Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ವಿಶ್ವದಲ್ಲಿ ಶಾಂತಿ ನೆಲೆಸಬೇಕಾದರೆ ಭಾರತದಲ್ಲಿ ಶಾಂತಿ ನೆಲೆಸಬೇಕು. ಭಾರತದಲ್ಲಿ ಶಾಂತಿ ನೆಲೆಸಬೇಕಾದರೆ ನಮ್ಮ ದೇಶದಲ್ಲಿ ಹಿಂದು ಧರ್ಮ ಗಟ್ಟಿಯಾಗಿ ನೆಲೆ ನಿಲ್ಲಬೇಕಿದೆ. ಹೀಗಾಗಿ ವಿಶ್ವಗುರು ಎನಿಸಿಕೊಂಡಿರುವ ಭಾರತದಲ್ಲಿ ಹಿಂದು ಧರ್ಮವನ್ನು ಅತ್ಯಂತ ಗಟ್ಟಿಯಾಗಿ ನೆಲೆಗೊಳಿಸಬೇಕಾಗಿದೆ. ಯುವ ಜನರಲ್ಲಿ ದೇಶಭಕ್ತಿ, ದೇಶಪ್ರೇಮ ಬೆಳೆಸುವ ಮೂಲಕ ಭಾರತವು ಹಿಂದು ರಾಷ್ಟ್ರ ಎಂಬುದನ್ನು ಜಗತ್ತಿಗೆ ಸಾರುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಬಾಲ ವಾಗ್ಮಿ ಅಕ್ಷಯ್ ಕುಮಾರ್ ಶಿರಸಿ ಹೇಳಿದರು. ಅವರು ಗಂಗೊಳ್ಳಿ ಮ್ಯಾಂಗನೀಸ್ ರೋಡ್‌ನ ಭಗತ್ ಸಿಂಗ್ ಅಭಿಮಾನಿ ಬಳಗದ ಆಶ್ರಯದಲ್ಲಿ ಗಂಗೊಳ್ಳಿಯ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಾತಂತ್ರ್ಯವೀರ ಸುಖದೇವ ಅವರ 109ನೇ ಜನ್ಮ ದಿನೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಭಾರತ್ ಮಾತಾ ಪೂಜನಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಇತ್ತೀಚಿನ ದಿನಗಳಲ್ಲಿ ಐಶರಾಮಿ ಜೀವನವನ್ನು ಕೇಂದ್ರೀಕರಿಸಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಶಿಕ್ಷಣದಲ್ಲಿ ನೈತಿಕತೆಯನ್ನು ಹಾಗೂ ಸಾಮಾಜಿಕತೆಯನ್ನು ಬೆಳೆಸುವ ಶಿಕ್ಷಣದ ಅವಶ್ಯಕತೆ ಇದೆ. ಕೃಷಿಯಲ್ಲಿ ಆಧುನಿಕತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೆಂಗಳೂರು: ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಕೊಡಮಾಡುವ ‘೪೧ನೇ ವಾರ್ಷಿಕ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಸಮಾರಂಭ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕುಂದಾಪುರದ ಮೂಲದ ಆರು ಮಂದಿ ಸಾಧಕರಿಗೆ ಸೇರಿದಂತೆ 63 ಗಣ್ಯರಿಗೆ ನ್ಯಾ. ಎನ್. ಕುಮಾರ್, ದೂರದರ್ಶನ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ. ಮಹೇಶ್ ಜೋಶಿ, ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್ ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿ ದಿನೇಶ್ ವೈದ್ಯ ಅಂಪಾರು ಅವರಿಗೆ ಸಮಾಜ ಸೇವೆಗಾಗಿ, ಉಡುಪಿಯಲ್ಲಿ ನೆಲೆಸಿರುವ ರೋಟರಿ ಜಿಲ್ಲೆ 3180 ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಮದ್ದೋಡಿ ಅವರಿಗೆ ಸಮಾಜ ಸೇವೆ ಹಾಗೂ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ, ಉದ್ಯಮಿ ಎ. ಎಸ್. ರಮೇಶ್ ಆಚಾರ್ಯ ಅವರಿಗೆ ಸಮಾಜ ಸೇವೆಗಾಗಿ, ಕತಾರ್‌ನಲ್ಲಿ ನೆಲೆಸಿರುವ ಕತಾರ್ ಕರ್ನಾಟಕ ಸಂಘದ ನಿಕಟಪೂರ್ವಾಧ್ಯಕ್ಷ ದೀಪಕ್ ಶೆಟ್ಟಿ ಅವರಿಗೆ ಸಮಾಜ ಸೇವೆಗಾಗಿ, ಕುಂದಾಪುರದ ವೈದ್ಯ ಡಾ. ಸತೀಶ್ ಪೂಜಾರಿ ಅವರಿಗೆ ಸಂಘಟನೆ ಹಾಗೂ ವೈದ್ಯಕೀಯ ಕ್ಷೇತ್ರದ ಸೇವೆಗಾಗಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಜಿಎಸ್‌ಬಿ ಸಮಾಜ ಭಾಂದವರ ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಅಲಂಕೃತ ದೇವರು ಚಿತ್ರ : ಸುಮಾ ಡಿಜಿಟಲ್ ಕುಂದಾಪುರ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ದೇವಾಡಿಗರ ಸಮಾಜ ಸೇವಾ ಸಂಘ (ರಿ) ತ್ರಾಸಿ, ಹೊಸಾಡು, ಗುಜ್ವಾಡಿ ನೂತನ ಸಂಘದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ನಡೆಯಿತು. ಮುಂಬೈ ಉದ್ಯಮಿ ಸುರೇಶ ಡಿ. ಪಡುಕೋಣೆ ಕಾರ್ಯಕ್ರಮ ಉದ್ಘಾಟಸಿ ಶುಭ ಹಾರೈಸಿದರು ಸಮಾರಂಭದ ಅದ್ಯಕ್ಷತೆಯನ್ನು ರಾಮ ದೇವಾಡಿಗ ತ್ರಾಸಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅರಣ್ಯ ಇಲಾಖಾ ಮಹಾಮಂಡಳಿಯ ಅದ್ಯಕ್ಷ ರಘರಾಮ ದೇವಾಡಿಗ ಆಲೂರು, ಮುಂಬೈ ದೇವಾಡಿಗ ಸಂಘದ ಅದ್ಯಕ್ಷರಾದ ಎಚ್. ಮೋಹನ್‌ದಾಸ್, ಶ್ರೀ ಎಕನಾಥೇಶ್ವರಿ ದೇವಸ್ಥಾನದ ಟ್ರಸ್ಟಿ ಜನಾರ್ಧನ ದೇವಾಡಿಗ ಮುಂಬೈ ದೇವಾಡಿಗರ ಸಂಘದ ಜತೆ ಕಾರ್ಯದರ್ಶಿ ಗಣೇಶ ಶೇರಿಗಾರ್, ದುಬ್ಯೆ ಉದ್ಯಮಿ ಶೀನ ದೇವಾಡಿಗ ಸೌಪರ್ಣಿಕಾ ಮಹಿಳಾ ಸೇವಾ ಸಹಕಾರಿ ಸೊಸೈಟಿ ತ್ರಾಸಿಯ ಅದ್ಯಕ್ಷರಾದ ಶಾರದಾ ಎಂ.ಡಿ ಬಿಜೂರು, ಕುಂದಾಪುರ ಸಂಘದ ಅದ್ಯಕ್ಷರಾದ ನಾಗರಾಜ ರಾಯಪ್ಪನಮಠ, ಕೋಟೇಶ್ವರದ ಅದ್ಯಕ್ಷರಾದ ಚಂದ್ರ ದೇವಾಡಿಗ, ಉಪ್ಪಿನಕುದ್ರು ಸಂಘದ ಅದ್ಯಕ್ಷರಾದ ಬಸವ ದೇವಾಡಿಗ, ಕಟ್ಟಿನ ಮಕ್ಕಿ ಸಂಘದ ಅದ್ಯಕ್ಷರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸರಕಾರಿ ಶಾಲೆಯ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಕನ್ನಡ ಮಾಧ್ಯಮದಲ್ಲಿವೂ ಗುಣಮಟ್ಟದ ಶೈಕ್ಷಣಿಕ ವಾತಾವರಣ ನಿರ್ಮಾಣವಾಗುವಂತಾಗಬೇಕು. ಆ ನೆಲೆಯಲ್ಲಿ ರೊಟರಿ ಕ್ಲಬ್ ಹಾಗೂ ದಾನಿಗಳ ಸಹಕಾರದಿಂದ ಈವರೆಗೆ ಸರಕಾರಿ ಶಾಲೆಗಳಿಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 72 ಇ-ಲರ್ನಿಂಗ್ ಕಿಟ್ ನೀಡಲಾಗಿದ್ದು ಆ ಪೈಕಿ ಕುಂದಾಪುರ ತಾಲೂಕಿನ 33ಶಾಲೆಗಳನ್ನು ಗುರುತಿಸಿ ಕಿಟ್ ವಿತರಿಸಲಾಗಿದೆ ಎಂದು ರೋಟರಿ ಜಿಲ್ಲೆ ೩೧೮೦ ಗವರ್ನರ್ ಡಾ. ಭರತೇಶ್ ಹೇಳಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಂಕರನಾರಾಯಣ ಬೈಲೂರಿಗೆ ಇಲ್ಲಿ ರೊಟರಿಕ್ಲಬ್ ಶಂಕರನಾರಾಯಣ ಹಾಗೂ ನಿವೃತ್ತ ಕಾರ್ಪೊರೇಷನ್ ಬ್ಯಾಂಕ್ ಬ್ಯಾನೇಜರ್ ಜಯಕರ ಶೆಟ್ಟಿ ಮೂಡುಬೈಲೂರು ಇವರು ಕೊಡಮಾಡಿದ್ಧ ಇ- ಲರ್ನಿಂಗ್ ಕಿಟ್ ಚಾಲನೆಗೊಳಿಸಿ ಮಾತನಾಡಿದರು. ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷ ಸಂತೋಷ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ಧರು, ಮುಖ್ಯ ಅತಿಥಿಗಳಾಗಿ ರೋಟರಿಯನ್ ಟಿ. ವಿಶ್ವನಾಥ ಮದ್ಯಸ್ಥ, ಜಯಶ್ರೀ ಭರತೇಶ್, ಆನಂದ ಶೆಟ್ಟಿ, ಆನಂದ ಮೊಗವೀರ, ಶಂಕರನಾರಾಯಣ ರೋಟರಿಕ್ಲಬ್‌ನ ಸದಸ್ಯರುಗಳು ಹಾಗೂ ಶಾಲಾ ಎಸ್‌ಡಿಎಮ್‌ಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮೇಲ್‌ಗಂಗೊಳ್ಳಿ ಪೈ ಕುಟುಂಬದವರು ಸುಮಾರು ನಾಲ್ಕು ಶತಮಾನಗಳಿಂದ ಆರಾಧಿಸಿಕೊಂಡು ಬಂದಿರುವ ಮೇಲ್‌ಗಂಗೊಳ್ಳಿ ರಾಮ ಪೈ ಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ರಜತ ಸಿಂಹಾಸನ ಮತ್ತು ಪ್ರಭಾವಳಿ ಸಮರ್ಪಣೆ ಕಾರ್ಯಕ್ರಮ ಹಾಗೂ ಶ್ರೀ ದೇವರಿಗೆ ಶತಕಲಶಾಭಿಷೇಕ ಸೇವೆಯು ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನಡೆಯಿತು. ದೇವಸ್ಥಾನಕ್ಕೆ ಚಿತ್ತೈಸಿದ ಶ್ರೀಗಳವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ಶ್ರೀಗಳಿಂದ ಶ್ರೀದೇವರಿಗೆ ಶತಕಲಶಾಭಿಷೇಕ, ಮಂಗಲ ದ್ಯವ್ಯ ನಿರೀಕ್ಷಣೆ, ಶ್ರೀಗಳಿಗೆ ಪಾದ್ಯ ಪೂಜೆ, ಶ್ರೀಗಳಿಂದ ಆಶೀರ್ವಚನ, ಮಹಾಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಅಜಿತ್ ಭಟ್, ವೇದಮೂರ್ತಿ ಜಿ.ಅನಂತಕೃಷ್ಣ ಭಟ್, ವೇದಮೂರ್ತಿ ಜಿ.ವಿಠಲದಾಸ ಭಟ್ ಮೊದಲಾದ ವೈದಿಕರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ, ವೇದಮೂರ್ತಿ ಜಿ.ಮೋಹನದಾಸ ಭಟ್, ವೇದಮೂರ್ತಿ ಪವನ್ ಆಚಾರ್ಯ, ವೇದಮೂರ್ತಿ ಶಿವಾನಂದ ಭಟ್, ಮೇಲ್‌ಗಂಗೊಳ್ಳಿ ಪೈ ಕುಟುಂಬದ ಎಂ.