ಚಿನೆಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಬಲ್ಲದು. ಮುಂಜಾನೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಹಲವಾರು ರೋಗಗಳನ್ನು ಗುಣಪಡಿಸಬಹುದು ಎಂದು ತಿಳಿದಿದೆಯಾ? ಹೆಚ್ಚಿನ ರೋಗಗಳು ಹೊಟ್ಟೆಯಿಂದಲೇ ಆರಂಭವಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಆಗ ನಿಮ್ಮ ಹೊಟ್ಟೆಯನ್ನು ಆರೋಗ್ಯವಾಗಿರಿಸಲು ಇದು ನೆರವಾಗಲಿದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಯೋಚನೆಯು ಮೊದಲು ಆರಂಭವಾಗಿದ್ದು ಜಪಾನ್ ನಲ್ಲಿ. ಜಪಾನಿನಲ್ಲಿ ಜನರು ಹಲ್ಲುಜ್ಜುವ ಮೊದಲು ನಾಲ್ಕು ಲೋಟ ನೀರು ಕುಡಿಯುತ್ತಾರೆ. ಉಪ್ಪು ಬೆರೆಸಿದ ಬೆಚ್ಚನೆಯ ನೀರು, ಆಯಸ್ಸು ನೂರು! ಇದರ ಬಳಿಕ ಅವರು ಅರ್ಧ ಗಂಟೆ ಏನೂ ತಿನ್ನುವುದಿಲ್ಲ ಅಥವಾ ಕುಡಿಯುವುದಿಲ್ಲ. ಈ ನೀರಿನ ಥೆರಪಿ ನಿಮ್ಮನ್ನು ಆರೋಗ್ಯಕರ ಹಾಗೂ ಚಟುವಟಿಕೆಯಿಂದಿಡುತ್ತದೆ. ಜಪಾನ್ ನ ಜನರು ವಿಶ್ವದಲ್ಲೇ ಅತ್ಯಂತ ಹೆಚ್ಚು ಚಟುವಟಿಕೆ ಹಾಗೂ ದಕ್ಷತೆಯನ್ನು ಹೊಂದಿರುವವರೆಂಬ ಹೆಗ್ಗಳಿಕೆಯಿದೆ. ಬೆಳ್ಳಂ ಬೆಳಿಗ್ಗೆ ಎದ್ದು ಎಳೆ ನೀರು ಕುಡಿಯಿರಿ, ಆರೋಗ್ಯ ಪಡೆಯಿರಿ ಬೆಳಗ್ಗೆ ಎದ್ದು ನೀರು ಕುಡಿಯುವುದರಿಂದ ಹಲವಾರು ರೀತಿಯ ಉಪಯೋಗಗಳಿವೆ.…
