Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ಯಾಂಕ್‌ನಲ್ಲಿ ವೃತ್ತಿಯನ್ನು ನಿರ್ವಹಿಸುತ್ತಿದ್ದರೂ ಕನ್ನಡ ಭಾಷೆ  ಗೌರವವನ್ನು ತಂದುಕೊಟ್ಟಿದೆ. ಕನ್ನಡ ಭಾಷೆಗೆ ಋಣಿಯಾಗಿರುತ್ತೇನೆ ಎಂದು ಕವಿ ಹೆಚ್.ಡುಂಡಿರಾಜ್ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ವಿಭಾಗದ ವತಿಯಿಂದ ‘ಸಾಹಿತ್ಯ ಮತ್ತು ಪತ್ರಿಕೆ’ ಎನ್ನುವ ವಿಚಾರದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಕನ್ನಡ ಭಾಷೆ ಎನ್ನುವುದು ನನಗೆ ಗೌರವ ಮತ್ತು ಮನ್ನಣೆಯನ್ನು ತಂದುಕೊಟ್ಟಿದೆ. ಕುಂದಾಪುರದ ಹಟ್ಟಿಕುದ್ರಿನ ನಾನು ಕುಂದಗನ್ನಡ ಭಾಷೆಯನ್ನು ಆಡುವುದನ್ನು ಬಿಟ್ಟಿಲ್ಲ. ಕನ್ನಡ ಭಾಷೆ ನನ್ನ ಜೀವಾಳ, ಉಸಿರಿರುವ ತನಕ ಕನ್ನಡ ಸೇವೆಯನ್ನು ಮಾಡುತ್ತೇನೆಂದು ಹೇಳುತ್ತಾ ವಿದ್ಯಾರ್ಥಿಗಳಿಗೆ ತನ್ನ ಹನಿಗವನವನ್ನು ಹೇಳಿ ನಗೆಗಡಲಲ್ಲಿ ತೇಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಪ್ರತಿಯೊಬ್ಬರಿಗೂ ತಮ್ಮ ಶೈಕ್ಷಣಿಕ ಅವಧಿಯಲ್ಲಿ ಉಪನ್ಯಾಸ ಕೊಟ್ಟ ಮಹನೀಯರ ನೆನಪಿರುತ್ತದೆ. ಹಾಗೆ ನೀವು ಅದೃಷ್ಟಶಾಲಿಗಳು ಒಬ್ಬ ಶ್ರೇಷ್ಠ ಕವಿಯ ಮಾತುಗಳನ್ನು ಆರಿಸಿದ್ದೀರಿ ನೀವು ಕೂಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ “ಐದನೇ ಪಾಲಕರ ಸಭೆ ಹಾಗೂ ಅಣಬೆ ಕೃಷಿ ತರಬೇತಿ ಕಾರ್ಯಗಾರ”ವು ಗುರುವಾರದಂದು ನಡೆಯಿತು. ಪಾಲಕರ ಸಭೆಯಲ್ಲಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಬಗ್ಗೆ ಪಾಲಕರೊಂದಿಗೆ ಚರ್ಚಿಸಲಾಯಿತು. ನಂತರ ನಡೆದ ಕಾರ್ಯಗಾರದಲ್ಲಿ ಸಾಗರದ ಉದ್ದಿಮೆದಾರರಾದ ಮನಸ್ವಿ ಹೆಗಡೆಯವರು ಶಾಲಾ ವಿದ್ಯಾರ್ಥಿಗಳ ಪಾಲಕರಿಗೆ ಹಾಗೂ ಸಿಬ್ಬಂದಿಗಳಿಗೆ ಅಣಬೆ ಕೃಷಿ ಮಾಡುವ ವಿಧಾನದ ಬಗ್ಗೆ ಸವಿವರವಾಗಿ ತಿಳಿಸಿ, ಅಣಬೆ ಕೃಷಿಯ ಪ್ರಾತ್ಯಕ್ಷಿಕೆಯನ್ನು ಮಾಡಿದರು. ನಂತರ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಫಲಾನುಭವಿಗಳಿಂದ ಕೂಡ ಅಣಬೆ ಕೃಷಿಯನ್ನು ಪ್ರಾಯೋಗಿಕವಾಗಿ ಮಾಡಿಸಿದರು. ಈ ಕಾರ್ಯಕ್ರಮದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್. ಟಿ, ಟ್ರಸ್ಟಿ ಮನೋರಮ.ಕೆ, ಎಸ್. ಡಿ ಎಮ್.