ನರಸಿಂಹ ಪೈ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಳ, ಸಜ್ಜನಿಕೆ, ವೃತ್ತಿ ನಿಷ್ಠೆಯೊಂದಿಗೆ ಪ್ರಾಮಾಣಿಕ ಬದುಕಿನುದ್ದಕ್ಕೂ ಪ್ರೀತಿಯನ್ನು ಹಂಚಿ ಎಲ್ಲರ ಪ್ರೀತಿಗೆ ಪಾತ್ರರಾಗಿ ಅಪಾರ ಸ್ನೇಹಿತರ ಬಳಗವನ್ನು ಹೊಂದಿದ್ದ ಅವಿನಾಶ್ ಹೆಬ್ಬಾರ್ ಅವರು ಸಿತಾರ್ ವಾದಕನಾಗ ಬೇಕೆಂಬ ಹಂಬಲದಿಂದ ತನ್ನ ೩೦ನೇ ವಯಸ್ಸಿನಲ್ಲಿ ಸಿತಾರ್ ಕಲಿತು ಹತ್ತಾರು ಕಛೇರಿಗಳನ್ನು ನೀಡಿ ಸಂಗೀತ ಕ್ಷೇತ್ರದಲ್ಲಿ ಭರವಸೆಯನ್ನು ಮೂಡಿಸುತ್ತಿರುವ ಕಾಲಘಟ್ಟದಲ್ಲಿ ಅಕಾಲವಾಗಿ ನಮ್ಮನ್ನು ಅಗಲಿ ಮರೆಯಾಗಿರುವುದು ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಕುಂದಾಪುರ ಕಲಾಕ್ಷೇತ್ರದ ಅಧ್ಯಕ್ಷ ಬಿ. ಕಿಶೋರ್‌ಕುಮಾರ್ ಕುಂದಾಪುರ ಹೇಳಿದರು ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ನರ್ಸರಿ ಸ್ಕೂಲ್ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಕುಂದಾಪುರದ ಮಾಜಿ ಕಾರ್ಯದರ್ಶಿ ಅವಿನಾಶ್ ಹೆಬ್ಬಾರ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ರೋಟರಿ ಜಿಲ್ಲಾ ಗವರ್ನರ್ ಎ.ಎಸ್.ಎನ್. ಹೆಬ್ಬಾರ್, ಉದ್ಯಮಿ ಪ್ರಶಾಂತ್ ತೋಳಾರ್, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ನಿಯೋಜಿತ ಅಧ್ಯಕ್ಷ ನರಸಿಂಹ ಹೊಳ್ಳ, ನಿವೃತ್ತ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಡಾ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವಸಹಾಯ ಸಂಘಗಳ ಎಂ.ಜಿ.ರೋಡ್ ಮತ್ತು ಬಂದರು ಒಕ್ಕೂಟಗಳ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ನಾರಾಯಣ ಆಚಾರ್ಯ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಅಮರಪ್ರಸಾದ್ ಹೆಗ್ಡೆ, ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮಂಜುನಾಥ ಜಿ.ಟಿ., ಕುಂದಾಪುರ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದ ಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ್, ಪ್ರಗತಿಬಂಧು ಸ್ವಸಹಾಯ ಸಂಘಗಳ ತ್ರಾಸಿ ವಲಯ ಅಧ್ಯಕ್ಷ ಬಾಬು ಚಂದನ್, ತ್ರಾಸಿ ವಲಯ ಮೇಲ್ವಿಚಾರಕ ಚಂದ್ರ ಮರಾಠೆ, ಎಂಜಿ ರೋಡ್ ಒಕ್ಕೂಟದ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಮತ್ತು ಸಾರ್ವಜನಿಕ ಸಾಮೂಹಿಕ ಶನೇಶ್ವರ ಯಾಗ ಸಮಿತಿ ವತಿಯಿಂದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ಸನ್ನಿಧಿಯಲ್ಲಿ ಸಾರ್ವಜನಿಕ ಸಾಮೂಹಿಕ ಶನೇಶ್ವರ ಯಾಗ ನಡೆಯಿತು. ಸಾರ್ವಜನಿಕ ಸಾಮೂಹಿಕ ಶನೇಶ್ವರ ಯಾಗದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ಡಾ|ಜಿ.