ಸಿ ಅಧ್ಯಕ್ಷರಾದ ವಿನಯ್ ಕುಮಾರ್, ಶಾಲಾ ಸಿಬ್ಬಂದಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ರೇಮಾ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆಯ ಆತಿಥ್ಯದಲ್ಲಿ ವಲಯ 2ರ ವಲಯ ಮಟ್ಟದ ಒಳಾಂಗಣ ಕ್ರೀಡಾಕೂಟ “ಸ್ನೇಹ ರಥ – 2026” ಕಾರ್ಯಕ್ರಮವು ಶುಕ್ರವಾರ ಕೋಟೇಶ್ವರದ ಅಂಕದಕಟ್ಟೆಯ ಸಹನಾ ಅಕ್ವಾಟಿಕ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಗ್ರಾಮೀಣ ಕ್ರೀಡಾ ವಿಭಾಗದ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ರೋಟರಿ ಸಂಸ್ಥೆಯು ಸದಸ್ಯರ ನಡುವೆ ಸ್ನೇಹ, ಸೌಹಾರ್ದತೆ ಮತ್ತು ಪರಸ್ಪರ ಬಾಂಧವ್ಯವನ್ನು ವೃದ್ಧಿಸುವ ಉದ್ದೇಶದಿಂದ ಕ್ರೀಡಾಕೂಟಗಳನ್ನು ಆಯೋಜಿಸುತ್ತಿರುವುದನ್ನು ಪ್ರಶಂಸಿಸಿದರು. ಕ್ರೀಡಾಪಟುವೊಬ್ಬನು ವಿಜಯವನ್ನು ಸಾಧಿಸುವ ಮೊದಲು ಸೋಲನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ಸೋಲು ಮತ್ತು ಗೆಲುವು ಎರಡೂ ಕ್ರೀಡೆಯ ಅವಿಭಾಜ್ಯ ಅಂಗಗಳಾಗಿವೆ ಎಂದು ತಿಳಿಸಿದರು. ರೋಟರಿ ಕ್ಲಬ್ ತೆಕ್ಕಟ್ಟೆಯ ಅಧ್ಯಕ್ಷರಾದ ಟಿ. ರಾಜೀವ್ ಶೆಟ್ಟಿ ಅವರು ಗಣ್ಯರನ್ನು ಹಾಗೂ ಭಾಗವಹಿಸಿದ ಎಲ್ಲ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ತಮ್ಮ ಸ್ವಾಗತ ಭಾಷಣದಲ್ಲಿ ಸ್ಪರ್ಧಿಗಳು ತೀರ್ಪುಗಾರರ ನಿರ್ಧಾರವನ್ನು ಗೌರವಿಸಬೇಕು ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಣೇಶ ಚತುರ್ಥಿಯ ದಿನ ಕುಂಭಾಶಿ ಶ್ರೀವಿನಾಯಕ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ, ತಮಿಳುನಾಡು ಪೊಲೀಸರಿಂದ ಬಂಧಿತರಾಗಿದ್ದ ಆರೋಪಿಗಳನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು, ಅವರಿಂದ ಸುಲಿಗೆ ಮಾಡಿದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಗಣೇಶ ಚತುರ್ಥಿಯ ದಿನ ಸೆ.14ರಂದು ಕುಂಭಾಶಿ ಶ್ರೀವಿನಾಯಕ ದೇವಸ್ಥಾನದ ಒಳಗೆ ಜನ ಜಂಗುಳಿಯ ಮಧ್ಯೆ ಪ್ರದಕ್ಷಿಣೆ ಬರುತ್ತಿದ್ದ ಬೈಂದೂರು ತಾಲೂಕು ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಎಂಬವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳ್ಳರು ಸುಲಿಗೆ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾ ವೇಳೆ ಪ್ರಕರಣದಲ್ಲಿ ಚಿನ್ನದ ಸರವನ್ನು ಸುಲಿಗೆ ಮಾಡಿದ ಆರೋಪಿಗಳಾದ ತಮಿಳುನಾಡು ಮೂಲದ ವಲ್ಲಿಯಮ್ಮ ದೇವಿ ತಿಲೋತ್ತಮ, ಪೊನ್ನಿ ಎಂಬವರನ್ನು ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿರುವ ಮಾಹಿತಿ ದೊರೆತಿದೆ. ಬಳಿಕ ಪೊಲೀಸ್‌ ಕುಂದಾಪುರ ಉಪ ವಿಭಾಗದ ಉಪಾಧೀಕ್ಷಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 2026-27ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಬುಧವಾರದಂದು ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮಕ್ಕೆ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕ್ರೀಡಾ ಚಟುವಟಿಕೆಗಳು ಮಕ್ಕಳಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯವನ್ನು ತುಂಬಿದವು. ಪುಟಾಣಿ ಕ್ರೀಡಾಪಟುಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ, ಸಾಮರ್ಥ್ಯ ಹಾಗೂ ಕ್ರೀಡಾ ಮನೋಭಾವವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿಯವರಾದ ವೀಣಾರಶ್ಮಿ ಎಂ., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯವರಾದ ಹೇಮಾಮಾಲಿನಿ ಎಸ್. ಉಪಸ್ಥಿತರಿದ್ದು ಮಕ್ಕಳನ್ನು ಪ್ರೋತ್ಸಾಹಿಸಿದರು. ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕರಾದ ಕೃಷ್ಣ ಹುಲ್ಲಾಲ್ ಹಾಗೂ ಕುಮಾರಿ ಲತಾ ಗೌಡ ಅವರು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ, ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಪ್ರಾಥಮಿಕ ಶಾಲಾ ವಿಭಾಗದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮೈಸೂರಿನಲ್ಲಿ ನಡೆದ ಅಂತರ್ ಜಿಲ್ಲಾ ರೋಟರಿ ಕ್ರಿಕೆಟ್ ಕಪ್  ಪೌಲ್ ಹ್ಯಾರಿಸ್ ಟ್ರೋಫಿ ಪಂದ್ಯಾವಳಿಯಲ್ಲಿ ರೋಟರಿ ಕ್ಲಬ್ ಕೋಟ-ಸಾಲಿಗ್ರಾಮ ತಂಡ ಅಜೇಯವಾಗಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್‌ ಪಡೆಯಿತು. ರಾಜ್ಯದ ವಿವಿಧ ಭಾಗಗಳ ಪ್ರತಿಷ್ಠಿತ ರೋಟರಿ ಕ್ಲಬ್‌ಗಳ ತಂಡಗಳು ಭಾಗವಹಿಸಿದ್ದ ಈ ಪಂದ್ಯಾವಳಿಯಲ್ಲಿ ಕೋಟ-ಸಾಲಿಗ್ರಾಮ ತಂಡ ಆರಂಭದಿಂದಲೇ ಉತ್ತಮ ಸಂಘಟಿತ ಆಟದ ಮೂಲಕ ಗಮನ ಸೆಳೆಯಿತು. ಎದುರಾಳಿ ತಂಡಗಳ ಸವಾಲನ್ನು ಸಮರ್ಥವಾಗಿ ಎದುರಿಸಿದ ಆಟಗಾರರು ಪ್ರತಿಯೊಂದು ಪಂದ್ಯದಲ್ಲೂ ಗೆಲುವಿನ ಓಟ ಮುಂದುವರಿಸಿ ಎಲ್ಲ ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರು. ಯಾವುದೇ ಪಂದ್ಯದಲ್ಲಿ ಸೋಲನುಭವಿಸದೆ  ಸತತ ಗೆಲುವು ದಾಖಲಿಸಿ ಪೌಲ್ ಹ್ಯಾರಿಸ್ ಟ್ರೋಫಿಯನ್ನು ಹಾಗೂ ಜೊತೆಗೆ ರೂಪಾಯಿ 50,000 ನಗದು ಬಹುಮಾನ ಪಡೆದುಕೊಂಡರು. ಈ ಸಾಧನೆಯ ಮೂಲಕ ಕ್ಲಬ್ ರಾಜ್ಯಮಟ್ಟದಲ್ಲಿ ತನ್ನ ಕ್ರೀಡಾ ಸಾಮರ್ಥ್ಯಕ್ಕೆ ಸಾಕ್ಷಿಯಾಯಿತು. ತಂಡದ ಆಟಗಾರರಾದ ಯೋಗೀಶ್ ಕುಮಾರ್, ಕರುಣಾಕರ ಕುಂದರ್, ವೆಂಕಟೇಶ್, ಪ್ರಸಾದ್, ಪ್ರಸಾದ್ ಮೆಂಡನ್, ಯೋಗೀಶ್ ಕಾಂಚನ್, ರಾಘವೇಂದ್ರ, ವಿಘ್ನೇಶ್, ಚವನ್ ಭಂಡಾರಿ, ಆದರ್ಶ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕೆನರಾ ರೋಬೆಕೊ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಆಯ್ದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕೆನರಾ ರೋಬೆಕೊ ಸಂಸ್ಥೆಯ ಹೆಡ್ ಇಂಟರ್ನಲ್ ಆಡಿಟ್ ಗುರುಚರಣ್ ಹೊಸ್ಕೋಟೆ ಅವರ ಜೊತೆಗೂಡಿ ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು, ಕೆನರಾ ರೋಬೆಕೊ ಸಂಸ್ಥೆಯ ಸೈಕಲ್ ಕೊಡುಗೆ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೊಸ ಬೆಸುಗೆ ಎಂದು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಕ್ಷೇತ್ರದ ಇನ್ನಷ್ಟು ವಿದ್ಯಾರ್ಥಿಗಳಿಗೆ ಸೈಕಲ್ ನೀಡುವ ನಿಟ್ಟಿನಲ್ಲಿ ಸಂಸ್ಥೆಯಯೊಂದಿಗೆ ಸಮೃದ್ಧ ಬೈಂದೂರು ತಂಡ ಸದಾ ಜೊತೆಯಾಗಿರುತ್ತೇವೆ ಎಂದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗುರುಚರಣ್ ಹೊಸ್ಕೋಟೆ ಅವರು ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಈ ಸೈಕಲ್‌ಗಳು ತಲುಪುತ್ತಿರುವುದು ಸಂತಸ ತಂದಿದೆ. ಶಾಸಕರ ಮಾರ್ಗದರ್ಶನದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಯೋಜಿಸಿದ ಯೋಜನೆ 300 ಟ್ರೀಸ್ ಇನ್ನಷ್ಟು ಯಶಸ್ವಿಯಾಗಲೆಂದು ಆಶಿಸಿದರು. ಕಾರ್ಯಕ್ರಮದ ನಂತರ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಗೇರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ಹಾಗೂ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ಇವರ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ತಂಡವನ್ನು 2-0 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಸರಕಾರಿ ಪದವಿಪೂರ್ವ ಕಾಲೇಜು ನಾಲ್ಯಪದವು ಮಂಗಳೂರು ತಂಡವನ್ನು 2-0 ಅಂಕಗಳಿಂದ ಸೋಲಿಸಿ 21ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಎಂ.ಕಾಂ. ವಿದ್ಯಾರ್ಥಿನಿ ಅಮೃತಾ ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ. ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಆಶೋತ್ತರಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಮಣ್ಯ ಎ. ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ಚೆನ್ನಾಗಿ ಅರಿತುಕೊಂಡು ಜೀವನದಲ್ಲಿ ಉತ್ತಮ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಈ ಕಾರ್ಯಕ್ರಮದ ಸಂಘಟಕರಾದ ಡಾ. ಭಾಗೀರಥಿ ನಾಯ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರದ ಪ್ರಾಧ್ಯಾಪಕರಾದ ಡಾ. ಉದಯ ಶೆಟ್ಟಿ ಕೆ. ಇವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು ಮತ್ತು ಎಂ.ಕಾಂ.ನ ಸಂಯೋಜಕರಾದ ಕಾರ್ತಿಕ್ ಪೈ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪರಮ ಪವಿತ್ರವಾದ ತುಳಸಿಯನ್ನು ಪೂಜಿಸುವ ಸಂಸ್ಕೃತಿ ಭಾರತದ್ದು. ಅದರಂತೆ ಉತ್ಥಾನ ದ್ವಾದಶಿಯ ಪರ್ವ ಸಮಯದಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತುಳಸಿಯ ಕಟ್ಟೆಯಲ್ಲಿತುಳಸಿ ಮತ್ತು ಕಾರ್ತಿಕ ದಾಮೋದರರ ಪೂಜೆಯನ್ನು ಸಡಗರದಿಂದ ಆಚರಿಸಲಾಯಿತು. ಈ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳು ದೀಪಗಳನ್ನು ಬೆಳಗಿಸಿ, ತುಳಸಿ ಮತ್ತು ಕಾರ್ತಿಕ ದಾಮೋದರ – ನಾಮಕನಾದ ಶ್ರೀ ಹರಿಯನ್ನು ಭಜನೆಗಳ ಮೂಲಕ ಆರಾಧಿಸಿದರು. ಶಾಲಾ ಶಿಕ್ಷಕರಾದ ರಾಮಕೃಷ್ಣ ಉಡುಪ ತುಳಸಿ ಪೂಜೆಯನ್ನು ನೆರವೇರಿಸಿ, ತುಳಸಿಯನ್ನು ಪ್ರಾರ್ಥಿಸುತ್ತಾ ಶರೀರವು ದೇವರು ನಮಗೆ ಕೊಟ್ಟ ದೊಡ್ಡ ವರ. ಅದರ ಸಂರಕ್ಷಣೆಗೆ ಪ್ರಕೃತಿಯಲ್ಲಿ ಕೆಲವಷ್ಟು ಔಷಧೀಯ ಗಿಡಗಳನ್ನು ಸೃಷ್ಟಿಸಿ, ಅವುಗಳ ಪಾಲನೆ ಪೋಷಣೆ ಮತ್ತು ಆದರಭಾವಗಳನ್ನು ತೋರಿಸುವ ಸಂಸ್ಕೃತಿಯನ್ನು ನಮಗೆ ತಿಳಿಸಿಕೊಟ್ಟಿದ್ದಾರೆ. ಅಂತಹ ಸಸ್ಯಗಳಲ್ಲಿ ಅಗ್ರಸ್ಥಾನವನ್ನು ಪಡೆವ ಗಿಡ ತುಳಸಿ. ವೃಂದಾಸ್ವರೂಪಳಾದ ತುಳಸಿದೇವಿಯು ನಮಗೆ ಉತ್ತಮ ಆರೋಗ್ಯವನ್ನು ನೀಡಲಿ ಎಂದರು. ಅನಂತರ ಸಿಡಿಮದ್ದುಗಳ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳ ಮನಸ್ಸನ್ನು ರಂಜಿಸಲಾಯಿತು. ಈ ಸಮಯದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ…

Read More