ಶಂಕರ್ ಮಾತನಾಡಿ, ಜನರಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವಲ್ಲಿ ಮೊಗವೀರ ಯುವ ಸಂಘಟನೆಯ ಹೆಮ್ಮಾಡಿ ಘಟಕ ಹಾಗೂ ಯಾಗ ಸಮಿತಿಯ ನೇತೃತ್ವದಲ್ಲಿ ನಡೆದ ಸಾಮೂಹಿಕ ಶನೇಶ್ವರ ಯಾಗ ಶ್ಲಾಘನೀಯ ಕಾರ್ಯ ಎಂದು ಅಭಿಪ್ರಾಯ ಪಟ್ಟರು. ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಅಧ್ಯಕ್ಷ ವಾಸು ಜಿ.ನಾಯ್ಕ್ ವಂಡ್ಸೆ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ, ಮುಂಬಯಿ ಉದ್ಯಮಿ, ಮೊಗವೀರ ಬ್ಯಾಂಕ್‌ನ ನಿರ್ದೇಶಕರಾದ ಗೋಪಾಲ ಎಸ್ ಪುತ್ರನ್, ಮೊಗವೀರ ಯುವ ಸಂಘಟನೆಯ ಜಿಲ್ಲಾ ಅಧ್ಯಕ್ಷ ಗಣೇಶ ಕಾಂಚನ್, ಮೊಗವೀರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ/ಹುಬ್ಬಳ್ಳಿ: ಹುಬ್ಬಳ್ಳಿಯ ಹೋಟೆಲೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ತಾಲೂಕಿನ ಬಸ್ರೂರು ಮೂಲದ ವ್ಯಕ್ತಿಯೋರ್ವನಿಗೆ ರಾತ್ರಿ ತನ್ನ ರೂಮಿನಲ್ಲಿ ಮಲಗಿದ್ದಾಗ ಬೆಂಕಿ ತಗುಲಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೃತರನ್ನು ಬಸ್ರೂರು ಮೂಲದ ರಾಜು ಪೂಜಾರಿ ಎಂದು ಗುರುತಿಸಲಾಗಿದೆ. ಎಂದಿನಂತೆ ಹೋಟೆಲ್ ಕೆಲಸ ಮುಗಿಸಿ ಹುಬ್ಬಳ್ಳಿಯ ವಿದ್ಯಾನಗರದ ತನ್ನ ರೂಮಿಗೆ ತೆರಳಿದ್ದ ರಾಜು ಪೂಜಾರಿ ರಾತ್ರಿ ಮಲಗಿದ್ದಾಗ ಬೆಂಕಿ ತಗುಲಿ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಆತ ತನ್ನ ರೂಮಿನಲ್ಲಿ ಒಬ್ಬಂಟಿಯಾಗಿದ್ದುದಲ್ಲದೇ, ರಾತ್ರಿ ವೇಳೆ ಘಟನೆ ನಡೆದ ಕಾರಣ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ವಿಪರೀತ ಕುಡಿತದ ಚಟ ಹೊಂದಿದ್ದು, ರೂಮಿನಲ್ಲಿ ದೀಪ ಹಚ್ಚಿ ಮಲಗಿದ್ದಾಗ ಇದು ಬೆಂಕಿ ಅವಘಡಕ್ಕೆ ದಾರಿಮಾಡಿಕೊಟ್ಟಿರಬಹುದು ಎಂದು ಶಂಕಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ ಮೃತದೇಹವನ್ನು ಹುಬ್ಬಳ್ಳಿಯ ಶವಾಗಾರದಲ್ಲಿ ಇರಿಸಲಾಗಿದ್ದು ಮೃತರ ಪರಿಚಿತರು ಕೂಡಲೇ ವಿದ್ಯಾನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ (8197446267) ಕೊರಿಕೊಂಡಿದ್ದಾರೆ.

Read More